ಲೇಖಕ: admin

ಮಡಿಕೇರಿ ಮಾ.8 : ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವೀರನಹೊಸಹಳ್ಳಿ ವಲಯದಲ್ಲಿ ಮೂರು ವರ್ಷದ ಹೆಣ್ಣು ಚಿರತೆಯೊಂದರ ಮೃತದೇಹ ಪತ್ತೆಯಾಗಿದೆ. ಅರಣ್ಯ ಗಸ್ತಿನಲ್ಲಿದ್ದ ಇಲಾಖೆಯ ಸಿಬ್ಬಂದಿಗಳಿಗೆ ಮೃತದೇಹ ಗೋಚರಿಸಿದ್ದು, ಹಿರಿಯ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಕಾದಾಟದಲ್ಲಿ ಗಾಯಗೊಂಡು ಚಿರತೆ ಮೃತ ಪಟ್ಟಿರಬಹುದೆಂದು ಶಂಕಿಸಲಾಗಿದೆ.

Read More

ಮಡಿಕೇರಿ ಮಾ.8 :    ಎಸ್‍ಎಸ್‍ಎಫ್ ಕೊಡಗು ಜಿಲ್ಲಾ ಘಟಕದ  ಮಹಾಸಭೆಯು ಕುಶಾಲನಗರದಲ್ಲಿ ನಡೆಯಿತು. ಕೊಡಗು ಜಿಲ್ಲಾ ಉಸ್ತುವಾರಿ ಹಕೀಂ ಸರ್  ಹಾಗೂ ರಾಜ್ಯ ದಅವಾ ಕಾರ್ಯದರ್ಶಿ ಮುನೀರ್ ಸಖಾಫಿ  ಅವರ ನೇತೃತ್ವದಲ್ಲಿ ಸಭೆಯನ್ನು ಎಸ್‍ಎಸ್‍ಎಫ್   ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ಯಾಕೂಬ್ ಮಾಸ್ಟರ್  ಉದ್ಘಾಟಿಸಿದರು. ಎಸ್‍ಎಸ್‍ಎಫ್   ಕೊಡಗು ಜಿಲ್ಲಾಧ್ಯಕ್ಷ  ಶಾಫಿ ಸಅದಿ ಸೋಮವಾರಪೇಟೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಸ್‌ವೈಎಸ್ ಜಿಲ್ಲಾ ನಾಯಕ  ಹಮೀದ್ ಮುಸ್ಲಿಯಾರ್   ಪ್ರಾರ್ಥನೆ ನೆರವೇರಿಸಿದರು. ಸಭೆಯಲ್ಲಿ ಎಸ್‍ಎಸ್‍ಎಫ್ ಕೊಡಗು ಜಿಲ್ಲಾ  ಘಟಕಕ್ಕೆ ನೂತನ ಪದಾಧಿಕಾರಿಗಳನ್ನು   ಎಸ್‌ವೈಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಫೀಳ್ ಸಅದಿ  ಘೋಷಣೆ ಮಾಡಿದರು. ನೂತನ ಅಧ್ಯಕ್ಷರಾಗಿ  ಝುಬೈರ್ ಸಅದಿ ಮಾಲ್ದಾರೆ, ಪ್ರಧಾನ ಕಾರ್ಯದರ್ಶಿಯಾಗಿ ಜುನೈದ್ ಅಮ್ಮತ್ತಿ, ಕೋಶಾಧಿಕಾರಿಯಾಗಿ ಸಯ್ಯಿದ್ ಶಿಹಾಬ್ ತಂಙ್ಙಳ್ ಹೊಸತೋಟ ಹಾಗೂ ಕಾರ್ಯದರ್ಶಿಗಳಾಗಿ ರಫೀಕ್ ಲತೀಫಿ, ಕಮರುದ್ದೀನ್ ಅನ್ವಾರಿ ಸಖಾಫಿ,ರಝಾಕ್ ಸಅದಿ,ಇಬ್ರಾಹಿಂ ಮಾಸ್ಟರ್,ಗಫೂರ್ ಮಾಪಿಳತ್ತೋಡು, ರಿಯಾಝ್ ಗುಯ್ಯ, ಸ್ವಾದಿಕ್ ಕರ್ಕಳ್ಳಿ, ಮೂಸಾ ಅಮಾನಿ, ಶಾಫಿ ಕುಂಜಿಲ, ಆಯ್ಕೆಯಾದರು. ಎಸ್‍ಎಸ್‍ಎಫ್ ಮಾಜಿ ರಾಜ್ಯಾಧ್ಯಕ್ಷ…

Read More

ಮಡಿಕೇರಿ ಮಾ.8 : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ.ಜಾತಿ/ ಪ.ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಡಾ.ಬಾಬು ಜಗಜೀವನ್‍ರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ ನೀಡಲಾಗುತ್ತಿದ್ದು ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿ ಪಡೆಯಲು ಯಾವುದೇ ಜನಾಂಗ, ಲಿಂಗ, ಜಾತಿ ಅಥವಾ ಸಮುದಾಯದ ವ್ಯತ್ಯಾಸವಿಲ್ಲದೆ ಅಥವಾ ತಾರತಮ್ಯವಿಲ್ಲದೆ ಈ ಪ್ರಶಸ್ತಿಗೆ ಯಾವುದೇ ಭಾರತೀಯರು ಮತ್ತು ಸಂಸ್ಥೆಯವರು ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿಯವರ ಮೇಲೆ ನಡೆಯುತ್ತಿರುವ ಅಸ್ಪೃಶ್ಯತೆ ನಿವಾರಣೆ ಮಾಡಲು ಹಾಗೂ ದೌರ್ಜನ್ಯ ಅಪರಾಧಗಳ ನಿಯಂತ್ರಣದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವ್ಯಕ್ತಿ/ ಸರ್ಕಾರೇತರ ಸಂಘ ಸಂಸ್ಥೆಗಳಾಗಿರಬೇಕು. ಪರಿಶಿಷ್ಟ ಜಾತಿ ಜನಾಂಗದವರ ಅಭಿವೃದ್ಧಿಗೆ ಕಳೆದ 5 ವರ್ಷಗಳಿಂದ ಕೆಲಸ ಮಾಡುತ್ತಿರುವ, ನೋಂದಣಿಯಾಗಿರುವ ಸರ್ಕಾರೇತರ ಸಂಘ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ 08272-225531. ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ-08272-223552. ಸಹಾಯಕ ನಿರ್ದೇಶಕರ…

Read More

ಮಡಿಕೇರಿ ಮಾ.8 : ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಕೊಡಗಿನ ಮೂವರು ಕ್ರೀಡಾಪಟುಗಳು ಭಾರತವನ್ನು ಪ್ರತಿನಿಧಿಸಲಿದ್ದಾರೆ. ಗೋಣಿಕೊಪ್ಪ ಹಾಗೂ ಕದನೂರು ಗ್ರಾಮಗಳ ನಿವಾಸಿಗಳಾದ ಪಾಲೆಕಂಡ ಬೆಳ್ಳಿಯಪ್ಪ ಹಾಗೂ ಪಾಲೆಕಂಡ ಬೋಯ್ಯ ಸಹೋದರರು, ತಮ್ಮ ಹಿರಿಯ ವಯಸ್ಸಿನಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ್ದು, ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಮಾಸ್ಟರ್ ಗೇಮ್ಸ್ ಚಾಂಪಿಯನ್‍ಶಿಪ್‍ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. 86 ವರ್ಷದ ಬೆಳ್ಳಿಯಪ್ಪ ಹಾಗೂ 95 ವಯಸ್ಸಿನ ಬೋಪಯ್ಯ ಅವರುಗಳು, ಸಕ್ರಿಯ ಕ್ರೀಡಾಪಟುಗಳಾಗಿದ್ದು, ಭಾರತದಾದ್ಯಂತ ಆಯೋಜನೆಗೊಂಡ ಮಾಸ್ಟರ್ಸ್ ಗೇಮ್ಸ್ ಕ್ರೀಡಾಕೂಟದಲ್ಲಿ 13 ಪದಕಗಳನ್ನು ಗೆದ್ದಿದ್ದಾರೆ. ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾ.10 ರಿಂದ 15ರ ವರೆಗೆ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಕ್ರೀಡಾಕೂಟ ನಡೆಯಲಿದ್ದು, ಈಗಾಗಲೇ ಇವರಿಬ್ಬರು ವಿದೇಶಕ್ಕೆ ತೆರಳಿದ್ದಾರೆ. ಬೋಪಯ್ಯ ಅವರು ಜಾವಲಿನ್ ಥ್ರೋ, ಡಿಸ್‍ಕಸ್ ಥ್ರೋ ಹಾಗೂ ಶಾಟ್‍ಪುಟ್ ಕ್ರೀಡೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳ್ಳಿಯಪ್ಪ ಅವರು 100, 200 ಹಾಗೂ 1,500 ಮೀಟರ್ ವಾಕಿಂಗ್ ರೇಸ್‍ನಲ್ಲಿ ಭಾಗವಹಿಲಿದ್ದಾರೆ. ಇವರೊಂದಿಗೆ ಹುದಿಕೇರಿಯ ನಿವಾಸಿ, ಕರ್ನಾಟಕ ಮಾಸ್ಟರ್ಸ್ ಕ್ರೀಡಾಕೂಟ…

Read More

ಸೋಮವಾರಪೇಟೆ ಮಾ.7 : ಸೋಮವಾರಪೇಟೆ ಪಟ್ಟಣದ ಕಕ್ಕೆಹೊಳೆ ಬಳಿಯಿರುವ ಶ್ರೀ ಮುತ್ತಪ್ಪಸ್ವಾಮಿ ಮತ್ತು ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದ 2023ನೇ ಸಾಲಿನ ಜಾತ್ರೋತ್ಸವವು ಮಾ.12 ರಿಂದ 14ರವರೆಗೆ ಮೂರು ದಿನಗಳ ಕಾಲ ಜರುಗಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಎನ್.ಡಿ.ವಿನೋದ್‌ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾರ್ಚ್ 12 ರಂದು ಭಾನುವಾರದಂದು ಬೆಳಗ್ಗೆ 4.30ಕ್ಕೆ ಗಣಪತಿಹೋಮದೊಂದಿಗೆ ಜಾತ್ರೋತ್ಸವಕ್ಕೆ ಚಾಲನೆ ದೊರೆಯಲಿದೆ. 5.30ಕ್ಕೆ ಕೇರಳದ ಕೊಳಪುರಂ ಮನಹಿಲ್ಲಂ ತಂತ್ರಿಗಳಾದ ಕೃಷ್ಣಕುಮಾರ್ ಅವರು ವಿಶೇಷ ಆಶ್ಲೇಷ ಪೂಜೆ ನಡೆಸಿಕೊಡುತ್ತಾರೆ. ಸಂಜೆ 7 ಗಂಟೆಗೆ ದೇವಾಲಯದಲ್ಲಿ ನೂತನವಾಗಿ ನಿರ್ಮಿಸಿರುವ ಅನ್ನದಾನ ಮಂಟಪವನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ದೇವಾಲಯ ಸಮಿತಿ ಅಧ್ಯಕ್ಷ ಎನ್.ಡಿ.ವಿನೋದ್‌ಕುಮಾರ್ ವಹಿಸಲಿದ್ದು, ಅತಿಥಿಗಳಾಗಿ ಚೌಡ್ಲು ಗ್ರಾಪಂ ಅಧ್ಯಕ್ಷ ಪಿ.ಎಂ.ಗಣಪತಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ ಪಾಲ್ಗೊಳ್ಳಲಿದ್ದಾರೆ. ಮಾ. 13ರಂದು ಸೋಮವಾರೆ ಮಧ್ಯಾಹ್ನ 12.30ಕ್ಕೆ ಉತ್ಸವ ಆರಂಭವಾಗಲಿದೆ. ಸಂಜೆ 4.30ಕ್ಕೆ ಕೇರಳದ ಖ್ಯಾತ ಸಿಂಗಾರಿ ಮೇಳದೊಂದಿಗೆ ಕಲಶದ ಮೆರವಣಿಗೆ ಆರಂಭವಾಲಿದೆ. ಸಂಜೆ…

Read More

ಸೋಮವಾರಪೇಟೆ ಮಾ.7 : ಬೆಂಗಳೂರಿನ ನಾಗರಭಾವಿಯಲ್ಲಿರುವ ಜ್ಞಾನಸೌಧ ಸಭಾಂಗಣದಲ್ಲಿ ನಡೆದ ಬನವಾಸಿ ಕನ್ನಡಿಗ ಕನ್ನಡಮಯ ಟ್ರಸ್ಟಿನ ಆರನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಾಮಾಜಿಕ ಕಾರ್ಯಕರ್ತೆ ಎಂ.ಎ.ರುಬಿನಾ ಅವರಿಗೆ ಬನವಾಸಿ ಕನ್ನಡಿಗ 2023 ರಾಜ್ಯ ಪ್ರಶಸ್ತಿಯನ್ನು ನೀಡಿ ಈಚೆಗೆ ಗೌರವಿಸಲಾಯಿತು. ಚಲನಚಿತ್ರ ನಿರ್ದೇಶಕ ಟಿ ಎಸ್ ನಾಗಾಭರಣ, ಎಸ್.ಮಹೇಂದರ್, ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ, ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್‌ನ ಅಧ್ಯಕ್ಷ ಶಿವಕುಮಾರ್ ನಾಗರನವಿಲೆ, ಕೊಡಗು ತಂಡದ ಅಧ್ಯಕ್ಷ ನೌಷಾದ್ ಜನ್ನತ್ ಮತ್ತು ಬನವಾಸಿ ಕನ್ನಡಿಗ ಟ್ರಸ್ಟ್ ನ ಕಿರಣ್ ಮತ್ತು ಕಿರಣ್ ಮಯಿ ಮತ್ತಿತರು ಗಣ್ಯರು ಇದ್ದರು.

Read More

ನಾಪೋಕ್ಲು ಮಾ.7 : ನಿರಂತರ ಅಧ್ಯಯನದಿಂದ ವಿದ್ಯಾರ್ಥಿಗಳು ಯಶಸ್ಸು ಗಳಿಸಲು ಸಾಧ್ಯ ಎಂದು ಭಾಗಮಂಡಲ ಶ್ರೀ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾದ ದಿವಾಕರ್ ಕೆ. ಜೆ.ಹೇಳಿದರು.ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಎಸ್. ಎಸ್. ಎಲ್. ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ ನಿವಾರಣೆ ಮತ್ತು ಪರೀಕ್ಷಾ ಸಿದ್ದತಾ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿ ವಿದ್ಯಾರ್ಥಿಗಳಿಗೆ ಸುಮಾರು ಎರಡು ಗಂಟೆಗಳ ಕಾಲ ಉಪನ್ಯಾಸ ನೀಡುವುದರೊಂದಿಗೆ ಸಂವಾದ ನಡೆಸಿದರು. ಈ ಕಾರ್ಯಗಾರದಲ್ಲಿ ಕೆ. ಪಿ.ಎಸ್ ನಾಪೋಕ್ಲು, ಶ್ರೀ ರಾಮ ಟ್ರಸ್ಟ್ ನಾಪೋಕ್ಲು, ಸೆಕ್ರೆಡ್ ಹಾರ್ಟ್ಸ್ ನಾಪೋಕ್ಲು ಶಾಲೆಗಳ 148 ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಪ್ರಭಾರ ಉಪ ಪ್ರಾಂಶುಪಾಲ ಶಿವಣ್ಣ ಎಂ. ಎಸ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಸಂಪಾಜೆ ಯ ಅಧ್ಯಕ್ಷ ಧನಂಜಯ ಎಂ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ. ಉಪಾಧ್ಯಕ್ಷ ಹಾರೀಸ್ ಕೆ.ಎ ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಕಾರ್ಯದರ್ಶಿ ಉಷಾರಾಣಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. (ವರದಿ :…

Read More

ಮಡಿಕೇರಿ ಮಾ.7 : ಅಡುಗೆ ಅನಿಲದ ಬೆಲೆ ಏರಿಕೆ ಖಂಡಿಸಿ ಕೊಡಗು ಜಿಲ್ಲಾ ಜಾತ್ಯಾತೀತ ಜನತಾದಳದ ವತಿಯಿಂದ ಮಾ.10 ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನಾ ಜಾಥಾ ನಡೆಯಲಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಸಿ.ಜೆ ಮೋಹನ್ ಮೌರ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಬೆಳಗ್ಗೆ 10 ಗಂಟೆಗೆ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ನೇತೃತ್ವದಲ್ಲಿ ನಗರದ ನಗರದ ಎ.ವಿ ಶಾಲೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಜಾಥಾ ನಡೆಯಲಿದ್ದು, ಪಕ್ಷದ ರಾಜ್ಯ ನಾಯಕರು, ಜಿಲ್ಲೆಯ ವಿವಿಧ ಘಟಕದ ಅಧ್ಯಕ್ಷರು, ತಾಲೂಕು ಅಧ್ಯಕ್ಷರು, ಹೋಬಳಿ ಅಧ್ಯಕ್ಷರು ಮತ್ತು ಬೂತ್ ಮಟ್ಟದ ನಾಯಕರು, ಪದಾಧಿಕಾರಿಗಳು ಹಾಗೂ ಎಲ್ಲಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿದರು.

Read More

ಮಡಿಕೇರಿ ಮಾ.7 : ಕೊಡಗು ಜಿಲ್ಲಾ ಜೆಡಿಎಸ್ ಪಕ್ಷದ ಕುಶಾಲನಗರ ತಾಲೂಕು ಮಹಿಳಾ ಅಧ್ಯಕ್ಷೆಯಾಗಿ ಪದ್ಮ ಮಾಧುಕುಮಾರ್ ಆಯ್ಕೆಯಾಗಿದ್ದಾರೆ. ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರ ಆದೇಶದ ಮೇರೆಗೆ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಮುಖಂಡರ ಸಮ್ಮುಖದಲ್ಲಿ ಅಧಿಕಾರ ಹಸ್ತಾಂತರಿಸಲಾಯಿತು. ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಜವಾಬ್ದಾರಿ ವಹಿಸುವಂತೆ ಕೆ.ಎಂ.ಗಣೇಶ್ ತಿಳಿಸಿದರು.

Read More

ಸುಂಟಿಕೊಪ್ಪ,ಮಾ.7: ಸುಂಟಿಕೊಪ್ಪ ಗ್ರಾ.ಪಂ ನೂತನ ಕಚೇರಿ ಕಟ್ಟಡ ಹಾಗೂ ರಾಜೀವ್ ಗಾಂಧಿ ಸೇವಾ ಕೇಂದ್ರದ ಉದ್ಘಾಟನೆಯು ಮಾ.10 ರಂದು ನೆರವೇರಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಪಂಚಾಯಿತಿ ಕಟ್ಟಡ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್, ಕೊಡಗು ಮೈಸೂರು ಕ್ಷೇತ್ರದ ಸಂಸದರಾದ ಪ್ರತಾಪ್‍ಸಿಂಹ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕುಶಾಲಪ್ಪ, ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್, ಕೊಡಗು ಜಿಲ್ಲಾಧಿಕಾರಿ ಬಿ.ಸಿ.ಸತೀಶ, ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಸ್.ಆಕಾಶ್, ಸೋಮವಾರಪೇಟೆ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಬಿ.ವಿ.ಜಯಣ್ಣ, ಸುಂಟಿಕೊಪ್ಪ ಗ್ರಾ.ಪಂ.ಉಪಾಧ್ಯಕ್ಷ ಪ್ರಸಾದ್ ಕುಟ್ಟಪ್ಪ, ವಿಶೇಷ ಆಹ್ವಾನಿತರಾದ ಜಿ.ಪಂ.ಮಾಜಿ ಸದಸ್ಯೆ ಕೆ.ಪಿ.ಚಂದ್ರಕಲಾ, ತಾಪಂ. ಮಾಜಿ ಸದಸ್ಯೆ ಓಡಿಯಪ್ಪನ ವಿವiಲಾವತಿ ಆಗಮಿಸಲಿರುವರು, ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷೆ ಶಿವಮ್ಮ ವಹಿಸಲಿರುವರು.

Read More