ಲೇಖಕ: admin

ಸಿದ್ದಾಪುರ, NEWS DESK ಸೆ.19: ನೆಲ್ಯಹುದಿಕೇರಿ ವ್ಯಾಪ್ತಿಯ ಅತ್ತಿಮಂಗಲ ಬಳಿ ಹಾಡಹಗಲೇ ಒಂಟಿ ಸಲಗವೊಂದು ಕಾರ್ಮಿಕರ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ. ಅಭ್ಯತ್‌ಮಂಗಲ ನಿವಾಸಿಗಳಾದ ಸುಬ್ರಮಣಿ (57) ಮತ್ತು ಉಮೇಶ್ ಅವರು ಸ್ಕೂಟಿಯಲ್ಲಿ ಸಿದ್ದಾಪುರದ ಕಡೆಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ರಸ್ತೆಯಲ್ಲಿ ಎದುರಾದ ಒಂಟಿ ಸಲಗ ಏಕಾಏಕಿ ದಾಳಿ ನಡೆಸಿದೆ. ಆನೆಯ ದಾಳಿಯಿಂದ ಸ್ಕೂಟಿ ಸಮೇತ ಕೆಳಗೆ ಬಿದ್ದ ಸುಬ್ರಮಣಿ ಅವರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ನಡೆದ ಕೂಡಲೇ ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಗಾಯಾಳು ಸುಬ್ರಮಣಿ ಅವರಿಗೆ ಸಿದ್ದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಕಾರ್ಮಿಕ ಮುಖಂಡ ಭರತ್, ರಸ್ತೆಯ ಇಕ್ಕೆಲಗಳಲ್ಲಿ ಪೊದೆಗಳು ಬೆಳೆದಿರುವುದರಿಂದ ವಾಹನ ಸವಾರರಿಗೆ ಕಾಡುಪ್ರಾಣಿಗಳು ನಿಂತಿರುವುದು…

Read More

ಸುಂಟಿಕೊಪ್ಪ, NEWS DESK ಸೆ.19: ವಿಶ್ವ ಹಿಂದೂ ಪರಿಷತ್ ಹಾಗೂ ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ರಾಮಮಂದಿರದಲ್ಲಿ ನಡೆಯುತ್ತಿರುವ 62ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಶುಕ್ರವಾರ ರಾತ್ರಿ ಅಮ್ಮತ್ತಿಯ ರಾಜ್ಯ ಪ್ರಶಸ್ತಿ ವಿಜೇತ ರಾಜೇಶ್ ಮತ್ತು ತಂಡದಿಂದ ನಡೆದ ಜಾದು ಪ್ರದರ್ಶನವು ನೆರೆದಿದ್ದ ಜನರ ಮನಸೂರೆಗೊಂಡಿತು. ರಾತ್ರಿ 8 ಗಂಟೆಗೆ ಆರಂಭವಾದ ಕಾರ್ಯಕ್ರಮವನ್ನು ಸಮಿತಿಯ ಅಧ್ಯಕ್ಷ ವಿಘ್ನೇಶ್ ಉದ್ಘಾಟಿಸಿದರು. ನಂತರ ನಡೆದ ಜಾದು ಪ್ರದರ್ಶನವು ಪ್ರೇಕ್ಷಕರನ್ನು ನಿಬ್ಬೆರಗುಗೊಳಿಸಿತು. ಕೈಯನ್ನು ಕತ್ತರಿಸಿ ಮತ್ತೆ ಜೋಡಿಸುವ ಪ್ರಯೋಗವನ್ನು ಕಂಡು ಜನರು ನಿಶ್ಯಬ್ದರಾದರು. ಗಾಳಿಯಲ್ಲಿ ಹಾರಾಡುವ ಕುರ್ಚಿ, ಚೆಂಡು ಹಾಗೂ ಪುಸ್ತಕದೊಳಗಿಂದ ಗಿಟಾರ್ ಹೊರತೆಗೆದ ಪ್ರದರ್ಶನಕ್ಕೆ ಪ್ರೇಕ್ಷಕರಿಂದ ಭಾರಿ ಚಪ್ಪಾಳೆ ವ್ಯಕ್ತವಾಯಿತು. ಖಾಲಿ ಬ್ಯಾಗಿನಿಂದ ಹೂವು, ಗಿಫ್ಟ್ ಬಾಕ್ಸ್, ಚಾಕಲೇಟ್ ಹಾಗೂ ಸಾವರ್ಕರ್ ಅವರ ಭಾವಚಿತ್ರವನ್ನು ಹೊರತೆಗೆದರು. ಅಲ್ಲದೆ ಹಾರಾಡಿದ ಬಣ್ಣಬಣ್ಣದ ಬಲ್ಬ್‌ಗಳು ಸೇರಿದಂತೆ ಹತ್ತು ಹಲವು ಜಾದೂ ಪ್ರದರ್ಶನಗಳನ್ನು ನೀಡಿ ಜನರನ್ನು ರಂಜಿಸಿದರು. ಕೊನೆಯಲ್ಲಿ ಮಾಯಾಜಾಲದ ಮೂಲಕ ಪ್ರೇಕ್ಷಕರಿಂದಲೇ ಭಾರತದ ರಾಷ್ಟ್ರಧ್ವಜವನ್ನು…

Read More

ಮಡಿಕೇರಿ, NEWS DESK ಸೆ.19: ಸಾಹಿತ್ಯಾಭಿರುಚಿ ಬೆಳೆಸಲು ಮತ್ತು ಸಾಹಿತ್ಯ ಕ್ಷೇತ್ರದ ಬಗ್ಗೆ ಆಸಕ್ತಿ ಮೂಡಿಸಲು ದತ್ತಿನಿಧಿ ಸ್ಥಾಪನೆ ಸಹಕಾರಿಯಾಗಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ತಿಳಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಮೂರ್ನಾಡು ಹೋಬಳಿ ಘಟಕ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಮಡಿಕೇರಿ ತಾಲೂಕು ಹಾಗೂ ಎಂ.ಇ.ಎಸ್. ಪ್ರೌಢಶಾಲೆ, ಮೂರ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ ಪ್ರೌಢಶಾಲೆಯ ಕಾವೇರಿ ಸಭಾಂಗಣದಲ್ಲಿ ನಡೆದ ಅವರೆಮಾದಂಡ ಶರಣ್ ಪೂಣಚ್ಚ ದತ್ತಿನಿಧಿ ಸ್ವೀಕಾರ, ‘ಶಿಕ್ಷಣದ ಬೆಳಕು’ ಕಥಾಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಾಹಿತ್ಯ, ಸಮಾಜ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರ ಹೆಸರಿನಲ್ಲಿ ದತ್ತಿನಿಧಿ ಸ್ಥಾಪಿಸುವುದು ಉತ್ತಮ ಪರಂಪರೆಯಾಗಿದೆ. ಇಂತಹ ದತ್ತಿನಿಧಿಗಳ ಮೂಲಕ ಸಾಹಿತ್ಯಾಸಕ್ತರಿಗೆ ಹಾಗೂ ಸಮಾಜದ ವಿವಿಧ ವರ್ಗಗಳಿಗೆ ಪ್ರೋತ್ಸಾಹ ನೀಡಲು ಸಾಧ್ಯವಾಗುತ್ತದೆ ಎಂದರು. ರಾಜ್ಯದಲ್ಲಿ ಈಗಾಗಲೇ 3 ಸಾವಿರಕ್ಕೂ ಅಧಿಕ…

Read More

ಸೋಮವಾರಪೇಟೆ, NEWS DESK ಸೆ.19: ಕಬಡ್ಡಿಯಂತಹ ಗ್ರಾಮೀಣ ಸೊಗಡಿನ ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಧೈರ್ಯ, ಶಿಸ್ತು, ಸಮಯಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುತ್ತವೆ ಎಂದು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ ಹೇಳಿದರು. ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಬಿಟಿಸಿಜಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಪದವಿ ಪೂರ್ವ ವಿಭಾಗದ ತಾಲೂಕು ಮಟ್ಟದ ಕಬಡ್ಡಿ ಕ್ರೀಡಾಕೂಟಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು. ಇಂದಿನ ವಿದ್ಯಾರ್ಥಿಗಳು ಪಠ್ಯ ಶಿಕ್ಷಣದ ಜೊತೆಗೆ ಕ್ರೀಡೆಗೂ ಹೆಚ್ಚಿನ ಆದ್ಯತೆ ನೀಡಬೇಕು. ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಸದೃಢತೆ ಮಾತ್ರವಲ್ಲದೆ ಆತ್ಮವಿಶ್ವಾಸವೂ ಹೆಚ್ಚುತ್ತದೆ. ಕಬಡ್ಡಿ ಆಟಗಾರರು ಕ್ರೀಡಾ ನಿಯಮಗಳನ್ನು ಪಾಲಿಸಿ, ಕ್ರೀಡಾಸ್ಫೂರ್ತಿಯಿಂದ ಆಟವಾಡಬೇಕು ಎಂದು ಹೇಳಿದರು. ಸಂಸ್ಥೆಯ ಕರೆಸ್ಪಾಂಡೆಂಟ್ ಕೆ.ಎಂ. ಜಗದೀಶ್ ಮಾತನಾಡಿ, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಣದ ಜೊತೆಗೆ ಕ್ರೀಡೆಗೂ ಮಹತ್ವದ ಸ್ಥಾನವಿದೆ. ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ದೈಹಿಕ ಸಾಮರ್ಥ್ಯ, ಏಕಾಗ್ರತೆ, ಶಿಸ್ತು ಹಾಗೂ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ. ಕಬಡ್ಡಿ ಕೇವಲ ದೈಹಿಕ ಸಾಮರ್ಥ್ಯದ ಆಟವಲ್ಲ; ಎದುರಾಳಿಯ ತಂತ್ರವನ್ನು…

Read More

ಗೋಣಿಕೊಪ್ಪ, NEWS DESK ಸೆ.19: ಐದು ದಿನಗಳ ಕಾಲ ಭಕ್ತಿ–ಶ್ರದ್ಧೆಯಿಂದ ಪೂಜಿಸಲ್ಪಟ್ಟ ವಿಘ್ನೇಶ್ವರನಿಗೆ ಅಂತಿಮ ಪೂಜೆ ಸಲ್ಲಿಸಿ, ಪ್ರಾರ್ಥನೆಯೊಂದಿಗೆ ಗೋಣಿಕೊಪ್ಪ ನಗರ ಶುಕ್ರವಾರ ಭಾವಪೂರ್ಣ ಬೀಳ್ಕೊಡುಗೆ ನೀಡಿತು. ಗಣೇಶ ವಿಸರ್ಜನಾ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗುತ್ತಿದ್ದಂತೆ ಹಬ್ಬದ ಸಂಭ್ರಮ ಮನೆಮಾಡಿತ್ತು. ಗಣೇಶೋತ್ಸವ ಸಮಿತಿಗಳ ಪದಾಧಿಕಾರಿಗಳು, ಯುವಕರು, ಮಹಿಳೆಯರು, ಮಕ್ಕಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಗೋಣಿಕೊಪ್ಪದ ಗಣೇಶೋತ್ಸವದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹತ್ತು ಮಂಟಪಗಳು ಒಂದೇ ದಿನ ಸಾಮೂಹಿಕ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡಿರುವುದು ಹೊಸ ದಾಖಲೆ ನಿರ್ಮಿಸಿದೆ. ಈ ಹಿಂದೆ ಬಡಾವಣೆವಾರು ಪ್ರತ್ಯೇಕವಾಗಿ ನಡೆಯುತ್ತಿದ್ದ ವಿಸರ್ಜನಾ ಕಾರ್ಯಕ್ರಮಕ್ಕೆ ಸಾಮೂಹಿಕ ಸ್ವರೂಪ ನೀಡುವ ಪ್ರಯತ್ನ ಇದೀಗ ಫಲ ನೀಡಿದೆ. ಕಳೆದ ವರ್ಷ ನಾಲ್ಕು ಮಂಟಪಗಳು ಪಾಲ್ಗೊಂಡಿದ್ದರೆ, ಈ ಬಾರಿ ಆ ಸಂಖ್ಯೆ ಹತ್ತಕ್ಕೆ ಏರಿರುವುದು ಸಾಮೂಹಿಕ ಆಚರಣೆಯತ್ತ ಜನರ ಒಲವನ್ನು ತೋರಿಸಿದೆ. ಗಣೇಶ ವಿಸರ್ಜನೆಗೆ ಹೊಸ ಮಾದರಿ ಕಲ್ಪಿಸುವ ಉದ್ದೇಶದಿಂದ ಪತ್ರಕರ್ತ ಜಗದೀಶ್ ಜೋಡುಬೀಟಿ, ಸತೀಶ್ ಸಿಂಗಿ ಹಾಗೂ…

Read More

ಮಡಿಕೇರಿ, NEWS DESK ಸೆ.19: ಬಹುಸಂಖ್ಯಾತರ ರಾಜ್ಯಾಧಿಕಾರದ ವ್ಯಾಪ್ತಿಯಲ್ಲಿ ಕಾಂಪ್ಯಾಕ್ಟ್ ಭೂಪ್ರದೇಶದಲ್ಲಿ ವಾಸಿಸುವ ಸಣ್ಣ ಆದಿಮಸಂಜಾತ ಸಮುದಾಯಗಳಿಗೆ ಭೂ-ರಾಜಕೀಯ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತವು ಸಹಜ ಹಕ್ಕಾಗಿದೆ. ವಿಶ್ವಸಂಸ್ಥೆಯ ಆದಿಮಸಂಜಾತರ ಹಕ್ಕುಗಳ ಘೋಷಣೆ ಹಾಗೂ ಭಾರತದ ಸಂವಿಧಾನದ ಆಶಯಗಳ ಆಧಾರದಲ್ಲಿ ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ ಹೋರಾಟ ನಡೆಸಲಾಗುತ್ತಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ (CNC) ಅಧ್ಯಕ್ಷ ಎನ್.ಯು. ನಾಚಪ್ಪ ಹೇಳಿದರು. ಚೆಟ್ಟಳ್ಳಿಯಲ್ಲಿ ನಡೆದ 3ನೇ ಶಾಂತಿಯುತ CNC ಮಾನವ ಸರಪಳಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊಡವರು ಯಾರ ದಯೆಯನ್ನೂ ಕೇಳುತ್ತಿಲ್ಲ. ಕೊಡವಲ್ಯಾಂಡ್ ಸ್ವಾಯತ್ತತೆ ಕೊಡವರ ಕಾನೂನುಬದ್ಧ ಹಕ್ಕು ಎಂದು ಪ್ರತಿಪಾದಿಸಿದರು. ಕೊಡವಲ್ಯಾಂಡ್ ಸ್ವಾಯತ್ತತೆಯ ಬೇಡಿಕೆಯನ್ನು ಬಹುಸಂಖ್ಯಾತ ಸಮುದಾಯದ ಹೆದರಿಸುವಿಕೆ ಅಥವಾ ಬೆದರಿಕೆಗಳಿಂದ ತಡೆಯಲು ಸಾಧ್ಯವಿಲ್ಲ. ಜನಸಂಖ್ಯಾ ಬಲದ ಮೂಲಕ ಬೆದರಿಸುವ ತಂತ್ರಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಇದು ಅಸಂವಿಧಾನಿಕ ಮತ್ತು ಸಾರ್ವತ್ರಿಕ ಮಾನವ ಹಕ್ಕುಗಳ ಒಡಂಬಡಿಕೆಯ ಉಲ್ಲಂಘನೆಯಾಗಿದೆ ಎಂದು ಅವರು ಹೇಳಿದರು. ನಮ್ಮ ಆದಿಮಸಂಜಾತರ ಶ್ರೇಷ್ಠ (Classical) ಗುಣಲಕ್ಷಣಗಳನ್ನು ಸಾಬೀತುಪಡಿಸುವಾಗ, ಯಾವುದೇ ದೃಷ್ಟಿಯಲ್ಲಿ ನಮ್ಮ…

Read More

ಕುಶಾಲನಗರ, NEWS DESK ಸೆ. 18: ಜನಪದ ಸಾಹಿತ್ಯ ಎಲ್ಲಾ ಸಾಹಿತ್ಯದ ತಾಯಿಬೇರು. ಸಮಾಜದಲ್ಲಿ ಗ್ರಾಮೀಣ ಸೊಗಡಿನ ಜಾನಪದ ಸಾಹಿತ್ಯದಲ್ಲಿ ನಿಜವಾದ ಮಾನವೀಯ ಮತ್ತು ಸಾಮಾಜಿಕ ಮೌಲ್ಯಗಳು ಅಡಕವಾಗಿವೆ ಎಂದು ಬಾಳೆಲೆ ವಿಜಯಲಕ್ಷ್ಮಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರೂ, ಸಾಹಿತಿಯೂ ಆದ ಡಾ. ಜೆ. ಸೋಮಣ್ಣ ಹೇಳಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು (ಕ.ಸಾ.ಪ.), ಕುಶಾಲನಗರ ತಾಲೂಕು ಕ.ಸಾ.ಪ. ಘಟಕ ಹಾಗೂ ಹೆಬ್ಬಾಲೆ ವಲಯದ ಕ.ಸಾ.ಪ. ಘಟಕದ ವತಿಯಿಂದ ತೊರೆನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರಕವಿ ಕುವೆಂಪು ಕನ್ನಡ ಭಾಷಾ ಸಂಘದ ಆಶ್ರಯದಲ್ಲಿ ‘ಗ್ರಾಮೀಣ ಜನಪದ ಸೊಗಡು’ ಎಂಬ ವಿಷಯದ ಕುರಿತು ಪಟೇಲ್ ಸಣ್ಣಯ್ಯ ವಾರ್ಷಿಕ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಡಾ. ಜೆ. ಸೋಮಣ್ಣ ಅವರು ಜನಪದ ಸಾಹಿತ್ಯ, ಧಾರ್ಮಿಕ ಆಚರಣೆಗಳು, ಸಂಸ್ಕೃತಿ ಹಾಗೂ ಪರಿಸರದ ಕುರಿತು ಅವಲೋಕನ ನಡೆಸಿ ಮಾತನಾಡಿದರು. ಆಧುನಿಕ ತಂತ್ರಜ್ಞಾನದ ಸಂದರ್ಭದಲ್ಲಿ ಸಾಮಾಜಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವ ಜಾನಪದ…

Read More

ವಿರಾಜಪೇಟೆ, NEWS DESK ಸೆ.19: ದಫ್ ಕಲಾ ಒಕ್ಕೂಟ ಕೊಡಗು ವತಿಯಿಂದ ಜಿಲ್ಲಾ ಮಟ್ಟದ ದಫ್ ಸ್ಪರ್ಧೆಯನ್ನು ಅಕ್ಟೋಬರ್ 18ರಂದು ಚೋಕಂಡಳ್ಳಿಯಲ್ಲಿ ನಡೆಸಲು ಸಮಿತಿಯು ತೀರ್ಮಾನಿಸಿದೆ ಎಂದು ದಫ್ ಕಲಾ ಒಕ್ಕೂಟ ಕೊಡಗು ಇದರ ಕಾರ್ಯದರ್ಶಿ ಸಿ.ಹೆಚ್. ರಫೀಕ್ ತಿಳಿಸಿದರು. ವಿರಾಜಪೇಟೆ ಪತ್ರಕರ್ತರ ವೇದಿಕೆಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಹಲವು ವರ್ಷಗಳಿಂದ ಕೊಡಗು ಜಿಲ್ಲೆಯ ದಫ್ ಕಲಾ ತಂಡಗಳಿಗೆ ಸೂಕ್ತ ವೇದಿಕೆ ಒದಗಿಸುವ ನಿಟ್ಟಿನಲ್ಲಿ ದಫ್ ಕಲಾ ಒಕ್ಕೂಟ ಕೊಡಗು ವತಿಯಿಂದ ಜಿಲ್ಲಾ ಮಟ್ಟದ ದಫ್ ಸ್ಪರ್ಧೆಯನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಅದರಂತೆ ಈ ವರ್ಷವೂ ಅಕ್ಟೋಬರ್ 18ರಂದು ಚೋಕಂಡಳ್ಳಿಯಲ್ಲಿ ಜಿಲ್ಲಾ ಮಟ್ಟದ ದಫ್ ಸ್ಪರ್ಧೆ ನಡೆಸಲು ತೀರ್ಮಾನಿಸಲಾಗಿದೆ. ಈ ಬಾರಿ ಸುಮಾರು 30ಕ್ಕೂ ಹೆಚ್ಚಿನ ತಂಡಗಳು ಭಾಗವಹಿಸುವ ನಿರೀಕ್ಷೆಯಿದ್ದು, ಈಗಾಗಲೇ 15 ತಂಡಗಳು ನೋಂದಣಿ ಮಾಡಿಕೊಂಡಿವೆ. ಜಿಲ್ಲೆಯಾದ್ಯಂತ ಇರುವ ದಫ್ ಕಲಾ ತಂಡಗಳು ಸೆಪ್ಟೆಂಬರ್ 25ರೊಳಗಾಗಿ ನೋಂದಣಿ ಮಾಡಿಕೊಂಡು ಸ್ಪರ್ಧೆಯ ಯಶಸ್ಸಿಗೆ ಸಹಕರಿಸಬೇಕೆಂದು ಅವರು ಮನವಿ…

Read More

ಮಡಿಕೇರಿ, NEWS DESK ಸೆ. 19:  ನಗರದ ಕೊಡಗು ವಿದ್ಯಾಲಯದಲ್ಲಿ 3 ನೇ ತರಗತಿ ವಿದ್ಯಾರ್ಥಿಗಳು ಗಣೇಶ ಚತುರ್ಥಿಯನ್ನು ಭಕ್ತಿ ಭಾವ, ಮತ್ತು ಸಡಗರದಿಂದ ಆಚರಿಸಿದರು. ಶಾಲೆಯ  ಬಿ.ಕೆ. ಸುಬ್ಬಯ್ಯ ಸಭಾಂಗಣದಲ್ಲಿ  ಆಯೋಜಿತ ಸಮಾರಂಭದಲ್ಲಿ  ವಿದ್ಯಾರ್ಥಿಗಳು ಪರಿಸರ ಸ್ನೇಹಿ ಮಣ್ಣಿನಿಂದ ಗಣಪತಿ ಮೂರ್ತಿಗಳನ್ನುತಯಾರಿಸಿ, ಪೂಜಿಸಿ ನಂತರ ವಿಸರ್ಜನೆ ಮಾಡುವ ಮೂಲಕ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದರು. ಮಣ್ಣಿನ ಗಣಪತಿ ತಯಾರಿಕೆ ಹಾಗೂ ವಿಸರ್ಜನೆಯ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಅರಿವು ಮೂಡಿಸಲಾಯಿತು. ಶಿಕ್ಷಕಿ ಬೊಳ್ಳಮ್ಮ ಗಣೇಶ ಚತುರ್ಥಿಯ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಪರಿಸರ ಮಹತ್ವವನ್ನು ವಿವರಿಸಿದರು.    ಶಾರ್ವಿ ಭಾರತ್   ಗಣೇಶ ಚತುರ್ಥಿಯ ಮಹತ್ವದ ಕುರಿತು ಮಾತನಾಡಿದರು. ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿದ್ದ “ಗಣಪತಿಗೆ ಆನೆ ಮೊಗವು ಹೇಗೆ ಬಂತು” ಎಂಬ ಪೌರಾಣಿಕ ಕಥೆಯನ್ನು ಆಧರಿಸಿದ ನಾಟಕವನ್ನು ವಿದ್ಯಾರ್ಥಿಗಳು ಮನೋಜ್ಞವಾಗಿ ಅಭಿನಯಿಸಿದರು. ನಾಟಕ, ನೃತ್ಯ ಹಾಗೂ ಹಾಡುಗಳ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿ ಮೆಚ್ಚುಗೆಗೆ ಪಾತ್ರರಾದರು.  ಗಣೇಶನ ಕುರಿತಾದ…

Read More

ವಿರಾಜಪೇಟೆ, NEWS DESK ಸೆ.19:ವಿರಾಜಪೇಟೆಯ ಕರಾಟೆ ಸ್ಕೂಲ್ ಗೇಮ್ಸ್ ವತಿಯಿಂದ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಗಮನಾರ್ಹ ಸಾಧನೆ ಮಾಡಿದ್ದಾರೆ. ತಮ್ಮ ಶಿಸ್ತು, ಧೈರ್ಯ, ಆತ್ಮವಿಶ್ವಾಸ ಹಾಗೂ ನಿರಂತರ ಪರಿಶ್ರಮದ ಮೂಲಕ ಸ್ಪರ್ಧೆಯಲ್ಲಿ ಮಿಂಚಿದ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. U-17 ಬಾಲಕಿಯರ ವಿಭಾಗದಲ್ಲಿ ರ‍್ಣಾಂಡ ಕೃತಿಕಾ ಅಕ್ಕಮ್ಮ ಎಸ್. ಅವರು 48 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. U-17 ಬಾಲಕರ ವಿಭಾಗದಲ್ಲಿ ತಾತಂಡ ದಕ್ಷ್ ಬೋಜಣ್ಣ ಟಿ. ಅವರು 54 ಕೆ.ಜಿ. ಒಳಗಿನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. U-14 ಬಾಲಕರ ವಿಭಾಗದಲ್ಲಿ ರ‍್ಣಾಂಡ ಸನತ್ ಮುತ್ತಣ್ಣ ಎಸ್. ಅವರು 35 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಯ ಹಿಂದೆ ಅವರ ಕಠಿಣ ಪರಿಶ್ರಮದ ಜೊತೆಗೆ…

Read More