ಲೇಖಕ: admin

ಮಡಿಕೇರಿ ಮಾ.28 NEWS DESK : ಬಿಟ್ಟಂಗಾಲ ಹಾಗೂ ಸಿದ್ದಾಪುರ ಲಿಟಲ್‌ವುಡ್ ಮಾಂಟೆಸ್ಸರಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಸಿದ್ದಾಪುರ ಕರಡಿಗೂಡು ರಸ್ತೆಯ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ನಡೆಯಿತು.  ಡಿ ಎಂ ಪಿ ಶಾಲೆಯ ಸಂಸ್ಥಾಪಕರಾದ ಎಂ.ಎಂ.ದೇವಯ್ಯ  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಾಲ್ಯದಿಂದಲೇ ಮಕ್ಕಳು ಶಿಕ್ಷಣಭ್ಯಾಸದ ಮೂಲಕ ಕಲಿಕೆಯಲ್ಲಿ ತೊಡಗಿಸಿಕೊಂಡು ಮುನ್ನಡೆದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದ್ದು. ಪೋಷಕರು ತಮ್ಮ ಮಕ್ಕಳ ಕಲಿಕೆ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ಮೂಲಕ ಪ್ರತಿಭಾನ್ವಿತರಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಲು ಸಹಕಾರ ನೀಡಬೇಕೆಂದು ಹೇಳಿದ ಅವರು ಮಾಂಟೆಸ್ಸರಿ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಲ್ಲಿ ಕಲಿತು ತಮ್ಮ ಪ್ರತಿಭೆ ಪ್ರದರ್ಶನ ಮಾಡಿರುವುದು ಶ್ಲಾಘನಯ ಎಂದರು. ಲಿಟಲ್‌ವುಡ್ ಮಾಂಟೆಸ್ಸರಿ ಶಾಲೆಯ ಸಂಸ್ಥಾಪಕಿ ಸುಧಾ ಉತ್ತಪ್ಪ ಮಾತನಾಡಿ, ಬಾಲ್ಯದ ಮಕ್ಕಳ ಪ್ರತಿಭೆಗೆ ಅನುಗುಣವಾಗಿ ವಿಶೇಷ ಕಲಿಕೆಯೊಂದಿಗೆ ಪ್ರತಿಭಾನ್ವಿತರಾಗಿ ಮುಂದೆ ತರಲು ಹಲವಾರು ಕಾರ್ಯಕ್ರಮಗಳನ್ನ ಮಾಡಲಾಗುತ್ತಿದ್ದು ಶಾಲೆಯಲ್ಲಿಯೇ ಕಲಿಕೆಗೆ ಸೀಮಿತವಾಗದೆ ಮಕ್ಕಳನ್ನ ನೇರವಾಗಿ ಆಯ ಸ್ಥಳಗಳಿಗೆ ಕರೆದುಕೊಂಡು ಹೋಗಿ ಕಲಿಕ…

Read More

ಮಡಿಕೇರಿ ಮಾ.28 NEWS DESK : ನವ ದೆಹಲಿಯಲ್ಲಿ ನಡೆದ ಅಖಿಲ ಭಾರತ ನಾಗರೀಕ ಸೇವೆಗಳ ನೌಕರರ ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಶಾಸ್ತ್ರೀಯ ನೃತ್ಯ ವಿಭಾಗದಲ್ಲಿ ಸೋಮವಾರಪೇಟೆ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಮಿಲನ ಕೆ ಭರತ್ ಬೆಳ್ಳಿ ಪದಕ ಪಡೆದಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಇವರಿಗೆ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ನಿರ್ದೇಶಕರಾದ ನವಪ್ರೀತ್ ಕೌರ್ ಬಹುಮಾನ ವಿತರಿಸಿರು. ವಿರಾಜಪೇಟೆಯ ಗುರು ವಿದ್ವಾನ್ ರಾಜೇಶ್ ಆಚಾರ್ಯರವರ ಮಾರ್ಗದರ್ಶನದಲ್ಲಿ ಮಿಲನರವರು ನೃತ್ಯ ಪ್ರದರ್ಶನ ನೀಡಿದ್ದರು.

Read More

ಮಡಿಕೇರಿ ಮಾ.28 NEWS DESK : ಕೊಡಗಿನಲ್ಲಿ ರಂಗ ಚಟುವಟಿಕೆಗಳನ್ನು ಸುಗಮವಾಗಿ ನಡೆಸಲು ಅಗತ್ಯ ವ್ಯವಸ್ಥೆಗಳನ್ನು ಮಾಡುವಂತೆ ಅಲ್ಲಾರಂಡ ರಂಗ ಚಾವಡಿಯ ಅಧ್ಯಕ್ಷ ಅಲ್ಲಾರಂಡ ವಿಠಲ ಮನವಿ ಮಾಡಿದ್ದಾರೆ. ನಗರಸಭೆಯ ಕಾವೇರಿ ಕಲಾಕ್ಷೇತ್ರದ ಜಾಗದಲ್ಲಿ ಹೊಸ ಭವನ ನಿರ್ಮಾಣವಾಗಿವ ಹಂತದಲ್ಲಿ ರಂಗ ಚಟುವಟಿಕೆಗಳಿಗೆ ಅಗತ್ಯವಾದ ಸಭಾಂಗಣ ಮತ್ತು ಗೋಣಿಕೊಪ್ಪಲಿನ ಸ್ವಾತಂತ್ರ್ಯ ಭವನದಲ್ಲಿ ನಾಟಕಗಳಿಗೆ ಹೆಚ್ಚಿನ ಅವಕಾಶಗಳನ್ನು ನೀಡುವಂತೆ ಕೋರಿದರು. ನಗರದ ಪೀ.ಮಾ.ಕಾರ್ಯಪ್ಪ ಕಾಲೇಜಿನ ಕ್ಯಾಂಪಸ್‍ಗೆ, ಕಾಲೇಜು ಆರಂಭಕ್ಕೆ ಕಾರಣರಾದ ಪಂದ್ಯಂಡ ಬೆಳ್ಯಪ್ಪ ಅವರ ಹೆಸರನ್ನಿರಿಸುವಂತೆ , ವಿರಾಜಪೇಟೆ ಕಾವೇರಿ ಕಾಲೇಜಿನ ಕ್ಯಾಂಪಸ್‍ಗೆ ಪಾಂಡಂಡ ಸುಬ್ಬಮ್ಮ ಅವರ ಹೆಸರನ್ನಿರಿಸುವಂತೆ ಆಗ್ರಹ ಪೂರ್ವಕ ಮನವಿ ಮಾಡಿದರು.

Read More

ಮಡಿಕೇರಿ ಮಾ.28 NEWS DESK : ಅಲ್ಲಾರಂಡ ರಂಗಚಾವಡಿಯ ವತಿಯಿಂದ ಕೊಡಗು ಪತ್ರಿಕಾ ಭವನ ಟ್ರಸ್ಟ್ ಸಹಕಾರದೊಂದಿಗೆ ನಗರದ ಪತ್ರಿಕ ಭವನದ ಸಭಾಂಗಣದಲ್ಲಿ ಆಯೋಜಿತ ವಿಶ್ವ ರಂಗಭೂಮಿ ದಿನಾಚರಣೆ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಿವೃತ್ತ ಶಿಕ್ಷಕರು ಹಾಗೂ ರಂಗಭೂಮಿ ಕಲಾವಿದರಾದ ಕಲಿಯಂಡ ಸರಸ್ವತಿ ಅವರು, ಕೊಡಗಿನಲ್ಲಿ ಪ್ರತಿಭಾವಂತ ರಂಗ ಕಲಾವಿದರುಗಳಿದ್ದಾರೆ. ಇಂತಹವರನ್ನು ಗುರುತಿಸುವ, ಪ್ರೋತ್ಸಾಹಿಸುವ ಪ್ರಯತ್ನಗಳಾಗದಿರುವುದರಿಂದ ರಂಗ ಭೂಮಿ ಇಲ್ಲಿ ಬೆಳೆಯುತ್ತಿಲ್ಲವೆನ್ನುವ ಮನದಾಳದ ಮಾತುಗಳನ್ನಾಡುತ್ತಲೆ, ಶಿಕ್ಷಕರಾದವರು ತಮ್ಮ ವೃತ್ತಿಯನ್ನು ಮತ್ತು ಮಕ್ಕಳನ್ನು ಪ್ರೀತಿಯಿಂದ ಕಣಬೇಕು. ನಮ್ಮ ಜ್ಞಾನವನ್ನು ಅತ್ಯಂತ ಪರಿಣಾಮಕಾರಿಯಾಗಿ ನಾಟಕಗಳ ಮೂಲಕ ಅಭಿವ್ಯಕ್ತ್ತಪಡಿಸಿದಾಗ, ವಿಚಾರಗಳು ಮಕ್ಕಳ ಮೇಲೆ ಪ್ರಭಾವ ಬೀರಬಲ್ಲುತ್ತದೆ ಮತ್ತು ಅವು ಶಾಶ್ವತವಾಗಿ ಮನಸ್ಸಿನಲ್ಲಿ ಉಳಿಯುತ್ತದೆ. ಪ್ರಸ್ತುತ ಶಿಕ್ಷಣ ವ್ಯವಸ್ಥೆ ಪಾಠ ಪ್ರವಚನ- ಅಂಕಗಳ ಒತ್ತಡಗಳ ನಡುವೆ ಸಿಲುಕಿದ್ದು, ಇತರೆ ಅಮೂಲ್ಯ ವಿಚಾರಗಳು ಮರೆಯಾಗುತ್ತಿದೆಯೆಂದು ವಿಷಾದಿಸಿದರು. ಈ ಸಂದರ್ಭ ಅವರು, ತಾವು ಎಂಬತ್ತರ ದಶಕದಲ್ಲಿ ಆಡಿದ ನಾಟಕಗಳು, ಶಿಕ್ಷಕಿಯಾಗಿ ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು, ನಾಟಕಗಳ ಮೂಲಕ ಪಾಠ…

Read More

ಮಡಿಕೇರಿ ಮಾ.27 NEWS DESK : ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಟಾಸ್ ಫೋರ್ಸ್ ಸಭೆ ನಡೆಯಿತು. ಈ ಸಂದರ್ಭದಲ್ಲಿ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಅದರಂತೆ ತಹಶೀಲ್ದಾರ್ ಅವರು ಮಾತನಾಡಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿರ್ದೇಶನಗಳನ್ನು ಚಾಚುತಪ್ಪದೆ ಪಾಲಿಸುವಂತೆ ನಿರ್ದೇಶನ ನೀಡಿದರು. ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ 2016ರ ರಡಿ ನೇಮಕಗೊಂಡಿರುವ ಹೆಚ್ಚುವರಿ ನಿರೀಕ್ಷಕರುಗಳು ತಮ್ಮ ಕಾರ್ಯವ್ಯಾಪ್ತಿಯ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು. ಕೈಗಾರಿಕೆಗಳು, ಹಾಗೂ ತೋಟಗಳ ಮಾಲೀಕರಿಂದ ಸ್ವಯಂ ಘೋಷಣಾ ಪತ್ರಗಳನ್ನು ಪಡೆದು ಈ ವರದಿಯನ್ನು ಪಡೆಯಲು ಹಾಗೂ ಬಾಲಕಾರ್ಮಿಕ ಮುಕ್ತ ತಾಲ್ಲೂಕುಗಳನ್ನಾಗಿಸಲು ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ 2016ರ ಕಲಂ 16 ಮತ್ತು 17 ರಡಿ ನೇಮಕಗೊಂಡ ನಿರೀಕ್ಷಕರು ತಮ್ಮ…

Read More

ಮಡಿಕೇರಿ ಮಾ.27 NEWS DESK : ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ನಾಗರಿಕರಲ್ಲಿ ಭಯಮುಕ್ತ ವಾತಾವರಣ ಮೂಡಿಸುವ ಸಲುವಾಗಿ  ನಾಪೋಕ್ಲು ಪಟ್ಟಣದ ವ್ಯಾಪ್ತಿಯಲ್ಲಿ ನಾಪೋಕ್ಲು ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಪಥ ಸಂಚಲನ ನಡೆಸಿದರು.

Read More

ಮಡಿಕೇರಿ ಮಾ.27 NEWS DESK : ಪಂಚ ಗ್ಯಾರಂಟಿ ಯೋಜನೆಯ ಎಲ್ಲಾ ಪ್ರಯೋಜನಗಳು ಫಲಾನುಭವಿಗಳಿಗೆ ದೊರಕಬೇಕಾದರೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಬೇಕು ಎಂದು ಗ್ಯಾರಂಟಿ ಯೋಜನಾ ಅನುಷ್ಠಾನ ತಾಲ್ಲೂಕು ಸಮಿತಿ ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಅವರು ಹೇಳಿದ್ದಾರೆ. ನಗರದ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ನಡೆದ ಮಡಿಕೇರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಮಡಿಕೇರಿ ತಾಲ್ಲೂಕಿನಲ್ಲಿ ಒಟ್ಟು 38,271 ಪಡಿತರ ಚೀಟಿದಾರರು ಇದ್ದು, ಇವರಿಗೆ ಈಗಾಗಲೇ ಪ್ರಸ್ತುತ ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಲ್ಲಿ ವಿಳಾಸ ಬದಲಾವಣೆ, ಹೆಸರು ಸೇರ್ಪಡೆ ಮತ್ತು ಹೆಸರು ತೆಗೆದು ಹಾಕುವುದಕ್ಕೆ ಅರ್ಜಿ ಸಲ್ಲಿಸಲು ಮಾ.31 ರ ವರೆಗೆ ಅವವಕಾಶ ಕಲ್ಪಿಸಲಾಗಿದೆ ಎಂದು ಆಹಾರ ನಿರೀಕ್ಷಕರಾದ ವೀಣಾ ಅವರು ಸಭೆಗೆ ಮಾಹಿತಿ ನೀಡಿದರು. ಮಡಿಕೇರಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೀತಾಲಕ್ಷ್ಮಿ ಅವರು ಮಾತನಾಡಿ, ಮಡಿಕೇರಿ ತಾಲ್ಲೂಕಿನಲ್ಲಿ ಶೇಕಡವಾರು ಸಾಧನೆ ಮಾಡಲಾಗಿದೆ ಎಂದು…

Read More

ಮಡಿಕೇರಿ ಮಾ.27 NEWS DESK : ಪ್ರವಾಸಿಗರ ಕೇಂದ್ರ ಬಿಂದು ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಭೇಟಿ ನೀಡಿ ವೀಕ್ಷಿಸಿದರು.  ಹಾಗೆಯೇ ಗ್ರೇಟರ್ ರಾಜಾಸೀಟು, ಪುಟಾಣಿ ರೈಲು ಮಾರ್ಗ ಮತ್ತು ಕೂರ್ಗ್ ವಿಲೇಜ್‍ಗೆ ತೆರಳಿ ಅಭಿವೃದ್ಧಿ ಸಂಬಂಧ ಮಾಹಿತಿ ಪಡೆದರು.  ರಾಜಸೀಟು ಉದ್ಯಾನವನ ಬಳಿಯ ಟಿಕೇಟ್ ಕೌಂಟರ್, ಮಾಹಿತಿ ಕೇಂದ್ರ ಹಾಗೂ ಉದ್ಯಾನವನದೊಳಗೆ ಸಿಸಿಟಿವಿ ಹಾಗೂ ಗೇಟ್ ಅನ್ನು ಪರಿಶೀಲಿಸಿದರು. ಉದ್ಯಾನವನ ಸುತ್ತಲೂ ಸಿಸಿಟಿವಿ ವೈರ್ ಹಾಗೂ ವಿದ್ಯುತ್ ತಂತಿಗಳಿಂದ ಕೂಡಿದ್ದು, ಉದ್ಯಾನವನದ ಸೌಂದರ್ಯ ಹಾಳಾಗಿದೆ. ಆದ್ದರಿಂದ ಕೂಡಲೇ ಎಲ್ಲಾ ದುರಸ್ತಿ ಕಾರ್ಯ ಹಾಗೂ ಭೂಮಿಯ ಒಳಭಾಗದಲ್ಲಿ ತಂತಿ ಅಳವಡಿಸುವುದು ಹಾಗೂ ದೀಪಗಳನ್ನು ದುರಸ್ತಿಪಡಿಸಿ ಅಲಂಕಾರಿಕಾ ದೀಪಗಳನ್ನು ಅಳವಡಿಸುವುದು ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತೆ ತೋಟಗಾರಿಕೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.  ಪ್ರವಾಸಿಗರ ಆಕರ್ಷಣೀಯ ಕೇಂದ್ರವಾದ ರಾಜಾಸೀಟು ಬಳಿಯಲ್ಲಿ ಪುಟಾಣಿ  ರೈಲು ಆರಂಭಕ್ಕೆ ಅಗತ್ಯ ಕ್ರಮವಹಿಸುವಂತೆ ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರು ಸೂಚಿಸಿದರು.  ಕೂರ್ಗ್ ವಿಲೇಜ್ ನಲ್ಲಿರುವ…

Read More

ಚಿಕ್ಕ ಅಳುವಾರ ಮಾ.27 NEWS DESK : ಯೂರೋಪಿನ ಎಲ್ಲ ರಂಗಭೂಮಿ ಕಲೆಗೂ ಸಹ ಸಣ್ಣ ಪುಟ್ಟ ಆಚರಣೆಗಳಿಂದ ಆರಂಭವಾಗಿವೆ. ಭಾರತದಲ್ಲಿ 3ನೇ ಶತಮಾನದಲ್ಲಿ ರಂಗಭೂಮಿಯ ಪರಿಚಯವಾಯಿತು. ಅಂದಿನಿಂದ ಇಂದಿನವರೆಗೂ ಭಾರತದಲ್ಲಿ ರಂಗಭೂಮಿ ಕ್ಷೇತ್ರವು ವಿಶ್ವದೆಲ್ಲೆಡೆ ತನ್ನ ಬಾಹುಗಳನ್ನು ಚಾಚಿದೆ ಎಂಬುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ ಎಂದು ಹೆಗ್ಗೋಡಿನ ರಂಗನಿರ್ದೇಶಕರು ಮತ್ತು ನೀನಾಸಂ ಶಿಕ್ಷಕರಾದ ಪಿ.ಎ ಮಂಜಪ್ಪ ಮಾಲ್ದಾರೆ ಅವರು ‘ರಂಗಭೂಮಿ ಎಂಬ ಚಿಕಿತ್ಸಕ ಮಾದರಿ’ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಿದರು. ಚಿಕ್ಕ ಅಳುವಾರದ ಜ್ಞಾನ ಕಾವೇರಿ ಆವರಣದಲ್ಲಿ ಕೊಡಗು ವಿಶ್ವವಿದ್ಯಾಲಯ ಮತ್ತು ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ- 20026 ರ ಅಂಗವಾಗಿ ನಡೆದ ವಿಶೇಷ ಉಪನ್ಯಾಸ, ರಂಗಗೌರವ ಮತ್ತು ರಂಗಸಂಗೀತ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು. ಇಂದಿನ ಪರಿಸ್ಥಿತಿ ಮತ್ತು ಮನಸ್ಥಿತಿಯಲ್ಲಿ ಮನುಷ್ಯ ತನ್ನ ಸಂಬಂಧಗಳ ಜೊತೆಗೆ ಮುಕ್ತ ಮನಸ್ಸಿನಿಂದ ಮಾತನಾಡಲು, ಭಾವನೆಗಳನ್ನು ಅರ್ಥೈಸಿಕೊಳ್ಳಲು, ಸ್ಪಂದಿಸಲು ಸಾಧ್ಯವಾಗುತ್ತಿಲ್ಲ. ಇದಕ್ಕೆಲ್ಲ ಒಂದು…

Read More

ಮಡಿಕೇರಿ ಮಾ.27 NEWS DESK : ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಮಡಿಕೇರಿಯಲ್ಲಿ ನಡೆದ ರೆಗ್ಯೂಲರ್ ಡಿಸಿಎಂ ಅಧಿವೇಶನದ ಅಂತಿಮ ಪರೀಕ್ಷೆಯಲ್ಲಿ  ಬಿ.ಎನ್.ಚರಿಷ್ಮಾ “5ನೇ” ರ‍್ಯಾಂಕ್ ಪಡೆದುಕೊಂಡಿದ್ದಾರೆ. ಇವರ ಸಾಧನೆಗೆ  ಸಂಸ್ಥೆಯ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಶುಭಕೋರಿದ್ದಾರೆ.

Read More