ಮಡಿಕೇರಿ ಫೆ.9 : ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಡಿಕೇರಿ ಐ ಸ್ಟೋರ್ ಮೊಬೈಲ್ ಶೋರೂಂ ಸಂಯುಕ್ತ ಆಶ್ರಯದಲ್ಲಿ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ ಹಾಗೂ ಮಡಿಕೇರಿ ಸ್ನೇಹಿತರ ಬಳಗ, ರಕ್ತನಿಧಿ ಘಟಕದ ಸಹಯೋಗದಲ್ಲಿ ಮಾದಕ ವಸ್ತುಗಳ ನಿಯಂತ್ರಣದ ಬಗ್ಗೆ ಜನ ಜಾಗೃತಿ ಜಾಥ ಹಾಗೂ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ. ಫೆ.13 ರಂದು ಬೆಳಗ್ಗೆ 10 ಗಂಟೆಗೆ ನಗರದ ಎ.ವಿ.ಶಾಲೆಯಿಂದ ಸರ್ಕಾರಿ ಜಿಲ್ಲಾ ಆಸ್ಪತ್ರೆ ವರೆಗೆ ರಕ್ತ ಹಾಗೂ ಮಾದಕ ವಸ್ತುಗಳ ನಿಯಂತ್ರಣದ ಬಗ್ಗೆ ಜನ ಜಾಗೃತಿ ಜಾಥ ಹಮ್ಮಿಕೊಳ್ಳಲಾಗಿದೆ. ಪುಲ್ವಾಮಾ ದುರಂತದಲ್ಲಿ ಮೃತಪಟ್ಟ ಯೋಧರ ಸ್ಮರಣಾರ್ಥ ಫೆ.14 ರಂದು ಬೆಳಗ್ಗೆ 10 ಗಂಟೆಯಿಂದ 3 ಗಂಟೆ ವರೆಗೆ ಮಡಿಕೇರಿಯ ಬಾಲಭವನದಲ್ಲಿ ರಕ್ತದಾನ ಶಿಬಿರ ನಡೆಯಲಿದೆ. ಹೆಚ್ಚಿನ ಮಾಹಿತಿಗೆ 7760830077, 97318 98768, 95359 04296, 9900201001 ಸಂಪರ್ಕಿಸಬಹುದಾಗಿದೆ.
ಲೇಖಕ: admin
ಕುಶಾಲನಗರ ಫೆ.9 : ವಾಲ್ನೂರು-ತ್ಯಾಗತ್ತೂರು ಗ್ರಾ.ಪಂ ವ್ಯಾಪ್ತಿಯ ಅಭ್ಯತ್ ಮಂಗಲ ವಾರ್ಡ್ ಗೆ ಸೇರಿದ ಮುಖ್ಯ ರಸ್ತೆಯ ಪಕ್ಕದಲ್ಲಿ ಅನಧಿಕೃತವಾಗಿ ಕಸ ಸುರಿದವರಿಗೆ ಗ್ರಾ.ಪಂ ಯಿಂದ ರೂ.10 ಸಾವಿರ ದಂಡ ವಿಧಿಸಲಾಯಿತು. ಕಸದ ರಾಶಿಯ ಬಗ್ಗೆ ಸಾರ್ವಜನಿಕರಿಂದ ಬಂದ ಖಚಿತ ಮಾಹಿತಿಯ ಮೇರೆಗೆ ಜನಪ್ರತಿನಿಧಿಗಳು ಮತ್ತು ಗ್ರಾ.ಪಂ ಸಿಬ್ಬಂದಿ ಹಾಗೂ ನೌಕರರೊಡನೆ ಕಾರ್ಯಾಚರಣೆ ನಡೆಸಿ ಕಸದಲ್ಲಿ ದೊರೆತ ಮೊಬೈಲ್ ಸಂಖ್ಯೆಯನ್ನು ಆಧರಿಸಿ ಸಂಬಂಧಪಟ್ಟವರಿಗೆ ದಂಡವನ್ನು ವಿಧಿಸಲಾಯಿತು.
ಮಡಿಕೇರಿ ಫೆ.9 : ಮಾದಾಪುರ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಗ್ರಾಮಾಭಿವೃದ್ಧಿ ಯುವಕ ಸಂಘದ ರಜತ ಮಹೋತ್ಸವ ಹಾಗೂ ಕೆ.ಎಂ.ಕಾರ್ಯಪ್ಪ ಅವರ ಜನ್ಮದಿನಾಚರಣೆ ಅಂಗವಾಗಿ ಫೆ.11 ಮತ್ತು 12 ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಕ್ರೀಡಾ ಕೂಟ ನಡೆಯಲಿದೆ ಎಂದು ಸಂಘದ ಮಾಜಿ ಅಧ್ಯಕ್ಷ ಎಂ.ಎ.ಮಜೀದ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.11ರಂದು ಬೆಳಗ್ಗೆ 9 ಗಂಟೆಗೆ ಸಂಘದ ಅಧ್ಯಕ್ಷ ಕೆ.ಜೆ.ಅಂತೋಣಿ ಅವರ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು. ಕಾರ್ಯಕ್ರಮದ ಮೆರವಣಿಯ ಉದ್ಘಾಟನೆಯನ್ನು ಗರಗಂದೂರು ಗ್ರಾಮದ ಎಂ.ಆರ್.ರಾಜನ್ ನೆರವೇರಿಸಲಿದ್ದು, ಕ್ರೀಡಾ ಉದ್ಘಾಟನೆಯನ್ನು ಕಾಫಿ ಬೆಳೆಗಾರ ನಂದ ಬೆಳ್ಯಿಯಪ್ಪ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ನಿರ್ಮಲಮಾತೆ ದೇವಾಲಯದ ಧರ್ಮಗುರು ರಾಜೇಶ್, ಪ್ರಮುಖರಾದ ಗೌತಮ್ ಬಸಪ್ಪ, ಬಿ.ಎ.ಮೊಣ್ಣಪ್ಪ, ಮಾದಾಪುರ ಗ್ರಾ.ಪಂ ಅಧ್ಯಕ್ಷ ನಿರೂಪ ಹರೀಶ್ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಸಾಂಸ್ಕೃತಿಕ ಮತ್ತು ಸನ್ಮಾನ ಕಾರ್ಯಕ್ರಮವನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೆ.ಜೆ.ಅಂತೋಣಿ ವಹಿಸಲಿದ್ದಾರೆ. ವಿಧಾನ…
ಚೆಯ್ಯಂಡಾಣೆ ಫೆ. 9 : ಹುತಾತ್ಮ ವೀರ ಯೋಧ ಅಲ್ತಾಫ್ ಒಂದನೇ ವರ್ಷದ ಸ್ಮರಣಾರ್ಥ ಫೆ. 11 ಹಾಗೂ 12 ರಂದು ಚೆಯ್ಯಂಡಾಣೆಯಲ್ಲಿ ಎಡಪಾಲ ಪ್ರಿಮಿಯರ್ ಲೀಗ್ ಸೀಸನ್ – 9 ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದು ಇಪಿಎಲ್ ಪಂದ್ಯದ ಸ್ಥಾಪಕ ಅಧ್ಯಕ್ಷ ಹನೀಫ್ ತಿಳಿಸಿದ್ದಾರೆ. ಸುದ್ದಿ ಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಚೆಯ್ಯಂಡಾಣೆ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು, ಒಟ್ಟು 8 ತಂಡಗಳಲ್ಲಿ 96 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದರು. ಚೆಯ್ಯ0ಡಾಣೆ ವ್ಯಾಪ್ತಿಗೆ ಒಳಪಟ್ಟ ನರಿಯಂದಡ, ಕೊಕೇರಿ, ಚೇಲಾವರ ಗ್ರಾಮಕ್ಕೆ ಒಳಪಟ್ಟ ಕ್ರೀಡಾಪಟುಗಳನ್ನು ಬಿಡ್ಡಿಂಗ್ ಮೂಲಕ ಆಯ್ಕೆ ಮಾಡಲಾಗಿದ್ದು, 8 ತಂಡಕ್ಕೆ ಲೀಗ್ ಮಾದರಿ ಪಂದ್ಯಾವಳಿ ನಡೆಯಲಿದೆ ಎಂದು ತಿಳಿಸಿದರು. ಔಟ್ ಲುಕ್ ಬ್ಲಾಸ್ಟರ್ಸ್, ಬ್ಲೂ ಹಿಗಲ್, ಸ್ಟಾರ್ ಕ್ರಿಕೆಟರ್ಸ್, ವಿಲೇಜ್ ಪ್ಯಾಂಥರ್ಸ್, ದಿಲ್ ದಾರ್, ರಾಯಲ್ ಚಾಲೆಂಜರ್ಸ್, ರಿಸಿಂಗ್ ಬಾಯ್ಸ್,ಸೈಲೆಂಟ್ ಕಿಲ್ಲರ್ ತಂಡಗಳು ಪೈಪೋಟಿ ನೀಡಲಿದ್ದು, ಪ್ರಥಮ ಬಹುಮಾನ 25 ಸಾವಿರ ನಗದು ಹಾಗೂ ಆಕರ್ಷಕ…
ಶನಿವಾರಸಂತೆ ಫೆ.9 : ಗೌಡಳ್ಳಿಯಲ್ಲಿ ಸೋಮವಾರಪೇಟೆ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇದರ ಸರ್ವಾಧ್ಯಕ್ಷರಾದ ಶನಿವಾರಸಂತೆ ಹೋಬಳಿ ಘಟಕದ ಜಾನಪದ ಪರಿಷತ್ತಿನ ಗೌರವಾಧ್ಯಕ್ಷರು ಹಾಗೂ ಪತ್ರಕರ್ತರಾದ ನಯನತಾರ ಪ್ರಕಾಶ್ ಚಂದ್ರ ಅವರನ್ನು ಶನಿವಾರ ಸಂತೆ ಹೋಬಳಿ ಜಾನಪದ ಪರಿಷತ್ ಘಟಕ ಹಾಗೂ ಶನಿವಾರಸಂತೆ ಪತ್ರಕರ್ತ ಮಿತ್ರರ ತಂಡದ ವತಿಯಿಂದ ಗೌರವಿಸಲಾಯಿತು. ನಂತರ ಮಾತನಾಡಿದ ನಯನತಾರ ಇದು ನನ್ನ ಸಾಹಿತ್ಯ ಕೃಷಿಗೆ ತಂದ ಗೌರವವಾಗಿದೆ. ಎಲ್ಲರ ಸಹಕಾರದಿಂದ ಸಮ್ಮೇಳನದ ಅಧ್ಯಕ್ಷತೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಚಿಂತನೆ ಇದೆ. ಸಾಹಿತ್ಯ ಪರಿಷತ್ತಿನ ಸರ್ವಸದಸ್ಯರು ಅವಿರೋಧವಾಗಿ ಆಯ್ಕೆಮಾಡಿರುವುದರಿಂದ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು. ಈ ಸಂದರ್ಭ ಶನಿವಾರಸಂತೆ ಜಾನಪದ ಪರಿಷತ್ ನ ಅಧ್ಯಕ್ಷೆ ಸುಜಲದೇವಿ, ಕಾರ್ಯದರ್ಶಿ ಚೆರಿಯಮನೆ ಸುರೇಶ್, ಪೂರ್ಣಿಮ ಕಿರಣ್, ಮಹಂತೇಶ್, ಪತ್ರಕರ್ತರಾದ ಬಾಸ್ಕರ್ ಮುಳ್ಳೂರು, ಧರಣಿ, ದಿನೇಶ್ ಮಾಲಂಬಿ ಹಾಜರಿದ್ದರು. ವರದಿ : ದಿನೇಶ್ ಮಾಲಂಬಿ (ಶನಿವಾರಸಂತೆ)
ಮಡಿಕೇರಿ ಫೆ.9 : ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಕೊಡಗು ಶಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ವಿರಾಜಪೇಟೆ ತಾಲ್ಲೂಕು ಮಟ್ಟದ ರಾಷ್ಟ್ರೀಯ ವಿಜ್ಞಾನ ಮತ್ತು ಗಣಿತ ದಿನಾಚರಣೆಯು ಪೊನ್ನಂಪೇಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢ ಶಾಲಾ ವಿಭಾಗ ದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿರಾಜಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶೈಲ ಬೀಳಗಿ, ವಿದ್ಯಾರ್ಥಿಗಳು ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಆಸಕ್ತಿ ಬೆಳೆಸಿಕೊಂಡು ಅಧ್ಯಯನ ಮಾಡಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥೆಯ ಖಜಾಂಚಿ ಡಾ. ಕೆ.ಎನ್. ಚಂದ್ರಶೇಖರ್ , ಯಾವುದನ್ನು ಪರಿಶೀಲಿಸದೆ ಒಪ್ಪಿಕೊಳ್ಳಬಾರದು. ಪ್ರಶ್ನಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಆಗ ಮಾತ್ರ ಕಲಿಕೆಯಲ್ಲಿ ಪ್ರಗತಿ ಹೊಂದಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರಯೋಜನಕಾರಿ ಆಗಲು ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ವತಿಯಿಂದ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು. ವಿರಾಜಪೇಟೆ ತಾಲ್ಲೂಕಿನ 17 ಶಾಲೆಗಳಿಂದ 122 ವಿದ್ಯಾರ್ಥಿಗಳು…
ಚೆಟ್ಟಳ್ಳಿ ಫೆ.9 : ಬಾಳುಗೋಡು ಫೆಡರೇಶನ್ ಆಫ್ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಾಸಿಕ ಸಭೆ ಸಮಾಜದ ಅಧ್ಯಕ್ಷರಾದ ಬಲ್ಲಣಮಾಡ ರೀಟಾ ಅಪ್ಪಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸನ್ಮಾನ : ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ಕೊಡಗಿನ ಜಾನಪದ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಕೂಟದ ಮಾಜಿ ಅಧ್ಯಕ್ಷೆ ಚಿರಿಯಪಂಡ ಇಮ್ಮಿ ಉತ್ತಪ್ಪ ಹಾಗೂ ಕೂಟದ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಕೂಟದ ಸದಸ್ಯೆಬೊಪ್ಪಂಡಬೊಳ್ಳಮ್ಮನಾಣಯ್ಯ ಮಾತನಾಡಿ , ಭಾರತ ದೇಶದಲ್ಲಿ ಸಾಧಕರಿಗೆ ನೀಡುವ ಪದ್ಮಶ್ರೀ ಪ್ರಶಸ್ತಿಯು ಈ ಬಾರಿ ಕೊಡಗಿನ ಸಂಸ್ಕೃತಿ, ಆಚಾರ, ವಿಚಾರವನ್ನು ದೇಶದುದ್ದಕ್ಕೂ ಪರಿಚಯಿಸಿದ ರಾಣಿಮಾಚಯ್ಯರಿಗೆ ನೀಡಿರುವುದು ಕೊಡಗಿಗೆ ಹೆಮ್ಮೆ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಣಿಮಾಚಯ್ಯ, ಈ ಪ್ರಶಸ್ತಿ ನನಗೆ ಮಾತ್ರವಲ್ಲ ನನ್ನೊಂದಿಗೆ ಕೈಜೋಡಿಸಿದ ಸಾವಿರಾರು ಹೆಣ್ಣು ಮಕ್ಕಳಿಗೆ ಸಲ್ಲಬೇಕು ಎಂದರು. ಈ ಸಂದರ್ಭ ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು. ಕಾರ್ಯದರ್ಶಿ ಚೇಂದಂಡ ಮೀನಾಸುಬ್ಬಯ್ಯ ವರದಿ ವಾಚಿಸಿ, ಲೆಕ್ಕ ಪತ್ರವನ್ನು ಖಜಾಂಚಿ ಕಳ್ಳಿಚಂಡಅಕ್ಕಮ್ಮ ಓದಿದರು.ಚೇಂದಂಡ…
ಸುಂಟಿಕೊಪ್ಪ ಫೆ.9 : ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷರಾಗಿ ವಿ.ಎಂ.ಶರೀಫ್, ಪ್ರಧಾನ ಕಾರ್ಯದರ್ಶಿಯಾಗಿ ಸಿ.ಎ.ಸಚಿನ್, ನೇಮಕಗೊಂಡಿದ್ದಾರೆ. ಕೊಡವ ಸಮಾಜದಲ್ಲಿ ಸಂಘದ ಅಧ್ಯಕ್ಷ ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಚುನಾವಣೆಯ ಮೂಲಕ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ವಿ.ಎಂ.ಮನು, ಜಿ.ಎಸ್.ಚಂದ್ರ, ಪ್ರಧಾನ ಕಾರ್ಯದರ್ಶಿಯಾಗಿ ಸಿ.ಎ.ಸಚಿನ್, ಖಜಾಂಚಿಯಾಗಿ ಯು.ಹರೀಶ್ ಚುನಾವಣೆಯ ಮೂಲಕ ಜಯಗಳಿಸಿದರು. ಸಹ ಕಾರ್ಯದರ್ಶಿಯಾಗಿ ಮಹಮ್ಮದ್ ಆಲಿ, ಸಹ ಖಜಾಂಚಿ ಕಲಂದರ್, ಗೌರವಾಧ್ಯಕ್ಷರುಗಳಾಗಿ ವಿನ್ಸಿ ಡಿಸೋಜ, ವಿಶ್ವನಾಥ್, ಹಸೈನರ್, ಸಂಘಟನಾ ಕಾರ್ಯದರ್ಶಿಗಳಾಗಿ ಸಂಶುದ್ಧೀನ್, ವಿಜೇಶ್, ನೌಶಾದ್, ಬಿ.ಕೆ.ರಂಜಿತ್, ಹೆಚ್.ಎಂ.ಅಶ್ರಫ್, ಸೆಲ್ವಿಸ್ಟರ್ ಡಿಸೋಜ, ಶರತ್, ಪ್ರಕಾಶ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಮಡಿಕೇರಿ ಫೆ.9 : ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ 2022-23 ನೇ ಸಾಲಿನಲ್ಲಿ ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ(ಹೊಸತು)ಯಡಿ ಸೇವಾಸಿಂಧು ಪೋರ್ಟಲ್ ಮುಖಾಂತರ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಪ್ರವರ್ಗ-2ಎ ನಲ್ಲಿ ಬರುವ ಸವಿತಾ ಮತ್ತು ಇದರ ಉಪ ಜಾತಿಗಳಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಒದಗಿಸಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಒಳಪಡುವ ಸವಿತಾ ಮತ್ತು ಇದರ ಉಪಜಾತಿಗಳಿಗೆ ಸೇರಿದ ಸಣ್ಣ ಮತ್ತು ಅತೀ ಸಣ್ಣ ರೈತರಾಗಿದ್ದು, ಹಾಲಿ ಜಮೀನುಗಳು ಖುಷ್ಕಿಯಾಗಿದ್ದು ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98 ಸಾವಿರ ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 1.20…
ಮಡಿಕೇರಿ ಫೆ.9 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ಇಲ್ಲಿನ ಗ್ರಂಥಾಲಯ ವತಿಯಿಂದ ಕರ್ನಾಟಕ ಆರೋಗ್ಯ ವಿಜ್ಞಾನಗಳ ಗ್ರಂಥಾಲಯಗಳ ಸಂಘ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಮತ್ತು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ 14 ನೇ ‘ರಾಷ್ಟ್ರೀಯ ಗ್ರಂಥಾಲಯ ಸಮ್ಮೇಳನವು’ ಫೆಬ್ರವರಿ, 10 ಮತ್ತು 11 ರಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ. ಫೆ.10 ರಂದು ಬೆಳಗ್ಗೆ 10 ಗಂಟೆಗೆ ‘ರಾಷ್ಟ್ರೀಯ ಗ್ರಂಥಾಲಯ ಸಮ್ಮೇಳನ’ಕ್ಕೆ ಚಾಲನೆ ದೊರೆಯಲಿದೆ. ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರಾದ ಡಾ.ಬಿ.ಎಲ್.ಸುಜಾತ ರಾಥೋಡ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಕುಲಸಚಿವರಾದ ಎ.ಬಿ.ಬಸವರಾಜು, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಳ್ಳಿಚಂಡ ಬಿ.ಕಾರ್ಯಪ್ಪ, ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ವಿಶ್ರಾಂತಿ ಕುಲಪತಿಗಳಾದ ಡಾ.ಟಿ.ಡಿ.ಕೆಂಪರಾಜು, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಾದ ಡಾ.ಬಿ.ಜೆ.ಮಹೇಂದ್ರ, ಆಡಳಿತಾಧಿಕಾರಿ ಎ. ಎಲ್.ಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ವೈದ್ಯಕೀಯ ಅಧೀಕ್ಷಕರಾದ ಡಾ.ರೂಪೇಶ್…






