ಲೇಖಕ: admin

ಸೋಮವಾರಪೇಟೆ ಜ.7 : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಜಲಜೀವನ್ ಮಿಷನ್ ಯೋಜನೆಯಡಿ ಶಾಂತಳ್ಳಿ ಗ್ರಾ.ಪಂ ನ ಅನೇಕ ಗ್ರಾಮಗಳು ಸೇರಿದಂತೆ ಗೌಡಳ್ಳಿ ಗ್ರಾ.ಪಂ ನ ಶುಂಠಿ ಗ್ರಾಮದಲ್ಲಿ ಅಸಮರ್ಪಕ ಕಾಮಗಾರಿ ನಡೆಸಲಾಗಿದ್ದು, ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಶಾಂತಳ್ಳಿ ಗ್ರಾ.ಪಂ ವ್ಯಾಪ್ತಿಯ ಹರಗ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಪೈಪ್‍ಲೈನ್ ಅಳವಡಿಸಿ 2 ವರ್ಷ ಕಳೆದರೂ ಈವರೆಗೆ ನೀರಿನ ವ್ಯವಸ್ಥೆಯಾಗಿಲ್ಲ. ಬೇಸಿಗೆಯಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಎದುರಿಸುವಂತಾಗಿದ್ದು, ಲಕ್ಷಾಂತರ ರೂಪಾಯಿ ವೆಚ್ಚದ ಕಾಮಗಾರಿಯಲ್ಲಿ ಅವ್ಯವಹಾರವಾಗಿದೆ ಎಂದು ಶರಣ್ ಗೌಡ, ಡಾಲಿ ಪ್ರಕಾಶ್ ಸೇರಿದಂತೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ತಲ್ತರೆಶೆಟ್ಟಳ್ಳಿಯ ಉದ್ರಳ್ಳಿಯಲ್ಲೂ ಇದೇ ಪರಿಸ್ಥಿತಿ ಬಂದಿದೆ. ಕಳೆದ 2 ವರ್ಷಗಳಿಂದ ಮನವಿ ನೀಡುತ್ತ ಬಂದಿದ್ದರೂ ಈವರೆಗೆ ಕ್ರಮವಹಿಸಿಲ್ಲ. ಅಳವಡಿಸಿರುವ ಪೈಪ್‍ಲೈನ್ ಕಾಮಗಾರಿಯೂ ಕಳಪೆಯಾಗಿದೆ. ಟ್ಯಾಂಕ್‍ಗೆ ನೀರು ಹಕುತ್ತಿಲ್ಲ ಎಂದು ಬಗ್ಗನ ಅನಿಲ್‍ಕುಮಾರ್, ಡಾಲಿ ಪ್ರಕಾಶ್, ಜೀವನ್, ಸುಖಾಂತ್,…

Read More

ಸೋಮವಾರಪೇಟೆ ಫೆ.7 : ನೇರುಗಳಲೆ ಗ್ರಾ.ಪಂ ವ್ಯಾಪ್ತಿಯ ತಣ್ಣೀರುಹಳ್ಳ ಗ್ರಾಮದಲ್ಲಿ ಅರಣ್ಯ ಹಕ್ಕು ಸಮಿತಿ ಸಭೆ ನಡೆಯಿತು. ಗ್ರಾಮದ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಶಾಸಕ ಅಪ್ಪಚ್ಚುರಂಜನ್ ಅವರು, ಫಲಾನುಭವಿಗಳು ತಮ್ಮ ಜಾಗಕ್ಕೆ ಸಂಬಂಧಿಸಿದಂತೆ ಈವರೆಗೆ ಪಡೆದುಕೊಂಡಿರುವ ದಾಖಲೆಗಳು, ಆಧಾರ್‍ಕಾರ್ಡ್, ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ನಿಗದಿತ ಅವಧಿಯೊಳಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸಲ್ಲಿಸಬೇಕೆಂದು ಸೂಚಿಸಿದರು. ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಭೇಟಿ ನೀಡುವ ಸಂದರ್ಭ ನಡೆಯುವ ಕಾರ್ಯಕ್ರಮದಲ್ಲಿ ಎಲ್ಲಾ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮಕೈಗೊಳ್ಳಲಾಗಿದೆ. ಅಕ್ರಮ ಸಕ್ರಮ ಸಮಿತಿ, 94 ಸಿ ಮತ್ತು 94 ಸಿ.ಸಿ., ಅರಣ್ಯ ಹಕ್ಕು ಸಮಿತಿ ಯೋಜನೆಯಡಿ ಕ್ಷೇತ್ರ ವ್ಯಾಪ್ತಿಯ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ ಮಾತನಾಡಿ, ಫಲಾನುಭವಿಗಳು ಸಮಿತಿಗೆ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ನಂತರ ಅರಣ್ಯ ಇಲಾಖೆ ಮತ್ತು ಸರ್ವೆ ಇಲಾಖೆಯಿಂದ ಜಂಟಿ ಸರ್ವೆ ನಡೆಸಲಾಗುವುದು.…

Read More

ಗೋಣಿಕೊಪ್ಪಲು  ಫೆ.7  : ಪ್ರಸ್ತುತ ಐಪಿಎಲ್ ಮಾದರಿಯ  ಗೋಣಿಕೊಪ್ಪಲು ಪ್ರೀಮಿಯರ್ ಲೀಗ್ ಕ್ರೀಡಾಕೂಟಕ್ಕೆ ನೂತನ ಅಧ್ಯಕ್ಷರಾಗಿ ಸ್ನೇಕ್ ಸಾಜಿ  ಅವರನ್ನು ಆಯ್ಕೆ ಮಾಡಲಾಗಿದೆ. ಜಿಪಿಎಲ್ ಸಂಚಾಲಕರಾಗಿ ಸಿಂಗಿ ಸತೀಶ್ ಹಾಗೂ ಉಪಾಧ್ಯಕ್ಷರಾಗಿ ಅಣ್ಣಪ್ಪ, ಪ್ರದಾನ ಕಾರ್ಯದರ್ಶಿಯಾಗಿ ಶಮ್ಮು, ಖಜಾಂಚಿಯಾಗಿ ಸ್ವಾಮಿ,  ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಂಜು, ಸಹ ಕಾರ್ಯದರ್ಶಿಯಾಗಿ ಅಫ್ಸಲ್ (ಅಪ್ಪಿ) ನಿರ್ದೇಶಕರುಗಳಾಗಿ ಬಶೀರ್, ಶಾನಿ, ಫಾಝಿಲ್, ರಂಶಾದ್ , ಚಿದು, ಅಕ್ಷಯ್, ಮುನೀರ್, ದೀಪು, ಹಮೀದ್, ಉಮೇಶ್  ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಪಿಎಲ್ ಸ್ಥಾಪಕ ಅಧ್ಯಕ್ಷ  ಶರಫುದ್ದೀನ್ ಹಾಗೂ ನಿಕಟಪೂರ್ವ ಅಧ್ಯಕ್ಷ  ಸಿಂಗಿ ಸತೀಶ್  ತಿಳಿಸಿದ್ದಾರೆ ಮಾರ್ಚ್ ತಿಂಗಳಲ್ಲಿ ಗೋಣಿಕೊಪ್ಪಲು ಸರ್ಕಾರಿ ಶಾಲಾ ಮೈದಾನದಲ್ಲಿ 4 ದಿನಗಳ ಕಾಲ ಕ್ರೀಡಾಕೂಟ ನಡೆಯಲಿದ್ದು,  ದೇಶದ ಐಪಿಎಲ್ ಮಾದರಿಯಲ್ಲಿ 10 ತಂಡಗಳು ಭಾಗವಹಿಸುವುದಾಗಿ  ತಿಳಿಸಿದ್ದಾರೆ.

Read More

ಮಡಿಕೇರಿ ಫೆ.7 : ಸಂಜೀವಿನಿ ಸ್ವ ಸಹಾಯ ಸಂಘಗಳ ಮಹಿಳಾ ಉದ್ಯಮಿಗಳು ತಯಾರಿಸುವ ಉತ್ಪನ್ನಗಳನ್ನು ಮಾರಾಟ ಮಾಡುವ ಸಲುವಾಗಿ ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ನಗರದ ಗಾಂಧಿ ಮೈದಾನದಲ್ಲಿ ಏರ್ಪಡಿಸಲಾದ ‘ಜಿಲ್ಲಾ ಮಟ್ಟದ ವ್ಯಾಪಾರ ಮೇಳಕ್ಕೆ ಚಾಲನೆ ದೊರೆಯಿತು. ನಂತರ ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಸೇರಿದಂತೆ ಅಧಿಕಾರಿಗಳು ಮೇಳದಲ್ಲಿ ಭಾಗಿಯಾದ ಮಳಿಗೆಗಳಿಗೆ ಭೇಟಿ ನೀಡಿ, ಮಹಿಳೆಯರು ತಯಾರಿಸಿದ ವಸ್ತುಗಳನ್ನು ಪರಿಶೀಲಿಸಿ ಶುಭ ಕೋರಿದರು. ಮೇಳದಲ್ಲಿ ಗ್ರಾಮೀಣ ಭಾಗದ ಆಹಾರೋತ್ಪನ್ನಗಳು, ಕರಕುಶಲ ವಸ್ತುಗಳು ಸೇರಿದಂತೆ ಮತ್ತಿತರ ಸಾಮಾಗ್ರಿಗಳು ಗಮನ ಸೆಳೆಯತ್ತಿದೆ.  

Read More

ಮಡಿಕೇರಿ ಫೆ.7 :  ಗೋಣಿಕೊಪ್ಪ ಪಂಚಾಯಿತಿ ವ್ಯಾಪ್ತಿಯ ಕಾಂಕ್ರೀಟಿಕರಣಗೊಂಡ ಸಂತ ಮೈಕಲ್ ಶಾಲೆ ರಸ್ತೆ ಮತ್ತು ಹಳೆ ಪೋಸ್ಟ್ ಆಫೀಸ್ ರಸ್ತೆಗೆ ನೂತನವಾಗಿ ಸ್ವಾಮಿ ವಿವೇಕಾನಂದ ರಸ್ತೆ  ಎಂದು  ನಾಮಕರಣಗೊಳಿಸಿ,  ಶಾಸಕ ಕೆ.ಜಿ.ಬೋಪಯ್ಯ ನೂತನ ರಸ್ತೆಯನ್ನು ಉದ್ಘಾಟಿಸಿದರು. ಈ ಸಂದರ್ಭ  ಗ್ರಾ. ಪಂಚಾಯಿತಿ ಸದಸ್ಯರು ಮತ್ತು ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು.     

Read More

ಮಡಿಕೇರಿ ಫೆ.7 :  ವಿರಾಜಪೇಟೆ ತಾಲ್ಲೂಕು, ಹಾಲುಗುಂದ ಗ್ರಾ.ಪಂ  ವ್ಯಾಪ್ತಿಯಲ್ಲಿ ವಿವಿಧ ಅನುದಾನದಲ್ಲಿ ಕೈಗೊಳ್ಳುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ  ಶಾಸಕ ಕೆ.ಜಿ.ಬೋಪಯ್ಯ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಗ್ರಾ.ಪಂ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.

Read More

ಮಡಿಕೇರಿ ಫೆ.7 : ಮುಂದಿನ ದಿನಗಳಲ್ಲಿ ಕೊಡಗಿನಲ್ಲೂ ನಾಟಕೋತ್ಸವ ಆಯೋಜಿಸುವ ಚಿಂತನೆ ಇದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಹೇಳಿದರು. ಕೊಡಗು ಪ್ರೆಸ್‍ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ವತಿಯಿಂದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ‘ಪರಶುರಾಮ’ ನಾಟಕ ಪ್ರದರ್ಶನ ಸಂದರ್ಭದಲ್ಲಿ ಮಾತನಾಡಿದರು. ಮೈಸೂರು ಮತ್ತಿತರ ಭಾಗಗಳಿಗೆ ಹೋಲಿಸಿದರೆ ಕೊಡಗಿನಲ್ಲಿ ನಾಟಕ ನೋಡುವವರ ಸಂಖ್ಯೆ ಕಡಿಮೆ ಇದೆ. ಇತರ ಜಿಲ್ಲೆಗಳಲ್ಲಿ ನವರಾತ್ರಿ ಸಂದರ್ಭ 9 ದಿನಗಳೂ ನಾಟಕ ಪ್ರದರ್ಶನ ಏರ್ಪಡಿಸಲಾಗುತ್ತದೆ. ಸಾಧ್ಯವಾದರೆ ಮಡಿಕೇರಿಯಲ್ಲೂ ಮುಂದಿನ ದಿನಗಳಲ್ಲಿ ಇಂತಹ ಪ್ರಯೋಗ ಮಾಡುವ ಪ್ರಯತ್ನ ನಡೆಸಲಾಗುವುದು ಎಂದರು. ಪರಶುರಾಮ ನಾಟಕದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಪ್ರದರ್ಶನದ ಬಗ್ಗೆ ಮೆಚ್ಚುಗೆಯ ಮಾತನಾಡಿದರು. ಪುರಾಣದ ಬಗ್ಗೆ ಮತ್ತಷ್ಟು ತಿಳಿದುಕೊಳ್ಳಲು ಇಂತಹ ನಾಟಕಗಳು ಸಹಾಯ ಮಾಡುತ್ತದೆ ಎಂದು ಹೇಳಿದರು. ಕೊಡಗು ಪ್ರೆಸ್‍ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್‍ಕುಟ್ಟಪ್ಪ ಜಿಲ್ಲಾಧಿಕಾರಿ ಚಿಂತನೆಗೆ ಪೂರಕವಾಗಿ ಮಾತನಾಡಿ, ಸ್ಥಳೀಯ, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ನಾಟಕೋತ್ಸವವನ್ನು ಎಲ್ಲರೂ ಸೇರಿ…

Read More

ಭಾರತೀಯ ಅಂಚೆ ಇಲಾಖೆಯಲ್ಲಿ 40,889 ಪೊಸ್ಟ್‌ ಮ್ಯಾನ್‌ (ಗ್ರಾಮೀಣ ಡಾಕ್‌ ಸೇವಕ್) ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಸಲಾಗಿದೆ. ಹುದ್ದೆಗಳ ಸಂಖ್ಯೆ: 40,889 (ದೇಶದಲ್ಲಿ) 3036 (ಕರ್ನಾಟಕದಲ್ಲಿ) ಹುದ್ದೆಗಳು ಮತ್ತು ವೇತನ ಬ್ರ್ಯಾಂಚ್‌ ಪೋಸ್ಟ್‌ಮಾಸ್ಟರ್‌: 12,000-29,380 ರೂ. ಅಸಿಸ್ಟಂಟ್ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್: 10,000-24,470 ರೂ. ಪೋಸ್ಟ್‌ಮ್ಯಾನ್‌: 10,000-24,470 ರೂ. ವಿದ್ಯಾರ್ಹತೆ: ಕನಿಷ್ಠ ಎಸ್‌ಎಸ್‌ಎಲ್‌ಸಿ / 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು. ಆಸಕ್ತರು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ವಯೋಮಿತಿ: ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆ ದಿನಾಂಕಕ್ಕೆ ಸರಿಯಾಗಿ ಅಭ್ಯರ್ಥಿಗೆ ಕನಿಷ್ಠ 18 ವರ್ಷ ತುಂಬಿರಬೇಕು. ಗರಿಷ್ಠ 40 ವರ್ಷ ಮೀರಿರಬಾರದು. ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ. ಆಯ್ಕೆ ಪ್ರಕ್ರಿಯೆ: ಆನ್‌ಲೈನ್‌ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಶೀಲನೆ ಮಾಡಿ, ನಂತರ ಮೆರಿಟ್ ಪಟ್ಟಿ…

Read More

ವಿರಾಜಪೇಟೆ ಫೆ.7 : ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ಕೊಡಗಿನ ಜಾನಪದ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು  ಕಲ್ಲಕೆರೆ ಮಾದೇವಿ ಚಲನಚಿತ್ರ ತಂಡದಿಂದ ಸನ್ಮಾನಿಸಲಾಯಿತು. ಪಿ.ಅಂಡ್ ಜಿ ಕ್ರೀಯೆಷನ್, ಕಲ್ಲಕೇರೆ ಮಾದೇವಿ ಪೌರಾಣಿಕ ಕೊಡವ ಪ್ರಾದೇಶಿಕ ಭಾಷೆಯ ಚಲನಚಿತ್ರ ತಂಡವು ವಿರಾಜಪೇಟೆ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಣಿ ಮಾಚಯ್ಯ ಅವರನ್ನು ಚಲನಚಿತ್ರ ತಂಡ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಚಲನಚಿತ್ರದ ವಿತರಕರು ಹಾಗೂ ಭಾ.ಜ.ಪ ಪ್ರಮುಖರಾದ ಪಟ್ಟಡ ರೀನಾ ಪ್ರಕಾಶ್ ಮಾತನಾಡಿ, ಕೊಡಗು ವಿಶಿಷ್ಟ ಸಂಸ್ಕೃತಿಗೆ ಹೆಸರುವಾಸಿಯಾಗಿದೆ, ಕಲೆ ಸಾಹಿತ್ಯ ಮತ್ತು ಸಂಸ್ಕೃತಿಗೆ ತನ್ನದೇಯಾದ ರೀತಿಯ ಕೊಡುಗೆಯನ್ನು ನೀಡಿದೆ. ದೇಶ ಸೇವೆ, ಕ್ರೀಡೆ ಮತ್ತು ಕಲೆಗೆ ರಾಜ್ಯ ಮತ್ತು ದೇಶಕ್ಕೆ ಅಪೂರ್ವವಾದ ವ್ಯಕ್ತಿಗಳನ್ನು ಕೊಡುಗೆಯಾಗಿ ನೀಡಿದೆ. ಈ ನಿಟ್ಟಿನಲ್ಲಿ ಕೊಡಗಿನ ಮಗಳಾಗಿ ಕೊಡವರ ವಿಶಿಷ್ಟ ಸಂಸ್ಕೃತಿಯ ಭಾಗವಾದ ಉಮ್ಮತ್ತಾಟ್ ನೃತ್ಯ ಕಲೆಯನ್ನು ಜೀವಂತವಾಗಿರಿಸಿ ಸಾವಿರಾರು ಮಂದಿ ವಿದ್ಯಾರ್ಥಿಗಳಿಗೆ ಕಲಿಕೆಯನ್ನು ನೀಡಿ, ವಿಶ್ವಮಟ್ಟದಲ್ಲಿ ಪರಿಚಯಿಸಿದ ಕೀರ್ತಿ ರಾಣಿ…

Read More

ವಿರಾಜಪೇಟೆ ಫೆ.7 : ಕೊಡಗಿನ ವ್ಯಕ್ತಿಗಳು ಮದುವೆಗೆಂದು ತೆರಳಿ ಹಿಂದಿರುಗುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿ ಮೃತಪಟ್ಟ ಏಳು ಮಂದಿಯ ಕುಟುಂಬದ ಸದಸ್ಯರಿಗೆ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಪರಿಹಾರದ ಚೆಕ್ ವಿತರಿಸಿದರು. ಶಾಸಕರ ಭವನದಲ್ಲಿ ಕುಟುಂಬದ ಸದಸ್ಯರಿಗೆ ಪರಿಹಾರ ಚೆಕ್ ವಿತರಿಸಿ ಮಾತನಾಡಿದ ಕೆ.ಜಿ ಬೋಪಯ್ಯ ಮೃತರ ಕುಟುಂಬ ವರ್ಗಗಳು ಬಡ ಕೂಲಿ ಕಾರ್ಮಿಕರಾಗಿದ್ದು, ಆರ್ಥಿಕವಾಗಿ ಹಿಂದುಳಿದಿರುವ ಹಿನ್ನಲೆಯಲ್ಲಿ ಅರ್ಜಿದಾರರ ಕೋರಿಕೆಯ ಮೇರೆಗೆ ಮುಖ್ಯ ಮಂತ್ರಿಗಳ ಪರಿಹಾರ ನಿಧಿಯಿಂದ ಮೇಕೂರು-ಹೊಸ್ಕೇರಿ ಗ್ರಾಮದ ನಿವಾಸಿಗಳಾದ ಹೆಚ್.ಎಸ್.ರಾಜೇಶ್, ಎಂ.ಆರ್.ಅನಿಲ್, ದೀಲಿಪ್ (ಪಿಲೀಫ್) ಮತ್ತು ಜಿ.ಎ.ಬಾಬು ಅವರುಗಳ ಕುಟುಂಬಕ್ಕೆ ತಲ ಎರಡು ಲಕ್ಷ ರೂಗಳಂತೆ ಪರಿಹಾರ ವಿತರಿಸಿರುವುದಾಗಿ ತಿಳಿಸಿದರು. ವಿತರಣೆಗೊಂಡ ಪರಿಹಾರದ ಹಣವನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಮುಂದುವರೆಯಬೇಕು ಎಂದು ಸದಸ್ಯರಿಗೆ ಹೇಳಿದರು. ಈ ಸಂದರ್ಭ ಶಾಸಕರ ಆಪ್ತ ಕಾರ್ಯದರ್ಶಿ ಮಲ್ಲಂಡ ಮಧು ದೇವಯ್ಯ, ತಾಲೂಕು ಕಛೇರಿಯ ಪ್ರಧಾನ ಕಾರ್ಯದರ್ಶಿ ಸಹಯಕರಾದ ಸಿ.ಎಂ.ನಿಶಾನ್, ಪುತ್ತಂ ಪ್ರದೀಪ್ ಪಾಲಿಬೆಟ್ಟ, ಮತ್ತು ಕುಟುಂಬದ ಸದಸ್ಯರು…

Read More