ಲೇಖಕ: admin

ಸುಂಟಿಕೊಪ್ಪ ಫೆ.27 : ಗ್ರಾಮೀಣ ಪ್ರತಿಭೆಗಳು ಕ್ರೀಡಾಕೂಟವನ್ನು ಸದುಪಯೋಗಪಡಿಸಿಕೊಂಡಾಗ ಮಾತ್ರ ಕಾರ್ಯಕ್ರಮದ ಯಶಸ್ವಿಗೆ ದುಡಿದವರ ಶ್ರಮ ಸಾರ್ಥವಾಗುತ್ತದೆ ಎಂದು ನಾಕೂರು ಕಾನ್‍ಬೈಲ್ ಗ್ರಾ.ಪಂ ಅಧ್ಯಕ್ಷ ಮಂದೋಡಿ ಸಿ.ಜಗನ್ನಾಥ ತಿಳಿಸಿದರು. ನಾಕೂರು ಕಾನ್‍ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್ ವತಿಯಿಂದ ಪ್ರಾಥಮಿಕ ಶಾಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 23ನೇ ಕ್ರೀಡಾಕೂಟದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಕ್ರೀಡಾಕೂಟಗಳಿಗೆ ಹೆಚ್ಚು ಪ್ರಾಶಸ್ತ್ಯ ನೀಡಲಾಗಿದ್ದು, ಗ್ರಾಮೀಣ ಪ್ರತಿಭೆಗಳನ್ನು ಅವುಗಳನ್ನು ಸದುಪಯೋಗ ಪಡಿಸಿಕೊಂಡು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಬೇಕು ಎಂದರು. ಕ್ರೀಡಾಪಟುಗಳಿಗೆ ಗ್ರಾ.ಪಂ ವತಿಯಿಂದ ಎಲ್ಲಾ ರೀತಿಯ ಸಹಾಯ ಮತ್ತು ಸಹಕಾರವನ್ನು ನೀಡಿದ್ದು, ಗ್ರಾ.ಪಂ ಅನುದಾನದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಎಲ್ಲಿಯೂ ಕೂಡ ತಾರತಮ್ಯ ಮಾಡುವ ಪ್ರಶ್ನೆಯೇ ಇಲ್ಲ ಎಂದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ವಿ.ಪಿ.ಶಶಿಧರ್, 23 ವರ್ಷಗಳಿಂದ ಯುವಕ ಸಂಘ ಕ್ರೀಡಾಕೂಟವನ್ನು ಆಯೋಜಿಸುವ ಮೂಲಕ ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ನಾಯಕತ್ವದ ಗುಣ ಸಂಘಟನೆಗೆ ಬಲ…

Read More

ಮಡಿಕೇರಿ ಫೆ.27 : ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಕೂಡ ಪ್ರಬಲ ಆಕಾಂಕ್ಷಿಯಾಗಿದ್ದೇನೆ, ಆದರೆ ಪಕ್ಷ ಯಾರಿಗೆ ಸ್ಪರ್ಧಿಸಲು ಅವಕಾಶ ನೀಡಿದರೂ ಶಿಸ್ತಿನ ಸಿಪಾಯಿಯಂತೆ ಕಾಂಗ್ರೆಸ್ ಗೆಲುವಿಗಾಗಿ ಕೆಲಸ ಮಾಡುತ್ತೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ನಾನು ಕಾಂಗ್ರೆಸ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತೆಯಾಗಿ ಕಳೆದ 39 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದೇನೆ. ಇದರ ಪರಿಣಾಮವಾಗಿ ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ವಿಧಾನ ಪರಿಷತ್ ಗೂ ನನ್ನನ್ನು ಕಳುಹಿಸಿಕೊಡಲಾಗಿದೆ. ಪ್ರಸ್ತುತ ವಿಧಾನಸಭೆಗೆ ನಾನೂ ಕೂಡ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದರು. ನಾನು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿರುವುದರಿಂದ ಯಾರೇ ಅಭ್ಯರ್ಥಿಯಾದರು ಗೆಲುವಿಗಾಗಿ ಶ್ರಮಿಸುತ್ತೇನೆ ಎಂದು ತಿಳಿಸಿದರು.

Read More

ಮಡಿಕೇರಿ ಫೆ.27 : ಸರ್ಕಾರ ಮತ್ತು ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಕೊಡಗು ಜಿಲ್ಲೆಯಲ್ಲಿ ಹುಲಿಗಳ ಉಪಟಳ ಹೆಚ್ಚಾಗುತ್ತಿದೆ. ಕಳೆದ 2 ವರ್ಷಗಳಲ್ಲಿ 6 ಮಾನವಜೀವ ಹಾನಿ ಮತ್ತು ಅನೇಕ ಜಾನುವಾರುಗಳು ಸಾವನ್ನಪ್ಪಿದ್ದರೂ ಎಚ್ಚೆತ್ತುಕೊಳ್ಳದ ಸರ್ಕಾರ ಕೊಡಗಿನ ಜನರ ಜೀವಕ್ಕೆ ಬೆಲೆ ಇಲ್ಲದಂತೆ ವರ್ತಿಸುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಡಾನೆಗಳು ತೋಟಗಳನ್ನೇ ಆವಾಸ ಸ್ಥಾನ ಮಾಡಿಕೊಂಡಿದ್ದರೆ, ಹುಲಿಗಳು ಮನುಷ್ಯರನ್ನೇ ಆಹಾರ ಮಾಡಿಕೊಳ್ಳುತ್ತಿವೆ. ಈ ಬಗ್ಗೆ ಸರ್ಕಾರಕ್ಕೆ ಮಾಹಿತಿ ಇದ್ದರೂ ಯಾವುದೇ ಕ್ರಮಕ್ಕೆ ಮುಂದಾಗದೇ ಇರುವುದು ದುರಂತ. ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ಅರಣ್ಯ ಇಲಾಖೆಗೆ ಕೋಟ್ಯಾಂತರ ಅನುದಾನ ಬರುತ್ತದೆ. ಆದರೆ ವನ್ಯಜೀವಿಗಳು ಆಹಾರವನ್ನು ಅರಸಿ ಜನವಾಸದ ಪ್ರದೇಶಗಳಿಗೆ ದಾಳಿ ಇಡುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವಿದೆ. ಕಳೆದ 25 ವರ್ಷಗಳಿಂದ ಬಿಜೆಪಿಯವರೇ ಶಾಸಕರುಗಳಾಗಿದ್ದಾರೆ. ಸಂಸದರು ಬಿಜೆಪಿಯವರೇ ಆಗಿದ್ದಾರೆ, ಆದರೆ ಕೊಡಗನ್ನು ಕಾಡುತ್ತಿರುವ…

Read More

ಮಡಿಕೇರಿ ಫೆ.27 :  ಹೊದ್ದೂರು ಗ್ರಾ.ಪಂ ಗೆ ಒಳಪಡುವ ಪಾಲೆಮಾಡು ಗ್ರಾಮಕ್ಕೆ ಸಮಪರ್ಕವಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ ಎಂದು ಆರೋಪಿಸಿ ಬಹುಜನ ಕಾರ್ಮಿಕ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಮೂರ್ನಾಡಿನಲ್ಲಿ ಪ್ರತಿಭಟನೆ ನಡೆಸಿದರು. ಮೂರ್ನಾಡಿನ ಸೆಸ್ಕ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಜಮಾಯಿಸಿದ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಬೇಡಿಕೆಯ ಈಡೇರಿಕೆಗಾಗಿ ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ  ಸಂಘದ ಸದ್ಯಸ  ಮೊಣಪ್ಪ, ಈ ಭಾಗದಲ್ಲಿ 300ಕ್ಕೂ ಹೆಚ್ಚು ಕುಟುಂಬಗಳು ನೆಲೆಸಿದ್ದು, ದಿನವಿಡೀ ವಿದ್ಯುತ್ ಕಡಿತದಿಂದ ಶಾಲಾ ವಿದ್ಯಾರ್ಥಿಗಳಿಗೆ  ಸಮಸ್ಯೆ ಎದುರಾಗಿದೆ. ಕುಡಿಯುವ ನೀರು ಸರಬರಾಜಿಗೆ ಕೂಡ ತೊಂದರೆಯಾಗುತ್ತಿದ್ದು, ಜನರು ಸಂಕಷ್ಟದ ಬದುಕನ್ನು ಎದುರಿಸುವಂತಾಗಿದೆ ಎಂದರು. ತಕ್ಷಣವೇ ವಿದ್ಯುತ್ ಕಡಿತ  ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿದರು.  ಹೊದ್ದೂರು  ಗ್ರಾ.ಪಂ ಅಧ್ಯಕ್ಷರಾದ ಕುಸುಮವತಿ, ಪ್ರಮುಖರಾದ ಆನಂದ ಮತ್ತಿತರು ಪಾಲ್ಗೊಂಡಿದ್ದರು. ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಬೇಡಿಕೆಯ  ಮನವಿ ಪತ್ರವನ್ನು  ಸೆಸ್ಕ್ ಅಭಿಯಂತರ ಪ್ರಕಾಶ್ ಅವರಿಗೆ ಸಲ್ಲಿಸಿದರು.  

Read More

ಮಡಿಕೇರಿ ಫೆ.27 : ಕೊಡಗು ಜಿಲ್ಲಾ ಜೆಡಿಎಸ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಮೋಹನ್ ಮೌರ್ಯ ಆಯ್ಕೆಯಾಗಿದ್ದಾರೆ. ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರ ಆದೇಶದ ಮೇರೆಗೆ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಮುಖಂಡರ ಸಮ್ಮುಖದಲ್ಲಿ ಅಧಿಕಾರ ಹಸ್ತಾಂತರಿಸಲಾಯಿತು. ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಜವಾಬ್ದಾರಿ ವಹಿಸುವಂತೆ ಕೆ.ಎಂ.ಗಣೇಶ್ ತಿಳಿಸಿದ್ದಾರೆ.

Read More

ಮಡಿಕೇರಿ ಫೆ.27 : ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್ ಹೈವಗೆ ಕಾವೇರಿ ಎಕ್ಸ್‌ಪ್ರೆಸ್ ಹೈವ ಎಂದು ಹೆಸರಿಡಲು ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅವರು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರಿಗೆ ಮನವಿ ಪತ್ರ ಬರೆದಿದ್ದಾರೆ. ರಾಷ್ಟ್ರೀಯ ಹೆದ್ದಾರಿ 275 ಬೆಂಗಳೂರು, ಮೈಸೂರು, ಮಡಿಕೇರಿಗೆ ಸಂಪರ್ಕಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿಯಾಗಿದೆ. ಈಗಾಗಲೇ ಮೈಸೂರು, ಬೆಂಗಳೂರು ತಲುಪುವ ಮಾರ್ಗದ ಕಾಮಗಾರಿ ಪೂರ್ಣಗೊಂಡಿದೆ. ಕಾವೇರಿ ನದಿಯು ಕೊಡಗಿನಲ್ಲಿ ಹುಟ್ಟಿ ತಮಿಳುನಾಡು ಸೇರಿದಂತೆ ಮೈಸೂರು ಬೆಂಗಳೂರು ಹಾಗೂ ರಾಜ್ಯದ ಇತರ ಭಾಗಗಳಿಗೆ ನೀರಾವರಿ ಸೌಲಭ್ಯವನ್ನು ಒದಗಿಸುತ್ತಿದೆ. ಕೊಡಗು ಸೇರಿದಂತೆ ಈ ಭಾಗದ ಎಲ್ಲಾ ಜನರಿಗೆ ಕಾವೇರಿ ನದಿಯು ಕಾವೇರಿ ಮಾತೆ ಎಂದು ಪೂಜ್ಯ ಭಾವನೆ ಇರುತ್ತದೆ. ಹಾಗಾಗಿ ಜನರ ಪೂಜ್ಯ ಭಾವನೆ ಗುರುತಿಸಲು ಕನ್ನಡ ನಾಡಿಗೆ ಅನ್ನದಾತೆಯಾಗಿರುವ ಕೊಡಗಿನ ಕಾವೇರಿ ಮಾತೆಯ ಹೆಸರನ್ನು ಹೆದ್ದಾರಿಗೆ ಇಡಬೇಕೆಂದು ಮನವಿಯಲ್ಲಿ ಕೋರಿದ್ದಾರೆ.

Read More

ಚೆಯ್ಯಂಡಾಣೆ ಫೆ.27 : ನರಿಯಂದಡದ ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಚೇಲಾವರದ ಶ್ರೀನಿವಾಸ ಸ್ವಸಹಾಯ ಸಂಘದ ಮಹಿಳೆಯರು ಸ್ಥಳೀಯ ಗ್ರಾಮಸ್ಥರ ಸಹಕಾರದೊಂದಿಗೆ  ಸ್ವಚ್ಛತಾ ಶ್ರಮದಾನ ನಡೆಸಿದರು. ನರಿಯಂದಡ ಗ್ರಾ.ಪಂ ಗೆ ಒಳಪಟ್ಟ ಚೇಲಾವರ ಗ್ರಾಮದ ಪೊನ್ನೋಲ, ಪುದಿಯೋದಿ ದೇವಾಲಯಕ್ಕೆ ತೆರಳುವ ರಸ್ತೆ  ಬದಿಯ ಕಾಡುಗಳನ್ನು  ಕಡಿದು ಸ್ವಚ್ಛಗೊಳಿಸದರು. ಈ ಸಂದರ್ಭ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳಾದ  ಬಿ.ಕೆ.ವಸಂತಿ, ಪಿ.ಎನ್.ಜಯ ಮಣಿ , ಎಚ್.ಎಂ.ಗಾಯತ್ರಿ ,ಎಚ್.ಎ.ಬೆಳ್ಳಿಯಮ್ಮ , ಸವಿತಾ, ಸತೀಶ್, ರಮೇಶ್, ಲೋಕೇಶ್, ಮೈಕಲ್,  ಗ್ರಾಮಸ್ಥರು ಮತಿತ್ತರರು ಇದ್ದರು. ವರದಿ : ಅಶ್ರಫ್

Read More

ಮಡಿಕೇರಿ ಫೆ.27 :  16ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಮಾ.4 ಮತ್ತು 5 ರಂದು ಗೋಣಿಕೊಪ್ಪಲಿನ ಸರ್ಕಾರಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ನಡೆಯಲಿದೆ‌. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಮೈಸೂರಿನ ಯುವರಾಜ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕರಾದ  ಡಾ.ಎಂ.ಪಿ.ರೇಖಾ ಅವರನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಸಮ್ಮೇಳನದ ಸ್ವಾಗತ ಸಮಿತಿಯ ಮಹಾಪ್ರಧಾನ ಕಾರ್ಯದರ್ಶಿ ಕೋಳೆರ ದಯಾ ಚಂಗಪ್ಪ, ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕುಲ್ಲಚಂಡ ಪ್ರಮೋದ್ ಗಣಪತಿ, ಹೋಬಳಿ ಗೌರವ ಕಾರ್ಯದರ್ಶಿ ಟಿ.ಬಿ.ಜೀವನ್, ಕೋಶಾಧಿಕಾರಿ ಎಂ.ಕೆ.ಚಂದನ್ ಕಾಮತ್, ಮೈಸೂರಿನ ಡಾ. ಎಂ.ಪಿ.ರೇಖಾ ಅವರ ಮನೆಯಲ್ಲಿ  ಸನ್ಮಾನಿಸಿ ಸರ್ವಾಧ್ಯಕ್ಷ ಸ್ಥಾನ ವಹಿಸಿಕೊಂಡು ಸಮ್ಮೇಳನವನ್ನು ನಡೆಸಿಕೊಡಲು ವಿನಂತಿಸಿಕೊಂಡರು. ಈ ಸಂದರ್ಭ  ಎಂ.ಪಿ ರೇಖಾ ಅವರು ತಾನು ಹುಟ್ಟಿ ಬೆಳೆದು ವಿದ್ಯಾಭ್ಯಾಸ ಮುಗಿಸಿದ ಊರಿನಲ್ಲಿ ನನಗೆ ಸಿಗುತ್ತಿರುವ  ಗೌರವ ತುಂಬ ಖುಷಿ ತಂದಿದೆ ಎಂದರು. ಡಾ. ಎಂ.ಪಿ.ರೇಖಾ ಅವರ ಪುತ್ರಿ ವರ್ಣಾ ಮಾಚಮ್ಮ ಉಪಸ್ಥಿತರಿದ್ದರು.

Read More

ಮಡಿಕೇರಿ ಫೆ.27 : ಕೊಡಗು ಜಿಲ್ಲಾ ವಕ್ಫ್ ಸಲಹಾ ಸಮಿತಿ ವತಿಯಿಂದ ಮಡಿಕೇರಿಯಲ್ಲಿ ವಕ್ಫ್ ಸಮ್ಮಿಟ್ ಕಾರ್ಯಕ್ರಮ ನಡೆಯಿತು. ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಕೆ.ಜಿ.ಬೋಪಯ್ಯ, ಅನ್ವರ್ ನಲಪಾಡಿ ವರದಿ ಜಾರಿಯಾದರೆ ಮುಸ್ಲಿಮರಿಗೆ ಪ್ರಯೋಜನವಾಗುತ್ತದೆ. ಸರ್ವರು ದೇಶದ ಪ್ರಗತಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು. ಶಾಸಕ ಎಂ.ಪಿ.ಅಪ್ಪಚ್ಚ ರಂಜನ್ ಮಾತನಾಡಿ, ಮುಸ್ಲಿಂ ಸಮುದಾಯದಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗುತ್ತಿರುವುದು ಸರಿಯಲ್ಲ. ಈ ನಿಟ್ಟಿನಲ್ಲಿ ಜಾಗೃತಗೊಳ್ಳಬೇಕು, ಬಾಲಕಿಯರಿಗೆ ಶಿಕ್ಷಣ ಕೊಡಿಸುವ ಮೂಲಕ ಸುರಕ್ಷಿತಗೊಳಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೊಡಿಸುವಂತೆ ಕರೆ ನೀಡಿದರು. ವಕ್ಫ್ ಸಲಹಾ ಸಮಿತಿ ಜಿಲ್ಲಾಧ್ಯಕ್ಷ ಅಬ್ದುಲ್ಲ ಹಕೀಂ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಎನ್.ಕೆ.ಮುಹಮ್ಮದ್ ಶಾಫಿ ಸಅದಿ, ವಕ್ಫ್ ಸಲಹಾ ಸಮಿತಿ ಅಧಿಕಾರಿ ಮಹಮ್ಮದ್ ಇರ್ಫಾನ್, ಕೊಡಗು ಜಿಲ್ಲಾ ಸಹಾಯಕ ಖಾಝಿಗಳಾದ ಅಬ್ದುಲ್ಲಾ ಫೈಝಿ, ರಾಜ್ಯ ವಕ್ಫ್ ಮಂಡಳಿಯ ಅಪರ ಕಾರ್ಯನಿರ್ವಹಣಾಧಿಕಾರಿ ಖಾದರ್ ಶಾ, ಸಲಹಾ ಸಮಿತಿ ಉಪಾಧ್ಯಕ್ಷ…

Read More

ಮಡಿಕೇರಿ ಫೆ.27 :   ಸರ್ಕಾರದ ಸಾಧನೆಗಳನ್ನು ರಾಜ್ಯದ ಜನತೆಗೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಸಂಚಲಿಸಲಿರುವ ” ಪ್ರಗತಿ ರಥಯಾತ್ರೆ” ಗೆ  ಮಡಿಕೇರಿಯಲ್ಲಿ ಶಾಸಕ ಕೆ.ಜಿ.ಬೋಪಯ್ಯ ಚಾಲನೆ ನೀಡಿದರು. ಈ ಸಂದರ್ಭ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ರವಿ ಕಾಳಪ್ಪ,  ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ನಗರಸಭಾ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.

Read More