ಮಡಿಕೇರಿ ಜ.1 : ಪ್ರಶಸ್ತಿ ವಿಜೇತ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ನಾಡ ಪೆದ ಆಶಾ” ಕೊಡವ ಚಿತ್ರಕ್ಕೆ ಸೌತ್ ಇಂಡಿಯನ್ ಫಿಲಂ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ ದೊರೆತ್ತಿದೆ. ಈ ಚಿತ್ರದ ನಟನೆಗಾಗಿ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಹಾಗೂ ನಾಯಕ ನಟ ಬೊಳ್ಳಜಿರ ಬಿ.ಅಯ್ಯಪ್ಪ ಅವರುಗಳಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಫಿಲಂ ಫೆಸ್ಟಿವಲ್ ಗೆ 11,520 ಚಿತ್ರಗಳು ಬಂದಿದ್ದು, ವಿವಿಧ ವಿಭಾಗಗಳಲ್ಲಿ ಆಯ್ಕೆಯಾದ 630 ಚಿತ್ರಗಳಲ್ಲಿ “ನಾಡ ಪೆದ ಆಶಾ” ಕೂಡ ಒಂದು. ಚಿತ್ರ ಪ್ರದರ್ಶನಗೊಳ್ಳುವ ಮೂಲಕ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿ ಮೂರು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಸ್ತ್ರೀ ಪ್ರಧಾನ ಕಥಾವಸ್ತುವಿನ “ನಾಡ ಪೆದ ಆಶಾ” 2021ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಗೊಂಡು ಕೊಡಗು ಜಿಲ್ಲೆಯಾದ್ಯಂತ 123 ಯಶಸ್ವಿ ಪ್ರದರ್ಶನಗಳನ್ನು ಕಂಡಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ನಡೆದ ಅಂತರರಾಷ್ಟ್ರೀಯ ಚಲಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡ “ನಾಡ ಪೆದ ಆಶಾ” ಕೊಡವ ಚಿತ್ರ ಇಲ್ಲಿಯವರೆಗೆ ಒಟ್ಟು 10 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.…
Breaking News
- *ಸಂತ ಜೊಸೆಫರ ಶಾಲೆಯಲ್ಲಿ ಸುರಕ್ಷತಾ ಕಾರ್ಯಕ್ರಮ*
- *ಎನ್ಎಂಎಂಎಸ್ ಪರೀಕ್ಷೆಯಲ್ಲಿ ಜಿ.ಹಂಸ ಸಾಧನೆ*
- *ವಿಶೇಷ ಚೇತನರಿಂದ ಅರ್ಜಿ ಆಹ್ವಾನ*
- *ಬಲಮುರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ*
- *ಪಟ್ಟಣಕ್ಕೆ ಬಂದ ಕಾಡು ಕುರಿ*
- *ಪ್ರಜಾಪ್ರಭುತ್ವ ಆಶಯಗಳನ್ನು ಎತ್ತಿಹಿಡಿಯುವಲ್ಲಿ ಪ್ರತಿಯೊಂದು ಮತ ಅಮೂಲ್ಯ : ಶಾಸಕ ಎ.ಎಸ್.ಪೊನ್ನಣ್ಣ*
- *ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನ*
- *ಗಾಜಿನ ಸೇತುವೆ ಪರಿಶೀಲಿಸಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ : ಪ್ರವಾಸಿಗರ ಸುರಕ್ಷತೆ ಗಮನಹರಿಸಿ ಮುಂದಿನ ಕ್ರಮ*
- *’ಕರ್ತವ್ಯ’ ಆಪ್ ನೋಂದಣಿ : ಮಾಧ್ಯಮ ವರದಿಗಳಿಗೆ ಸ್ಪಷ್ಟೀಕರಣ ನೀಡಿದ ಸರ್ಕಾರ : ಶೇ.70.6 ರಷ್ಟು ಪ್ರಗತಿ ಸಾಧನೆ*
- *ಕೊಡವರಿಗೆ ವಿಶೇಷ ಸ್ಥಾನಮಾನ : ಸಿಎನ್ಸಿಯಿಂದ ಜೂ.26ರಂದು ವಿಚಾರಗೋಷ್ಠಿ*






