ಲೇಖಕ: admin

ಮಡಿಕೇರಿ ಮಾ.28 NEWS DESK : ನಗರದ ಮೈತ್ರಿ ಪೊಲೀಸ್ ಸಮುದಾಯ ಭವನದ ಬಳಿಯ ಪೊಲೀಸ್ ವಸತಿ ಗೃಹ ಸಮುಚ್ಚಯ ಮತ್ತು ಅಬ್ಬಿ ಫಾಲ್ಸ್ ಬಳಿಯ ಸಮುದಾಯ ಭವನಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು.

Read More

ಮಡಿಕೇರಿ ಮಾ.28 NEWS DESK : ಹಿಂದೂ ವಿರೋಧಿ ಮತ್ತು ರಾಷ್ಟ್ರ ವಿರೋಧಿ ಕೃತ್ಯಗಳನ್ನು ಖಂಡಿಸಿ ಏ.1 ರಂದು ನಾಪೋಕ್ಲುವಿನಲ್ಲಿ ಬೃಹತ್ ಹಿಂದೂ ಜನಜಾಗೃತಿ ಸಮಾವೇಶ ನಡೆಯಲಿದೆ ಎಂದು ಹಿಂದೂ ಸುರಕ್ಷಾ ಸಮಿತಿಯ ನಾಪೋಕ್ಲು ಸಂಚಾಲಕ ಲವ ನಾಣಯ್ಯ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂದು ಬೆಳಗ್ಗೆ 10 ಗಂಟೆಗೆ ನಾಪೋಕ್ಲು ಹಳೇ ತಾಲ್ಲೂಕು ಜಂಕ್ಷನ್ ನಿಂದ ಜಾಥಾ ನಡೆಯಲಿದೆ. ನಂತರ ಮಾರುಕಟ್ಟೆ ಆವರಣದಲ್ಲಿ ಜನಜಾಗೃತಿ ಸಭೆಯನ್ನು ಆಯೋಜಿಸಲಾಗಿದೆ ಎಂದರು. ಇಪ್ಪತ್ತನಾಲ್ಕು ಗ್ರಾಮಗಳ ಪ್ರಮುಖ ವ್ಯಾಪಾರ ವಹಿವಾಟಿನ ಕೇಂದ್ರವಾದ ನಾಪೋಕ್ಲುವಿನಲ್ಲಿ ಪ್ರಸ್ತುತ ಹಿಂದೂ ಸಮಾಜಕ್ಕೆ ಬೆದರಿಕೆಯೊಡ್ಡುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿದೆ. ಇದನ್ನು ನಿಗ್ರಹಿಸಬೇಕಾದ ನಾಪೋಕ್ಲು ಪೊಲೀಸ್ ಇಲಾಖೆ ನಿಷ್ಕ್ರೀಯವಾಗಿದೆಯೆಂದು ಆರೋಪಿಸಿದ ಲವ ನಾಣಯ್ಯ, ಈ ಬಗ್ಗೆ ಪೊಲೀಸ್ ಇಲಾಖೆಗೆ ದೂರುಗಳನ್ನು ನೀಡಿದ್ದರು ಸೂಕ್ತ ಸ್ಪಂದನ ದೊರಕಿಲ್ಲ. ಹೀಗಿದ್ದ ಮೇಲೆ ಹಿಂದೂ ಸಮಾಜಕ್ಕೆ ರಕ್ಷಣೆಯನ್ನು ನೀಡುವವರು ಯಾರು ಎಂದು ಪ್ರಶ್ನಿಸಿದರು. ಹಿಂದೂ ಜಾಗರಣಾ ಸಮಿತಿಯ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸಮಿತಿಯ…

Read More

ಮಡಿಕೇರಿ ಮಾ.28 NEWS DESK : ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯನವರ 120ನೇ ಜಯಂತಿಯನ್ನು ಮಾ.31ರಂದು ನಗರದಲ್ಲಿ ಜಿಲ್ಲಾಡಳಿತ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10.30 ಗಂಟೆಗೆ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಗುತ್ತದೆ. ಬಳಿಕ 11 ಗಂಟೆಗೆ ನಗರದ ಕೊಡವ ಸಮಾಜದ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದರು. ಮಾಜಿ ಸಚಿವ ಎಂ.ಸಿ.ನಾಣಯ್ಯ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಾಜಿ ಎಂಎಲ್‍ಸಿ ಶಾಂತೆಯಂಡ ವೀಣಾ ಅಚ್ಚಯ್ಯ, ನಿವೃತ್ತ ಕರ್ನಲ್ ಮುಲ್ಲೇರ ಕಾವೇರಪ್ಪ, ಸಾರ್ವಜನಿಕರು, ಸಂಘ ಸಂಸ್ಥೆಗಳು, ನಗರಸಭೆ ಮತ್ತು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸೇರಿ ಜನರಲ್ ತಿಮಯ್ಯ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ಕೊಡವ ಸಮಾಜದ ಉಪಾಧ್ಯಕ್ಷ ಕೆ.ಎ.ದೇವಯ್ಯ, ಕಾರ್ಯದರ್ಶಿ ಬೊಪ್ಪಂಡ…

Read More

ಸುಂಟಿಕೊಪ್ಪ ಮಾ.28 NEWS DESK : ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ (ಕೋಕಾ), ಪ್ರಧಾನ ಕಾರ್ಯದರ್ಶಿಯಾಗಿ ಬಿ.ಜಿ.ರಮೇಶ್ ನಾಕೂರು ಅವರನ್ನು ನೇಮಕಗೊಳಿಸಲಾಯಿತು. ಸುಂಟಿಕೊಪ್ಪದ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಬಿಜೆಪಿಯ ಶಕ್ತಿ ಕೇಂದ್ರದ ಅಧ್ಯಕ್ಷ ಧನುಕಾವೇರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಭೆಯಲ್ಲಿ ಮಂಡಲ ಅಧ್ಯಕ್ಷರಾದ ಗೌತಮ್ ಮಾಜಿ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಪಿ.ಆರ್.ಸುನಿಲ್‍ಕುಮಾರ್, ಯುವ ಮೋರ್ಚಾ ಮಾಜಿ ಅಧ್ಯಕ್ಷರಾದ ಚಂದ್ರಶೇಖರ್ ಹೆರೂರು, ಜಿಲ್ಲಾ ಒಬಿಸಿ ಮಾಜಿ ಉಪಾಧ್ಯಕ್ಷರಾದ ಬಿ.ಕೆ.ಮೋಹನ್, ನಾಕೂರು ಶಿರಂಗಾಲ ಪಂಚಾಯಿತಿ ವ್ಯಾಪ್ತಿಯ ಶಕ್ತಿ ಕೇಂದ್ರ ಅಧ್ಯಕ್ಷ ಶಂಕರ್ ನಾರಾಯಣ, ಕೆದಕಲ್ ಪಂಚಾಯಿತಿ ಶಕ್ತಿ ಕೇಂದ್ರ ಅಧ್ಯಕ್ಷ ರಮೇಶ್, ಸೋಮಯ್ಯ, ಲೀಲಾ ಮೇದಪ್ಪ ಹಾಗೂ ವಿವಿಧ ಬೂತ್ ಮಟ್ಟದ ಅಧ್ಯಕ್ಷರುಗಳು ಯುವ ಮೋರ್ಚಾ ಅಧ್ಯಕ್ಷ ವಿಘ್ನೇಶ್, ಸುಂಟಿಕೊಪ್ಪ ನಿಕಟ ಪೂರ್ವ ಅಧ್ಯಕ್ಷರಾದ ವಾಸುದೇವ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರುಗಳು ಪಾಲ್ಗೊಂಡಿದ್ದರು. 4 ಪಂಚಾಯಿತಿ ಕಾರ್ಯಕರ್ತರ ಸಮ್ಮುಖದಲ್ಲಿ…

Read More

ಮಡಿಕೇರಿ ಮಾ.28 NEWS DESK : ವಯನಾಡು ಜಿಲ್ಲೆಯ ಮಾನಂದವಾಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯ ಪರವಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿರುನೆಲ್ಲಿ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕೈಗೊಂಡರು. ಈ ಸಂದರ್ಭದಲ್ಲಿ ತಿರುನೆಲ್ಲಿ ಭಾಗದ ಪ್ರಸಿದ್ಧ ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಅಭ್ಯರ್ಥಿಯ ಗೆಲುವಿಗಾಗಿ ಪ್ರಾರ್ಥಿಸಿದರು. ಶಾಸಕರೊಂದಿಗೆ ಮಾನಂದವಾಡಿ ಕ್ಷೇತ್ರದ ಅಭ್ಯರ್ಥಿ ಉಷಾ ವಿಜಯನ್, ಕೊಡಗಿನ ಪ್ರಮುಖರಾದ ಅಜ್ಜಿಕುಟ್ಟಿರ ಪೊನ್ನು, ಕುಂಡಚ್ಚಿರ ಮಂಜು ದೇವಯ್ಯ, ರಾಜನ್, ಶಾಸಕರ ಸಹಾಯಕರಾದ ಕುಮಾರ್ ಮಂಡ್ಯ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು.

Read More

ಸೋಮವಾರಪೇಟೆ ಮಾ.28 NEWS DESK : ಸಂಭ್ರಮದ ರಾಮೋತ್ಸವ, ವಿಜೃಂಭಣೆಯ ಶೋಭಾಯಾತ್ರೆಗೆ ವಿದ್ಯುಕ್ತ ತೆರೆಬಿದ್ದಿತು. ಸೋಮವಾರಪೇಟೆ ರಾಮನವಮಿ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಹನ್ನೊಂದನೇ ವರ್ಷದ ರಾಮನವಮಿ ಉತ್ಸವದ ಅಂಗವಾಗಿ ಶುಕ್ರವಾರ ರಾತ್ರಿ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ 12ಕ್ಕೂ ಹೆಚ್ಚಿನ ಸ್ತಬ್ಧ ಚಿತ್ರಗಳು, ವಿವಿಧ ಜಾನಪದ ಕಲಾ ತಂಡ ಹಾಗೂ ಸಿಡಿಮದ್ದು ಪ್ರದರ್ಶನದೊಂದಿಗೆ ಒಂದು ಕಿಲೋಮೀಟರ್ ಬೃಹತ್ ಶೋಭಾಯಾತ್ರೆ ನಡೆಯಿತು. ಶೋಭಾಯಾತ್ರೆಯಲ್ಲಿ ವೀರಗಾಸೆ, ನಂದಿಧ್ವಜ, ಭಜನೆ, ಹುಲಿವೇಷ, ಗೊಂಬೆಕುಣಿತ, ಅಗ್ನಿ ಸರ್ಕಸ್, ಗಿರಿಜನ ಕಲೆ, ಕೆಂಗಿಲೆ ಕಲಾತಂಡಗಳೊಂದಿಗೆ ವಿವಿಧ ಬ್ಯಾಂಡ್ ಸೆಟ್ ಗಳೊಂದಿಗೆ ಆಗಸದಲ್ಲಿ ಚಿತ್ತಾಕಾರ ಪಟಾಕಿ ಪ್ರದರ್ಶನ ಜನಮನ ಸೆಳೆಯಿತು. ಈ ಎಲ್ಲಾ ಕಲಾತಂಡ ಗಳೊಂದಿಗೆ ಅಲಂಕೃತ ಮಂಟಪದಲ್ಲಿ ಸೀತಾರಾಮಾಂಜನಯರ ಉತ್ಸವ ಮೂರ್ತಿಯನ್ನು ಮಂಗಳ ವಾದ್ಯಗೋಷಗಳೊಂದಿಗೆ ಶನಿವಾರ ಮುಂಜಾನೆಯವರೆಗೂ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿಯವರ ನೇತೃತ್ವದಲ್ಲಿ ಬಿಗುಪೋಲಿಸ್ ಬಂದೋಬಸ್ತ್ ಮಾಡಲಾಗಿತ್ತು. ಮೆರವಣಿಗೆ ತೆರಳುವ ಮಾರ್ಗದಲ್ಲಿ ಅಡಚಣೆಯಾಗದಂತೆ ವಾಹನಸಂಚಾರ ನಿರ್ಬಂಧಿಸಲಾಗಿತ್ತು. ಯಾವುದೇ…

Read More

ಮಡಿಕೇರಿ ಮಾ.28 NEWS DESK : 33/11ಕೆವಿ ಮೂರ್ನಾಡು ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ F3 ಮೂರ್ನಾಡು ಫೀಡರ್‌ನಲ್ಲಿ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಮಾ.29 ರಂದು ಬೆಳಿಗ್ಗೆ 10:00 ರಿಂದ ಸಂಜೆ 5.00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ಮೂರ್ನಾಡು ಟೌನ್, ಮುತ್ತಾರುಮುಡಿ, ಕುಂಬಳದಾಳು, ಕಿಗ್ಗಾಲು, ಕಬಡಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.

Read More

ಗೋಣಿಕೊಪ್ಪ ಮಾ.28 NEWS DESK : ಗೋಣಿಕೊಪ್ಪಲು ಕ್ಲಸ್ಟರ್ ಮಟ್ಟದ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ರಚನೆ ಮತ್ತು ನಿರ್ವಹಣೆ ತರಬೇತಿಯು ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಜಗದೀಶ್ ಜೋಡುಬೀಟಿ ತರಬೇತಿ ಕಾರ್ಯಕ್ರಮನ್ನು ಉದ್ಘಾಟಿಸಿದರು. ನಂತರ ಮಾತನಾಡಿ, ಶಾಲೆಯ ಸವಾರ್ಂಗೀಣ ಅಭಿವೃದ್ಧಿಗೆ ಸಮಿತಿಯ ಕರ್ತವ್ಯ ಪ್ರಮುಖವಾಗಿದೆ. ಮಕ್ಕಳ ಶೈಕ್ಷಣಿಕ ಪ್ರಗತಿಯ ಮುನ್ನೋಟಕ್ಕೆ ಸಮಿತಿ ಪೂರ್ವಕವಾಗಿ ಸ್ಪಂದಿಸಿ ಕಾರ್ಯನಿರ್ವಹಿಸಬೇಕಾದ ಜವಾಬ್ದಾರಿ ಇದೆ ಎಂದು ತಿಳಿಸಿದರು. ಶಾಲೆಯ ಮುಖ್ಯ ಶಿಕ್ಷಕ ಹೆಚ್.ಕೆ.ಕುಮಾರ್ ಮಾತನಾಡಿ, ಎಸ್‍ಡಿಎಂಸಿ ಸಮಿತಿಯು ಶಾಲೆಯ ಅಭಿವೃದ್ಧಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಾಗಿದೆ. ಮಕ್ಕಳ ದಾಖಲಾತಿ ಶಾಲೆಯ ಮೂಲ ಸೌಕರ್ಯಗಳ ಅಗತ್ಯತೆಗಳ ಬಗ್ಗೆ ಪೂರೈಕೆ ಮಾಡುವ ಕರ್ತವ್ಯ ಹೊಂದಿದೆ ಎಂದು ತಿಳಿಸಿದರು. ಗೋಣಿಕೊಪ್ಪ ಕ್ಲಸ್ಟರ್‍ನ ಸಿ.ಆರ್.ಪಿ ರಾಧಾ ಅವರು, ನೂತನವಾಗಿ ಆಯ್ಕೆಯಾದ ಎಸ್‍ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರುಗಳ ಜವಾಬ್ದಾರಿ, ಸಮಿತಿ ನಿರ್ವಹಿಸಬೇಕಾದ ಪ್ರಕಾರಗಳ ಬಗ್ಗೆ ತಿಳಿಸುತ್ತಾ, ಸಮಿತಿ ರಚನೆ ಮತ್ತು…

Read More

ಕೂಡಿಗೆ ಮಾ.28 NEWS DESK : ವಿದ್ಯಾರ್ಥಿಗಳಿಗೆ ಶಿಕ್ಷಣದ ನಂತರದ ಸರಿಯಾದ ವೃತ್ತಿ ಮಾರ್ಗವನ್ನು ಆರಿಸಿಕೊಳ್ಳಲು ಮತ್ತು ಉದ್ಯೋಗಾಕಾಂಕ್ಷಿಗಳಿಗೆ ಸೂಕ್ತ ಉದ್ಯೋಗ ಕಂಡುಕೊಳ್ಳಲು ವೃತ್ತಿ ಶಿಕ್ಷಣ ಮತ್ತು ಪ್ರದರ್ಶನ ಮೇಳ ಆಯೋಜನೆ ಮಾಡಿ ಮಾಹಿತಿ ನೀಡುತ್ತಿರುವುದು ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಲಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ಹಹಕಾಧಿಕಾರಿ ಆನಂದ್ ಪ್ರಕಾಶ್ ಮೀನ ಕರೆ ನೀಡಿದರು. ಸಮಗ್ರ ಶಿಕ್ಷಣ-ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯಲ್ಲಿ ಜಿಲ್ಲಾ ವೃತ್ತಿಪರ ಮತ್ತು ವೃತ್ತಿ ಮಾರ್ಗದರ್ಶನ ಘಟಕದ ವತಿಯಿಂದ ಕೂಡಿಗೆ ಡಯಟ್ ಸಂಸ್ಥೆ ಆವರಣದಲ್ಲಿ “ನನ್ನ ವೃತ್ತಿ ನನ್ನ ಆಯ್ಕೆ” ಎಂಬ ಶೀರ್ಷಿಕೆಯಡಿ ಏರ್ಪಡಿಸಿದ್ದ ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್ ಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಈ ವೃತ್ತಿಮೇಳದ ಮಾಹಿತಿಯನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಸದುಪಯೋಗ ಪಡೆಸಿಕೊಂಡು ತಮ್ಮ ಉತ್ತಮ…

Read More

ಕುಶಾಲನಗರ ಮಾ.28 NEWS DESK : ಭಾರತವು ವಿಶ್ವದ ಅತ್ಯುನ್ನತ ನಾಗರಿಕತೆಗಳನ್ನು ಹೊಂದಿದೆ. ಪ್ರಾಚೀನ ಕಾಲದಲ್ಲಿ ಗುರುಕುಲ ಮತ್ತು ಆಶ್ರಮಗಳು ಮೌಲ್ಯಾಧಾರಿತ ಶಿಕ್ಷಣ ನೀಡುತ್ತಿದ್ದವು. ತದನಂತರ ನಳಂದ ಮತ್ತು ತಕ್ಷಶಿಲಾದಂತಹ ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ಭಾರತೀಯ ಸಮಾಜದ ಮೌಲ್ಯಗಳನ್ನು, ಬದುಕಿನ ಪಾಠಗಳನ್ನು, ಸಂಸ್ಕಾರಯುತ ವಿದ್ಯಾಭ್ಯಾಸವನ್ನು ಉನ್ನತ ಶಿಕ್ಷಣದ ಮೂಲಕ ಬೋಧಿಸುತ್ತಿದ್ದವು. ಭಾರತದ ಇಂತಹ ಐತಿಹಾಸಿಕ ಶಿಕ್ಷಣ ಪದ್ಧತಿ ಇಂದಿನ ಮಕ್ಕಳಿಗೆ ಅತ್ಯಗತ್ಯ ಮತ್ತು ಅನಿವಾರ್ಯ ಎಂದು ಬೆಂಗಳೂರು ದಕ್ಷಿಣದ ಆಡಳಿತಾತ್ಮಕ ನ್ಯಾಯಾಧೀಶ ಮತ್ತು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರು ಅಭಿಮತ ವ್ಯಕ್ತಪಡಿಸಿದರು. ಕೊಡಗು ವಿಶ್ವವಿದ್ಯಾಲಯದ ಚಿಕ್ಕ ಅಳುವಾರದ ಜ್ಞಾನ ಕಾವೇರಿ ಆವರಣದಲ್ಲಿಹಮ್ಮಿಕೊಂಡಿದ್ದ ಕೊಡಗು ವಿಶ್ವವಿದ್ಯಾಲಯದ ಮೂರನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಡಿಜಿಟಲ್ ಯುಗದಲ್ಲಿ ನಾವು ಎಷ್ಟೇ ಮುಂದುವರೆದಿದ್ದರೂ ನಮ್ಮ ಪೂರ್ವಜರ ಜ್ಞಾನದಿಂದ ನಾವು ತುಂಬ ದೂರ ಉಳಿದಿದ್ದೇವೆ ಎಂಬುದನ್ನು ಅರ್ಥೈಸಿಕೊಳ್ಳಬೇಕು. ವಿಜ್ಞಾನ, ಕಲೆ, ಸಾಹಿತ್ಯ, ಸಂಗೀತ, ರಾಜಕೀಯ ಒಳಗೊಂಡಂತೆ ಬಹುತೇಕ ಕ್ಷೇತ್ರಗಳಲ್ಲಿ ನಮ್ಮ ಪೂರ್ವಜರು…

Read More