ಮಡಿಕೇರಿ ಜ.1 : ಪ್ರಶಸ್ತಿ ವಿಜೇತ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ನಾಡ ಪೆದ ಆಶಾ” ಕೊಡವ ಚಿತ್ರಕ್ಕೆ ಸೌತ್ ಇಂಡಿಯನ್ ಫಿಲಂ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ ದೊರೆತ್ತಿದೆ. ಈ ಚಿತ್ರದ ನಟನೆಗಾಗಿ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಹಾಗೂ ನಾಯಕ ನಟ ಬೊಳ್ಳಜಿರ ಬಿ.ಅಯ್ಯಪ್ಪ ಅವರುಗಳಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಫಿಲಂ ಫೆಸ್ಟಿವಲ್ ಗೆ 11,520 ಚಿತ್ರಗಳು ಬಂದಿದ್ದು, ವಿವಿಧ ವಿಭಾಗಗಳಲ್ಲಿ ಆಯ್ಕೆಯಾದ 630 ಚಿತ್ರಗಳಲ್ಲಿ “ನಾಡ ಪೆದ ಆಶಾ” ಕೂಡ ಒಂದು. ಚಿತ್ರ ಪ್ರದರ್ಶನಗೊಳ್ಳುವ ಮೂಲಕ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿ ಮೂರು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಸ್ತ್ರೀ ಪ್ರಧಾನ ಕಥಾವಸ್ತುವಿನ “ನಾಡ ಪೆದ ಆಶಾ” 2021ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಗೊಂಡು ಕೊಡಗು ಜಿಲ್ಲೆಯಾದ್ಯಂತ 123 ಯಶಸ್ವಿ ಪ್ರದರ್ಶನಗಳನ್ನು ಕಂಡಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ನಡೆದ ಅಂತರರಾಷ್ಟ್ರೀಯ ಚಲಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡ “ನಾಡ ಪೆದ ಆಶಾ” ಕೊಡವ ಚಿತ್ರ ಇಲ್ಲಿಯವರೆಗೆ ಒಟ್ಟು 10 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.…
Breaking News
- *ಎಸ್ಎಸ್ಎಲ್ಸಿ ಫಲಿತಾಂಶ : ಕಾವೇರಿ ಶಾಲೆಯ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*
- *ಚೀಯಕಪೂವಂಡ ಕೇರ್ ಬಲಿ ನಮ್ಮೆ: 120 ಕುಟುಂಬ ತಂಡಗಳ ಮುನ್ನಡೆ*
- *ಮರಳಿ ಅರಣ್ಯಕ್ಕೆ ಸೇರಿದ ಕಾಡಾನೆಗಳ ಹಿಂಡು*
- *ತೋಳೂರುಶೆಟ್ಟಳ್ಳಿ : ಸಂಭ್ರಮದಿಂದ ನಡೆದ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ*
- *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.25 ರಂದು ನಡೆಯುವ ಪಂದ್ಯಗಳು*
- *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.24 ರಂದು ಗೆಲುವು ಸಾಧಿಸಿದ ತಂಡಗಳು*
- *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ : ಏ.24 ರಂದು ಗೆಲುವು ಸಾಧಿಸಿದ ತಂಡಗಳು*
- *ಹೋಂಸ್ಟೇ ಮಾಲೀಕರ ಸಭೆ ನಡೆಸಿದ ಪೊಲೀಸ್ ಇಲಾಖೆ : ಪ್ರವಾಸಿಗರ ಸುರಕ್ಷತೆಗೆ ಸೂಚನೆ*
- *ಶರಣ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಅರಮೇರಿ ಶ್ರೀಗಳ ಆಯ್ಕೆ*
- *ಮಾಯಮುಡಿಯಲ್ಲಿ ಅಮ್ಮ ಕೊಡವರ “ಬಾನಂಡ ಕಪ್ ಕ್ರಿಕೆಟ್” ಹಬ್ಬ*






