ಮಡಿಕೇರಿ ಮಾ.2 : ಕರಿಕೆ ಗ್ರಾ.ಪಂ ವ್ಯಾಪ್ತಿಯ ವಿವಿಧೆಡೆ ಬೀಸಿದ ಭಾರೀ ಗಾಳಿಗೆ ಮರ ಹಾಗೂ ವಿದ್ಯುತ್ ಕಂಬಗಳು ಮುರಿದು ಬಿದ್ದಿರುವ ಘಟನೆ ನಡೆದಿದೆ. ಕಳೆದ ಮೂರು ದಿನಗಳಿಂದ ಭಾರೀ ಗಾಳಿ ಬೀಸುತ್ತಿದ್ದು, ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಗ್ರಾಮೀಣ ಭಾಗದ ಜನರು ಹಾಗೂ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ಮರ ಮುರಿದು ವಿದ್ಯುತ್ ಲೈನ್ ಮೇಲೆ ಬಿದಿದ್ದು, ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ. ಇದರಿಂದ ಬಾಳೆಬಳಪು ಕುಂಡತ್ತಿಕಾನ ಕಾಲೋನಿಯ ಏಳು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ತೊಂದರೆಯಾಗಲಿದ್ದು, ಸೆಸ್ಕ್ ಇಲಾಖೆ ಮರಗಳನ್ನು ತೆರವುಗೊಳಿಸಿ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಲೇಖಕ: admin
ಕುಶಾಲನಗರ ಮಾ.2 : ಕುಶಾಲನಗರ ತಾಲ್ಲೂಕು ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದ ಮತಗಟ್ಟೆಗಳಲ್ಲಿ ಎಲೆಕ್ಟ್ರಾನಿಕ್ ಮತ ಯಂತ್ರದಲ್ಲಿ ಮತ ಚಲಾವಣೆಯ ಬಗ್ಗೆ ಅರಿವು ಕಾರ್ಯಾಗಾರ ನಡೆಯಿತು. ಕಳೆದ ಚುನಾವಣಾ ಸಂದರ್ಭದಲ್ಲಿ ಅತಿ ಕಡಿಮೆ ಪ್ರಮಾಣದಲ್ಲಿ ಮತದಾನವಾದ ಮತಕಟ್ಟೆಗಳ ವ್ಯಾಪ್ತಿಯಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮತಯಂತ್ರಗಳ ಜೋಡಣೆ ಮಾಡುವ ಮೂಲಕ ಮುಕ್ತ ಮತದಾನ ಮಾಡುವ ಬಗ್ಗೆ ಅಣಕು ಪ್ರದರ್ಶನವನ್ನು ನಡೆಸಲಾಯಿತು. ಕಾವೇರಿ ನೀರಾವರಿ ನಿಗಮದ ಪುನರ್ವಸತಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಆಗಿರುವ ಮತದಾನ ಕೇಂದ್ರಗಳ ಸೆಕ್ಟರ್ ಅಧಿಕಾರಿ ಐ. ಕೆ ಪುಟ್ಟಸ್ವಾಮಿ ಅವರ ನೇತೃತ್ವದಲ್ಲಿ ಅಧಿಕಾರಿಗಳು ಮತಯಂತ್ರವನ್ನು ಜೋಡಣೆ ಮಾಡಿ ಮತ ಚಲಾವಣೆ ಬಗ್ಗೆ ಅರಿವು ಮೂಡಿಸಿದರು. ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ 106, 144 ,145 146,148 149 ಮತ್ತು 150 ಕ್ರಮ ಸಂಖ್ಯೆಗಳ ಮತಕಟ್ಟೆಗಳಲ್ಲಿ ಮತದಾರರಿಗೆ ಅಣಕು ಪ್ರದರ್ಶನ ನಡೆಸಲಾಯಿತು. ಕೂಡಿಗೆ ವಿಭಾಗದ ಸೆಕ್ಟರ್ ಅಧಿಕಾರಿ ಆಗಿರುವ ಹಾರಂಗಿ ಪುನರ್ವಸತಿ ವಿಭಾಗದ ಕಾರ್ಯಪಾಲಕ ಅಭಿಯಂತರ ಐ. ಕೆ ಪುಟ್ಟಸ್ವಾಮಿ,…
ಮಡಿಕೇರಿ ಮಾ.2 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯನ್ನಾಗಿ ನಗರಸಭಾ ಸದಸ್ಯ ಅಮೀನ್ ಮೊಹಿಸಿನ್ ಅವರನ್ನು ಪಕ್ಷದ ವರಿಷ್ಠರು ಘೋಷಿಸಿದ್ದಾರೆ. ಅಭ್ಯರ್ಥಿಯಾಗಿ ಘೋಷಣೆಯಾದ ನಂತರ ಜಿಲ್ಲೆಗೆ ಆಗಮಿಸುವ ಸಂದರ್ಭ ಕುಶಾಲನಗರದಲ್ಲಿ ಎಸ್ ಡಿಪಿಐ ಕಾರ್ಯಕರ್ತರು ಅಮೀನ್ ಮೊಹಿಸಿನ್ ಅವರನ್ನು ಸಂಭ್ರಮದಿಂದ ಬರಮಾಡಿಕೊಂಡರು. ಪಕ್ಷದ ಪರ ಘೋಷಣೆಗಳನ್ನು ಕೂಗಿದರು. ಮಡಿಕೇರಿ ಕ್ಷೇತ್ರದಲ್ಲಿ ಅಮೀನ್ ಮೊಹಿಸಿನ್ ಸ್ಪರ್ಧೆ ಕುತೂಹಲ ಮೂಡಿಸಿದೆ.
ಮಡಿಕೇರಿ ಮಾ.2 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ಶ್ರೀ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮವು ಮಾರ್ಚ್, 03 ರಂದು ಬೆಳಗ್ಗೆ 11 ಗಂಟೆಗೆ ನಗರದ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ನಡೆಯಲಿದೆ. ಶಾಲಾ ಶಿಕ್ಷಣ, ಸಾಕ್ಷರತೆ, ಸಕಾಲ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಸುಜಾಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ವೆಂಕಟ ನಾಯಕ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇತರರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಮಾ.2 : ರೆಡ್‍ಕ್ರಾಸ್‍ನ ನೂತನ ಆರೋಗ್ಯ ತಪಾಸಣಾ ಮೊಬೈಲ್ ಘಟಕದ ಪ್ರಯೋಜನವು ಜಿಲ್ಲೆಯ ಗ್ರಾಮಾಂತರ ಪ್ರದೇಶಗಳ ಜನತೆಗೆ ಹೆಚ್ಚಿನ ರೀತಿಯಲ್ಲಿ ದೊರಕುವಂತಾಗಲಿ ಎಂದು ಶಾಸಕರಾದ ಕೆ.ಜಿ.ಬೋಪಯ್ಯ ಅವರು ಸಲಹೆ ನೀಡಿದ್ದಾರೆ. ಭಾರತೀಯ ರೆಡ್‍ಕ್ರಾಸ್‍ನ ಕೊಡಗು ಘಟಕವು 75 ಲಕ್ಷ ರು. ವೆಚ್ಚದಲ್ಲಿ ಆರೋಗ್ಯ ತಪಾಸಣೆ, ಚಿಕಿತ್ಸೆಗೆ ಮೀಸಲಿರಿಸಿದ ಸುಸಜ್ಜಿತ ಮೊಬೈಲ್ ಚಿಕಿತ್ಸಾ ಘಟಕಕ್ಕೆ ನಗರದ ಗಾಂಧಿ ಮಂಟಪದ ಮುಂದೆ ಆಯೋಜಿತ ಸರಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ರೆಡ್‍ಕ್ರಾಸ್ ಕೊಡಗು ಜಿಲ್ಲೆಗೆ ನೀಡಿರುವ ಸುಸಜ್ಜಿತ ಆರೋಗ್ಯ ತಪಾಸಣಾ ಮೊಬೈಲ್ ಘಟಕವು ಆರೋಗ್ಯ ಇಲಾಖೆಗೆ ಮಹತ್ವದ ಕೊಡುಗೆಯಾಗಿದ್ದು, ಇದರ ಪ್ರಯೋಜನ ವಿವಿಧ ಇಲಾಖೆಗಳ ಸಹಕಾರದಲ್ಲಿ ಜನತೆಗೆ ದೊರಕುವಂತಾಗಬೇಕು ಎಂದು ಹೇಳಿದರು. ಅಂತರರಾಷ್ಟ್ರೀಯ ಸೇವಾ ಸಂಸ್ಥೆಯಾಗಿರುವ ರೆಡ್‍ಕ್ರಾಸ್ ಕೊಡಗನ್ನು ಗುರುತಿಸಿ ಮೊಬೈಲ್ ಘಟಕವನ್ನು ನೀಡಿದ್ದು ಪ್ರಶಂಸನೀಯ ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಮಾತನಾಡಿ, ವೈದ್ಯಕೀಯ ಕಾಲೇಜಿನ ವೈದ್ಯರ ಸಹಯೋಗದಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯು ಔಷಧಿ ಮತ್ತು ತಾಂತ್ರಿಕ…
ಸುಂಟಿಕೊಪ್ಪ ಮಾ.2: ಗದ್ದೆಹಳ್ಳ ನಾರ್ಗಾಣೆ ಗ್ರಾಮದ ಶ್ರೀದೇವಿ ಬಡಾವಣೆ ನಿವಾಸಿ ಪತ್ರಕರ್ತ ರಾಜು ರೈ ಅವರ ಅತ್ತೆ ಪದ್ಮಾವತಿ ( 85) ಎಂಬವರು ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಸುಂಟಿಕೊಪ್ಪ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ಮೃತರು ಇರ್ವರು ಪುತ್ರಿಯರನ್ನು ಆಗಲಿದ್ದಾರೆ.
ಮಡಿಕೇರಿ ಮಾ.2 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮವು ಮಾರ್ಚ್, 03 ರಂದು ಬೆಳಗ್ಗೆ 11 ಗಂಟೆಗೆ ನಗರದ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ನಡೆಯಲಿದೆ. ಶಾಲಾ ಶಿಕ್ಷಣ, ಸಾಕ್ಷರತೆ, ಸಕಾಲ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಸುಜಾಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಕೊಡಗು ಜಿ.ಪಂ. ಮಾಜಿ ಅಧ್ಯಕ್ಷರು ಹಗೂ ಜಿಲ್ಲಾ ಮರಾಠ ಸಮಾಜದ ಅಧ್ಯಕ್ಷರಾದ ಎಸ್.ಎನ್.ರಾಜಾರಾವ್, ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ವೆಂಕಟ ನಾಯಕ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇತರರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಮಾ.2 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭೋದಕ ಆಸ್ಪತ್ರೆ ಹಾಗೂ ಮೈಸೂರು ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಮಡಿಕೇರಿ ಬಾಹ್ಯ ಸೇವಾ ಕೇಂದ್ರ, ಇವರ ಸಹಯೋಗದಲ್ಲಿ ರಾಷ್ಟ್ರೀಯ ಶ್ರವಣದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮದಡಿಯಲ್ಲಿ ಮಾರ್ಚ್, 03 ರಂದು ವಿಶ್ವ ಶ್ರವಣ ದಿನಾಚರಣೆ ನಡೆಯಲಿದೆ. ಮಾರ್ಚ್, 03 ರಂದು ಬೆಳಗ್ಗೆ 9 ಗಂಟೆಗೆ ವಿಶ್ವ ಶ್ರವಣ ದಿನ/ ರಾಷ್ಟ್ರೀಯ ಶ್ರವಣ ಜಾಗೃತಿ ಅಭಿಯಾನದ ಬಗ್ಗೆ ಬೀದಿ ನಾಟಕ, ಬೆಳಗ್ಗೆ 9.30 ಗಂಟೆಗೆ ಜಾಥ, ನಂತರ ಬೆಳಗ್ಗೆ 10.30 ಗಂಟೆಗೆ ಸಭಾ ಕಾರ್ಯಕ್ರಮವು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಭೋದಕ ಆಸ್ಪತ್ರೆಯ ಉಪನ್ಯಾಸ ಕೊಠಡಿಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ.
ಮಡಿಕೇರಿ ಮಾ.2 : ವಿರಾಜಪೇಟೆ ವಕೀಲರ ಸಂಘದ ವತಿಯಿಂದ ನ್ಯಾಯಮೂರ್ತಿ ದಿವಂಗತ ಎಂ.ಪಿ.ಚಿಣ್ಣಪ್ಪ ಅವರ ಸ್ಮರಣಾರ್ಥ ಉಪನ್ಯಾಸ ಕಾರ್ಯಕ್ರಮವು ಮಾ.4 ರಂದು ಸಂಜೆ 6 ಗಂಟೆಗೆ ವಿರಾಜಪೇಟೆ ಚಿಕ್ಕಪೇಟೆಯ ತ್ರಿವೇಣಿ ಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಸರ್ವೋಚ್ಛ ನಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರು ನ್ಯಾಯ ವಿತರಣೆಯಲ್ಲಿ ನ್ಯಾಯಾಧೀಶರು ಮತ್ತು ನ್ಯಾಯಾವಾದಿಗಳ ಪಾತ್ರ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಲೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯ ಹಾಗೂ ಕೊಡಗು ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ವಿ.ಶ್ರೀಶಾನಂದ, ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎಂ.ಜಿ.ಶುಕುರೆ ಕಮಲ್, ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ, ಕರ್ನಾಟಕ ಉಚ್ಛ ನ್ಯಾಯಾಲಯದ ಮಹಾ ವಿಲೇಖನಾಧಿಕಾರಿ ಕೆ.ಎಸ್.ಭರತ್‍ಕುಮಾರ್, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎಂ.ಭೃಂಗೇಶ್, ನ್ಯಾಯಮೂರ್ತಿ ದಿವಂಗತ ಎಂ.ಪಿ.ಚಿಣ್ಣಪ್ಪ ಅವರ ಧರ್ಮಪತ್ನಿ ಕಾವೇರಿ ಚಿಣ್ಣಪ್ಪ, ವಕೀಲರಾದ ನಮೃತಾ ಕೋಲಾರ, ಎಂ.ಚಿಂತನ್ ಚಿಣ್ಣಪ್ಪ, ಎಂ.ಧ್ಯಾನ್ ಚಿಣ್ಣಪ್ಪ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ವಿರಾಜಪೇಟೆ ವಕೀಲರ…
ವಿರಾಜಪೇಟೆ ಮಾ.2 : ವಿದ್ಯಾರ್ಥಿಗಳು ಉದ್ಯೋಗದ ದೃಷ್ಟಿಯಿಂದ ಕೌಶಲ್ಯವನ್ನು ಮೈಗೂಡಿಸಿಕೊಳ್ಳಬೇಕಾದ ಅನಿವಾರ್ಯತೆಯಿದೆ ಎಂದು ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ಮಾಳೇಟಿರ ತೃಪ್ತಿ ಬೋಪಣ್ಣ ಅಭಿಪ್ರಾಯಪಟ್ಟರು. ಕಾಲೇಜಿನ ಐಕ್ಯೂಎಸಿ ಘಟಕ, ಉದ್ಯೋಗ ಘಟಕ ಹಾಗೂ ಮಡಿಕೇರಿಯ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ಘಟಕದ ಅಂಗಸಂಸ್ಥೆಯಾದ ಅತಿಥಿ ವೃಕ್ಷ ಶಿಕ್ಷದ ಸಹಯೋಗದಲ್ಲಿ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಉದ್ಯೋಗ ಹಾಗೂ ಕೌಶಲ್ಯ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗ ಪಡೆಯುವುದು ಸವಾಲಾಗಿದ್ದು ವಿದ್ಯಾರ್ಥಿಗಳು ಸಕಲ ರೀತಿಯಲ್ಲಿ ಸಜ್ಜಾಗಿರಬೇಕು. ಮಾತ್ರವಲ್ಲದೆ ಕೌಶಲ್ಯವನ್ನು ಹೊಂದಿರಬೇಕೆಂದು ತಿಳಿಸಿದರು. ವೃಕ್ಷ ಶಿಕ್ಷದ ಮುಖ್ಯಸ್ಥರಾದ ಶಾಲಿನಿ ಚಾಲ್ರ್ಸ್ ಮಾತನಾಡಿ, ವಿದ್ಯಾರ್ಥಿಗಳಿಗೆ ಉದ್ಯೋಗ ಪಡೆಯಲು ಇರುವ ಕೌಶಲ್ಯಗಳು ಮತ್ತು ವ್ಯಕ್ತಿತ್ವ ವಿಕಸನದ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ತಯರಾಗುವುದು ಹೇಗೆ ಮತ್ತು ಯಾವ ತರಬೇತಿಯನ್ನು ಪಡೆಯಬೇಕು, ಸಂವಹನ ಕೌಶಲ್ಯದ ಬಗ್ಗೆ ಉದಾಹರಣೆ ಸಮೇತ ವಿವರಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ, ಉದ್ಯೋಗ…






