ಮಡಿಕೇರಿ ಫೆ.25 : ಕೊಡಗು ಪತ್ರಕರ್ತರ ಸಂಘದ ವತಿಯಿಂದ ಮಡಿಕೇರಿ ಲಯನ್ಸ್ ಕ್ಲಬ್ ಹಾಗೂ ಮೈಸೂರಿನ ಸುಯೋಗ್ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕೆಪಿಸಿಸಿ ಪ್ರಮುಖರು, ಹೈಕೋರ್ಟಿನ ನಿಕಟಪೂರ್ವ ಅಭಿಯೋಜಕ ಹೆಚ್.ಎಸ್.ಚಂದ್ರಮೌಳಿ ಉದ್ಘಾಟಿಸಿದರು. ಮಡಿಕೇರಿ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಕೊಡಗು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಹೆಚ್.ಆರ್.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಮಂಡೇಪಂಡ.ಪಿ.ಸುನಿಲ್ ಸುಬ್ರಮಣಿ, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ.ಮುರಳೀಧರ್, ಲಯನ್ಸ್ ಕ್ಲಬ್ ಅಧ್ಯಕ್ಷೆ ಕನ್ನಂಡ ಕವಿತ, ಕೊಡಗು ಪತ್ರಕರ್ತರ ಸಂಘದ ಉಪಾಧ್ಯಕ್ಷ ಜಿ.ವಿ.ರವಿಕುಮಾರ್ ಹಾಜರಿದ್ದರು. ಮೌಲ್ಯ ಪ್ರಾರ್ಥಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಸ್ವಾಗತಿಸಿದರು. ಸದಸ್ಯ ರಂಜಿತ್ ಕವಲಪಾರ ನಿರೂಪಿಸಿದರು. ಕ್ಷೇಮಾಭಿವೃದ್ಧಿ ಸಮಿತಿ ಖಜಾಂಚಿ ಕೆ.ತಿಮ್ಮಪ್ಪ ಸರ್ವರನ್ನು ವಂದಿಸಿದರು. ಮೈಸೂರು ಸುಯೋಗ್ ಆಸ್ಪತ್ರೆಯ ಹೃದಯ ತಜ್ಞರು, ಸ್ತ್ರೀರೋಗ ತಜ್ಞರು, ಫಿಜಿಷಿಯನ್ ವೈದ್ಯರುಗಳು ತಪಾಸಣೆ ನಡೆಸಲಿದ್ದಾರೆ. ಇಕೊ ಪರೀಕ್ಷೆ, ಇಸಿಜಿ, ಮಧುಮೇಹ ಹಾಗೂ ರಕ್ತದೊತ್ತಡ ಪರೀಕ್ಷೆ ನಡೆಯಿತು.…
ಲೇಖಕ: admin
ಬೆಂಗಳೂರು ಫೆ.25 : ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ ರೆಡ್ಡಿ ಅವರ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಡಾ. ಸುಧಾಕರ್, ಆನಂದ ಸಿಂಗ್, ಶಾಸಕ ರಾಮಲಿಂಗಾ ರೆಡ್ಡಿ ಹಾಗೂ ಕೆ.ಸಿ.ರೆಡ್ಡಿ ಕುಟುಂಬಸ್ಥರು ಹಾಜರಿದ್ದರು.
ಮಡಿಕೇರಿ ಫೆ.25 : ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಯುವಕರು ಮಾದಕ ವ್ಯಸನಗಳಿಗೆ ಬಲಿಯಾಗುತ್ತಿದ್ದಾರೆ. ಯುವಕರನ್ನು ಮಾದಕ ವಸ್ತುಗಳಿಂದ ದೂರವಿಡಲು ಕ್ರೀಡೆಗಳು ಸಹಕಾರಿಯಾಗಿದೆ ಎಂದು ಮಡಿಕೇರಿ ಕ್ಷೇತ್ರದ ಜೆಡಿಎಸ್ ಸಂಭಾವ್ಯ ಅಭ್ಯರ್ಥಿ ಹಾಗೂ ಸಮಾಜ ಸೇವಕ ನಾಪಂಡ ಮುತ್ತಪ್ಪ ಅಭಿಪ್ರಾಯಪಟ್ಟರು. ಕೊಂಡಂಗೇರಿ ಶಾಲಾ ಮೈದಾನದಲ್ಲಿ ಕೊಂಡಂಗೇರಿ ಕ್ರಿಕೆಟ್ ಪ್ರೀಮಿಯರ್ ಲೀಗ್ -12ನೇ ಆವೃತ್ತಿಯ ಪಂದ್ಯಾವಳಿಯನ್ನು ಉದ್ಘಾಟಿಸಿ ನಾಪಂಡ ಮುತ್ತಪ್ಪ ಮಾತನಾಡಿದರು. ಕ್ರೀಡಾಕೂಟಗಳ ಆಯೋಜನೆಯಿಂದ ಸಮಾಜಕ್ಕೆ ಉತ್ತಮ ಸಂದೇಶ ಸಾರುವಂತಾಗಬೇಕು. ಡ್ರಗ್ಸ್ ಮುಕ್ತ ಅಭಿಯಾನದ ಮೂಲಕ ಕ್ರೀಡಾಕೂಟದಲ್ಲಿ ಕೊಂಡಂಗೇರಿ ಕ್ರಿಕೆಟ್ ಪ್ರೀಮಿಯರ್ ಲೀಗ್ ಆಯೋಜಿಸಿರುವ ಯುವಕರು ಎಲ್ಲರಿಗೂ ಮಾದರಿಯಾಗಿದ್ದಾರೆ. ದುಶ್ಚಟಗಳಿಂದ ಯುವಕರು ದೂರವಿರಬೇಕು. ಡ್ರಗ್ಸ್, ಗಾಂಜಾ,ಮುಂತಾದ ಮಾದಕ ವಸ್ತುಗಳ ವಿರುದ್ಧ ಯುವಕರು ಹೋರಾಟ ಮಾಡಿ,ಸಮಾಜದಿಂದ ಮಾದಕ ವಸ್ತುಗಳನ್ನು ನಿರ್ಮೂಲನೆ ಮಾಡಬೇಕೆಂದು ಜೆಡಿಎಸ್ ಮಡಿಕೇರಿ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಹಾಗೂ ಸಮಾಜ ಸೇವಕ ನಾಪಂಡ ಮುತ್ತಪ್ಪ ಕರೆ ನೀಡಿದರು. ಮಾದಕ ವಸ್ತುಗಳ ವಿರುದ್ಧ ಉಪನ್ಯಾಸವನ್ನು ಸುಲೈಮಾನ್ ಮಾಸ್ಟರ್ ನಡೆಸಿದರು. ಭಾನುವಾರ ಸಂಜೆ ಫೈನಲ್ ಪಂದ್ಯ ನಡೆಯಲಿದ್ದು.…
ಸೋಮವಾರಪೇಟೆ ಫೆ.24 : ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರ ನಡುವಿನ ವಾಕ್ ಸಮರ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಕೋಲಾಹಲವನ್ನು ಸೃಷ್ಟಿಸಿತು. ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದ ಸಭೆಯಿಂದ ಕೆಲವರು ಹೊರನಡೆದರು. ಆಡಳಿತ ಪಕ್ಷದ ಸದಸ್ಯರೇ ಸಮಸ್ಯೆಗಳ ಸರಮಾಲೆಯನ್ನು ಸಭೆಯಲ್ಲಿ ಮಂಡಿಸಿದ ಪ್ರಸಂಗವೂ ನಡೆಯಿತು. ಪಂಚಾಯಿತಿಯಿoದ ಸರಬರಾಜಾಗುತ್ತಿರುವ ಕುಡಿಯುವ ನೀರು ಕಲುಷಿತಗೊಂಡಿದೆ ಎಂಬ ವಿಷಯದಲ್ಲಿ ಚರ್ಚೆ ನಡೆಯುತ್ತಿರುವ ಸಂದರ್ಭ ವಿಪಕ್ಷ ಸದಸ್ಯರ ಹಾಗೂ ಅಧ್ಯಕ್ಷರ ನಡುವೆ ವಾಗ್ದಾದ ನಡೆದು, ವಿಪಕ್ಷದ ಕೆಲವು ಸದಸ್ಯರು ಸಭೆಯನ್ನೇ ಬಹಿಷ್ಕರಿಸಿ ಹೊರ ನಡೆದರು. ಪಂಚಾಯಿತಿ ಅಧ್ಯಕ್ಷ ಪಿ.ಕೆ.ಚಂದ್ರು ಅವರ ಅಧ್ಯಕ್ಷತೆಯಲ್ಲಿ ತಡವಾಗಿ ಸಭೆ ಪ್ರಾರಂಭವಾಗುತ್ತಿದ್ದAತೆ, ವಿಪಕ್ಷ ಸದಸ್ಯ ಜೀವನ್ ಪಂಚಾಯಿತಿ ವಿರುದ್ಧ ದೂರಿನ ಸುರಿಮಳೈಗೈದರು. ಇತರ ವಿಷಯಗಳಲ್ಲಿ ವಿಷಯವನ್ನು ಚರ್ಚಿಸೋಣ, ಅಜೆಂಡದoತೆ ಸಭೆ ನಡೆಸೋಣ ಎಂದು ಅಧ್ಯಕ್ಷರು ಮನವಿ ಮಾಡಿದರು. ಮನವಿಗೆ ಕಿವಿಗೊಡದೆ ಜೀವನ್ ಪಂಚಾಯಿತಿ ಆಡಳಿತ ವೈಖರಿಯನ್ನು ಖಂಡಿಸಿ, ಕಳೆದ ನಾಲ್ಕು ತಿಂಗಳಿನಿoದ ಕಲುಷಿತ ನೀರನ್ನೇ ಸರಬರಾಜು ಮಾಡುತ್ತಿದ್ದಿರಿ,…
ಕುಶಾಲನಗರ, ಫೆ.24 : ಕುಶಾಲನಗರ ತಾಲೂಕು ಮುಳ್ಳುಸೋಗೆ ಗ್ರಾಮದ ಶ್ರೀ ಗೌರಿ ಗಣೇಶ ದೇವಾಲಯ 4ನೇ ವಾರ್ಷಿಕೋತ್ಸವ ಎರಡು ದಿನಗಳ ಕಾಲ ಭಕ್ತಿ ಭಾವಗಳೊಂದಿಗೆ ಶ್ರದ್ಧಾಭಕ್ತಿಯಿಂದ ನಡೆಯಿತು. ವಾರ್ಷಿಕೋತ್ಸವ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರಗಿದವು. ನಂತರ ಮಹಾಮಂಗಳಾರತಿ, ಅನ್ನದಾನ ಕಾರ್ಯಕ್ರಮ ನಡೆಯಿತು . ಕುಶಾಲನಗರ ದೇವಾಲಯಗಳ ಒಕ್ಕೂಟ ಸಮಿತಿಯ ಪ್ರತಿನಿಧಿಗಳು ಫಲ ತಾಂಬೂಲದೊಂದಿಗೆ ಸಾಮೂಹಿಕ ಪೂಜೆಯಲ್ಲಿ ಪಾಲ್ಗೊಂಡರು. ಭಕ್ತಾದಿಗಳ ಸಹಕಾರದೊಂದಿಗೆ ದೇವರಿಗೆ ಅಂದಾಜು 4 ಲಕ್ಷ ರು. ಮೌಲ್ಯದ ಬೆಳ್ಳಿ ಕವಚ ಅರ್ಪಣೆ ಕಾರ್ಯ ನಡೆಯಿತು. ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷರಾದ ಸುಚಿತ್ರ ತಮ್ಮಯ್ಯ, ಉಪಾಧ್ಯಕ್ಷರಾದ ಜ್ಯೋತಿ, ಕಾರ್ಯದರ್ಶಿ ರಾಧಾ, ಖಜಾಂಚಿ ಚಂದ್ರಿಕಾ, ಸಂಚಾಲಕರಾದ ವಿಜಿ ಮತ್ತಿತರರು ಇದ್ದರು.
ಮಡಿಕೇರಿ ಫೆ.24 : ಕೊಡಗು ಜಿಲ್ಲೆಯ ಮಡಿಕೇರಿ ನಗರ ಠಾಣೆ, ವಿರಾಜಪೇಟೆ ನಗರ ಠಾಣೆ, ವಿರಾಜಪೇಟೆ ಗ್ರಾಮಾಂತರ ಠಾಣೆ ಹಾಗೂ ಸಿದ್ದಾಪುರ ಠಾಣೆಗಳಲ್ಲಿ ನಾಲ್ಕು ಪ್ರತ್ಯೇಕ ಅಕ್ರಮ ಗಾಂಜಾ ಪ್ರಕರಣಗಳನ್ನು ಪತ್ತೆ ಮಾಡಿ ಒಟ್ಟು 3.8 ಕೆ.ಜಿ ಗಾಂಜಾ ವಶಪಡಿಸಿಕೊಂಡಿರುವ ಹಾಗೂ ಮಡಿಕೇರಿ ನಗರ ಠಾಣೆಯ 1, ಕುಶಾಲನಗರ ಪಟ್ಟಣ ಠಾಣೆಯ 2 ಕಳ್ಳತನ ಪ್ರಕರಣಗಳನ್ನು ಪತ್ತೆ ಮಾಡಿ ಪತ್ತೆ ಮಾಡಿ ಕಳುವಾಗಿದ್ದ ಒಟ್ಟು 400 ಗ್ರಾಂ ಚಿನ್ನಾಭರಣ ಮತ್ತು ನಗದನ್ನು ವಶಪಡಿಸಿಕೊಂಡು ಉತ್ತಮ ಅಪರಾಧ ಪತ್ತೆ ಕರ್ತವ್ಯ ನಿರ್ವಹಿಸಿರುವ ಪೊಲೀಸ್ ಅಧಿಕಾರಿ, ಸಿಬ್ಬಂದಿ ಮತ್ತು ಶ್ವಾನದಳದ ಸಿಬ್ಬಂದಿಯವರಿಗೆ ಇಂದು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕವಾಯತು ಸಂದರ್ಭದಲ್ಲಿ ಪ್ರಶಂಸನಾ ಪತ್ರ ಹಾಗೂ ನಗದು ಬಹುಮಾನ ನೀಡಿ ಪುರಸ್ಕರಿಸಲಾಯಿತು. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಪೊಲೀಸರ ಕಾರ್ಯಕ್ಷಮತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಮಡಿಕೇರಿ ಫೆ.24 : ಕೊಡಗಿನಲ್ಲಿ ಗಾಂಜಾ ಮಾರಾಟ ಮಿತಿ ಮೀರುತ್ತಿರುವ ಮತ್ತು ಗಾಂಜಾ ವ್ಯಸನಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದಿರುವ ಹಿನ್ನೆಲೆ ಪೆಡ್ಲರ್‌ಗಳನ್ನು ಟಾರ್ಗೆಟ್ ಮಾಡಿ ಬಂಧಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಗಾಂಜಾ ವ್ಯಸನಿಗಳ ವಿರುದ್ಧವೂ ಕ್ರಿಮಿನಲ್ ಪ್ರಕರಣ ದಾಖಲು ಮಾಡಲಾಗುತ್ತದೆ. ಒಂದು ತಿಂಗಳ ಒಳಗೆ ಕೊಡಗನ್ನು ಗಾಂಜಾ ಮುಕ್ತ ಜಿಲ್ಲೆಯನ್ನಾಗಿ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಮಡಿಕೇರಿ ಫೆ.24 : ಕೊಡಗು ಪೊಲೀಸರ ವಿಶೇಷ ತಂಡ ದಾಳಿ ನಡೆಸಿ 2 ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 8 ಮಂದಿ ಪ್ರಮುಖ ಗಾಂಜಾ ಪೆಡ್ಲರ್‌ಗಳನ್ನು ಬಂಧಿಸಿದ್ದು 5 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿಗಳು ಕೊಡಗು ಸೇರಿದಂತೆ ನೆರೆಯ ಕೇರಳ ರಾಜ್ಯಕ್ಕೂ ಗಾಂಜಾ ಪೂರೈಕೆ ಮಾಡುತ್ತಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ್ದಾರೆ. ವಿರಾಜಪೇಟೆ ನಗರ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಸಾದಿಕ್(33), ಖಲೀಲ್(37), ದರ್ಶನ್(27), ಇಲಿಯಾಸ್(44) ಹಾಗೂ ಮಡಿಕೇರಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಕರಣ್ ಕುಮಾರ್(27), ಗಗನ್(26), ನಿರುಪ್(27) ಹಾಗೂ ವಿನಯ್ ಎಂಬವರನ್ನು ಬಂಧಿಸಿರುವುದಾಗಿ ಎಸ್.ಪಿ. ರಾಮರಾಜನ್ ತಿಳಿಸಿದರು. 2 ಪ್ರಕರಣಗಳಲ್ಲಿ ಒಟ್ಟು 5 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದರು. ಮಡಿಕೇರಿಯಲ್ಲಿ ಬಂಧಿತರಾದ ಆರೋಪಿಗಳು ಮೈಸೂರು ಮಂಡಿಮೊಹಲ್ಲಾದಿAದ ಗಾಂಜಾ ಖರೀದಿ ಮಾಡಿದ್ದು, ಬೈಕ್‌ಗಳ ಮೂಲಕ ಮಾರಾಟ ಮಾಡುತ್ತಿದ್ದರು. ::: ಒಡಿಸ್ಸಾದಿಂದ ಆಮದು ::: ವಿರಾಜಪೇಟೆಯಲ್ಲಿ ಬಂಧಿತ ಆರೋಪಿಗಳು ವಿಚಾರಣೆ ವೇಳೆ ಮಾಹಿತಿ…
ಬೆಂಗಳೂರು ಫೆ.24 : ಮೈಸೂರು- ಬೆಂಗಳೂರು ದಶಪಥ ಹೆದ್ದಾರಿಯನ್ನ ಮಾ.11 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಉದ್ಘಾಟನೆ ಮಾಡಿಸುವ ಸಲುವಾಗಿ NHAI ನ CGM, PD ಮತ್ತು RO ವಿವೇಕ್ ಜೈಸ್ವಾಲ್ ಅವರ ಜೊತೆ ಸಂಸದ ಪ್ರತಾಪ್ ಸಿಂಹ ಮಾತುಕತೆ ನಡೆಸಿದರು. ಅದೇ ದಿನ ಮೈಸೂರು ಮತ್ತು ಕುಶಾಲನಗರ ಚತುಷ್ಪಥ ಹೆದ್ದಾರಿಗೂ ಕಾಮಗಾರಿಗೆ ಭೂಮಿ ಪೂಜೆ ನೆರವೇರಲಿದೆ.
ಮಡಿಕೇರಿ ಫೆ.24 : ಅಕ್ಷರ ದಾಸೋಹದಡಿ ಮಧ್ಯಾಹ್ನದ ಬಿಸಿ ಊಟಕ್ಕೆ ಬಳಸುವ ಆಹಾರ ಪದಾರ್ಥ ಗುಣಮಟ್ಟದಿಂದ ಕೂಡಿರಬೇಕು. ಯಾವುದೇ ದೂರುಗಳು ಬರದಂತೆ ಎಚ್ಚರವಹಿಸಬೇಕು ಎಂದು ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ 2022-23 ನೇ ಸಾಲಿನ ಜಿಲ್ಲಾ ವಲಯದ ಇಲಾಖಾ ಕಾರ್ಯಕ್ರಮಗಳ ಜನವರಿ ಅಂತ್ಯದವರೆಗಿನ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದರು. ಯಾವುದೇ ಕಾರಣಕ್ಕೂ ಅವಧಿ ಮೀರಿದ ಆಹಾರ ಪದಾರ್ಥ ದಾಸ್ತಾನು ಮಾಡಬಾರದು ಮತ್ತು ಉಪಯೋಗಿಸದಂತೆ ಮುನ್ನೆಚ್ಚರ ವಹಿಸುವಂತೆ ಅಕ್ಷರ ದಾಸೋಹ ಶಿಕ್ಷಣಾಧಿಕಾರಿಗೆ ಜಿ.ಪಂ.ಸಿಇಒ ಅವರು ತಾಕೀತು ಮಾಡಿದರು. ಉತ್ತಮ ಗುಣಮಟ್ಟದ ಬೇಳೆ, ಅಕ್ಕಿ, ಎಣ್ಣೆ ಹಾಗೂ ಉತ್ತಮ ತರಕಾರಿ ಇತರ ಆಹಾರ ಪದಾರ್ಥಗಳನ್ನು ಬಳಸಬೇಕು ಎಂದು ಅವರು ಸೂಚಿಸಿದರು. ಪ್ರಸಕ್ತ ಆರ್ಥಿಕ ವರ್ಷ ಮಾರ್ಚ್ ಅಂತ್ಯಕ್ಕೆ ಪೂರ್ಣಗೊಳ್ಳುವುದರಿಂದ ಜಿ.ಪಂ.ವತಿಯಿಂದ ಲಿಂಕ್ ಡಾಕ್ಯುಮೆಂಟ್ ಮೂಲಕ ಬಿಡುಗಡೆಯಾಗಿರುವ ಹಣವನ್ನು ಸಮರ್ಪಕವಾಗಿ ಬಳಸಿ, ಶೇ.100 ರಷ್ಟು ಪ್ರಗತಿ ಸಾಧಿಸುವಂತೆ ಜಿ.ಪಂ.ಸಿಇಒ ಅವರು ಅವರು ಸೂಚಿಸಿದರು. ಸಾರ್ವಜನಿಕ ಶಿಕ್ಷಣ…






