ಮಡಿಕೇರಿ ಜ.24 : ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷರಾಗಿ ಭೋಜಣ್ಣ ಸೋಮಯ್ಯ, ಕಾರ್ಯದರ್ಶಿ ಹೆಚ್.ಬಿ.ಪೃಥ್ವಿ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಎಂ.ಕೆ.ಅಪ್ಪಯ್ಯ ಆಯ್ಕೆಯಾಗಿದ್ದಾರೆ. ಪಕ್ಷದ ಕರ್ನಾಟಕ ರಾಜ್ಯದ ಚುನಾವಣಾ ಉಸ್ತುವಾರಿ ದಿಲೀಪ್ ಪಾಂಡೆ ನೂತನ ಪದಾಧಿಕಾರಿಗಳನ್ನು ಘೋಷಿಸಿದರು. ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಪೃಥ್ವಿ ರೆಡ್ಡಿ ಅವರು ಮುಂದುವರಿಯಲಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಸಂಚಿತ್ ಸಹಾನಿ, ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿ ಭಾಸ್ಕರ್ ರಾವ್, ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ಹಾಗೂ ಮಾಧ್ಯಮ ಸಂವಹನ ಉಸ್ತುವಾರಿಯನ್ನಾಗಿ ಬ್ರಿಜೇಶ್ ಕಾಳಪ್ಪ ಅವರು ಆಯ್ಕೆ ಮಾಡಲಾಗಿದೆ.
ಲೇಖಕ: admin
ಮಡಿಕೇರಿ ಜ.24 : ರಾಜಕೀಯ ಪಕ್ಷಗಳಿಂದ ಜನಸಾಮಾನ್ಯರ ಸಮಸ್ಯೆಗಳಿಗೆ ನ್ಯಾಯ ದೊರೆಯದೆ ಇರುವುದರಿಂದ ತಾವು ಈ ಬಾರಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿಯುವುದಾಗಿ ಕಕ್ಕಬ್ಬೆ ಗ್ರಾ.ಪಂ ಮಾಜಿ ಸದಸ್ಯ ಹಾಗೂ ಅಲ್ಪಸಂಖ್ಯಾತರ ಹಿರಿಯ ಮುಖಂಡ ಎಂ.ಎ.ನಾಸಿರ್ ಮಕ್ಕಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇಂದಿನ ಸಾಮಾಜಿಕ ಪರಿಸ್ಥಿತಿ ಹದಗೆಡಲು ರಾಜಕೀಯ ಪಕ್ಷಗಳ ಕೊಡುಗೆ ಬಹಳಷ್ಟಿದೆ. ಇಂದು ಯಾವುದೇ ರಾಜಕೀಯ ಪಕ್ಷಗಳು ಅದರ ತತ್ವ ಸಿದ್ಧಾಂತಗಳಡಿಯಲ್ಲಿ ಕಾರ್ಯ ನಿರ್ವಹಿಸುತ್ತಿಲ್ಲ. ಕೇವಲ ಮತ ಬ್ಯಾಂಕ್ ಸೃಷ್ಟಿಯಷ್ಟೇ ಅವುಗಳ ಮೂಲ ಉದ್ದೇಶವಾಗಿರುವುದರಿಂದ ಜನರ ವಿಶ್ವಾಸವನ್ನು ಕಳೆದುಕೊಳ್ಳುತ್ತಿವೆ. ಈ ಕಾರಣದಿಂದ ಜನರಿಗೆ ನ್ಯಾಯ ದೊರಕಿಸಿಕೊಡಬೇಕೆನ್ನುವ ಗುರಿಯೊಂದಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವಿರಾಜಪೇಟೆ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿದ್ದಾರೆ. ನನ್ನ ಸ್ಪರ್ಧೆ ಖಚಿತವಾಗಿದ್ದು, ಕ್ಷೇತ್ರದಾದ್ಯಂತ ಜನರ ಒತ್ತಡ ಮತ್ತು ಬೆಂಬಲವಿದೆ. ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ, ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಜನರೇ ಒತ್ತಾಯಿಸುತ್ತಿದ್ದಾರೆ. ಇದರಿಂದಾಗಿ ಸ್ಪರ್ಧಿಸಲು ಮನಸ್ಸು ಮಾಡಿದ್ದು, ಅಗತ್ಯ ಸಿದ್ಧತೆಗಳನ್ನು…
ಮಡಿಕೇರಿ ಜ.24 : ಕರ್ನಾಟಕ ಟೆಕ್ವಾಂಡೋ ಸಂಸ್ಥೆಯ ವತಿಯಿಂದ ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಸಬ್ ಜೂನಿಯರ್, ಜೂನಿಯರ್ ಮತ್ತು ಸೀನಿಯರ್ ಪುರುಷ, ಮಹಿಳಾ ವಿಭಾಗದಲ್ಲಿ ಮಡಿಕೇರಿಯ ಕೂರ್ಗ್ ಟೆಕ್ವಾಂಡೋ ತರಬೇತಿ ಕೇಂದ್ರದ ನಾಲ್ವರು ಕ್ರೀಡಾಪಟುಗಳು ಕಂಚಿನ ಪದಕ ಗೆದ್ದಿದ್ದಾರೆ. ಸಬ್ ಜೂನಿಯರ್ 12 ವರ್ಷದೊಳಗಿನ ವಿಭಾಗದಲ್ಲಿ ಬಿ.ಎಲ್.ಭಾವನಾ ರೈ (ಐಶ್ವರ್ಯ ರೈ), ಬಾರನ ಬಿಂಬಿತ್ ಗೌಡ, ಲೋಹಿತ್ ಆರ್. ಹಾಗೂ ಕೋಚನ ಲಾಸ್ಯ ಚೇತನ್ ಕಂಚಿನ ಪದಕ ಗೆದ್ದುಕೊಂಡರು. ಇವರುಗಳು ಕೂರ್ಗ್ ಟೆಕ್ವಾಂಡೋ ತರಬೇತಿ ಕೇಂದ್ರದ ತರಬೇತುದಾರ ಬಿ.ಜಿ.ಲೋಕೇಶ್ ರೈ ಅವರ ಬಳಿ ತರಬೇತಿ ಪಡೆಯುತ್ತಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ನಡೆದ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳ ಸುಮಾರು 1300 ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದರು.
ಮಡಿಕೇರಿ ಜ.23 : ಬದಲಾದ ಕಾಲಮಾನಕ್ಕೆ ಅನುಗುಣವಾಗಿ ಪತ್ರಕರ್ತರೂ ತಾಂತ್ರಿಕವಾಗಿ ‘ಅಪ್‌ಡೇಟ್’ ಆಗುವ ಅಗತ್ಯವಿದೆ ಎಂದು ಕೊಡಗು ಪ್ರೆಸ್‌ಕ್ಲಬ್ ಬೆಳ್ಳಿಮಹೋತ್ಸವ ಸಮಿತಿ ಮಹಾಪೋಷಕ ಜಿ.ರಾಜೇಂದ್ರ ಅಭಿಪ್ರಾಯಪಟ್ಟರು. ಕೊಡಗು ಪ್ರೆಸ್‌ಕ್ಲಬ್ ಬೆಳ್ಳಿಮಹೋತ್ಸವದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಕೊಡಗು ಪ್ರೆಸ್‌ಕ್ಲಬ್ ಪ್ರೀಮಿಯರ್ ಲೀಗ್– 3 ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿದರು. ಮೊದಲೆಲ್ಲಾ ಪತ್ರಕರ್ತರು ಡೈರಿ, ಪೆನ್ ಹಿಡಿದುಕೊಂಡು ಹೋಗುತ್ತಿದ್ದರು. ಆದರೆ ಈಗ ಮೊಬೈಲ್ ಒಂದುಇದ್ದರೆ ಸಾಕು, ಎಲ್ಲಾ ಕೆಲಸವನ್ನೂ ಸುಲಭವಾಗಿ ಮಾಡಬಹುದಾಗಿದೆ ಎಂದರು. ಪತ್ರಕರ್ತರ ಒತ್ತಡದ ಬದುಕಿನಲ್ಲಿ ಉಲ್ಲಾಸ ತುಂಬಲು ಕ್ರೀಡಾ ಚಟುವಟಿಕೆಗಳು ಹೆಚ್ಚು ಅನುಕೂಲವಾಗಿದೆ. ಕ್ರಿಕೆಟ್ ಬಾಂಧವ್ಯ ಬೆಸೆಯುತ್ತದೆ ಎಂದು ಹೇಳಿದರು. ಕೊಡಗು ಪ್ರೆಸ್‌ಕ್ಲಬ್ ಬೆಳ್ಳಿಮಹೋತ್ಸವ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಡ ಎಂ.ಪೂವಯ್ಯ ಮಾತನಾಡಿ, ಕ್ರಿಕೆಟ್ ಪಂದ್ಯಾವಳಿ ಯಶಸ್ವಿಯಾಗಿದೆ. ಇದೇ ರೀತಿಯಲ್ಲಿ ಬೆಳ್ಳಿಮಹೋತ್ಸವ ಹಿನ್ನೆಲೆಯಲ್ಲಿ ನಡೆಯಲಿರುವ ಸಾಂಸ್ಕೃತಿ ಸೇರಿದಂತೆ ಎಲ್ಲಾ ಬಗೆಯ ಕಾರ್ಯಕ್ರಮಗಳಲ್ಲೂ ಎಲ್ಲರೂ ಪಾಲ್ಗೊಳ್ಳುವಂತಾಗಬೇಕು ಎಂದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್.ಸವಿತಾರೈ ಮಾತನಾಡಿ, ಜಿಲ್ಲೆಯಾದ್ಯಂತ ಕರ್ತವ್ಯ ನಿರ್ವಹಿಸುವ ವೃತ್ತಿ ಬಾಂಧವರನ್ನು…
ಮಡಿಕೇರಿ ಜ.23 : ಕೊಡಗು ಪ್ರೆಸ್‌ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-3ರಚಾಂಪಿಯನ್ ಆಗಿ ಮೀಡಿಯಾ ಸೂಪರ್ ಕಿಂಗ್ಸ್ ತಂಡ ಹೊರಹೊಮ್ಮಿದೆ. ಅಂತಿಮ ಕ್ಷಣದಲ್ಲಿ ಎಡವಿದ ಇಂಚರ ಕೊಡಗು ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪಕಾಲೇಜು ಮೈದಾನದಲ್ಲಿ ನಡೆದ ಪಂದ್ಯಾವಳಿಯಲ್ಲಿ ಮಂದ ಬೆಳಕಿನ ಕಾರಣದಿಂದ 2 ಓವರ್‌ಗೆ ನಡೆದ ಫೈನಲ್ ಪಂದ್ಯದಲ್ಲಿಟಾಸ್‌ಗೆದ್ದ ಇoಚರ ಕೊಡಗು ತoಡ ಬ್ಯಾಟಿಂಗ್ ಆಯ್ದುಕೊಂಡಿತು.ಆದರೆ, ಬ್ಯಾಟಿಂಗ್‌ನಲ್ಲಿ ಆಟಗಾರರು ಎಡವಿದ್ದರಿoದ 2 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 7 ರನ್ ಗಳಿಸಲಷ್ಟೇ ಶಕ್ತರಾದರು.ಗೆಲ್ಲಲು 8 ರನ್‌ಗಳ ಗುರಿ ಪಡೆದ ಮೀಡಿಯಾ ಸೂಪರ್ ಕಿಂಗ್ಸ್ ಮೊದಲ ಓವರ್‌ನಲ್ಲಿ ಇನ್ನು ಒಂದು ಎಸೆತ ಬಾಕಿ ಇರುವಾಗಲೇ ವಿಕೆಟ್ ಕಳೆದುಕೊಳ್ಳದೆ 11 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಮೀಡಿಯಾ ಸೂಪರ್ ಕಿಂಗ್ಸ್ ತಂಡದ ಪರ ಮಂಜು 3 ಎಸೆತಗಳಲ್ಲಿ 9 ರನ್ ಗಳಿಸಿದರಲ್ಲದೆ 1 ವಿಕೆಟ್ ಕಬಳಿಸಿ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್ ಗೆದ್ದ…
ವಿರಾಜಪೇಟೆ ಜ.23 : ಬಿಳುಗುಂದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಕ್ಕಳ ಕಲಿಕಾ ಹಬ್ಬವನ್ನು ಏರ್ಪಡಿಸಲಾಗಿತ್ತು. ಬಿಳುಗುಂದ ಗ್ರಾಮ ಪಂಚಾಯತಿ ಅಧ್ಯಕ್ಷ ಐನಂಡ ಪ್ರತಾಪ್ ಪ್ಯಾರಾಚೂಟ್ ಮಾದರಿಯನ್ನು ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಷಯ ಪರಿವೀಕ್ಷಕರಾಗಿ ಆಗಮಿಸಿದ ಕೆ.ಆರ್.ಬಿಂದು ಪ್ರಾಸ್ತಾವಿಕವಾಗಿ ಮಾತನಾಡಿ ಕೋವಿಡ್ 19ರ ನಂತರ ಕೊರತೆಯಾದ ಕಲಿಕೆಯನ್ನು ಪೂರೈಸಲು ಚೇತೆರಿಕೆ ಬೋಧನೆಗೆ ಅವಕಾಶ ನೀಡಲಾಗಿತ್ತು. ಕಲಿಕಾ ಹಬ್ಬದ ಮೂಲಕ ಈ ಹಬ್ಬವನ್ನು ರಾಜ್ಯದಾದ್ಯಂತ ಆಚರಿಸಲಾಗುತ್ತಿದೆ. ಬಿಳುಗುಂದ ಶಾಲೆಯಲ್ಲಿ ಸುಂದರವಾಗಿ ಕಲಿಕಾ ಹಬ್ಬವನ್ನು ಆಯೋಜಸಿದ ಸರ್ವರಿಗೂ ಧನ್ಯವಾದಗಳನ್ನು ತಿಳಿಸಿದರು. ಕಾರ್ಯಕ್ರಮದ ಮೊದಲಿಗೆ ಬಿಳುಗುಂದ ಗ್ರಾಮ ಪಂಚಾಯತಿ ಕಚೇರಿಯಿಂದ ಶಾಲೆಯವರೆಗೆ ಶಾಲಾಮಕ್ಕಳ ಮೆರವಣಿಗೆಯನ್ನು ನಡೆಸಲಾಯಿತು. ತದನಂತರ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ಕಬ್ಬಿಣದ ಕಮಾನನ್ನು ದಾನಿಗಳಾದ ಅಹಮ್ಮದ್ ನಲ್ವತ್ತೊಕ್ಲು ಇವರು ರಿಬ್ಬನ್ ಕತ್ತರಿಸಿ ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ಈ ವರ್ಷದ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಬಿಳುಗುಂದ ಶಾಲೆಯ ಕನ್ನಡ ಭಾಷಾ ಶಿಕ್ಷಕಿ ಸಾವಿತ್ರಿ ಹಾಗೂ ಈ ವರ್ಷದ ಉದ್ದ ಜಿಗಿತದಲ್ಲಿ…
ಕುಶಾಲನಗರ ಜ.23 : ಕುಶಾಲನಗರ ಬಿಜೆಪಿ ಮಹಾ ಶಕ್ತಿ ಕೇಂದ್ರದ ವತಿಯಿಂದ ಕುಶಾಲನಗರದಲ್ಲಿ ‘ಬೂತ್ ವಿಜಯ್ ಸಂಕಲ್ಪ’ ಕಾರ್ಯಕ್ರಮ ನಡೆಸಲಾಯಿತು. ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಕೇoದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಪುರಸಭೆಯು ಹಮ್ಮಿಕೊಂಡಿರುವ ಜನಪರ ಯೋಜನೆಗಳ ಕರ ಪತ್ರಗಳನ್ನು ಸ್ಥಳೀಯ ಆಟೋಚಾಲಕರಿಗೆ, ಬೀದಿ ಬದಿ ವ್ಯಾಪಾರಿಗಳಿಗೆ, ವರ್ತಕರಿಗೆ, ಸಾರ್ವಜನಿಕರಿಗೆ ನೀಡುವ ಮೂಲಕ ಬಿಜೆಪಿಯನ್ನು ಬೆಂಬಲಿಸಲು ಮನವಿ ಮಾಡಿಕೊಳ್ಳಲಾಯಿತು. ಈ ಸಂದರ್ಭ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಉಮಾಶಂಕರ್, ಸಹ ಪ್ರಮುಖ್‌ಶಿವಾಜಿ, ಪುರಸಭೆಯ ಅಧ್ಯಕ್ಷರಾದ ಜಯವರ್ದನ್, ಪ್ರಬಾರಿಗಳಾದ ವೇದಾವತಿ, ಪುರಸಭೆಯ ಸದಸ್ಯರಾದ ಅಮೃತ್‌ರಾಜ್, ಡಿ.ಕೆ.ತಿಮ್ಮಪ್ಪ, ಕೆ.ಜಿ.ಮನು, ಪುಂಡರಿಕಾಕ್ಷ, ಕುಡ ಅಧ್ಯಕ್ಷರಾದ ಚರಣ್, ವರದ, ಬಾಲಕೃಷ್ಣ, ರಜಿನಿಕಾಂತ, ಸೋಮಣ್ಣ, ಸುಮನ್, ಚಂದ್ರಶೇಖರ್ ಇದ್ದರು.
ನಾಪೋಕ್ಲು ಜ.23 : ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಅಸ್ಸಾಂ ಮೂಲದ ಬಾಲಕಿಯೊಬ್ಬಳು ಕಾಫಿ ಗಿಡಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ಕಕ್ಕಬ್ಬೆ ಸಮೀಪದ ಕುಂಜಿಲ ಗ್ರಾಮದಲ್ಲಿ ನಡೆದಿದೆ. ಅಸ್ಸಾಂ ಮೂಲದ ಕಾರ್ಮಿಕ ತಾಜುದ್ದೀನ್ ಎಂಬುವವರ ಪುತ್ರಿ ತಸ್ಲೀಮ (13) ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕಿ. ತಂದೆ, ತಾಯಿ ತೋಟದ ಕೆಲಸಕ್ಕೆ ತನ್ನನ್ನು ಕರೆದುಕೊಂಡು ಹೋಗಲಿಲ್ಲ ಎನ್ನುವ ಕ್ಷುಲ್ಲಕ ಕಾರಣಕ್ಕೆ ತಸ್ಲೀಮ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ. ನಾಪೋಕ್ಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. (ವರದಿ : ಝಕರಿಯ ನಾಪೋಕ್ಲು)
ಮಡಿಕೇರಿ ಜ.23 : ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 126ನೇ ಜನ್ಮ ದಿನಾಚರಣೆ ಅಂಗವಾಗಿ ಜನವರಿ 23 “ಪರಾಕ್ರಮ್ ದಿವಸ್” ದಂದು ನೇತಾಜಿ ಅವರ ಸವಿನೆನಪಿಗಾಗಿ ಮಡಿಕೇರಿ ನಗರದ ವಾರ್ಡ್ ನಂ.6 ರ ಸ್ಥಳೀಯ ರಾಘವೇಂದ್ರ ದೇವಾಲಯದ ಬಳಿ “ನೇತಾಜಿ ಜಂಕ್ಷನ್” ಎಂದು ನಾಮಕರಣ ಮಾಡಿ ನಾಮಫಲಕವನ್ನು ಅನಾವರಣಗೊಳಿಸಲಾಯಿತು. ನಾಮಫಲಕವನ್ನು ಅನಾವರಣಗೊಳಿಸಿ ಮಾತನಾಡಿದ ಮಡಿಕೇರಿ ನಗರಸಭಾ ಸದಸ್ಯರಾದ ಕೆ.ಎಸ್. ರಮೇಶ್ ರವರು, ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರಾದ ಸುಭಾಷ್ ಚಂದ್ರ ಬೋಸ್ ರವರು ಸ್ವಾಮಿ ವಿವೇಕಾನಂದರ ವಿಚಾರ ಧಾರೆಗಳಿಂದ ಪ್ರಭಾವಿತರಾಗಿ ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು. ಸುಭಾಷ್ ಚಂದ್ರ ಬೋಸ್ ಎಂಬ ಹೆಸರನ್ನು ನಾವು ಕೇಳಿದಾಗಲೆಲ್ಲಾ, ನಮ್ಮ ಮನಸ್ಸಿನಲ್ಲಿ ಬರುವ ಮೊದಲ ವಿಷಯವೆಂದರೆ ಅವರ ಜನಪ್ರಿಯ ಮಾತು “ತುಮ್ ಮುಜೆ ಖೂನ್ ದೋ ಮೈನ್ ತುಮ್ಹೆ ಆಜಾದಿ ದುಂಗಾ” (ನೀವು ನನಗೆ ರಕ್ತಕೊಡಿ, ನಾನು ನಿಮಗೆ ಸ್ವಾತಂತ್ರ್ಯ ತಂದು ಕೊಡುತೇನೆ). ನೇತಾಜಿ ಎಂದೇ ಖ್ಯಾತರಾಗಿದ್ದ ಸುಭಾಷ್ ಚಂದ್ರ ಬೋಸ್ ಅವರು ಮಹಾನ್ ಉಗ್ರ, ಸ್ವಾತಂತ್ರ್ಯ ಹೋರಾಟಗಾರ ಮತ್ತು…
ಮಡಿಕೇರಿ ಜ.23 : ಉಪ ಲೋಕಾಯುಕ್ತ ಕಾರ್ಯ ವ್ಯಾಪ್ತಿಗೆ ಒಳಪಡುವ ಹಲವು ಪ್ರಕರಣಗಳನ್ನು ದೂರುದಾರರು ಮತ್ತು ಎದುರುದಾರರ ಸಮ್ಮುಖದಲ್ಲಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಸೋಮವಾರ ವಿಚಾರಣೆ ನಡೆಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ವಿಚಾರಣೆ ಸಂದರ್ಭದಲ್ಲಿ ಮಾತನಾಡಿದ ಕೆ.ಎನ್.ಫಣೀಂದ್ರ ಅವರು 40 ದೂರುಗಳಲ್ಲಿ 22 ದೂರುಗಳು ಉಪ ಲೋಕಾಯುಕ್ತ ವ್ಯಾಪ್ತಿಗೆ ಸಂಬAಧಿಸಿದ್ದು, ಈ ದೂರುಗಳನ್ನು ವಿಚಾರಣೆ ಮಾಡಲಾಗುವುದು ಎಂದರು. ಉಪ ಲೋಕಾಯುಕ್ತ ವ್ಯಾಪ್ತಿಗೆ ಸಲ್ಲಿಕೆಯಾಗಿರುವ ದೂರುಗಳ ಸಂಬAಧ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು ಲೋಕಾಯುಕ್ತದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು. ಭೂಮಿಗೆ ಸಂಬಂಧಿಸಿದಂತೆ, ಸೌಲಭ್ಯಗಳನ್ನು ಕಲ್ಪಿಸದೆ ಬಡಾವಣೆಗಳ ನಿರ್ಮಾಣ, ಕೆರೆಗಳು ಮತ್ತು ದೇವರ ಕಾಡುಗಳ ಸಂರಕ್ಷಣೆ, ಭೂ ಒತ್ತುವರಿ ತೆರವುಗೊಳಿಸುವುದು, ಕಾಲ ಮಿತಿಯಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹರಿಸುವುದು ಮತ್ತಿತರ ಹಲವು ದೂರುಗಳಿಗೆ ವಿಚಾರಣೆ ನಡೆಸಿದ ಉಪ ಲೋಕಾಯುಕ್ತರು, ಕಾಲ ಮಿತಿಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಇತ್ಯರ್ಥಪಡಿಸಿ ವರದಿ ನೀಡುವಂತೆ ಉಪ ಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದರು. ಆರಂಭದಲ್ಲಿ…






