ಲೇಖಕ: admin

ಮಡಿಕೇರಿ ಫೆ.7 : ಕೊಡಗು ಐರಿ ಸಮಾಜ ಸಹಯೋಗದಲ್ಲಿ  ಕೊಡಗಿನ ಐರಿ ಜನಾಂಗದ ಮಧ್ಯೆ ಏ.22 ಮತ್ತು 23 ರಂದು 9ನೇ ವರ್ಷದ ಕೌಟುಂಬಿಕ ಕ್ರಿಕೆಟ್ ಪಂದ್ಯಾವಳಿ  ನಡೆಯಲಿದೆ ಎಂದು ಆಯೋಜನಾ‌ ಸಮಿತಿ ಸಂಚಾಲಕ ಐಮಂಡ ಗೋಪಾಲ್‌ ಸೋಮಯ್ಯ  ತಿಳಿಸಿದ್ದಾರೆ. ಪತ್ರಿಕಾ  ಪ್ರಕಟಣೆ  ನೀಡಿರುವ ಅವರು, ನಗರದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು,  ಐರಿ ಮಕ್ಕಡ ಕೂಟ ಆತಿಥ್ಯವಹಿಸಲಿದೆ ಎಂದು ತಿಳಿಸಿದರು. ಈ ಬಾರಿ  ಬಹಳ ವಿಭಿನ್ನವಾಗಿ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು,  ಕ್ರಿಕೆಟ್ ಮಾತ್ರವಲ್ಲದೆ ಮಹಿಳೆಯರಿಗೆ ಹಗ್ಗ ಜಗ್ಗಾಟ, ಜನಾಂಗದ ಹೆಣ್ಣುಮಕ್ಕಳಿಗೆ ಪ್ರದರ್ಶನ ಕ್ರಿಕೆಟ್ ಪಂದ್ಯಾಟ ಹಾಗೂ ಇತರ ಆಟೋಟ ಸ್ಪರ್ಧೆಗಳು ನಡೆಯಲಿವೆ. ಅಲ್ಲದೆ ಪುರುಷರಿಗೆ ಮತ್ತು ಮಹಿಳೆಯರಿಗೆ 100 ಮೀ.  ಓಟ, ಹಿರಿಯ ಪುರುಷರು ಮತ್ತು ವಿವಾಹಿತ ಮಹಿಳೆಯರಿಗೆ 100 ಮೀಟರ್ ಓಟ, ಪುಟಾಣಿಗಳಿಗೆ ವಿವಿಧ ಬಗೆಯ ಆಟೋಟ ಹಾಗೂ ಹಲವು ಬಗೆಯ ಮನರಂಜನಾ ಸ್ಪರ್ಧೆಗಳನ್ನ ಆಯೋಜಿಸಲಾಗಿದೆ ಎಂದರು. ಸಮಗ್ರ ಚಾಂಪಿಯನ್ ತಂಡಕ್ಕೆ ಐನ್ ಮನೆ ಪ್ರಶಸ್ತಿ…

Read More

ಮಡಿಕೇರಿ ಫೆ.7 : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಕೊಡವ ಅಧಿಕೃತ ಲಿಪಿಯ ಬಗ್ಗೆ ನಿರ್ಧಾರ ಕೈಗೊಂಡಿದ್ದು, ಸರ್ಕಾರ ತಕ್ಷಣ ಇದನ್ನು ಅಂಗೀಕರಿಸಿ, ಜಿಲ್ಲೆಯ ವಾಣಿಜ್ಯ ಮಳಿಗೆ ಮತ್ತು ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ಭಾಷೆಯೊಂದಿಗೆ ಬಳಸಲು ಆದೇಶ ನೀಡಬೇಕೆಂದು ಕರ್ನಾಟಕ ಭಾಷಾ ಅಲ್ಪಸಂಖ್ಯಾತರ ಒಕ್ಕೂಟದ ರಾಜ್ಯಾಧ್ಯಕ್ಷ ಪ್ರತೀಕ್ ಪೊನ್ನಣ್ಣ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾಗಮಂಡಲದ ದೇವಾಯದಲ್ಲಿ ಸಿಕ್ಕ ಶಾಸನ ಕೊಡವ ಲಿಪಿಯಲ್ಲಿರುವ ಮೊದಲ ಶಾಸನವಾಗಿದೆ. ಇದು 1370ರ ಇಸವಿಯದಾಗಿದ್ದು, ಅದರಂತೆ 1887ರಲ್ಲಿ ಡಾ.ಕೊರವಂಡ ಅಪ್ಪಯ್ಯ ಅವರು ಲಿಪಿಯನ್ನು ಬಿಡುಗಡೆ ಮಾಡಿದ್ದಾರೆ ಎಂದರು. ನಂತರ 1970ರಲ್ಲಿ ಸುಮಾರು 12 ಲಿಪಿಗಳನ್ನು ಸಂಶೋಧನೆ ಮಾಡಿ ಡಾ.ಐ.ಎಂ.ಮುತ್ತಣ್ಣ ಅವರು ಕೊಡವ ಭಾಷೆಗೆ ಸರಳವಾಗಿರುವ ಒಂದು ಲಿಪಿಯನ್ನು ತಂದಿದ್ದಾರೆ. ಅಲ್ಲದೆ ನಂತರ ದಿನಗಳಲ್ಲಿ ಐದು ಲಿಪಿಗಳು ಕೊಡವ ಭಾಷೆಗೆ ಬಂದವು. ಇದೀಗ ಅಧಿಕೃತವಾಗಿ ಯಾವ ಲಿಪಿಯನ್ನು ಬಳಸಬೇಕು ಎಂಬ ಗೊಂದಲಕ್ಕೆ ತೆರೆ ಎಳೆದಿರುವ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಕೊಡವ ಅಧಿಕೃತ ಲಿಪಿಯನ್ನು…

Read More

ಶನಿವಾರಸಂತೆ ಫೆ.7 :  ಕೊಡ್ಲಿಪೇಟೆ ಶ್ರೀ ಗುರುಪೀಠ ಕಲ್ಲಳ್ಳಿ ಮಠದ ಶ್ರೀ  ಗುರು ಪಟ್ಟಾಧಿಕಾರ ಮಹೋತ್ಸವ ಕಾರ್ಯಕ್ರಮವು ಫೆ.9 ಮತ್ತು 10 ರಂದು ನಡೆಯಲಿದೆ ಎಂದು ಕೊಡ್ಲಿಪೇಟೆ ಶ್ರೀ ಗುರುಪೀಠ ಕಲ್ಲಳ್ಳಿ ಮಠ ಹಾಗೂ ಕೊಡ್ಲಿಪೇಟೆ ವೀರಶೈವ ಮಂಡಳಿ ಅಧ್ಯಕ್ಷ ಎಸ್.ಎಸ್.ವರಪ್ರಸಾದ್ ತಿಳಿಸಿದರು. ಶನಿವಾರ ಸಂತೆಯಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡ್ಲಿಪೇಟೆ ಶ್ರೀ ಗುರುಪೀಠ ಕಲ್ಲಳ್ಳಿ ಮಠಾಧೀಶರಾದ ಶ್ರೀ ರುದ್ರಮುನಿ ಮಹಾಸ್ವಾಮಿಗಳಿಗೆ ಶ್ರೀ ಗುರು ಪಟ್ಟಾಧಿಕಾರ ಮಹೋತ್ಸವ ಕಾರ್ಯಕ್ರಮವನ್ನು  ಹಮ್ಮಿಕೊಳ್ಳಲಾಗಿದ್ದು, ಮಹೋತ್ಸವದ ಅಂಗವಾಗಿ ಫೆ. 9ರಂದು ಶ್ರೀ ಕ್ಷೇತ್ರ ಕಲ್ಲಳ್ಳಿ ಮಠದಲ್ಲಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮ ನಡೆಯಲಿದೆ. ಫೆ.10ರಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಕ್ಷೇತ್ರ ಕಲ್ಲಳ್ಳಿ ಮಠದ ಆವರಣದಲ್ಲಿರುವ ಶ್ರೀ ವೀರಭದ್ರ ಸ್ವಾಮೀ ವೇದಿಕೆಯಲ್ಲಿ ಶ್ರೀ ಗುರು ಪಟ್ಟಾಧಿಕಾರ ಮಹೋತ್ಸವ ಮತ್ತು ಧರ್ಮಸಭಾ ಕಾರ್ಯಕ್ರಮ ನಡೆಯಲಿದೆ ಎಂದರು. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆ ಶ್ರೀ ಕಾಡು ಸಿದ್ದೇಶ್ವರ ಮಠದ ಶ್ರೀ ಕರಿ ವೃಷಭದೇಸಿ ಕೇಂದ್ರ ಶಿವ ಯೋಗಿಶ್ವರ…

Read More

ಮಡಿಕೇರಿ ಫೆ.7 : ಬೆಟ್ಟಗೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಒಣ, ಹಸಿ, ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಘಟಕವನ್ನು ನಿರ್ಜನ ಪ್ರದೇಶದಲ್ಲಿ ನಿರ್ಮಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಪ್ರಸ್ತುತ ಘಟಕ ಸ್ಥಾಪನೆಗೆ ಬೆಟ್ಟಗೇರಿ ಗ್ರಾಮದ ಹೃದಯ ಭಾಗದಲ್ಲಿರುವ ಹಳೆಯ ಪಶು ಚಿಕಿತ್ಸಾ ಕೇಂದ್ರದ ಸಮೀಪದ ಜಾಗ ಗುರುತಿಸಲಾಗಿದೆ ಎಂದು ತಿಳಿದು ಬಂದಿದೆ. ಇದರ ಮುಂಭಾಗದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ, ಹಿಂಭಾಗದಲ್ಲಿ ನೂತನ ಪಶು ಚಿಕಿತ್ಸಾ ಕೇಂದ್ರ, ಬಲಬದಿಯಲ್ಲಿ ಊರಿನ ಭಗವತಿ ದೇವಸ್ಥಾನಕ್ಕೆ ಹೋಗುವ ರಸ್ತೆ, ನೂರಾರು ಮನೆ ಹಾಗೂ ಊರಿನ ಅಂಬಲವಿದೆ. ಎಡಭಾಗದಲ್ಲಿ ರಾಷ್ಟ್ರೀಯ ಬ್ಯಾಂಕ್ ಮತ್ತು ಖಾಸಗಿ ವೈದ್ಯಕೀಯ ಚಿಕಿತ್ಸಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಶಾಲೆಗೆ ತೆರಳುವ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ. ಊರಿನ ಧಾರ್ಮಿಕ ಕೇಂದ್ರವು ಉದ್ದೇಶಿತ ಜಾಗದ ಪಕ್ಕದಲ್ಲೇ ಇದೆ, ಪ್ರತಿನಿತ್ಯ ಸಾವಿರಾರು ಮಂದಿ ಸಂಚರಿಸುತ್ತಾರೆ. ಇಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಗೊಂಡರೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚು ಎಂದು ಗ್ರಾಮಸ್ಥರು ಜಿಲ್ಲಾಧಿಕಾರಿಗಳು…

Read More

ಸೋಮವಾರಪೇಟೆ ಜ.7 : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಜಲಜೀವನ್ ಮಿಷನ್ ಯೋಜನೆಯಡಿ ಶಾಂತಳ್ಳಿ ಗ್ರಾ.ಪಂ ನ ಅನೇಕ ಗ್ರಾಮಗಳು ಸೇರಿದಂತೆ ಗೌಡಳ್ಳಿ ಗ್ರಾ.ಪಂ ನ ಶುಂಠಿ ಗ್ರಾಮದಲ್ಲಿ ಅಸಮರ್ಪಕ ಕಾಮಗಾರಿ ನಡೆಸಲಾಗಿದ್ದು, ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಶಾಂತಳ್ಳಿ ಗ್ರಾ.ಪಂ ವ್ಯಾಪ್ತಿಯ ಹರಗ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಪೈಪ್‍ಲೈನ್ ಅಳವಡಿಸಿ 2 ವರ್ಷ ಕಳೆದರೂ ಈವರೆಗೆ ನೀರಿನ ವ್ಯವಸ್ಥೆಯಾಗಿಲ್ಲ. ಬೇಸಿಗೆಯಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಎದುರಿಸುವಂತಾಗಿದ್ದು, ಲಕ್ಷಾಂತರ ರೂಪಾಯಿ ವೆಚ್ಚದ ಕಾಮಗಾರಿಯಲ್ಲಿ ಅವ್ಯವಹಾರವಾಗಿದೆ ಎಂದು ಶರಣ್ ಗೌಡ, ಡಾಲಿ ಪ್ರಕಾಶ್ ಸೇರಿದಂತೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ತಲ್ತರೆಶೆಟ್ಟಳ್ಳಿಯ ಉದ್ರಳ್ಳಿಯಲ್ಲೂ ಇದೇ ಪರಿಸ್ಥಿತಿ ಬಂದಿದೆ. ಕಳೆದ 2 ವರ್ಷಗಳಿಂದ ಮನವಿ ನೀಡುತ್ತ ಬಂದಿದ್ದರೂ ಈವರೆಗೆ ಕ್ರಮವಹಿಸಿಲ್ಲ. ಅಳವಡಿಸಿರುವ ಪೈಪ್‍ಲೈನ್ ಕಾಮಗಾರಿಯೂ ಕಳಪೆಯಾಗಿದೆ. ಟ್ಯಾಂಕ್‍ಗೆ ನೀರು ಹಕುತ್ತಿಲ್ಲ ಎಂದು ಬಗ್ಗನ ಅನಿಲ್‍ಕುಮಾರ್, ಡಾಲಿ ಪ್ರಕಾಶ್, ಜೀವನ್, ಸುಖಾಂತ್,…

Read More

ಸೋಮವಾರಪೇಟೆ ಫೆ.7 : ನೇರುಗಳಲೆ ಗ್ರಾ.ಪಂ ವ್ಯಾಪ್ತಿಯ ತಣ್ಣೀರುಹಳ್ಳ ಗ್ರಾಮದಲ್ಲಿ ಅರಣ್ಯ ಹಕ್ಕು ಸಮಿತಿ ಸಭೆ ನಡೆಯಿತು. ಗ್ರಾಮದ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಶಾಸಕ ಅಪ್ಪಚ್ಚುರಂಜನ್ ಅವರು, ಫಲಾನುಭವಿಗಳು ತಮ್ಮ ಜಾಗಕ್ಕೆ ಸಂಬಂಧಿಸಿದಂತೆ ಈವರೆಗೆ ಪಡೆದುಕೊಂಡಿರುವ ದಾಖಲೆಗಳು, ಆಧಾರ್‍ಕಾರ್ಡ್, ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ನಿಗದಿತ ಅವಧಿಯೊಳಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸಲ್ಲಿಸಬೇಕೆಂದು ಸೂಚಿಸಿದರು. ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಭೇಟಿ ನೀಡುವ ಸಂದರ್ಭ ನಡೆಯುವ ಕಾರ್ಯಕ್ರಮದಲ್ಲಿ ಎಲ್ಲಾ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮಕೈಗೊಳ್ಳಲಾಗಿದೆ. ಅಕ್ರಮ ಸಕ್ರಮ ಸಮಿತಿ, 94 ಸಿ ಮತ್ತು 94 ಸಿ.ಸಿ., ಅರಣ್ಯ ಹಕ್ಕು ಸಮಿತಿ ಯೋಜನೆಯಡಿ ಕ್ಷೇತ್ರ ವ್ಯಾಪ್ತಿಯ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ ಮಾತನಾಡಿ, ಫಲಾನುಭವಿಗಳು ಸಮಿತಿಗೆ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ನಂತರ ಅರಣ್ಯ ಇಲಾಖೆ ಮತ್ತು ಸರ್ವೆ ಇಲಾಖೆಯಿಂದ ಜಂಟಿ ಸರ್ವೆ ನಡೆಸಲಾಗುವುದು.…

Read More

ಗೋಣಿಕೊಪ್ಪಲು  ಫೆ.7  : ಪ್ರಸ್ತುತ ಐಪಿಎಲ್ ಮಾದರಿಯ  ಗೋಣಿಕೊಪ್ಪಲು ಪ್ರೀಮಿಯರ್ ಲೀಗ್ ಕ್ರೀಡಾಕೂಟಕ್ಕೆ ನೂತನ ಅಧ್ಯಕ್ಷರಾಗಿ ಸ್ನೇಕ್ ಸಾಜಿ  ಅವರನ್ನು ಆಯ್ಕೆ ಮಾಡಲಾಗಿದೆ. ಜಿಪಿಎಲ್ ಸಂಚಾಲಕರಾಗಿ ಸಿಂಗಿ ಸತೀಶ್ ಹಾಗೂ ಉಪಾಧ್ಯಕ್ಷರಾಗಿ ಅಣ್ಣಪ್ಪ, ಪ್ರದಾನ ಕಾರ್ಯದರ್ಶಿಯಾಗಿ ಶಮ್ಮು, ಖಜಾಂಚಿಯಾಗಿ ಸ್ವಾಮಿ,  ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಂಜು, ಸಹ ಕಾರ್ಯದರ್ಶಿಯಾಗಿ ಅಫ್ಸಲ್ (ಅಪ್ಪಿ) ನಿರ್ದೇಶಕರುಗಳಾಗಿ ಬಶೀರ್, ಶಾನಿ, ಫಾಝಿಲ್, ರಂಶಾದ್ , ಚಿದು, ಅಕ್ಷಯ್, ಮುನೀರ್, ದೀಪು, ಹಮೀದ್, ಉಮೇಶ್  ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಪಿಎಲ್ ಸ್ಥಾಪಕ ಅಧ್ಯಕ್ಷ  ಶರಫುದ್ದೀನ್ ಹಾಗೂ ನಿಕಟಪೂರ್ವ ಅಧ್ಯಕ್ಷ  ಸಿಂಗಿ ಸತೀಶ್  ತಿಳಿಸಿದ್ದಾರೆ ಮಾರ್ಚ್ ತಿಂಗಳಲ್ಲಿ ಗೋಣಿಕೊಪ್ಪಲು ಸರ್ಕಾರಿ ಶಾಲಾ ಮೈದಾನದಲ್ಲಿ 4 ದಿನಗಳ ಕಾಲ ಕ್ರೀಡಾಕೂಟ ನಡೆಯಲಿದ್ದು,  ದೇಶದ ಐಪಿಎಲ್ ಮಾದರಿಯಲ್ಲಿ 10 ತಂಡಗಳು ಭಾಗವಹಿಸುವುದಾಗಿ  ತಿಳಿಸಿದ್ದಾರೆ.

Read More

ಮಡಿಕೇರಿ ಫೆ.7 : ಸಂಜೀವಿನಿ ಸ್ವ ಸಹಾಯ ಸಂಘಗಳ ಮಹಿಳಾ ಉದ್ಯಮಿಗಳು ತಯಾರಿಸುವ ಉತ್ಪನ್ನಗಳನ್ನು ಮಾರಾಟ ಮಾಡುವ ಸಲುವಾಗಿ ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ನಗರದ ಗಾಂಧಿ ಮೈದಾನದಲ್ಲಿ ಏರ್ಪಡಿಸಲಾದ ‘ಜಿಲ್ಲಾ ಮಟ್ಟದ ವ್ಯಾಪಾರ ಮೇಳಕ್ಕೆ ಚಾಲನೆ ದೊರೆಯಿತು. ನಂತರ ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಸೇರಿದಂತೆ ಅಧಿಕಾರಿಗಳು ಮೇಳದಲ್ಲಿ ಭಾಗಿಯಾದ ಮಳಿಗೆಗಳಿಗೆ ಭೇಟಿ ನೀಡಿ, ಮಹಿಳೆಯರು ತಯಾರಿಸಿದ ವಸ್ತುಗಳನ್ನು ಪರಿಶೀಲಿಸಿ ಶುಭ ಕೋರಿದರು. ಮೇಳದಲ್ಲಿ ಗ್ರಾಮೀಣ ಭಾಗದ ಆಹಾರೋತ್ಪನ್ನಗಳು, ಕರಕುಶಲ ವಸ್ತುಗಳು ಸೇರಿದಂತೆ ಮತ್ತಿತರ ಸಾಮಾಗ್ರಿಗಳು ಗಮನ ಸೆಳೆಯತ್ತಿದೆ.  

Read More

ಮಡಿಕೇರಿ ಫೆ.7 :  ಗೋಣಿಕೊಪ್ಪ ಪಂಚಾಯಿತಿ ವ್ಯಾಪ್ತಿಯ ಕಾಂಕ್ರೀಟಿಕರಣಗೊಂಡ ಸಂತ ಮೈಕಲ್ ಶಾಲೆ ರಸ್ತೆ ಮತ್ತು ಹಳೆ ಪೋಸ್ಟ್ ಆಫೀಸ್ ರಸ್ತೆಗೆ ನೂತನವಾಗಿ ಸ್ವಾಮಿ ವಿವೇಕಾನಂದ ರಸ್ತೆ  ಎಂದು  ನಾಮಕರಣಗೊಳಿಸಿ,  ಶಾಸಕ ಕೆ.ಜಿ.ಬೋಪಯ್ಯ ನೂತನ ರಸ್ತೆಯನ್ನು ಉದ್ಘಾಟಿಸಿದರು. ಈ ಸಂದರ್ಭ  ಗ್ರಾ. ಪಂಚಾಯಿತಿ ಸದಸ್ಯರು ಮತ್ತು ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು.     

Read More

ಮಡಿಕೇರಿ ಫೆ.7 :  ವಿರಾಜಪೇಟೆ ತಾಲ್ಲೂಕು, ಹಾಲುಗುಂದ ಗ್ರಾ.ಪಂ  ವ್ಯಾಪ್ತಿಯಲ್ಲಿ ವಿವಿಧ ಅನುದಾನದಲ್ಲಿ ಕೈಗೊಳ್ಳುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ  ಶಾಸಕ ಕೆ.ಜಿ.ಬೋಪಯ್ಯ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಗ್ರಾ.ಪಂ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.

Read More