ಮಡಿಕೇರಿ ಮಾ.8 : ಕುಂಜಿಲ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಕಕ್ಕಬ್ಬೆ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಕುಂಜಿಲ-ಕಕ್ಕಬ್ಬೆ ಕ್ರಿಕೆಟ್ ಪ್ರೀಮಿಯರ್ ಲೀಗ್ ಸೀಸನ್-12 ಪಂದ್ಯಾವಳಿಯಲ್ಲಿ ಮೊಬೈಲ್ ಪ್ಯಾಲೆಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ಸಿಪಿಜಿ ತಂಡ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ತೃತೀಯ ಬಹುಮಾನವನ್ನು ಚಂಗ್ಸ್ ಕ್ರಿಕೆಟರ್ಸ್ ತಂಡ ಪಡೆದುಕೊಂಡಿತು. ಪ್ರಥಮ ವಿಜೇತ ತಂಡಕ್ಕೆ ರೂ.33,333 ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ವಿಜೇತ ತಂಡಕ್ಕೆ ರೂ.22,222 ನಗದು ಹಾಗೂ ಆಕರ್ಷಕ ಟ್ರೋಫಿ, ತೃತೀಯ ವಿಜೇತ ತಂಡಕ್ಕೆ ಆಕರ್ಷಕ ಟ್ರೋಫಿ ನೀಡಲಾಯಿತು. ಮೊಬೈಲ್ ಪ್ಯಾಲೆಸ್ ತಂಡದ ಆಟಗಾರ ರಶೀದ್ ಅವರ ಅಮೋಘ ಸಿಕ್ಸ್ ನಿಂದ ತಂಡ ಗೆಲುವಿನ ನಗೆ ಬೀರಿತು. ವೈಯಕ್ತಿಕ ಬಹುಮಾನ : ಅತ್ಯುತ್ತಮ ಬ್ಯಾಟ್ಸ್‍ಮನ್ ಮಾಮು, ಬೆಸ್ಟ್ ಬೌಲರ್ ಅನ್ನು, ಅತ್ಯುತ್ತಮ ಕೀಪರ್ ಹಾಗೂ ಬೆಸ್ಟ್ ಕ್ಯಾಚರ್ ಅಸ್ರು ಕಮ್ಮಟ್ಟೆ, ಅತ್ಯುತ್ತಮ ಆಲ್ ರೌಂಡರ್ ಸಮೀರ್ ಕೊಚ್ಚೆ, ಮೆನ್ ಆಫ್‍ದಿ ಮೆಚ್ ಅನು ಕಾರ್ಯಕ್ರಮದಲ್ಲಿ ಪ್ರಮುಖರಾದ ಇಸ್ಮಾಯಿಲ್…
ಲೇಖಕ: admin
ಮಡಿಕೇರಿ ಮಾ.8 : ಕರ್ನಾಟಕ ಜೀವ ವೈವಿಧ್ಯ ಮಂಡಳಿ ವತಿಯಿಂದ ರಾಜ್ಯ ಪಾರಂಪರಿಕ ವೈದ್ಯ ಪರಿಷತ್ ಸಹಯೋಗದಲ್ಲಿ ವಲಯ ಮಟ್ಟದ ನಾಟಿ ವೈದ್ಯರ ಸಮಾವೇಶ ಸಂಬಂಧ ಪೂರ್ವಭಾವಿ ಸಭೆಯು ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಂಡಳಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮೊದಲ ಕಾರ್ಯಕ್ರಮವನ್ನು ಮೇ ಅಂತ್ಯದಲ್ಲಿ ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನಡೆಸಲು ತೀರ್ಮಾನಿಸಲಾಯಿತು. ಸಭೆಯಲ್ಲಿ ಮಾತನಾಡಿದ ರವಿ ಕಾಳಪ್ಪ, ರಾಜ್ಯ ಮಟ್ಟದ ಸಮ್ಮೇಳನ ನಡೆಸುವ ಉದ್ದೇಶ ಮಂಡಳಿಯದ್ದಾಗಿತ್ತು. ಆದರೆ ಅನಿವಾರ್ಯ ಕಾರಣದಿಂದ ಅದಾಗಲಿಲ್ಲ. ವಲಯ ಮಟ್ಟದ ಸಮ್ಮೇಳನವನ್ನು ವ್ಯವಸ್ಥಿತವಾಗಿ ಆಯೋಜಿಸಬೇಕೆಂದು ಸಲಹೆ ನೀಡಿದರು. ವಿಧಾನಸಭಾ ಚುನಾವಣೆ ಕಳೆದ ಬಳಿಕ ಅರ್ಥಪೂರ್ಣ ಕಾರ್ಯಕ್ರಮ ಆಯೋಜನೆಯಾಗಬೇಕು. ಹೆಸರಿಗೆ ಮಾತ್ರ ಕಾರ್ಯಕ್ರಮವಾಗದೆ, ನಾಟಿ ವೈದ್ಯರಿಂದ ಮಾಹಿತಿ ವಿನಿಮಯವಾಗುವಂತಿರಬೇಕು. ನುರಿತ ನಾಟಿ ವೈದ್ಯರಿಂದ ಕಾರ್ಯಾಗಾರ ಹಮ್ಮಿಕೊಳ್ಳಬೇಕು. ನಾಟಿ ವೈದ್ಯರಿಂದ ಸಂವಾದ ಕಾರ್ಯಕ್ರಮವನ್ನೂ ಏರ್ಪಡಿಸಬೇಕೆಂದು ತಿಳಿಸಿದರು. ನಾಟಿ ವೈದ್ಯ ಪದ್ಧತಿಗೆ ಅದರದ್ದೇ ಆದ ಮಹತ್ವ ಇಂದಿಗೂ ಇದೆ. ತಮಗೆ ತಿಳಿದಿರುವ…
ಮಡಿಕೇರಿ ಮಾ.8 : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಪ್ರಯತ್ನದ ಭಾಗವಾಗಿ ಕೊಡಗು ಜಿಲ್ಲೆಯಲ್ಲಿ ಪಕ್ಷದ ಸರಣಿ ಕಾರ್ಯಕ್ರಮಗಳು ಆಯೋಜಿತವಾಗಿದೆ. ಮಾ.10 ಮತ್ತು 11 ರಂದು ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ವಿಜಯ ಸಂಕಲ್ಪಯಾತ್ರೆ ನಡೆಯಲಿದೆ. ಇದರೊಂದಿಗೆ ಮಾ.20 ರ ವರೆಗೆ ವಿವಿಧ ಮೋರ್ಚಾಗಳ ಸಮಾವೇಶಗಳನ್ನು ಆಯೋಜಿಸಲಾಗಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ವಿವಿಧ ಕಾರ್ಯಕ್ರಮಗಳ ಜೊತೆಯಲ್ಲೆ ಮಾ.18 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ‘ಫಲಾನುಭವಿಗಳ ಸಮಾವೇಶ’ ನಡೆಯಲಿದೆ. ಇದರಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಪಾಲ್ಗೊಳ್ಳಲಿದ್ದಾರೆ ಎಂದರು. ::: ಸಂಕಲ್ಪ ಯಾತ್ರೆ ::: ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳನ್ನು ಸಂಪರ್ಕಿಸುವ ನಾಲ್ಕು ವಿಜಯ ಸಂಕಲ್ಪ ಯಾತ್ರ್ರೆಗಳು ಈಗಾಗಲೆ ಆರಂಭವಾಗಿದೆ. ಚಾಮರಾಜನಗರದ ಮಲೆಮಹದೇಶ್ವರದಿಂದ ಆರಂಭವಾಗಿರುವ ವಿಜಯ ಸಂಕಲ್ಪಯಾತ್ರೆ ಮಾ.10 ರಂದು ವಿರಾಜಪೇಟೆ ಕ್ಷೇತ್ರದ ಗೋಣಿಕೊಪ್ಪಲು ಮೂಲಕ ಕೊಡಗನ್ನು ಪ್ರವೇಶಿಸಲಿದ್ದು, ರಥಕ್ಕೆ…
ಮಡಿಕೇರಿ ಮಾ.8 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಗ್ರೀನ್ ಸಿಟಿ ಫೋರಂ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ “ಆರೋಗ್ಯವಂತ ಮಹಿಳೆಯಿಂದ ಆರೋಗ್ಯಕರ ಭಾರತ” ಎನ್ನುವ ಘೋಷ ವಾಕ್ಯದೊಂದಿಗೆ ಮತದಾನದ ಮಹತ್ವ ಮತ್ತು ವಾಯುಮಾಲಿನ್ಯ ತಡೆಯುವ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ಸೈಕ್ಲೊಥಾನ್ ಜಾಥಾವು ನಡೆಯಿತು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಜಾಥಾಗೆ ಚಾಲನೆ ನೀಡಿದರು. ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಹೊರಟು ಜನರಲ್ ತಿಮ್ಮಯ್ಯ ವೃತ್ತ-ಸ್ಕ್ವಾಡರ್ನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತ-ಕೆಎಸ್‍ಆರ್‍ಟಿಸಿ ಬಸ್ಸು ನಿಲ್ದಾಣ-ಕೈಗಾರಿಕಾ ಬಡಾವಣೆ-ರೇಸ್‍ಕೋರ್ಸ್ ರಸ್ತೆ ಮೂಲಕ ಗ್ರೇಟರ್ ರಾಜಸೀಟುವರೆಗೆ ಜಾಥ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುಂಡಯ್ಯ, ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಗೋಪಿನಾಥ್, ಇತರರು ಸೈಕ್ಲೊಥಾನ್ ಜಾಥದಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಮಾ.8 : ಪ್ರಜಾಪ್ರಭುತ್ವ ಬಲಪಡಿಸುವಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಆ ನಿಟ್ಟಿನಲ್ಲಿ ಬಲಿಷ್ಠ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು. ಜೊತೆಗೆ ಎಲ್ಲರಿಗೂ ಸಮಾನ ಅವಕಾಶಗಳು ಲಭಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಮಹಿಳಾ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ, ಸಂಜೀವಿನಿ (ಡೇ-ನರ್ಮ್), ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ(ಡೇ-ನಲ್ಮ್) ಇವರ ಸಹಯೋಗದಲ್ಲಿ ನಗರದ ಬಾಲಭವನದಲ್ಲಿ ನಡೆದ ‘ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ‘ಕೊಡಗು ಜಿಲ್ಲೆಯಲ್ಲಿ ಮಹಿಳೆಯರ ಸರಾಸರಿ ಪ್ರಮಾಣವು ಒಂದು ಸಾವಿರ ಪುರುಷರಿಗೆ, 1026 ಮಹಿಳೆಯರು ಇದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಅವರು, ಮಹಿಳೆಯರಿಗೆ ಉದ್ಯೋಗದಲ್ಲಿ ಶೇ.33 ರಷ್ಟು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಶೇ.50 ರಷ್ಟು ಮೀಸಲಾತಿ ಇದ್ದು, ಇದನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ…
ಮಡಿಕೇರಿ ಮಾ.8 : ಮಹಿಳಾ ದಿನಾಚರಣೆಯ ಅಂಗವಾಗಿ ರಾಜ್ಯ ಸರ್ಕಾರದಿಂದ ಸಾಧಕ ಮಹಿಳೆಯರಿಗೆ ನೀಡಲಾಗುವ “ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ” ಗೆ ಪಾಲಿಬೆಟ್ಟದ ಚೆಶೈರ್ ಹೋಮ್ಸ್ ಇಂಡಿಯಾ ಕೂರ್ಗ್ ನ ಅಧ್ಯಕ್ಷರಾದ ಚೆಪ್ಪುಡಿರ ಗೀತಾ ಚೆಂಗಪ್ಪ ಭಾಜನರಾಗಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಕನ್ನಡ ಭವನದಲ್ಲಿ ಆಯೋಜಿಸಿರುವ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಗೀತಾ ಚೆಂಗಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಬೆಂಗಳೂರು ಮಾ.8 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ರವೀಂದ್ರ ಕಲಾಕ್ಷೇತ್ರ ಕನ್ನಡ ಭವನದಲ್ಲಿ ಆಯೋಜಿಸಿರುವ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿ ಸಾಧಕ ಮಹಿಳೆಯರಿಗೆ “ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ” ಮಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್, ಸಾಲುಮರದ ತಿಮ್ಮಕ್ಕ, ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು, ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ರಾಜಣ್ಣಗೌಡ, ಡಿ.ಆರ್.ಡಿ.ಓ ಸಂಸ್ಥೆಯ ಆಶು ಭಾಟಿಯಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕಿ ಡಾ; ಅನುರಾಧಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ: ಮಂಜುಳಾ ಮೊದಲಾದವರು ಉಪಸ್ಥಿತರಿದ್ದರು.
ಚೆಯ್ಯಂಡಾಣೆ ಮಾ 8 : ಚೆಯ್ಯಂಡಾಣೆ ಸರಕಾರಿ ಪ್ರಾಥಮಿಕ ಆರೋಗ್ಯ ‘ಎ ‘ಉಪಕೇಂದ್ರ ವ್ಯಾಪ್ತಿಯ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯವಂತ ಶಿಶು ಪ್ರದರ್ಶನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಆರೋಗ್ಯಧಿಕಾರಿ ಕನಕವತಿ ಮಕ್ಕಳ ತಾಯಂದಿರಿಗೆ ಎದೆ ಹಾಲಿನ ಮಹತ್ವದ ಬಗ್ಗೆ ತಿಳಿಸಿದರು. ಆರು ತಿಂಗಳವರೆಗೆ ಎದೆ ಹಾಲು ಮಾತ್ರ ಕೊಡಬೇಕು. ಆರು ತಿಂಗಳ ನಂತರ ಎದೆಹಾಲಿನ ಜೊತೆಗೆ ಪೂರಕ ಆಹಾರವನ್ನು ಕೊಡುವುದರಿಂದ ಮಕ್ಕಳಲ್ಲಿ ಅಪೌಷ್ಟಿಕತೆ ಬರುವುದಿಲ್ಲ ಹಾಗೂ ಮಕ್ಕಳ ಲಸಿಕೆಗಳನ್ನು ಕಾಲಕ್ಕೆ ಸರಿಯಾಗಿ ನಿಗದಿತ ಸಮಯದಲ್ಲಿ ಕೊಡಿಸುವುದರಿಂದ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಉತ್ಪತ್ತಿಯಾಗಿ ಮುಂದಿನ ದಿನಗಳಲ್ಲಿ ರೋಗಗಳು ಬರುದನ್ನು ತಡೆಗಟ್ಟ ಬಹುದು. ತಾಯಂದಿರು ಒಂದು ಮಗುವಿನಿಂದ ಇನ್ನೊಂದು ಮಗುವಿಗೆ ಕನಿಷ್ಠ ಮೂರು ವರ್ಷದ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಮಾಹಿತಿ ನೀಡಿದರು. ಕಾರ್ಯಕ್ರಮಕ್ಕೆ ಹಲವಾರು ಮಕ್ಕಳು ಪಾಲ್ಗೊಂಡಿದ್ದರು. ಪ್ರಥಮ ಬಹುಮಾನ ಶಶಿನ್ ಕಾರ್ಯಪ್ಪ, ದ್ವಿತೀಯ ಅರುಸಿ, ತೃತೀಯ ಬಹುಮಾನ ಆರಾಧ್ಯ ಪಡೆದುಕೊಂಡರು. ಈ ಸಂದರ್ಭ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ತಾಯಂದಿರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.…
ಬೆಂಗಳೂರು ಮಾ.8 : ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿ ಮಾ.9 ರಂದು ಎರಡು ಗಂಟೆ ಕರ್ನಾಟಕ ಬಂದ್ ಗೆ ಕರೆ ನೀಡಿದ್ದ ರಾಜ್ಯ ಕಾಂಗ್ರೆಸ್ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಗುರುವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭಗೊಳ್ಳುತ್ತಿರುವುದರಿoದ ಬಂದ್ ಕರೆಯನ್ನು ವಾಪಾಸ್ ಪಡೆದಿದೆ. ಬಿಜೆಪಿ ನೇತೃತ್ವದ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿ ಮಾ.9 ರಂದು ಬೆಳಗ್ಗೆ 9 ಗಂಟೆಯಿAದ 11 ಗಂಟೆಯವರೆಗೆ ಸ್ವಯಂ ಪ್ರೇರಿತ ಬಂದ್ ಗೆ ಕಾಂಗ್ರೆಸ್ ಕರೆ ನೀಡಿತ್ತು. ಆದರೆ ಈ ಕರೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಸಾರ್ವಜನಿಕರಿಗೆ ತೊಂದರೆಯಾಗುವ ಬಗ್ಗೆ ಅಸಮಾಧಾನದ ಕೂಗು ಕೇಳಿ ಬಂದಿತ್ತು. ಇದೀಗ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ನಾಯಕರು ದ್ವಿತೀಯ ಪಿಯುಸಿ ಪರೀಕ್ಷೆಯ ಕಾರಣ ನೀಡಿ ಬಂದ್ ಕರೆಯನ್ನು ವಾಪಾಸ್ ಪಡೆದಿದ್ದಾರೆ.
ನವದೆಹಲಿ ಮಾ.8 : ಭಾರತೀಯ ನೌಕಾಪಡೆಯ ಅತ್ಯಾಧುನಿಕ ಹಗುರ ಹೆಲಿಕಾಪ್ಟರ್ ಕರಾವಳಿ ಭಾಗದಲ್ಲಿ ಇಂದು ತುರ್ತು ಭೂಸ್ಪರ್ಷ ಮಾಡಿದೆ. ನೌಕಾ ಗಸ್ತು ಪಡೆಯ ಮೂಲಕ ಹೆಲಿಕಾಪ್ಟರ್ ನಲ್ಲಿದ್ದ ಮೂವರು ಸಿಬ್ಬಂದಿಗಳನ್ನು ರಕ್ಷಿಸಲಾಗಿದೆ. ಹಗುರ ಹೆಲಿಕಾಪ್ಟರ್ ALH ಮುಂಬೈ ಕರಾವಳಿಯಲ್ಲಿ ತುರ್ತು ಭೂಸ್ಪರ್ಷ ಮಾಡಿದ್ದು, ಘಟನೆಯ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.






