ಮಡಿಕೇರಿ ಫೆ.9 : ಕೊಡಗು ಪತ್ರಕರ್ತರ ಸಂಘದ ವಾರ್ಷಿಕೋತ್ಸವ ಅಂಗವಾಗಿ ಫೆ.11ರಂದು ನಗರದ ಪೊಲೀಸ್ ಮೈದಾನದಲ್ಲಿ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಕೊಡಗು ಪತ್ರಕರ್ತರ ಸಂಘ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಕರ ಸಂಘ, ವಕೀಲರ ಸಂಘಗಳ ನಡುವೆ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾವಳಿ ನಡೆಯಲಿದ್ದು, ಪಂದ್ಯಾವಳಿಯನ್ನು ಸಮಾಜ ಸೇವಕ ನಾಪಂಡ ಮುತ್ತಪ್ಪ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಬಿ.ಸಿ.ಸತೀಶ, ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ.ಮುರಳೀಧರ್ ಅಧ್ಯಕ್ಷತೆ ವಹಿಸಲಿದ್ದು. ಸಂಘದ ಹಿರಿಯ ಸಲಹೆಗಾರ ಬಿ.ಜಿ ಅನಂತಶಯನ ಭಾಗವಹಿಸಲಿದ್ದು, ಕ್ರಿಕೆಟ್ ಪಂದ್ಯಾವಳಿಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ ಆಕರ್ಷಕ ಟ್ರೋಫಿಯನ್ನು ನೀಡಲಾಗುತ್ತದೆ ಎಂದು ಕೊಡಗು ಪತ್ರಕರ್ತರ ಸಂಗಡ ಕ್ರೀಡಾ ಸಮಿತಿಯ ಸಂಚಾಲಕ ಸುರೇಶ್ ಬಿಳಿಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೇಖಕ: admin
ವಿರಾಜಪೇಟೆ ಫೆ.8 : ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಯ ಎನ್.ಸಿ. ಸಿ ಹಾಗೂ ಇಕೋ ಕ್ಲಬ್ ಘಟಕದ ವಿದ್ಯಾರ್ಥಿಗಳು ಮೈಸೂರು ಜಿಲ್ಲೆಯ ಬೆಟ್ಟದ ಪುರದ ಬೆಟ್ಟಕ್ಕೆ ಚಾರಣವನ್ನು ಮಾಡಿದರು. ಚಾರಣಕ್ಕೆ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ರೆ. ಫಾ. ಐಸಾಕ್ ರತ್ನಕರ್ ರವರು ಆಶೀರ್ವಾದ ಮಾಡುವುದರ ಮೂಲಕ ಚಾಲನೆಯನ್ನು ನೀಡಿ ಶುಭ ಹಾರೈಸಿದರು. ಸಂತ ಅನ್ನಮ್ಮ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಬೆನ್ನಿ ಜೋಸೆಫ್ ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಒಟ್ಟು 52 ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಚಾರಣದಲ್ಲಿ ಬೆಟ್ಟದಪುರದ ಬೆಟ್ಟವನ್ನು 3, 600 ಮೆಟ್ಟಿಲುಗಳನ್ನು ಹತ್ತುವುದರ ಮೂಲಕ ವಿದ್ಯಾರ್ಥಿಗಳು ತಲುಪಿದರು. ಮತ್ತು ಚೋಳ ರಾಜ ವಂಶಸ್ಥರ ಕಾಲದ ಪ್ರಾಚೀನ ಸ್ಥಳಗಳ ಮಾಹಿತಿಯನ್ನು ಪಡೆದರು. ಹಾಗೂ ಬೆಟ್ಟದಲ್ಲಿ ಸ್ವಚ್ಛತಾ ಕಾರ್ಯವನ್ನು ನಡೆಸಿದರು. ಈ ಸಂದರ್ಭದಲ್ಲಿ ಎನ್.ಸಿ.ಸಿ. ಅಧಿಕಾರಿ ಅಬ್ದುಲ್ ಮುನೀರ್ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಮಡಿಕೇರಿ ಫೆ.8 : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬoಧ ಮತಗಟ್ಟೆಗಳ ಸುಸ್ಥಿತಿ ಸಂಬAಧ ಸೆಕ್ಟರ್ ಅಧಿಕಾರಿಗಳು ಮತ್ತು ಪೊಲೀಸ್ ಸೆಕ್ಟರ್ ಅಧಿಕಾರಿಗಳಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಬುಧವಾರ ನಗರದ ಜಿ.ಪಂ.ಸಭಾoಗಣದಲ್ಲಿ ಮಾಹಿತಿ ಪಡೆದರು. ಜಿಲ್ಲೆಯಲ್ಲಿ 542 ಮತಗಟ್ಟೆಗಳಿದ್ದು, ಮತಗಟ್ಟೆ ಸುಸ್ಥಿತಿಯಲ್ಲಿ ಇರುವ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು. ಕಳೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಸೆಕ್ಟರ್ ವ್ಯಾಪ್ತಿಯಲ್ಲಿ ಅತೀ ಕಡಿಮೆ ಮತದಾನವಾಗಿರುವ ಮತಗಟ್ಟೆಗಳ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದರು. ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿ ಮತ್ತು ಪೊಲೀಸ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಮತಗಟ್ಟೆಗೆ ತೆರಳಿ ಮತಗಟ್ಟೆ ಸುಸ್ಥಿತಿ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ವಲ್ನರಬಲ್ ಮತ್ತು ಕ್ರಿಟಿಕಲ್ ಮತಗಟ್ಟೆಗಳಲ್ಲಿ ಹೆಚ್ಚಿನ ನಿಗಾವಹಿಸಬೇಕು ಎಂದು ಡಾ.ಬಿ.ಸಿ.ಸತೀಶ ಅವರು ಸೂಚಿಸಿದರು. ಅಂತರ ರಾಜ್ಯ ಮತ್ತು ಅಂತರ್ ಜಿಲ್ಲಾ ಚೆಕ್‌ಪೋಸ್ಟ್ಗಳ ಬಗ್ಗೆ ನಿಖರ ವರದಿ ನೀಡಬೇಕು. ಈ ಚೆಕ್ ಪೋಸ್ಟ್ ಗಳಲ್ಲಿ ಚುನಾವಣಾ ಸಂದರ್ಭದಲ್ಲಿ ಚುನಾವಣಾ ಆಯೋಗದ ನಿರ್ದೇಶನವನ್ನು ಚಾಚುತಪ್ಪದೆ ಪಾಲಿಸಬೇಕು ಎಂದು…
ಮಡಿಕೇರಿ ಫೆ.8 : ರಾಜ್ಯ ಚುನಾವಣಾ ಆಯೋಗವು 2023ರ ಜನವರಿ ಮಾಹೆಯಿಂದ ಏಪ್ರಿಲ್ ಮಾಹೆಯವರೆಗೆ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಫೆ.8 ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ. 14 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. 15 ನಾಮಪತ್ರ ಪರಿಶೀಲಿಸುವ ದಿನವಾಗಿದೆ. 17 ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಫೆ.25 ರಂದು ಬೆಳಗ್ಗೆ 7 ಗಂಟೆಯಿoದ ಸಂಜೆ 5 ಗಂಟೆಯವರೆಗೆ ಮತದಾನ ಅವಶ್ಯವಿದ್ದರೆ, ಮತದಾನ ನಡೆಯಲಿದೆ. ಫೆ.27 ರಂದು ಬೆಳಗ್ಗೆ 7 ಗಂಟೆಯಿoದ ಸಂಜೆ 5 ಗಂಟೆಯವರೆಗೆ ಮರು ಮತದಾನ ಅವಶ್ಯವಿದ್ದರೆ, ಮತದಾನ ನಡೆಸುವ ದಿನವಾಗಿದೆ. ಫೆ.28 ರಂದು ಬೆಳಗ್ಗೆ 8 ಗಂಟೆಯಿAದ ತಾಲ್ಲೂಕು ಕೇಂದ್ರಗಳಲಿ ಮತಗಳ ಎಣಿಕೆ ನಡೆಯಲಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ತಿತಿಮತಿ(04 ಸ್ಥಾನ), ನಿಟ್ಟೂರು(1 ಸ್ಥಾನ), ಗೋಣಿಕೊಪ್ಪಲು (1 ಸ್ಥಾನ), ಮಡಿಕೇರಿ ತಾಲ್ಲೂಕಿ ಎಮ್ಮೆಮಾಡು (2 ಸ್ಥಾನ) ಒಟ್ಟಾರೆ 4 ಗ್ರಾಮ ಪಂಚಾಯಿತಿಗಳ ಒಟ್ಟು 8 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು…
ಮಡಿಕೇರಿ ಫೆ.8 : ನಿವೃತ್ತ ಅರಣ್ಯ ಅಧಿಕಾರಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಶಾಲನಗರ ಸಮೀಪದ ಬಸವನತ್ತೂರು ಗ್ರಾಮದಲ್ಲಿ ನಡೆದಿದೆ. ನಿವೃತ್ತ ಅಧಿಕಾರಿ ಟಿ.ವಿ.ಶಶಿ (75) ಎಂಬುವವರೆ ರಿವಲ್ವಾರ್‌ನಿಂದ ತಲೆ ಭಾಗಕ್ಕೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡವರು. ಅನಾರೋಗ್ಯದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿಟ್ಟಿರುವುದಾಗಿ ತಿಳಿದು ಬಂದಿದೆ. ಮೃತರು ಪತ್ನಿ ಹಾಗೂ ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಮಡಿಕೇರಿ ಫೆ.8 : ಬೈಕ್ ಗೆ ಆಂಬ್ಯುಲೆನ್ಸ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಡಿಕೇರಿ- ಚೆಟ್ಟಳ್ಳಿ ರಸ್ತೆಯಲ್ಲಿ ನಡೆದಿದೆ. ಮಡಿಕೇರಿಯಿಂದ ಚೆಟ್ಟಳ್ಳಿಗೆ ತೆರಳುತ್ತಿದ್ದ ಲೋಕೇಶ್ (44) ಎಂಬುವವರೇ ಮೃತ ದುರ್ದೈವಿ. ತಲೆಯ ಭಾಗಕ್ಕೆ ತೀವ್ರ ಗಾಯವಾಗಿದ್ದ ಲೋಕೇಶ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಮೃತಪಟ್ಟರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಶ್ರೀಮಂಗಲ ಫೆ.8 : ಕೊಡಗಿನ ಎರಡು ವಿಧಾನಸಭಾ ಕ್ಷೇತ್ರದಲ್ಲಿ ದೀರ್ಘಕಾಲದಿಂದ ಅಧಿಕಾರದಲ್ಲಿರುವ ಶಾಸಕರು ಜನರ ಆಶೋತ್ತರಗಳಿಗೆ ಸ್ಪಂದಿಸಿಲ್ಲ ಎಂದು ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಟೀಕಿಸಿದ್ದಾರೆ. ಕುಟ್ಟ ಕೊಡವ ಸಮಾಜದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು ಕೊಡಗಿನ ವಿರಾಜಪೇಟೆ ಮತ್ತು ಮಡಿಕೇರಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯ ಗಳಿಸಲಿದ್ದಾರೆ. ಇತರ ಪಕ್ಷಗಳ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ನಾವು ಹೋದ ಕಡೆಯಲೆಲ್ಲ ಬದಲಾವಣೆ ಅಗತ್ಯತೆ ಬಗ್ಗೆ ಜನ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತೆ ಗೆಲುವು ಸಾಧಿಸಬೇಕೆಂಬ ಸಂಕಲ್ಪದೊಂದಿಗೆ ಪಕ್ಷದ ಕಾರ್ಯಕರ್ತರು ಹಾಗೂ ಮತದಾರರು ಸಂಘಟಿತರಾಗುತ್ತಿದ್ದಾರೆ ಎಂದು ಹೇಳಿದರು. ವಿಧಾನಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲಾ ಜನಾಂಗ, ಜಾತಿ, ಧರ್ಮದವರು ಒಂದೇ ತಾಯಿಯ ಮಕ್ಕಳಂತೆ ಬದುಕಲು ಪೂರಕ ವಾತಾವರಣವನ್ನು ಸೃಷ್ಟಿಸಿದೆ. ಕೊಡಗು ಜಿಲ್ಲೆಯ ಜನ ಇಬ್ಬರು ಶಾಸಕರ ಬೇಜವಾಬ್ದಾರಿ ಆಡಳಿತದಿಂದ ರೋಸಿ ಹೋಗಿದ್ದಾರೆ. ಕಾಂಗ್ರೆಸ್ ನಿಂದ ಮಾತ್ರ ಜನಪರ ಆಡಳಿತ…
ಚೆಯ್ಯಂಡಾಣೆ ಫೆ.8 : ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ತೋಟಗಾರಿಕೆ ಇಲಾಖೆ, ಕೊಡಗು ಜಿಲ್ಲಾ ಪಂಚಾಯತ್ ಇದರ ವತಿಯಿಂದ ನರಿಯಂದಡ ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಒಕ್ಕೂಟದ ಸದಸ್ಶೆಯರಿಗೆ ಹಾಗೂ ಗ್ರಾಮಸ್ಥರಿಗೆ ಎರಡು ದಿನಗಳ ಜೇನು ಕೃಷಿ ಕಾರ್ಯಾಗಾರ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಿದ್ದಂಡ ರಾಜೇಶ್ ಅಚ್ಚಯ್ಯ ದೀಪ ಬೆಳಗಿಸುದರ ಮೂಲಕ ಚಾಲನೆ ನೀಡಲಾಯಿತು. ಜೇನು ಕೃಷಿ ತರಬೇತಿ ಕಾರ್ಯಾಗಾರದಲ್ಲಿ ಒಟ್ಟು 30 ಜನರಿಗೆ ಅವಕಾಶ ಕಲ್ಪಿಸಲಾಗಿದೆ. ಇದರಲ್ಲಿ ಸಂಜೀವಿನಿ ಒಕ್ಕೂಟದ ಸದಸ್ಯೆಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಜೇನು ಕೃಷಿಯ ಬಗ್ಗೆ ಹಿರಿಯ ತೋಟಗಾರಿಕಾ ಇಲಾಖೆಯ ಸಹಾಯಕ ಅಧಿಕಾರಿ ವಸಂತ್ ಮಾತನಾಡಿ ಇಂದಿನ ಕಾರ್ಯಾಗಾರದಲ್ಲಿ ಭಾಗವಹಿಸಿದವರಿಗೆ ಜೇನು ಕೃಷಿಯ ಬಗ್ಗೆ ತಾಂತ್ರಿಕ ಮಾಹಿತಿ ನೀಡಲಾಗುವುದು,ಹಾಗೂ ಒಂದೊಂದು ಜೇನು ಪೆಟ್ಟಿಗೆಯನ್ನು ಶೇಕಡಾ 75 ರ ಸಹಾಯ ಧನದಲ್ಲಿ ವಿತರಿಸಲಾಗುವುದು, ಸಹಾಯಧನದಲ್ಲಿ ಒಂದು ಪೆಟ್ಟಿಗೆ, ಸ್ಟಾಂಡ್ ಹಾಗೂ ಒಂದು ಜೇನು ಕುಟುಂಬದ ಬೆಲೆ 4500/- ರೂಪಾಯಿ ಇದರಲ್ಲಿ ಶೇಕಡಾ 25 ರೈತರ…
ವಿರಾಜಪೇಟೆ ಫೆ.8 : ವಿರಾಜಪೇಟೆ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಕೆ.ವಿ.ಸಂತೋಷ್ (52) ಅವರು ಇಂದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ರಾಜಕೀಯ ಮಾತ್ರವಲ್ಲದೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಸಂತೋಷ್ ಅವರ ನಿಧನದ ಹಿನ್ನೆಲೆ ಇಂದು ವಿರಾಜಪೇಟೆ ಪಟ್ಟಣದಲ್ಲಿ ಸಂಜೆ 5 ಗಂಟೆಯಿಂದ 6 ರವರೆಗೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸಂತಾಪ ಸೂಚಿಸಲಾಯಿತು.
ಗೋಣಿಕೊಪ್ಪಲು ಫೆ.8 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 16 ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಗೋಣಿಕೊಪ್ಪಲಿನಲ್ಲಿ ಮಾರ್ಚ್ 4 ಮತ್ತು 5 ರಂದು ನಡೆಯಲಿದೆ. ಎರಡು ದಿನಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯ ಪ್ರತಿಭೆಗಳಿಗೆ ತಮ್ಮ ಕಲಾ ಪ್ರೌಢಿಮೆಯನ್ನು ಪ್ರಸ್ತುತಪಡಿಸಲು ಅವಕಾಶವಿದೆ. ಆಸಕ್ತರು ದಿನಾಂಕ 15.02.2023ರ ಒಳಗಾಗಿ ತಮ್ಮ ಕಲೆಯ ವಿಡಿಯೋವನ್ನು ವಾಟ್ಸಪ್ ಮೂಲಕ ಅಥವಾ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬಹುದು ಎಂದು ಸ್ವಾಗತ ಸಮಿತಿಯ ಮಹಾ ಪ್ರಧಾನ ಕಾರ್ಯದರ್ಶಿ ಕೋಳೆರ ದಯಾ ಚಂಗಪ್ಪ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ. ಸ್ವಾಗತ ಸಮಿತಿ, 16ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ, ಕಾಮತ್ ನವಮಿ ಸಭಾಂಗಣ, ಗೋಣಿಕೊಪ್ಪಲು 571213 ಡಿ.ಚಂದನ. 9986939357 ಕೆ.ವಿ.ರಾಮಕೃಷ್ಣ 9902306833






