ಮಡಿಕೇರಿ ಫೆ.13 : ಮೈಸೂರಿನ ಮಹಾರಾಜ ಇಂಡೋರ್ ಹಾಲ್ ನಲ್ಲಿ ನಡೆದ ವಿ.ಎಸ್.ಕೆ. ಓಪನ್ ನ್ಯಾಷನಲ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಕಾವೇರಿ ಮನೋಜ್ ಕಟ್ಟಾ ವಿಭಾಗದಲ್ಲಿ ಸ್ಪರ್ಧಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ. ಇವಳು 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ತರಬೇತುದಾರ ಬಿ.ಎಂ. ಮುಖೇಶ್ ಅವರ ಬಳಿ ತರಬೇತಿ ಪಡೆದಿದ್ದಾಳೆ. ಕಾವೇರಿ ಕಗ್ಗೋಡ್ಲು ಗ್ರಾಮದ ಮಂದ್ರೀರ ಮನೋಜ್ ಹಾಗೂ ವಾಣಿ ಅವರ ಪುತ್ರಿ.
ಲೇಖಕ: admin
ಮಡಿಕೇರಿ ಫೆ.13 : ಕೊಡಗು ಜಿಲ್ಲೆಯ ಕುಟ್ಟ ವ್ಯಾಪ್ತಿಯಲ್ಲಿ ಕಳೆದ 24 ಗಂಟೆಯೊಳಗೆ ಎರಡು ಕೂಲಿ ಕಾರ್ಮಿಕರ ಜೀವಗಳನ್ನು ಬಲಿ ತೆಗೆದುಕೊಂಡ ಹುಲಿಯನ್ನು ಕಂಡಲ್ಲಿ ಗುಂಡಿಕ್ಕಿ ಕೊಲ್ಲಲು ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆ ಅನುಮತಿ ನೀಡಬೇಕಿದೆ ಎಂದು ಅಖಿಲ ಕೊಡವ ಸಮಾಜ ಯೂತ್ ವಿಂಗ್ ಒತ್ತಾಯಿಸಿದೆ. ಈ ಪತ್ರಿಕಾ ಪ್ರಕಟಣೆ ನೀಡಿರುವ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ಕಾರ್ಮಿಕರನ್ನು ಬಲಿಪಡೆಯುವ ಹುಲಿಯನ್ನು ಹಿಡಿದು ಮತ್ತೊಂದು ಜಾಗಕ್ಕೆ ಸ್ಥಳಾಂತರ ಮಾಡಿ ನಂತರ ಅಲ್ಲಿಯೂ ಮತ್ತೊಂದು ಅವಘಡ ನಡೆಯುವುದಕ್ಕಿಂತ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆ ಹುಲಿಯನ್ನು ಗುಂಡಿಕ್ಕಿ ಕೊಲ್ಲಲು ಆದೇಶ ನೀಡಬೇಕಿದೆ. ನೀಡಬೇಕು. ಅಥವಾ ತಕ್ಷಣ ಕಾರ್ಯಾಚರಣೆ ಮೂಲಕ ಸೆರೆಹಿಡಿದು ಬೇರೆ ಜಾಗಕ್ಕೆ ಸ್ಥಳಾಂತರ ಮಾಡದೆ, ಮೃಗಾಲಯದಲ್ಲಿಯೇ ಕೂಡಿಡಬೇಕು ಎಂದು ಒತ್ತಾಯಿಸಿದರು. ಕಂಡಲ್ಲಿ ಗುಂಡಿಕ್ಕಿ ಕೊಲ್ಲಲು ಆದೇಶ ನೀಡಿದರೆ ಗ್ರಾಮಸ್ಥರು ಕೂಡ ಇಲಾಖೆಗೆ ಸಾಥ್ ನೀಡುತ್ತಾರೆ. ಕಾನೂನಿಗೆ ಬೆಲೆ ಕೊಡುವ ಮಂದಿ ಜಿಲ್ಲೆಯವರಾಗಿರುವ ಕಾರಣ ವನ್ಯಮೃಗಗಳ ಕಾಟವನ್ನು…
ಮಡಿಕೇರಿ ಫೆ.13 : ಹುಲಿದಾಳಿಯಿಂದ ಕಳೆದ 24 ಗಂಟೆಯಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ನಿನ್ನೆ ಪೊನ್ನಂಪೇಟೆ ತಾಲ್ಲೂಕಿನ ಚೂರಿಕಾಡು ಪಂಚಳ್ಳಿ ಗ್ರಾಮದ ಕಾರ್ಮಿಕ ಚೇತನ್ (18) ನನ್ನು ಕೊಂದುಹಾಕಿರುವ ಹುಲಿ, ಇಂದು ಬೆಳಿಗ್ಗೆ ಬಾಡಗ ಗ್ರಾಮದ ಕಾರ್ಮಿಕ ರಾಜು (75) ಎಂಬವರನ್ನು ಬಲಿತೆಗೆದುಕೊಂಡಿದೆ. ಹುಲಿದಾಳಿಗೆ ಇಬ್ಬರು ಬಲಿಯಾಗಿರುವುದರಿಂದ ಜಿಲ್ಲೆಯಲ್ಲಿ ಆತಂಕ ಸೃಷ್ಟಿಯಾಗಿದ್ದು, ಹುಲಿ ಸೆರೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಶಾಸಕ ಕೆ.ಜಿ.ಬೋಪಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಹುಲಿ ಸೆರೆಗೆ ಅರಣ್ಯ ಇಲಾಖೆಗೆ ಅನುಮತಿ ನೀಡುವಂತೆ ಕೋರಲಿದ್ದಾರೆ.
ಮಡಿಕೇರಿ ಫೆ.12 : ಹುಲಿ ದಾಳಿಗೆ ಬಾಲಕನೋರ್ವ ಮೃತಪಟ್ಟಿರುವ ಘಟನೆ ದಕ್ಷಿಣ ಕೊಡಗಿನ ಕುಟ್ಟದ ಪಾಲೇರಿ ಎಂಬಲ್ಲಿ ನಡೆದಿದೆ. ಪಂಚವಳ್ಳಿ ಮೂಲದ ಚೇತನ್ (12) ಎಂಬಾತನೇ ಮೃತ ದುರ್ದೈವಿ. ಕಾಫಿ ತೋಟದಲ್ಲಿದ್ದಾಗ ಹುಲಿ ದಾಳಿ ಮಾಡಿದೆ. ತೋಟದ ಕೆಲಸಕ್ಕೆಂದು ಬಂದಿದ್ದ ಪೋಷಕರೊಂದಿಗೆ ಬಾಲಕ ಬಂದಿದ್ದ ಎಂದು ಹೇಳಲಾಗಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಫೆ.12 : ಪ್ರಶಸ್ತಿ ವಿಜೇತ ನಿರ್ದೇಶಕಿ ಕೊಡಗಿನ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರು ನಿರ್ದೇಶಿಸಿರುವ 2ನೇ ಕನ್ನಡ ಚಲನಚಿತ್ರ “ಕಂದೀಲು” ಚಿತ್ರೀಕರಣ ಪೂರ್ಣಗೊಂಡಿದೆ. ಸ್ವಸ್ತಿಕ್ ಎಂಟರ್‌ಟೈನ್ಮೆಂಟ್ ನ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು ಚಿತ್ರವನ್ನು ನಿರ್ಮಿಸಿದ್ದು, ರಾಜ್ಯದ ವಿವಿಧೆಡೆ ಚಿತ್ರೀಕರಣ ಮಾಡಲಾಗಿದೆ. “ಕಂದೀಲು” ಎಂದರೆ ಬೆಳಕಿನ ದೀಪ ಎಂದರ್ಥ, ಈ ಚಿತ್ರ ರೈತರ ಬದುಕಿನ ಮೇಲೆ ಬೆಳಕು ಚೆಲ್ಲಿದೆ. ಸಂಕಷ್ಟದಲ್ಲಿರುವ ರೈತ ಕುಟುಂಬವೊಂದರ ಬದುಕನ್ನು ಸಣ್ಣದೊಂದು ಬೆಳಕು ಹಸನಾಗಿಸುವ ಕಥಾಹಂದರ ಈ ಚಿತ್ರದಲ್ಲಿದೆ. ಸಮಾಜಿಕ ಕಳಕಳಿಯ ಚಿತ್ರಗಳ ನಿರ್ಮಾಣ ಹೆಚ್ಚು ಖುಷಿ ಕೊಡುತ್ತದೆ ಎಂದು ನಿರ್ಮಾಪಕ ಪ್ರಕಾಶ್ ಕಾರ್ಯಪ್ಪ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ನನಗೆ ದೊರೆತ ಅತುತ್ತಮ ನಿರ್ದೇಶಕಿ ಪ್ರಶಸ್ತಿ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ. “ಕಂದೀಲು” ಚಿತ್ರ ಉತ್ತಮವಾಗಿ ಮೂಡಿ ಬಂದಿದೆ, ಎರಡನೇ ಚಿತ್ರ ನಿರ್ದೇಶನ ಸುಲಭವಾಗಿತ್ತು ಎಂದು ನಿರ್ದೇಶಕಿ ಯಶೋಧ ಪ್ರಕಾಶ್ ಹೇಳಿದ್ದಾರೆ. “ಕಂದೀಲು” ಚಿತ್ರದ ಮುಖ್ಯಪಾತ್ರದಲ್ಲಿ ಕಾಂತಾರಾ ಖ್ಯಾತಿಯ ಪ್ರಭಾಕರ ಬ.ಕುಂದರ ನಟಿಸಿದ್ದಾರೆ. ಉಳಿದಂತೆ ಗುರುತೇಜಸ್,…
ಮಡಿಕೇರಿ ಫೆ.12 : ಭಾರತ ದೇಶ ಸಾವಿರ ಕಂಬಗಳ ಮೇಲೆ ನಿಂತಿರುವ ಸುಂದರ ಚಪ್ಪರವಾಗಿದೆ, ಇಲ್ಲಿ ಮನಸ್ಸು ಮನಸ್ಸುಗಳನ್ನು ಬೆಸೆಯುವ ಕಾರ್ಯವಾಗಬೇಕು. ಆಗ ಶಾಂತಿ ನೆಲೆಸಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಅಭಿಪ್ರಾಯಪಟ್ಟಿದ್ದಾರೆ. ಅಹ್ಮದಿಯಾ ಮುಸ್ಲಿಂ ಜಮಾಅತ್ ವತಿಯಿಂದ ನಗರದ ಹೊರ ವಲಯದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ “ಪರಮಾಣು ಯುದ್ಧದ ವಿನಾಶಕಾರಿ ಪರಿಣಾಮಗಳು ಮತ್ತು ಸಂಪೂರ್ಣ ನ್ಯಾಯಕ್ಕಾಗಿ ನಿರ್ಣಾಯಕ ಅಗತ್ಯ” ಎಂಬ ವಿಷಯದ ಕುರಿತು ನಡೆದ ವಿಚಾರ ಸಂಕಿರಣದಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಅವರು ಮಾತನಾಡಿದರು. ನಮ್ಮ ಧರ್ಮವನ್ನು ನಾವು ಪ್ರೀತಿಸಬೇಕು, ಹಾಗೆಯೇ ಮತ್ತೊಂದು ಧರ್ಮವನ್ನು ಗೌರವಿಸಬೇಕು. ಸ್ವಸ್ಥ ಮತ್ತು ಸ್ವಚ್ಛ ಸಮಾಜಕ್ಕಾಗಿ ಎಲ್ಲರೂ ಪ್ರಯತ್ನಿಸಬೇಕು. ಭಯೋತ್ಪಾದನೆ ಒಳ್ಳೆಯದಲ್ಲ, ಅನ್ಯಾಯದಿಂದ ಮನಸ್ಸು ಶಾಂತಿ ಪಡೆಯಲು ಸಾಧ್ಯವಿಲ್ಲ. ಭಾರೀ ಅಪಾಯವನ್ನು ಸೃಷ್ಟಿಸಬಲ್ಲ ಯುದ್ಧದ ಬಗ್ಗೆ ಯಾರೂ ಯೋಚಿಸಬಾರದು. ಪ್ರಗತಿಯ ಬಗ್ಗೆಯೇ ಚಿಂತನೆ ನಡೆಸಬೇಕು ಎಂದರು. ಅನುಕಂಪ ವ್ಯಕ್ತಪಡಿಸುವುದಕ್ಕಿಂದ ಸೇವಾ ಮನೋಭಾವ ಪ್ರಸ್ತುತ ಪರಿಸ್ಥಿತಿಯಲ್ಲಿ ಅನಿವಾರ್ಯವಾಗಿದೆ. ನಾವು ನಮಗಾಗಿ ಬದುವುದಕ್ಕಿಂತ…
ನಾಪೋಕ್ಲು ಫೆ.12 : ಕೊಡವ ಕೌಟುಂಬಿಕ ಹಾಕಿ ಉತ್ಸವ ವಿಶ್ವದ ಗಮನ ಸೆಳೆದಿದ್ದು, ಅನೇಕ ಕ್ರೀಡಾಪಟುಗಳು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಈ ಉತ್ಸವದ ಮೂಲಕ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರ ಆರ್ಥಿಕ ನೆರವನ್ನು ನೀಡುತ್ತಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ. ನಾಪೋಕ್ಲು ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಅಪ್ಪಚೆಟ್ಟೋಳಂಡ ಕೌಟುಂಬಿಕ ಹಾಕಿ ಉತ್ಸವದ ಮಾಹಿತಿ ಕೈಪಿಡಿ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೌಟುಂಬಿಕ ಹಾಕಿ ಉತ್ಸವಕ್ಕಾಗಿ ಸರ್ಕಾರ ಅನುದಾನ ಘೋಷಿಸಿದ್ದು, ಆಯೋಜಕರು ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. 1997 ರಲ್ಲಿ ಕೊಡಗಿನಲ್ಲಿ ಕೊಡವ ಹಾಕಿ ಉತ್ಸವ ಆರಂಭವಾಗಿದ್ದು, ಕುಟುಂಬಗಳು ಉತ್ಸವವನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿವೆ. ಈ ಹಿಂದಿನ ಕೊಡವ ಹಾಕಿ ಉತ್ಸವಕ್ಕೆ ಸರ್ಕಾರ 50 ಲಕ್ಷ ರೂ. ಬಿಡುಗಡೆ ಮಾಡಿತ್ತು. ಇದೀಗ ಸರ್ಕಾರ ಒಂದು ಕೋಟಿ ರೂ. ಬಿಡುಗಡೆ ಮಾಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ಜನಾಂಗದವರು ಕ್ರೀಡಾಕೂಟಗಳನ್ನು ನಡೆಸುತ್ತಿದ್ದು, ಸಮಾಜದ ಒಗ್ಗೂಡುವಿಕೆ ಸಾಧ್ಯವಾಗಿದೆ. ಹಾಕಿ ಉತ್ಸವಕ್ಕೆ ಶಾಶ್ವತ…
ಮಡಿಕೇರಿ ಫೆ.12 : ಕಾವೇರಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕುಶಾಲನಗರ ಬಳಿಯ ಕೂಡ್ಲೂರು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ಬಾಲಕರಾದ ಪ್ರಥ್ವಿ(7) ಹಾಗೂ ಪ್ರಜ್ವಲ್(4) ಮೃತ ದುರ್ದೈವಿಗಳಾಗಿದ್ದಾರೆ. ಗ್ರಾಮದ ಮಾವಿನತೋಪು ಸಮೀಪ ಕಾವೇರಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಸಂದರ್ಭ ಇಬ್ಬರು ಆಕಸ್ಮಿಕವಾಗಿ ಮುಳುಗಿದ್ದಾರೆ. ಕೂಡ್ಲೂರು ನಿವಾಸಿ, ಕೂಲಿ ಕಾರ್ಮಿಕ ನಾಗರಾಜ್ ಎಂಬುವವರ ಪುತ್ರ ಪೃಥ್ವಿ ಹಾಗೂ ಆಟೋ ಚಾಲಕ ಸತೀಶ್ ಎಂಬುವವರ ಪುತ್ರ ಪ್ರಜ್ವಲ್ ಇಬ್ಬರು ಸಂಬoಧದಲ್ಲಿ ಸಹೋದರರಾಗಿದ್ದಾರೆ. ಘಟನೆ ಕುರಿತು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಗ್ನಿ ಶಾಮಕ ದಳದ ನುರಿತ ಈಜುಗಾರರ ತಂಡ ಮೃತದೇಹಗಳನ್ನು ನದಿಯಿಂದ ಮೇಲೆತ್ತಿದರು.
ಮಡಿಕೇರಿ ಫೆ.12 : ಮಡಿಕೇರಿಯ ಪ್ರಾದೇಶಿಕ ಸಾರಿಗೆ ಇಲಾಖೆಯ ಕಚೇರಿಯಲ್ಲಿ ಯಾವುದೇ ಅರ್ಜಿಗಳು ಸಕಾಲದಲ್ಲಿ ವಿಲೇವಾರಿಯಾಗುತ್ತಿಲ್ಲ ಎಂದು ಆರೋಪಿಸಿರುವ ಕೊಡಗು ಜಿಲ್ಲಾ ವಾಹನ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಎಂ.ಎ.ಉಸ್ಮಾನ್, ಮುಂದಿನ 10 ದಿನಗಳೊಳಗೆ ಪರಿಸ್ಥಿತಿ ಸುಧಾರಿಸದಿದ್ದಲ್ಲಿ ಕಚೇರಿ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಧಿಕಾರಿಯೊಬ್ಬರು ವಿನಾಕಾರಣ ಅರ್ಜಿಗಳನ್ನು ತಿರಸ್ಕರಿಸುತ್ತಿದ್ದಾರೆ, ಇದರಿಂದ ನಗರದಿಂದ ಸುಮಾರು 9 ಕಿ.ಮೀ ದೂರದಲ್ಲಿರುವ ಆರ್‌ಟಿಒ ಕಚೇರಿಗೆ ನಿತ್ಯ ಹೋಗಿ ಬರಲು ವಾಹನ ಚಾಲಕರು ಪರದಾಡುತ್ತಿದ್ದಾರೆ. ಖಾಸಗಿ ಸಂಸ್ಥೆಯೊoದರ ವಾಹನಗಳನ್ನು ಮಾತ್ರ ನೋಂದಣಿ ಮಾಡುತ್ತಿರುವ ಅಧಿಕಾರಿ ಇತರ ವಾಹನ ಮಾಲೀಕರ ಮತ್ತು ಚಾಲಕರ ವಾಹನಗಳನ್ನು ನೋಂದಣಿ ಮಾಡದೆ ಸತಾಯಿಸುತ್ತಿದ್ದಾರೆ. ಕಚೇರಿಯಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ. ಅಧಿಕಾರಿ ಮುಕ್ತವಾಗಿ ಅರ್ಜಿದಾರರಿಗೆ ಸಿಗುತ್ತಿಲ್ಲ, ಚಾಲಕರ ಸಮಸ್ಯೆಯನ್ನು ಆಲಿಸುತ್ತಿಲ್ಲ. ಕಚೇರಿ ಪ್ರವೇಶಕ್ಕೆ ಅವಕಾಶ ನೀಡುತ್ತಿಲ್ಲ, ಇಲ್ಲಸಲ್ಲದ ನೆಪವೊಡ್ಡಿ ಅರ್ಜಿಗಳನ್ನು ತಿರಸ್ಕರಿಸಲಾಗುತ್ತಿದೆ. ನಿತ್ಯ ಮಾನಸಿಕ ಕಿರುಕುಳದಿಂದಾಗಿ ಚಾಲಕರು ಬೇಸತ್ತಿದ್ದಾರೆ,…
ಮಡಿಕೇರಿ ಫೆ.12 : ಶ್ರಮಜೀವಿಗಳಾದ ಹಮಾಲಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್ ತಲೆಹೊರೆ ಕಾರ್ಮಿಕರ ಸಂಘದ ಕೊಡಗು ಜಿಲ್ಲಾ ಸಮಿತಿ ಒತ್ತಾಯಿಸಿದೆ. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಮಿತಿಯ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಹಾಗೂ ಪದಾಧಿಕಾರಿಗಳು ಹಮಾಲಿ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಹಮಾಲಿ ಕಾರ್ಮಿಕರು ವ್ಯಾಪಾರ ವಹಿವಾಟು ಮತ್ತು ಜೀವನಾವಶ್ಯಕ ವಸ್ತುಗಳ ಸಾಗಾಣಿಕೆಯಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸುತ್ತಾರೆ. ಕನಿಷ್ಠ ಸೌಲಭ್ಯ ಮತ್ತು ಸಾಮಾಜಿಕ ಭದ್ರತೆಯಿಂದ ವಂಚಿತರಾದ ಶ್ರಮಜೀವಿಗಳ ಬೇಡಿಕೆಯನ್ನು ಸರ್ಕಾರ ಪರಿಗಣಿಸಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಸಹಕಾರ ಇಲಾಖೆ ಮೂಲಕ ಮರು ಜಾರಿಯಾಗುತ್ತಿರುವ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ಸೌಲಭ್ಯವನ್ನು ಉಚಿತವಾಗಿ ಎಲ್ಲಾ ಹಮಾಲಿ ಕಾರ್ಮಿಕರಿಗೆ ನೀಡಬೇಕು, ಈ ಹಿಂದೆ ಪ್ರಾರಂಭಿಸಲಾದ “ಕಾಯಕ ನಿಧಿ” ಯೋಜನೆ ಬಡ ಹಮಾಲಿ ಕಾರ್ಮಿಕರಿಗೆ ಅತ್ಯಂತ ಪ್ರಯೋಜನಕಾರಿಯಾಗಿದೆ. ಸರಕಾರದಿಂದ ಮತ್ತು ಎಪಿಎಂಸಿಯಿoದ ಹಣಕಾಸು ಸಹಾಯ ಪಡೆದು ವೈದ್ಯಕೀಯ ಮರುಪಾತಿಸಿ ಯೋಜನೆ ಮುಂದುವರೆಸಬೇಕು, ೬೦ ವರ್ಷವಾದ ಹಮಾಲಿ ಕಾರ್ಮಿಕರಿಗೆ…






