ನಾಪೋಕ್ಲು ಜ.19 : ರಾಷ್ಟ್ರದ ಭರವಸೆಯ ಕ್ರೀಡಾಪಟು ಕೊಡಗು ಜಿಲ್ಲೆಯ ಪಾಲೂರು ಗ್ರಾಮದ ಸೂದನ ಎಸ್. ಡಾಲಿ ಅಂತರಾಷ್ಟ್ರೀಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಷ್ಟ್ರಕ್ಕೆ ಕೀರ್ತಿಯನ್ನು ತಂದಿದ್ದಾರೆ. ಜ.11 ರಿಂದ 15 ರವರೆಗೆ ಶ್ರೀಲಂಕಾದ ಸುಗತಾದಾಸ ಕ್ರೀಡಾಂಗಣದಲ್ಲಿ ನಡೆದ 800 ಮತ್ತು 1500 ಮೀ.ಸ್ಟಿಪಲ್ ಚೇಸ್ ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಹಾಗೂ 3000 ಮೀ. ಸ್ಟಿಪಲ್ ಚೇಸ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ಸಾಧನೆ ಮಾಡಿ ಪ್ರಸಂಸೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ಮೈಸೂರು ವಿಶ್ವವಿದ್ಯಾನಿಲಯದ ಓವಲ್ ಕ್ರೀಡಾಂಗಣದಲ್ಲಿ ನಡೆದ 42ನೇ ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಕೊಡಗಿನ ಮಾಸ್ಟರ್ ಅಸೋಸಿಯೇಷನ್ 15 ಕ್ರೀಡಾಪಟುಗಳು ಭಾಗವಹಿಸಿ ಚಿನ್ನ ಬೆಳ್ಳಿ ಹಾಗೂ ಕಂಚಿನ ಪದಕಗಳನ್ನು ಪಡೆಯುವ ಮೂಲಕ ಸಾಧನೆ ಮಾಡಿದ್ದರು. ಈ ಕ್ರೀಡಾಪಟುಗಳಲ್ಲಿ ಸೂದನ ಎಸ್ ಡಾಲಿ ಒಬ್ಬರು 800 ಮೀಟರ್, 1500ಮೀಟರ್ ಹಾಗೂ 5000 ಮೀಟರ್ ಓಟದ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಚಿನ್ನದ ಪದಕವನ್ನು ಗಳಿಸಿದ್ದು ಜಿಲ್ಲೆಗೆ ಕೀರ್ತಿ…
ಲೇಖಕ: admin
ಮಡಿಕೇರಿ ಜ.19 : ಬಿಟ್ಟಂಗಾಲ ಸಮೀಪದ ಕಂಡಂಗಾಲ ನಿವಾಸಿ, ವಿರಾಜಪೇಟೆಯ ಕರ್ನಾಟಕ ಸಂಘ ಮತ್ತು ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾಗಿದ್ದ ಮೂಕಚಂಡ ಅರುಣ್ ಅಪ್ಪಣ್ಣ (63) ಇಂದು (ಜ.19) ಬೆಳಗಿನ ಜಾವ ನಿಧನರಾದರು. ಅರುಣ್ ಅಪ್ಪಣ್ಣ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇವರು ಬೇರಳಿನಾಡಿನ ಊರು ತಕ್ಕರಾಗಿದ್ದರು ಹಾಗೂ ಬೊಟ್ಟಿಯತ್ ಮೂಂದ್ ನಾಡ್ ಕೈಮುಡಿ ಕೋಲ್ ಮುಂದ್’ನಲ್ಲಿ ಸುಧೀರ್ಘ ಅವಧಿಯ ಕಾರ್ಯದರ್ಶಿ ಆಗಿದ್ದರು. ಮೃತರು ಪತ್ನಿ ಹಾಗೂ ಪುತ್ರ ಮಾದಾಪುರದ ಡಿ. ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ದೈಹಿಕ ನಿರ್ದೇಶಕ ನಿರನ್ ನಾಚಪ್ಪ ಅವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ((ಜ.19) ಮಧ್ಯಾಹ್ನದ ನಂತರ 3 ಗಂಟೆಗೆ ಅವರ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮಡಿಕೇರಿ ಜ.19 : ಕಾಲೇಜು ಶಿಕ್ಷಣ ಇಲಾಖೆ, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಐನ್‍ಮನೆ ಕೆಫೆ ಸಹಕಾರದಲ್ಲಿ ರಾಜ್ಯ ಮಟ್ಟದ ಜಾನಪದ/ ಬುಡಕಟ್ಟು ನೃತ್ಯ ಸ್ಪರ್ಧಾ ಕಾರ್ಯಕ್ರಮವು ಜ.20 ರಂದು ಬೆಳಗ್ಗೆ 10 ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಬಿದ್ದಾಟಂಡ ಎಸ್.ತಮ್ಮಯ್ಯ, ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ನಿರ್ಮಲ ಅವರು ತಿಳಿಸಿದ್ದಾರೆ.
ಮಡಿಕೇರಿ ಜ.19 : ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ಅನ್ವಯ ರಾಜ್ಯದ ಎಲ್ಲಾ ಆಹಾರ ವಸ್ತುಗಳ ತಯಾರಕರು, ರಿಲೇಬಲ್, ರಿಪ್ಯಾಕಿಂಗ್ ಆಮದುದಾರರು ಮತ್ತು ತಯಾರಕ-ರಪ್ತುದಾರರು ತಮ್ಮ ಘಟಕದ ಆಹಾರ ಪದಾರ್ಥ ವಹಿವಾಟಿನ 2020-21 ಮತ್ತು 2021-22 ಹಾಗೂ 2022-23 ನೇ ಸಾಲಿನ ವಾರ್ಷಿಕ ವರಮಾನ ವಿವರಗಳನ್ನು ಪ್ರತಿ ಆರ್ಥಿಕ ವರ್ಷದ ಮೇ-31 ರ ಕಾಲಮಿತಿಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಅಧಿಕೃತ ಅಂರ್ತಜಾಲ https://foscos.fssai.gov.in ರಲ್ಲಿ ನಮೂದಿಸುವುದು ಕಡ್ಡಾಯವಾಗಿದೆ. ಈ ಬಗ್ಗೆ ಈಗಾಗಲೇ ಅಧಿಕೃತ ಅಂರ್ತಜಾಲ ತಾಣದಲ್ಲಿಯೂ ಮಾಹಿತಿ ನೀಡಲಾಗಿದ್ದು, ಕೊಡಗು ಜಿಲ್ಲೆಯಲ್ಲಿ ಆಹಾರ ಪರವಾನಗಿ ಪಡೆದಿರುವ ಎಲ್ಲಾ ಆಹಾರ ಪದಾರ್ಥ ತಯಾರಕರು ಮತ್ತು ಪ್ಯಾಕರ್ಸ್, ರಿಲೇಬಲ್‍ದಾರರು, ಆಮದುದಾರರು ಹಾಗೂ ತಯಾರಕ-ರಪ್ತುದಾರರು ತಮ್ಮ ವಾರ್ಷಿಕ ವರಮಾನ ವಿವರವನ್ನು ಮತ್ತು ತಾವು ತಯಾರಿಸುವ ಅಥವಾ ರಿಲೇಬಲ್, ರಿಪ್ಯಾಕಿಂಗ್ ಮಾಡುವ ಆಹಾರ ಪದಾರ್ಥಗಳನ್ನು ಪ್ರತಿ 06 ತಿಂಗಳಿಗೊಮ್ಮ ರಾಷ್ಟ್ರೀಯ ಪ್ರಯೋಗಾಲಯ ಮಾನ್ಯತಾ ಮಂಡಳಿಯಿಂದ (ಎನ್‍ಎಬಿಎಲ್) ಆಹಾರ ಸುರಕ್ಷತಾ ಗುಣಮಟ್ಟ ಪ್ರಾಧಿಕಾರಕ್ಕೆ ನೋಂದಾಯಿತ…
ವಿರಾಜಪೇಟೆ ಜ.19 : ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಮತ್ತು ಓಜಸ್ವಿ ಫೌಂಡೇಶನ್ ಸಹಯೋಗದಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಯ ಸಭಾಂಗಣದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕಾರ್ಯಾಗಾರ ನಡೆಸಲಾಯಿತು. ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮೈಸೂರಿನ ಅಂತಾರಾಷ್ಟ್ರೀಯ ಲೈಫ್ ಸ್ಕಿಲ್ ಕೋಚ್, ಚೇತನ್ ರಾಂ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ ವಿಧ್ಯಾರ್ಥಿಗಳಿಗೆ ಪ್ರೇರಣಾ ಹಾಗೂ ಪರೀಕ್ಷೆಯ ಗೆಲುವಿನ ಸೂತ್ರಗಳನ್ನು, ಓದಿನ ಮಹತ್ವ, ಸಮಯ ನಿರ್ವಹಣೆ, ಏಕಾಗ್ರತೆ ಹಾಗೂ ಪರೀಕ್ಷೆಯನ್ನು ಎದುರಿಸಲು ಬೇಕಾದ ಎಲ್ಲಾ ಕೌಶಲ್ಯಗಳನ್ನು ಪರಿಣಾಮಕಾರಿಯಾಗಿ ತಿಳಿಸಿ ಕೊಟ್ಟರು. ಪರೀಕ್ಷೆಯ ಭಯ, ಆತಂಕ ಬಿಟ್ಟು, ಪರೀಕ್ಷೆ ಒಂದು ಹಬ್ಬದಂತೆ ಸಂಭ್ರಮಿಸಿ ಎಂದು ವಿದ್ಯಾರ್ಥಿ ಗಳಿಗೆ ಉತ್ತೇಜನ ನೀಡಿದರು. ವಿರಾಜಪೇಟೆ ತಾಲೂಕಿನ ಸುಮಾರು 800 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಓಜಸ್ವಿ ಫೌಂಡೇಶನ್ನಿನ ಸಂಸ್ಥಾಪಕಿ ಡಾ.ಕವಿತ ಪಿ.ಸಿ., ಕ್ಷೇತ್ರ ಸಂಪನ್ಮೂಲ ಅಧಿಕಾರಿ ವನಜಾಕ್ಷಿ, ಶಿಕ್ಷಣ ಇಲಾಖೆಯ ಗಾಯತ್ರಿ, ಎಸ್‍ಎಸ್‍ಎಲ್‍ಸಿ ನೋಡಲ್…
ಮಡಿಕೇರಿ ಜ.19 : ಚಾಲಕನ ನಿಯಂತ್ರಣ ತಪ್ಪಿದ ಸರಕು ಸಾಗಾಣಿಕಾ ಲಾರಿಯೊಂದು ಪಲ್ಟಿಯಾದ ಘಟನೆ ಮೇಕೇರಿಯ ಮಸೀದಿ ಸಮೀಪದಲ್ಲಿ ನಡೆದಿದೆ. ಮಡಿಕೇರಿಯಿಂದ ವಿರಾಜಪೇಟೆ ಕಡೆ ತೆರಳುತ್ತಿದ್ದ ಲಾರಿ ಪಲ್ಟಿಯಾಗಿದ್ದು, ಪಲ್ಟಿಯಾದ ರಭಸಕ್ಕೆ ಲಾರಿ ಜಖಂಗೊಂಡಿದೆ. ಅದೃಷ್ಟವಶತ್ ಲಾರಿ ಚಾಲಕ ಹಾಗೂ ಕ್ಲಿನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸೋಮವಾರಪೇಟೆ ಜ.18 : ಹಬ್ಬಾಚರಣೆ-ಜಾತ್ರೋತ್ಸವಗಳು ಎಲ್ಲರೂ ಬೆರೆಯಲು ಪೂರಕವಾಗಿದ್ದು, ಪರಸ್ಪರ ಪ್ರೀತಿ-ವಿಶ್ವಾಸದಿಂದ ಬದುಕಿದರೆ ಮಾತ್ರ ಉತ್ಸವಗಳಿಗೆ ಸಾರ್ಥಕತೆ ಬರುತ್ತದೆ. ಈ ನಿಟ್ಟಿನಲ್ಲಿ ಶಾಂತಳ್ಳಿಯಲ್ಲಿ ಜರುಗುವ ವಾರ್ಷಿಕ ಜಾತ್ರಾ ಮಹೋತ್ಸವ ಮಾದರಿಯಾಗಿದೆ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಅಭಿಮತ ವ್ಯಕ್ತಪಡಿಸಿದರು. ಕಳೆದ ತಾ. 13ರಿಂದ ಚಾಲನೆಗೊಂಡು ಇಂದು ಮುಕ್ತಾಯಗೊಂಡ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀಕುಮಾರಲಿಂಗೇಶ್ವರ ಜಾತ್ರಾ ಮಹೋತ್ಸವದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವರ್ಷಕ್ಕೊಮ್ಮೆ ನಡೆಯುವ ಜಾತ್ರಾ ಮಹೋತ್ಸವಗಳು ಪ್ರೀತಿ ವಿಶ್ವಾಸವನ್ನು ವೃದ್ಧಿಸಲು ಸಹಕಾರಿಯಾಗಬೇಕು. ಹಣ ಸಂಪಾದಿಸಿದರೂ ನೆಮ್ಮದಿಯನ್ನು ಸಂಪಾದಿಸಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ದೇವಾಲಯಗಳು ನೆಮ್ಮದಿಯ ಕೇಂದ್ರಗಳಾಗಿ ರೂಪುಗೊಳ್ಳಬೇಕು ಎಂದು ಸ್ವಾಮೀಜಿ ಹೇಳಿದರು. ಅರಿಷಡ್ವರ್ಗಗಳನ್ನು ಮೀರಿ ಬದುಕು ನಡೆಸಿದರೆ ಮಾತ್ರ ನೆಮ್ಮದಿ ಕಾಣಲು ಸಾಧ್ಯ ಎಂದು ಕಿವಿಮಾತು ನುಡಿದ ಶ್ರೀ ಸದಾಶಿವ ಸ್ವಾಮೀಜಿಗಳು, ವೈಜ್ಞಾನಿಕತೆ ಎಷ್ಟೇ ಮುಂದುವರೆದೂ ಬದುಕಿನ ಸಾರ್ಥಕತೆ ಕಾಣಲು ದೇವಾಲಯಗಳ ಮಾರ್ಗದರ್ಶನ ಪಡೆಯಬೇಕು. ಧಾರ್ಮಿಕ ತಳಹದಿಯ ಮೇಲೆ ಸಮಾಜ ನಿರ್ಮಾಣಗೊಂಡರೆ ಮಾತ್ರ ಸಾಮರಸ್ಯದ…
ಮಡಿಕೇರಿ ಜ 18. ಜಿಲ್ಲೆಯ ಹಿರಿಯ ಸಾಹಿತಿ, ಕತೆಗಾರ ಪೂ ರಾ ಶ್ರೀನಿವಾಸ್ ಮತ್ತು ಮಡಿಕೇರಿ ಪುರಸಭೆಯ ಮಾಜಿ ಅಧ್ಯಕ್ಷರು ಸಮಾಜ ಸೇವಾಕರ್ತರೂ ಆದ ಎಂ.ಸಿ.ವಾಸುದೇವ್ ರವರು ನಿನ್ನೆ ನಿಧನರಾಗಿರುತ್ತಾರೆ. ಪೂರಾ ಶ್ರೀನಿವಾಸ್‌ರವರು ಕವಿಗಳು, ಸಾಹಿತಿ ಮತ್ತು ಲೇಖಕರು ಆಗಿದ್ದು ಜಿಲ್ಲೆಯ ಸಾಹಿತ್ಯ ಲೋಕಕ್ಕೆ ಅವರ ಕೊಡುಗೆ ಅಪಾರ ಹಾಗೆಯೇ ಎಂ.ಸಿ ವಾಸುದೇವ್ ರವರು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡು ಮಡಿಕೇರಿ ನಗರಸಭೆಯ ಮಾಜಿ ಅಧ್ಯಕ್ಷರಾಗಿದ್ದು ಅಪಾರ ಸೇವೆ ಸಲ್ಲಿಸಿರುತ್ತಾರೆ ಎಂದು ಮಡಿಕೇರಿ ತಾಲೂಕು ಕಸಾಪ ಅಧ್ಯಕ್ಷ ಅಂಬೇಕಲ್ ನವೀನ್ ನುಡಿದರು. ಅವರು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಜಂಟಿ ಆಶ್ರಯದಲ್ಲಿ ಜಿಲ್ಲಾ ಕಸಾಪ ಕಚೇರಿಯಲ್ಲಿ ನಡೆದ ಶ್ರದ್ಧಾಂಜಲಿ ಸಭೆಯ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡುತ್ತಿದ್ದರು ಸಭೆಯಲ್ಲಿ ಉಪಸ್ಥಿತರಿದ್ದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿಅಧ್ಯಕ್ಷರಾದ ಹಾಗೂ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಹಾಲಿ ನಿರ್ದೇಶಕರಾದ ಟಿ.ಪಿ ರಮೇಶ್ ರವರು ಮಾತನಾಡಿ…
ಮಡಿಕೇರಿ ಜ.18 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶಿವಯೋಗಿ ಸಿದ್ದರಾಮೇಶ್ವರ ಹಾಗೂ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮವು ಜನವರಿ, 19 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಭಾರತೀಯ ವಿದ್ಯಾಭವನದಲ್ಲಿ ನಡೆಯಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಮತ್ತು ಸಕಾಲ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ಎಂ.ರವಿಕಾಳಪ್ಪ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಮಡಿಕೇರಿ ಸರಸ್ವತಿ ಡಿ.ಇಡಿ ಕಾಲೇಜಿನ ಪ್ರಾಂಶುಪಾಲರಾದ ಕುಮಾರ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಇತರರು ಪಾಲ್ಗೊಳ್ಳಲಿದ್ದಾರೆ.
ಸುಂಟಿಕೊಪ್ಪ,ಜ.18 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗದ್ದೆಹಳ್ಳ ಒಕ್ಕೂಟ ಹಾಗೂ ಸ್ವ ಸಹಾಯ ಸಂಘದ ಸದಸ್ಯರು ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಆಂದೋಲನದ ಅಂಗವಾಗಿ ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ನಡೆಸಿದರು. ದೇವಾಲಯದ ಆವರಣದಲ್ಲಿ ಬೆಳೆದಿದ್ದ ಕಾಡು ಗಿಡ ಗಂಟಿಗಳನ್ನು ಕಡಿದು ಸ್ವಚ್ಚಗೊಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಭವ್ಯ ಸೇವಾ ಪ್ರತಿನಿಧಿ ಜ್ಯೋತಿ ವಾಸು, ಗದ್ದೆಹಳ್ಳದ ಒಕ್ಕೂಟದ ಉಪಾಧ್ಯಕ್ಷ ಆನಂದ ಹಾಗೂ ಶ್ರೀಮುತ್ತಪ್ಪ ದೇವಸ್ಥಾನದ ಆರ್ಚಕ ಶಿವಮಣಿ, ಸುಂಟಿಕೊಪ್ಪ, ಗದ್ದೆಹಳ್ಳ ಹಾಗೂ ನಾರ್ಗಾಣೆ, ವಿಭಾಗದ ಸ್ವ ಸಹಾಯ ಸಂಘದ ಸದಸ್ಯರು ಪಾಲ್ಗೊಂಡಿದ್ದರು.






