ಗೋಣಿಕೊಪ್ಪಲು ಫೆ.8 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 16 ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಗೋಣಿಕೊಪ್ಪಲಿನಲ್ಲಿ ಮಾರ್ಚ್ 4 ಮತ್ತು 5 ರಂದು ನಡೆಯಲಿದೆ. ಎರಡು ದಿನಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯ ಪ್ರತಿಭೆಗಳಿಗೆ ತಮ್ಮ ಕಲಾ ಪ್ರೌಢಿಮೆಯನ್ನು ಪ್ರಸ್ತುತಪಡಿಸಲು ಅವಕಾಶವಿದೆ. ಆಸಕ್ತರು ದಿನಾಂಕ 15.02.2023ರ ಒಳಗಾಗಿ ತಮ್ಮ ಕಲೆಯ ವಿಡಿಯೋವನ್ನು ವಾಟ್ಸಪ್ ಮೂಲಕ ಅಥವಾ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬಹುದು ಎಂದು ಸ್ವಾಗತ ಸಮಿತಿಯ ಮಹಾ ಪ್ರಧಾನ ಕಾರ್ಯದರ್ಶಿ ಕೋಳೆರ ದಯಾ ಚಂಗಪ್ಪ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ. ಸ್ವಾಗತ ಸಮಿತಿ, 16ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ, ಕಾಮತ್ ನವಮಿ ಸಭಾಂಗಣ, ಗೋಣಿಕೊಪ್ಪಲು 571213 ಡಿ.ಚಂದನ. 9986939357 ಕೆ.ವಿ.ರಾಮಕೃಷ್ಣ 9902306833
ಲೇಖಕ: admin
ಮಡಿಕೇರಿ ಫೆ.7 : ಇತರೆ ಪಾರಂಪರಿಕ ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗಿ ಉಪ ವಿಭಾಗೀಯ ಮಟ್ಟದಲ್ಲಿ ಅನುಮೋದನೆಯಾಗಿರುವ ಅರ್ಜಿಗಳ ಸಂಬಂಧ ಮರು ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇತರೆ ಪಾರಂಪರಿಕ ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆ ಆಗಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಗ್ರಾಮ ಅರಣ್ಯ ಹಕ್ಕು ಸಮಿತಿಯಲ್ಲಿ ಮತ್ತೊಂದು ಬಾರಿ ಪರಿಶೀಲಿಸುವಂತೆ ಸಲಹೆ ಮಾಡಿದರು. ಜಿಲ್ಲೆಯ ನೊಕ್ಯ ಮತ್ತು ಸಿದ್ದಾಪುರ ಗ್ರಾ.ಪಂ.ವ್ಯಾಪ್ತಿಯಲ್ಲಿ ಸ್ಮಶಾನ ಭೂಮಿ ಅಭಿವೃದ್ಧಿ ಸಂಬAಧ ಗ್ರಾಮ ಅರಣ್ಯ ಸಮಿತಿ ಗಮನಕ್ಕೆ ತರುವಂತಾಗಬೇಕು ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ದಯಾನಂದ ಅವರು ಹೇಳಿದರು. ಈ ಬಗ್ಗೆ ಮೂರು ದಿನದಲ್ಲಿ ಪರಿಶೀಲಿಸಿ ವರದಿ ನೀಡುವಂತೆ ಐಟಿಡಿಪಿ ಇಲಾಖಾ ಅಧಿಕಾರಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ ಅವರು ನಾಗರಹೊಳೆಯ ಆಶ್ರಮ ಶಾಲೆ ಕಟ್ಟಡವು…
ಮಡಿಕೇರಿ ಫೆ.7 : ಸೋಮವಾರಪೇಟೆ ತಾಲ್ಲೂಕು 8ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಫೆ.11ರಂದು ಗೌಡಳ್ಳಿ ಬಿ.ಜಿ.ಎಸ್ ಶಾಲಾ ಮೈದಾನದಲ್ಲಿ ಅರ್ಥಪೂರ್ಣವಾಗಿ ನಡೆಯಲಿದೆ ಎಂದು ಸಮ್ಮೇಳನದ ಪ್ರಚಾರ ಸಮಿತಿ ಅಧ್ಯಕ್ಷ ಹಿರಿಕರ ರವಿ ಹೇಳಿದರು. ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಕ.ಸಾ.ಪ.ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್, ತಾಲ್ಲೂಕು ಅಧ್ಯಕ್ಷ ಎಸ್.ಡಿ.ವಿಜೇತ್ ನೇತೃತ್ವದಲ್ಲಿ, ವಿವಿಧ ಸಮಿತಿಗಳ ಪದಾಧಿಕಾರಿಗಳು ಕನ್ನಡ ಹಬ್ಬವನ್ನು ಯಶಸ್ವಿಗೊಳಿಸಲು ಸಿದ್ಧತೆಯಲ್ಲಿ ತೊಡಕಿಕೊಂಡಿದ್ದಾರೆ ಎಂದು ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಫೆ.11ರ ಶನಿವಾರ ಬೆಳಿಗ್ಗೆ 7.30ಕ್ಕೆ ದೊಡ್ಡಮಳ್ತೆ ಶ್ರೀ ಹೊನ್ನಮ್ಮ ಕೆರೆಯಿಂದ ಬೈಕ್ ಜಾಥ ಹೊರಡಲಿದೆ. ಬೆಳಿಗ್ಗೆ 8 ಗಂಟೆಗೆ ಸೋಮವಾರಪೇಟೆ ತಹಸೀಲ್ದಾರ್ ಎಸ್.ಎನ್.ನರಗುಂದ ಬಿಜಿಎಸ್ ಶಾಲಾ ಆವರಣದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ. ಕ.ಸಾ.ಪ.ಜಿಲ್ಲಾಧ್ಯಕ್ಷರಾದ ಎಂ.ಪಿ.ಕೇಶವಕಾಮತ್, ಕನ್ನಡ ಧ್ಜಜ ಹಾಗೂ ತಾಲ್ಲೂಕು ಅಧ್ಯಕ್ಷ ಎಸ್.ಡಿ.ವಿಜೇತ್ ಕನ್ನಡ ಪರಿಷತ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬೀಟಿಕಟ್ಟೆ ಕೆನರಾ ಬ್ಯಾಂಕ್ ಜಂಕ್ಷನ್‌ನಿಂದ 9 ಗಂಟೆಗೆ ಗಂಟೆಗೆ ಸಮ್ಮೇಳನಾಧ್ಯಕ್ಷರನ್ನು ಮಂಗಳವಾದ್ಯ, ಪೂರ್ಣಕುಂಭ, ಕಲಾ ತಂಡಗಳು, ಸ್ತಬ್ಧ ಚಿತ್ರಗಳ…
ಮಡಿಕೇರಿ ಫೆ.7 : ಮಹಿಳೆಯರ ಸ್ವಾವಲಂಬಿ ಬದುಕಿಗೆ ಆಸರೆಯಾಗಿರುವ ವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಮಡಿಕೇರಿಯಲ್ಲಿ ಆರಂಭಗೊಂಡಿದೆ. ಜಿಲ್ಲೆಯಾದ್ಯಂತ ಸ್ತ್ರೀಶಕ್ತಿ, ಸಂಜೀವಿನಿ ಗುಂಪುಗಳು ತಾವು ಬೆಳೆದ ತರಕಾರಿ ಹಾಗೂ ಉತ್ಪಾದಿಸಿದ ವಿವಿಧ ಉತ್ಪನ್ನಗಳ ಮಾರಾಟ ಕಲ್ಪಿಸುವಲ್ಲಿ ಕೊಡಗು ಜಿಲ್ಲಾ ಪಂಚಾಯಿತಿ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಸಂಜೀವಿನಿ-ಡೇ ನಲ್ಮ್ (ಎನ್‌ಆರ್‌ಎಲ್‌ಎಂ) ಯೋಜನೆಯಡಿ ಎರಡು ದಿನಗಳ ಕಾಲ ನಗರದ ಗಾಂಧಿ ಮೈದಾನದಲ್ಲಿ ಮೇಳ ನಡೆಯುತ್ತಿದೆ. ಜಿಲ್ಲಾ ಮಟ್ಟದ ಸ್ವಸಹಾಯ ಗುಂಪುಗಳ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಜೀವ ವೈವಿಧ್ಯ ಮಂಡಳಿ ರಾಜ್ಯ ಅಧ್ಯಕ್ಷ ನಾಪಂಡ ರವಿಕಾಳಪ್ಪ ಮತ್ತು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಂಗಳವಾರ ಉಪದ್ಘಾಟಿಸಿದರು. ಮಳಿಗೆಗಳನ್ನು ವೀಕ್ಷಿಸಿ, ಮಾಹಿತಿ ಪಡೆದ ರವಿ ಕಾಳಪ್ಪ ಅವರು ಸ್ತ್ರೀ ಶಕ್ತಿ ಸಂಜೀವಿನಿ ಗುಂಪುಗಳಿಗೆ ಸರ್ಕಾರದ ವತಿಯಿಂದ ಸಹಾಯಧನ ಕಲ್ಪಿಸಿ ಆರ್ಥಿಕ ಉತ್ತೇಜನಕ್ಕೆ ಮುಂದಾಗಲಾಗಿದೆ. ಆ ನಿಟ್ಟಿನಲ್ಲಿ ಸ್ತ್ರೀ ಶಕ್ತಿ ಸಂಜೀವಿನಿ ಗುಂಪುಗಳು ಉತ್ಪಾದಿಸಿದ ವಿವಿಧ ರೀತಿಯ ಉತ್ಪನ್ನಗಳು…
ಮಡಿಕೇರಿ ಫೆ.7 : ಭಾರತೀಯ ಕ್ರೀಡಾ ಪ್ರಾಧಿಕಾರ(ಸಾಯಿ)ದಿಂದ ‘ಅಂತರ ದಕ್ಷಿಣ ವಲಯದ’ ಬಾಲಕಿಯರ ಹಾಕಿ ಪಂದ್ಯಾವಳಿಗೆ ನಗರದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಕಿ ಟರ್ಫ್ ಮೈದಾನದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ಅವರು ಮಂಗಳವಾರ ಚಾಲನೆ ನೀಡಿದರು. ಕೇರಳದ ಕೊಲ್ಲಂ, ಹೈದರಾಬಾದ್ ಮತ್ತು ಮಡಿಕೇರಿ ಕ್ರೀಡಾ ಪ್ರಾಧಿಕಾರದ ಬಾಲಕಿಯರ ಹಾಕಿ ತಂಡಗಳು ಪಾಲ್ಗೊಂಡಿದ್ದವು. ಈ ಸಂದರ್ಭದಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರದ ತರಬೇತಿ ಕೇಂದ್ರದ ಮೇಲ್ವಿಚಾರಕರಾದ ಮಿನಿ ಉಣ್ಣಿರಾಜ್ ಇತರರು ಇದ್ದರು.
ನಾಪೋಕ್ಲು ಫೆ.7 : ಸ್ಥಳೀಯ ಕಲ್ಲುಮೊಟ್ಟೆ ಕೆ.ಎಂ.ಸಿ.ಸಿ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಆಯೋಜಿಸಲಾದ 5ನೇ ವರ್ಷದ ಕಲ್ಲುಮೊಟ್ಟೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸಿರಾಜ್ ಫ್ರೆಂಡ್ಸ್ ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಚೆರಿಯಪರಂಬು ಜನರಲ್ ಕೆ. ಎಸ್ ತಿಮ್ಮಯ್ಯ ಕ್ರೀಡಾಂಗಣರದಲ್ಲಿ ನಡೆದ ಆಕರ್ಷಕ ಫೈನಲ್ ಪಂದ್ಯಾಟದಲ್ಲಿ ರಾಝಿಕ್ ನಾಯಕತ್ವದ ಹಾಟ್ ರೋಡ್ಸ್ ತಂಡವನ್ನು ಮಣಿಸಿ, ಪರವಂಡ ಸಿರಾಜ್ ನಾಯಕತ್ವದ ಸಿರಾಜ್ ಫ್ರೆಂಡ್ಸ್ ತಂಡ ನಗದು ಮತ್ತು ಆಕರ್ಷಕ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.ಹಾಟ್ ರೋಡ್ಸ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಕಳೆದ ಎರಡು ದಿನಗಳಿಂದ ನಡೆದ ಪಂದ್ಯಾವಳಿಯಲ್ಲಿ ಸುಮಾರು 6 ತಂಡಗಳು ಪಾಲ್ಗೊಂಡಿದ್ದವು. ಪಂದ್ಯಾವಳಿಯಲ್ಲಿ ಉತ್ತಮ ಬ್ಯಾಟ್ಸ್ ಮೆನ್ ಪ್ರಶಸ್ತಿಯನ್ನು ಹಾಟ್ ರೋಡ್ಸ್ ತಂಡದ ಉದಯ ಪಡೆದುಕೊಂಡರು.ಉತ್ತಮ ಆಲ್-ರೌಂಡರ್ ಪ್ರಶಸ್ತಿಯನ್ನು ಸಿರಾಜ್ ಫ್ರೆಂಡ್ಸ್ ತಂಡದ ಉಬೈದ್ ಪಡೆದರು. ಉತ್ತಮ ಬೌಲರ್ ಪ್ರಶಸ್ತಿಯನ್ನು ಹಾಟ್ ರೋಡ್ಸ್ ತಂಡದ ಸಿದ್ದೀಕ್ ಆಯ್ಕೆಯಾದರು ,ಉದಯೋನ್ಮುಖ ಆಟಗಾರನಾಗಿ ಸಿರಾಜ್ ಫ್ರೆಂಡ್ಸ್ ತಂಡದ ಸಾದಿಕ್, ಹಿರಿಯ ಆಟಗಾರ ಪ್ರಶಸ್ತಿಯನ್ನು ಸಿರಾಜ್…
ಮಡಿಕೇರಿ ಫೆ.7 : ಸುಂಟಿಕೊಪ್ಪ ಸಮೀಪ ಫೆ.6 ರಂದು ಸಂಜೆ ಲಾರಿ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾರೆ. ನಂಜನಗೂಡು ನಿವಾಸಿ ಜಯಸೂರ್ಯ (25) ಮೃತ ದುರ್ದೈವಿ. ಸೋಮವಾರ ಸಂಜೆ ಸುಂಟಿಕೊಪ್ಪದಿAದ ಕುಶಾಲನಗರದ ಕಡೆಗೆ ತೆರಳುತ್ತಿದ್ದ ಬೈಕ್ ಗೆ ಮೈಸೂರಿನಿಂದ ಮಂಗಳೂರಿಗೆ ಅಡುಗೆ ಅನಿಲದ ಖಾಲಿ ಸಿಲಿಂಡರ್ ಗಳನ್ನು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಿಂದ ತೀವ್ರವಾಗಿ ಗಾಯಗೊಂಡ ಜಯಸೂರ್ಯ ಅವರನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ನಿಧನ ಹೊಂದಿದರು. ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಡಿಕೇರಿ ಫೆ.7 : ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆ.18 ರಂದು ವಿವಿಧ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯದ ಧರ್ಮದರ್ಶಿ ಗೋವಿಂದ ಸ್ವಾಮಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಬೆಳಿಗ್ಗೆ 9 ಗಂಟೆಯಿಂದ ಕಾಶಿಲಿಂಗಕ್ಕೆ ಕ್ಷೀರಾಭಿಷೇಕ ಹಾಗೂ ಪಂಚಾಮೃತ ಅಭಿಷೇಕ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ನಂತರ ಭಕ್ತಾಧಿಗಳಿಂದ ಪಂಚಲಿಂಗಕ್ಕೆ ಪವಿತ್ರ ಗಂಗಾಜಲದಿoದ ಅಭಿಷೇಕ ಮತ್ತು ಶಿವನ ಮೂರ್ತಿಗೆ ಪುಷ್ಪಾರ್ಚನೆಯಾಗಲಿದೆ. ಸಂಜೆ 7 ಗಂಟೆಗೆ ಭಕ್ತಾಧಿಗಳಿಗೆ ದೀಪಲಂಕಾರ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ರಾತ್ರಿ 8 ಗಂಟೆಗೆ ತಾಯಿಯ ದರ್ಶನ ಇರುತ್ತದೆ. ಮಧ್ಯಾಹ್ನ ಹಾಗೂ ರಾತ್ರಿ ಭಕ್ತರಿಗೆ ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಂಜೆ ಭಕ್ತಿ ಪ್ರಧಾನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ::: ಗಂಗಾಜಲ ಅಭಿಷೇಕ ::: ಪಂಚಲಿಂಗಕ್ಕೆ ಪವಿತ್ರ ಗಂಗಾಜಲದಿಂದ ಅಭಿಷೇಕ ಮತ್ತು ಶಿವನಮೂರ್ತಿಗೆ ಪುಷ್ಪಾರ್ಚನೆಯನ್ನು ಖುದ್ದು ತಾವೇ ಮಾಡಲಿಚ್ಛಿಸುವವರು ದೇವಾಲಯದ ಕಚೇರಿಯನ್ನು ಸಂಪರ್ಕಿಸಬಹುದು.…
ಕುಶಾಲನಗರ ಫೆ.7 : ಸೇವಾ ಮನೋಭಾವ ಜನರ ಮನಸ್ಸಿನಿಂದ ಸೃಷ್ಟಿಯಾಗಬೇಕು ಎಂದು ರೋಟರಿ 3181 ಜಿಲ್ಲಾ ರಾಜ್ಯಪಾಲ ಪ್ರಕಾಶ್ ಕಾರಂತ್ ತಿಳಿಸಿದರು. ಕುಶಾಲನಗರ ರೋಟರಿ ಸಂಸ್ಥೆಯ ಅಧಿಕೃತ ಭೇಟಿ ಕಾರ್ಯಕ್ರಮದ ನಂತರ ನಡೆದ ಸಮಾರಂಭದಲ್ಲಿ ಮಾತನಾಡಿ, ಸಂಘ ಸಂಸ್ಥೆಗಳ ಪ್ರಮುಖರುದಾನ ನೀಡುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಕಾಯಕವನ್ನುಜನರಿಗೆ ತಿಳಿಸುವ ಮೂಲಕ ಇನ್ನೊಬ್ಬರಿಗೆ ಪ್ರೇರಣೆಯಾಗಬೇಕು ಎಂದ ಪ್ರಕಾಶ್‍ಕಾರಂತ್, ಸಮಾಜದ ಕೆಳಸ್ತರದ ಜನರಿಗೆ ಸಹಾಯ ಹಸ್ತ ಚಾಚುವ ಮನಸ್ಥಿತಿ ಹೊಂದಬೇಕೆಂದುಕರೆ ನೀಡಿದರು. ಜನರೊಂದಿಗೆ ರೋಟರಿ ನಿರಂತರ ವಿಚಾರ ವಿನಿಮಯಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಉತ್ತಮ ಸಮಾಜದ ನಿರ್ಮಾಣದಗುರಿ ಹೊಂದಿದೆಎಂದರು. ಕೊಡುವ ಮನಸ್ಸಿನ ಮೂಲಕ ತೃಪ್ತಿ ಗಳಿಸಲು ಸಾಧ್ಯಎಂದು ತಿಳಿಸಿದ ಪ್ರಕಾಶ್ ಕಾರಂತ್ ರೋಟರಿ ದತ್ತಿ ನಿಧಿ ಮೂಲಕ ವಿಶ್ವದಾದ್ಯಂತ ನಿರಂತರ ಸೇವಾ ಕಾರ್ಯ ನಡೆಯುತ್ತಿದೆ ತಿಳಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಸೈನಿಕರಾದ ಆಮೆಮನೆ ಜರ್ನಾಧನ್, ಉದ್ಗಮ್ ಶಾಲೆಯ ಬ್ಯಾಡ್‍ಮಿಂಟನ್ ಕ್ರೀಡಾಪಟು ಕು.ಅನಿಶ್ ಎಸ್. ದೇವಾಡಿಗ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭ ತೊರೆನೂರು ಸರ್ಕಾರಿ ಶಾಲೆಯ…
ಗೋಣಿಕೊಪ್ಪಲು ಫೆ 7 : 16ನೇ ಯ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಗೋಣಿಕೊಪ್ಪಲಿನಲ್ಲಿ ಮಾ.4 ಮತ್ತು 5 ರಂದು ನಡೆಯಲಿದೆ. ಆ ಸಂದರ್ಭದಲ್ಲಿ ಜಿಲ್ಲೆಯ ಯುವಕವಿಗಳಿಗೆ ಕವಿಗೋಷ್ಠಿಯಲ್ಲಿ ತಮ್ಮ ಕವನ ಪ್ರಸ್ತುತಪಡಿಸಲು ಅವಕಾಶವಿರುತ್ತದೆ. ಆಸಕ್ತರು ಈ ಕೆಳಗೆ ಸೂಚಿಸಿದ ದೂರವಾಣಿ ಸಂಖ್ಯೆಗೆ ದಿನಾಂಕ 12.02.2023ರ ಒಳಗಾಗಿ ತಮ್ಮ ಕವನವನ್ನು ವಾಟ್ಸಪ್ ಮೂಲಕ ಕಳುಹಿಸಿಕೊಡುತಕ್ಕದ್ದು. ಅಥವಾ ಈ ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಕಳಿಸತಕ್ಕದ್ದು, ಸ್ವಾಗತ ಸಮಿತಿ, 16ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ, ಕಾಮತ್ ನವಮಿ ಸಭಾಂಗಣ, ಗೋಣಿಕೊಪ್ಪಲು-571213 ವಾಟ್ಸಾಪ್ ಮೂಲಕ ಕಳಿಸಬೇಕಾದ ದೂರವಾಣಿ ಸಂಖ್ಯೆ ಶೀಲಾ ಬೋಪಣ್ಣ 9945794414, ಟಿ.ಕೆ. ವಾಮನ 7619270529 ಎಂದು ಸ್ವಾಗತ ಸಮಿತಿಯ ಮಹಾ ಪ್ರದಾನ ಕಾರ್ಯದರ್ಶಿ ಕೋಳೆರ ದಯಾ ಚಂಗಪ್ಪ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.






