ಲೇಖಕ: admin

ಮಡಿಕೇರಿ ಜ.22 : ಎರಡು ಗೋವುಗಳನ್ನು ಹತ್ಯೆ ಮಾಡಿ ಕಳೇಬರವನ್ನು ಕಾಫಿ ತೋಟದಲ್ಲಿ ಹೂತಿಟ್ಟಿದ್ದ ಆರೋಪದಡಿ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಗರಗಂದೂರು ಸಮೀಪದ ಹಾರಂಗಿ ಹಿನ್ನೀರು ಬಳಿಯ ಲತೀಫ್ ಎಂಬುವವರ ಕಾಫಿ ತೋಟದಲ್ಲಿ ಎರಡು ದಿನಗಳ ಹಿಂದೆ ಗೋವುಗಳನ್ನು ಹತ್ಯೆ ಮಾಡಲಾಗಿತ್ತು ಎಂದು ಆರೋಪಿಸಲಾಗಿದೆ. ಹಿಂದೂ ಜಾಗರಣಾ ವೇದಿಕೆ ನೀಡಿದ ದೂರಿನ ಹಿನ್ನೆಲೆ ಸ್ಥಳಕ್ಕೆ ಬಂದ ಪೊಲೀಸರು ಮಣ್ಣಿನಡಿ ಇದ್ದ ಗೋವಿನ ಕಳೇಬರದ ತ್ಯಾಜ್ಯಗಳನ್ನು ಹೊರ ತೆಗೆದರು. ಸ್ಥಳ ಮಹಜರು ನಡೆಸಿದ ನಂತರ ಪ್ರಕರಣ ದಾಖಲಿಸಿಕೊಂಡರು. ಸುಂಟಿಕೊಪ್ಪ ಪೋಲೀಸ್ ಠಾಣಾ ಅಪರಾಧ ವಿಭಾಗದ ಠಾಣಾಧಿಕಾರಿ ಸ್ವಾಮಿ, ಸಿಬ್ಬಂದಿಗಳಾದ ಸತೀಶ್, ಜಗದೀಶ್, ಶ್ರೀಕಾಂತ್, ಬಿರದಾರ ಹಾಗೂ ಜೈಶಂಕರ್ ಸ್ಥಳ ಪರಿಶೀಲನೆ ನಡೆಸಿದರು. ಸ್ಥಳದಲ್ಲಿ ಜಮಾಯಿಸಿದ್ದ ಹಿಂದೂ ಜಾಗರಣಾ ವೇದಿಕೆಯ ಪ್ರಮುಖರು ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಜಿಲ್ಲೆಯಲ್ಲಿ ಗೋವುಗಳ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದೆ. ಪೊಲೀಸರು ಗೋಹತ್ಯೆಯನ್ನು ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ ಎಂದು…

Read More

ಮಡಿಕೇರಿ ಜ.22 : ಗೋಣಿಕೊಪ್ಪಲು- ಕೈಕೇರಿ ಮುಖ್ಯ ರಸ್ತೆಯಲ್ಲಿ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಾಳುಗಳು ದೊಡ್ಡ ಅಪಾಯದಿಂದ ಪಾರಾಗಿದ್ದಾರೆ.

Read More

ವಿರಾಜಪೇಟೆ ಜ.22 : ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆರ್ಜಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಭಾಂಗಣದಲ್ಲಿ ನಡೆದ 9ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಆಯೋಜಿಸಲಾಗಿದ್ದ ಕವಿಗೋಷ್ಠಿಯಲ್ಲಿ ಶಾಲಾ ಕಾಲೇಜುಗಳಿಂದ ಆಗಮಿಸಿದ್ದ ವಿದ್ಯಾರ್ಥಿ ಕವಿವರ್ಯರು ಸ್ವರಚಿತ ಕಾವ್ಯಗಳನ್ನು ವಾಚಿಸಿ ಸಾಹಿತ್ಯಾಭಿಮಾನಿಗಳ ಮೆಚ್ಚುಗೆಗೆ ಪಾತ್ರರಾದರು. ಹೆಚ್ಚು ವಿದ್ಯಾರ್ಥಿಗಳೇ ಭಾಗವಹಿಸಿದ್ದು ವಿಶೇಷವಾಗಿತ್ತು. 3ನೇ ತರಗತಿಯ ಕು.ಸಾನ್ವಿ ಯೋಗೇಶ್ವರಿ ತನ್ನ ಹಾವ ಭಾವದೊಂದಿಗೆ ಚಿಟ್ಟೆ ಎಂಬ ಕವಿತೆಯನ್ನು ವಾಚಿಸಿ ಜನಮನ ಗೆದ್ದಳು. ಇನ್ನುಳಿದಂತೆ ವಿದ್ಯಾರ್ಥಿಗಳು, ಗೆಳತಿ, ಅಮ್ಮ ಹೀಗೆ ಹೆಣ್ಣಿನ ಬಗ್ಗೆ ಕವಿತೆ ವಾಚಿಸಿದರು. ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಕುಶಾಲನಗರದ ಉಪನ್ಯಾಸಕಿ ಲೀಲಾಕುಮಾರಿ ತೊಡಿಕಾನ ಅವರು ಮಾತನಾಡಿ ರವಿ ಕಾಣದನ್ನು ಕವಿಕಂಡ ಎಂಬ ಮಾತಿದೆ. ನಮ್ಮ ಭಾವನೆಗಳು, ಕಲ್ಪನೆಗಳನ್ನು ಪದಪುಂಜಗಳ ಅರ್ಥಗರ್ಭಿತ ಜೋಡಣೆಯ ಮೂಲಕ ಲಿಖಿತ ಸ್ವರೂಪ ಕೊಟ್ಟು ಚೆಂದಗಾಣಿಸುವ ಅದ್ಭುತ ಶಕ್ತಿ ಕವಿಯದ್ದು. ಒಂದು ವಿಷಯವನ್ನು ನಾವು ಊಹಿಸಲೂ ಸಾಧ್ಯವಿರದ ವಿಭಿನ್ನ ಶೈಲಿಯಲ್ಲಿ ಪ್ರಸ್ತುತ ಪಡಿಸುವ ಸಾಮಥ್ರ÷್ಯ ಕವಿಗಿದೆ. ಯಾವುದೇ…

Read More

ವಿರಾಜಪೇಟೆ ಜ.22 : ವಿರಾಜಪೇಟೆಯ ಆರ್ಜಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಕನ್ನಡ ನುಡಿ ಜಾತ್ರೆಗೆ ಸಂಭ್ರಮದ ತೆರೆ ಬಿದ್ದಿತು. ಸಮಾರೋಪ ಸಮಾರಂಭಕ್ಕೂ ಮುನ್ನ ನಡೆದ ಬಹಿರಂಗ ಅಧಿವೇಶನದಲ್ಲಿ ಆರು ನಿರ್ಣಯಗಳನ್ನು ಅಂಗೀಕರಿಸಲಾಯಿತು. ಕೊಡವ ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಬೇಕು, ಗಡಿನಾಡಲ್ಲಿ ಕನ್ನಡ ಭವನಗಳನ್ನು ತೆರೆಯುವಂತಾಗಬೇಕು, ಕನ್ನಡಪರ ಚಟುವಟಿಕೆಗಳನ್ನು ಉತ್ತೇಜಿಸುವ ಸಲುವಾಗಿ ಸರಕಾರದಿಂದ ಅನುದಾನ ಬಿಡುಗಡೆಗೊಳಿಸಬೇಕು, ಕನ್ನಡ ಶಾಲೆಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಬೇಕು, ಕೊಡಗಿನ ಕೃಷಿ ಚಟುವಟಿಕೆಗೆ ಉತ್ತೇಜನವನ್ನು ನೀಡಬೇಕು, ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಿರ್ಣಯ ಅಂಗೀಕರಿಸಲಾಯಿತು. ಕಸಾಪ ತಾಲೂಕು ಅಧ್ಯಕ್ಷ ರಾಜೇಶ್ ಪದ್ಮನಾಭ ಅಧ್ಯಕ್ಷತೆ ವಹಿಸಿದ್ದರು. ಕೋಶಾಧಿಕಾರಿ ಶಬರೀಶ್ ಶೆಟ್ಟಿ ನಿರ್ಣಯ ಮಂಡನೆ ಮಾಡಿದರು. ಬಹಿರಂಗ ಅಧಿವೇಷನದ ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ಕಸಾಪ ಕೊಡಗು ಜಿಲ್ಲೆ ಗೌರವ ಕಾರ್ಯದರ್ಶಿ ಮುನೀರ್ ಅಹಮದ್ ಸಮಾರೋಪ ಭಾಷಣ ಮಾಡಿ ಕನ್ನಡ ಬರಿ ಕರ್ನಾಟಕದಲ್ಲಿ ಅಲ್ಲ ಅದು ಅಸೀಮ, ಕೊಡಗು ಎಂದಾಕ್ಷಣ…

Read More

ವಿರಾಜಪೇಟೆ ಜ.22 : ಕನ್ನಡ ಭಾಷೆಯ ರಕ್ಷಣೆ ಇಲ್ಲಿ ಸೇರಿರುವ ಪ್ರತಿಯೊಬ್ಬ ಕನ್ನಡಾಭಿಮಾನಿಗಳ ಮೇಲೆ ಹೊಣೆಗಾರಿಕೆಯಾಗಿ ನಿಂತಿದೆ, ಅದು ನಮ್ಮ ಕರ್ತವ್ಯವೂ ಆಗಿದೆ ಎಂದು ಕೆಪಿಸಿಸಿ ಕಾನೂನು ಘಟಕದ ರಾಜ್ಯ ಅಧ್ಯಕ್ಷ ಎ.ಎಸ್ ಪೊನ್ನಣ್ಣ ಅಭಿಪ್ರಾಯ ಪಟ್ಟರು. ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆರ್ಜಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಭಾಂಗಣದಲ್ಲಿ ನಡೆದ 9ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಆಯೋಜಿಸಲಾಗಿದ್ದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿ÷ಸಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಿ ಮಾತನಾಡಿದ ಎ.ಎಸ್ ಪೊನ್ನಣ್ಣ ಭಾಷೆಯ ಅಳಿವಿಗೆ ಕಾರಣಗಳು ಹಲವಾರು, ಕನ್ನಡ ನಾಡು ನುಡಿ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಭಾಷೆಯ ಉಳಿವಿಗಾಗಿ ಸಾಹಿತ್ಯದ ಬೆಳವಣಿಗೆಗೆ ತನ್ನಿಂದ ಎಲ್ಲ ಸಹಕಾರ ನೀಡಲು ಬದ್ದ ಎಂದು ಹೇಳಿದರು. ಸಾಹಿತ್ಯ ಕ್ಷೇತ್ರದಲ್ಲಿ ಪುಷ್ಪಲತಾ ಶಿವಪ್ಪ, ಶಿಕ್ಷಣ ಕ್ಷೇತ್ರದಲ್ಲಿ ಪೆರಿಗ್ರೀನ್ ಮಚ್ಚಾಡೋ, ಸೈನಿಕರ ಕ್ಷೇತ್ರದಲ್ಲಿ ಭವಾನಿ ಶಂಕರ್, ವಿಶಿಷ್ಟ ಸೇವಾ ಪದಕ ಬ್ರಿಗೇಡಿಯರ್ ಪಿ.ಟಿ ಮೊಣ್ಣಪ್ಪ,…

Read More

ಕುಶಾಲನಗರ ಜ.22 : ಕುಶಾಲನಗರ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಭಾನುವಾರ ಬಿಡುಗಡೆಗೊಳಿಸಿದರು. ಕಸಾಪ ತಾಲ್ಲೂಕು ಅಧ್ಯಕ್ಷ ಕೆ.ಎಸ್.ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

Read More

ಮಡಿಕೇರಿ ಜ.22 : ವಿರಾಜಪೇಟೆ ತಾಲ್ಲೂಕಿನ ಪೆರುಂಬಾಡಿಯ ಶಂಸುಲ್ ಉಲಮ ಕಾಲೇಜು ವಿದ್ಯಾರ್ಥಿಗಳು ನಿರುಪಯುಕ್ತ ವಸ್ತುಗಳಿಂದ ಹಲವು ಕಲಾಕೃತಿಗಳನ್ನು ರಚಿಸುವ ಮೂಲಕ ಗಮನ ಸೆಳೆದಿದ್ದಾರೆ. ಶಂಸುಲ್ ಉಲಾಮ ಅಕಾಡಮಿ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಬೃಹತ್ ಮಾದರಿ ವಸ್ತು ಪ್ರದರ್ಶನದಲ್ಲಿ ಕಲಾ, ವಿಜ್ಞಾನ, ವಾಣಿಜ್ಯ ಹಾಗೂ ಪದವಿ ವಿಭಾಗದ ವಿದ್ಯಾರ್ಥಿಗಳು ರಚಿಸಿದ ಆರೋಗ್ಯ, ಶಿಕ್ಷಣ, ಕೈಗಾರಿಕೆ, ಕೃಷಿ ಮಾಹಿತಿ ತಂತ್ರಜ್ಞಾನ, ಉಪಗ್ರಹ ಕುರಿತ ನಿರಪಯುಕ್ತ ವಸ್ತುಗಳ ಮರುಬಳಕೆ ಪ್ರಯೋಗ ಯಶಸ್ವಿಯಾಯಿತು. ಆಯುರ್ವೇದ, ಗಿಡಮೂಲಿಕೆಗಳು, ಮಾನವ ನಿರ್ಮಿತ ಉಪಕರಣಗಳು, ಸೌರವ್ಯೂಹ, ಮಳೆ ನೀರು ಕೊಯ್ಲು, ಜಲವಿದ್ಯುತ್, ರಾಕೆಟ್, ಕೃಷಿ, ಜೀರ್ಣಾಂಗ ವ್ಯವಸ್ಥೆ, ಉಸಿರಾಟದ ವ್ಯವಸ್ಥೆ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿದ್ದಲ್ಲದೆ ಕಲಾ ಸ್ಮಾರಕಗಳಾದ ಕುತುಬ್ ಮಿನಾರ್, ಸಂಸತ್ತು, ವಿಧಾನ ಸೌಧ, ತಾಜ್ ಮಹಲ್, ಕೆಂಪು ಕೋಟೆ, ವಾಣಿಜ್ಯ ವ್ಯವಹಾರಗಳಾದ ವ್ಯಾಪಾರ ಪ್ರಕ್ರಿಯೆ, ಒಂದು ರಾಷ್ಟ್ರ ಒಂದು ತೆರಿಗೆ, ಕೂರ್ಗ್ ಇನ್ಫೋಟೆಕ್ಟ್ ಎಂಬ ಹೆಸರಿನ ಮುಂದಿನ ವ್ಯವಹಾರ ಯೋಜನೆಯನ್ನು ಅನುಷ್ಠಾನಗೊಳಿಸುವುದು, ಆರ್ಥಿಕತೆಯ ವಲಯ, ವ್ಯಾಪಾರ ಅಧ್ಯಯನಗಳು, ಜಿಎಸ್‌ಟಿ…

Read More

ಕುಶಾಲನಗರ ಜ.22 : ಸಮೀಪದ ಹೆಬ್ಬಾಲೆ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕರಾಗಿದ್ದ ದಿವಂಗತ.ಇ.ಕೆ.ಸುಬ್ರಾಯ ಅವರಿಗೆ ಭಾನುವಾರ ಇಲ್ಲಿನ ವಾಸವಿ ಮಹಲ್ ಸಭಾಂಗಣದಲ್ಲಿ ಶಾಲೆಯ ಹಳೇ ವಿದ್ಯಾರ್ಥಿಗಳ ಸಂಘದ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಭೆಯಲ್ಲಿ ಸುಬ್ರಾಯ ಅವರ ಭಾವಚಿತ್ರಕ್ಕೆ ಪುಷ್ಪಾನಮನ ಸಲ್ಲಿಸಿದ ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಎಚ್.ಎಲ್.ವೆಂಕಟೇಶ್ ಮಾತನಾಡಿ, ಹೆಬ್ಬಾಲೆ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿ ಅಪಾರ ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾಗಿದ್ದ ಇ.ಕೆ.ಸುಬ್ರಾಯ ಅವರು ಶಿಸ್ತುಬದ್ಧ ಜೀವನ ನಡೆಸುವ ಮೂಲಕ ಅರ್ಪಣಾ ಮನೋಭಾವದಿಂದ ಮಾದರಿ ಮುಖ್ಯೋಪಾಧ್ಯಾಯರಾಗಿದ್ದರು ಎಂದು ಬಣ್ಣಿಸಿದರು. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ‌ ನಿವೃತ್ತ ಪ್ರಾಂಶುಪಾಲ ಎಚ್.ವಿ.ಶಿವಪ್ಪ ಮಾತನಾಡಿ, ಜಿಲ್ಲೆಯ ಗಡಿ ಗ್ರಾಮಗಳ ಅಸಂಖ್ಯಾತ ವಿದ್ಯಾರ್ಥಿಗಳ ಆಶಾಕಿರಣರಾಗಿದ್ದು, ವಿದ್ಯಾರ್ಥಿಗಳಲ್ಲಿ ಬದುಕಿನ ಶಿಕ್ಷಣ, ಶಿಸ್ತು ಬದ್ದ ಜೀವನ ಕಲಿಸಿದ್ದಾರೆ ಎಂದರು. ಸಾಹಿತಿ ಭಾರದ್ಚಜ್ ಕೆ.ಆನಂದ ತೀರ್ಥ ಮಾತನಾಡಿ,ಹೆಬ್ಬಾಲೆ ಪ್ರೌಢಶಾಲೆಯ ಶೈಕ್ಷಣಿಕ ಪ್ರಗತಿ ಮತ್ತು ಶಾಲೆಯ ಕೀರ್ತಿ ಇ.ಕೆ.ಸುಬ್ರಾಯ ಅವರಿಗೆ ಸಲ್ಲುತ್ತದೆ ಎಂದರು. ಈ ಸಂದರ್ಭ ಪ್ರೊ.ಎಚ್.ಡಿ.ಲಿಂಗರಾಜು,ನಿವೃತ್ತ ಕೇಂದ್ರೀಯ ತೆರಿಗೆ…

Read More

ಸುಂಟಿಕೊಪ್ಪ, ಜ.22 : ಸುಂಟಿಕೊಪ್ಪ ಭಾರತೀಯ ಜನತಾ ಪಕ್ಷ ಶಕ್ತಿ ಕೇಂದ್ರದ ವತಿಯಿಂದ  ವಿಜಯ ಸಂಕಲ್ಪ ಯಾತ್ರೆಯ ಬಗ್ಗೆ ಪೂರ್ವಭಾವಿ ಸಭೆಯನ್ನು ಭಾನುವಾರ ನಡೆಸಲಾಯಿತು. ದ್ವಾರಕ ಹೋಟೆಲ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕ ಅಪ್ಪಚ್ಚು ರಂಜನ್, ದಕ್ಷಿಣ ಕನ್ನಡ ಜಿಲ್ಲೆಯ ಪ್ರಬಾರಿ ಬಿ.ಬಿ.ಭಾರತೀಶ್, ವಿಧಾನಸಭಾ ಕ್ಷೇತ್ರದ ಪ್ರಬಾರಿಗಳಾದ ವಿಕ್ರಂ, ಯುವ ಮೋರ್ಚಾ ಸಂಚಾಲಕ ಮಹೇಶ್ ತಿಮ್ಮಯ್ಯ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಾದಪ್ಪ ಬೂತ್ ಮಟ್ಟದ ಕಾರ್ಯಕರ್ತರಿಗೆ ವಿಜಯ ಸಂಕಲ್ಪ ಯಾತ್ರೆಯ ಬಗ್ಗೆ ಮಾಹಿತಿಯನ್ನು ನೀಡಿದರು.

Read More

ಸೋಮವಾರಪೇಟೆ ಜ.22 : ಹಸಿದ ಹೊಟ್ಟೆಗೆ ಅನ್ನ ನೀಡುವುದೇ ಮಾನವ ಧರ್ಮ. ಹಸಿವಿನಿಂದ ಯಾರು ಸಾಯಬಾರದು ಎಂದು ಜೀವನ ಪರ್ಯಂತ ತ್ಯಾಗಮಯ ಬದುಕು ಸವೆಸಿದ ಮಹಾನ್ ಚೇತನ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮಿಗಳು ಎಂದು ಬಸವಾಪಟ್ಟಣ ತೋಟಂದಾರ್ಯ ಸಂಸ್ಥಾನದ ಸ್ವತಂತ್ರ ಬಸವಲಿಂಗ ಸ್ವಾಮೀಜಿ ಹೇಳಿದರು. ಇಲ್ಲಿನ ಶ್ರೀ ಶಿವಕುಮಾರ ಸ್ವಾಮೀಜಿ ಜಯಂತ್ಯೋತ್ಸವ ಸಮಿತಿ ವತಿಯಿಂದ ಪಟ್ಟಣದ ಆನೆಕೆರೆ ಸಮೀಪವಿರುವ ಡಾ. ಶ್ರೀ ಶಿವಕುಮಾರ್ ಸ್ವಾಮೀಜಿ ಬಸ್ ನಿಲ್ದಾಣದ ಆವರಣದಲ್ಲಿ ಲಿಂಗೈಕ್ಯ ಸ್ವಾಮೀಜಿಗಳ 4ನೇ ವರ್ಷದ ಪುಣ್ಯಸ್ಮರಣೆ-ದಾಸೋಹ ದಿನಾಚರಣೆ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. 12ನೇ ಶತಮಾನದ ಯುಗಪುರುಷ ಕ್ರಾಂತಿಕಾರಿ ಬಸವಣ್ಣ ನವರ ‘ಕಾಯಕವೇ ಕೈಲಾಸ’ ನಿತ್ಯದಾಸೋಹದ ಕೈಂಕರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಶ್ರೀಗಳು 1930ರಿಂದ ಶ್ರೀಮಠದ ಜವಾಬ್ದಾರಿಯನ್ನು ಹೊತ್ತು ಅಂದಿನಿಂದ ನಿರಂತರವಾಗಿ ಮಠ, ಯಾವುದೇ ಒಂದು ಧರ್ಮಕ್ಕೆ ಸ್ಥಿಮಿತವಾಗದೆ ಎಲ್ಲ ಧರ್ಮಗಳ ಮತ್ತು ಸಮಾಜದ ಏಳಿಗೆಗಾಗಿ ಶ್ರಮಿಸಿದರು. ಮಠದಲ್ಲಿ 10ಸಾವಿರ ವಿದ್ಯಾರ್ಥಿಗಳಿಗೆ ವಿದ್ಯೆಕಲಿಯುತ್ತಿದ್ದು, ಅದರಲ್ಲಿ 3800 ವಿದಾರ್ಥಿ ಲಿಂಗಾಯುತ ಸಮುದಾಯಕ್ಕೆ ಸೇರಿದ್ದರೆ,…

Read More