ಮಡಿಕೇರಿ ಜ.23 : ವಿದ್ಯಾರ್ಥಿಗಳ ಸೃಜನಶೀಲ ಅಭಿವ್ಯಕ್ತಿಯನ್ನು ಉತ್ತೇಜಿಸಲು, ಶಿಕ್ಷಣ ಸಚಿವಾಲಯವು ದೇಶಾದ್ಯಂತ ಶಾಲೆಗಳಲ್ಲಿ ವಿವಿಧ ಚಟುವಟಿಕೆ ಆಯೋಜಿಸಿದೆ ಎಂದು ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ಅರುಣ್ ಸಿಂಗ್ ಅವರು ಮಾಹಿತಿ ನೀಡಿದರು. ಜನವರಿ 27 ರಂದು ನಡೆಯುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ ಅಂಗವಾಗಿ ನಗರದ ಕೇಂದ್ರೀಯ ವಿದ್ಯಾಲಯದಲ್ಲಿ ಸೋಮವಾರ ಏರ್ಪಡಿಸಿದ ಚಿತ್ರಕಲಾ ಸ್ಪರ್ಧೆಯ ಬಗ್ಗೆ ಅವರು ಮಾಹಿತಿ ನೀಡಿದರು. ಜನವರಿ 23 ರಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನವನ್ನು ‘ಪರಾಕ್ರಮ್ ದಿವಸ್’ ಎಂದು ಆಚರಿಸಲಾಗುತ್ತಿದೆ. ಇದು ಮಹಾನ್ ನಾಯಕನ ಜೀವನದ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪೂರ್ತಿ ನೀಡಲು ಮತ್ತು ಅವರಲ್ಲಿ ದೇಶಭಕ್ತಿಯ ಮನೋಭಾವವನ್ನು ತುಂಬಲು ಏಕಕಾಲದಲ್ಲಿ ವಿದ್ಯಾರ್ಥಿಗಳ ನಡುವಿನ ಪರೀಕ್ಷಾ ಒತ್ತಡವನ್ನು ನಿಭಾಯಿಸುವ ವಿಶಿಷ್ಟ ಉಪಕ್ರಮದಲ್ಲಿ ದೇಶಾದ್ಯಂತ 500 ವಿವಿಧ ಕೇಂದ್ರೀಯ ವಿದ್ಯಾಲಯಗಳಲ್ಲಿ ರಾಷ್ಟ್ರವ್ಯಾಪಿ ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಅವರು ಹೇಳಿದರು. ಚಿತ್ರಕಲೆ ಸ್ಪರ್ಧೆಯಲ್ಲಿ ವಿವಿಧ ಸಿಬಿಎಸ್‌ಇ ಶಾಲೆಗಳ ವಿದ್ಯಾರ್ಥಿಗಳು, ರಾಜ್ಯ ಮಂಡಳಿ, ನವೋದಯ ವಿದ್ಯಾಲಯ…
ಲೇಖಕ: admin
ಮಡಿಕೇರಿ ಜ.23 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿಯ ರೋಗ ಲಕ್ಷಣ ಶಾಸ್ತ್ರ ವಿಭಾಗದ ವತಿಯಿಂದ ಗರ್ಭಚೀಲ ಮತ್ತು ಗರ್ಭಕೋಶದ ಕ್ಯಾನ್ಸರ್ ಕುರಿತು ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ ಸಂಸ್ಥೆಯ ಆವರಣದಲ್ಲಿ ನಡೆಯಿತು. ಸಂಸ್ಥೆಯ ಪ್ರಾಂಶುಪಾಲರಾದ ಡಾ.ವಿಶಾಲ್ ಕುಮಾರ್, ಮುಖ್ಯ ಆಡಳಿತಾಧಿಕಾರಿ ಸ್ವಾಮಿ ಎ.ಎಲ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲೆಯ ಹೆಸರಾಂತ ರೋಗ ಲಕ್ಷಣ ಶಾಸ್ತ್ರ ಮುಖ್ಯಸ್ಥರುಗಳಾದ ಡಾ.ಅನುರಾಧ ಸಿ.ಕೆ ರಾವ್, ಡಾ ಅನಿತಾ ಪಿ ಜವಲಗಿ, ಡಾ.ಗೀತಾ ದೊಪ್ಪ, ಡಾ ಶೀಲಾದೇವಿ ಡಾ ಸುಚಿತ್ರಾ ಎಸ್, ಸಂಸ್ಥೆಯ ವಿಭಾಗದ ಮುಖ್ಯಸ್ಥರುಗಳಾದ ಡಾ.ರಾಮಚಂದ್ರ ಕಾಮತ್ ಮತ್ತು ಡಾ.ಪದ್ಮಜ ಕುಲಕರ್ಣಿ ಅವರುಗಳು ಪ್ಯಾಪ್ ಸ್ಮೈರ್, ಕ್ಯಾನ್ಸರ್, ಪತ್ತೆ ಹಚ್ಚುವ ಬಗ್ಗೆ ತಡೆಗಟ್ಟುವ ಬಗ್ಗೆ ಹಾಗೂ ಇತ್ತೀಚಿನ ಅತ್ಯಾಧುನಿಕ ಚಿಕಿತ್ಸಾ ಕ್ರಮಗಳ ಬಗ್ಗೆ ವಿಮರ್ಶೆ ಹಾಗೂ ಅಧ್ಯಯನಗಳ ಬಗ್ಗೆ ಚರ್ಚೆ ನಡೆಸಲಾಯಿತು. ಕಾರ್ಯಕ್ರಮವು ಆನ್‌ಲೈನ್ ಮತ್ತು ಆಫ್‌ಲೈನ್ ಮುಖಾಂತರ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ರಾಜ್ಯದ ಹಲವೆಡೆಗಳಿಂದ 200 ಕ್ಕೂ ಹೆಚ್ಚು ವೈದ್ಯರುಗಳು ನೋಂದಣಿ ಮಾಡಿದ್ದರು.…
ಮಡಿಕೇರಿ ಜ.23 : ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಜಿಂಕೆಯೊಂದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ನಡೆದಿದೆ. ಕುಟ್ಟದಿಂದ ವಿರಾಜಪೇಟೆ ಕಡೆಗೆ ಬರುತ್ತಿದ್ದ ಕೇರಳ ನೋಂದಣಿ ಸಂಖ್ಯೆಯ ಖಾಸಗಿ ಬಸ್ ನಾಲ್ಕೇರಿ-ಕುಟ್ಟ ಮುಖ್ಯ ರಸ್ತೆಯಲ್ಲಿ ಜಿಂಕೆಗೆ ಡಿಕ್ಕಿಯಾಗಿದೆ. ಕುಟ್ಟ ಸರ್ಕಾರಿ ಶಾಲೆ ಬಳಿ ಈ ಘಟನೆ ನಡೆದಿದ್ದು, ಕುಟ್ಟ ವಿಭಾಗದ ಅರಣ್ಯಾಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಜ.23 : ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕುಶಾಲನಗರ ರೈತ ಸಮುದಾಯ ಭವನದಲ್ಲಿ ಫೆ.3 ರಂದು ಆಯೋಜಿಸಿರುವ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವು ಪ್ರತಿಯೊಬ್ಬರ ಮನೆ ಮನೆಗಳ ಹಬ್ಬದ ಮಾದರಿಯಲ್ಲಿ ನುಡಿ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರೂ ಆಗಿರುವ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಕರೆ ನೀಡಿದರು. ಕುಶಾಲನಗರದ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಛೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಹೊಸ ತಾಲ್ಲೂಕಿನಲ್ಲಿ ನಡೆಯುತ್ತಿರುವ ಪ್ರಥಮ ಸಾಹಿತ್ಯ ಸಮ್ಮೇಳನವನ್ನು ಶಿಸ್ತುಬದ್ಧವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸುವ ಸಂಬAಧ ಈಗಾಗಲೇ ರಚಿಸಿರುವ ಉಪ ಸಮಿತಿಗಳ ಪದಾಧಿಕಾರಿಗಳು ಅಗತ್ಯವಿರುವ ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ತಾಲ್ಲೂಕಿನಾದ್ಯಂತ ಇರುವ ಸಾಹಿತ್ಯಾಸಕ್ತರು, ಸಂಘ ಸಂಸ್ಥೆಗಳ ಪ್ರಮುಖರು ಸಮ್ಮೇಳನದ ಯಶಸ್ಸಿಗೆ ಸಹಕರಿಸಬೇಕೆಂದು ಶಾಸಕ ರಂಜನ್ ಮನವಿ ಮಾಡಿದರು. ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ…
ಮಡಿಕೇರಿ ಜ.23 : ಗಣರಾಜ್ಯೋತ್ಸವ ಪ್ರಯುಕ್ತ ಎಸ್‌ಕೆಎಸ್‌ಎಸ್‌ಎಫ್ ಸಂಘಟನೆ ವತಿಯಿಂದ ರಾಷ್ಟç ರಕ್ಷಣೆಗೆ ಸೌಹಾರ್ದತೆಯ ಸಂಕಲ್ಪ ಎಂಬ ಸಂದೇಶದೊಂದಿಗೆ ಮಡಿಕೇರಿಯಲ್ಲಿ ಮಾನವ ಸರಪಳಿ ಮತ್ತು ಸೌಹಾರ್ದ ಜಾಥಾ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಪ್ರಮುಖರು ದೇಶ ಹಾಗೂ ವಿದೇಶದ ವಿವಿಧ ಭಾಗಗಳಲ್ಲಿ ಜ.26 ರಂದು ಗಣರಾಜ್ಯೋತ್ಸವ ಪ್ರಯುಕ್ತ ಮಾನವ ಸರಪಳಿ ಮತ್ತು ಸೌಹಾರ್ದ ಜಾಥಾ ಆಯೋಜಿಸಲಾಗುತ್ತಿದೆ. ಮಡಿಕೇರಿಯಲ್ಲಿ ಅಂದು ಸಂಜೆ 4ಗಂಟೆಗೆ ಗಣಪತಿ ಬೀದಿಯಲ್ಲಿರುವ ಬದ್ರಿಯಾ ಮಸೀದಿಯಿಂದ ಕಾವೇರಿ ಕಲಾಕ್ಷೇತ್ರದ ವರೆಗೆ ಜಾಥಾ ನಡೆಯಲಿದೆ. ನಂತರ 14ನೇ ವರ್ಷದ ಬಹುಜನ ಸೌಹಾರ್ದ ಸಂಗಮ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದರು. ಕೋಮುವಾದ, ದ್ವೇಷ ಹಬ್ಬಿಸಿ ದೇಶದ ಮಹನೀಯ ಪಾರಂಪರ್ಯವನ್ನು ಕಡಿಸಿಲು ಪ್ರಯತ್ನಿಸುತ್ತಿರುವ ವಿಧ್ವಂಸಕ ಶಕ್ತಿಗಳ ವಿರುದ್ಧ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಹಾಗೂ ಶಾಂತಿಯುತ ವಾತಾವರಣ ಉಳಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ರಾಜಕೀಯ ಲಾಭಕ್ಕಾಗಿ ದೇಶದಲ್ಲಿ ಉಂಟಾಗುತ್ತಿರುವ ಅಶಾಂತಿಯ ಕುರಿತು ಕಾರ್ಯಕ್ರಮದಲ್ಲಿ ಜಾಗೃತಿ ಮೂಡಿಸಲಾಗುವುದು. ವಿವಿಧ ಧರ್ಮಗುರುಗಳು, ರಾಜಕೀಯ ಮತ್ತು ಸಾಮಾಜಿಕ ನಾಯಕರು…
ಮಡಿಕೇರಿ ಜ.23 : ಮಡಿಕೇರಿ ತಾಲ್ಲೂಕಿನ ಮೇಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಳಿಗೇರಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು. ದಂಬೆಕೋಡಿ ಮಾಚಯ್ಯ, ದಂಬೆಕೋಡಿ ಮಿಥುನ್, ಬೈಲೆರ ಸಾಬು ಬಾಲಕೃಷ್ಣ, ಬಿ.ಎನ್.ಸಂತೋಷ್ ಕುಮಾರ್, ಪರ್ಲಕೋಟಿ ರಾಘವಯ್ಯ, ಪರ್ಲಕೋಟಿ ಬೆಲ್ಲು ಬಾಲಕಷ್ಣ, ಪರ್ಲಕೋಟಿ ಪ್ರೀತಂ ಕುಮಾರ್ ಸೇರಿದಂತೆ 30 ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿ ಧ್ವಜ ಹಿಡಿದರು. ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ರಾಜ್ಯ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿಕಾಳಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಮಡಿಕೇರಿ ಗ್ರಾಮಾಂತರ ತಾಲ್ಲೂಕು ಅಧ್ಯಕ್ಷ ಕಾಂಗೀರ ಸತೀಶ್, ಪ್ರಧಾನ ಕಾರ್ಯದರ್ಶಿ ಕೋಡಿರ ಪ್ರಸನ್ನ, ಪ್ರಮುಖರಾದ ಡೀನ್ ಬೋಪಣ್ಣ, ಕುಮುದಾ ರಶ್ಮಿ ಮತ್ತಿತರರು ಉಪಸ್ಥಿತರಿದ್ದರು.
ಮಡಿಕೇರಿ ಜ.23 : ಇಂಡಿಯನ್ ರಿಪೋರ್ಟರ್ಸ್ ಅಂಡ್ ಮೀಡಿಯಾ ಪರ್ಸನ್ಸ್ ಯೂನಿಯನ್ ಹೆಸರಿನ ಪತ್ರಕರ್ತರ ಸಂಘಟನೆ ನೆರೆಯ ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಕಳೆದ 6 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕದಲ್ಲಿ ಜ.29ರಂದು ಅಸ್ತಿತ್ವಕ್ಕೆ ಬರಲಿದೆ. ಕರ್ನಾಟಕ, ಆಂಧ್ರ, ತೆಲಂಗಾಣ ಹಾಗೂ ಗೋವಾ ರಾಜ್ಯಗಳ ಪತ್ರಕರ್ತ ಸಂಘಟನೆಯ ಜವಾಬ್ದಾರಿಯನ್ನು ಕೇರಳ ಪತ್ರಕರ್ತರ ಒಕ್ಕೂಟವು ರಾಜ್ಯದ ಟಿ.ಎಲ್.ಶ್ರೀನಿವಾಸ್ ಅವರಿಗೆ ವಹಿಸಿದೆ. ಜ.29 ರಂದು ಕರ್ನಾಟಕ ರಾಜ್ಯ ಪತ್ರಕರ್ತರ ಯೂನಿಯನ್‌ನ ಅಧ್ಯಕ್ಷರಾಗಿ ಇವರು ಮೈಸೂರು ಜಲದರ್ಶಿನಿಯಲ್ಲಿ ಜರುಗುವ ಕಾರ್ಯಕ್ರಮದಲ್ಲಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಗೋಣಿಕೊಪ್ಪಲಿನಲ್ಲಿ ಮಾತನಾಡಿದ ಶ್ರೀನಿವಾಸ್, ಮ್ಯೆಸೂರಿನಲ್ಲಿ ಮೊದಲ ಸಭೆ ನಡೆಯಲಿದ್ದು, 30 ಜಿಲ್ಲೆಗಳ ಪ್ರವಾಸದ ನಂತರ ಪೂರ್ಣ ಪ್ರಮಾಣದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುವದು ಎಂದರು. ನೂತನ ಒಕ್ಕೂಟವು ಮೈಸೂರು ಹಾಗೂ ಬೆಂಗಳೂರಿನಲ್ಲಿ ಕಚೇರಿಯನ್ನು ಹೊಂದಲಿದ್ದು, ಕೇರಳ ಹಾಗೂ ತಮಿಳುನಾಡು ರಾಜ್ಯಗಳಂತೆ ರಾಜ್ಯದಲ್ಲಿಯೂ ಸಂಘಟನೆಯನ್ನು ಬಲಿಷ್ಠವಾಗಿ ಕಟ್ಟಲಾಗುವುದು. ದಕ್ಷಿಣ ಭಾರತ ಸಂಘಟನೆಯ ನಂತರ ಕರ್ನಾಟಕ ರಾಜ್ಯದಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದರು. ಯಾವದೇ ಪತ್ರಕರ್ತ…
ಮಡಿಕೇರಿ ಜ.23 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಗುರುತಿಸಿಕೊಳ್ಳುತ್ತಿರುವ ಜಾತ್ಯತೀತ ಜನತಾದಳದ ಮುಖಂಡ ನಾಪಂಡ ಮುತ್ತಪ್ಪ ಅವರಿಗೆ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರು ಕಾರಣ ಕೇಳಿ ನೋಟಿಸ್ ನೀಡಿದ್ದಾರೆ. ಜೆಡಿಎಸ್ ವರಿಷ್ಠರ ಆದೇಶವಿಲ್ಲದೆ ಪಕ್ಷದ ಅಧಿಕೃತ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುವುದು ಮತ್ತು ಪಂಚರತ್ನ ಎಂಬ ವಾಹನದಲ್ಲೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಪ್ರಚಾರ ಮಾಡುತ್ತಿರುವುದು ಸರಿಯಲ್ಲ. ರಾಜ್ಯ ವರಿಷ್ಠರ ಆದೇಶದಂತೆ ನಡೆದುಕೊಳ್ಳದೆ ಸ್ವಯಂ ಪ್ರೇರಿತವಾಗಿ ಪಕ್ಷದೊಳಗೆ ಬಿಕ್ಕಟ್ಟನ್ನು ಹಾಗೂ ಬಿನ್ನಾಭಿಪ್ರಾಯಗಳನ್ನು ತರುತ್ತಿರುವುದು ನಮ್ಮ ಗಮನಕ್ಕೆ ಬಂದಿರುತ್ತದೆ. ಪಕ್ಷದ ತಾಲ್ಲೂಕು ಅಧ್ಯಕ್ಷರು ಹಾಗೂ ವಿವಿಧ ಘಟಕಗಳ ಜಿಲ್ಲಾಧ್ಯಕ್ಷರನ್ನು ಹೊರಗಿಟ್ಟು ಯಾವುದೇ ಜಿಲ್ಲಾ ನಾಯಕರನ್ನು ಕೇಳದೆ, ಪಕ್ಷ ಸಂಘಟನೆಗೆ ಚ್ಯುತಿ ತರುವಂತಹ ಕೆಲಸವನ್ನು ಮಾಡುತ್ತಿರುವಿರಿ. ಮಡಿಕೇರಿ ಕ್ಷೇತ್ರದಲ್ಲಿ ಸ್ಪರ್ಧಿಸಲು ಹಲವು ಆಕಾಂಕ್ಷಿಗಳು ಇದ್ದು ಎಲ್ಲರನ್ನು ಒಗ್ಗೂಡಿಸಿ ಯಾವುದೇ ಭಿನ್ನಾಭಿಪ್ರಾಯಗಳು ಮೂಡದಂತೆ ಕಾರ್ಯಪ್ರವೃತ್ತರಾಗಬೇಕು. ಆದರೆ ತಾವು ಇದನ್ನೆಲ್ಲ ನಿರ್ಲಕ್ಷಿಸಿ ಕೆಲವರನ್ನಷ್ಟೇ ಬಳಸಿಕೊಂಡು ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಎಂದು ಸ್ವಯಂ ಘೋಷಣೆ ಮಾಡುತ್ತಿರುವುದರಿಂದ…
ಕುಶಾಲನಗರ ಜ.23 : ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಮಟ್ಟದ ಕ್ರೀಡಾಕೂಟ ಫೆ.25 ರಂದು ಕುಶಾಲನಗರದಲ್ಲಿ ಆಯೋಜಿಸಲಾಗಿದೆ ಎಂದು ಕೊಡಗು ಜಿಲ್ಲಾ ಘಟಕದ ಹೆಚ್.ವಿಶಿವಪ್ಪ ತಿಳಿಸಿದ್ದಾರೆ. ಅವರು, ಕುಶಾಲನಗರ ಪತ್ರಿಕಾ ಭವನದಲ್ಲಿ ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಪ್ರತಿ ವರ್ಷದಂತೆ ಈ ಬಾರಿ ಸಮಾಜ ಭಾಂಧವರ ಮಕ್ಕಳು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ 2021-22 ನೇ ಸಾಲಿನಲ್ಲಿ ಶೇ.80 ಮತ್ತು ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು, ಈ ಬಗ್ಗೆ ದಾಖಲೆಗಳೊಂದಿಗೆ ಅರ್ಜಿಗಳನ್ನು ಮಹಾ ಸಭಾ ಪ್ರಮುಖರಿಗೆ ಸಲ್ಲಿಸುವಂತೆ ಕೋರಿದರು. ಅರ್ಜಿಜೊತೆ ವಿದ್ಯಾರ್ಥಿಗಳ 2 ಭಾವಚಿತ್ರಗಳು, ಅಂಕಪಟ್ಟಿ ಮತ್ತು ಆಧಾರ್ ಪ್ರತಿಗಳನ್ನು ಫೆಬ್ರವರಿ 10ರ ಒಳಗೆ ಈ ಕೆಳಕಂಡ ಮೊ.ಸಂಖ್ಯೆಗಳಿಗೆ ಮಾಹಿತಿ ನೀಡುವಂತೆ ತಿಳಿಸಿದರು. ಶಾಂಭಶಿವಮೂರ್ತಿ – 9448336781, ಜಿ.ಎಂಕಾoತರಾಜು- 7483411601, ಸುರೇಶ್ ವಿರಾಜಪೇಟೆ- 9448108091, ಆದರ್ಶ್ ಸೋಮವಾರಪೇಟೆ- 6362059198.ಸಂಪರ್ಕಿಸುವoತೆಕೋರಿದ್ದಾರೆ.ಮಹಾಸಭಾದ ವೇದಿಕೆ ಕಾರ್ಯಕ್ರಮ ಮಾರ್ಚ್ 11 ರಂದುಏರ್ಪಡಿಸಲಾಗಿದೆ ಎoದು ಮಾಹಿತಿ ಒದಗಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ…
ಮಡಿಕೇರಿ ಜ.22 : ಪತ್ರಕರ್ತರು ನಿರ್ಭೀತಿಯಿಂದ ಕಾರ್ಯನಿರ್ವಹಿಸುವ ಮೂಲಕ ವ್ಯವಸ್ಥೆಯೊಳಗಿನ ತಪ್ಪನ್ನು ತಿದ್ದುವ ಕೆಲಸ ಮಾಡಬೇಕು ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಬೇಕೆಂದು ವೀರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಕರೆ ನೀಡಿದ್ದಾರೆ. ಕೊಡಗು ಪ್ರೆಸ್‌ಕ್ಲಬ್ ಬೆಳ್ಳಿಹಬ್ಬದ ಹಿನ್ನೆಲೆಯಲ್ಲಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಭಾನುವಾರ ನಡೆದ ಕೊಡಗು ಪ್ರೆಸ್ ಕ್ಲಬ್ ಪ್ರೀಮಿಯರ್ ಲೀಗ್ – 3 ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ನ್ಯಾಯಾಂಗ, ಶಾಸಕಾಂಗ, ಕಾರ್ಯಾಂಗ ತಪ್ಪು ದಾರಿ ತುಳಿದರೆ ಎಚ್ಚರಿಸುವ ಕೆಲಸ ಪತ್ರಿಕಾರಂಗ ಮಾಡುತ್ತಿದೆ. ಒತ್ತಡದಲ್ಲಿರುವ ಪತ್ರಕರ್ತರಿಗೆ ಕ್ರೀಡಾಕೂಟಗಳು ದೈಹಿಕ ಹಾಗೂ ಮಾನಸಿಕ ಉಲ್ಲಾಸ ನೀಡುತ್ತದೆ. ಪತ್ರಕರ್ತರ ಪ್ರತಿಭೆ ಅನಾವರಣಕ್ಕೆ ಅವಕಾಶ ಕಲ್ಪಿಸುತ್ತದೆ ಎಂದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ ಮಾತನಾಡಿ, ಪತ್ರಿಕಾರಂಗ ಆಡಳಿತ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ವ್ಯವಸ್ಥೆಯ ಲೋಪದೋಷ, ಅನ್ಯಾಯ, ಅನಾಚಾರ ಬಯಲಿಗೆಳೆಯುವ ವ್ಯವಸ್ಥೆ ಪತ್ರಿಕಾರಂಗದಲ್ಲಿದೆ. ಸಮಾಜದ ನೈಜಸ್ಥಿತಿ ತಿಳಿಸುತ್ತಾ ಒಳಿತು, ಕೆಡುಕುಗಳಿಗೆ ಸಾಕ್ಷಿಯಾಗುವ ಪತ್ರಕರ್ತರನ್ನು ಸೈನಿಕರಿಗೆ ಹೋಲಿಸಬಹುದು ಎಂದು…






