ಲೇಖಕ: admin

ಸೋಮವಾರಪೇಟೆ NEWS DESK ಡಿ.30 : ಸೋಮವಾರಪೇಟೆಯ ಶ್ರೀ ಮುತ್ತಪ್ಪಸ್ವಾಮಿ ಮತ್ತು ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಶೃದ್ಧಾಭಕ್ತಿಯಿಂದ ಅಯ್ಯಪ್ಪ ವೃತಾಧಾರಿಗಳು ಹಾಗೂ ಭಕ್ತರ  ಸಮ್ಮುಖದಲ್ಲಿ ಮಂಡಲ ಪೂಜೋತ್ಸವ ಸಂಪನ್ನಗೊಂಡಿತು. ಅರ್ಚಕ ಜಗದೀಶ ಉಡುಪ ಅವರ ಪೌರೋಹಿತ್ಯದಲ್ಲಿ ಗಣಪತಿಹೋಮದೊಂದಿಗೆ ಪೂಜೆಗಳು ಆರಂಭಗೊಂಡಿತು. ನಂತರ ದೇವಾಲಯ ಸಮಿತಿ ಹಾಗೂ ಕ್ಷೇತ್ರದ ಭಕ್ತರು ಕಳೆದ ಐದು ದಿನಗಳಿಂದ ವೃತ ಮಾಡಿ ತಂದಿದ್ದ ಪವಿತ್ರ ತುಪ್ಪವನ್ನು ಅಯ್ಯಪ್ಪಸ್ವಾಮಿಯ ಮೂರ್ತಿಗೆ ವೆಂಕಟೇಶ್‌ ಅಯ್ಯರ್‌ ಅಭಿಷೇಕವನ್ನು ನೆರವೇರಿಸಿದರು. ಅದಕ್ಕೂ ಮುನ್ನ ಅಯ್ಯಪ್ಪಸ್ವಾಮಿಯ ಆಭರಣಗಳಿಗೆ ಪೂಜೆ ಸಲ್ಲಿಸಿ ದೇವಾಲಯದ ಆವರಣದಲ್ಲಿ ಮೂರು ಸುತ್ತು ಪ್ರದಕ್ಷಿಣೆಯನ್ನು ದೇವಾಲಯ ಸಮಿತಿಯವರು ಶ್ರೀಮುತ್ತಪ್ಪಸ್ವಾಮಿ ಹಾಗೂ ಶ್ರೀಭುವನೇಶ್ವರಿ ದೇವಿಯವರ ಸನ್ನಿಧಿಯಲ್ಲಿ ಇರಿಸಿದ್ದ ಪವಿತ್ರ ತುಪ್ಪ ಹಾಗೂ ದೇವಾಲಯ ಸಮಿತಿಯ ಪದಾಧಿಕಾರಿಗಳು ಕಳೆದ ಐದು ದಿನಗಳಿಂದ ವೃತ ಮಾಡಿ ಶ್ರೀಭುವನೇಶ್ವರಿ ದೇವಿಯ ಸನ್ನಿಧಿಯಲ್ಲಿ ಇರಿಸಿದ್ದ ತುಪ್ಪದೊಂದಿಗೆ ಪ್ರದಕ್ಷಿಣೆ ನಡೆಸಿ ಮೊದಲಿಗೆ ಅಭಿಷೇಕವನ್ನು ಮಾಡಲಾಯಿತು. ನಂತರ ಭಕ್ತರು ತಂದಿದ್ದ ತುಪ್ಪವನ್ನು ಅಭಿಷೇಕ ಮಾಡುವ ಮೂಲಕ ಪೂಜೆ ಸಲ್ಲಿಸಲಾಯಿತು. ನಂತರ  ಉಚ್ಛ ಪೂಜೆಯಲ್ಲಿ…

Read More

ಚೆಟ್ಟಳ್ಳಿ ಡಿ.29 NEWS DESK : ಚೆಟ್ಟಳ್ಳಿ ಕೊಡವ ಸಮಾಜದ ವತಿಯಿಂದ ಚೆಟ್ಟಳ್ಳಿಯ ಮಂಗಳ ಸಭಾಂಗಣದಲ್ಲಿ ಸಂಭ್ರಮದ ಪುತ್ತರಿ ನಮ್ಮೆರ ಊರೊರ್ಮೆ ಕೂಟ ನಡೆಯಿತು. ಕೊಡವ ಸಂಪ್ರದಾಯದ ದುಡಿಕೊಟ್ಟ್ ನೊಂದಿಗೆ ಸಭಾಂಗಣಕ್ಕೆ ತೆರಳಲಾಯಿತು.  ಪುರುಷ, ಮಹಿಳೆಯರಿಗೆ ಹಾಗೂ ದಂಪತಿಗಳಿಗೆ ವಿವಿಧ ಮನೋರಂಜನಾ ಕ್ರೀಡೆಯನ್ನು ಆಯೋಜಿಸಲಾಗಿತ್ತು. ಮಹಿಳೆಯರ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಸಮಾಜದ ಅಧ್ಯಕ್ಷರಾದ ಮುಳ್ಳಂಡ ರತ್ತುಚಂಗಪ್ಪ ಮಾತನಾಡಿ, ಕೊಡವ ಜನಾಂಗ ಉಳಿವು ಐನ್ ಮನೆಯಿಂದಲೇ ಪ್ರಾರಂಭಗೊಳ್ಳಬೇಕು. ಒಡಹುಟ್ಟಿದ ಸಹೋದರು, ಕುಟುಂಬದವರು ಒಗ್ಗಟ್ಟಾಗಿದ್ದಾಗ ಮಾತ್ರ‌ವೇ ಕೊಡವರ ಉಳಿವು ಸಾಧ್ಯವೆಂದರು. ಎಲ್ಲರು ಒಗ್ಗಟ್ಡಿನಿಂದ ಸಮಾಜದ ಅಭಿವೃದ್ಧಿಗೆ ಸಹಕರಿಸ ಬೇಕೆಂದರು. ನಿರ್ದೇಶಕರಾದ ಬಟ್ಟೀರ ರಕ್ಷುಕಾಳಪ್ಪ ಪುತ್ತರಿ ಹಬ್ಬದ ವಿಶೇಷತೆಯ ಬಗ್ಗೆ ವಿವರಿಸಿದರು‌. ನಂತರ ಕ್ರೀಡಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.  ಸಮಾಜದ ಉಪಾಧ್ಯಕ್ಷ ಬಿದ್ದಂಡ ಮಾದಯ್ಯ, ಕಾರ್ಯದರ್ಶಿ ಪುತ್ತರಿರ ಕಾಳಯ್ಯ, ಜಂಟಿಕಾರ್ಯದರ್ಶಿ ಮುಳ್ಳಂಡ ಶೋಭಾಚಂಗಪ್ಪ, ಖಜಾಂಚಿ ಕೆಚ್ಚೆಟ್ಟೀರ ರತಿ ಕಾರ್ಯಪ್ಪ, ಜಂಟಿ ಕಾರ್ಯದರ್ಶಿ ಐಚೆಟ್ಟೀರ ಮಾಚಯ್ಯ, ಕಾನೂನು ಸಲಹೆಗಾರರಾದ ಕಡೇಮಡ…

Read More

ವಿರಾಜಪೇಟೆ ಡಿ.29 NEWS DESK : ವಿರಾಜಪೇಟೆ ತಾಲ್ಲೂಕಿನ ಅರೇಮೇರಿ ಎಸ್‍ಎಂಎಸ್ ವಿದ್ಯಾಪೀಠ ಶಾಲೆಯಲ್ಲಿ ವಸುದೈವ ಕುಟುಂಬಕಂ ಎಂಬ ದ್ಯೇಯ ವಾಕ್ಯದಡಿ ಶಾಲಾ ವಾರ್ಷಿಕೋತ್ಸವ ಹಾಗೂ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಶಾಲಾ ಮೈದಾನದಲ್ಲಿ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಗಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು, ವಸುದೈವ ಕುಟುಂಬಕಂ ಎಂಬ ಧ್ಯೇಯ ವಾಕ್ಯದೊಂದಿಗೆ ನಡೆಯುತ್ತಿರುವ ಈ ವಾರ್ಷಿಕೋತ್ಸವವು, ಸಂಸ್ಥೆಯ ವಿಶಾಲ ಮನೋಭಾವ ಹಾಗೂ ಧ್ಯೇಯವನ್ನು ಸಾರುತ್ತದೆ ಹಾಗೂ ಪ್ರಪಂಚವೇ ಒಂದು ಕುಟುಂಬ ಎಂದು ಸಾರುವ ಈ ಧ್ಯೇಯ ವಾಕ್ಯವು ನಮ್ಮೆಲ್ಲರ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ದಶಕಗಳಿಂದ ಅರಮೇರಿ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳಿಗೆ ಉತ್ತಮ ರೀತಿಯಲ್ಲಿ ಸೌಲಭ್ಯವನ್ನು ಒದಗಿಸುತ್ತ ವಿದ್ಯಾರ್ಜನೆ ಮಾಡುತ್ತಾ ಬಂದಿದೆ. ಇಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳು ಈಗಾಗಲೇ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಹೆಸರನ್ನು ಪಡೆದು, ನಾಡಿನ ಒಳಿತಿಗಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಸಂತೋಷ ವ್ಯಕ್ತಪಡಿಸಿದರು. ಇಲ್ಲಿ ವಿದ್ಯಾರ್ಜನೆ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ…

Read More

ಮಡಿಕೇರಿ ಡಿ.29 NEWS DESK :  ಕೊಡಗು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ 27ನೇ ವಾರ್ಷಿಕ ಮಹಾಸಭೆ ಮತ್ತು ನಿರಂತರ ಕಲಿಕಾ ಕಾರ್ಯಕ್ರಮ ಅಂಬೇಕಲ್ ಜೀವನ್ ಕುಶಾಲಪ್ಪ ಅಧ್ಯಕ್ಷತೆಯಲ್ಲಿ ಮಡಿಕೇರಿಯ ಕೂಟುಹೊಳೆಯಲ್ಲಿರುವ ಆಹನ್ ಹಿಲ್ಸ್ ಸಭಾಂಗಣದಲ್ಲಿ ನಡೆಯಿತು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸದಸ್ಯರು ನಿರಂತರ ಕಲಿಕಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಿರಂತರ ಕಲಿಕಾ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷ ಅಂಬೇಕಲ್ ಕುಶಾಲಪ್ಪ ಮಾತನಾಡಿ , ಔಷಧ ನಿಯಂತ್ರಣ ಇಲಾಖೆ ಸಾರ್ವಜನಿಕ ಹಿತದೃಷ್ಟಿಯಿಂದ ಹೊರ ತರುತ್ತಿರುವ ಹೊಸ ಕಾನೂನುಗಳ ಬಗ್ಗೆ ಸೂಕ್ತರೀತಿಯಲ್ಲಿ ಅರಿತುಕೊಳ್ಳುವುದರ ಮೂಲಕ ಕಾನೂನು ಪಾಲನೆ ಅತ್ಯಗತ್ಯ ಎಂದು ಹೇಳಿದರು. ಇತ್ತೀಚಿನ ದಿನಗಳಲ್ಲಿ ರೋಗ ನಿರೋಧಕ (Antibiotics) ಔಷಧಗಳು ದುರ್ಭಳಕೆಯಾಗುತ್ತಿರುವ ಬಗ್ಗೆ ಅಲ್ಲಲ್ಲಿ ವರದಿಗಳು ಬರುತ್ತಿದ್ದು ಆ ಬಗ್ಗೆ ಜನಜಾಗೃತಿ ಮತ್ತು ನಾರ್ಕೋಟಿಕ್ ( ಅಮಲು ಭರಿಸುವ ಔಷಧಗಳು) ಔಷಧಗಳ ಬಗ್ಗೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಪ್ರಯತ್ನಕ್ಕೆ ಔಷಧಿ ವ್ಯಾಪಾರಸ್ಥರು ಮುಂದಾಗಬೇಕು,  ಸಾರ್ವಜನಿಕರಿಗೆ ಮತ್ತು ರೋಗಿಗಳಿಗೆ…

Read More

ಮಡಿಕೇರಿ ಡಿ.29 NEWS DESK : ಕನ್ನಡ ನಾಡು ಹಾಗೂ ಭಾಷೆಗೆ ಅಪಾರ ಕೊಡುಗೆ ನೀಡಿರುವ ರಾಷ್ಟ್ರಕವಿ ಕುವೆಂಪು ಅವರ ಈಗಿರುವ ಪ್ರತಿಮೆ ಜಾಗದಲ್ಲಿ ಕಂಚಿನ ಪ್ರತಿಮೆ ನಿರ್ಮಾಣ ಮಾಡುವಂತಾಗಬೇಕು ಎಂದು ಜಿ.ಪಂ.ಮಾಜಿ ಅಧ್ಯಕ್ಷರು ಹಾಗೂ ಕುವೆಂಪು ಕುಟುಂಬದ ಸಂಬಂಧಿಕರಾದ ಕೆ.ಪಿ.ಚಂದ್ರಕಲಾ ಅವರು ಕೋರಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ರಾಷ್ಟ್ರಕವಿ ಕುವೆಂಪುರವರ ಜನ್ಮದಿನದ ಪ್ರಯುಕ್ತ ನಡೆದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕನ್ನಡ ಭಾಷೆಯಲ್ಲಿ ಜ್ಞಾನಪೀಠ ಪ್ರಶಸ್ತಿ ಪಡೆದ ಮೊದಲ ಕವಿ ಕುವೆಂಪು ಅವರ ದೊಡ್ಡ ಕಂಚಿನ ಪ್ರತಿಮೆಯನ್ನು ನಿರ್ಮಿಸಬೇಕು ಎಂದು ಅವರು ಮನವಿ ಮಾಡಿದರು. ಕುವೆಂಪು ಅವರ ಮಂತ್ರ ಮಾಂಗಲ್ಯ ಸರಳ ವಿವಾಹವನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಇದರಿಂದ ಉತ್ತಮ ಬದುಕು ಕಾಣಬಹುದು. ಕುವೆಂಪು ಅವರ ರಾಮಾಯಣ ದರ್ಶನಂ, ಮಲೆಗಳಲ್ಲಿ ಮದುಮಗಳು ಸೇರಿದಂತೆ ಹಲವು ಕೃತಿಗಳನ್ನು ಅಧ್ಯಯನ ಮಾಡಬೇಕು. ಮುಂದಿನ ಬಾರಿ ಕುಶಾಲನಗರದಲ್ಲಿ ಕಾರ್ಯಕ್ರಮ ಆಯೋಜಿಸಬೇಕು…

Read More

ಮಡಿಕೇರಿ ಡಿ.29 NEWS DESK : ವಸ್ತುಗಳು ಮತ್ತು ತಂತ್ರಜ್ಞಾನಗಳಲ್ಲಿನ ಪ್ರಗತಿಗಳು: ಉಷ್ಣ, ಯಾಂತ್ರಿಕ ಮತ್ತು ಕ್ರಯೋಜೆನಿಕ್ ಅನ್ವಯಿಕೆಗಳು” ಎಂಬ ವಿಷಯದ ಕುರಿತು 6 ದಿನಗಳ AICTE ಪ್ರಾಯೋಜಿತ ಆಫ್‌ಲೈನ್  ATAL ಫ್ಯಾಕಲ್ಟಿ ಅಭಿವೃದ್ಧಿ ಕಾಯಾ೯ಗಾರವನ್ನು ಪೊನ್ನಂಪೇಟೆಯ ಕೂರ್ಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗವು ಸೋಮವಾರ ಆಯೋಜಿಸಿತ್ತು.  ಉದ್ಘಾಟನಾ ಅಧಿವೇಶನವು ಬೆಳಗಿಸುವುದರೊಂದಿಗೆ ಪ್ರಾರಂಭವಾಯಿತು. ಮುಖ್ಯ ಅತಿಥಿಯಾಗಿದ್ದ ಕಾನ್ಪುರದ ಐಐಟಿ ಯ ಪ್ರಾಧ್ಯಾಪಕ ಡಾ. ಕಾಂತೇಶ್ ಬಲಾನಿ ವೃತ್ತಿಪರ ಜೀವನದಲ್ಲಿ ನೈತಿಕತೆ, ಸಮಗ್ರತೆ, ದೃಷ್ಟಿಕೋನ, ಸಹಾನುಭೂತಿ ಮತ್ತು ನೈತಿಕ ನಿರ್ಧಾರ ತೆಗೆದುಕೊಳ್ಳುವಿಕೆಯನ್ನು ಒತ್ತಿ ಹೇಳುವ ಮುಖ್ಯ ಭಾಷಣ ಮಾಡಿದರು. ಅಧ್ಯಕ್ಷೀಯ ಭಾಷಣದಲ್ಲಿ, ಕೊಡವ ಶಿಕ್ಷಣ ಸಂಘದ ಅಧ್ಯಕ್ಷ ಡಾ. ಎಂ. ಸಿ. ಕಾರಿಯಪ್ಪ , ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮಗಳ ಹೆಚ್ಚುತ್ತಿರುವ ಮಹತ್ವದ ಬಗ್ಗೆ ಮಾಹಿತಿ ನೀಡಿ, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳಿಗೆ ನೆಟ್‌ವರ್ಕಿಂಗ್, ಮಾನ್ಯತೆ ಮತ್ತು ಒಟ್ಟಾರೆ ಶೈಕ್ಷಣಿಕ ಬೆಳವಣಿಗೆಯನ್ನು ಹೆಚ್ಚಿಸುವಲ್ಲಿ ಅವುಗಳ ಪಾತ್ರವನ್ನು ಅವರು ವಿವರಿಸಿದರು. ಅಸೋಸಿಯೇಟ್ ಪ್ರೊಫೆಸರ್ ಮತ್ತು…

Read More

ಮಡಿಕೇರಿ.ಡಿ.29 NEWS DESK : ಮೇಕೇರಿಯ ಶ್ರೀ ಗೌರಿಶಂಕರ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವವು ಡಿ.30 ರಂದು ನಡೆಯಲಿದೆ. ವಾರ್ಷಿಕೋತ್ಸವದ ಅಂಗವಾಗಿ ಬೆಳಿಗ್ಗೆ 8 ಗಂಟೆಗೆ ಗಣಪತಿ ಹೋಮ, 11 ಗಂಟೆಗೆ ಅದಿವಾಸ ಹೋಮ, ಕಲಶ ಪೂಜೆ, ಕಲಶ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ ಎಂದು ದೇವಾಲಯದ ಪ್ರಮುಖರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಡಿ.29 NEWS DESK : ಕನ್ನಡ ಸಾಹಿತ್ಯವು ಸಮಾಜದ ಒಳನೋವಿಗೆ ಸ್ಪಂದಿಸುವ ಸಂವೇದನಾಶೀಲ ಶಕ್ತಿ. ಅದು ವ್ಯಕ್ತಿಯ ಮನೋವಿಕಾಸಕ್ಕೂ, ಸಮೂಹದ ಸಾಂಸ್ಕೃತಿಕ ಬೆಳವಣಿಗೆಗೂ ಕಾರಣವಾಗುತ್ತದೆ ಎಂದು ಕಾರ್ಕಳ ತಾಲೂಕು 21ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸಿದ್ದಾಪುರ ವಾಸುದೇವ ಭಟ್ ಅಭಿಪ್ರಾಯಪಟ್ಟರು. ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲ್ಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಹಿತ್ಯವು ಮನುಷ್ಯನನ್ನು ಮನುಷ್ಯನಿಗೆ ಹತ್ತಿರ ಮಾಡುವ ಸಾಧನವಾಗಿದೆ ಎಂದರು. ಜೀವನದ ಕಠಿಣ ಅನುಭವಗಳಿಗೆ ಅರ್ಥ ನೀಡುವ ಶಕ್ತಿ ಸಾಹಿತ್ಯಕ್ಕಿದೆ. ಸಮಾಜದಲ್ಲಿ ಒಳ್ಳೆಯ ಮೌಲ್ಯಗಳನ್ನು ಬೆಳೆಸುವಲ್ಲಿ ಬರಹಗಾರರ ಪಾತ್ರ ಮಹತ್ವದ್ದೆಂದು ಹೇಳಿದರು. ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್, ಸಾಹಿತ್ಯ ಸಮ್ಮೇಳನಗಳು ಆತ್ಮಾವಲೋಕನಕ್ಕೆ ಅವಕಾಶ ನೀಡಬೇಕು ಎಂದು ಹೇಳಿದರು. ಇತ್ತೀಚಿನ ದಿನಗಳಲ್ಲಿ ಸಣ್ಣ ವಿಷಯಗಳು ಹೆಚ್ಚಿನ ಗಮನ ಸೆಳೆಯುತ್ತಿರುವುದು ಗಮನಾರ್ಹ. ಆದರೆ ಒಂದು ಸಾಲಿನ ಸಾಹಿತ್ಯವೂ ಜನಮನದಲ್ಲಿ ದೊಡ್ಡ ಅಲೆ ಎಬ್ಬಿಸಬಲ್ಲ ಶಕ್ತಿ ಹೊಂದಿದೆ…

Read More

ಮಡಿಕೇರಿ NEWS DESK ಡಿ.29 : ಕೊಡವ ಹಾಕಿ ಅಕಾಡೆಮಿ ವತಿಯಿಂದ ಮೂರ್ನಾಡಿನ ಬಾಚೆಟ್ಟೀರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ‘ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ’ ಯಲ್ಲಿ ಚೆಪ್ಪುಡಿರ ಮತ್ತು ಕುಲ್ಲೇಟಿರ ತಂಡಗಳು ಫೈನಲ್ ಪ್ರವೇಶಿಸಿವೆ. ಡಿ.30 ರಂದು ಮೂರ್ನಾಡಿನ ಬಾಚೆಟ್ಟೀರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ರೋಚಕ ಅಂತಿಮ ಪಂದ್ಯ ನಡೆಯಲಿದೆ. ಇಂದು ನಡೆದ ಸೆಮಿಫೈನಲ್ ನಲ್ಲಿ ಮಂಡೇಪಂಡ ಮತ್ತು ಚೆಪ್ಪುಡಿರ ನಡುವಿನ ಪಂದ್ಯದಲ್ಲಿ ಚೆಪ್ಪುಡಿರ ತಂಡ 4-3 ಗೋಲುಗಳ ಅಂತರದಲ್ಲಿ ಜಯ ದಾಖಲಿಸಿತು. ಚೆಪ್ಪುಡಿರ ಚೇತನ್ ಎರಡು, ಪ್ರಣವ್ ಹಾಗೂ ಮಾದಪ್ಪ ತಲಾ ಒಂದು ಗೋಲು ಬಾರಿಸಿದರು. ಮಂಡೇಪಂಡ ಪರ ದಿಲನ್ ದೇವಯ್ಯ ಎರಡು ಹಾಗೂ ಚಂದನ್ ಕಾರ್ಯಪ್ಪ ಒಂದು ಗೋಲು ದಾಖಲಿಸಿದರು. ಕುಲ್ಲೇಟಿರ ಮತ್ತು ಕುಪ್ಪಂಡ ತಂಡಗಳು ನಿಗಧಿತ ಅವಧಿಯಲ್ಲಿ ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ನಂತರ ನಡೆದ ಶೂಟ್ ಔಟ್ ನಲ್ಲಿ 3-0 ಗೋಲುಗಳ ಅಂತರದಲ್ಲಿ ಕುಲ್ಲೇಟಿರ ಗೆಲುವು ಸಾಧಿಸಿತು. ಮೊದಲ ಪಂದ್ಯದ…

Read More

ಮಡಿಕೇರಿ ಡಿ.29 NEWS DESK : ನೂತನವಾಗಿ ಕೊಡವ ಅಭಿವೃದ್ಧಿ ನಿಗಮ ಸ್ಥಾಪಿಸುವ ಕುರಿತು ಮುಖ್ಯಮಂತ್ರಿಗಳ ಜೊತೆ ವಿಚಾರ ಪ್ರಸ್ತಾಪಿಸಿ ಚರ್ಚಿಸಿದ್ದೇನೆ. ಇದಕ್ಕೆ ಮುಖ್ಯಮಂತ್ರಿಗಳು ಪೂರಕವಾಗಿ ಸ್ಪಂದಿಸಿದ್ದಾರೆ. ಈ ನಿಟ್ಟಿನಲ್ಲಿ ಕೊಡವ ಅಭಿವೃದ್ಧಿ ನಿಗಮ ಶೀಘ್ರದಲ್ಲೇ ಘೋಷಣೆಯಾಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿಗಳ  ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ. ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತಂತೆ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ನೇತೃತ್ವದ ಯುನೈಟೆಡ್ ಕೊಡವ ಆರ್ಗನೈಸೇಷನ್ – ಯುಕೊ ಸಂಘಟನೆಯ ನಿಯೋಗವು ಶಾಸಕ ಪೊನ್ನಣ್ಣ ಅವರನ್ನು ವಿರಾಜಪೇಟೆಯ ಅವರ ಗೃಹ ಕಚೇರಿಯಲ್ಲಿ ಭೇಟಿಮಾಡಿ ಚರ್ಚಿಸಿತು. ಈ ಸಂದರ್ಭ ಮಾತನಾಡಿದ ಶಾಸಕರು, ಈಗಾಗಲೇ ಯುಕೊ ಸಂಘಟನೆಯ ಮಂಜು ಚಿಣ್ಣಪ್ಪನವರು ಈ ಕುರಿತು ಹೋರಾಟ ನಡೆಸುತ್ತಾ ಬಂದಿದ್ದಾರೆ. ನನ್ನೊಂದಿಗೂ ಹಲವು ಬಾರಿ ಚರ್ಚಿಸಿದ್ದಾರೆ. ಹಾಗೆಯೇ ನನ್ನ ಚುನಾವಣಾ ಪ್ರಣಾಳಿಕೆಯಲ್ಲಿಯೂ ಕೊಡವ ಅಭಿವೃದ್ಧಿ ನಿಗಮ ಸ್ಥಾಪಸುವ ಭರವಸೆ ನೀಡಲಾಗಿತ್ತು. ಹೀಗಾಗಿ ಮುಖ್ಯಮಂತ್ರಿಗಳೊಂದಿಗೆ ವಿಷಯ ಪ್ರಸ್ತಾಪಿಸಿ ಕೊಡವ ಜನಾಂಗಕ್ಕೆ ನೂತನವಾಗಿ ನಿಗಮ…

Read More