ಮಡಿಕೇರಿ ಫೆ.9 : ತಾಳತ್ತಮನೆಯ ಶ್ರೀ ದುರ್ಗಾಭಗವತಿ ದೇವಾಲಯದಲ್ಲಿ ಫೆ.11 ಮತ್ತು 12 ರಂದು ಮಹಾಗಣಪತಿ ಹಾಗೂ ನಾಗ ಪರಿವಾರ ದೇವತೆಗಳ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಲಿದೆ. ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿಗಳ ನೇತೃತ್ವದಲ್ಲಿ ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳು ಜರುಗಲಿದೆ. ಫೆ.11 ರಂದು ಸಂಜೆ 5 ಗಂಟೆಗೆ ಹಸಿರು ಹೊರೆಕಾಣಿಕೆ, ಉಗ್ರಾಣ ಪೂಜೆ ನಡೆಯಲಿದ್ದು, ಸಂಜೆ 6 ಗಂಟೆಗೆ ಮಡಿಕೇರಿಯ ಶ್ರೀ ರಾಮಾಂಜನೇಯ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಹಾಗೂ 7.30 ಗಂಟೆಗೆ ದೀಪಾರಾಧನೆ, ಮಹಾಪೂಜೆ ಮತ್ತು ಅನ್ನ ಸಂತರ್ಪಣೆ ನೆರವೇರಲಿದೆ. ಫೆ.12 ರಂದು ಬೆಳಿಗ್ಗೆ 8 ಗಂಟೆಯಿಂದ ಪುಣ್ಯಾಹವಾಚನ, ಗಣಪತಿ ಹೋಮ, ಕಲಶ ಪೂಜೆ, ನಾಗತಂಬಿಲ, ಗುಳಿಗ, ಚಾಮುಂಡಿ ತಂಬಿಲ, ಮಹಾಪೂಜೆ ಮತ್ತು ಅನ್ನದಾನ ನೆರವೇರಲಿದ್ದು, ಸಂಜೆ 5.30 ರಿಂದ ರಂಗಪೂಜೆ, 7 ಗಂಟೆಯಿಂದ ದೇವರ ಬಲಿ ಉತ್ಸವ, ಮಹಾದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ,…
ಲೇಖಕ: admin
ಮಡಿಕೇರಿ ಫೆ.9 : ನಗರದ ಗಾಂಧಿ ಮೈದಾನದಲ್ಲಿ ಫೆ.15 ರವರೆಗೆ ಏರ್ಪಡಿಸಲಾಗಿರುವ ‘ಕಾವೇರಿ ವಸ್ತ್ರಸಿರಿ’ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಕರ್ನಾಟಕ ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ ಅವರು ಗುರುವಾರ ಚಾಲನೆ ನೀಡಿದರು. ಜವಳಿ ಅಭಿವೃದ್ಧಿ ಆಯುಕ್ತ್ತಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೈಮಗ್ಗ ಮತ್ತು ಜವಳಿ ಇಲಾಖೆ ಇವರ ಸಹಕಾರದಲ್ಲಿ ಏರ್ಪಡಿಸಲಾಗಿರುವ ‘ಕಾವೇರಿ ವಸ್ತ್ರಸಿರಿ’ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ನಾಪಂಡ ರವಿಕಾಳಪ್ಪ ಅವರು ರಾಷ್ಟ್ರದಲ್ಲಿ ಹಿಂದಿನಿಂದಲೂ ಕೈಮಗ್ಗದಿಂದ ಉತ್ಪಾದಿಸಿದ ಬಟ್ಟೆಗಳನ್ನು ಧರಿಸುತ್ತಾ ಬರಲಾಗಿದೆ. ಆ ನಿಟ್ಟಿನಲ್ಲಿ ಗುಡಿ ಮತ್ತು ಸಣ್ಣ ಕೈಗಾರಿಕೆಗೆ ಒತ್ತು ನೀಡಲಾಗಿದೆ ಎಂದರು. ಸಣ್ಣ ಮತ್ತು ಗುಡಿ ಕೈಗಾರಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡುವ ನಿಟ್ಟಿನಲ್ಲಿ ಸರ್ಕಾರ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಿದ್ದು, ಜಿಲ್ಲೆಯ ಜನತೆ ಇದರ ಸದುಪಯೋಗ ಪಡಿಸಿಕೊಳ್ಳುವಂತಾಗಬೇಕು ಎಂದು…
ಮಡಿಕೇರಿ ಫೆ.9 : ಮಡಿಕೇರಿ- ಚೆಟ್ಟಳ್ಳಿ- ಕತ್ತಲೆಕಾಡು ಮುಖ್ಯ ರಸ್ತೆಯ ಅವ್ಯವಸ್ಥೆಯಿಂದ ಅಪಘಾತಗಳು ಸಂಭವಿಸುತ್ತಿದ್ದು, ಸಾವಿನ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಜನಪರ ಹೋರಾಟ ಸಮಿತಿಯ ಅಧ್ಯಕ್ಷ ಬಲ್ಲಾರಂಡ ಮಣಿಉತ್ತಪ್ಪ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅತ್ಯಂತ ಕಡಿದಾದ ಈ ರಸ್ತೆ ಪ್ರತಿ ಮಳೆಗಾಲದಲ್ಲಿ ಕುಸಿಯುತ್ತಿದೆ, ಬರೆಗಳು ಜರಿಯುತ್ತಿದೆ. ರಸ್ತೆ ತುಂಬಾ ಹೊಂಡ ಗುಂಡಿಗಳಿವೆ. ಇದರ ನಡುವೆ ಕೇಬಲ್ ಅಳವಡಿಸಲು ಅವೈಜ್ಞಾನಿಕ ಮಾದರಿಯಲ್ಲಿ ಚರಂಡಿಗಳನ್ನು ತೋಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೇಬಲ್ ಅಳವಡಿಸಲು ತೋಡುವ ಅವೈಜ್ಞಾನಿಕ ಚರಂಡಿಗಳಿಂದಲೇ ಅಪಘಾತಗಳು ಸಂಭವಿಸುತ್ತಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಈಗಾಗಲೇ ಮೂವರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಬುಧವಾರ ಲೋಕೇಶ್ ಎಂಬುವವರು ಅಪಘಾತದಲ್ಲಿ ಸಾವನ್ನಪ್ಪಿದ್ದು, ಸಂಬಂಧಿಸಿದ ಕೇಬಲ್ ಸಂಸ್ಥೆ ಆತನ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ಜಿಲ್ಲೆಯ ಇಬ್ಬರು ಶಾಸಕರು ಹಾಗೂ ಜಿಲ್ಲಾಧಿಕಾರಿಗಳಿಗೆ ರಸ್ತೆ ಅವ್ಯವಸ್ಥೆ ಬಗ್ಗೆ ಮನವಿ ಸಲ್ಲಿಸಿ ದುರಸ್ತಿಗಾಗಿ ಒತ್ತಾಯಿಸಲಾಗಿದೆ. ರಸ್ತೆ ಅಭಿವೃದ್ಧಿಗೆ 12 ಕೋಟಿ ರೂ. ಮಂಜೂರಾಗಿದೆ ಎಂದು ಶಾಸಕರು ಮಾಹಿತಿ ನೀಡಿದ್ದಾರೆ. ಆದರೆ…
ಮಡಿಕೇರಿ ಫೆ.9 : ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗಳು ಪ್ರಕಟಗೊಂಡಿದ್ದು, ಕೊಡಗಿನ ಮೂವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜಿಲ್ಲೆಯ ಶಕ್ತಿ ಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ. ಅನಂತಶಯನ, ಪೂಮಾಲೆ ಕೊಡವ ವಾರಪತ್ರಿಕೆಯ ಸಂಪಾದಕ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಹಿರಿಯ ಛಾಯಾಗ್ರಾಹಕ ಕೊಡಗು ಮೂಲದ ನಾಗೇಶ್ ಪಾಣತ್ತಲೆ ಅವರಿಗೆ ಪ್ರಶಸ್ತಿಗಳು ಸಂದಿವೆ. ರಾಜ್ಯಾದ್ಯಂತ 124 ಪತ್ರಕರ್ತರನ್ನು ಮಾಧ್ಯಮ ಅಕಾಡೆಮಿಯು ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ತಿಳಿಸಿದ್ದಾರೆ.
ಶನಿವಾರಸಂತೆ ಫೆ.9 : ಸಂಸ್ಕೃತಿಯ ಮಿಲನವಾಗಿದ್ದ ಗ್ರಾಮೀಣ ಸೊಗಡಿನ ಜಾತ್ರೋತ್ಸವಗಳು ಪ್ರಸ್ತುತ ದಿನಗಳಲ್ಲಿ ಮೋಜು ಮಸ್ತಿ ಮಾಡುವ ಸ್ಥಳವಾಗುತ್ತಿರುವುದು ಕಳವಳಕಾರಿಯ ವಿಷಯವಾಗಿದೆ ಎಂದು ಹಾಸನ ಆದಿ ಚುಂಚನಗಿರಿ ಶಾಖಾ ಮಠದೀಶ ಶ್ರೀ ಸಂಭುನಾಥಸ್ವಾಮೀಜಿ ವಿಷಾದಿಸಿದರು. ಗುಡುಗಳಲೆ ಜಾತ್ರಾ ಮೈದಾನದಲ್ಲಿರುವ ಶ್ರೀ ಜಯದೇವ ಜಾತ್ರಾ ಕಲಾ ವೇದಿಕೆಯಲ್ಲಿ 79ನೇ ಗುಡುಗಳಲೆ ಶ್ರೀ ಜಯದೇವ ಜಾನುವಾರುಗಳ ಜಾತ್ರೆಯ ಸಮಾರೋಪ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚಿಸಿದರು. ಗ್ರಾಮೀಣ ಪ್ರದೇಶದಲ್ಲಿ ಜಾತ್ರೋತ್ಸವಗಳಂತಹ ಸಂಸ್ಕೃತಿಯನ್ನು ಕಾಪಾಡಿಕೊಂಡು ಬರುತ್ತಿದ್ದು, ಗ್ರಾಮೀಣ ಭಾಗದ ರೈತಾಪಿ ಜನರು ವರ್ಷಪೂರ್ತಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುತ್ತಾರೆ. ವರ್ಷಕೊಮ್ಮೆ ರೈತರು ಜಾತ್ರೆಗಳನ್ನು ಹಬ್ಬದ ರೀತಿಯಲ್ಲಿ ಆಚರಿಸುತ್ತಾರೆ. ಇದು ಜನರು, ರೈತರು ಸೇರಿವ ಸಾಂಸ್ಕೃತಿಕ ವ್ಯವಸ್ಥೆಯಾಗಿತ್ತು. ಆದರೆ ಇಂದು ಜಾತ್ರೋತ್ಸವಗಳನ್ನು ಮೋಜುವಿನ ವ್ಯವಸ್ಥೆಯನ್ನಾಗಿ ಮಾರ್ಪಡಿಸಿರುವುದು ವಿಷಾದನೀಯ ಎಂದರು. ಜಾತ್ರೆಗಳಲ್ಲಿ ಎಲ್ಲಾ ಜಾತಿ ಜನಾಂಗದವರು ಒಟ್ಟಾಗಿ ಸೇರುವ, ವೈವಿಧ್ಯತೆ, ರಥೋತ್ಸವ, ಸಂಸ್ಕೃತಿಯನ್ನು ಸಮ್ಮೀಲನಗೊಳಿಸುವ ಕೇಂದ್ರವಾಗಿದೆ. ಆದರೆ ಇಂದು ನಶಿಸುತ್ತಿರುವ ಜಾತ್ರೋತ್ಸವಗಳನ್ನು ಉಳಿಸಲು ಇಂದಿನ ಪೀಳಿಗೆ ಪ್ರಯತ್ನಿಸಿದರೆ ಮಾತ್ರ ಜಾತ್ರೆಯಂತಹ ಸಂಸ್ಕೃತಿ ಉಳಿಯಲು…
ಮಡಿಕೇರಿ ಫೆ.9 : ದಕ್ಷಿಣ ಕೊಡಗಿನ ಕಿರುಗೂರು ಗ್ರಾ.ಪಂ ವ್ಯಾಪ್ತಿಯ ಹೊಳೆಕೆರೆ ಭಾಗದ ಹೊಳೆಗೆ ಸೇತುವೆ ಮತ್ತು ತಡೆಗೋಡೆ ನಿರ್ಮಾಣಕ್ಕೆ 3.65 ಕೋಟಿ ರೂ. ಮಂಜೂರಾಗಿದೆ ಎಂದು ಗ್ರಾ.ಪಂ ಸದಸ್ಯ ಚೆಪ್ಪುಡಿರ ರಾಕೇಶ್ ದೇವಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹಳೆಯ ಸೇತುವೆ ಕುಸಿದು ಸಂಚಾರಕ್ಕೆ ಅಡಚಣೆಯಾಗಿದೆ ಎಂದು ಕೆಲವರು ಇತ್ತೀಚೆಗೆ ಪ್ರತಿಭಟನೆ ನಡೆಸಿದ್ದರು. ಆದರೆ ನೂತನ ಸೇತುವೆ ನಿರ್ಮಾಣಕ್ಕೆ ಈಗಾಗಲೇ ಯೋಜನೆ ತಯಾರಿಸಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಈಗಾಗಲೇ ಚರ್ಚಿಸಲಾಗಿದೆ. ಶಾಸಕ ಕೆ.ಜಿ.ಬೋಪಯ್ಯ ಅವರು ಸೇತುವೆ ಮತ್ತು ತಡೆಗೋಡೆ ಕಾಮಗಾರಿಯ ವರದಿಯನ್ನು ಮುಖ್ಯಮಂತ್ರಿಗಳ ಕಚೇರಿಗೆ ತಲುಪಿಸಿದ್ದು, ಅನುಮೋದನೆ ದೊರೆತು ಹಣ ಮಂಜೂರಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಗ್ರಾಮಸ್ಥರ ಸಮಸ್ಯೆಗಳಿಗೆ ಗ್ರಾ.ಪಂ ಪ್ರಾಮಾಣಿಕವಾಗಿ ಸ್ಪಂದಿಸುತ್ತಿದ್ದು, ಹಳೆಯ ಸೇತುವೆ ಕುಸಿದಿರುವ ಬಗ್ಗೆ ನಮಗೂ ಬೇಸರವಿದೆ. ಹೊಳೆಯಿಂದ ನಿಯಮ ಬಾಹಿರವಾಗಿ ಮರಳು ತೆಗೆದಿರುವುದೇ ಸೇತುವೆ ಕುಸಿಯಲು ಕಾರಣ ಎಂದು ಆರೋಪಿಸಿರುವ ರಾಕೇಶ್ ದೇವಯ್ಯ, ಯಾರೂ ಸೇತುವೆ ವಿಚಾರದಲ್ಲಿ ಗೊಂದಲ ಸೃಷ್ಟಿಸಬಾರದು, ಅಲ್ಲದೆ ಇಲ್ಲಿರುವುದು ಪೈಸಾರಿ ಜಾಗ…
ಮಡಿಕೇರಿ ಫೆ.9 : ವಿರಾಜಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ವಿಎಫ್4 ಬೇತ್ರಿ, ವಿಎಫ್5 ಪಾಲಂಗಾಲ ಫೀಡರ್‍ನಲ್ಲಿ ‘ಎಬಿ’ ಕೇಬಲ್ ಅಳವಡಿಸುವ ಕಾಮಗಾರಿಯನ್ನು ನಿರ್ವಹಿಸಬೇಕಿರುವುದರಿಂದ ಫೆ.10 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಕುಕ್ಲೂರು, ಬೇತ್ರಿ, ಕದನೂರು, ಕಾಕೋಟುಪರಂಬು, ನಾಲ್ಕೇರಿ, ಕಡಂಗಮರೂರು, ಕೆದಮಳ್ಳೂರು, ಪಾಲಂಗಾಲ, ಬೇಟೋಳಿ, ಗುಂಡಿಗೆರೆ, ಚಿಟ್ಟಾಡೆ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಫೆ.9 : ಮಡಿಕೇರಿಯ ನೋಂದಾಯಿತ ಕಟ್ಟಡ ಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಶಾಲಾ ಕಿಟ್‍ಗಳನ್ನು ಕಾರ್ಮಿಕ ಮಂಡಳಿಯ ಅರ್ಹ ನೋಂದಾಯಿತ ಕಾರ್ಮಿಕರ ಮಕ್ಕಳ ಪೈಕಿ 6 ರಿಂದ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ವಿತರಣೆ ಮಾಡಲಾಗುತ್ತದೆ. ಬರುವಂತ ಶಾಲಾ ಕಿಟ್‍ಗಳನ್ನು ಆದ್ಯತೆ ಮೇರೆಗೆ 8 ನೇ ತರಗತಿ ಮಕ್ಕಳಿಗೆ ವಿತರಣೆ ಮಾಡಲು ಕ್ರಮವಹಿಸಲಾಗುತ್ತದೆ. ಫಲಾನುಭವಿಯ ಗರಿಷ್ಠ 02 ಮಕ್ಕಳಿಗೆ ಮಾತ್ರ ಈ ಸೌಲಭ್ಯವನ್ನು ನೀಡಲಾಗುತ್ತಿದ್ದು. ಮೊದಲ ಹಂತದಲ್ಲಿ 01 ಮಗುವಿಗೆ ಮಾತ್ರ ಈ ಸೌಲಭ್ಯ ನೀಡಿ ಇತರೆ ಎಲ್ಲಾ ಮಕ್ಕಳಿಗೆ ಸೌಲಭ್ಯ ದೊರೆತ ನಂತರ ಶಾಲಾಕಿಟ್‍ಗಳು ಲಭ್ಯವಿದ್ದಲ್ಲಿ, 2 ನೇ ಮಗುವಿಗೆ ಸೌಲಭ್ಯ ಒದಗಿಸಲಾಗುವುದು. ಪತಿ ಮತ್ತು ಪತ್ನಿ ಇಬ್ಬರು ನೋಂದಾಯಿತ ಕಾರ್ಮಿಕರಾಗಿದ್ದಲ್ಲಿ ಗರಿಷ್ಠ ಎರಡು ಮಕ್ಕಳಿಗೆ ಮಾತ್ರ ಮೇಲಿನ ಕ್ರಮದಲ್ಲೇ ವಿತರಿಸಲು ಕ್ರಮವಹಿಸಲಾಗುತ್ತದೆ ಹೀಗಾಗಿ ಇಬ್ಬರಲ್ಲಿ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. 10 ದಿನಗಳೊಗೆ ಅರ್ಜಿಯನ್ನು ತಾಲ್ಲೂಕು ಕಾರ್ಮಿಕ ಇಲಾಖೆ ಕಚೇರಿಗೆ ಸಲ್ಲಿಸುವಂತೆ ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ…
ಮಡಿಕೇರಿ ಫೆ.9 : ಕರುನಾಡ ಜನತೆಯ ಆರೋಗ್ಯ ರಕ್ಷಕ ಆಯುಷ್ಮಾನ್ ಭಾರತ್-ಪ್ರಧಾನಮಂತ್ರಿ ಜನಾರೋಗ್ಯ ಆರೋಗ್ಯ ಕರ್ನಾಟಕ ಯೋಜನೆಯಡಿ ಪ್ರಯೋಜನ ಪಡೆಯಲು ಆಯುಷ್ಮಾನ್ ಕಾರ್ಡ್ ಮಾಡಿಸಿ. ಆಯುಷ್ಮಾನ್ ಕಾರ್ಡ್‍ಗಳನ್ನು ಹತ್ತಿರದ ಗ್ರಾಮ ಒನ್‍ನಿಂದ ರೇಷನ್‍ಕಾರ್ಡ್ ಲಿಂಕ್ ಆಗಿರುವ ಆಧಾರ್ ಕಾರ್ಡ್ ನೀಡಿ ಉಚಿತವಾಗಿ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಅವರು ಕೋರಿದ್ದಾರೆ. ಆಯುಷ್ಮಾನ್ ಕಾರ್ಡ್ ಹೊಂದಿರುವ ಬಿಪಿಎಲ್ ಫಲಾನುಭವಿಗಳಿಗೆ ವರ್ಷಕ್ಕೆ 5 ಲಕ್ಷ ರೂ ವರೆಗೂ ಎಪಿಎಲ್ ಫಲಾನುಭವಿಗಳಿಗೆ 1.50 ಲಕ್ಷ ದವರೆಗೂ ಸಹ ಪಾವತಿ ಆಧಾರದಲ್ಲಿ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಸಂಸ್ಥೆಗೆ ಭರಿಸಲಿದೆ. ಈ ಕಾರ್ಡ್‍ನ ನೆರವಿನಿಂದ ದೇಶದಲ್ಲಿ ಎಲ್ಲೇ ಇದ್ದರೂ ಉಚಿತವಾಗಿ ಚಿಕಿತ್ಸೆ ಪಡೆಯಲು ಪೋರ್ಟಬಿಲಿಟಿ ಸೌಲಭ್ಯವಿದೆ. ತುರ್ತು ಸಂದರ್ಭದಲ್ಲಿ 171 ಚಿಕಿತ್ಸಾ ವಿಧಾನಗಳಿಗೆ ರೋಗಿಯು ನೇರವಾಗಿ ಸರ್ಕಾರಿ ಅಥವಾ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ರೆಫರಲ್ ಅವಶ್ಯಕತೆ ಇರುವುದಿಲ್ಲ. ಈ ಕಾರ್ಡ್‍ನ್ನು 14 ಸಂಖ್ಯೆಯ ಆಭಾ ಹೆಲ್ತ್ ಐಡಿಯೊಂದಿಗೆ ಸಂಯೋಜಿಸಲಾಗಿದೆ. ಕಾರ್ಡ್ ಇದ್ದರೂ…
ಮಡಿಕೇರಿ ಫೆ.9 : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಪ್ರಶಸ್ತಿ ಪಡೆದ ಸಂಸ್ಥೆಯ ಸಾಧಕರನ್ನು ಗುರುವಾರ ಸನ್ಮಾನಿಸಲಾಯಿತು. ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಸಂಸ್ಥೆಯ ಉಪಾಧ್ಯಕ್ಷರು ಮತ್ತು ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ, ನಾಡ ಪೆದ ಆಶಾ ಚಿತ್ರದ ಅಭಿನಯಕ್ಕೆ ಅತ್ಯುತ್ತಮ ನಾಯಕ ನಟ ಪ್ರಶಸ್ತಿ ಪುರಸ್ಕೃತರಾದ ಜಿಲ್ಲಾ ಸಂಸ್ಥೆಯ ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ ಹಾಗೂ ಗ್ರಾಮೀಣ ಶಿಕ್ಷಕ ರತ್ನ ಪ್ರಶಸ್ತಿ ಪುರಸ್ಕೃತರಾದ ಸಂಸ್ಥೆಯ ಶಿಕ್ಷಕ ಟಿ.ಕೆ.ವಾಮನ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿಮ್ಯಾಥ್ಯೂ, ಸ್ಥಾನಿಕ ಆಯುಕ್ತ ಎಚ್.ಆರ್.ಮುತ್ತಪ್ಪ, ಜಿಲ್ಲಾ ತರಬೇತಿ ಆಯುಕ್ತ ಮೈಥಿಲಿ ರಾಜ್, ಜಿಲ್ಲಾ ಖಜಾಂಚಿ ಪುಷ್ಪವೇಣಿ, ಮಡಿಕೇರಿ ಸ್ಥಳೀಯ ಸಂಸ್ಥೆ ಮುಖ್ಯಸ್ಥರಾದ ನೀಲಮ್ಮ ಮತ್ತು ತಂಗಮ್ಮ, ಜಿಲ್ಲಾ ಸಂಸ್ಥೆ ಮಾಜಿ ಕಾರ್ಯದರ್ಶಿ ಡೀಝಿ, ಸಂಪಾಜೆ ಸ್ಥಳೀಯ ಸಂಸ್ಥೆಯ ಸಹ ಕಾರ್ಯದರ್ಶಿ ಕೆ.ಯು.ರಂಜಿತ್, ಜಿಲ್ಲಾ ಕಾರ್ಯದರ್ಶಿ ಎಂ.ಎಂ.ವಸಂತಿ, ಪೊನ್ನಂಪೇಟೆ…






