ಲೇಖಕ: admin

ಕಡಂಗ ಫೆ.4 :  ಕರಡ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಬೆಳೆಗಾರರ ಜೀವನಕ್ಕೆ ಆಸರೆಯಾಗಿರುವ ಕಾಫಿ ಫಸಲನ್ನು ತಿಂದು ನಾಶಪಡಿಸುತ್ತಿರುವ ಹಿನ್ನೆಲೆ ರೈತರು ತೀವ್ರ ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಈ ಭಾಗದಲ್ಲಿ ಕಾಡಾನೆಗಳ ಹಾವಳಿ ನಿರಂತರವಾಗಿದ್ದು, ಒಂದಲ್ಲಾ ಒಂದು ಸಮಸ್ಯೆಯಿಂದ ಜನರು ಕಂಗಾಲಾಗಿದ್ದಾರೆ. ಹಲವಾರು ಬಾರಿ ಅರಣ್ಯ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿದರು ಯಾವುದೆ ಪ್ರಯೋಜನವಾಗಲಿಲ್ಲ ಎಂದು ಬೆಳೆಗಾರರು ಬೇಸರ ವ್ಯಕ್ತಪಡಿಸಿದರು. ಸರಕಾರ ಈ ಬಗ್ಗೆ ಗಮನಹರಿಸಿ ಶಾಶ್ವತ ಪರಿಹಾರ ಒದಗಿಸುವಂತೆ ಪಂಚಾಯತ್ ಸದಸ್ಯ ವಿಲಿನ್ ಬೇಪಡಿಯಂಡ ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದಾರೆ. ವರದಿ : ನೌಫಲ್ ಕಡಂಗ     

Read More

ನಾಪೋಕ್ಲು ಫೆ.3 : ಕೊಡವ ಕೌಟುಂಬಿಕ ಹಾಕಿ ಉತ್ಸವ ಐದು ವರ್ಷಗಳ ನಂತರ ಕೊಡವ ಹಾಕಿ ಅಕಾಡೆಮಿ ಸಹಯೋಗದೊಂದಿಗೆ ನಡೆಯುತ್ತಿದೆ. ಅಪ್ಪಚೆಟ್ಟೋಳಂಡ ಕುಟುಂಬ ಈ ಬಾರಿಯ ಹಾಕಿ ನಮ್ಮೆಯನ್ನು ನಡೆಸುತ್ತಿದ್ದು, ನಾಪೋಕ್ಲುವಿನಲ್ಲಿ ಭರದ ಸಿದ್ಧತೆ ನಡೆದಿದೆ. ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಅವರ ನೇತೃತ್ವದಲ್ಲಿ ಇಂದು ಇಲ್ಲಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಗ್ಯಾಲರಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು. ಈಗಾಗಲೇ ಕೊಡವ ಕೌಟುಂಬಿಕ ಹಾಕಿ ಉತ್ಸವ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸ್ಥಾನ ಪಡೆದಿದೆ. ಗಿನ್ನಿಸ್ ದಾಖಲೆಯಾಗಿ ಕೊಡಗಿನ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರಮಟ್ಟದಲ್ಲಿ ಪ್ರಕೀರ್ತಿ ತರುವಂತಾಗಬೇಕು ಎಂದು ಮನು ಮುತ್ತಪ್ಪ ಹೇಳಿದರು. ಗ್ಯಾಲರಿ ನಿರ್ಮಾಣ ದೊಡ್ಡ ಕೆಲಸವಾಗಿದ್ದು, ಎಲ್ಲಾ ಗ್ರಾಮಸ್ಥರು, ಶಾಲೆ ಆಡಳಿತ ಮಂಡಳಿ ಸಹಕಾರ ನೀಡುವಂತೆ ಮನವಿ ಮಾಡಿದರು. ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯನ್ನು ನಾಪೋಕ್ಲುವಿನ ಪಬ್ಲಿಕ್ ಶಾಲೆಯ ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣ ಸೇರಿದಂತೆ ಒಟ್ಟು ಮೂರು ಮೈದಾನಗಳಲ್ಲಿ ಆಯೋಜಿಸಲಾಗುತ್ತಿದೆ. ಕೊಡವ ಹಾಕಿ ಅಕಾಡೆಮಿಯು ಹಾಕಿ…

Read More

ಮಡಿಕೇರಿ ಫೆ.3 : ಮಡಿಕೇರಿ ನಗರಸಭಾ ನಾಮನಿರ್ದೇಶಿತ ಸದಸ್ಯ ಕವನ್ ಕಾವೇರಪ್ಪ ಹಾಗೂ ಹಿಂದೂ ಜಾಗರಣಾ ವೇದಿಕೆಯ ಹಿಂದೂ ವಾಹಿನಿಯ ಜಿಲ್ಲಾ ಸಂಚಾಲಕ್ ವಿನಯ್ ಕುಮಾರ್ ಅವರುಗಳನ್ನು ಗಡಿಪಾರು ಮಾಡುವ ಕುರಿತು ಪ್ರಸ್ತಾಪಿಸಿರುವ ಕ್ರಮವನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಕೇಂದ್ರದಲ್ಲಿ ಪ್ರತಿಭಟನೆ ನಡೆಯಿತು. ವಿಭಾಗ ಸಂಚಾಲಕ್ ಮಹೇಶ್, ಪ್ರಾಂತ ಸಮಿತಿಯ ಜೀವನ್, ಜಿಲ್ಲಾ ಸಮಿತಿಯ ಸುನಿಲ್ ಯೋಗೇಶ್, ಜೋಯಪ್ಪ, ಅನಿಲ್, ಶರತ್  ಸೇರಿದಂತೆ  ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಫೆ.3 : ಕೊಡಗು ಜಿಲ್ಲೆಯ ಸಾರ್ವಜನಿಕರು ಮನೆ ಹಾಗೂ ಅಂಗಡಿ ಮಳಿಗೆಗಳಿಗೆ ಸಿಸಿ ಕ್ಯಾಮೆರಾ, ಡೋರ್ ಅಲಾರಂ, ಸೆನ್ಸಾರ್ ಫ್ರೇಮ್‌ಗಳನ್ನು ಅಳವಡಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮನವಿ ಮಾಡಿದ್ದಾರೆ. ಬೀಗ ಹಾಕಿಕೊಂಡು ಬೇರೆ ಊರುಗಳಿಗೆ ತೆರಳುವ ಸಂದರ್ಭ ಯಾವುದೇ ಬೆಲೆ ಬಾಳುವ ಸೊತ್ತುಗಳು, ನಗದು, ಚಿನ್ನಾಭರಣಗಳನ್ನು ಮನೆ ಹಾಗೂ ಅಂಗಡಿಯಲ್ಲಿಡಬಾರದು. ತೆರಳುವ ಸಂದರ್ಭದಲ್ಲಿ ತಮ್ಮ ಮನೆಗಳಲ್ಲಿ ಪರಿಚಯಸ್ಥರನ್ನು ಉಳಿದುಕೊಳ್ಳುವ ಬಗ್ಗೆ ನೋಡಿಕೊಳ್ಳುವುದು. ಸಾರ್ವಜನಿಕರು ಅಂಗಡಿ ಹಾಗೂ ಮನೆಗೆ ಬೀಗ ಹಾಕಿಕೊಂಡು ಹೋಗುವ ವೇಳೆ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ 112 ಇಂಡಿಯಾ ಎಂಬ ತಂತ್ರಾಂಶವನ್ನು ತಯಾರಿಸಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಅಪರಾಧಗಳನ್ನು ತಡೆಗಟ್ಟುವಲ್ಲಿ ಪೊಲೀಸರೊಂದಿಗೆ ಸಹಕರಿಸಬೇಕೆಂದು ಪೊಲೀಸ್ ವರಿಷ್ಠಾಧಿಕಾರಿ ಕೋರಿಕೊಂಡಿದ್ದಾರೆ.

Read More

ಮಡಿಕೇರಿ ಫೆ.3 : ನಮ್ಮೊಂದಿಗೆ ಇರುವವರ ನೆಮ್ಮದಿ ಮತ್ತು ಶಾಂತಿಯೇ ಸಾಹಿತ್ಯವಾಗಿದ್ದು, ಪರಸ್ಪರ ಸೌಹಾರ್ದತೆಯೇ ಅದರ ಅಂತಿಮ ಗುರಿಯಾಗಿದೆಯೆಂದು ಕುಶಾಲನಗರ ತಾಲ್ಲೂಕಿನ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಹಿರಿಯ ಸಾಹಿತಿ ಬಿ.ಆರ್. ನಾರಾಯಣ ಅವರು ಅಭಿಪ್ರಾಯಿಸಿದ್ದಾರೆ. ನಗರದ ರೈತ ಸಹಕಾರ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿತ ‘ಕನ್ನಡ ಸಾಹಿತ್ಯ ಸಮ್ಮೇಳನ’ದ ಸರ್ವಾಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಿಜ ಜೀವನದ ಎಲ್ಲ ವಿಚಾರಗಳು, ಘಟನೆಗಳು ಸಾಹಿತ್ಯವಾಗಬಲ್ಲುದು. ಹಾಗೆಯೇ ಓದು, ಬರಹ ಅರಿಯದ ನಿಷ್ಕಳಂಕ, ಶ್ರಮ ಜೀವಿಗಳ ಬದುಕೇ ಒಂದು ಸಾಹಿತ್ಯವಾಗಿದೆ. ಏಕೆಂದರೆ ಸಾಹಿತ್ಯವೆನ್ನುವುದು ಜೀವನದ ಪ್ರತಿಬಿಂಬವೆಂದು ನುಡಿದರು. ಕನ್ನಡ ಸಾಹಿತ್ಯ ಭಂಡಾರ ಅತ್ಯಂತ ಪ್ರಬುದ್ಧ ಕೃತಿಗಳಿಂದ ತುಂಬಿ ತುಳುಕುತ್ತಿದೆ. ಹಳೆಗನ್ನಡ ರಚನೆಗಳಿಂದ ತೊಡಗಿ, ನಡುಗನ್ನಡ, ಹೊಸಗನ್ನಡ, ವಚನ ಸಾಹಿತ್ಯ, ದಾಸ ಸಾಹಿತ್ಯ, ನವೋದಯ, ಪ್ರಗತಿಶೀಲ, ದಲಿತ ಬಂಡಾಯದವರೆಗೆ ಕನ್ನಡ ಸಾಹಿತ್ಯ ಹರಿದು ಬಂದಿದ್ದು, ವೈವಿಧ್ಯಮಯವಾದ ಸಾಹಿತ್ಯ ಕೃತಿಗಳು ಮೂಡಿ ಬಂದಿವೆ. ಕನ್ನಡ ಸಾಹಿತ್ಯಕ್ಕೆ ಇಲ್ಲಿಯವರೆಗೆ 8 ಜ್ಞಾನ ಪೀಠ ಪ್ರಶಸ್ತಿಗಳು…

Read More

ನಾಪೋಕ್ಲು ಫೆ.3 : ಕೊಡವ ಕೌಟುಂಬಿಕ ಹಾಕಿ ಉತ್ಸವ ಐದು ವರ್ಷಗಳ ನಂತರ ಕೊಡವ ಹಾಕಿ ಅಕಾಡೆಮಿ ಸಹಯೋಗದೊಂದಿಗೆ ನಡೆಯುತ್ತಿದೆ. ಅಪ್ಪಚೆಟ್ಟೋಳಂಡ ಕುಟುಂಬ ಈ ಬಾರಿಯ ಹಾಕಿ ನಮ್ಮೆಯನ್ನು ನಡೆಸುತ್ತಿದ್ದು, ನಾಪೋಕ್ಲುವಿನಲ್ಲಿ ಭರದ ಸಿದ್ಧತೆ ನಡೆದಿದೆ. ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಅವರ ನೇತೃತ್ವದಲ್ಲಿ ಇಂದು ಇಲ್ಲಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಗ್ಯಾಲರಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು. ಈಗಾಗಲೇ ಕೊಡವ ಕೌಟುಂಬಿಕ ಹಾಕಿ ಉತ್ಸವ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸ್ಥಾನ ಪಡೆದಿದೆ. ಗಿನ್ನಿಸ್ ದಾಖಲೆಯಾಗಿ ಕೊಡಗಿನ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರಮಟ್ಟದಲ್ಲಿ ಪ್ರಕೀರ್ತಿ ತರುವಂತಾಗಬೇಕು ಎಂದು ಮನು ಮುತ್ತಪ್ಪ ಹೇಳಿದರು. ಗ್ಯಾಲರಿ ನಿರ್ಮಾಣ ದೊಡ್ಡ ಕೆಲಸವಾಗಿದ್ದು, ಎಲ್ಲಾ ಗ್ರಾಮಸ್ಥರು, ಶಾಲೆ ಆಡಳಿತ ಮಂಡಳಿ ಸಹಕಾರ ನೀಡುವಂತೆ ಮನವಿ ಮಾಡಿದರು. ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯನ್ನು ನಾಪೋಕ್ಲುವಿನ ಪಬ್ಲಿಕ್ ಶಾಲೆಯ ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣ ಸೇರಿದಂತೆ ಒಟ್ಟು ಮೂರು ಮೈದಾನಗಳಲ್ಲಿ ಆಯೋಜಿಸಲಾಗುತ್ತಿದೆ. ಕೊಡವ ಹಾಕಿ ಅಕಾಡೆಮಿಯು ಹಾಕಿ…

Read More

ಮಡಿಕೇರಿ ಫೆ.3 :  ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ಫೆಬ್ರವರಿ 6 ರವರೆಗೆ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ‘ಫಲಪುಷ್ಪ ಪ್ರದರ್ಶನ’ ಕಣ್ಮನ ಸೆಳೆಯುತ್ತಿದೆ. ಅಲ್ಲಿನ ಪುಷ್ಪಗಳಿಂದ ನಿರ್ಮಾಣವಾಗಿರುವ ಕಲಾಕೃತಿಗಳು ಒಂದಕ್ಕೊಂದು ಗಮನ ಸೆಳೆಯುತ್ತಿವೆ. ನಾಲ್ಕುನಾಡು ಅರಮನೆ ಕಲಾಕೃತಿಯ ಚಿತ್ರದಲ್ಲಿ ರಾಜರು ಕುಳಿತಿರುವುದು, ಹಾಗೆಯೇ ಕೊಡವ ಉಡುಪಿನಲ್ಲಿ ಸ್ವಾಗತಿಸುವ ಚಿತ್ರಗಳು, ಸಿಂಡ್ರೆಲಾ, ಹಾಗೆಯೇ ವೈನ್‍ಕಪ್ ಒಳಗೊಂಡ ಚಿತ್ರಗಳು, ಹೆಸರು ಕಾಳು ಮತ್ತು ಬಿಳಿ ಎಳ್ಳು ಮೂಲಕ ಕ್ರೀಯಾಶೀಲವಾಗಿ ನಿರ್ಮಾಣ ಮಾಡಿರುವ ಸೈನಿಕ, ಹೀಗೆ ರಾಜಸೀಟು ಉದ್ಯಾನವನದಲ್ಲಿ ಮತ್ತೊಮ್ಮೆ ಮೊಗದೊಮ್ಮೆ ನೋಡುವಂತೆ ಜನಮನ ಸೆಳೆಯುತ್ತಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್,ಅಂಬೇಡ್ಕರ್, ವೀರಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ, ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ, ರಾಷ್ಟ್ರಕವಿ ಕುವೆಂಪು, ಸ್ವಾಮಿ ವಿವೇಕಾನಂದ, ನೇತಾಜಿ ಸುಭಾಷ್ ಚಂದ್ರಬೋಸ್, ಭಗತ್‍ಸಿಂಗ್, ಪುನಿತ್ ರಾಜ್‍ಕುಮಾರ್ ಸೇರಿದಂತೆ ವಿವಿಧ ಗಣ್ಯರ ಕಲಾಕೃತಿಯನ್ನು ತರಕಾರಿ/ ಹಣ್ಣುಗಳಲ್ಲಿ ಕೆತ್ತನೆ ಮಾಡಲಾಗಿದೆ. ವಿವಿಧ ಅಲಂಕಾರಿಕ ಗಿಡಗಳಾದ ಬೋನ್ಸ್‍ಯ್ ಗಿಡಗಳ ಪ್ರದರ್ಶನ, ಇಕೆಬಾನೆ…

Read More

ಸೋಮವಾರಪೇಟೆ ಫೆ.3 : ಯುವ ಶಕ್ತಿ ರಾಷ್ಟ್ರದ ಸಂಪತ್ತಾಗಬೇಕಾದರೆ, ಮೌಲ್ಯಾಧಾರಿತ ಶಿಕ್ಷಣ ಸಿಗಬೇಕು ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು. ಯಡೂರು ಗ್ರಾಮದ ಬಿ.ಟಿ.ಚನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲ ಎಚ್.ಎನ್.ರಾಜು ನಿವೃತ್ತಿ ಹೊಂದಿದ ಕಾರಣ ಕಾಲೇಜಿನಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದ ದಿವ್ಯಸಾನಿಧ್ಯ ವಹಿಸಿ ಮಾತನಾಡಿದರು. ಪ್ರಾಧ್ಯಾಪಕರು ಶ್ರದ್ಧೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸಮಯ ಕಳೆಯಲು ಪಾಠ ಮಾಡಬಾರದು. ಗುರುಗಳು ವಿದ್ಯಾದಾನ ಮಾಡಬೇಕು. ಒಂದು ಸರ್ಕಾರಿ ಕಾಲೇಜು ಸಾಧನೆ ಮಾಡಬೇಕಾದರೆ ನಾಲ್ಕು ಚಕ್ರಗಳಾದ ಆಡಳಿತ ಮಂಡಳಿ, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಸಮಾನವಾಗಿ ಚಲಿಸಬೇಕು. ಹೊಂದಾಣಿಕೆ ಹಾಗು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು. ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಂಗ ವಿಭಾಗದ ಕುಲಪತಿ ಡಾ.ಪಿ.ಎಲ್.ಧರ್ಮ ಮಾತನಾಡಿ, ಪ್ರಾಧ್ಯಾಪಕರು, ಉಪನ್ಯಾಸಕರು, ಕಾಲೇಜಿನಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಉಪಯೋಗಿಕೊಂಡು ಗುಣಮಟ್ಟದ ಶಿಕ್ಷಣ ನೀಡುವುದು ಕರ್ತವ್ಯವಾಗಿದೆ. ಪ್ರತಿನಿತ್ಯ ಅಭ್ಯಾಸ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಪಾಠ ಮಾಡಬೇಕು. ವಿದ್ಯಾರ್ಥಿಗಳ ಪ್ರತಿಭೆಗಳನ್ನು ಗುರುತಿಸಿ, ಸಲಹೆಗಳೊಂದಿಗೆ…

Read More

ಮಡಿಕೇರಿ ಫೆ.3 :  ಸುಂಟಿಕೊಪ್ಪ ಗ್ರಾ.ಪಂ ಮತ್ತು ಅಕ್ಷರ ಫೌಂಡೇಶನ್  ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಗ್ರಾ.ಪಂ  ಮಟ್ಟದ ಗಣಿತ ಸ್ಪರ್ಧೆಯ 4ನೇ ತರಗತಿ ವಿಭಾಗದಲ್ಲಿ ಸುಂಟಿಕೊಪ್ಪ ಜಿ.ಎಂ.ಪಿ. ಶಾಲೆಯ ವಿದ್ಯಾರ್ಥಿನಿ ಹಂಸಿಕ ಪ್ರಥಮ ಸ್ಥಾನ ಪಡೆದಿದ್ದಾಳೆ. ಗದ್ದೆಹಳ್ಳ ಜಿ. ಹೆಚ್. ಪಿ. ಶಾಲೆಯ ಜಸ್ಮಿತಾ ದ್ವಿತೀಯ ಮತ್ತು ಸನಾ ತೃತೀ ಯ ಸ್ಥಾನ ಗಳಿಸಿದ್ದಾರೆ. 5ನೇ ತರಗತಿ ವಿಭಾಗದಲ್ಲಿ ಸುಂಟಿಕೊಪ್ಪ ಜಿ. ಎಂ. ಪಿ. ಶಾಲೆಯ ಆಯಿಷಾ ಪ್ರಥಮ, ಪಂಚಮಿ ದ್ವಿತೀಯ ಮತ್ತು ಫಾತಿಮತ್ ಆನ್ ಶಿಫಾ ತೃತೀಯ ಸ್ಥಾನ ಪಡೆದರು. 6ನೇ ತರಗತಿ ವಿಭಾಗದಲ್ಲಿ ಸುಂಟಿಕೊಪ್ಪ ಜಿ. ಎಂ. ಪಿ. ಶಾಲೆಯ ಸುಜೈನ್ ಪ್ರಥಮ, ಮಹಮ್ಮದ್ ಅಜ್ಮಲ್ ದ್ವಿತೀಯ ಮತ್ತು ಗದ್ದೆಹಳ್ಳ ಜಿ. ಹೆಚ್. ಪಿ. ಶಾಲೆಯ ದೀಕ್ಷಿತ್ ತೃತೀಯ ಸ್ಥಾನ ಗಳಿಸಿರುವರು.

Read More

ಮಡಿಕೇರಿ ಫೆ.3 : ಕೊಡಗಿನ ಗಡಿ ಭಾಗದಲ್ಲಿ ಸೂಕ್ತ ತಪಾಸಣಾ ಕೇಂದ್ರಗಳು ಇಲ್ಲದಿರುವುದರಿಂದ ತೆರಿಗೆ ವಂಚನೆ ಮಾಡಿ ನಿಯಮ ಬಾಹಿರವಾಗಿ ಅಂತರ್ ರಾಜ್ಯ ವಾಹನಗಳು ಪ್ರವೇಶ ಮಾಡುತ್ತಿವೆ ಎಂದು ಆರೋಪಿಸಿರುವ ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಅಸೋಸಿಯೇಷನ್, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್ ನ ರಾಜ್ಯ ಸಂಘಟನಾ ಕಾರ್ಯದರ್ಶಿ ವಿನ್ಸೆಂಟ್ ಬಾಬು ಹೊರ ರಾಜ್ಯಗಳ ಟ್ಯಾಕ್ಸಿಗಳು ನಿಯಮ ಉಲ್ಲಂಘಿಸಿ ಸಂಚರಿಸುತ್ತಿರುವುದರಿಂದ ಜಿಲ್ಲೆಯ ಟ್ಯಾಕ್ಸಿ ಮಾಲೀಕರು ಹಾಗೂ ಚಾಲಕರು ನಿರುದ್ಯೋಗದ ಸಮಸ್ಯೆ ಎದುರಿಸುವಂತ್ತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಕೊಡಗಿನ ಪೊನ್ನಂಪೇಟೆ ತಾಲೂಕಿನ ಪೆರುಂಬಾಡಿ ಮತ್ತು ವಿರಾಜಪೇಟೆ ತಾಲೂಕಿನ ಕುಟ್ಟದಲ್ಲಿ ಸಾರಿಗೆ ಇಲಾಖೆಯ ಚೆಕ್‍ಪೋಸ್ಟ್ (ಆರ್.ಟಿ.ಓ) ಗಳಿಲ್ಲ. ಇದೇ ಕಾರಣದಿಂದ ಕೊಡಗು ಜಿಲ್ಲೆಯ ಮೂಲಕ ಕೇರಳ ಮತ್ತು ಇತರ ರಾಜ್ಯಗಳ ವಾಹನಗಳು ಕರ್ನಾಟಕವನ್ನು ಪವೇಶಿಸುತ್ತಿವೆ. ರಾಜ್ಯ ಸರ್ಕಾರಕ್ಕೆ ಕೋಟ್ಯಾಂತರ ರೂ.ಗಳ ತೆರಿಗೆ ಹಣ ನಷ್ಟವಾಗುತ್ತಿದೆ ಎಂದು ಆರೋಪಿಸಿದರು. ಕರ್ನಾಟಕದಿಂದ ಕೇರಳ…

Read More