ಲೇಖಕ: admin

ಮಡಿಕೇರಿ ಮಾ.2 : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಂಯುಕ್ತಾಶ್ರಯದಲ್ಲಿ ಆದಾಯ ತೆರಿಗೆ, ಜಿ.ಎಸ್.ಟಿ., ಮತ್ತು ಸಹಕಾರ ಸಂಘಗಳ ಚುನಾವಣೆ ಕುರಿತು ಜಿಲ್ಲೆಯ ಸಹಕಾರ ಸಂಘಗಳ ಅಧ್ಯಕ್ಷರುಗಳಿಗೆ ರಾಜ್ಯಮಟ್ಟದ ವಿಶೇಷ ಕಾರ್ಯಕ್ರಮ ನಡೆಯಿತು. ನಗರದ ಹೊಟೇಲ್ ಮಯೂರ ವ್ಯಾಲಿ ವ್ಯೂ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಹಿರಿಯ ಸಹಕಾರಿಗಳು ಹಾಗೂ ಪದ್ಮಶ್ರೀ ಪ್ರಶಸ್ತಿ ಭಾಜನರಾದ ರಾಣಿ ಮಾಚಯ್ಯ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಹಕಾರ ಕ್ಷೇತ್ರವು ಎಲ್ಲಾ ವರ್ಗದವರನ್ನು ಮುಕ್ತವಾಗಿ ಆಹ್ವಾನಿಸುತ್ತಿದ್ದು, ತಾನು ಸಹ ಕೋಟೆ ಮಹಿಳಾ ಸಹಕಾರ ಸಂಘ, ಮಹಿಳಾ ಪಟ್ಟಣ ಸಹಕಾರ ಬ್ಯಾಂಕ್ ಹಾಗೂ ಇನ್ನಿತರೆ ಸಹಕಾರ ಸಂಘದಲ್ಲಿ ಅಧ್ಯಕ್ಷೆಯಾಗಿ, ನಿರ್ದೇಶಕಿಯಾಗಿ ಕಾರ್ಯನಿರ್ವಹಿಸಿದ್ದೇನೆ. ಆ ಮೂಲಕ ಸಮಾಜ ಸೇವೆಯಲ್ಲಿ ಸಹ ತೊಡಗಿಸಿಕೊಳ್ಳಲು ಸಹಕಾರಿಯಾಯಿತೆಂದು ತಿಳಿಸಿದರು. ತಾನು ಸಲ್ಲಿಸಿದ ಸೇವೆಗಾಗಿ ಭಾರತ ಸರ್ಕಾರವು ‘ಪದ್ಮಶ್ರೀ’ ಪ್ರಶಸ್ತಿಗೆ ಗುರುತಿಸಿರುವುದು ತನಗೆ ಹಾಗೂ ಪರೋಕ್ಷವಾಗಿ ಬೆಂಬಲವಾಗಿ ನಿಂತವರಿಗೂ, ವಿದ್ಯಾರ್ಥಿಗಳಿಗೂ, ಪೋಷಕರಿಗೆ ಎಲ್ಲರಿಗೂ ಸಂದ ಗೌರವವೆಂದು ಹೇಳಿದರು. ಸಣ್ಣ ಜಿಲ್ಲೆಯಾದ…

Read More

ಮಡಿಕೇರಿ ಮಾ.2 : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ಬಯಲಿಗೆಳೆದು ತನಿಖೆ ನಡೆಸಲಾಗುವುದು ಎಂದು ರಾಷ್ಟ್ರೀಯ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ರಣ್‍ದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ. ಮಡಿಕೇರಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ “ಕಾಂಗ್ರೆಸ್ ಗ್ಯಾರಂಟಿ ಕಾರ್ಡ್” ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಬಿಜೆಪಿ ಸರ್ಕಾರ ಕರ್ನಾಟಕವನ್ನು ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು. ದೇಶವ್ಯಾಪಿ ರಾಜ್ಯ ಬಿಜೆಪಿ ಸರ್ಕಾರ ಶೇ.40 ಕಮಿಷನ್ ಸರ್ಕಾರ ಎನ್ನುವ ಅಪಖ್ಯಾತಿಗೆ ಪಾತ್ರವಾಗಿದೆ. ರಾಜ್ಯ ಗುತ್ತಿಗೆದಾರರ ಸಂಘ ಶೇ.40 ಕಮಿಷನ್ ಕುರಿತು ಖುದ್ದು ಪ್ರಧಾನಮಂತ್ರಿಗಳಿಗೆ ಪತ್ರ ಬರೆದು ದೂರಿಕೊಂಡಿದ್ದಾರೆ. ಈ ಆರೋಪ ಕೇಳಿ ಬಂದ ನಂತರ ಎಂಟು ಬಾರಿ ಪ್ರಧಾನಮಂತ್ರಿಗಳು ಕರ್ನಾಟಕಕ್ಕೆ ಬಂದು ಹೋಗಿದ್ದಾರೆ. ಆದರೆ ಎಲ್ಲೂ ಭ್ರಷ್ಟ ಸರ್ಕಾರದ ವಿರುದ್ಧ ಧ್ವನಿ ಎತ್ತಿಲ್ಲ. ರಾಜ್ಯದ ಗುತ್ತಿಗೆದಾರರು ಮಾತ್ರವಲ್ಲದೆ ವಿವಿಧ ಕ್ಷೇತ್ರಗಳ ಪ್ರಮುಖರು ಕೂಡ ಕಮಿಷನ್ ಸರ್ಕಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಖುದ್ದು ಮಠಾಧೀಶರುಗಳೇ ನಮ್ಮ…

Read More

ಮಡಿಕೇರಿ ಮಾ.2 : ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಟಿ.ಶೆಟ್ಟಿಗೇರಿ ಗ್ರಾಮದ ಮಹಿಳೆ ಕಾಣೆಯಾಗಿದ್ದಾರೆ. ಟಿ.ಶೆಟ್ಟಿಗೇರಿ ಗ್ರಾಮದ ಜೇನುಕುರುಬರ ಮಹೇಶ್ ಎಂಬವರ ಪತ್ನಿ ಸೌಮ್ಯ (26) ಎಂಬಾಕೆ ಮಗುವಿನ ಆರೈಕೆಯ ಸಲುವಾಗಿ ತಾಯಿಯ ಮನೆಗೆ ಬಂದಿದ್ದರು. ಫೆ.25 ರಂದು ಮಧ್ಯಾಹ್ನ 2 ಗಂಟೆಗೆ ಅವಧಿಯಲ್ಲಿ ಒಂದು ತಿಂಗಳ ಗಂಡು ಮಗುವನ್ನು ಬಿಟ್ಟು ಮನೆಯಿಂದ ಕಾಣೆಯಾದ್ದಾರೆ. ಇದುವರೆಗೂ ಪತ್ತೆಯಾಗಿಲ್ಲ ಎಂದು ಪತಿ ಮಹೇಶ್ ಅವರು ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕನ್ನಡ ಭಾಷೆ ಮಾತನಾಡುವ ಮಹಿಳೆ ಅಂದಾಜು 5.2 ಅಡಿ ಎತ್ತರ ಇದ್ದು, ಬಿಳಿ ಬಣ್ಣ, ಕೋಲು ಮುಖ, ತೆಳ್ಳನೆಯ ಮೈಕಟ್ಟನ್ನು ಹೊಂದಿದ್ದಾರೆ, ಮಹಿಳೆಯನ್ನು ಕಂಡವರು ಶ್ರೀಮಂಗಲ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ಪ್ರಕಟಣೆಯಲ್ಲಿ ಕೋರಿದ್ದಾರೆ. ದೂರವಣಿ ಸಂಖ್ಯೆ 08274-246246 ಅಥವಾ 9480804960 ಸಂಪರ್ಕಿಸುವಂತೆ ಕೋರಿದೆ.

Read More

ಮಡಿಕೇರಿ ಮಾ.2 : ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದ ಸರ್ವೆ ನಂ.78/5ರಲ್ಲಿ 0.35 ಎಕರೆ (35 ಸೆಂಟ್) ಜಮೀನನ್ನು ನಾಲ್ಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡ ನಿರ್ಮಾಣದ ಉದ್ದೇಶಕ್ಕಾಗಿ ಮಂಜೂರು ಮಾಡಲಾಗಿದೆ.

Read More

ಮಡಿಕೇರಿ ಮಾ.2 : ಕಳೆದ ಒಂಭತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರ ಡೀಸೆಲ್, ಪೆಟ್ರೋಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು 47 ಬಾರಿ ಹೆಚ್ಚಿಸುವ ಮೂಲಕ ದೇಶದ ಜನರಿಗೆ ಅನ್ಯಾಯ ಮಾಡಿದೆ ಎಂದು ಕೆಪಿಸಿಸಿ ವಕ್ತಾರರು ಹಾಗೂ ಜಿಲ್ಲಾ ಉಸ್ತುವಾರಿ ಎಂ. ಲಕ್ಷ್ಮಣ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಅಡುಗೆ ಅನಿಲದ ದರವನ್ನು ಏಕಾಏಕಿ ಹೆಚ್ಚಳ ಮಾಡಿರುವ ಕ್ರಮವನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ಕಚ್ಚಾ ತೈಲದ ದರ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್‍ಗೆ 77 ಡಾಲರ್ ಇದೆ. ಇದರಿಂದ ಅನಿಲ ಉತ್ಪಾದನೆಗೆ ಕೇವಲ 450 ರೂ. ತಗುಲುತ್ತದೆ. ಆದರೆ, ಇಂದು ಪ್ರತಿ ಅಡುಗೆ ಸಿಲಿಂಡರ್‍ನಿಂದ ಹೆಚ್ಚುವರಿ 750 ರೂ.ಗಳನ್ನು ಮತ್ತು ಕಮರ್ಷಿಯಲ್ ಸಿಲಿಂಡರ್‍ನಿಂದ 1250 ರೂ. ಲಾಭವನ್ನು ಕೇಂದ್ರ ಪಡೆಯುತ್ತಿದೆ ಎಂದು ಟೀಕಿಸಿದರು. ಉತ್ಪಾದನಾ ವೆಚ್ಚಕ್ಕಿಂತ ಅತೀ ಹೆಚ್ಚಿನ ದರವನ್ನು ಪೆಟ್ರೋಲ್ ಮತ್ತು ಡೀಸೆಲ್ ಗೆ ನಿಗದಿ ಮಾಡುವ ಮೂಲಕ ಕೇಂದ್ರ ಜನ ಸಾಮಾನ್ಯರನ್ನು ಲೂಟಿ…

Read More

ಮಡಿಕೇರಿ ಮಾ.2 : ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಮತ್ತು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ನೂತನ ತಾಲ್ಲೂಕು ಕೇಂದ್ರ ಕುಶಾಲನಗರದಲ್ಲಿ ಮಾ.4 ರಂದು 12.50 ಕೋಟಿ ರೂ. ವೆಚ್ಚದ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಲಿದೆ ಎಂದು ಕುಶಾಲನಗರ ವಕೀಲರ ಸಂಘದ ಅಧ್ಯಕ್ಷ ಆರ್.ಕೆ.ನಾಗೇಂದ್ರ ಅವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಂದು ಬೆಳಗ್ಗೆ 11.30 ಗಂಟೆಗೆ ಕುಶಾಲನಗರದ ಪ್ರವಾಸಿ ಮಂದಿರದ ಬಳಿಯ 1.27 ಏಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿರುವ ನ್ಯಾಯಾಲಯ ಕಟ್ಟಡ ಸಂಕೀರ್ಣಕ್ಕೆ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಶಿಲಾನ್ಯಾಸವನ್ನು ನೆರವೇರಿಸಲಿದ್ದಾರೆ. ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಪ್ರಸನ್ನ ಬಿ.ವರಾಳೆÉ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು. ವಿಶೇಷ ಆಹ್ವಾನಿತರಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಕೊಡಗಿನ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ವಿ. ಶ್ರೀಶಾನಂದ, ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎಂ.ಜಿ.ಶುಕುರೆ ಕಮಲ್, ಸಿ.ಎಂ. ಪೂಣಚ್ಚ, ರಾಜ್ಯ ಉಚ್ಚ ನ್ಯಾಯಾಲಯದ ಮಹಾ ವಿಲೇಖನಾಧಿಕಾರಿಗಳಾದ ಕೆ.ಎಸ್. ಭರತ್ ಕುಮಾರ್,…

Read More

ಮಡಿಕೇರಿ ಮಾ.2 :  ಮಡಿಕೇರಿ ತಾಲ್ಲೂಕು ಕರ್ಣಂಗೇರಿ ಗ್ರಾಮದ ಸರ್ವೆ ನಂ.471/1 ರಲ್ಲಿ 0.12 ಎಕರೆ ಮತ್ತು ಸರ್ವೆ ನಂ.471/4 ರಲ್ಲಿ 0.20 ಎಕರೆ ಜಾಗವನ್ನು ಸರ್ವೆಯಿಂದ ಗುರುತಿಸಿದ ನಕಾಶೆಯಂತೆ ಗಾಂಧೀಜಿ ಚಿತಾಭಸ್ಮವನ್ನಿಟ್ಟು ಶಾಶ್ವತವಾದ ಸ್ಮಾರಕ ನಿರ್ಮಿಸಲು ರೂ.50 ಲಕ್ಷ ವನ್ನು ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಮೂಲಕ ಜಿಲ್ಲಾಧಿಕಾರಿ ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಬಿಡುಗಡೆ ಮಾಡಲು ಮಂಜೂರಾತಿ ನೀಡಿ ಆದೇಶ ಹೊರಡಿಸಲಾಗಿದೆ. ಶಾಸಕರಾದ ಕೆ.ಜಿ.ಬೋಪಯ್ಯ ಅವರ ಪ್ರಯತ್ನದಿಂದ ರೂ.50 ಲಕ್ಷ ಅನುದಾನ ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Read More

ಮಡಿಕೇರಿ ಮಾ.2 : ವಿಧಾನಸಭಾ ಚುನಾವಣೆಯ ಹಿನ್ನೆಲೆ ಕೆಪಿಸಿಸಿ ಘೋಷಿಸಿರುವ ವಿವಿಧ ಭರವಸೆಗಳ “ಕಾಂಗ್ರೆಸ್ ಗ್ಯಾರಂಟಿ ಕಾರ್ಡ್” ನ್ನು ಕರ್ನಾಟಕ ರಾಜ್ಯ ಉಸ್ತುವಾರಿ ರಣ್‍ದೀಪ್ ಸಿಂಗ್ ಸುರ್ಜೇವಾಲ ಬಿಡುಗಡೆ ಮಾಡಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್, ಎಐಸಿಸಿ ಕಾರ್ಯದರ್ಶಿ, ಕೊಡಗು ಉಸ್ತುವಾರಿ ಹಾಗೂ ಕೇರಳ ಶಾಸಕ ರೋಜಿ ಜಾನ್ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮುಖಂಡರಾದ ಬಿ.ಎ ಜೀವಿಜಯ, ಎ.ಎಸ್ ಪೆÇನ್ನಣ್ಣ, ಡಾ.ಮಂಥರ್ ಗೌಡ, ಹರಪಳ್ಳಿ ರವೀಂದ್ರ , ಹೆಚ್.ಎಸ್ ಚಂದ್ರಮೌಳಿ, ವೀಣಾ ಅಚ್ಚಯ್ಯ, ಕೆ.ಪಿ ಚಂದ್ರಕಲಾ, ಟಿ.ಪಿ ರಮೇಶ್ ಮತ್ತಿತರ ಪ್ರಮುಖರು ಹಾಜರಿದ್ದರು. ಕಾಂಗ್ರೆಸ್ ನ ಮೊದಲ ಗ್ಯಾರಂಟಿ ಕಾರ್ಡ್ “ಗೃಹಜ್ಯೋತಿ” ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ಉಚಿತ ಪೂರೈಕೆ, 2ನೇ ಗ್ಯಾರಂಟಿ ಪ್ರತಿ ಮನೆಯೊಡತಿಗೆ 2 ಸಾವಿರ ರೂ. ಪ್ರೋತ್ಸಾಹ ಧನ ನೀಡಲು “ಗೃಹಲಕ್ಷ್ಮಿ” ಯೋಜನೆ ಜಾರಿ ಮತ್ತು 3ನೇ ಗ್ಯಾರಂಟಿಯಾಗಿ ಅನ್ನಭಾಗ್ಯ…

Read More

ಮಡಿಕೇರಿ ಮಾ.2 : ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ಕುಶಾಲನಗರದಲ್ಲಿ ಔಷಧೀಯ ಸಸ್ಯಗಳ ಉದ್ಯಾನ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಸಧ್ಯದಲ್ಲಿಯೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ಎನ್.ಎಂ.ರವಿ ಕಾಳಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕುಶಾಲನಗರದ ಹಾರಂಗಿ ಜಲಾಶಯದ ಬಳಿ ಮತ್ತು ಮಡಿಕೇರಿಯ ಅರಣ್ಯ ಭವನದ ಬಳಿ ಉದ್ಯಾನ ನಿರ್ಮಾಣವಾಗಲಿದೆ ಎಂದರು. ಕೊಡಗಿನಲ್ಲಿರುವ ಅಪರೂಪದ ಔಷಧೀಯ ಸಸ್ಯಗಳು ಮತ್ತು ರಾಜ್ಯದ ವಿವಿಧೆಡೆಗಳಿಂದ ಔಷಧೀಯ ಗುಣವುಳ್ಳ ಸಸ್ಯಗಳನ್ನು ತಂದು ನೆಡಲಾಗುವುದು. ಅಲ್ಲದೆ ಅವುಗಳ ಬಗ್ಗೆ ಮಾಹಿತಿ ನೀಡುವ ಕಾರ್ಯ ಮಂಡಳಿಯಿಂದ ಆಗಲಿದೆ. ಉದ್ದೇಶಿತ ಯೋಜನೆಗೆ ಸಧ್ಯದಲ್ಲಿಯೇ ಭೂಮಿಪೂಜೆ ನೆರವೇರಿಸಲಾಗುವುದು ಎಂದು ತಿಳಿಸಿದರು. ಕೊಡಗು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಪ್ರವಾಸಿತಾಣಗಳನ್ನು ವೀಕ್ಷಿಸುವುದರೊಂದಿಗೆ ಔಷಧೀಯ ಸಸ್ಯಗಳ ಉದ್ಯಾನಕ್ಕೂ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಗೆ ಸಂಚರಿಸಿ ಅಲ್ಲಿನ ಜೀವ ವೈವಿಧ್ಯದ ಸ್ಥಿತಿಗತಿಗಳ ಬಗ್ಗೆ ಅವಲೋಕನ ಮಾಡಿದ್ದೇನೆ. ಕೊಡಗು ಜಿಲ್ಲೆಯ ಪರಿಸರದಲ್ಲಿ ಹಲವು ಔಷಧೀಯ ಸಸ್ಯಗಳು…

Read More

ನಾಪೋಕ್ಲು ಮಾ.1 : ಪೆರಾಜೆ ಗ್ರಾಮದ ಕುಂಬಳಚೇರಿಯ ಶ್ರೀ ವೈನಾಟ್ ಕುಲವನ್ ದೈವಸ್ಥಾನದ ಶ್ರೀ ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವವು  ಮಾ.3 ರಿಂದ ಮಾ.5ರ ವರೆಗೆ ಜರುಗಲಿದೆ. ಸುಮಾರು 300 ವರ್ಷಗಳ ನಂತರ 50ಲಕ್ಷ ರೂ.ವೆಚ್ಚದಲ್ಲಿ ಅದ್ಧೂರಿ ಮಹೋತ್ಸವ ಜರುಗಲಿದ್ದು, ಈ ದೈವತಾ ಕಾರ್ಯದಲ್ಲಿ 50 ಸಾವಿರಕ್ಕೂ ಅಧಿಕ ಭಕ್ತರು ಪಾಲ್ಗೊಳ್ಳಲಿದ್ದಾರೆ ಎಂದು ವಿವಿಧ ಸಮಿತಿಗಳ ಆಶಯವಾಗಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಪೆರಾಜೆಯ ಶ್ರೀಶಾಸ್ತಾವು ದೇವಸ್ಥಾನದಿಂದ ಮಾ.3ರಂದು ಬೆಳಿಗ್ಗೆ 7.30ಕ್ಕೆ ಹಸಿರು ವಾಣಿ ಮೆರವಣಿಗೆ ಹೊರಡಲಿದೆ. ಬಳಿಕ ಉಗ್ರಾಣ ತುಂಬುವ ಕಾರ್ಯಕ್ರಮ ನಡೆಯಲಿದೆ. 11 ಗಂಟೆಯಿಂದ ಧಾರ್ಮಿಕ ಸಭೆ ನಡೆಯಲಿದ್ದು, ಸಂಜೆ 5 ಗಂಟೆಯಿಂದ ದೈವಿಕ ಕಾರ್ಯಕ್ರಮ ಆರಂಭಗೊಳ್ಳಲಿದೆ. ದೈವಗಳ ಕೂಡುವಿಕೆ, ಶ್ರೀಪೊಟ್ಟನ್ ದೈವ ಕಾರ್ಯಕ್ರಮ ನಡೆಯಲಿದೆ. ಮಾ.4 ರಂದು ಬೆಳಿಗ್ಗೆ 7 ಗಂಟೆಯಿಂದ ಶ್ರೀ ಕೊರತಿಯಮ್ಮ ದೈವ, 8.30 ರಿಂದ ಚಾಮುಂಡಿ ದೈವ, 9.30 ರಿಂದ ಶ್ರೀ ವಿಷ್ಣುಮೂರ್ತಿ ದೈವ, 12ರಿಂದ ಶ್ರೀ ಗುಳಿಗ ದೈವದ ಕೋಲ, ಮಧ್ಯಾಹ್ನ 3…

Read More