ಬೆಂಗಳೂರು ಮಾ.8 : ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿ ಮಾ.9 ರಂದು ಎರಡು ಗಂಟೆ ಕರ್ನಾಟಕ ಬಂದ್ ಗೆ ಕರೆ ನೀಡಿದ್ದ ರಾಜ್ಯ ಕಾಂಗ್ರೆಸ್ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಗುರುವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭಗೊಳ್ಳುತ್ತಿರುವುದರಿoದ ಬಂದ್ ಕರೆಯನ್ನು ವಾಪಾಸ್ ಪಡೆದಿದೆ. ಬಿಜೆಪಿ ನೇತೃತ್ವದ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿ ಮಾ.9 ರಂದು ಬೆಳಗ್ಗೆ 9 ಗಂಟೆಯಿAದ 11 ಗಂಟೆಯವರೆಗೆ ಸ್ವಯಂ ಪ್ರೇರಿತ ಬಂದ್ ಗೆ ಕಾಂಗ್ರೆಸ್ ಕರೆ ನೀಡಿತ್ತು. ಆದರೆ ಈ ಕರೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಸಾರ್ವಜನಿಕರಿಗೆ ತೊಂದರೆಯಾಗುವ ಬಗ್ಗೆ ಅಸಮಾಧಾನದ ಕೂಗು ಕೇಳಿ ಬಂದಿತ್ತು. ಇದೀಗ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ನಾಯಕರು ದ್ವಿತೀಯ ಪಿಯುಸಿ ಪರೀಕ್ಷೆಯ ಕಾರಣ ನೀಡಿ ಬಂದ್ ಕರೆಯನ್ನು ವಾಪಾಸ್ ಪಡೆದಿದ್ದಾರೆ.
ಲೇಖಕ: admin
ನವದೆಹಲಿ ಮಾ.8 : ಭಾರತೀಯ ನೌಕಾಪಡೆಯ ಅತ್ಯಾಧುನಿಕ ಹಗುರ ಹೆಲಿಕಾಪ್ಟರ್ ಕರಾವಳಿ ಭಾಗದಲ್ಲಿ ಇಂದು ತುರ್ತು ಭೂಸ್ಪರ್ಷ ಮಾಡಿದೆ. ನೌಕಾ ಗಸ್ತು ಪಡೆಯ ಮೂಲಕ ಹೆಲಿಕಾಪ್ಟರ್ ನಲ್ಲಿದ್ದ ಮೂವರು ಸಿಬ್ಬಂದಿಗಳನ್ನು ರಕ್ಷಿಸಲಾಗಿದೆ. ಹಗುರ ಹೆಲಿಕಾಪ್ಟರ್ ALH ಮುಂಬೈ ಕರಾವಳಿಯಲ್ಲಿ ತುರ್ತು ಭೂಸ್ಪರ್ಷ ಮಾಡಿದ್ದು, ಘಟನೆಯ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರಪೇಟೆ ಮಾ.8 : ಕ್ರೀಡಾ ಕ್ಷೇತ್ರದಲ್ಲೂ ಮಹಿಳೆಯರು ಗಮನಾರ್ಹ ಸಾಧನೆ ಮಾಡುತ್ತಿರುವುದು ಹೆಮ್ಮೆಯ ವಿಚಾರವೆಂದು ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಯಣ್ಣ ಹೇಳಿದರು. ಮಹಿಳಾ ದಿನಾಚರಣೆ ಅಂಗವಾಗಿ ಕೊಡಗು ಜಿಲ್ಲಾ ಪಂಚಾಯಿತಿ ಹಾಗೂ ಸೋಮವಾರಪೇಟೆ ತಾಲೂಕು ಪಂಚಾಯಿತಿ ಆಶ್ರಯದಲ್ಲಿ ಪಟ್ಟಣದ ಜಿ.ಎಂ. ಪಿ ಶಾಲಾ ಮೈದಾನದಲ್ಲಿ ಏರ್ಪಡಿಸಿದ್ದ ಮಹಿಳೆಯರ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ ನೀಡಿ ಮಾತಾಡಿದರು. ನಮ್ಮ ಸಮಾಜದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನ ಗಳಿವೆ ಎಂದ ಅವರು ಮಹಿಳೆಯರು ಸಬಲರಾದರೆ ದೇಶ ಅಭಿವೃದ್ಧಿಯಾಗುತದೆ ಎಂದರು. ಇಂದು ಮಹಿಳೆಯರು ಸಾಮಾಜಿಕ,ರಾಜಕೀಯ ಹಾಗೂ ಕ್ರೀಡಾ ಕ್ಷೇತ್ರದಲ್ಲೂ ತನ್ನ ಛಾಪನ್ನು ಮೂಡಿಸಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎಸ್.ಎನ್.ನರಗುಂದ, ಕ್ಷೇತ್ರಶಿಕ್ಷಾಧಿಕಾರಿ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.
ನಾಪೋಕ್ಲು ಮಾ.8 : ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭ ಹಾಗೂ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಪ್ರಾಂಶುಪಾಲರಾದ ಕಲ್ಯಾಟಂಡ ಶಾರದ ಅಪ್ಪಣ್ಣ, ಶಾಲೆಯಲ್ಲಿ ವಿದ್ಯಾರ್ಥಿ ಸಂಘದ ಕಾರ್ಯ ಚಟುವಟಿಕೆಗಳು ಹಾಗೂ ವಿವಿಧ ಸಂಘಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಸಹಪಠ್ಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಲು ಸಹಕಾರಿಯಾಗುತ್ತದೆ ಎಂದರು. ರಾಷ್ಟ್ರೀಯ ವಿಜ್ಞಾನ ದಿನದ ಬಗ್ಗೆ ಮಾತನಾಡಿ ಸರ್ ಸಿ.ವಿ ರಾಮನ್ ವಿಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ ಎಂದರು. ಶಿಕ್ಷಕಿ ಚಂದ್ರಕಲಾ ರಾಷ್ಟ್ರೀಯ ವಿಜ್ಞಾನ ದಿನದ ಮಹತ್ವ ಹಾಗೂ ರಾಮನ್ ಪರಿಣಾಮದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಶಿಕ್ಷಕಿ ಕವಿತಾ ಹಾಗೂ ಶಿಕ್ಷಕ ಕಾಳಯ್ಯ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಕವನ ಮತ್ತು ದೀಪಿಕಾ ಪ್ರಾರ್ಥಿಸಿದರು. ಫ್ರೀಶಾ ಮಾಚಮ್ಮ ಹಾಗೂ ಆಫ್ರಿನ ಕಾರ್ಯಕ್ರಮ ನಿರೂಪಿಸಿದರು. ಪ್ರಾಚೀ ಮುತ್ತಮ್ಮ ಸ್ವಾಗತಿಸಿದರು. ಶಮ್ಲ ಫಿರ್ದೌಸ್ ವಂದಿಸಿದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ…
ಮಡಿಕೇರಿ ಮಾ.8 : ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕಳೆದು ಹೋಗಿದ್ದ 2 ಮೊಬೈಲ್ ಫೋನ್ ಗಳನ್ನು CEIR Portal ಸಹಾಯದಿಂದ ಪತ್ತೆಹಚ್ಚಿರುವ ಪೊಲೀಸರು ವಾರಸುದಾರರಿಗೆ ಹಿಂತಿರುಗಿಸಿದರು. ಕಳವಾದ/ಕಳೆದುಹೋದ/ಸುಲಿಗೆಯಾದ ಮೊಬೈಲ್ ಫೋನ್ ಗಳ ದುರ್ಬಳಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನೂತನವಾಗಿ ಅನುಷ್ಠಾನಗೊಂಡ CEIR Portal ಇದೀಗ ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರಿಗೆ ಹೆಚ್ಚು ಸಹಕಾರಿಯಾಗಿದೆ.
ನಾಪೋಕ್ಲು ಮಾ.8 : ಕಕ್ಕಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕುಂಬ್ಯಾರ್ ಕಲಾಡ್ಚ ವಾರ್ಷಿಕ ಉತ್ಸವವು ಸಾಂಪ್ರದಾಯಿಕವಾಗಿ ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತು. ಇಗ್ಗುತ್ತಪ್ಪ ಸನ್ನಿಧಿಯಲ್ಲಿ ದೇವತಕ್ಕರಾದ ಪರದಂಡ ಕುಟುಂಬಸ್ಥರ ಎತ್ತು ಪೋರಾಟದೊಂದಿಗೆ ದೇವಾಲಯಕ್ಕೆ ತಲುಪಿ ಎತ್ತುಪೋರಾಟವನ್ನು ಒಪ್ಪಿಸಲಾಯಿತು. ನಂತರ ಭಕ್ತಾದಿಗಳಿಂದ ತುಲಾಭಾರ ಸೇವೆ ಸೇರಿದಂತೆ ಹಾಲು ಬಲಿವಾಡು ಹರಕೆ ಇನ್ನಿತರ ಪೂಜೆಗಳು ಜರುಗಿತು. ಬಳಿಕ ಮಹಾಪೂಜೆ ನಂತರ ಭಕ್ತಾದಿಗಳಿಗೆ ತೀರ್ಥ ಪ್ರಸಾದ, ಅನ್ನಸಂತರ್ಪಣೆ ನೆರವೇರಿತು. ದೇವರ ಪ್ರಾರ್ಥನೆಯ ಬಳಿಕ ದೇವರ ನೃತ್ಯ ಬಲಿ ಜರುಗಿ ಎತ್ತು ಪೋರಾಟದೊಂದಿಗೆ ತಕ್ಕ ಮುಖ್ಯಸ್ಥರು ಭಕ್ತಾದಿಗಳು ಮಲ್ಮ ಬೆಟ್ಟಕ್ಕೆ ತೆರಳಿದರು. ಇದೇ ಸಂದರ್ಭ ಪೇರೂರು ಹಾಗೂ ನೆಲಜಿ ಇಗ್ಗುತ್ತಪ್ಪ ದೇವಾಲಯದ ತಕ್ಕ ಮುಖ್ಯಸ್ಥರು ಎತ್ತುಪೋರಾಟದೊಂದಿಗೆ ಮಲ್ಮಕ್ಕೆ ಆಗಮಿಸಿದರು. ಅರ್ಚಕರು ಶುದ್ದ ಕಲಶ ಪೂಜಾಕಾರ್ಯಗಳನ್ನು ನೆರವೇರಿಸಿ ಎತ್ತುಪೋರಾಟ ದುಡಿಕೊಟ್ಟ್ ಪಾಟ್ ನೆರವೇರಿತು. ಬಳಿಕ ಎತ್ತುಪೋರಾಟದ ಅಕ್ಕಿಯನ್ನು ಮೂರು ಭಾಗಮಾಡಿ ನೆಲಜಿ, ಪೇರೂರು ಹಾಗೂ ಪಾಡಿ ದೇವಾಲಯದ ತಕ್ಕಮುಖ್ಯಸ್ಥರು ಹಂಚಿಕೊ0ಡು ದೇವರ ಕಟ್ಟು ಸಡಿಲಿಸಿ ನಾಡಿನ ಸುಭಿಕ್ಷಕ್ಕಾಗಿ ವಿಶೇಷ ಪ್ರಾರ್ಥನೆ…
ಮಡಿಕೇರಿ ಮಾ.8 : ಹಾಕತ್ತೂರು-ಬಿಳಿಗೇರಿ ದರ್ಗಾ ಶರೀಫಿನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಫಕೀರ್ ಬಾವ (ಖ.ಸಿ) ಅವರ ಹೆಸರಿನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಮೇ 7, 8 ಮತ್ತು 9 ರಂದು ಉಲಮಾ-ಉಮಾರ, ಸಾದತುಗಳ ನೇತೃತ್ವದಲ್ಲಿ ಶ್ರದ್ಧಾಭಕ್ತಿಯಿಂದ ನಡೆಯಲಿದೆ ಎಂದು ಬದರ್ ಜಮಾಅತ್ ಸಮಿತಿ ಕಾರ್ಯದರ್ಶಿ ಎಸ್.ಎ.ಅಬ್ದುಲ್ ಖಾದರ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 93538 34014 ನ್ನು ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಮಾ.8 : ಅಂತರಾಷ್ಟ್ರೀಯ ಮಟ್ಟದ ಸೆಸ್ಟೋಬಾಲ್ ಚಾಂಪಿಯನ್‌ಶಿಪ್ ನಲ್ಲಿ ಭಾರತ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಈ ತಂಡದಲ್ಲಿ ವಿರಾಜಪೇಟೆಯ ಸೆಂಟ್ ಆನ್ಸ್ ಕಾಲೇಜಿನ ವಿದ್ಯಾರ್ಥಿನಿ ರಿಯಾನತ್ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾಳೆ.
ಮಡಿಕೇರಿ ಮಾ.8 : ಭಕ್ತರ ಆರಾಧ್ಯ ದೇವರು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪರ ಹುಂಡಿಯಲ್ಲಿ ಕಳೆದ 27 ದಿನಗಳಲ್ಲಿ 2.86 ಕೋಟಿ ನಗದು, ಚಿನ್ನ ಮತ್ತು ಬೆಳ್ಳಿ ಸಂಗ್ರಹವಾಗಿದೆ. 90 ಗ್ರಾಂ ಚಿನ್ನ ಮತ್ತು 2 ಕೆಜಿ 825 ಗ್ರಾಂ ಬೆಳ್ಳಿಯ ಪದಾರ್ಥಗಳನ್ನು ಕಾಣಿಕೆಯ ರೂಪದಲ್ಲಿ ಭಕ್ತರು ಮಾದಪ್ಪನಿಗೆ ಅರ್ಪಿಸಿದ್ದಾರೆ. ಈ ಮೊತ್ತವು ಸಾರ್ವಕಾಲಿಕ ದಾಖಲೆಯಾಗಿದೆ ಎಂದು ಹುಂಡಿ ಎಣಿಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ ತಿಳಿಸಿದ್ದಾರೆ.
ಮಡಿಕೇರಿ ಮಾ.8 : ನಾಗರಹೊಳೆ ಉದ್ಯಾನದ ಆನೆಚೌಕೂರು ವಲಯದಲ್ಲಿ ಕಾಣಿಸಿಕೊಂಡ ಬೆಂಕಿಯಿAದ ಸುಮಾರು ಹತ್ತು ಎಕರೆಯಷ್ಟು ಪ್ರದೇಶದ ನೆಲಹುಲ್ಲು ಮತ್ತು ಗಿಡಗಳು ಬೆಂಕಿಗಾಹುತಿಯಾಗಿದೆ. 150ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿಗಳು ಸತತ ಕಾರ್ಯಾಚರಣೆ ನಡೆಸಿ ಬೆಂಕಿ ಇತರೆಡೆಗೆ ಹರಡದಂತೆ ತಡೆಯುವಲ್ಲಿ ಯಶಸ್ವಿಯಾದರು. ಕಾಡಿಗೆ ಬೆಂಕಿ ಹಚ್ಚುವ ಮತ್ತು ಅತಿಕ್ರಮ ಪ್ರವೇಶ ಮಾಡುವ ಕಿಡಿಗೇಡಿಗಳ ಬಗ್ಗೆ ಸಾರ್ವಜನಿಕರು ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ (082222 252041)ಡಿಸಿಎಫ್ ಹರ್ಷಕುಮಾರ್ ಚಿಕ್ಕನರಗುಂದ ಮನವಿ ಮಾಡಿದ್ದಾರೆ.






