ವಿರಾಜಪೇಟೆ:ಜ.20 : ಕಂಡಂಗಾಲ ಗ್ರಾಮದ ನಿವಾಸಿ ವಿರಾಜಪೇಟೆಯ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷ ಹಾಲಿ ಕಾರ್ಯದರ್ಶಿಯಾಗಿದ್ದ ಮೂಕಚಂಡ ಅರುಣ್ ಅಪ್ಪಣ್ಣ ಅವರ ನಿಧನಕ್ಕೆ ವಿರಾಜಪೇಟೆ ಕರ್ನಾಟಕ ಸಂಘದ ಸಭಾಂಗಣದಲ್ಲಿ ಸಭೆ ನಡೆಸಿ ಸಂತಾಪ ಸೂಚಿಸಲಾಯಿತು. ಈ ಸಂದರ್ಭ ಸಂಘದ ಅಧ್ಯಕ್ಷ ಮಾಳೇಟಿರ ಎಂ.ಬೆಲ್ಲು ಬೊಪಯ್ಯ ಮಾತನಾಡಿ ಅಪ್ಪಣ್ಣ ಅವರು ಅನೇಕ ವರ್ಷಗಳಿಂದಲೂ ಕರ್ನಾಟಕ ಸಂಘದಲ್ಲಿ ಕನ್ನಡ ಭಾಷೆ ನಾಡು ನುಡಿಯನ್ನು ಉಳಿಸಿ ಬೆಳೆಸುವಂತ ಕಾರ್ಯಕ್ರಮಗಳನ್ನು ನಡೆಸಲು ಸಹಕಾರ ನೀಡಿದಂತ ಉತ್ತಮ ವ್ಯಕ್ತಿಯಾಗಿದ್ದರು. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದರು. ಸಂತಾಪ ಸಭೆಯಲ್ಲಿ ಕರ್ನಾಟಕ ಸಂಘದ ಉಪಾಧ್ಯಕ್ಷರು, ಸಹ ಕಾರ್ಯದರ್ಶಿ, ಕೋಶಾದಿಕಾರಿ ಸೇರಿದಂತೆ ಆಡಳಿತ ಮಂಡಳಿಯ ಎಲ್ಲಾ ನಿರ್ಧೇಶಕರುಗಳು ಉಪಸ್ಥಿತರಿದ್ದರು.
ಲೇಖಕ: admin
ಕುಶಾಲನಗರ ಜ.20 : ಕುಶಾಲನಗರ ಶ್ರೀ ಚೌಡೇಶ್ವರಿ ದೇವಾಲಯದ 35ನೇ ವಾರ್ಷಿಕೋತ್ಸವ ಮತ್ತು ದೇವಿಯ ಪ್ರತಿಮೆ ಅನಾವರಣ ಕಾರ್ಯಕ್ರಮ ಜ.25 ರಿಂದ 3 ದಿನಗಳ ಕಾಲ ನಡೆಯಲಿದೆ ಎಂದು ದೇವಾಂಗ ಸಂಘದ ಅಧ್ಯಕ್ಷರಾದ ಡಿ.ಟಿ.ವಿಜಯೇಂದ್ರ ತಿಳಿಸಿದ್ದಾರೆ. ಕುಶಾಲನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕುಶಾಲನಗರ ರಥಬೀದಿಯಲ್ಲಿರುವ ದೇವಾಲಯದ ಮೇಲಂತಸ್ತಿನ ಗೋಪುರ ಉದ್ಘಾಟನೆ ಜ.26 ರಂದು ಪೂಜಾ ವಿಧಿ ವಿಧಾನಗಳೊಂದಿಗೆ ನಡೆಯಲಿದೆ ಎಂದು ತಿಳಿಸಿದರು. ಅಂದು ಸಂಜೆ ವಿದ್ಯುತ್ ದೀಪಾಲಂಕಾರದೊಂದಿಗೆ ಕುಶಾಲನಗರದ ಮುಖ್ಯ ರಸ್ತೆಯಲ್ಲಿ ಉತ್ಸವ ಮೂರ್ತಿ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು. ಕಾರ್ಯಕ್ರಮಗಳ ಬಗ್ಗೆ ವಿವರ ನೀಡಿದ ದೇವಾಂಗ ಸಂಘದ ಪ್ರಧಾನ ಕಾರ್ಯದರ್ಶಿ ಡಿ.ವಿ.ರಾಜೇಶ್, 3 ದಿನಗಳ ಕಾಲ ನಡೆಯುವ ವಿಶೇಷ ಪೂಜಾ ಕಾರ್ಯಕ್ರಮದೊಂದಿಗೆ ದಿನಾಂಕ 26 ರಂದು ಸಭಾ ಕಾರ್ಯಕ್ರಮ ನಡೆಯಲಿದೆ. ದೇವಾಂಗ ಪೀಠಾಧಿಪತಿಗಳಾದ ಶ್ರೀ ದಯಾನಂದಪುರಿ ಮಹಾಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಾಂಗ ಸಂಘದ ಅಧ್ಯಕ್ಷರಾದ ಡಿ.ಟಿ.ವಿಜಯೇಂದ್ರ ವಹಿಸುವರು. ಕಾರ್ಯಕ್ರಮದ ಉದ್ಘಾಟನೆಯನ್ನು ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ನೆರವೇರಿಸಲಿದ್ದು,…
ಮಡಿಕೇರಿ ಜ.19 : ಬೃಹತ್ ಗಾತ್ರದ ಎರಡು ತಲೆಯ ಜೀವಂತ ಹಾವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೊಳ್ಳೇಗಾಲದ ಅರಣ್ಯ ಪೊಲೀಸ್ ದಳ ಬಂಧಿಸಿದೆ. ತಾಲ್ಲೂಕಿನ ಜಾಗೇರಿ ಸಮೀಪ ಹಾವನ್ನು ಮಾರಾಟ ಮಾಡಲು ತೆರಳುತ್ತಿದ್ದಾಗ ಅಧಿಕಾರಿಗಳು ದಾಳಿ ನಡೆಸಿದರು. ಕೊಪ್ಪಳ ಜಿಲ್ಲೆಯ ಅಬ್ಬೀಗೇರಿ ಗ್ರಾಮದ ಬಸವರಾಜು (36) ಹಾಗೂ ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಅಂಕುಶದೊಡ್ಡಿ ಗ್ರಾಮದ ಹನುಮಂತ (38) ಬಂಧಿತ ಆರೋಪಿಗಳು. ಇವರ ಬಳಿಯಿಂದ ಹಾವು ಮತ್ತು ಎರಡು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಡಿಕೇರಿ ಜ.19 : ಕಾಪು ಬಳಿಯ ಕೊರಗಜ್ಜ ಕ್ಷೇತ್ರಕ್ಕೆ ಚಿತ್ರನಟಿ, ಕೊಡಗಿನ ಪ್ರೇಮ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸಮಗ್ರ ಜೀರ್ಣೋದ್ಧಾರಗೊಳ್ಳುತ್ತಿರುವ ಹೊಸ ಮಾರಿಗುಡಿ ಕ್ಷೇತ್ರಕ್ಕೂ ಭೇಟಿ ನೀಡಿದ ಅವರು ಕ್ಷೇತ್ರದ ಅಭಿವೃದ್ಧಿ ಕುರಿತು ಮಾಹಿತಿ ಪಡೆದರು.
ಸೋಮವಾರಪೇಟೆ ಜ.19 : ಸೋಮವಾರಪೇಟೆಯ ಶಿವಕುಮಾರ ಸ್ವಾಮೀಜಿ ಜಯಂತ್ಯೋತ್ಸವ ಸಮಿತಿ ವತಿಯಿಂದ ಜ.21ರಂದು ದಾಸೋಹ ದಿನ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಎಸ್.ಮಹೇಶ್ ತಿಳಿಸಿದ್ದಾರೆ. ನಡೆದಾಡುವ ದೇವರು,ಕರ್ನಾಟಕ ರತ್ನ ಡಾ.ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ಜ 21ರಂದು ದಾಸೋಹ ದಿನವನ್ನಾಗಿ ಆಚರಿಸಲು ಸರ್ಕಾರ ಆದೇಶಿಸಿದ್ದು ಆ ಹಿನ್ನಲೆಯಲ್ಲಿ ಅಂದು ಶನಿವಾರ ಪಟ್ಟಣದ ಆನೆಕೆರೆ ಸಮೀಪ ಶಿವಕುಮಾರ ಸ್ವಾಮೀಜಿ ವೃತ್ತದ ನಾಮಫಲಕವನ್ನು ಶಾಸಕ ಎಂ. ಪಿ.ಅಪ್ಪಚ್ಚು ರಂಜನ್ ಅನಾವರಣಗೊಳಿಸಲಿದ್ದಾರೆ. ನಂತರ ಶಿವಕುಮಾರ ಸ್ವಾಮೀಜಿ ಬಸ್ಸು ನಿಲ್ದಾಣದ ಆವರಣದಲ್ಲಿ ದಾಸೋಹ ದಿನ ದಾರ್ಮಿಕ ಸಮಾರಂಭ ನಡೆಯಲಿದ್ದು ಕಿರಿಕೊಡ್ಲಿ ಮಠದ ಶ್ರಿ.ಸದಾಶಿವ ಸ್ವಾಮೀಜಿ,ತಪೋಕ್ಷೇತ್ರ ಮನೆಹಳ್ಳಿ ಮಠದ ಶ್ರಿ.ಮಹಾಂತ ಶಿವಲಿಂಗ ಸ್ವಾಮೀಜಿ,ಮುದ್ದಿನ ಕಟ್ಟೆ ಮಠದ ಶ್ರಿ.ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ,ಸೇರಿದಂತೆ ವಿವಿಧ ಜನಪ್ರತಿ ನಿಧಿಗಳು ಹಾಗೂ ಅಧಿಕಾರಿಗಳು ಭಾಗವ ಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಮಡಿಕೇರಿ ಜ.19 : ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ನೂತನ ಜಿಲ್ಲಾ ಶಾಖಾ ಕಚೇರಿಯನ್ನು ಕೊಡಗು ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ಉದ್ಘಾಟಿಸಿದರು. ಕೊಡಗು ಜಿಲ್ಲಾ ಪಂಚಾಯತ್ ಭವನದಲ್ಲಿರುವ ನೂತನ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಿಡಿಒಗಳ ಅಭ್ಯುದಯ ಮತ್ತು ಸಾಮಾಜಿಕ ಕಳಕಳಿಯೊಂದಿಗೆ ಸಂಘವು ಕಾರ್ಯ ನಿರ್ವಹಿಸುವಂತಾಗಲಿ ಎಂದರು. ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾದ ರವೀಶ್ ಅವರು ಮಾತನಾಡಿ, ಪಿಡಿಒಗಳ ಹಿತ ರಕ್ಷಣೆ ಸಂಘದ ಮುಖ್ಯ ಧ್ಯೇಯವಾಗಿದೆ. ಸರ್ಕಾರದ ಎಲ್ಲಾ ಯೋಜನೆಗಳನ್ನು ಗ್ರಾಮ ಮಟ್ಟದಲ್ಲಿ ಯಶಸ್ವಿಗಾಗಿ ಅನುಷ್ಟಾನಿಸುವಲ್ಲಿ ಪಿಡಿಒಗಳ ಪಾತ್ರ ಮಹತ್ವದ್ದಾಗಿದೆ ಎಂದರು. ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಸಂಘದಿAದ ಅನೇಕ ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು. ಇದೇ ವೇಳೆ ಕೊಡಗು ಜಿಲ್ಲಾ ಪಂಚಾಯತ್‌ನ ನೂತನ ಮನರೇಗಾ ಶಾಖೆಯನ್ನು ಜಿ.ಪಂ.ಸಿ ಇಒ ಮತ್ತು ಜಿ.ಪಂ. ಉಪ ಕಾರ್ಯದರ್ಶಿ ಧನರಾಜು ಅವರು ಉದ್ಘಾಟಿಸಿದರು. ಯೋಜನಾ ನಿರ್ದೇಶಕರಾದ ಜಗದೀಶ್, ಮುಖ್ಯ ಯೋಜನಾಧಿಕಾರಿ ರಾಜ್‌ಗೋಪಾಲ್, ಮುಖ್ಯ ಲೆಕ್ಕಾಧಿಕಾರಿ…
ಮಡಿಕೇರಿ ಜ.19 : ಮಹಾಯೋಗಿ ವೇಮನ ಅವರು ಕವಿ ಹಾಗೂ ಸಾಹಿತಿಯಾಗಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಎಲ್ಲರೂ ಸಮಾನವಾಗಿ ಬದುಕು ಕಟ್ಟಿಕೊಳ್ಳುವಂತಾಗಲು ಶ್ರಮಿಸಿದ್ದಾರೆ ಎಂದು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಭಾರತೀಯ ವಿದ್ಯಾಭವನದಲ್ಲಿ ಗುರುವಾರ ನಡೆದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಹಾಗೂ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶಿವಯೋಗಿ ಸಿದ್ದರಾಮೇಶ್ವರರು 12 ನೇ ಶತಮಾನದಲ್ಲಿ ಶಿವಶರಣರಾಗಿದ್ದರು. ಕನ್ನಡ ಕಾವ್ಯ ಮತ್ತು ಸಮಕಾಲೀನ ವಚನ ಹಾಗೂ ಸಾಹಿತ್ಯಕಾರರಾಗಿದ್ದರೂ ಕೆರೆಕಟ್ಟೆ, ಬಾವಿ ಇತರೆ ಅಭಿವೃದ್ಧಿ ಕೆಲಸಗಳಲ್ಲಿ ಹೆಚ್ಚು ಕಾಯಕ ಕಂಡಿದ್ದರು ಎಂದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುoಡೇಗೌಡ ಅವರು ಮಾತನಾಡಿ ಸಮಾಜದಲ್ಲಿ ಸಾಧನೆ ಮಾಡಿದ ಮಹನೀಯರ ಜಯಂತಿಗಳು ಕೇವಲ ಆಚರಣೆಗೆ ಸೀಮಿತಗೊಳಿಸದೇ, ಅವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲನೆ ಮಾಡುವ ನಿಟ್ಟಿನಲ್ಲಿ ನಾವು ಉತ್ತಮ ಸಮಾಜ ಕಟ್ಟಬೇಕಾಗಿದೆ ಎಂದು ಹೇಳಿದರು. ಶಿವಯೋಗಿ ಸಿದ್ದರಾಮೇಶ್ವರು ಬಸವಣ್ಣ,…
ಮಡಿಕೇರಿ ಜ.19 : ವಿಕೆ3 ಪಿಕ್ಚರ್ಸ್ ಬ್ಯಾನರ್ ನಡಿ ಈರಮಂಡ ಹರಿಣಿ ವಿಜಯ್ ಹಾಗೂ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ನಿರ್ಮಿಸಿರುವ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ನಾಡ ಪೆದ ಆಶಾ” ಕೊಡವ ಚಿತ್ರಕ್ಕೆ ಪ್ರಶಸ್ತಿಗಳು ಹುಡುಕಿಕೊಂಡು ಬರುತ್ತಿವೆ. ಅಸ್ಸಾಂನ ವಿಂಗ್ಸ್ ಇಂಟರ್ ನ್ಯಾಷನಲ್ ಕ್ರಿಟಿಕ್ಸ್ ಫಿಲಂ ಫೆಸ್ಟಿವಲ್ (WICFF-2022 )ನಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ (ಬೆಸ್ಟ್ ಫೀಚರ್ ಫಿಲಂ), ಉತ್ತಮ ಚಿತ್ರ ವಿಮರ್ಶಕರ ಪ್ರಶಸ್ತಿ (ಕ್ರಿಟಿಕ್ಸ್ ಚಾಯ್ಸ್ ಅವಾರ್ಡ್), ಉತ್ತಮ ಸಂಭಾಷಣೆ ಪ್ರಶಸ್ತಿ (ಬೆಸ್ಟ್ ಡೈಲಾಗ್ ರೈಟರ್ ಅವಾರ್ಡ್)ಗಳಿಸಿದೆ. ದೆಹಲಿಯ 7ನೇ ವಾಲೆಟ್ ಅಂತರರಾಷ್ಟ್ರೀಯ ಚಿತ್ರೋತ್ಸವ( WIFF -2022 )ದಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ (ಬೆಸ್ಟ್ ಡೈರೆಕ್ಟರ್ ಅವಾರ್ಡ್) ಅತ್ಯುತ್ತಮ ಚಿತ್ರ ಪ್ರಶಸ್ತಿ (ಬೆಸ್ಟ್ ಫೀಚರ್ ಫಿಲಂ ಅವಾರ್ಡ್)ಯನ್ನು ಕೂಡ ತನ್ನದಾಗಿಸಿಕೊಂಡಿದೆ. “ನಾಡ ಪೆದ ಆಶಾ” ಗೆ ಪ್ರಶಸ್ತಿಗಳು ದೊರೆಯುತ್ತಿರುವ ಬಗ್ಗೆ ಚಿತ್ರದ ನಿರ್ಮಾಪಕಿ ಈರಮಂಡ ಹರಿಣಿ ವಿಜಯ್ ಹರ್ಷ ವ್ಯಕ್ತಪಡಿಸಿದ್ದಾರೆ. ವಿವಿಧ ವಿಭಾಗಗಳಲ್ಲಿ ಆಯ್ಕೆಗೊಂಡು ಪ್ರಶಸ್ತಿ ಗಳಿಸುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಇದೊಂದು ಮಹಿಳಾ…
ಮಡಿಕೇರಿ ಜ.19 : ತಲಕಾವೇರಿ ದೇವಾಲಯದ ಮೂಲ ಅರ್ಚಕ ಗೋಪಾಲಕೃಷ್ಣ ಆಚಾರ್ಯ(82) ವಿಧಿವಶವಾಗಿದ್ದಾರೆ. ಗೋಪಾಲಕೃಷ್ಣ ಆಚಾರ್ಯ ಅವರು 1995 ರಲ್ಲಿ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಡೆಪ್ಯುಟಿ ತಹಶೀಲ್ದಾರಾಗಿ ನಿವೃತ್ತಿ ಹೊಂದಿದ್ದರು. ಇವರು ವಂಶ ಪಾರಂಪರ್ಯವಾಗಿ ತಲಕಾವೇರಿ ದೇವಾಲಯದಲ್ಲಿ ಮೂಲ ಅರ್ಚಕರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ಅನೇಕ ಸಂಘ ಸಂಸ್ಥೆಗಳಲ್ಲಿ ಗುರುತಿಸಿ, ಕೊಡುಗೈದಾನಿಯಾಗಿದ್ದರು. ಮೃತರು ಪತ್ನಿ ಪದ್ಮಾವತಿ, ಪುತ್ರ ಪುತ್ತೂರು ಶಾಖೆಯ ಟಾಟಾ ಅರವಿಂದ ಮೋಟರ್ಸ್ ಕಂಪೆನಿಯ ಸರ್ವಿಸ್ ಮೆನೇಜರ್ ಕೃಷ್ಣ ಪ್ರಸಾದ್ ಆಚಾರ್ಯ, ವಿಟ್ಲ ಗ್ರಾಮೀಣ ಬ್ಯಾಂಕ್ ಪುತ್ತೂರು ಶಾಖೆಯ ವ್ಯವಸ್ಥಾಪಾಕಿ ಸವಿತಾ ನಾಗರಾಜ್, ಸಹಿತ ನಾಲ್ವರು ಪುತ್ರಿಯನ್ನು, ಅಪಾರ ಬಂಧು ಬಳಗವನ್ನು ಆಗಲಿದ್ದಾರೆ. ಮೃತರ ಮನೆಗೆ ಅನೇಕ ಗಣ್ಯ ವ್ಯಕ್ತಿಗಳು ಆಗಮಿಸಿ ಸಂತಾಪ ಸೂಚಿಸಿದರು.
ಯಾದಗಿರಿ ಜ.19 : ಪ್ರಧಾನ ಮಂತ್ರಿ ನರೇಂದ್ರ ಮೋದಿ ಯಾದಗಿರಿ ಜಿಲ್ಲೆಯ ಕೊಡೇಕಲ್ ನಲ್ಲಿ ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ನವೀಕರಣ ಮತ್ತು ಆಧುನೀಕರಣ ಕಾಮಗಾರಿ ಲೋಕಾರ್ಪಣೆ ಮಾಡಿದರು. ಯಾದಗಿರಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಮತ್ತು ಸೂರತ್-ಚೆನ್ನೈಎಕ್ಸ್ಪ್ರೆಸ್ -ವೇ,ಪ್ಯಾಕೇಜ್ -3 ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದರು. ರಾಜ್ಯಪಾಲ ಡಾ. ತಾವರಚಂದ್ ಗೆಹ್ಲೋಟ್ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ , ಕೇಂದ್ರದ ರಾಸಾಯನಿಕ, ರಸಗೊಬ್ಬರ ಹಾಗೂ ಹೊಸ ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖುಬಾ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಅಧ್ಯಕ್ಷ ನರಸಿಂಹ ಗೌಡ, ರಾಯಚೂರು ಸಂಸದ ಅಮರೇಶಗೌಡ ನಾಯಕ ಮುಂತಾದವರು ಇದ್ದರು.






