ಲೇಖಕ: admin

ಮಡಿಕೇರಿ ಫೆ.23 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಶ್ರೀ ಸವಿತಾ ಮಹರ್ಷಿ ಜಯಂತಿ’ ಕಾರ್ಯಕ್ರಮವು ಫೆಬ್ರವರಿ, 27 ರಂದು ಬೆಳಗ್ಗೆ 11 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಶಾಲಾ ಶಿಕ್ಷಣ, ಸಾಕ್ಷರತೆ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಸುಜಾಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಶ್ರೀ ಸವಿತಾ ಸಮಾಜದ ಜಿಲ್ಲಾ ಅಧ್ಯಕ್ಷರಾದ ದೊರೇಶ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಫೆ.23 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ‘ತ್ರಿಪದಿಕವಿ ಶ್ರೀ ಸರ್ವಜ್ಞ ಜಯಂತಿ’ ಕಾರ್ಯಕ್ರಮವು ಫೆಬ್ರವರಿ, 28 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ನಡೆಯಲಿದೆ. ಶಾಲಾ ಶಿಕ್ಷಣ, ಸಾಕ್ಷರತೆ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಸುಜಾಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಕುಲಾಲ(ಕುಂಬಾರ) ಸಮಾಜದ ಜಿಲ್ಲಾ ಅಧ್ಯಕ್ಷರಾದ ಎಂ.ಡಿ.ನಾಣಯ್ಯ, ಗೋಣಿಕೊಪ್ಪ ಸಾಹಿತಿ ಡಾ.ಜೆ.ಸೋಮಣ್ಣ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಫೆ.23 : ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕುಂಬ್ಯಾರು ಕಲ್ಲಡ್ಚ(ವಾರ್ಷಿಕ) ಹಬ್ಬವು ಮಾರ್ಚ್, 07 ರಂದು ನಡೆಯಲಿದೆ. ಮಾ.7 ರಂದು ಬೆಳಗ್ಗೆ 5.30 ಗಂಟೆಗೆ ಅಭಿಷೇಕ ಪೂಜೆ, ಬೆಳಗ್ಗೆ 6 ಗಂಟೆಗೆ ಪ್ರಾತಃಕಾಲದ ಪೂಜೆ, ಬೆಳಗ್ಗೆ 10 ಗಂಟೆಗೆ ಎತ್ತು ಪೋರಾಟ, ನಂತರ ತುಲಾಭಾರ ಸೇವೆ, ಭಕ್ತಾಧಿಗಳ ಸೇವಾ ಪೂಜೆ, ಮಧ್ಯಾಹ್ನ 12.30 ಗಂಟೆಗೆ ಮಹಾ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿತರಣೆ, ಮಧ್ಯಾಹ್ನ 1 ಗಂಟೆಗೆ ಅನ್ನ ಸಂತರ್ಪಣೆ, ಮಧ್ಯಾಹ್ನ 2 ಗಂಟೆಗೆ ದೇವರು ಹೊರಗೆ ಬಂದು ಮಲ್ಮಕ್ಕೆ ತೆರಳವುದು ಮತ್ತು ಸಂಜೆ 6 ಗಂಟೆಗೆ ದೇವರು ಮಲ್ಮದಿಂದ ಬಂದು ದೇವರ ಬಲಿ ನೃತ್ಯ ನಡೆಯಲಿದೆ ಎಂದು ಪಾಡಿ ಶ್ರೀ ಇಗ್ಗುತಪ್ಪ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಫೆ.23 : ಜಿಲ್ಲಾಧಿಕಾರಿ ಕೊಡಗು ಜಿಲ್ಲೆ, ಮಡಿಕೇರಿ ರವರ ಉಲ್ಲೇಖಿತ ಪತ್ರದಲ್ಲಿ ಸೂಚಿಸಿರುವಂತೆ ಜಿಲ್ಲೆಯಲ್ಲಿರುವ ಅನುಪಯುಕ್ತ ಸರ್ಕಾರಿ ವಾಹನಗಳನ್ನು ಮಾರ್ಚ್, 7 ರಂದು ಬೆಳಗ್ಗೆ 11 ಗಂಟೆಗೆ ಅಬಕಾರಿ ಉಪ ಅಧೀಕ್ಷಕರು, ಮಡಿಕೇರಿ ಉಪ ವಿಭಾಗ, ಮಡಿಕೇರಿ ಇವರನ್ನು ಹರಾಜು ನಿರ್ವಾಹಣಾಧಿಕಾರಿಯನ್ನಾಗಿ ನಿಯೋಜಿಸಿ ಟೆಂಡರ್ ಕಂ ಹರಾಜಿನ ಮೂಲಕ ಷರತ್ತುಗೊಳಪಟ್ಟು ವಿಲೇವಾರಿ ಮಾಡುವವರೇ ಹರಾಜು ಪ್ರಕಟಣೆ ಹೊರಡಿಸಲಾಗಿದೆ. ಮಾರ್ಚ್, 7 ರಂದು ಬೆಳಗ್ಗೆ 11 ಗಂಟೆಗೆ ಅಬಕಾರಿ ಉಪ ಅಧೀಕ್ಷಕರು, ಮಡಿಕೇರಿ ಉಪ ವಿಭಾಗ, ಮಡಿಕೇರಿ ಇವರ ಕಚೇರಿ ಆವರಣದಲ್ಲಿ ಅನುಪಯುಕ್ತ ಸರ್ಕಾರಿ ವಾಹನಗಳ ಹರಾಜು ಪ್ರಕ್ರಿಯೆ ನಡೆಯಲಿದೆ. ಆದ್ದರಿಂದ ನಿಗದಿತ ಸಮಯದಲ್ಲಿ ನಿಗದಿಪಡಿಸಿದ ಮುಂಗಡ ಠೇವಣಿಯನ್ನು ಸರ್ಕಾರಕ್ಕೆ ಸಂದಾಯ ಮಾಡಿ ಈ ಟೆಂಡರ್ ಕಮ್ ಹರಾಜಿನಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ನಗರದ ಅಬಕಾರಿ ಉಪ ಆಯುಕ್ತರ ಕಚೇರಿಯಲ್ಲಿ ಮಾಹಿತಿ ಪಡೆಯಬಹುದಾಗಿದೆ.

Read More

ಮಡಿಕೇರಿ ಫೆ.23 : ಸೋಮವಾರಪೇಟೆ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ 3 ಅಂಗನವಾಡಿ ಕಾರ್ಯಕರ್ತೆಯರು, 12 ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲು ಭೌತಿಕವಾಗಿ (ಅಪ್ ಲೈನ್) ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲು ಅಂಗನವಾಡಿ ಕೇಂದ್ರಗಳಿಗೆ ಅರ್ಜಿಯನ್ನು ಭೌತಿಕವಾಗಿ (ಆಫ್-ಲೈನ್) ಮೂಲಕ ಆಹ್ವಾನಿಸಿ ಪ್ರಕಟಣೆ ಹೊರಡಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿ ಇರುವ ಕೇಂದ್ರದ ಹೆಸರು: ನಂಜರಾಯ ಪಟ್ಟಣ ಗ್ರಾ.ಪಂ. ನಂಜರಾಯಪಟ್ಟಣ, ನಾಕೂರು ಶಿರಂಗಾಲ ಗ್ರಾ.ಪಂ.ಕಾನ್‍ಬೈಲ್ ಬೈಚನಳ್ಳಿ(ಮಿನಿ) ಮತ್ತು ಶಾಂತಳ್ಳಿ ಗ್ರಾ.ಪಂ. ಅಬ್ಬಿಮಠ ಬಾಚಳ್ಳಿ ಅಂಗನವಾಡಿ ಸಹಾಯಕಿಯರ ಹುದ್ದೆ ಖಾಲಿ ಇರುವ ಕೇಂದ್ರದ ಹೆಸರು: ಗೌಡಳ್ಳಿ, ಅವರೆದಾಳು, ಕಿತ್ತೂರು, ಲಖನಿ, ಮೂವತ್ತೋಕ್ಲು, ಸೂರ್ಲಬ್ಬಿ, ಕೂಡ್ಲೂರು ಚೆಟ್ಟಳ್ಳಿ, ನಿಡ್ತಕೊಪ್ಪಲು, ಹೊಸಗುತ್ತಿಹೊಸಳ್ಳಿ, ಮೂದ್ರವಳ್ಳಿ, ಶನಿವಾರಸಂತೆಯ ಗುಂಡುರಾವ್ ಬಡಾವಣೆ 2 ಹಾಗೂ ಕುಶಾಲನಗರ ಪುರಸಭೆ ವ್ಯಾಪ್ತಿಯ ಬೈಚನಳ್ಳಿ. ಆಫ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್, 24 ಕೊನೆಯ ದಿನವಾಗಿದೆ. ಕಾರ್ಯಕರ್ತೆ ಹುದ್ದೆಗೆ ಪಿಯುಸಿ ತೇರ್ಗಡೆ ಹಾಗೂ ಸಹಾಯಕಿ…

Read More

ವಿರಾಜಪೇಟೆ ಫೆ.23 : ಅಮ್ಮತಿ ಸಮೀಪದ ಪುಲಿಯೇರಿ ಗ್ರಾಮದ ಭಗವತಿ ದೇವಾಲಯದ ಉತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಅಮ್ಮತಿ ಗ್ರಾ.ಪಂ ವ್ಯಾಪ್ತಿಯ ಪುಲಿಯೇರಿ ಗ್ರಾಮದ ಶ್ರೀ ಭಗವತಿ ದೇವಿಯ ವಾರ್ಷಿಕ ಉತ್ಸವ ಫೆ.18 ರಂದು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಪ್ರಾರಂಭವಾಗಿ ದೇವಿಯ ಜಳಕದ ಮೂಲಕ ತೆರೆಕಂಡಿತು. ಐದು ದಿನಗಳ ಕಾಲ ನಡೆದ ಉತ್ಸವದಲ್ಲಿ ದಿನನಿತ್ಯ ಗಣಪತಿ ಹೋಮ, ಉಷ ಪೂಜೆ, ಭ್ರಹ್ಮಕಲಶ ಪೂಜೆ ಮಹಾಮಂಗಳರತಿ, ಸಂಜೆ ದೀಪಾರಾಧನೆ, ಭಗವತಿ ಸೇವೆ, ರಾತ್ರಿ ಪೂಜೆ ಸಲ್ಲಿಸಲಾಯಿತು. ಕೊನೆದಿನ ಮಾಹಾ ಪೊಂಗಾಲ, ಮಾಹಾ ಪೊಂಗಾಲ, ನೈವೆದ್ಯ ಸಮರ್ಪಣೆ, ಬ್ರಹ್ಮ ಕಳಶ ಪೂಜೆ, ಮಾಹಾಪೂಜೆ ಸಲ್ಲಿಸಲಾಯಿತು. ಸಂಜೆ ಕಾವೇರಿ ನದಿಯಿಂದ ದೇವಿಯ ವಿಗ್ರಹ ಮೆರೆವಣಿಗೆ, ದೇವಿಯ ದೀಪಾರಾಧನೆ, ರಾತ್ರಿ ಮಾಹಾಪೂಜೆಯ ಬಳಿಕ ಅನ್ನಸಂತರ್ಪಣೆ ಸೇವೆ ನಡೆಯಿತು. ಉತ್ಸವದಲ್ಲಿ ದೇವಾಲಯದ ಆಡಳಿತ ಮಂಡಳಿಯ ಸದಸ್ಯರು, ಮುಂಗುಯಿಯಿಲ್ ಕುಟುಂಬದ ಸದಸ್ಯರು, ಗ್ರಾಮಸ್ಥರು ಸೇರಿದಂತೆ ಕೇರಳದ ವಿವಿಧ ಭಾಗಗಳಿಂದ ಆಗಮಿಸಿದ ಭಕ್ತಾಧಿಗಳು ಉತ್ಸವದಲ್ಲಿ ಪಾಲ್ಗೊಂಡಿದ್ದರು. ವರದಿ : ಕಿಶೋರ್ ಕುಮಾರ್ ಶೆಟ್ಟಿ  

Read More

ಕುಶಾಲನಗರ, ಫೆ.23: ಕೋವಿಡ್‌ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮವನ್ನು, ಈ ವರ್ಷ ಮತ್ತೆ ಆರಂಭಿಸಲಾಗಿದೆ. ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಸರ್ಕಾರಿ ಪ್ರೌಢಶಾಲಾ 8ನೇ ತರಗತಿ ವಿದ್ಯಾರ್ಥಿಗಳಿಗೆ ಏರ್ಪಡಿಸಿರುವ ಕರ್ನಾಟಕ ದರ್ಶನ ಶೈಕ್ಷಣಿಕ ಪ್ರವಾಸಕ್ಕೆ  ಕುಶಾಲನಗರ ತಾಲ್ಲೂಕಿನ ಮಕ್ಕಳ ಪ್ರವಾಸಕ್ಕೆ ಕುಶಾಲನಗರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾವರಣದಲ್ಲಿ ಚಾಲನೆ ನೀಡಿ ಬೀಳ್ಕೊಡಲಾಯಿತು. ಪ್ರವಾಸದ ವಿದ್ಯಾರ್ಥಿಗಳಿಗೆ ಕಿಟ್ ವಿತರಿಸುವ ಮೂಲಕ ಪ್ರವಾಸಕ್ಕೆ ಚಾಲನೆ ನೀಡಿದ ಕುಶಾಲನಗರ ಪುರಸಭೆ ಅಧ್ಯಕ್ಷ ಬಿ.ಜೈವರ್ಧನ್ (ಕೇಶವ) ಮಾತನಾಡಿ, “ಕರ್ನಾಟಕ ದರ್ಶನ” ಎಂಬ ಉಚಿತ ಶೈಕ್ಷಣಿಕ ಪ್ರವಾಸದಲ್ಲಿ ಮಕ್ಕಳು ರಾಜ್ಯದ ವಿವಿಧ ಧಾರ್ಮಿಕ, ಐತಿಹಾಸಿಕ ಹಾಗೂ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಿ ಅವುಗಳ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳಲು ಸಹಕಾರಿಯಾಗಿದೆ ಎಂದರು. ಪ್ರವಾಸದ ಬಸ್ ಗಳಿಗೆ ಹಸಿರು ನಿಶಾನೆ ನೀಡಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಕರ್ನಾಟಕ ದರ್ಶನ…

Read More

ಮಡಿಕೇರಿ ಫೆ.23 : ಕೊಡಗು ಜಿಲ್ಲೆಯಲ್ಲಿ ಕಳೆದ ಹಲವು ವರ್ಷಗಳಿಂದ ಲೈನ್ ಮನೆಗಳಲ್ಲಿ ವಾಸವಿರುವ ಪರಿಶಿಷ್ಟ ಜಾತಿ ಮೊಗೇರ ಕುಟುಂಬಗಳಿಗೆ ಸರಕಾರ ನಿವೇಶನ ಹಂಚಿಕೆ ಮಾಡದಿದ್ದಲ್ಲಿ ನಿವೇಶನ ರಹಿತ ಮೊಗೇರ ಜನಾಂಗದವರು ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಮುದ್ದ ಕಳಲ ಯುವಕ ಸಂಘದ ಅಧ್ಯಕ್ಷ ಜ್ಯೋತಿಕುಮಾರ್ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳೇ ಕಳೆದರೂ ಸ್ವಂತ ಸೂರು ಇಲ್ಲದೆ ಸಂಕಷ್ಟದಲ್ಲಿ ಕಾಫಿ ತೋಟದ ಲೈನ್ ಮನೆಗಳಲ್ಲಿ ವಾಸ ಮಾಡಬೇಕಾದ ದುಸ್ಥಿತಿ ಬಂದೊದಗಿದೆ. ಜಿಲ್ಲೆಯ ಲೈನ್ ಮನೆಗಳಲ್ಲಿ ವಾಸವಿರುವ ಸುಮಾರು 1500 ಪರಿಶಿಷ್ಟ ಜಾತಿ ಮೊಗೇರ ಕುಟುಂಬಗಳು ನಿವೇಶದಿಂದ ವಂಚಿತರಾಗಿದ್ದಾರೆ. ಆದರೆ ಸರಕಾರ ಬಡ ಕುಟುಂಬಗಳಿಗೆ ನಿವೇಶನ ನೀಡದೆ ಉಳ್ಳವರಿಗೆ ಗುತ್ತಿಗೆ ಆಧಾರದಲ್ಲಿ ಏಕರೆಗಟ್ಟಲೆ ಭೂಮಿ ನೀಡಲು ಮುಂದಾಗಿದೆ ಎಂದು ಆರೋಪಿಸಿದ್ದಾರೆ. ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಸರಕಾರಿ ಭೂಮಿಯನ್ನು ತೆರವುಗೊಳಿಸಿ ನಿವೇಶನ ರಹಿತ ಬಡ ಕುಟುಂಬಗಳಿಗೆ ಹಂಚಿಕೆ ಮಾಡುವ ಬದಲು ಒತ್ತುವರಿದಾರರಿಗೇ ನೀಡಲು ಮುಂದಾಗಿರುವ ಕ್ರಮ ಖಂಡನೀಯ ಎಂದು…

Read More

ಮಡಿಕೇರಿ ಫೆ.23 : ಕಾವೇರಿ ಸನ್ನಿಧಿ ಫಾರ್ ಇಂಡಿಯನ್ ಕಲ್ಚರ್ ಅಧೀನದಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಕಾವೇರಿ ಕನ್ಯಾ ಗುರುಕುಲಂ ನಲ್ಲಿ 2023ನೇ ಸಾಲಿನ ಪ್ರವೇಶಾತಿ ಪ್ರಾರಂಭವಾಗಿದೆ ಎಂದು ಗುರುಕುಲಂ ನ ಸಂಸ್ಥಾಪಕ ಹಾಗೂ ಕೃಷಿ ವಿಜ್ಞಾನಿ ಡಾ.ಕೆ.ಕೆ.ಸುಬ್ರಮಣಿ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ನದಿ ತಟದ ಸುಂದರ ಪರಿಸರದಲ್ಲಿ ಕಾವೇರಿ ಕನ್ಯಾ ಗುರುಕುಲಂ ಇದ್ದು, ಎಸ್‍ಎಸ್‍ಎಲ್‍ಸಿ ಪಾಸಾದ ಹೆಣ್ಣುಮಕ್ಕಳಿಗೆ ಎರಡು ವರ್ಷದ ಸಂಪೂರ್ಣ ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು. ಕಲೆ ಹಾಗೂ ವಾಣಿಜ್ಯ ವಿಭಾಗಗಳ ಶಿಕ್ಷಣದ ಜೊತೆಗೆ ಕಂಪ್ಯೂಟರ್ ಶಿಕ್ಷಣ, ಇಂಗ್ಲೀಷ್ ಮತ್ತು ಸಂಸ್ಕøತ ಭಾಷೆ, ಮೌಲ್ಯಗಳು ಧ್ಯಾನ, ಪ್ರಾಣಾಯಮ, ಶಾಸ್ತ್ರೀಯ ಸಂಗೀತ, ಭಗವಗ್ದೀತೆ ಹಾಗೂ ಶ್ಲೋಕ ಪಠಣ, ಪ್ರಯೋಗಿಕ ಕೃಷಿ ಗುರುಕುಲ ಪದ್ಧತಿಯಲ್ಲಿ ಲಭ್ಯವಿದೆ ಎಂದರು. ಅಲ್ಲದೆ ಸ್ಥಳೀಯ ಕಾಲೇಜು ಮುಖಾಂತರ ಟ್ಯಾಗಿಂಗ್ ಪದ್ಧತಿಯಡಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದೆಂದರು. ಗುರುಕುಲಕ್ಕೆ ಸೇರಲು ಯಾವುದೇ ಜಾತಿ, ಕುಲ ಹಾಗೂ…

Read More

ಮಡಿಕೇರಿ ಫೆ.23 : ದಕ್ಷಿಣ ಕೊಡಗು ಭಾಗದಲ್ಲಿ ಹುಲಿ ಉಪಟಳ ಮಿತಿ ಮೀರಿದ್ದು, ಅರಣ್ಯ ಇಲಾಖೆ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿಲ್ಲವೆಂದು ಆರೋಪಿಸಿರುವ ಕಿರುಗೂರು ಗ್ರಾ.ಪಂ ಸದಸ್ಯ ಚೆಪ್ಪುಡಿರ ರಾಕೇಶ್ ದೇವಯ್ಯ, ಅನಾಹುತಗಳು ಸಂಭವಿಸಿದರೆ ಅರಣ್ಯ ಅಧಿಕಾರಿಗಳೇ ನೇರ ಹೊಣೆಗಾರರಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿನ ಕಿರುಗೂರು ವ್ಯಾಪ್ತಿಯ ತೋಟವೊಂದರಲ್ಲಿ ಹುಲಿ ಕಾಣಿಸಿಕೊಂಡ ಪ್ರದೇಶಕ್ಕೆ ಭೇಟಿ ನೀಡಿದ್ದ ಅವರು ಅರಣ್ಯ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಕಣ್ಣ ಮುಂದೆ ಹುಲಿ ಇದ್ದರೂ ಅರಣ್ಯ ಇಲಾಖೆ ಸೆರೆ ಹಿಡಿಯುವ ತುರ್ತು ಕ್ರಮ ಕೈಗೊಂಡಿಲ್ಲ. ಹಿರಿಯ ಅಧಿಕಾರಿಗಳ ಅನುಮತಿ ಬೇಕು ಎಂದು ಕೈಚೆಲ್ಲಿ ಕುಳಿತ್ತಿದ್ದಾರೆ. ಅನುಮತಿ ದೊರೆಯುವ ವೇಳೆಗೆ ಜೀವಹಾನಿಯಾದರೆ ಯಾರು ಹೊಣೆ ಎಂದು ಪ್ರಶ್ನಿಸಿದರು. ಇತ್ತೀಚೆಗೆ ಪೊನ್ನಂಪೇಟೆ ತಾಲ್ಲೂಕಿನ ಕೆ.ಬಾಡಗ ವ್ಯಾಪ್ತಿಯ ನಾಣಚ್ಚಿ ಗೇಟ್ ಬಳಿ ಹುಲಿಯೊಂದನ್ನು ಸೆರೆ ಹಿಡಿಯಲಾಗಿದೆ. ಸೆರೆಯಾದ ಹುಲಿಯನ್ನು ಕೆ.ಬಾಡಗ ಗ್ರಾಮದ ಚೂರಿಕಾಡು ವ್ಯಾಪ್ತಿಯಲ್ಲಿ ಯುವಕ ಹಾಗೂ ವೃದ್ಧನ ಜೀವವನ್ನು ಬಲಿ ಪಡೆದ ಹುಲಿ ಎಂದು ಪ್ರತಿಬಿಂಬಿಸಲಾಗಿತ್ತು.…

Read More