ಮಡಿಕೇರಿ ಜ.17 : ಕೊಡಗು ಪ್ರೆಸ್‍ಕ್ಲಬ್ ಬೆಳ್ಳಿಹಬ್ಬದ ಸಂಭ್ರಮ ಹಿನ್ನೆಲೆಯಲ್ಲಿ ಆಯೋಜಿಸಲಾಗಿರುವ ಕೊಡಗು ಪ್ರೆಸ್‍ಕ್ಲಬ್ ಕ್ರಿಕೆಟ್ ಪ್ರಿಮಿಯರ್ ಲೀಗ್- 3ರ ಉದ್ಘಾಟನಾ ಸಮಾರಂಭ ಜ. 22ರಂದು ನಡೆಯಲಿದೆ. ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಬೆಳಗ್ಗೆ 11.30ಕ್ಕೆ ಕೊಡಗು ಪ್ರೆಸ್‍ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್‍ಕುಟ್ಟಪ್ಪ ಅಧ್ಯಕ್ಷತೆಯಲ್ಲಿ ಆಯೋಜಿಸಿರುವ ಸಮಾರಂಭವನ್ನು ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಲಿದ್ದಾರೆ. ಕ್ರಿಕೆಟ್ ಪಂದ್ಯ ಉದ್ಘಾಟನೆಯನ್ನು ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ ನೆರವೇರಿಸಲಿದ್ದಾರೆ. ಮುಳಿಯ ಜ್ಯುವೆಲ್ಸ್‍ಚೇರ್ಮನ್, ಮೇನೆಂಜಿಗ್ ಡೈರೆಕ್ಟರ್ ಕೇಶವ ಪ್ರಸಾದ್ ಮುಳಿಯ, ನಂದಿಗುಂದದ ದೇವ್‍ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಚಾಮೇರ ಪವನ್ ದೇವಯ್ಯ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸಂಜೆ 6 ಗಂಟೆಗೆ ಮಡಿಕೇರಿ ಪತ್ರಿಕಾ ಭವನದಲ್ಲಿ ಕೊಡಗು ಪ್ರೆಸ್‍ಕ್ಲಬ್ ಬೆಳ್ಳಿ ಮಹೋತ್ಸವ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಡ ಎಂ.ಪೂವಯ್ಯ ಅಧ್ಯಕ್ಷತೆಯಲ್ಲಿ ಬಹುಮಾನ ವಿತರಣಾ ಸಮಾರಂಭ ನಡೆಯಲಿದೆ. ಕೊಡಗು ಪ್ರೆಸ್‍ಕ್ಲಬ್ ಬೆಳ್ಳಿ ಮಹೋತ್ಸವ ಸಮಿತಿ ಮಹಾಪೋಷಕ ಜಿ.ರಾಜೇಂದ್ರ ಮತ್ತು ಕೊಡಗು…
ಲೇಖಕ: admin
ಮಡಿಕೇರಿ ಜ.17 : ಶಾಂತಳ್ಳಿ ಗ್ರಾಮದಲ್ಲಿ ನೆಲೆಯಾಗಿರುವ ಇತಿಹಾಸ ಪ್ರಸಿದ್ಧ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ದೇವಾಲಯದ 64ನೇ ವರ್ಷದ ವಾರ್ಷಿಕ ಮಹಾರಥೋತ್ಸವವು ವಿವಿಧ ಧಾರ್ಮಿಕ ಕೈಂಕರ್ಯಗೊಳೊಂದಿಗೆ ಶ್ರದ್ಧಾಭಕ್ತಿಯಿಂದ ಜರುಗಿತು. 800ಕ್ಕೂ ಅಧಿಕ ವರ್ಷಗಳ ಇತಿಹಾಸ ಹೊಂದಿರುವ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ದೇವಾಲಯದ 64ನೇ ವರ್ಷದ ಮಹಾ ರಥೋತ್ಸವಕ್ಕೆ ಕೊಡಗು ಜಿಲ್ಲೆ ಸೇರಿದಂತೆ ವಿವಿಧೆಡೆಯಿಂದ ಸಹಸ್ತಾರು ಮಂದಿ ಭಕ್ತರು ಆಗಮಿಸಿ ವಿವಿಧ ಪೂಜಾ ವಿಧಿ ವಿಧಾನಗಳಲ್ಲಿ ಪಾಲ್ಗೊಂಡರು. ಜ.13 ರಂದು ಪ್ರಾರ್ಥನಾ ಪೂಜೆಯೊಂದಿಗೆ ವಿದ್ಯುಕ್ತ ಚಾಲನೆಗೊಂಡಿರುವ ಜಾತ್ರೆಗೆ (ಜ.17) ಇಂದು ತೆರೆಬಿಳಲಿದೆ. ಜಾತ್ರೆಯ ಪ್ರಯುಕ್ತ ದೇವಾಲಯದಲ್ಲಿ ಕರುವಿನ ಹಬ್ಬ, ಗರುಡಗಂಬದಲ್ಲಿ ತುಪ್ಪದ ನಂದಾದೀಪ ಬೆಳಗುವುದು, ಪುಷ್ಪಗಿರಿ ಬೆಟ್ಟದಲ್ಲಿರುವ ಪುರಾತನ ದೇವಾಲಯದಲ್ಲಿ ದೀಪೋತ್ಸವ, ಅರುಸು ಸೇವೆ ಸೇರಿದಂತೆ ಪ್ರತಿದಿನ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿತು. ಸಮೀಪದ ಕೂತಿನಾಡು, ತೋಳುನಾಡು, ಪುಷ್ಪಗಿರಿ, ಯಡೂರು, ತಲ್ತರೆಶೆಟ್ಟಳ್ಳಿ ಗ್ರಾಮಸ್ಥರು ಸೇರಿದಂತೆ ಹೊರ ಜಿಲ್ಲೆಯ ನೂರಾರು ಮಂದಿ ಭಕ್ತಾದಿಗಳು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ಶಾಂತಳ್ಳಿಯ ರಥಬೀದಿಯಲ್ಲಿ ಹೊರಟ ರಥವನ್ನು ಭಕ್ತಾಧಿಗಳು ಹರ್ಷೋದ್ಗಾರದೊಂದಿಗೆಗೆ…
ಮಡಿಕೇರಿ ಜ.17 : ಅಡ್ವಾನ್ಸ್ಡ್ ಗ್ರೋಥ್ ಲರ್ನಿಂಗ್ (ಎಜಿಎಲ್) ಸಂಸ್ಥೆ ಕೊಡಮಾಡುವ ಆರ್ಟಿಸ್ಟ್ ಆಫ್ ದಿ ಇಯರ್ ಪ್ರಶಸ್ತಿಗೆ ಮಡಿಕೇರಿಯ ಕಾವ್ಯಶ್ರೀ ಕಪಿಲ್ ಭಾಜನರಾಗಿದ್ದಾರೆ. ಕಲಾ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಅವರಿಗೆ ಈ ಪ್ರಶಸ್ತಿ ಲಭಿಸಿದ್ದು, ಮಡಿಕೇರಿಯ ಕಲಾ ಕಾವ್ಯ ನಾಟ್ಯ ಶಾಲೆಯ ಗುರುಗಳಾಗಿರುವ ವಿದುಷಿ ಕಾವ್ಯಶ್ರೀ ನಗರದ ಬಾಲಭವನದಲ್ಲಿ ಭರತನಾಟ್ಯ ತರಗತಿ ನಡೆಸುತ್ತಿದ್ದಾರೆ. ಮಡಿಕೇರಿಯಲ್ಲಿ ವಕೀಲರಾಗಿರುವ ಕಪಿಲ್ ಕುಮಾರ್ ದುಗ್ಗಳ ಅವರ ಪತ್ನಿಯಾಗಿರುವ ಕಾವ್ಯಶ್ರೀ ಅವರಿಗೆ ಎಎಲ್‍ಜಿ ಸಂಸ್ಥೆಯ ಸಂಸ್ಥಾಪಕ ರಾಜೇಶ್ ರೈ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ನಾಪೋಕ್ಲು ಜ.17 : ಮಳೆಯಿಂದಾಗಿ ಕಾಫಿನಷ್ಟಕ್ಕೊಳಗಾದ ಕೊಡಗು ಜಿಲ್ಲೆಯ 47 ಸಾವಿರ ಬೆಳೆಗಾರರಿಗೆ 138 ಕೋಟಿ ರೂ. ಪರಿಹಾರ ವಿತರಣೆ ಮಾಡಲಾಗಿದೆ ಎಂದು ಶಾಸಕ ಕೆ.ಜಿ ಬೋಪಯ್ಯ ಹೇಳಿದರು. ಸಮೀಪದ ಶಾಲಿಮಾರು ಮಿಲ್-ಕೂರುಳಿಯಲ್ಲಿ 2.5 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾದ ರಸ್ತೆಯನ್ನು ಉದ್ಘಾಟಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಈಗಾಗಲೇ ಅರ್ಜಿ ಸಲ್ಲಿಸಲಾಗಿದ್ದು, ಪರಿಹಾರ ದೊರಕದ ಬೆಳೆಗಾರರಿಗೆ ಪರಿಹಾರ ವಿತರಿಸಲೆಂದು ಹೆಚ್ಚುವರಿ ಆರು ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. ಬೆಳೆಗಾರರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಜನಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹದಗೆಟ್ಟ ಗ್ರಾಮೀಣ ರಸ್ತೆಗಳನ್ನು ದುರಸ್ತಿಪಡಿಸಲಾಗುವುದು. ಬಿಜೆಪಿ ಸರ್ಕಾರದ ವತಿಯಿಂದ ಅಭಿವೃದ್ಧಿ ಕೆಲಸಗಳು ಆಗುತ್ತಿವೆ. ಧರ್ಮಕ್ಕೆ ಕುತ್ತು ತರುವ ಕೆಲಸವನ್ನು ಕೆಲವರು ಮಾಡುತ್ತಿದ್ದು, ಆ ಬಗ್ಗೆ ಜಾಗೃತಿ ಆಗಿರಬೇಕಾಗಿದೆ. ಮಳೆಹಾನಿ ಪರಿಹಾರದಡಿಯಲ್ಲಿ ಹಲವು ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಮಳೆಹಾನಿ ಪರಿಹಾರದಡಿ 1.25 ಕೋಟಿ ಹಣ ಬಿಡುಗಡೆಯಾಗಿದೆ. ಇದರಲ್ಲಿ ನಾಪೋಕ್ಲು ವ್ಯಾಪ್ತಿಯ ಗ್ರಾಮೀಣ ರಸ್ತೆಗಳನ್ನು ದುರಸ್ತಿಪಡಿಸಲಾಗುವುದು. ಇದಲ್ಲದೆ ಲೋಕೋಪಯೋಗಿ ಇಲಾಖೆ ವತಿಯಿಂದಲೂ ರಸ್ತೆಗಳ ಅಭಿವೃದ್ಧಿಗೆ…
ಮಡಿಕೇರಿ ಜ.16 : ಮಂಗಳೂರು ವಿಶ್ವವಿದ್ಯಾನಿಲಯದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನಲ್ಲಿ ಜಿಲ್ಲಾ ಆರೋಗ್ಯ ಕೇಂದ್ರ ಮತ್ತು ಸ್ವಾಮಿ ವಿವೇಕಾನಂದರ ಯೂತ್ ಮೂವ್ಮೆಂಟ್ ಹಾಗೂ ಎಫ್.ಎಂ.ಸಿ ಕಾಲೇಜಿನ ಎನ್.ಎಸ್.ಎಸ್ ಘಟಕ, ರೆಡ್ ಕ್ರಾಸ್ ಘಟಕದ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ನಡೆಸಲಾಯಿತು. ಡಾ.ಮೇಜರ್ ಕುಶ್ವಂತ್ ಕೋಳಿಬೈಲು ವಿವೇಕಾನಂದರ ಜೀವನ ಚರಿತ್ರೆಯ ಬಗ್ಗೆ ಹಾಗೂ ಅವರು ಚಿಕ್ಕ ವಯಸ್ಸಿನಲ್ಲಿ ಮಾಡಿದ ಅನನ್ಯ ಸಾಧನೆಯ ಕುರಿತು ವಿಶ್ಲೇಷಿಸಿದರು. ತಮ್ಮ ವಯಸ್ಸಿಗೆ ಮೀರಿದ ಬುದ್ಧಿವಂತಿಕೆ ಹೊಂದಿದ್ದ ವಿವೇಕಾನಂದರು, ವಯಸ್ಸಿಗೆ ಮೀರಿದ ವಾಕ್ಚಾತುರ್ಯವನ್ನು ಹೊಂದಿದ್ದರು. 1893 ರ ಕಾಲಘಟ್ಟದಲ್ಲಿ, ಬೇರೊಂದು ದೇಶಕ್ಕೆ ತೆರಳಿ ನನ್ನ ಅಕ್ಕ ತಂಗಿ, ಅಣ್ಣ ತಮ್ಮಂದಿರೇ ಎಂದು ಸಂಬೋಧಿಸುತ್ತಾರೆ ಅವರ ಮನಸ್ಥೈರ್ಯವನ್ನು ಮೆಚ್ಚಬೇಕು. ಇಂದು ಸ್ವತಂತ್ರವಾಗಿ ಹೇಳಿಕೆಗಳನ್ನು ಹಂಚಿಕೊಳ್ಳುವ ಅವಕಾಶ ಇದೆ. 130 ವರ್ಷಗಳ ಹಿಂದೆ ಹಾಗೊಂದು ಅವಕಾಶ ಬಹಳ ಕಷ್ಟದ ವಿಚಾರವಾಗಿತ್ತು. ಆದರೆ ಅವರು ಅಸಾಧ್ಯವನ್ನು ಸಾಧಿಸಿದಂತವರು. ನಮಗೆಲ್ಲಾ ಪ್ರೇರಣೆ. “ವಿವೇಕಾನಂದರು ಆಧುನಿಕ ಭಾರತದ ನಿರ್ಮಾತೃ” ಎನ್ನುವ ಸುಭಾಷ್…
ವಿರಾಜಪೇಟೆ ಜ.17 : ವಿರಾಜಪೇಟೆ ಸಮೀಪದ ಬೇಟೋಳಿ ರಾಮನಗರದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ನಡೆದ ಶ್ರೀ ಅಯ್ಯಪ್ಪ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆಯಿಂದಲೇ ಪೂಜಾ ಕಾರ್ಯಕ್ರಮವು ನಡೆದು ದೇವತಾ ಪ್ರಾರ್ಥನೆ ಹಾಗೂ ನೂತನ ಪಾಕ ಶಾಲೆಯಲ್ಲಿ ಗಣಪತಿ ಹವನ ನಡೆಯಿತು. ನಂತರ ಧರ್ಮಶಾಸ್ತನಿಗೆ ಪಂಚಾಮೃತ ಅಭಿಷೇಕ ನಡೆದು, ಬೇಟೋಳಿ ಮಹಿಳಾ ಮಂಡಳಿಯವರಿಂದ ಭಜನೆ ಕಾರ್ಯಕ್ರಮ ಜರುಗಿತು. ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಭಕ್ತರಿಗೆ ಅನ್ನ ಸಂತರ್ಪಣ ಸೇವೆ ನಡೆಯಿತು. ಸಂಜೆ ಅಯ್ಯಪ್ಪ ಭಕ್ತಾದಿಗಳಿಂದ ಭಜನೆ ಹಾಗೂ ಶ್ರೀ ಅಯ್ಯಪ್ಪ ಸ್ವಾಮಿ ವಿಶೇಷ ಪೂಜೆಯಾದ ಮಕರ ಜ್ಯೋತಿ ಪೂಜೆ ನೆರವೇರಿಸಲಾಯಿತು. ಪೂಜಾ ಕಾರ್ಯಕ್ರಮದ ನಂತರ ದೇವಾಲಯದ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಪುತ್ತೂರು ಸರಸ್ವತಿ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್‍ನ ಪ್ರಧಾನ ವ್ಯವಸ್ಥಾಪಕ ವಸಂತ ನಾಯಕ್ ಆಗಮಿಸಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ವಸಂತ ನಾಯಕ್ ಇಂತಹ ಕಾರ್ಯಕ್ರಮಗಳ ಅಗತ್ಯ ಪ್ರಸ್ತುತದಲ್ಲಿ…
ಮಡಿಕೇರಿ ಜ.16 : ಏಜೆಂಟ್ ಒಬ್ಬ ಮಾಡಿದ ವಂಚನೆಯಿoದ ಕೆಲಸವಿಲ್ಲದೆ ಕುವೈತ್ ನಲ್ಲಿ ಅತಂತ್ರ ಸ್ಥಿತಿಯಲ್ಲಿರುವ ಸಿದ್ದಾಪುರದ ಕರಡಿಗೋಡು ಗ್ರಾಮದ ಮಹಿಳೆ ಪಾರ್ವತಿ ಎಂಬುವವರ ರಕ್ಷಣೆಗೆ ಕೊಡಗು ಜಿಲ್ಲಾಡಳಿತ ಮುಂದಾಗಿದೆ. ವಿಸಿಟಿoಗ್ ವೀಸಾದ ಅವಧಿ ಮೂರು ತಿಂಗಳಿಗೆ ಮುಕ್ತಾಯವಾದ ಹಿನ್ನೆಲೆ ಇದರ ಅರಿವಿಲ್ಲದ ಪಾರ್ವತಿ ಇದೀಗ ಕೆಲಸವಿಲ್ಲದೆ ಯಾವುದೋ ಒಂದು ಸ್ಥಳದಲ್ಲಿ ಅತಂತ್ರವಾಗಿರುವ ಬಗ್ಗೆ ಕಳೆದ ವಾರ ತನ್ನ ತಾಯಿ ಎಂ.ಚೆಕ್ಕಿ ಅವರಿಗೆ ಕರೆ ಮಾಡಿ ತಿಳಿಸಿದ್ದರು. ಇದರಿಂದ ಆತಂಕಗೊoಡ ಚೆಕ್ಕಿ ಪುತ್ರಿಯನ್ನು ಮರಳಿ ಕರೆ ತರಲು ಸಹಾಯ ಮಾಡುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿರುವ ಜಿಲ್ಲಾಡಳಿತ ಪಾರ್ವತಿಯನ್ನು ಕರೆ ತರಲು ಅಗತ್ಯ ಕ್ರಮ ಕೈಗೊಂಡಿದೆ. ಜಿಲ್ಲಾಡಳಿತ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಸಂತ್ರಸ್ತೆಯೊoದಿಗೆ ಸಂವಹನ ಸಾಧಿಸಿ, ಆಕೆಗೆ ಧೈರ್ಯ ತುಂಬಿ ಸಂಬoಧಪಟ್ಟ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಪಾರ್ವತಿಯನ್ನು ಕ್ಷೇಮವಾಗಿ ಕುಟುಂಬದೊಡನೆ ಸೇರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯೋನ್ಮುಖರಾಗಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ. ::: ವಂಚಿಸಿದ ಏಜೆಂಟ್ :::…
ಕುಶಾಲನಗರ, ಜ.16: ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಶಿವಪ್ಪ ನಾಯಕ್ ಅವರ ನಿವಾಸಕ್ಕೆ ನುಗ್ಗಿ ಬೆದರಿಸಿ, ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕುಶಾಲನಗರದ ವಿವಿಧ ಸಂಘ, ಸಂಸ್ಥೆಗಳು ಹಾಗೂ ರಾಜಕೀಯ ಪಕ್ಷಗಳು ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದವು. ಕುಶಾಲನಗರ ಬೈಚನಹಳ್ಳಿಯ ಗೆಳೆಯರ ಬಳಗದ ನೇತೃತ್ವದಲ್ಲಿ ಕೊಡಗು ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘ, ಅಖಿಲ ಕರ್ನಾಟಕ ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘ, ಕುಶಾಲನಗರ ನಗರ ಕಾಂಗ್ರೆಸ್, ಜೆಡಿಎಸ್, ದಲಿತ ಸಂಘರ್ಷ ಸಮಿತಿ (ಭೀಮವಾದ), ಬೀದಿ ಬದಿ ವ್ಯಾಪಾರಿಗಳ ಸಂಘ ಮತ್ತಿತರ ಸಂಘ ಸಂಸ್ಥೆಗಳ ಪ್ರಮುಖರು ಕುಶಾಲನಗರ ಪಟ್ಟಣದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಹಲ್ಲೆ ಮಾಡಿದವರ ವಿರುದ್ಧ ಘೋಷಣೆ ಕೂಗಿ ಕಠಿಣ ಕ್ರಮಕ್ಕಾಗಿ ಒತ್ತಾಯಿಸಿದರು. ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಅಖಿಲ ಕರ್ನಾಟಕ ವಾಲ್ಮೀಕಿ ಕ್ಷೇಮಾಭಿವೃದ್ದಿ ಸಂಘದ ಜಿಲ್ಲಾಧ್ಯಕ್ಷ ಕೆ.ಎನ್‍ಅಶೋಕ್ , ಗೆಳೆಯರ ಬಳಗದ ಪ್ರಮುಖರು ಪುರಸಭೆ ಸದಸ್ಯರಾದ ಬಿ.ಎಲ್‍ಜಗದೀಶ್, ಬಳಗದ ಪೃಥ್ವಿರಾಜ್,…
ಮಡಿಕೇರಿ ಜ.16 : ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಇನ್ನು ಉಳಿದಿರುವ ಅವಧಿಯನ್ನು ಸದ್ಬಳಕೆ ಮಾಡಿಕೊಳ್ಳಬೇಕು. ನಿತ್ಯದ ಚಟುವಟಿಕೆ ಹಾಗೂ ಪರೀಕ್ಷಾ ತಯಾರಿ ಸಂಬಂಧ ಪ್ರತ್ಯೇಕ ವೇಳಾಪಟ್ಟಿ ಮಾಡಿಕೊಂಡು ಆ ಮೂಲಕ ಉತ್ತಮ ಫಲಿತಾಂಶ ಗಳಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ವ್ಯಕ್ತಿತ್ವ ವಿಕಸನ ಮಾರ್ಗದರ್ಶಕ, ಏಕಲವ್ಯ ಪ್ರಶಸ್ತಿ ವಿಜೇತ ಅಥ್ಲೀಟ್ ತೀತಮಾಡ ಅರ್ಜುನ್ ದೇವಯ್ಯ ಹೇಳಿದರು. ಕೊಡಗು ವಿಕಸನ ಸಂಸ್ಥೆ ವತಿಯಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಮಡಿಕೇರಿಯ ಸಂತ ಜೋಸೇಫರ ವಿದ್ಯಾಸಂಸ್ಥೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಪರೀಕ್ಷೆ ಸಿದ್ಧತೆ ಮಾರ್ಗದರ್ಶನ’ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು. ವಿದ್ಯಾರ್ಥಿಗಳ ಕಲಿಕೆಯಲ್ಲಿ ಶಿಕ್ಷಕರ ಪಾತ್ರದ ಜತೆಗೆ ಪೋಷಕರ ಪಾತ್ರ ಬಹಳ ಮುಖ್ಯವಾಗುತ್ತದೆ. ಪೋಷಕರು ಮಕ್ಕಳೊಂದಿಗೆ ಆಪ್ತವಾಗಿದ್ದಷ್ಟು ಮಕ್ಕಳು ಮಾನಸಿಕವಾಗಿ ಬಲವಾಗುತ್ತಾರೆ. ಮನೆಯಲ್ಲಿ ಒಳ್ಳೆಯ ವಾತಾವರಣ ಇದ್ದಾಗ ಮಕ್ಕಳ ಕಲಿಕೆಯ ಆಸಕ್ತಿ ಹೆಚ್ಚುತ್ತದೆ ಎಂದರು. ಶಾಲೆಯಲ್ಲಿ ಶಿಕ್ಷಕರು ಹೇಳಿಕೊಟ್ಟ ಪಾಠದಲ್ಲಿ ಗೊಂದಲ ಇದ್ದಾಗ ಆ ಬಗ್ಗೆ ಶಿಕ್ಷಕರ ಬಳಿ ಹೇಳಿ ಬಗೆಹರಿಸಿಕೊಳ್ಳಬೇಕು. ಶಿಕ್ಷಕರು ಕೂಡಾ…
ಮಡಿಕೇರಿ ಜ.16 : ಇದೇ ಜ.30 ರಂದು ಹುತಾತ್ಮರ ದಿನಾಚರಣೆ ಹಿನ್ನೆಲೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವನ್ನು ಜಿಲ್ಲಾ ಖಜಾನೆಯಿಂದ ಮೆರವಣಿಗೆ ಮೂಲಕ ಗಾಂಧಿ ಮೈದಾನಕ್ಕೆ ತೆಗೆದುಕೊಂಡು ಹೋಗುವ ಸಂಬಂಧ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾಹಿತಿ ನೀಡಿದ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ, ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ವತಿಯಿಂದ ಹುತಾತ್ಮರ ದಿನ ಪ್ರಯುಕ್ತ ಪೂಜ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವನ್ನು ಜ.30 ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆ ಕಚೇರಿಯಿಂದ ಮೆರವಣಿಗೆಯಲ್ಲಿ ಪೊಲೀಸ್ ಗೌರವ ರಕ್ಷೆಯೊಂದಿಗೆ ತೆಗೆದುಕೊಂಡು ಹೋಗಿ ಗಾಂಧಿ ಮಂಟಪದಲ್ಲಿರಿಸಿ ಬೆಳಗ್ಗೆ 10.30 ಗಂಟೆಗೆ ಸರ್ವಧರ್ಮ ಪ್ರಾರ್ಥನೆ, ನಂತರ 11 ಗಂಟೆಗೆ ಸರಿಯಾಗಿ 2 ನಿಮಿಷ ಮೌನ ಆಚರಣೆ ನಡೆಯಲಿದೆ ಎಂದು ತಿಳಿಸಿದರು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಗಾಂಧಿ ಮಂಟಪದಲ್ಲಿ…






