ನಾಪೋಕ್ಲು ಜ.25 : ಕಂಪ್ಯೂಟರೀಕರಣ ವ್ಯವಸ್ಥೆಯೊಂದಿಗೆ ರಾಷ್ಟ್ರೀಕೃತ ಬ್ಯಾಂಕ್’ಗಳಿಗೆ ಸರಿಸಮವಾಗಿ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬೆಳವಣಿಗೆ ಸಾಧಿಸಿರುವುದು ಆಡಳಿತ ಮಂಡಳಿಯವರ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅಭಿಪ್ರಾಯಪಟ್ಟರು. ಪೊನ್ನಮ್ಮ ಕಾವೇರಪ್ಪ ಕಾಂಪ್ಲೆಕ್ಸ್’ನಲ್ಲಿ ಸೊಸೈಟಿಯ 18ನೇ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು ತನ್ನ 25ನೇ ವರ್ಷದಲ್ಲಿ 18ಕ್ಕೂ ಅಧಿಕ ಶಾಖೆಗಳನ್ನು ಆರಂಭಿಸಿರುವುದು ಸಂಸ್ಥೆಯ ಪ್ರಾಮಾಣಿಕ ಸೇವೆಗೆ ದೊರೆತ ಮನ್ನಣೆಯಾಗಿದ್ದು, ಬೆಳ್ಳಿಹಬ್ಬದ ಈ ವರ್ಷದಲ್ಲಿ 25ನೇ ಶಾಖೆಯೂ ಆರಂಭವಾಗುವಂತಾಗಲಿ ಎಂದು ಹಾರೈಸಿದರು. ಸಹಕಾರ ಸಂಸ್ಥೆಗಳು ಕಡಿಮೆ ಬಡ್ಡಿದರದಲ್ಲಿ ಹಾಗೂ ಸುಲಭ ರೀತಿಯಲ್ಲಿ ಗ್ರಾಮೀಣ ಜನರಿಗೆ ಸಾಲ ಸೌಲಭ್ಯವನ್ನು ನೀಡುವಂತಾದಲ್ಲಿ ಅಂತಹ ಸಂಸ್ಥೆಗಳು ಜನರ ಗೌರವಕ್ಕೆ ಪಾತ್ರವಾಗುತ್ತವೆ. ನಾಪೋಕ್ಲುವಿನಲ್ಲಿ ಆರಂಭಗೊಂಡಿರುವ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸೇವೆಯನ್ನು ಈ ಭಾಗದ ಜನತೆ ಸದುಪಯೋಗ ಪಡಿಸುಕೊಳ್ಳುವಂತಾಗಬೇಕು ಎಂದು ಆಶಿಸಿದರು. ಸಂಸ್ಥೆಯ ಭದ್ರತಾ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದ, ಮಡಿಕೇರಿ ಪ್ರಾಥಮಿಕ ಕೃಷಿ…
ಲೇಖಕ: admin
ನಾಪೋಕ್ಲು ಜ.23 : ಇತಿಹಾಸ ಪ್ರಸಿದ್ಧ ಕಕ್ಕಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ. ಎನ್ ಫಣೀಂದ್ರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಡಿ ಆರ್ ಎ ಚೆನ್ನಕೇಶವ ರೆಡ್ಡಿ, ಲೋಕಾಯುಕ್ತ ಪಬ್ಲಿಕ್ ಪ್ರಾಸಿಕುಟರ್ ಡಿ.ನಾರಾಯಣ, ಜಿಲ್ಲಾಧಿಕಾರಿ ಡಾ. ಸತೀಶ್, ಉಪ ವಿಭಾಧಿಕಾರಿ ಡಾ. ನಂಜುಂಡೇಗೌಡ, ಡಿವೈಎಸ್ಪಿ ಪವನ್ ಕುಮಾರ್, ತಹಶೀಲ್ದಾರ್ ಮಹೇಶ್, ಸಿ.ಐ ಲೋಕೇಶ್, ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಲೋಕಾಯುಕ್ತ ಎಸ್.ಐ.ಸುರೇಶ್ ಬಾಬು, ಕಂದಾಯ ಪರಿವೀಕ್ಷಕ ರವಿಕುಮಾರ್, ನಾಪೋಕ್ಲು ಠಾಣಾಧಿಕಾರಿ ಸದಾಶಿವ, ಪಾಡಿ ಇಗ್ಗುತ್ತಪ್ಪ ದೇವಾಲಯದ ಪಾರುಪತ್ಯೆಗಾರ ಪರದಂಡ ಪ್ರಿನ್ಸ್ ತಮ್ಮಪ್ಪ, ಅರ್ಚಕರಾದ ಜಗದೀಶ್, ಶ್ರೀಕಾಂತ್, ಗುರುಪ್ರಸಾದ್ ಮತ್ತಿತರರು ಉಪಶ್ತಿತರಿದ್ದರು. ವರದಿ : ದುಗ್ಗಳ ಸದಾನಂದ
ಸುಂಟಿಕೊಪ್ಪ,ಜ.25 : ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರದ ಜನಪರ ಯೋಜನೆಗಳನ್ನು ಕಾರ್ಯಕರ್ತರು ಮತದಾರರ ಮನೆ ಮನೆಗೆ ತಲುಪಿಸಬೇಕು ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಹೇಳಿದರು. ಮಾದಾಪುರ ಹೋಬಳಿ ಬಿಜೆಪಿ ಶಕ್ತಿ ಕೇದ್ರದಿಂದ ಮಾದಾಪುರ ಸಮುದಾಯ ಭವನದಲ್ಲಿ ಏರ್ಪಡಿಸಲಾದ ವಿಜಯ ಸಂಕಲ್ಪ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಸರಕಾರದ ವಿವಿಧ ಅಭಿವೃದ್ಧಿ ಕಾರ್ಯಕ್ರಮ ಸಮಾಜದ ಎಲ್ಲಾ ವರ್ಗಗಳಿಗೂ ತಲುಪಿದೆಯೊ ಎಂದು ಕಾರ್ಯಕರ್ತರು ಪರಿಶೀಲಿಸಬೇಕು ಎಂದರು. ಮಾದಾಪುರ, ಗರ್ವಾಲೆ ಹಾಗೂ ಹರದೂರು ಗ್ರಾ.ಪಂ ವ್ಯಾಪ್ತಿಯ ಕಾರ್ಯಕರ್ತರು ಪಾಲ್ಗೊಂಡ ಈ ಸಭೆಯಲ್ಲಿ ಮಾಜಿ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಬಿ.ಭಾರತೀಶ, ಸೋಮವಾರಪೇಟೆ ತಾಲೂಕು ಬಿಜೆಪಿ ಅಧ್ಯಕ್ಷ ಮನು ರೈ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹೆಚ್.ಕೆ.ಮಾದಪ್ಪ, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಿ.ಡಿ.ಮಂಜುನಾಥ, ಜಿಲ್ಲಾ ಬಿಜೆಪಿ ಯುವಮೋರ್ಚಾ ಪ್ರಮುಖ ದರ್ಶನ್ ಜೋಯಪ್ಪ, ಜಿಲ್ಲಾ ಸಹಕಾರ ಯೂನಿಯನ್‍ನ ನಿರ್ದೇಶಕ ನಾಪಂಡ ಉಮೇಶ, ಮಾದಾಪುರ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಕೊಪ್ಪತ್ತಂಡ ಗಣೇಶ, ಮಾಜಿ ಜಿ.ಪಂ.ಸದಸ್ಯ ಟಿ.ಪಿ.ಸಂದೇಶ, ಮಡಿಕೇರಿ ವಿಧಾನ ಕ್ಷೇತ್ರದ…
ಸೋಮವಾರಪೇಟೆ ಜ.25 : ಶಾಸಕರ ಕಚೇರಿಯಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‍ನ 8ನೇ ಸಮ್ಮೇಳನ ಫೆ.11 ರಂದು ಗೌಡಳ್ಳಿ ಬಿಜಿಎಸ್ ಮೈದಾನದಲ್ಲಿ ಆಯೋಸಲಾಗಿದ್ದು, ಸಮ್ಮೇಳನದ ಲಾಂಛನವನ್ನು ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ಅಪ್ಪಚ್ಚು ರಂಜನ್ ಬಿಡುಗಡೆಗೊಳಿಸಿದರು. ನಂತರ ಮಾತನಾಡಿ 8ನೇ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸುವ ಸಂಬಂಧ ಉಪಸಮಿತಿಗಳ ಪದಾಧಿಕಾರಿಗಳು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲು ಕೋರಿದರು. ಹಾಗೂ ಎಲ್ಲಾ ಸಾಹಿತ್ಯ ಆಸಕ್ತರು, ಸಂಘ ಸಂಸ್ಥೆಗಳ ಪ್ರಮುಖರು ಸಮ್ಮೇಳನದ ಯಶಸ್ಸಿಗೆ ಸಹಕರಿಸಬೇಕೆಂದು ಮನವಿ ಮಾಡಿದರು. ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಡಿ. ವಿಜೇತ್, ನಿಕಟಪೂರ್ವ ಅಧ್ಯಕ್ಷ ಹೆಚ್. ಜೆ. ಜವರಪ್ಪ, ಕಾರ್ಯದರ್ಶಿ, ಎ. ಪಿ. ವೀರರಾಜ್, ಸದಸ್ಯರಾದ ಎಂ.ಬಿ. ಅಭಿಮನ್ಯು ಕುಮಾರ್, ಜಲಾ ಕಾಳಪ್ಪ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಇದ್ದರು.
ಸುಂಟಿಕೊಪ್ಪ,ಜ.24: ಸುಂಟಿಕೊಪ್ಪ ಪೋಲಿಸ್ ಠಾಣೆಯ ನೂತನ ಠಾಣಾಧಿಕಾರಿಯಾಗಿ ಎಂ.ಸಿ.ಶ್ರೀಧರ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಬಿಂಡಿಗನೆಲ್ಲಿಯಲ್ಲಿ ಪೊಲೀಸ್ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸುಂಟಿಕೊಪ್ಪ ಠಾಣೆಯ ಅಪರಾಧ ವಿಭಾಗದ ಪಿಎಸ್‌ಐ ಸ್ವಾಮಿ ಅವರು ನೂತನ ಠಾಣಾಧಿಕಾರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು.
ವಿರಾಜಪೇಟೆ ಜ.24 : ವಿರಾಜಪೇಟೆ ತಾಲ್ಲೂಕಿನ ಅರಪಟ್ಟು ಕಡಂಗ ಗ್ರಾಮದ ನಿರ್ಜನ ಪ್ರದೇಶದಲ್ಲಿ ಅಕ್ರಮವಾಗಿ ತಡ ರಾತ್ರಿ ವೇಳೆಯಲ್ಲಿ ಜೂಜಾಡುತ್ತಿದ್ದ ಆರು ಮಂದಿಯನ್ನು ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಜೂಜಾಟಕ್ಕೆ ಬಳಸಲಾಗಿದೆ ಎನ್ನಲಾದ ರೂ.42,050 ನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಬಾರ ಠಾಣಾಧಿಕಾರಿ ಸಿ.ವಿ.ಶ್ರೀಧರ್, ಸಿಬ್ಬಂದಿಗಳಾದ ಖಾದರ್, ಗಿರೀಶ್, ಧರ್ಮ, ಲೋಕೇಶ್ ಮತ್ತು ಮಲ್ಲಿಕಾರ್ಜುನ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. (ವರದಿ : ಕಿಶೋರ್ ಕುಮಾರ್ ಶೆಟ್ಟಿ)
ಮಡಿಕೇರಿ ಜ.24 : ತನ್ನ ಗುರುಗಳ ಸಹಕಾರದೊಂದಿಗೆ ಭತ್ತದ ತೆನೆಯಿಂದ ಭತ್ತವನ್ನು ಬೇರ್ಪಡಿಸುವ ಯಂತ್ರವನ್ನು ತಯಾರಿಸಿ ರಾಜ್ಯದುದ್ದಗಲಕ್ಕೂ ನಡೆದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆಯುತ್ತಿರುವ ಬಡವರ ಮನೆಯ ವಿದ್ಯಾರ್ಥಿನಿ ಈಕೆ. ಮಡಿಕೇರಿ ಸಮೀಪದ ಮೇಕೇರಿ ಗ್ರಾಮದ ನಿವಾಸಿ ಕಾರ್ಮಿಕ ಶ್ರಮಜೀವಿ ಪಿ. ಶಿವಕುಮಾರ್ ರವರ ಪುತ್ರಿ ಮೇಘಾ ಎಸ್ ಅವರು ಪ್ರಸ್ತುತ ಹಾಕತ್ತೂರಿನ ಪ್ರೌಢಶಾಲೆಯ ಹತ್ತನೇಯ ತರಗತಿಯಲ್ಲಿ ಓದುತ್ತಿದ್ದಾಳೆ. ಇತ್ತೀಚೆಗೆ ಮಡಿಕೇರಿಯಲ್ಲಿ ನಡೆದ ತಾಲ್ಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದ್ದಾಳೆ. ಕುಶಾಲನಗರದಲ್ಲಿ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಧಾರವಾಡದಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಎಂಟನೇಯ ಸ್ಥಾನವನ್ನು ಪಡೆದಿದ್ದಾಳೆ. ಇದೀಗ ಕೇರಳದ ತ್ರಿಶೂರ್ ನಲ್ಲಿ ನಡೆಯಲಿರುವ ದಕ್ಷಿಣ ವಿಭಾಗ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಮೇಕೇರಿ ಗ್ರಾಮದ ಸ್ವಾಗತ ಯುವಕ ಸಂಘ ಮೆಚ್ಚುಗೆ ವ್ಯಕ್ತ ಪಡಿಸಿದ್ದು,…
ಮಡಿಕೇರಿ ಜ.24 : ಭವಿಷ್ಯದಲ್ಲಿ ಉತ್ತಮ ಸಮಾಜವನ್ನು ನಿರ್ಮಿಸಬೇಕಾದ ಯುವ ಸಮೂಹ ಮಾದಕ ವ್ಯವಸನಕ್ಕೆ ತುತ್ತಾಗುತ್ತಿರುವುದು ದುರಂತ ಎಂದು ಕೊಡವ ದೀನಬಂಧು ದತ್ತಿ ಸಂಸ್ಥೆಯ ಅಧ್ಯಕ್ಷ ಕಟ್ಟೇರ ಕೆ. ಕಾರ್ಯಪ್ಪ ಅತೃಪ್ತಿ ವ್ಯಕ್ತಪಡಿಸಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ, ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉತ್ತಮ ಶಿಕ್ಷಣದೊಂದಿಗೆ ಸನ್ನಡತೆಯನ್ನು ಮೈಗೂಡಿಸಿಕೊಂಡು ವಿದ್ಯಾರ್ಥಿಗಳು ಎಲ್ಲರಿಗೂ ಮಾದರಿಯಾಗುವಂತೆ ಬದುಕಬೇಕೆಂದು ಸಲಹೆ ನೀಡಿದರು. ಇದೇ ಸಂದರ್ಭ ಮಾತನಾಡಿದ ಕೊಡವ ದೀನಬಂಧು ದತ್ತಿ ಸಂಸ್ಥೆಯ ಕಾರ್ಯದರ್ಶಿ ಪಟ್ಟಡ ಎ.ಜಯಕುಮಾರ್, ಆಹಾರ ಪ್ರತಿಯೊಬ್ಬರಿಗೂ ಅಗತ್ಯವಾಗಿದ್ದು, ಯಾರಿಗೂ ಆಹಾರವನ್ನು ಪೋಲು ಮಾಡುವ ಹಕ್ಕಿಲ್ಲ ಎಂದು ತಿಳಿಸಿದರು. ಮಾಲೇಟಿರ ನಂಜುಅಪ್ಪಯ್ಯ ಅವರು ಮಾತನಾಡಿ, ವಿದ್ಯಾರ್ಥಿಗಳು ಅಹಂ ರೂಢಿಸಿಕೊಳ್ಳದೆ ಸೌಜನ್ಯದಿಂದ ಬದುಕುವ ಕಲೆ ಬೆಳೆಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು. ಇದೇ ಸಂದರ್ಭ ಕೊಡವ ದೀನಬಂಧು ದತ್ತಿ ಸಂಸ್ಥೆಯ ವಿವಿಧ ಸಮಾಜಮುಖಿ ಕಾರ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಮೇಜರ್ ಡಾ.ಬಿ. ರಾಘವ,…
ಮಡಿಕೇರಿ ಜ.24 : ಕರ್ನಾಟಕ ರಾಜ್ಯವು ಭಾರತದಲ್ಲಿಯೇ ಸಂಬಾರ ಬೆಳೆಗಳಿಗೆ ಅತ್ಯುತ್ತಮ ಮಾರುಕಟ್ಟೆಯಾಗಿದ್ದು, ಸಾಂಬಾರ ಬೆಳೆಗಳ ಉತ್ಪಾದನೆಯಲ್ಲಿ ವಿಶ್ವದಲ್ಲಿಯೇ 6 ನೇ ಸ್ಥಾನ ಪಡೆದಿದೆ ಎಂದು ಭಾರತೀಯ ಸಾಂಬಾರ ಮಂಡಳಿಯ ಉಪ ನಿರ್ದೇಶಕರಾದ ಡಾ.ಜಾನ್ಸಿ ಮಣಿತೋಟಂ ಅವರು ಹೇಳಿದ್ದಾರೆ. ನಗರದ ಹೋಟೆಲ್ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾಂಬಾರ ಮಂಡಳಿಯಿAದ ಆಯೋಜಿತ ಸಾಂಬಾರ ಪದಾರ್ಥಗಳ ಖರೀದಿದಾರರ ಮತ್ತು ಮಾರಾಟಗಾರರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಏಲಕ್ಕಿ, ಕರಿಮೆಣಸು, ಅರಿಸಿಣ, ಲವಂಗ, ಶುಂಠಿ ಸೇರಿದಂತೆ 50 ವೈವಿಧ್ಯಮಯ ಸಾಂಬಾರ ಪದಾರ್ಥಗಳನ್ನು ಕರ್ನಾಟಕದಲ್ಲಿ ಬೆಳೆಯಲಾಗುತ್ತಿದೆ. ವಿಶ್ವದಲ್ಲಿಯೇ ಅತ್ಯುತ್ತಮ ಗುಣಮಟ್ಟದ ಸಂಬಾರ ಬೆಳೆಗಳಿಗೆ ಕನ್ನಡನಾಡು ಹೆಸರಾಗಿದೆ. ಸುಮಾರು 3.75 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸಂಬಾರ ಬೆಳೆ ಬೆಳೆಸಲಾಗುತ್ತಿದ್ದು, 7.9 ಲಕ್ಷ ಮೆಟ್ರಿಕ್ ಟನ್ ಸಂಬಾರ ಪದಾರ್ಥ ಉತ್ಪಾದಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಕೇಂದ್ರ ಸರ್ಕಾರದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಂಬಾರ ಮಂಡಳಿಯು ಸಾಂಬಾರ ಪದಾರ್ಥಗಳ ರಫ್ತಿಗೆ ಆದ್ಯತೆ ನೀಡಿದ್ದು, ಮಾರಾಟಗಾರರ ಮತ್ತು ಖರೀದಿದಾರರ ನಡುವೆ ಸಮನ್ವಯತೆ ಸಾಧಿಸುವಲ್ಲಿ…
ಮಡಿಕೇರಿ ಜ.24 : ಕಳೆದ ಎರಡು ದಿನಗಳಿಂದ ಮೋಡದ ವಾತಾವರಣವಿದ್ದ ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಸಂಜೆ 4 ಗಂಟೆಯಿoದ ರಾತ್ರಿ 9 ಗಂಟೆಯ ವರೆಗೆ ನಿರಂತರವಾಗಿ ಮಳೆ ಸುರಿದಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಬೆಳಗ್ಗಿನಿಂದಲೇ ಮಳೆಯಾಗಿದೆ. ಮಡಿಕೇರಿ, ನಾಪೋಕ್ಲು, ಸುಂಟಿಕೊಪ್ಪ, ಕುಶಾಲನಗರ, ಸಿದ್ದಾಪುರ, ವಿರಾಜಪೇಟೆ, ಪೊನ್ನಂಪೇಟೆ, ಸೋಮವಾರಪೇಟೆ ಸೇರಿದಂತೆ ಹಲವು ಕಡೆ ಉತ್ತಮ ಮಳೆ ಸುರಿದಿದೆ. ಮಡಿಕೇರಿಯಲ್ಲಿ ಮೈಕೊರೆಯುವ ಚಳಿ ಇದ್ದು, ಮಂಜು ಮುಸುಕಿದ ವಾತಾವರಣ ಮುಂದುವರೆದಿದೆ. ::: ಬೆಳೆನಾಶ ::: ದಿಢೀರ್ ಆಗಿ ಸುರಿದ ಅಕಾಲಿಕ ಮಳೆಯಿಂದ ಕಾಫಿ ಮತ್ತು ಭತ್ತದ ಫಸಲಿಗೆ ಹಾನಿಯಾಗಿದೆ. ಈ ಎರಡೂ ಬೆಳೆಗಳ ಕೊಯ್ಲಿನ ಸಮಯ ಇದಾಗಿರುವುದರಿಂದ ಒಣಗಲು ಹಾಕಿದ್ದ ಫಸಲು ನೀರು ಪಾಲಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬಾರದ ಸ್ಥಿತಿ ಉಂಟಾಗಿದೆ ಎಂದು ಕೃಷಿಕ ವರ್ಗ ಬೇಸರ ವ್ಯಕ್ತಪಡಿಸಿದೆ.






