ಮಡಿಕೇರಿ ಫೆ.11 : ಪೊನ್ನಂಪೇಟೆ ತಾಲ್ಲೂಕಿನ ಬಾಡಗರಕೇರಿ ಕೂಟಿಯಾಲ ಸಂಪರ್ಕ ರಸ್ತೆಗೆ ರೂ.2 ಕೋಟಿ 60 ಲಕ್ಷ ಅನುದಾನ ಸರಕಾರದಿಂದ ಮಂಜೂರಾಗಿದ್ದು, ರಸ್ತೆ ಕಾಮಗಾರಿಗೆ ಶಾಸಕ ಕೆ.ಜಿ.ಬೋಪಯ್ಯ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು.
ಲೇಖಕ: admin
ಮಡಿಕೇರಿ ಫೆ.11 : ಸಣ್ಣ ನೀರಾವರಿ ಇಲಾಖಾ ಅನುದಾನದಲ್ಲಿ ಪೊನ್ನಂಪೇಟೆ ತಾಲ್ಲೂಕು, ಬಿರುನಾಣಿ ಗ್ರಾ.ಪಂ ವ್ಯಾಪ್ತಿಯ ಮತ್ಯಾನಿಯಲ್ಲಿ ರೂ.1 ಕೋಟಿ 65 ಲಕ್ಷ ಅನುದಾನದಲ್ಲಿ ನಿರ್ಮಿಸಲಾದ ಚೆಕ್ ಡ್ಯಾಮ್ ಮತ್ತು ರೂ.3 ಕೋಟಿ ಅನುದಾನದಲ್ಲಿ ನೀಟ್ ಕುಂದ್ ನಲ್ಲಿ ನಿರ್ಮಿಸಲಾದ ಸೇತುವೆ ಸಹಿತ ಕಿಂಡಿ ಅಣೆಕಟ್ಟನ್ನು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು.
ಮಡಿಕೇರಿ ಫೆ.11 : ಪೊನ್ನಂಪೇಟೆ ತಾಲ್ಲೂಕು, ಬಿ.ಶೆಟ್ಟಗೇರಿ ಗ್ರಾ.ಪಂ ವ್ಯಾಪ್ತಿಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಜಿ.ಬೋಪಯ್ಯ ಚಾಲನೆ ನೀಡಿದರು. ಕೊಂಗಣ ವೇಡಿಬೆಲು ಪರಿಶಿಷ್ಟ ಪಂಗಡ ಕಾಲೋನಿ ಸಂಪರ್ಕ ರಸ್ತೆಗೆ ರೂ.60 ಲಕ್ಷ ಮತ್ತು ಪಾಂಡಂಡ ಕೆಂದರೆಕಾಡು ಪರಿಶಿಷ್ಟ ಪಂಗಡ ಕಾಲೋನಿ ಸಂಪರ್ಕ ರಸ್ತೆಗೆ 55 ಲಕ್ಷ ಅನುದಾನ ಕಾವೇರಿ ನೀರಾವರಿ ನಿಗಮದಿಂದ ಒದಗಿಸಲಾಗಿದ್ದು, ಭೂಮಿ ಪೂಜೆ ನೆರವೇರಿಸಲಾಯಿತು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.
ಮಡಿಕೇರಿ ಫೆ.11 : ವಿರಾಜಪೇಟೆ ಪುರಸಭೆ ಅನುದಾನದಲ್ಲಿ ಪುರಸಭಾ ವ್ಯಾಪ್ತಿಯ 9 ಅನಿಲ ರಹಿತ ಕುಟುಂಬಗಳಿಗೆ ಅಡುಗೆ ಅನಿಲ ಸಂಪರ್ಕ ಮಂಜೂರಾಗಿದ್ದು, ಶಾಸಕ ಕೆ.ಜಿ.ಬೋಪಯ್ಯ ಅವರು ಪಲಾನುಭವಿಗಳಿಗೆ ವಿತರಿಸಿದರು.
ಮಡಿಕೇರಿ ಫೆ.11 : ಕಾರ್ಮಿಕ ಇಲಾಖೆ ವತಿಯಿಂದ ವಿರಾಜಪೇಟೆ ತಾಲ್ಲೂಕಿನ ಕಟ್ಟಡ ಕಾರ್ಮಿಕರ 180 ಮಕ್ಕಳಿಗೆ ಶೈಕ್ಷಣಿಕ ಸಾಮಗ್ರಿಗಳ ಕಿಟ್ ಮತ್ತು 77 ಮಕ್ಕಳಿಗೆ ಟ್ಯಾಬ್ ಗಳು ಮಂಜೂರಾಗಿದ್ದು, ಶಾಸಕ ಕೆ.ಜಿ.ಬೋಪಯ್ಯ ಅವರು ವಿರಾಜಪೇಟೆ ಕಛೇರಿಯಲ್ಲಿ ಪಲಾನುಭವಿಗಳಿಗೆ ವಿತರಿಸಿದರು.
ಮಡಿಕೇರಿ ಫೆ.11 : ಪೊನ್ನಂಪೇಟೆ ತಾಲ್ಲೂಕು, ಹಾತೂರು ಗ್ರಾ.ಪಂ ವ್ಯಾಪ್ತಿಯ ಕುಂದ ಬಸವೇಶ್ವರ ಪರಿಶಿಷ್ಟ ಪಂಗಡ ಕಾಲೋನಿ ಸಂಪರ್ಕ ರಸ್ತೆಗೆ ರೂ.80 ಲಕ್ಷ ಅನುದಾನ ಕಾವೇರಿ ನೀರಾವರಿ ನಿಗಮದಿಂದ ಒದಗಿಸಲಾಗಿದ್ದು, ರಸ್ತೆ ಕಾಮಗಾರಿಗೆ ಶಾಸಕ ಕೆ.ಜಿ.ಬೋಪಯ್ಯ ಚಾಲನೆ ನೀಡಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು.
ಮಡಿಕೇರಿ ಫೆ.11 : ಕುಂಜಿಲ ಕಕ್ಕಬ್ಬೆ ಸಮೀಪದ ವಯಕೋಲಿನಲ್ಲಿ ಪುಳಿಙೋಂ ಔಲಿಯಾಕಳ ಹೆಸರಿನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುವ ಉರೂಸ್ ಸಮಾರಂಭವು ಈ ಬಾರಿ ಏ.29 ಮತ್ತು 30 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ವಯಕೋಲ್ ಆಡಳಿತ ಮಂಡಳಿ ತಿಳಿಸಿದೆ.
ನಾಪೋಕ್ಲು ಫೆ.11 : ಇತಿಹಾಸ ಪ್ರಸಿದ್ಧ ನಾಪೋಕ್ಲು ಸಮೀಪದ ಚೆರಿಯಪರಂಬು ದರ್ಗಾದಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಅಬ್ದುಲ್ ರಾಹ್ಮಾನ್ ವಲಿಯುಲ್ಲಾಹಿ ಹಾಗೂ ಅವುಲಿಯಾಗಳ ಉರೂಸ್ ಸಮಾರಂಭಕ್ಕೆ ಗಣ್ಯರು ಚಾಲನೆ ನೀಡಿದರು. ಜುಮಾ ನಮಾಜಿನ ಬಳಿಕ ದಫ್ ಪ್ರದರ್ಶನ ದೊಂದಿಗೆ ದರ್ಗಾಗೆ ತೆರಳಿದ ಬಾಂಧವರು ಮಸೀದಿಯ ಖತೀಬರಾದ ಹಂಝ ರಹ್ಮಾನಿ ಅವರ ನೇತೃತ್ವದಲ್ಲಿ ಮಖಾಂ ಝಿಯಾರತ್ ಹಾಗೂ ವಿಶೇಷ ಪ್ರಾರ್ಥನೆ ನಡೆಯಿತು. ಬಳಿಕ ಚೆರಿಯಪರಂಬು ಮುಹಿಯುದ್ದೀನ್ ಜುಮಾ ಮಸೀದಿಯ ಆಡಳಿತ ಮಂಡಳಿ ಅಧ್ಯಕ್ಷ ಕೆ.ಎಚ್.ಅಹಮದ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಫೆ.14ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಉರೂಸ್ ಕಾರ್ಯಕ್ರಮ ನಡೆಯಲಿದೆ. ಫೆ.13 ಸೋಮವಾರ ಸರ್ವಧರ್ಮ ಸಮ್ಮೇಳನ ನಡೆಯಲಿದ್ದು. ಈ ಕಾರ್ಯಕ್ರಮದಲ್ಲಿ ಧಾರ್ಮಿಕ ಪಂಡಿತರು, ಜನಪ್ರತಿನಿಧಿಗಳು,ಸಮಾಜಸೇವಕರು,ಗಣ್ಯರು ಭಾಗವಹಿಸಲಿದ್ದಾರೆ. ಅದೇ ದಿನ ಸಂಜೆ 4 ಗಂಟೆಗೆ ಮೌಲೂದ್ ಪಾರಾಯಣ ಹಾಗೂ ಸರ್ವಧರ್ಮೀಯರಿಗೆ ಅನ್ನದಾನ ಕಾರ್ಯಕ್ರಮ ನೆರವೇರಲಿದ್ದು, ಭಕ್ತಾಧಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಉರೂಸ್ ಸಮಾರಂಭ ಯಶಸ್ವಿ ಗೊಳಿಸುವಂತೆ ಮನವಿ ಮಾಡಿದರು. ಈ ಸಂದರ್ಭ ಜಮಾಅತ್ ಉಪಾಧ್ಯಕ್ಷ…
ಮಡಿಕೇರಿ ಫೆ.10 : ಸಂವಿಧಾನದ 8 ನೇ ಶೆಡ್ಯೂಲ್‌ಗೆ ಕೊಡವ ತಕ್ (ಕೊಡವ ಭಾಷೆ) ನ್ನು ಸೇರಿಸಬೇಕೆಂದು ಒತ್ತಾಯಿಸಿ ಅಂತರರಾಷ್ಟ್ರೀಯ ಮಾತೃಭಾಷಾ ದಿನವಾದ ಫೆ.21 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಸತ್ಯಾಗ್ರಹ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಅಂದು ಬೆಳಗ್ಗೆ 10.30 ಗಂಟೆಯಿoದ 11.30 ರವರೆಗೆ ಸತ್ಯಾಗ್ರಹ ನಡೆಯಲಿದ್ದು, ಅತ್ಯಂತ ಸೂಕ್ಷ್ಮ ಜನಾಂಗವಾಗಿರುವ ಕೊಡವರ ಮಾತೃಭಾಷೆ ಕೊಡವ ತಕ್ ಗೆ ಸಂವಿಧಾನದ ಭದ್ರತೆ ನೀಡಬೇಕೆಂದು ಒತ್ತಾಯಿಸಿ ಸರ್ಕಾರದ ಗಮನ ಸೆಳೆಯಲಾಗುವುದೆಂದು ತಿಳಿಸಿದ್ದಾರೆ. ಕೊಡವ ಭಾಷೆಯನ್ನು ಅಧಿಕೃತವೆಂದು ಘೋಷಿಸಿ ಕೊಂಕಣಿ ಭಾಷೆಯ ಮಾದರಿಯಲ್ಲಿ ರಾಜ್ಯದ 3ನೇ ಆಡಳಿತ ಭಾಷೆಯನ್ನಾಗಿ ಮಾಡಬೇಕು. ಸಂವಿಧಾನದ 345, 350, 350 ಎ, 350 ಬಿ ವಿಧಿಯಡಿ 1ನೇ ತರಗತಿಯಿಂದಲೇ ಪಠ್ಯಕ್ರಮದಲ್ಲಿ ಕೊಡವ ತಕ್ ನ್ನು ಕಡ್ಡಾಯಗೊಳಿಸಬೇಕು. ವಿಶ್ವಸಂಸ್ಥೆಯ ಅಧಿಕೃತ ಭಾಷೆ ಎಂದು ಘೋಷಿಸಬೇಕು, ಪ್ರಾಚೀನ ಅಂತರರಾಷ್ಟ್ರೀಯ ವಿಶ್ವವಿದ್ಯಾಲಯದಲ್ಲಿ ಕೊಡವ ತಕ್ ಅಧ್ಯಯನ ಪೀಠ ಸ್ಥಾಪಿಸಬೇಕು. ರಾಜ್‌ಗೀರ್‌ನ ನಳಂದಾ, ಟೋಕಿಯೊದ…
ಮಡಿಕೇರಿ ಫೆ.10 : ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಠ ವೇತನ ನಿಗಧಿ ಮಾಡಬೇಕು ಸೇರಿದಂತೆ ಕಾರ್ಮಿಕರ ವಿವಿಧ ಬೇಡಿಕೆಗಳಿಗೆ ಕರ್ನಾಟಕ ರಾಜ್ಯ ಸರ್ಕಾರ ಮಂಡಿಸುವ ಬಜೆಟ್‌ನಲ್ಲಿ ಆದ್ಯತೆ ನೀಡಬೇಕೆಂದು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಕೊಡಗು ಜಿಲ್ಲಾ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಂಘಟನೆಯ ಪ್ರಮುಖರು ಹಾಗೂ ಕಾರ್ಯಕರ್ತರು, ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಮಾತನಾಡಿ, ಸಂಪತ್ತನ್ನು ಸೃಷ್ಟಿಸುವ ಭೌತಿಕ-ದೈಹಿಕ ಶ್ರಮಿಕರು ಬಂಡವಾಳಗಾರರ ಪರವಾಗಿ ರೂಪಿತವಾದ ನೀತಿಗಳಿಂದ ಹಲವು ರೀತಿಯಲ್ಲಿ ಸಂಕಷ್ಟಕ್ಕೊಳಗಾಗಿದ್ದಾರೆ. ಕೆಲಸದ ಭದ್ರತೆಗಿಂತ ಉದ್ದಿಮೆಗಳ ಭದ್ರತೆ ಆದ್ಯತೆಯಾಗಿದೆ. ಉದ್ಯೋಗಗಳಿಗೆ ದೀರ್ಘಾವಧಿಯ ಭದ್ರತೆ ಇಲ್ಲದಂತಾಗಿದೆ. ಮುಷ್ಕರದ ಹಕ್ಕು ಮತ್ತು ಸಾಮೂಹಿಕ ಚೌಕಾಸಿಯ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ ಎಂದು ಆರೋಪಿಸಿದರು. ::: ಬೇಡಿಕೆಗಳು ::: ಎಲ್ಲಾ ರೀತಿಯ ಶ್ರಮಿಕ ಜೀವಿಗಳ ಕನಿಷ್ಠ ವೇತನವನ್ನು ಬೆಲೆಯೇರಿಕೆಯ ಆಧಾರದಲ್ಲಿ 31 ಸಾವಿರ ರೂ.ಗಳೆಂದು ನಿಗಧಿ ಮಾಡಬೇಕು. ಕೇಂದ್ರದ…






