ಲೇಖಕ: admin

ಮಡಿಕೇರಿ ಮಾ.1 : ಅಡುಗೆ ಅನಿಲದ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡುವ ಮೂಲಕ ಸರ್ಕಾರ ಜನಸಾಮಾನ್ಯರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಮಡಿಕೇರಿ ನಗರ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಬೆಳ್ಯಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು 14.2 ಕೆ.ಜಿ ಅಡುಗೆ ಅನಿಲದ ಸಿಲಿಂಡರ್ ಬೆಲೆ ಮತ್ತೆ ರೂ.50 ಹೆಚ್ಚಳವಾಗಿದ್ದು, ಒಂದು ಸಿಲಿಂಡರ್ ಗೆ ರೂ.1,103 ನೀಡಬೇಕಾಗಿದೆ. ವಾಣಿಜ್ಯ ಬಳಕೆಯ 19 ಕೆ.ಜಿ ಸಿಲಿಂಡರ್ ಬೆಲೆ ರೂ.350.50 ಪೈಸೆ ಹೆಚ್ಚಳವಾಗಿದ್ದು, ರೂ.2,119.50 ಪೈಸೆ ಪಾವತಿಸಬೇಕಾಗಿದೆ. ಇದು ಅತ್ಯಂತ ದುಬಾರಿಯಾಗಿದ್ದು, ಜನರ ಜೀವನದ ಮೇಲೆ ದೊಡ್ಡ ಪರಿಣಾಮವನ್ನು ಬೀರಲಿದೆ ಎಂದು ಟೀಕಿಸಿದ್ದಾರೆ. ಬಡವರು, ಕೂಲಿ ಕಾರ್ಮಿಕರು, ಜನಸಾಮಾನ್ಯರು ದುಡಿದ ಹಣವನ್ನು ಸಿಲಿಂಡರ್ ಗೆ ಮೀಸಲಿಟ್ಟರೆ ಜೀವನ ಸಾಗಿಸುವುದು ಮತ್ತು ತಮ್ಮ ಮಕ್ಕಳಿಗೆ ಶಿಕ್ಷಣ ನೀಡುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ. ವಾಣಿಜ್ಯ ಬಳಕೆಯ ಸಿಲಿಂಡರ್ ಗಳ ಬೆಲೆಯೂ ಏರಿಕೆಯಾಗಿರುವುದರಿಂದ ಹೊಟೇಲ್ ಗಳಲ್ಲಿ ಊಟ, ಉಪಹಾರದ ದರ ದುಬಾರಿಯಾಗಲಿದೆ. ಇದು…

Read More

ಮಡಿಕೇರಿ ಮಾ.1 : ಬಜೆಟ್ ಸಂದರ್ಭವೇ ಸರ್ಕಾರಿ ನೌಕರರ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸದ ರಾಜ್ಯ ಸರ್ಕಾರ ಚುನಾವಣಾ ಗಿಮಿಕ್ ಗಾಗಿ ಮುಷ್ಕರ ಆರಂಭಿಸಿದ ನಂತರ ಘೋಷಣೆ ಮಾಡಿದೆ ಎಂದು ಜಾತ್ಯತೀತ ಜನತಾದಳದ ರಾಜ್ಯ ಸಂಘಟನಾ ಕಾರ್ಯದರ್ಶಿ ನಾಪೋಕ್ಲುವಿನ ಎಂ.ಎ.ಮನ್ಸೂರ್ ಆಲಿ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯ ಬಿಜೆಪಿ ಸರ್ಕಾರ ಅತಿ ಬುದ್ದಿವಂತಿಕೆಯನ್ನು ಪ್ರದರ್ಶಿಸಿದ್ದು, ಮಗುವನ್ನು ಚಿವುಟಿದಂತೆ ಮಾಡಿ ತಾನೇ ಸಮಾಧಾನ ಪಡಿಸಿದಂತೆ ನಾಟಕವಾಡಿದೆ. ನೌಕರರು ಶೇ.40 ರಷ್ಟು ವೇತನ ಹೆಚ್ಚಳಕ್ಕಾಗಿ ಬಜೆಟ್ ಗೂ ಮೊದಲೇ ಮನವಿ ಮಾಡಿದ್ದರು. ಆದರೆ ಇದಕ್ಕೆ ಸ್ಪಂದಿಸದ ಸರ್ಕಾರ ಮುಷ್ಕರ ಆರಂಭಗೊಂಡ ನಂತರ ಶೇ.17 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇಚ್ಛಾಶಕ್ತಿಯ ಕೊರತೆಯನ್ನು ಎದುರಿಸುತ್ತಿರುವ ಸರ್ಕಾರ ಈ ವಿಚಾರದಲ್ಲೂ ರಾಜಕೀಯ ಗಿಮಿಕ್ ಮಾಡಲು ಮುಂದಾಗಿರುವುದು ಸ್ಪಷ್ಟವಾಗಿದೆ ಎಂದು ಟೀಕಿಸಿದ್ದಾರೆ. ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಲೇ ಇದ್ದು, ಸರ್ಕಾರಿ ನೌಕರರಿಗೆ ವೇತನ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ. ಆದರೆ ಸರ್ಕಾರ…

Read More

ಮಡಿಕೇರಿ ಮಾ.1 : ರಾಜ್ಯ ಸರ್ಕಾರ ಇತ್ತೀಚೆಗೆ ಘೋಷಿಸಿದ ಬಜೆಟ್ ನಲ್ಲಿ ವಿಶೇಷ ಚೇತನರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಆರೋಪಿಸಿರುವ ಕೊಡಗು ಜಿಲ್ಲಾ ವಿಕಲಚೇತನರ ಸಂಘ, ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾ ನಿರ್ದೇಶಕಿ ಎಂ.ಎನ್.ವೀಣಾ ಬಜೆಟ್ ನಲ್ಲಿ ವಿಶೇಷ ಚೇತನರ ಪರವಾದ ಯಾವುದೇ ನಿಲುವುಗಳನ್ನು ತೆಗೆದುಕೊಂಡಿಲ್ಲ. ನಮ್ಮ ಬೇಡಿಕೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸದಿದ್ದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವುದಿಲ್ಲವೆಂದು ತಿಳಿಸಿದರು. ವಿಶೇಷ ಚೇತನರ ಮಾಸಿಕ ಪೋಷಣಾ ಭತ್ಯೆಯನ್ನು ರೂ.3 ಸಾವಿರಕ್ಕೆ ಹೆಚ್ಚಿಸಬೇಕು, ಗೌರವ ಧನದಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮೀಣ, ಪಟ್ಟಣ, ತಾಲೂಕು, ಪುರ್ನವಸತಿ ಕಾರ್ಯಕರ್ತರುಗಳನ್ನು ಕ್ರಮವಾಗಿ ಗ್ರಾ.ಪಂ, ನಗರ, ತಾಲೂಕು ವಿಶೇಷ ಚೇತನರ ಅಧಿಕಾರಿಯಾಗಿ ಪರಿವರ್ತಿಸಬೇಕು, ಗೌರವಧನವನ್ನು ಕನಿಷ್ಠ ವೇತನವಾಗಿ ಪರಿವರ್ತಿಸಬೇಕು, ಗ್ರಾ.ಪಂ ಹಾಗೂ ಇತರ ಇಲಾಖೆಗಳಲ್ಲಿ ವಿಶೇಷ ಚೇತನರಿಗೆ ಮೀಸಲಿರುವ 5ರ ನಿಧಿಯನ್ನು ವೈಯಕ್ತಿಕವಾಗಿ ನೀಡುವಂತಾಗಬೇಕು, ಲೈನ್ ಮನೆಯಲ್ಲಿ ವಾಸಿಸುತ್ತಿರುವ ವಿಶೇಷ ಚೇತನರ ಕುಟುಂಬಗಳಿಗೆ ವಿಶೇಷ ಆದ್ಯತೆಯ ಮೇಲೆ ಮನೆ ಒದಗಿಸಬೇಕು,…

Read More

ಮಡಿಕೇರಿ ಮಾ.1 : ಮುಂದಿನ ಅವಧಿಗೂ ಕೇಂದ್ರ ಹಾಗೂ ರಾಜ್ಯ ದಲ್ಲಿ ಡಬ್ಬಲ್ ಇಂಜಿನ್ ಸರ್ಕಾರ ಖಚಿತ ಎಂದು  ಶಾಸಕದ್ವಯರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶಾಸಕ ಎಂ.ಪಿ.ಅಪ್ಪಚ್ಚು ರಂಜನ್  ಅವರ ಮನೆಯಲ್ಲಿ ಸೋಮವಾರಪೇಟೆ ತಾಲ್ಲೂಕು ಬಿಜೆಪಿ ಕಾರ್ಯಕರ್ತರ ಬೃಹತ್ ಸಮ್ಮಿಲನ ಕಾರ್ಯಕ್ರಮದಲ್ಲಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಮೇ ಮೊದಲವಾರದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ದಿ ಕಾರ್ಯಕ್ರಮಗಳೇ ಪಕ್ಷಕ್ಕೆ ಶ್ರೀ ರಕ್ಷೆ. ಜನ ಸಾಮಾನ್ಯರ ಶ್ರೇಯೋಭಿವೃದ್ಧಿಗೆ ಸರ್ಕಾರ ಒತ್ತು ನೀಡಿದೆ ಎಂದರು. ಈ ಸಂದರ್ಭ ವಿಧಾನ ಪರಿಷತ್ತು ಸದಸ್ಯ ಸುಜಾಕುಶಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಹಾಜರಿದ್ದರು.

Read More

ಬೆಂಗಳೂರು: 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸಿ ಅಂತ್ಯಗೊಂಡಿದ್ದು,  ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಲು ಆದೇಶ ಹೊರಡಿಸಿದ್ದಾರೆ. ರೇಸ್ ಕೋರ್ಸ್ ಬಳಿಯ ಸರ್ಕಾರಿ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸಿದರು.

Read More

ನಾಪೋಕ್ಲು ಮಾ.1 :  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು, ಸ್ಥಳೀಯ ಸಂಸ್ಥೆ ಸಂಪಾಜೆ  ಸಂಯುಕ್ತಾಶ್ರಯದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ , ರಕ್ತನಿಧಿ ಕೇಂದ್ರ ಮಡಿಕೇರಿ, ರಾಷ್ಟ್ರೀಯ ಸ್ವಯಂಸೇವಾ ಯೋಜನೆ, ಕೆ.ಪಿ.ಎಸ್ ಪ್ರೌಢಶಾಲೆ ನಾಪೋಕ್ಲು, ಶ್ರೀ ಮಕ್ಕಿ ಶಾಸ್ತಾವು ಸೇವಾ ಕಾರ್ಯಪಡೆ ಬೇತು, ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣಾ ಘಟಕ ಸಹಯೋಗದೊಂದಿಗೆ ಮಾ.6ರಂದು ರಕ್ತದಾನ ಶಿಬಿರ ನಡೆಯಲಿದೆ. ಅಂದು ಬೆಳಗ್ಗೆ 10 ರಿಂದ ಮದ್ಯಾಹ್ನ 1ಗಂಟೆಯವರೆಗೆ ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ  ಶಿಬಿರ  ನಡೆಯಲಿದ್ದು, ರಕ್ತದಾನಿಗಳು ಮೊ.8197729150,9900474485  ಸಂಖ್ಯೆಗೆ ಕರೆಮಾಡಿ ಅಥವಾ ವಾಡ್ಸಪ್ ಮೂಲಕ ನೊಂದಣಿ ಮಾಡಿಕೊಳ್ಳಬಹುದು. ವರದಿ :ಝಕರಿಯ ನಾಪೋಕ್ಲು 

Read More

ಮಡಿಕೇರಿ ಮಾ.1 :ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಸಮುದಾಯ ಚಟುವಟಿಕೆಗಳಿಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಭವನ/ ಡಾ.ಬಾಬು ಜಗಜೀವನ ರಾಂ ಭವನ/ ಮಹರ್ಷಿ ವಾಲ್ಮೀಕಿ ಭವನ ಮತ್ತು ಇತರೇ ಸಮುದಾಯಗಳ ಭವನ ನಿರ್ಮಾಣದ ಉದ್ದೇಶ ಮತ್ತು ಅಗತ್ಯ ಸೌಲಭ್ಯಗಳನ್ನು ಪರಿಗಣಿಸಿ, ವೆಚ್ಚದ ಮೊತ್ತವನ್ನು ಪರಿಷ್ಕರಿಸಿ 2019 ರ ಮಾರ್ಚ್, 25 ರ ಆದೇಶದಲ್ಲಿ ಪರಿಸ್ಕೃತ ಮಾರ್ಗಸೂಚಿ ಹೊರಡಿಸಲಾಗಿದೆ. ಶಾಸಕರಾದ ಕೆ.ಜಿ.ಬೋಪಯ್ಯ ಅವರ ಪ್ರಯತ್ನದಿಂದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಹೋಬಳಿ ಮಟ್ಟದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ 75 ಲಕ್ಷ ರೂ.ಅನುದಾನ ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Read More

ಮಡಿಕೇರಿ ಫೆ.28 : ಚಿನ್ನಾಭರಣ ಪಾಲಿಶ್ ಮಾಡುವ ನೆಪದಲ್ಲಿ ಚಿನ್ನವನ್ನು ಕರಗಿಸಿ ಸಾರ್ವಜನಿಕರನ್ನು ವಂಚಿಸುತ್ತಿದ್ದ ಮೂವರು ಆರೋಪಿಗಳನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. ರಾಜಕುಮಾರ(29), ಪ್ರವೀಣ್ ಕುಮಾರ(32) ಹಾಗೂ ಲಲನ್ ಕುಮಾರ್(26) ಬಂಧಿತ ಆರೋಪಿಗಳು. 15 ಗ್ರಾಂ ಚಿನ್ನ ಮತ್ತು ಪಾಲಿಶ್ ಮಾಡಲು ಬಳಸುತ್ತಿದ್ದ ಸಾಮಾಗ್ರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿನ್ನಾಭರಣ ಪಾಲಿಶ್ ಮಾಡುವ ನೆಪದಲ್ಲಿ ಮನೆ ಮನೆಗಳಿಗೆ ತೆರಳಿ ಆ್ಯಸಿಡ್ ಹಾಗೂ ಪಾಲಿಶ್ ಸಾಮಾಗ್ರಿಗಳ್ನು ಬಳಸಿ ಸ್ವಲ್ಪ ಮಟ್ಟಿನ ಚಿನ್ನವನ್ನು ಕರಗಿಸಿ ಮೋಸ ಮಾಡುತ್ತಿರುವ ಬಗ್ಗೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಕುರಿತು ಕುಶಾಲನಗರ ವೃತ್ತ ನಿರೀಕ್ಷಕ ಬಿ.ಜಿ. ಮಹೇಶ್, ಗ್ರಾಮಾಂತರ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಡಿ.ಎಸ್.ಪುನೀತ್, ದಿನೇಶ್ ಕುಮಾರ್ ಹಾಗೂ ಸಿಬ್ಬಂದಿಗಳನ್ನು ಒಳಗೊಂಡು ಒಂದು ತಂಡ ರಚಿಸಲಾಗಿತ್ತು. ಫೆ.25ರಂದು ಕುಶಾಲನಗರದ ಹೆಬ್ಬಾಲೆ ಗ್ರಾಮದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದ 3 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಸಂದರ್ಭ…

Read More

ಮಡಿಕೇರಿ ಫೆ.28 : ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ರಣ್‌ದೀಪ್ ಸಿಂಗ್ ಸುರ್ಜೇವಾಲ ಅವರು ಕೊಡಗು ಜಿಲ್ಲೆಗೆ ಪ್ರಥಮ ಬಾರಿಗೆ ಭೇಟಿ ನೀಡುತ್ತಿದ್ದಾರೆ. ಮಾ.2 ರಂದು ಅಪರಾಹ್ನ 1.30 ಗಂಟೆಗೆ ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ಕೆಪಿಸಿಸಿ ಪ್ರಮುಖರು, ಡಿಸಿಸಿ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಡಿಸಿಸಿ ಮುಂಚೂಣಿ ಘಟಕದ ಪ್ರಮುಖರು, ಪದಾಧಿಕಾರಿಗಳು, ವಲಯ ಕಾಂಗ್ರೆಸ್ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಪಕ್ಷದ ಹಾಲಿ, ಮಾಜಿ ಜನಪ್ರತಿನಿಧಿಗಳು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಇಂದು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ನಂತರ ಪಕ್ಷದ ಜಿಲ್ಲಾ ವಕ್ತಾರ ಎ.ಎಸ್.ಟಾಟು ಮೊಣ್ಣಪ್ಪ ಅವರು ರಣ್‌ದೀಪ್ ಸಿಂಗ್ ಸುರ್ಜೇವಾಲ ಭೇಟಿ ಕುರಿತು ಮಾಹಿತಿ ನೀಡಿದರು. ಕಾಂಗ್ರೆಸ್ ನ ಮೊದಲ ಗ್ಯಾರಂಟಿ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ನೆರವು ನೀಡುವ ಉದ್ದೇಶದಿಂದ ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ಉಚಿತ ಪೂರೈಕೆ,…

Read More

ಮಡಿಕೇರಿ ಫೆ.28 : ದಕ್ಷಿಣ ಕೊಡಗಿನ ಎರಡು ಗ್ರಾ.ಪಂ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರು ಜಯ ಸಾಧಿಸಿದ್ದಾರೆ. ನಿಟ್ಟೂರು ಗ್ರಾ.ಪಂ ನಲ್ಲಿ ಅಪ್ಪಣ್ಣ ಹಾಗೂ ಗೋಣಿಕೊಪ್ಪಲು ಗ್ರಾ.ಪಂ ನಲ್ಲಿ ಸಫೂರಬಾನು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಸೋಲಿಸಿ ಗೆಲುವು ದಾಖಲಿಸಿದರು. ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಬೆಂಬಲಿತರು ಗೆಲುವು ಸಾಧಿಸಿದ ಹಿನ್ನೆಲೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಗೋಣಿಕೊಪ್ಪಲಿನಲ್ಲಿ ವಿಜಯೋತ್ಸವ ಆಚರಿಸಿದರು. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ಹಾಗೂ ಗೋಣಿಕೊಪ್ಪಲು ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಗಣಪತಿ ನೇತೃತ್ವದಲ್ಲಿ ವಿಜಯೋತ್ಸವ ನಡೆಯಿತು. ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

Read More