ಮಡಿಕೇರಿ ಮಾ.1 : ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರ ಬಡವರ ತಾಳ್ಮೆ ಪರೀಕ್ಷೆ ಮಾಡುತ್ತಿದೆ ಎಂದು ಜಾತ್ಯತೀತ ಜನತಾದಳದ ಪರಿಶಿಷ್ಟ ಘಟಕದ ಕಾರ್ಯದರ್ಶಿ ಹೆಚ್.ಎನ್.ಯೋಗೇಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಡುಗೆ ಅನಿಲದ ಬೆಲೆ ರೂ.50 ಮತ್ತು ವಾಣಿಜ್ಯ ಬಳಕೆಯ ಸಿಲಿಂಡರ್ ಗೆ ಏಕಾಏಕಿ ರೂ.350 ಹೆಚ್ಚಳ ಮಾಡಿರುವುದು ಖಂಡನೀಯವೆoದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಬೆಲೆ ಏರಿಕೆಯನ್ನು ನಿಯಂತ್ರಿಸಬೇಕೆoದು ಒತ್ತಾಯಿಸಿದ್ದಾರೆ. ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿoದ ಬೆಲೆ ಏರಿಕೆಯಾಗುತ್ತಲೇ ಇದೆ. ಬಡವರ ಗಾಯದ ಮೇಲೆ ಬರೆ ಎಳೆಯುವ ಕೆಲಸವನ್ನು ಸರ್ಕಾರ ಮಾಡುತ್ತಲೇ ಇದೆ. ಬಡವರು ಹಾಗೂ ಕೂಲಿ ಕಾರ್ಮಿಕರು ಅಡುಗೆ ಅನಿಲದ ಸಿಲಿಂಡರ್ ಖರೀದಿಸಲಾಗದೆ ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ದುಬಾರಿ ತೆರಿಗೆ, ಇತರ ವಸ್ತುಗಳು ಮತ್ತು ಶುಲ್ಕಗಳ ಏರಿಕೆಯಿಂದ ಮೊದಲೇ ನಷ್ಟ ಅನುಭವಿಸುತ್ತಿರುವ ಹೊಟೇಲ್ ಮಾಲೀಕರುಗಳು ವಾಣಿಜ್ಯ ಬಳಕೆಯ ಸಿಲಿಂಡರ್ ಗಳ ದುಬಾರಿ ದರದಿಂದ ಬೇಸತ್ತಿದ್ದಾರೆ.…
ಲೇಖಕ: admin
ಮಡಿಕೇರಿ ಮಾ.1 : ಸೋಮವಾರಪೇಟೆ ತಾಲೂಕಿನ ವಾಲ್ನೂರು ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿ, ಶ್ರೀ ಸಿದ್ದೇಶ್ವರ ಸ್ವಾಮಿ ಹಾಗೂ ಶ್ರೀ ರಾಮ ದೇವರ ವಾರ್ಷಿಕ ಉತ್ಸವವು ಮಾ.5 ರಿಂದ 7ರ ವರೆಗೆ ನಡೆಯಲಿದೆ. ದೇವಾಲಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಉತ್ಸವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದೆ. ಮಾ.5 ರಂದು ರಾತ್ರಿ 8 ಗಂಟೆಗೆ ಕದಳಿ ಕಟ್ಟುವುದು, ಮಾ.6 ರಂದು ಮಧ್ಯಾಹ್ನ 12 ಗಂಟೆಗೆ ಶ್ರೀ ಮಾದೇಶ್ವರ ಸ್ವಾಮಿ ಪರ್ವ, ಮಧ್ಯಾಹ್ನ 3 ಗಂಟೆಗೆ ತೆಂಗಿನ ಕಾಯಿಗೆ ಗುಂಡು ಹಾರಿಸುವುದು, ಸಂಜೆ 5 ಗಂಟೆಗೆ ಮಹಾಪೂಜೆ, ಮಂಗಳಾರತಿ ಜರುಗಲಿದ್ದು, ಸಂಜೆ 6 ಗಂಟೆಗೆ ಮೆರೆಯುವ ಬಸವಣ್ಣನಿಗೆ ಪೂಜೆ ನೆರವೇರಲಿದೆ. ಮಾ.7 ರಂದು ಮಧ್ಯಾಹ್ನ 12 ಗಂಟೆಗೆ ಸಾಮೂಜಿಕ ಭೋಜನ ಪ್ರಸಾದ ವಿತರಣೆ, ಸಂಜೆ 4.30ಕ್ಕೆ ಹೊಂಡ ಹಾಯುವುದು, ಸಂಜೆ 5 ಗಂಟೆಗೆ ಮಹಾಪೂಜೆ ಹಾಗೂ ಪ್ರಸಾದ ವಿನಿಯೋಗ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅಗಮಿಸುವಂತೆ ದೇವಾಲಯದ ತಕ್ಕರು ಹಾಗೂ ಆಡಳಿತ ಮಂಡಳಿ…
ಮಡಿಕೇರಿ ಮಾ.1 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತನ್ನ 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ಮಾ.4 ಮತ್ತು 5 ರಂದು ಗೋಣಿಕೊಪ್ಪಲಿನಲ್ಲಿ ನಡೆಸುತಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಣಿಕೊಪ್ಪಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಿರ್ಮಿಸುವ ಸಾಹಿತಿ ಐ.ಮಾ.ಮುತ್ತಣ್ಣ ವೇದಿಕೆಯಲ್ಲಿ ಸಮ್ಮೇಳನ ನಡೆಯಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾದ ಜಿಲ್ಲೆಯ ಹಿರಿಯ ಸಾಹಿತಿ ಮೈಸೂರಿನ ಯುವರಾಜ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕರಾದ ಡಾ.ಎಂ.ಪಿ.ರೇಖಾ ನಡೆಸಿ ಕೊಡಲಿದ್ದಾರೆ. ಮಾ.4 ರಂದು ಬೆಳಿಗ್ಗೆ 8 ಗಂಟೆಗೆ ಕನ್ನಡ ಧ್ವಜವನ್ನು ಪೊನ್ನಂಪೇಟೆ ತಾಲೂಕು ಅಧ್ಯಕ್ಷ ಕೋಳೆರ ದಯಾ ಚಂಗಪ್ಪ, ರಾಷ್ಟ್ರಧ್ವಜವನ್ನು ಗೋಣಿಕೊಪ್ಪಲು ಗ್ರಾ.ಪಂ ಅಧ್ಯಕ್ಷರಾದ ಮನ್ನಕ್ಕಮನೆ ಸೌಮ್ಯ ಬಾಲು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಾಡಿಗೆ ಸೇವೆ ಸಲ್ಲಿಸಿ ಕಣ್ಮರೆಯಾದ ಹಿರಿಯ 10 ಸಾಧಕರನ್ನು ಗುರುತಿಸಿ ಅವರ ನೆನಪಿನ ಧ್ವನಿಗಳನ್ನು ನಿರ್ಮಿಸಲಾಗಿದ್ದು,…
ಮಡಿಕೇರಿ ಮಾ.1 : ರಾಜ್ಯ ಸರ್ಕಾರದ ಕಾರ್ಖಾನೆ ಕಾಯ್ದೆಯ ತಿದ್ದುಪಡಿ ವಿಧೇಯಕವು ಕಾರ್ಮಿಕ ಸಮುದಾಯಕ್ಕೆ ಮಾರಕವಾಗಿದೆ ಎಂದು ಆರೋಪಿಸಿ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಿಐಟಿಯು ಸಂಘಟನೆ ಆದೇಶದ ಪ್ರತಿಯನ್ನು ದಹಿಸಿ ಅಸಮಾಧಾನ ವ್ಯಕ್ತಪಡಿಸಿತು. ಸಂಘಟನೆಯ ಪ್ರಮುಖರು ಹಾಗೂ ಸದಸ್ಯರು, ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು ಮತ್ತು ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಕಾರ್ಮಿಕರನ್ನು ಶೋಷಣೆಗೆ ಒಳಪಡಿಸುವ ಮೂಲಕ ರಾಜ್ಯ ಮತ್ತು ಕೇಂದ್ರ್ರ ಸರ್ಕಾರಗಳು ಬಂಡವಾಳಶಾಹಿಗಳ ಪರವಾಗಿ ನಡೆದುಕೊಳ್ಳುತ್ತಿವೆ. ಇದರ ಭಾಗವಾಗಿ ಕಾರ್ಖಾನೆ ಕಾಯ್ದೆ 1948 ಕ್ಕೆ ತಿದ್ದುಪಡಿ ತರುವ ಮೂಲಕ ಅದನ್ನು ಜಾರಿಗೂ ತಂದಿದೆಯೆಂದು ಆರೋಪಿಸಿದರು. ತಿದ್ದುಪಡಿ ವಿಧೇಯಕದ ಮೂಲಕ ದುಡಿಯುವ ಅವಧಿಯನ್ನು 8ಗಂಟೆಗೆ ಬದಲಾಗಿ ಹೆಚ್ಚುವರಿ ಮೂರು ಗಂಟೆ ಸೇರಿಸಿ 11 ಗಂಟೆಗೆ ಹೆಚ್ಚಿಸಲಾಗಿದೆ. ಇದರಿಂದ ಕಾರ್ಮಿಕ ಹೆಚ್ಚಿನ ಅವಧಿ ದುಡಿಯಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆಯೆಂದು ಆತಂಕ ವ್ಯಕ್ತಪಡಿಸಿದರು. ತಿದ್ದುಪಡಿ ವಿಧೇಯಕದ ಮೂಲಕ ಮಹಿಳಾ ಕಾರ್ಮಿಕರನ್ನು…
ಮಡಿಕೇರಿ ಮಾ.1 : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿ ಕಾರ್ಯಕ್ರಮಗಳು ಜನಸಾಮಾನ್ಯರಿಗೆ ತಲುಪಲು ಕಾರ್ಯಕರ್ತರೇ ಸಂಪರ್ಕ ಸೇತುವೆಯಾಗಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ವಿಶ್ವಾಸ ವ್ಯಕ್ತಪಡಿಸಿದರು. ಸೋಮವಾರಪೇಟೆ ತಾಲ್ಲೂಕು ಬಿಜೆಪಿ ಕಾರ್ಯಕರ್ತರ ಬೃಹತ್ ಸಮ್ಮೀಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾರ್ಯಕರ್ತರೇ ಪಕ್ಷದ ಬೆನ್ನೆಲುಬು, ಕಾರ್ಯಕರ್ತರ ಸಹಕಾರದಿಂದ ಅಭಿವೃದ್ಧಿ ಕಾರ್ಯಗಳು ನಡೆಸಲು ಸಾಧ್ಯವಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿ ಕಾರ್ಯಕ್ರಮಗಳು ಜನಸಾಮಾನ್ಯರಿಗೆ ತಲುಪಲು ಕಾರ್ಯಕರ್ತರೇ ಸಂಪರ್ಕ ಸೇತುವೆಯಾಗಿದ್ದು, ಕಾರ್ಯಕರ್ತರ ಶ್ರಮದಿಂದ ಗೆಲುವು ಸಾಧ್ಯ ಎಂದು ಕೃತಜ್ಞತೆ ಸಲ್ಲಿಸಿದರು. ಕಳೆದ ಐದು ವರ್ಷಗಳಲ್ಲಿ ಮಡಿಕೇರಿ ಕ್ಷೇತ್ರದಲ್ಲಿ 1,800 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಪ್ರಾಕೃತಿಕ ವಿಕೋಪ ಹಾಗೂ ಕೋವಿಡ್ ಸಂಕಷ್ಟದಲ್ಲಿ ಜನತೆಯ ಹಿತದೃಷ್ಟಿಯಿಂದ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ಈಗಾಗಲೇ ಸುಮಾರು 5 ಲಕ್ಷ ಜನರಿಗೆ 11 ಲಕ್ಷ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. 47 ಸಾವಿರ…
ಮಡಿಕೇರಿ ಮಾ.1 : ಕೊಡಗು ಪತ್ರಕರ್ತರ ಸಂಘದ ವತಿಯಿಂದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ನೂತನ ಸದಸ್ಯತ್ವಕ್ಕೆ ರೂ.600 ಹಾಗೂ ನವೀಕರಣಕ್ಕೆ ರೂ.500 ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಮಾ.15 ಕೊನೆಯ ದಿನಾಂಕವಾಗಿದೆ. ಸ್ಥಳೀಯ ,ಪ್ರಾದೇಶಿಕ,ರಾಜ್ಯ,ರಾಷ್ಟ್ರೀಯ ಮಟ್ಟದ ಪತ್ರಿಕೆ ಮತ್ತು ಮಾಧ್ಯಮಗಳು,ವಾರಪತ್ರಿಕೆ ,ಪಾಕ್ಷಿಕಗಳು,ವೆಬ್ ನ್ಯೂಸ್ ಸೇರಿದಂತೆ ಅಧಿಕೃತ ಸುದ್ದಿಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಧಾನ ಸಂಪಾದಕರು,ಸಂಪಾದಕರು,ಉಪ ಸಂಪಾದಕರು,ವರದಿಗಾರರು,ಬಿಡಿ ವರದಿಗಾರರು,ಛಾಯಾಚಿತ್ರಗಾರರು,ಕ್ಯಾಮೆರಾ ಮ್ಯಾನ್ ಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಪಾದಕರು ಅಥವಾ ಜಿಲ್ಲಾ ವರದಿಗಾರರ ಸಹಿಯೊಂದಿಗೆ ಎರಡು ಭಾವ ಚಿತ್ರ ಕಡ್ಡಾಯವಾಗಿದ್ದು, ಅರ್ಜಿಗಳಿಗಾಗಿ 9945411821,9731469871 ,9901657211 ದೂರವಾಣಿಯನ್ನು ಸಂಪರ್ಕಿಸಿ ಪಡೆದುಕೊಳ್ಳಬಹುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಮಾ.1 : ವೇತನ ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ 7ನೇ ವೇತನ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕರೆ ನೀಡಿದ್ದ ಮುಷ್ಕರಕ್ಕೆ ಕೊಡಗು ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಯಿತು. ಮುಷ್ಕರಕ್ಕೆ ಸ್ಪಂದಿಸಿದ ಜಿಲ್ಲಾ ಸರ್ಕಾರಿ ನೌಕರರು ಬುಧವಾರ ಕೆಲಸಕ್ಕೆ ಹಾಜರಾಗದ ಕಾರಣ ಸರ್ಕಾರಿ ಕಚೇರಿಗಳ ಕೆಲಸ ಕಾರ್ಯ ಸಂಪೂರ್ಣ ಸ್ಥಗಿತಗೊಂಡಿತ್ತು. ಜಿಲ್ಲಾಡಳಿತ ಭವನದ ಕಚೇರಿಗಳು ಬಣಗುಡುತ್ತಿದ್ದವು, ಹೊರಗುತ್ತಿಗೆ ನೌಕರರಷ್ಟೆ ಕಾರ್ಯನಿರ್ವಹಿಸುತ್ತಿದ್ದರು. ಕೊಡಗು ಜಿಲ್ಲಾ ವ್ಯಾಪ್ತಿಯ ವಿವಿಧ ಸರ್ಕಾರಿ ಕಚೇರಿಗಳು, ಗ್ರಾಮ ಪಂಚಾಯ್ತಿ, ಪಟ್ಟಣ ಪಂಚಾಯ್ತಿ, ನಗರಸಭೆ ಸೇರಿದಂತೆ ಶಾಲಾ ಕಾಲೇಜುಗಳು ಸೇರಿದಂತೆ ವಿವಿಧ ಕಛೇರಿಗಳ ಸುಮಾರು 5 ಸಾವಿರ ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗದೆ ಹೋರಾಟಕ್ಕೆ ಕೈಜೋಡಿಸಿದರು. ಮಡಿಕೇರಿ ನಗರಸಭೆ ಸೇರಿದಂತೆ ಜಿಲ್ಲೆಯ ಎಲ್ಲಾ ಪಂಚಾಯ್ತಿಗಳಲ್ಲಿ ನೀರು ಸರಬರಾಜು ವ್ಯವಸ್ಥೆಯೊಂದನ್ನು ಹೊರತು ಪಡಿಸಿ, ಉಳಿದ ಎಲ್ಲಾ ಕೆಲಸ ಕಾರ್ಯಗಳಿಂದ ಸಿಬ್ಬಂದಿಗಳು ದೂರ ಉಳಿದಿದ್ದರು. ಮಡಿಕೇರಿ ಜಿಲ್ಲಾ ಆಸ್ಪತ್ರೆಯ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗಳು ಮುಷ್ಕರದ ಹಿನ್ನೆಲೆ ತಮ್ಮ…
ಮಡಿಕೇರಿ ಮಾ.1 : ವಿಧಾನಸಭಾ ಚುನಾವಣೆಯ ಹಿನ್ನೆಲೆ ಕೆಪಿಸಿಸಿ ಘೋಷಿಸಿರುವ ವಿವಿಧ ಭರವಸೆಗಳ “ಕಾಂಗ್ರೆಸ್ ಗ್ಯಾರಂಟಿ ಕಾರ್ಡ್” ನ್ನು ಮನೆ ಮನೆಗೆ ತಲುಪಿಸುವ ಅಭಿಯಾನ ಮಾ.2 ರಿಂದ ಜಿಲ್ಲೆಯಾದ್ಯಂತ ಆರಂಭಗೊಳ್ಳಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ರಣ್‍ದೀಪ್ ಸಿಂಗ್ ಸುರ್ಜೇವಾಲ ಗುರುವಾರ ಮಡಿಕೇರಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದರು. ಕಾಂಗ್ರೆಸ್ ನ ಮೊದಲ ಗ್ಯಾರಂಟಿ ಕಾರ್ಡ್ “ಗೃಹಜ್ಯೋತಿ” ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ಉಚಿತ ಪೂರೈಕೆ, 2ನೇ ಗ್ಯಾರಂಟಿ ಪ್ರತಿ ಮನೆಯೊಡತಿಗೆ 2 ಸಾವಿರ ರೂ. ಪ್ರೋತ್ಸಾಹ ಧನ ನೀಡಲು “ಗೃಹಲಕ್ಷ್ಮಿ” ಯೋಜನೆ ಜಾರಿ ಮತ್ತು 3ನೇ ಗ್ಯಾರಂಟಿಯಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್‍ದಾರರಿಗೆ 10 ಕೆ.ಜಿ.ಅಕ್ಕಿ ಉಚಿತವಾಗಿ ನೀಡುವ ಭರವಸೆಯ ಕಾರ್ಡ್‍ನ್ನು ಮನೆ ಮನೆಗೆ ತಲುಪಿಸಲಾಗುವುದು. ಕೆಪಿಸಿಸಿ…
ಸುಂಟಿಕೊಪ್ಪ ಮಾ.1 : ಫ್ರೆಂಡ್ಸ್ ಯೂತ್‍ಕ್ಲಬ್ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕಲಾ ಪ್ರತಿಭೆಗಳಿಗೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳಲು ಉತ್ತಮ ವೇದಿಕೆ ಕಲ್ಪಿಸಿರುವುದು ಶ್ಲಾಘನೀಯ ಎಂದು ಪ್ರಮುಖರಾದ ವಿ.ಪಿ.ಶಶಿಧರ್ ಹೇಳಿದರು. ನಾಕೂರು-ಕಾನ್‍ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್‍ನ 23ನೇ ವಾರ್ಷಿಕೋತ್ಸವದ ಅಂಗವಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕಲೆ ಹಾಗೂ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ಕೆಲಸ ಆಗುತ್ತಿದ್ದು, ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಇದು ಉತ್ತಮ ವೇದಿಕೆಯಾಗಿದೆ ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ಡ್ಯಾನ್ಸ್‍ಮೇಳ ಕಾರ್ಯಕ್ರಮದ ದಾನಿಗಳಾದ ಕಾಫಿ ಬೆಳೆಗಾರರಾದ ಅಡಿಕೇರಿ ಧರ್ಮಪ್ಪ ವಹಿಸಿದ್ದರು. ಸಮಾರಂಭದ ವೇದಿಕೆಯಲ್ಲಿ ಗ್ರಾ.ಪಂ ಅಧ್ಯಕ್ಷ ಮಂದೋಡಿ.ಸಿ.ಜಗನ್ನಾಥ್, ಮಾಜಿ ಅಧ್ಯಕ್ಷ ಬಿ.ಜಿ.ರಮೇಶ್, ಹಾರಂಗಿ ಕಾವೇರಿ ಮೀನುಗಾರರ ಸಂಘ ಅಧ್ಯಕ್ಷ ಮಹಮದ್, ಫ್ರೆಂಡ್ಸ್ ಯೂತ್ ಕ್ಲಬ್ ಅಧ್ಯಕ್ಷ ಅಂಬೆಕಲ್ ಚಂದ್ರಶೇಖರ್, ಗೌರವಧ್ಯಕ್ಷ ಕುಂಞಕೃಷ್ಣ, ಕಾರ್ಯದರ್ಶಿ ಶಂಕರ ನಾರಾಯಣ, ಸದಸ್ಯರುಗಳಾದ ಕಿಟ್ಟಣ್ಣ ರೈ ಮತ್ತಿತರರು ಇದ್ದರು. ಇದೇ ಸಂದರ್ಭ ಗ್ರಾಮೀಣ…
ಮಡಿಕೇರಿ ಮಾ.1 : ಜಿಲ್ಲೆಯ ಯುವಕ, ಯುವತಿಯರಿಗಾಗಿ ಮಾ.25 ರಂದು “ರಾಷ್ಟ್ರೀಯ ಏಕತೆ ಹಾಗೂ ಒಗ್ಗಟ್ಟು ಎಂಬ ವಿಷಯದಡಿ” ಜಿಲ್ಲಾ ಮಟ್ಟದ “ಜಿಲ್ಲಾ ಯುವ ಉತ್ಸವ” ಎಂಬ ವಿನೂತನ ವಿವಿಧ ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್, ಭಾರತ ಸರ್ಕಾರ, ನೆಹರು ಯುವ ಕೇಂದ್ರ, ಯುವ ಜನ ವ್ಯವಹಾರ ಕ್ರೀಡಾ ಸಚಿವಾಲಯ, ಮಡಿಕೇರಿ ಕೊಡಗು. ಜಿಲ್ಲಾಡಳಿತ, ಜಿ.ಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಡಗು, ಜಿಲ್ಲಾ ಯುವ ಒಕ್ಕೂಟ ಕೊಡಗು, ಮಡಿಕೇರಿ ತಾಲ್ಲೂಕು ಯುವ ಒಕ್ಕೂಟ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲೆಯ 15 ವರ್ಷದಿಂದ 29 ವರ್ಷ ವಯೋಮಿತಿಯ ಜಿಲ್ಲೆಯ ಯುವಕ, ಯುವತಿಯರಲ್ಲಿರುವ ವಿವಿಧ ಪ್ರತಿಭೆಗಳ ಅನಾವರಣಕ್ಕೆ ಸ್ಪರ್ಧೆ ನಡೆಸಲಾಗುತ್ತಿದ್ದು, ವಿಜೇತ ತಂಡಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ನಗದು ಬಹುಮಾನ ಹಾಗೂ ಆಕರ್ಷಕ…






