ಲೇಖಕ: admin

ಮಡಿಕೇರಿ ಫೆ.23 : ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ವಿರಾಜಪೇಟೆ ಸಮೀಪದ ಕಲ್ಲುಬಾಣೆಯಲ್ಲಿ ನಡೆದಿದೆ. ಕಲ್ಲುಬಾಣೆ ಗ್ರಾಮದ ನಿವಾಸಿ ಬಡಕಡ ಅರುಣ್ ಅವರ ಪುತ್ರ ಗೋಣಿಕೊಪ್ಪ ಕಾವೇರಿ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿ ಆದಿತ್ಯ (ಭಜನ್-18) ನೇಣಿಗೆ ಶರಣಾದ ವಿದ್ಯಾರ್ಥಿ. ವಿರಾಜಪೇಟೆ ನಗರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ನಾಪೋಕ್ಲು ಫೆ.23 :  ಎಮ್ಮೆಮಾಡು ಮಖಾಂ ಉರೂಸ್ ಪ್ರಯುಕ್ತ ಫೆ.27  ಮತ್ತು ಮಾ.3 ರಂದು ಬೆಳಗ್ಗೆ 6ಗಂಟೆಯಿಂದ ರಾತ್ರಿ 9ರ ವರೆಗೆ ನಾಪೋಕ್ಲು ಪಟ್ಟಣದ ಮುಖ್ಯ ರಸ್ತೆಯಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದ್ದು ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕ ಶೇಖರ್ ಮನವಿ ಮಾಡಿದರು. ಉರೂಸ್ ಪ್ರಯುಕ್ತ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಕರೆಯಲಾಗಿದ್ದ ಸರ್ವಜನಿಕರ ಸಭೆಯಲ್ಲಿ ಮಾತನಾಡಿದ ಅವರು, ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಜಿಲ್ಲೆ, ಹೊರಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಹಲವಾರು ಭಕ್ತಾದಿಗಳು ಆಗಮಿಸುತ್ತಿದ್ದು ಫೆ.27 ರಂದು ನಾಪೋಕ್ಲು ಸಂತೆ ದಿನಕೂಡ ಆಗಿದ್ದು ಪಟ್ಟಣದಲ್ಲಿ ವಾಹನದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಇದನ್ನು ನಿಯಂತ್ರಿಸಲು ನಾಪೋಕ್ಲು ವ್ಯಾಪ್ತಿಯ ಎಲ್ಲಾ ಸಾರ್ವಜನಿಕರು ತಮ್ಮ ತಮ್ಮ ವಾಹನಗಳನ್ನು ಹಳೆ ತಾಲೂಕುವಿನಿಂದ ನಾಪೋಕ್ಲು ಸಂತೆ ಮಾರುಕಟ್ಟೆಯವರೆಗಿನ ಮುಖ್ಯ ರಸ್ತೆಯ ಎರಡು ಬದಿಗಳಲ್ಲಿ ವಾಹನಗಳನ್ನು ನಿಲ್ಲಿಸದೆ ಇಲಾಖೆಯೊಂದಿಗೆ ಸಹಕರಿಸಬೇಕು ಎಂದರು. ಈ ದಿನ  ವಾಹನಗಳ ನಿಲುಗಡೆಗೆ ಬದಲಿ ವ್ಯವಸ್ಥೆಮಾಡಲಾಗಿದ್ದು, ನೆಲಜಿ,ಕೊಳಕೇರಿ,ಕಕ್ಕಬ್ಬೆ ಭಾಗದಿಂದ ಸಂತೆಗೆ ಬರುವ ಜನರು…

Read More

ನಾಪೋಕ್ಲು ಫೆ.22 : ನಾಪೋಕ್ಲು ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿಯಾಗಿ ಕಾಶೀನಾಥ್ ಬಗಲಿ ನೇಮಕಗೊಂಡಿದ್ದಾರೆ. (ವರದಿ : ದುಗ್ಗಳ ಸದಾನಂದ)

Read More

ಮಡಿಕೇರಿ ಫೆ.22 : ದಕ್ಷಿಣ ಕೊಡಗಿನ ಕಾಫಿ ತೋಟವೊಂದರಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಮತ್ತೆ ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಪೊನ್ನಂಪೇಟೆ ತಾಲ್ಲೂಕಿನ ಕಿರುಗೂರು ಮುಖ್ಯ ರಸ್ತೆಯ ಶಾಲೆಯ ಸಮೀಪವಿರುವ ಕೊರಕುಟ್ಟಿರ ರಾಜಪ್ಪ ಎಂಬುವವರ ತೋಟದಲ್ಲಿ ಸಂಜೆ 5 ಸುಮಾರಿಗೆ ಹುಲಿ ಕಂಡು ಬಂದಿದೆ. ರಾಜಪ್ಪ ಅವರ ಪುತ್ರ ಸವಿ ದೇವಯ್ಯ ತೋಟದಿಂದ ತೆರಳುತ್ತಿದ್ದ ಸಂದರ್ಭ ದೂರದಲ್ಲಿ ಹುಲಿ ಇರುವುದು ಗೋಚರಿಸಿದೆ. ಈ ಕುರಿತು ಅವರು ಪೊನ್ನಂಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ಮತ್ತು ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಹುಲಿ ಕಂಡು ಬಂದ ಸ್ಥಳದಲ್ಲಿ ಪರಿಶೀಲನೆ ನಡೆಸಿದರು. ಶಸ್ತ್ರ ಸಜ್ಜಿತ ಅರಣ್ಯ ಸಿಬ್ಬಂದಿಗಳ ಒಂದು ತಂಡ ಸ್ಥಳದಲ್ಲೇ ಬೀಡು ಬಿಟ್ಟಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದ್ದಾರೆ. ಕೆಲವು ದಿನಗಳ ಹಿಂದೆ ಕುಟ್ಟ ಕೆ.ಬಾಡಗ ಚೂರಿಕಾಡು ವ್ಯಾಪ್ತಿಯಲ್ಲಿ ಹುಲಿ ದಾಳಿಗೆ ಸಿಲುಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕೂಂಬಿoಗ್ ನಡೆಸಿದ ಅರಣ್ಯ ಇಲಾಖೆ…

Read More

ನಾಪೋಕ್ಲು ಫೆ.22 : (ಚಿತ್ರ ಸುದ್ದಿ : ದುಗ್ಗಳ ಸದಾನಂದ) ನಾಪೋಕ್ಲುವಿನಲ್ಲಿ ಬುಧವಾರ ಸಂಜೆ ಆಗಸದಲ್ಲಿ ಕಂಡು ಬಂದ ವಿಸ್ಮಯ

Read More

ಮಡಿಕೇರಿ ಫೆ.22 : ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ಸ್ಪರ್ಶಗೊಂಡು ಪ್ರತ್ಯೇಕ ಪ್ರಕರಣಗಳಲ್ಲಿ ಒಂದೇ ದಿನ ಅಸ್ಸಾಂ ಮೂಲದ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಶ್ರೀಮಂಗಲ ಹಾಗೂ ಹುದಿಕೇರಿ ಗ್ರಾಮದಲ್ಲಿ ನಡೆದಿದೆ. ಶ್ರೀಮಂಗಲ ಹೋಬಳಿಯ ನಾಲ್ಕೇರಿ ಗ್ರಾಮದಲ್ಲಿ ಅಸ್ಸಾಂ ಮೂಲದ ಕಾರ್ಮಿಕ ಅಬ್ರುದ್ದೀನ್(31) ಹಾಗೂ ಹುದಿಕೇರಿ ಹೋಬಳಿಯ ಹೈಸೊಡ್ಲೂರು ಗ್ರಾಮದಲ್ಲಿ ಅಸ್ಸಾಂ ಮೂಲದ ಕಾರ್ಮಿಕ ಇಸ್ಮಾಯಿಲ್ ಹುಸೇನ್ (33) ಮೃತ ದುರ್ದೈವಿಗಳಾಗಿದ್ದಾರೆ. ನಾಲ್ಕೇರಿ ಗ್ರಾಮದ ಸ್ಥಳೀಯ ಬೆಳೆಗಾರರ ತೋಟವೊಂದರಲ್ಲಿ ಬೆಳಗೆ 8.30 ಗಂಟೆಯ ವೇಳೆಗೆ ಕರಿಮೆಣಸು ಕೊಯ್ಯುತ್ತಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ. ಆಕಸ್ಮಿಕವಾಗಿ 11 ಕೆ.ವಿ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿದಾಗ ಆಘಾತಕ್ಕೊಳಗಾದ ಅಬ್ರುದ್ದೀನ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಮೃತ ಪಟ್ಟಿದ್ದಾರೆ. ಸ್ಥಳಕ್ಕೆ ಕುಟ್ಟ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕÀ ರವಿಶಂಕರ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಮಹಜರು ನಡೆಸಿದರು. ಈ ಘಟನೆ ಕುರಿತು ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ…

Read More

ಮಡಿಕೇರಿ ಫೆ.22 : ಕೊಡಗು ಜಿಲ್ಲೆಯಲ್ಲಿ ಕನ್ನಡ, ತುಳು, ಕೊಡವ, ಮಲೆಯಾಳಿ, ತಮಿಳು ಮತ್ತು ತೆಲುಗು ಭಾಷೆ ಮಾತನಾಡುವ ವಿಶ್ವಕರ್ಮ ಸಮುದಾಯದ ಸುಮಾರು 22 ಸಾವಿರ ಮತದಾರರಿದ್ದು, ಅಭ್ಯರ್ಥಿಯನ್ನು ಗೆಲ್ಲಿಸುವ ಅಥವಾ ಸೋಲಿಸುವ ಸಂಖ್ಯಾಬಲ ನಮ್ಮ ಬಳಿ ಇದೆ ಎಂದು ಶ್ರೀ ವಿಶ್ವಕರ್ಮ ಸಮುದಾಯ ಜಾಗೃತ ಸೇವಾ ಟ್ರಸ್ಟ್ ನ ಜಿಲ್ಲಾಧ್ಯಕ್ಷ ಹರೀಶ್ ಜಿ.ಆಚಾರ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿಶ್ವಕರ್ಮ ಸಮುದಾಯವನ್ನು ಎಲ್ಲಾ ಸರ್ಕಾರಗಳು ಕಡೆಗಣಿಸುತ್ತಲೇ ಬಂದಿವೆ ಎಂದು ಆರೋಪಿಸಿದ್ದಾರೆ. ಯಾವುದೇ ಸರ್ಕಾರ ಬಂದರೂ ವಿಶ್ವಕರ್ಮ ಜನರು ಸೌಲಭ್ಯ ವಂಚಿತರಾಗುತ್ತಲೇ ಇದ್ದಾರೆ. ವಿಶ್ವಕರ್ಮ ಅಭಿವೃದ್ಧಿ ಮಂಡಳಿಯನ್ನು ಕೇವಲ ಕಣ್ಣೊರೆಸುವ ತಂತ್ರವಾಗಿ ಆರಂಭಿಸಲಾಗಿದ್ದು, ವರ್ಷಕ್ಕೆ 11 ಲಕ್ಷದಿಂದ 15 ಲಕ್ಷ ರೂ.ವರೆಗೆ ಮಾತ್ರ ಅನುದಾನ ನೀಡಲಾಗುತ್ತಿದೆ. ಇಷ್ಟು ಹಣದಿಂದ ಬಡವರ ಉದ್ಧಾರ ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ. ಸ್ವಂತ ಮನೆ ಇಲ್ಲದ ವಿಶ್ವಕರ್ಮ ಸಮುದಾಯದ ಶೇ.90 ರಷ್ಟು ಮಂದಿ ಬಾಡಿಗೆ ಮನೆಗಳನ್ನೇ ಅವಲಂಬಿಸಿದ್ದಾರೆ. ಕುಲಕಸುಬು ಕೂಡ ಸಮರ್ಪಕವಾಗಿ ದೊರೆಯುತ್ತಿಲ್ಲ. ಕೂಲಿ ಕೆಲಸಗಳನ್ನು…

Read More

ಮಡಿಕೇರಿ ಫೆ.22 :  ಚೇರಂಬಾಣೆ-ಕೊಟ್ಟೂರು ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ  ಕೇಂದ್ರ ಸರ್ಕಾರದ ನೀತಿ ಆಯೋಗ ಹಾಗೂ ಚೆನ್ನೈನ ಸೆಂಟ್ರಡೋ ಟೆಕ್ ಸೊಲ್ಯೂಷನ್ ಪ್ರೈವೇಟ್ ಲಿಮಿಟೆಡ್ ಸಹಯೋಗದಲ್ಲಿ ನೂತನವಾಗಿ ನಿರ್ಮಿಸಲಾದ ಅಟಲ್ ಟಿಂಕರಿಂಗ್ ಲ್ಯಾಬ್ ಅನ್ನು ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ  ಶ್ರೀ ಮಂಜುನಾಥ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು,  ವಿದ್ಯಾರ್ಥಿಗಳು ತಮ್ಮಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಂಡು ವಿಜ್ಞಾನದ ಕುರಿತಾದ ಹೊಸ ಹೊಸ ಆಧುನಿಕ ಆವಿಷ್ಕಾರಗಳನ್ನು ಈ ಅಟಲ್ ಟಿಂಕರಿಂಗ್ ಲ್ಯಾಬೋರೇಟರಿಯಲ್ಲಿ ಪ್ರಯೋಗಗಳನ್ನು ಮಾಡುವ ಮೂಲಕ ವಿಜ್ಞಾನದಲ್ಲಿ ಆಸಕ್ತಿಯನ್ನು ಹೆಚ್ಚಿಸಿಕೊಳ್ಳುವಂತೆ ಕರೆಕೊಟ್ಟರು. ನಿವೃತ್ತ ಮುಖ್ಯ ಶಿಕ್ಷಕ ಕೆ.ಎಸ್. ರಾಮಮೂರ್ತಿ ಮಾತನಾಡಿ,  ಅಟಲ್ ಟಿಂಕರಿಂಗ್ ಲ್ಯಾಬೊರೇಟರಿಯ ಮಹತ್ವದ  ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ  ನೀಡಿದರು. ಕಾರ್ಯಕ್ರಮದಲ್ಲಿ  ಶಾಲಾ ವಿದ್ಯಾರ್ಥಿಗಳು ತಾವೇ ತಯಾರಿಸಿದ ವಿಜ್ಞಾನದ ಮಾದರಿಗಳನ್ನು ಪ್ರದರ್ಶಿಸಿ ಅತಿಥಿಗಳ ಗಮನ ಸೆಳೆದರು. ಕಾರ್ಯಕ್ರಮದಲ್ಲಿ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ  ಹರೀಶ್,  ಮಾರುತಿ ಆರೇರ, ಸಿಆರ್‌ಪಿ ವೀಣಾ ರೈ, ಶಾಲಾ ಆಡಳಿತ ಮಂಡಳಿ ಸದಸ್ಯರಾದ ಕುಟ್ಟೇಟಿರ ಕುಂಞ್ಞಪ್ಪ, ಮೊಟ್ಟೆಯಂಡ…

Read More

ಮಡಿಕೇರಿ ಫೆ.22 :  ಅಮ್ಮತ್ತಿ ಗ್ರಾಮದ ಗ್ರಾಮದ ಪೊಲೀಸ್  ವೆಂಕಟೇಶ್ ಅವರ ಮನೆಯ ಅಂಗಳದಲ್ಲಿ ಇದ್ದ  ನಾಗರಹಾವನ್ನು ಉರಗ ರಕ್ಷಕ ರೋಶನ್  ರಕ್ಷಿಸಿದ್ದಾರೆ. ವೆಂಕಟೇಶ್ ಅವರು ಹಾವು ಇರುವ ಬಗ್ಗೆ  ಮಾಹಿತಿ ನೀಡಿದ ಹಿನ್ನೆಲೆ  ಸ್ಥಳಕ್ಕೆ ಆಗಮಿಸಿದ ಉರಗ ರಕ್ಷಕ ರೋಶನ್ ನಾಗರಹಾವನ್ನು ಸುರಕ್ಷಿತವಾಗಿ  ಸೆರೆ ಹಿಡಿದು ಮಾಲ್ತಾರೆ ಅರಣ್ಯಕ್ಕೆ ಬಿಟ್ಟರು. ರೋಶನ್ ಎರಡು ಸಾವಿರಕ್ಕಿಂತಲೂ ಅಧಿಕ ಹಾವನ್ನು ರಕ್ಷಣೆ  ಮಾಡುವುದರಲ್ಲಿ ಯಶಸ್ವಿಯಾಗಿದ್ದಾರೆ.  ಹಾವುಗಳು  ಕಂಡರೆ ಈ 7022373921 ಸಂಖ್ಯೆಗೆ ಕರೆ ಮಾಡುವಂತೆ ಮನವಿ ಮಾಡಿದ್ದಾರೆ.

Read More

ನಾಪೋಕ್ಲು ಫೆ.22 :   ಹಳೇ ತಾಲೂಕಿನ ಶ್ರೀ ಪೊನ್ನು ಮುತ್ತಪ್ಪ ದೇವಾಲಯದ ವಾರ್ಷಿಕ ಮಹಾಸಭೆಯು ಫೆ.25 ರಂದು ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಎ.ಕೆ ಚಂದ್ರನ್ ಅವರ ಅಧ್ಯಕ್ಷತೆಯಲ್ಲಿ  ನಡೆಯಲಿದೆ. ಪೂರ್ವಾಹ್ನ 9ಗಂಟೆಗೆ  ದೇವಾಲಯದ ಆವರಣದಲ್ಲಿ ನಡೆಯಲಿರುವ ವಾರ್ಷಿಕ ಮಹಾಸಭೆಗೆ ಸದಸ್ಯರು ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ. ಮಧ್ಯಾಹ್ನ ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದ್ದು, ಸಂಜೆ 6 ಗಂಟೆಗೆ ಮುತ್ತಪ್ಪ ದೇವರ ವಿಶೇಷ ವೆಲ್ಲಾಟಂ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಡಳಿತ ಮಂಡಳಿಯ ಪ್ರಕಟಣೆಯಲ್ಲಿ ಕೋರಿದೆ. ವರದಿ :ಝಕರಿಯ ನಾಪೋಕ್ಲು  

Read More