ಮಡಿಕೇರಿ ಫೆ.6 : ಕನಿಷ್ಠ ಕೂಲಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಫೆ.8ರಂದು ನಡೆಯುವ ಪ್ರತಿಭಟನೆಯಲ್ಲಿ ಕೊಡಗಿನ 200ಕ್ಕೂ ಹೆಚ್ಚು ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದು ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್ (ಎಐಟಿಯುಸಿ) ಜಿಲ್ಲಾಧ್ಯಕ್ಷ ಎಚ್.ಎಂ.ಸೋಮಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಮಿಕರ ಕನಿಷ್ಟ ಕೂಲಿಯನ್ನು ಕನಿಷ್ಟ ಐದು ವರ್ಷಗಳಿಗೊಮ್ಮೆ ಪರಿಷ್ಕರಿಸಬೇಕೆಂಬ ನಿಯಮವಿದೆ. ಆದರೆ ಕೂಲಿ ಪರಿಷ್ಕರಣೆಯ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ನಡೆಸದಿರುವುದು ವಿಪರ್ಯಸ ಎಂದು ಬೇಸರ ವ್ಯಕ್ತಪಡಿಸಿದರು. ಸರ್ಕಾರ ನಿಗಧಿ ಮಾಡಿರುವುದಕ್ಕಿಂತ ಕಡಿಮೆ ಕೂಲಿ ನೀಡಲಾಗುತ್ತಿದೆ, ಮೊದಲು ಇದ್ದ ಕನಿಷ್ಟ ಕೂಲಿಯನ್ನು ರಾಜ್ಯ ಸರ್ಕಾರ ಶೇ.10 ರಷ್ಟು ಕಡಿಮೆ ಮಾಡಿ ದರವನ್ನು ಪ್ರಕಟಿಸಿದೆ. ಕೂಲಿಯನ್ನು ನಿರ್ಧರಿಸಲು ಇರುವ ಎಲ್ಲಾ ನಿಯಮವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಕನಿಷ್ಟ ಕೂಲಿಯ ಪರಿಷ್ಕರಣೆಯೇ ಬೇರೆ ಹಾಗೂ ಕನಿಷ್ಟ ಕೂಲಿ ನಿರ್ಧರಿಸುವುದೇ ಬೇರೆ ಎಂಬ ವಾದವನ್ನು ಮಂಡಿಸುತ್ತ ತನ್ನನ್ನು ತಾನು ಸಮರ್ಥಿಸಿಕೊಳ್ಳುವ ಪ್ರಯತ್ನದಲ್ಲಿ ತೊಡಗಿದೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರ ಕನಿಷ್ಟ ಕೂಲಿ ನಿರ್ಧರಿಸುವಾಗ ಕಾನೂನಾತ್ಮಕ ಮಾರ್ಗಸೂಚಿಗಳನ್ನೇ ಅನುಸರಿಸಬೇಕು, ಕನಿಷ್ಟ…
ಲೇಖಕ: admin
ನಾಪೋಕ್ಲು ಫೆ.6 : ನಾಪೋಕ್ಲು ವಿರಾಜಪೇಟೆ ಮುಖ್ಯರಸ್ತೆಯ ಕೊಳಕೇರಿ ಯಿಂದ ಕೋಕೇರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ದುಸ್ಥಿತಿಯಿಂದ ಕೂಡಿದ್ದು ನಡೆದಾಡಲು ಸಾಧ್ಯವಿಲ್ಲದಂತಾಗಿದೆ ಎಂದು ಗ್ರಾಮಸ್ಥರು ಆರೋಪಿಸಿ ಸೋಮವಾರ ಪ್ರತಿಭಟನೆ ನಡೆಸಿದರು. ರಸ್ತೆಯನ್ನುಯನ್ನು ತಕ್ಷಣ ದುರಸ್ತಿಪಡಿಸುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು ತಪ್ಪಿದಲ್ಲಿ ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದರು. ಕೋಕೇರಿ- ಕೊಳಕೇರಿ ಸಂಪರ್ಕ ರಸ್ತೆಯಲ್ಲಿ ಹಲವು ವರ್ಷಗಳಿಂದ ರಸ್ತೆ ಕಾಮಗಾರಿ ನಡೆದಿಲ್ಲ, ರಸ್ತೆ ಡಾಂಬರೀಕರಣ ಮಾಡಿಲ್ಲ. ವಾಹನ ಸಂಚಾರ ಮತ್ತು ನಡೆದಾಡಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಜನಪ್ರತಿನಿಧಿಗಳು ಭರವಸೆ ಮಾತ್ರ ನೀಡುತ್ತಿದ್ದಾರೆ ಎಂದು ಗ್ರಾಮಸ್ಥ ಹರೀಶ್ ಆರೋಪಿಸಿದರು. ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಅಬ್ದುಲ್ ರಜಾಕ್ ಮಾತನಾಡಿ ಕೊಳಕೇರಿ-ಕೋಕೇರಿ ಸಂಪರ್ಕ ರಸ್ತೆಯ ದುರಸ್ತಿಗಾಗಿ ನಾಲ್ಕೈದು ಬಾರಿ ಪ್ರತಿಭಟನೆ ನಡೆಸಲಾಗಿದೆ. ಗ್ರಾಮಸ್ಥರೇ ಹೊಂಡ-ಗುಂಡಿ ಗಳನ್ನು ಮುಚ್ಚಿ ರಸ್ತೆ ದುರಸ್ತಿ ಪಡಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳದಿದ್ದಲ್ಲಿ ಮುಂಬರುವ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಹೇಳಿದರು. ಕೆ.ವೈ.ಅಶ್ರಫ್, ಎಂ.ಎ.ಮೊಯ್ದು, ಎಂ.ಎಂ.ಮಹಮ್ಮದ್, ಎಂ.ಎಂ.ಇಸ್ಮಾಯಿಲ್, ಟಿ.ಪಿ.ಬಶೀರ್, ಅಸಿನಾರ್, ಎಂ.ಎ.ಅಲಿ, ಎಂ.ಎ.ಫಲ್ಹಾಲು,…
ಮಡಿಕೇರಿ ಫೆ.6 : ಮಹಿಳಾ ಫಲಾನುಭವಿಯೊಬ್ಬರಿಂದ ಲಂಚದ ರೂಪದಲ್ಲಿ ರೂ.10 ಸಾವಿರ ಸ್ವೀಕರಿಸುತ್ತಿದ್ದ ಆರೋಪದಡಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ, ಓರ್ವ ನಿರ್ದೇಶಕಿ ಹಾಗೂ ವಾಹನ ಚಾಲಕನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿಗಮದ ವ್ಯವಸ್ಥಾಪಕ ಚಂದ್ರಶೇಖರ್, ಕಚೇರಿ ನಿರ್ದೇಶಕಿ ಚೆಲುವಾಂಬ ಹಾಗೂ ವಾಹನ ಚಾಲಕ ತಿರುಮಲೇಶ್ ಎಂಬುವವರನ್ನು ವಿಚಾರಣೆಗೊಳಪಡಿಸಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸಬ್ಸಿಡಿ ಆಧಾರಿತ ಸಾಲ ಯೋಜನೆಯಡಿ ಮಹಿಳೆಯೋರ್ವರು ಕೋಳಿ ಅಂಗಡಿಗಾಗಿ 2021ರ ಅಕ್ಟೋಬರ್‌ನಲ್ಲಿ 3 ಲಕ್ಷ ರೂ. ಸಾಲಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಮಹಿಳೆಗೆ ಮೊದಲ ಹಂತದ ಹಣ ಪಾವತಿಯಾಗಿತ್ತು. 2ನೇ ಹಂತದ 1 ಲಕ್ಷ ರೂ. ಹಣ ಬಿಡುಗಡೆಗೆ ಆರೋಪಿಗಳು 10 ಸಾವಿರ ರೂ.ಗಳ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ಫಲಾನುಭವಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಸೋಮವಾರ ದೂರುದಾರರಿಂದ ಹಣ ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದಾಳಿ ಮಾಡಿ ಮೂವರನ್ನು ಹಣ ಸಹಿತ ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಎಡಿಜಿಪಿ ಪ್ರಶಾಂತ್…
ಮಡಿಕೇರಿ ಫೆ.6 : ಹೊದವಾಡ ಓಸೀಸ್ ಅರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ 19ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿಯು ಮಾ.4 ರಿಂದ 12ರ ವರೆಗೆ ನಡೆಯಲಿದೆ ಎಂದು ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಎಸ್.ಆದಾಂ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಪಂದ್ಯಾವಳಿಯ ಧ್ವಜವನ್ನು ಆಯೋಜಕರಿಗೆ ಹಸ್ತಾಂತರಿಸಿ ಮಾತನಾಡಿದ ಅವರು, ನಾಪೋಕ್ಲುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಪಂದ್ಯಾವಳಿ ನಡೆಯಲಿದ್ದು, ರಾಜ್ಯ ಹಾಗೂ ಜಿಲ್ಲಾ ಮಟ್ಟದ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ಈಗಾಗಲೇ 80 ತಂಡಗಳು ನೊಂದಾಯಿಸಿಕೊಂಡಿದ್ದು, 150ಕ್ಕೂ ಹೆಚ್ಚು ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದರು. ಕೊಡಗು ಮುಸ್ಲಿಂ ಕಪ್‍ನ ಸ್ಥಪಕಾಧ್ಯಕ್ಷ ಕೆ.ಎ.ಅಬ್ದುಲ್ ರಶೀದ್ ಮಾತನಾಡಿ, ಈಗಾಗಲೇ ಪಂದ್ಯಾವಳಿಯ ಲೋಗೋ ಅನಾವರಣಗೊಳಿಸಲಾಗಿದ್ದು, ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದೆಂದರು. ಆಸಕ್ತ ತಂಡಗಳು ರೂ.1000 ಮುಂಗಡ ಹಣ ಪಾವತಿಸಿ ತಂಡದ ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದರು. ಇಲ್ಲಿಯವರೆಗೆ ನಡೆದ ಪಂದ್ಯಾವಳಿಗೆ ಸರ್ಕಾರದಿಂದ ಯಾವುದೇ ಅನುದಾನ ದೊರೆಯದೆ ಇರುವುದು…
ಮಡಿಕೇರಿ ಫೆ.6 : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯಲ್ಲಿ ಪಲ್ಟಿಯಾದ ಘಟನೆ ನಾಪೋಕ್ಲು ಸಮೀಪ ಪಾಲೂರು ಗ್ರಾಮದಲ್ಲಿ ಸೋಮವಾರ ನಡೆದಿದೆ. ನಾಪೋಕ್ಲುವಿನಿಂದ ಬೆಟ್ಟಗೇರಿಗೆ ಹಿಂತಿರುಗುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿದೆ. ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಮಡಿಕೇರಿ ಫೆ.6 : ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರ ನೇತೃತ್ವದಲ್ಲಿ ಬಿ ಎಸ್ ಪಿ ಪಕ್ಷದ ಕೊಡಗು ಜಿಲ್ಲಾಧ್ಯಕ್ಷ ಮೋಹನ್ ಮೌರ್ಯ ಅವರು ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಪಕ್ಷದ ವರಿಷ್ಠ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೋಹನ್ ಮೌರ್ಯ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಮಡಿಕೇರಿ ಫೆ.6 : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ಕೊಡಗು ಜಿಲ್ಲೆ ವತಿಯಿಂದ ಫೆಬ್ರವರಿ, 13 ರಿಂದ 15 ರವರೆಗೆ ಜಿಲ್ಲಾ ಮಟ್ಟದ ಕಲಿಕಾ ಹಬ್ಬ ಮೂರ್ನಾಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಸಂತೋಷದಾಯಕವಾದ ಕಲಿಕೆ ಹಾಗೂ ಕಲಿಕೆಯಲ್ಲಿ ಜೀವನ ಕೌಶಲ್ಯಗಳನ್ನು ಬೆಳೆಸುವುದು ಕಲಿಕಾ ಹಬ್ಬದ ಪರಿಕಲ್ಪನೆಯಾಗಿದೆ. ಈ ಕಾರ್ಯಕ್ರಮದಲ್ಲಿ ಪೋಷಕರು, ಶಿಕ್ಷಣಾಸಕ್ತರು ಭಾಗವಹಿಸಬಹುದು ಎಂದು ಸಮಗ್ರ ಶಿಕ್ಷಣ ಕರ್ನಾಟಕ ಪದನಿಮಿತ್ತ ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿಗಳು ಹಾಗೂ ಉಪ ನಿರ್ದೇಶಕರಾದ ರಂಗಧಾಮಯ್ಯ ಅವರು ತಿಳಿಸಿದ್ದಾರೆ.
ಶನಿವಾರಸಂತೆ ಫೆ.6 : ಶನಿವಾರಸಂತೆ ರೋಟರಿ ಕ್ಲಬ್ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದ “ಆರೋಗ್ಯ ಸೇತು” ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಹಾಗೂ ವರ್ಕ್ ಶಾಪ್ ಕಾರ್ಮಿಕರಿಗೆ ಟಿ.ಟಿ ಚುಚ್ಚುಮದ್ದು ನೀಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರೋಟರಿ ಕ್ಲಬ್ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್, ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿವಹಿಸ ಬೇಕಾಗಿದೆ. ಇಂದು ಆಹಾರ ಪದ್ಧತಿ ಬದಲಾಗಿರುವುದರಿಂದ ನಮ್ಮ ಆರೋಗ್ಯ ಯಾವಾಗ ಹದಗೆಡುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಕಬ್ಬಿಣದ ಸರಳುಗಳು ತಗುಲಿ ಗಾಯವಾದರೆ ಮುಂದೆ ಪ್ರಾಣಕ್ಕೆ ಹಾನಿಯಾಗುತ್ತದೆ. ಆದ್ದರಿಂದ ಟಿಟಿ ಚುಚ್ಚುಮದ್ದನ್ನು ಮುಂಜಾಗೃತಾ ಕ್ರಮವಾಗಿ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಆರೋಗ್ಯ ಕೇಂದ್ರದ ವೈದ್ಯರಾದ ಡಾ.ಶೃತಿ ಮಾತನಾಡಿ, ರೋಗ ನಿರೋಧಕ ಚುಚ್ಚು ಮದ್ದು ಇಂದು ಅತ್ಯವಶ್ಯಕವಾಗಿದೆ. ದೇಹದಲ್ಲಿ ಯಾವುದೇ ಸಣ್ಣ ಬದಲಾವಣೆಯಾದರೂ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಸಲಹೆ ಪಡೆದುಕೊಳ್ಳಬೇಕು. ಆರೋಗ್ಯದಲ್ಲಿ ಏರುಪೇರಾದರೆ ನಿರ್ಲಕ್ಷ್ಯವಹಿಸಬೇಡಿ, ಆಗಿಂದಾಗ್ಗೆ ವೈದ್ಯರ ಸಲಹೆ ಪಡೆದುಕೊಳ್ಳಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ…
ಮಡಿಕೇರಿ ಫೆ.6 : ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ಫೆ.12 ರಂದು 2021-22ನೇ ಸಾಲಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಕೊಡಗು ಗೌಡ ವಿದ್ಯಾ ಸಂಘದ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮವನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಸರ್ಕಾರಿ ಜಮೀನುಗಳ ಹಿತರಕ್ಷಣಾ ಸಮಿತಿ ಅಧ್ಯಕ್ಷ ಕೊಂಬಾರನ ಜಿ.ಬೋಪಯ್ಯ ಉದ್ಘಾಟಿಸಲಿದ್ದು, ಕೊಡಗು ವಿದ್ಯಾ ಸಂಘದ ಅಧ್ಯಕ್ಷ ಹೊಸೂರು ರಮೇಶ್ ಜೋಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಭಾಗಮಂಡಲ ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕುಂದಲ್ಪಾಡಿ ಜೆ.ದಿವಾಕರ, ಅತಿಥಿಗಳಾಗಿ ರಾಜ್ಯ ಲೆಕ್ಕಪತ್ರ ಇಲಾಖೆ ನಿವೃತ್ತ ಸಹಾಯಕ ನಿಯಂತ್ರಕ ಸೂದನ ಎ.ಜಾಜಯ್ಯ, ಚೆಟ್ಟಿಮಾನಿ ಕುಂದಚೇರಿ ಗ್ರಾಮದ ಕೆದಂಬಾಡಿ ಪುಷ್ಪಾವೇಣಿ ಶಿವಾಜಿ, ಮಡಿಕೇರಿ ಆರೋಗ್ಯ ಇಲಾಖೆಯ ನಿವೃತ್ತ ಫಾರ್ಮಸಿಸ್ಟ್ ಕಲ್ಲಂಬಿ ಯು.ವೆಂಕಪ್ಪ ಹಾಗೂ ತಾಳತ್ತಮನೆಯ ಪಾಣತ್ತಲೆ ಭೀಮಯ್ಯ ಪಾಲ್ಗೊಂಡು ಪ್ರತಿಭಾ ಪುರಸ್ಕಾರ ನಡೆಸಿಕೊಡಲಿದ್ದಾರೆ. ::: 1908 ರಲ್ಲಿ ಸ್ಥಾಪನೆ ::: ಶತಮಾನೋತ್ಸವ ಕಂಡ ಸಂಸ್ಥೆಯು…
ಮಡಿಕೇರಿ ಫೆ.6 : ನಿಟ್ಟೂರು ಗ್ರಾ.ಪಂ ವ್ಯಾಪ್ತಿಯ ವಿವಿಧ ಹಾಡಿ ಹಾಗೂ ಕಾಲೋನಿಗೆ ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಮಂಜೂರಾದ 77ಲಕ್ಷ ರೂಪಾಯಿ ವೆಚ್ಚದಲ್ಲಿ 2 ಒವರ್ ಹೆಡ್ ಟ್ಯಾಂಕ್ ನಿರ್ಮಾಣ ಮತ್ತು ಪೈಪ್ ಲೈನ್ ಅಳವಡಿಕೆ ಕಾರ್ಯಕ್ಕೆ ನಿಟ್ಟೂರು ಗ್ರಾ.ಪಂ ಅಧ್ಯಕ್ಷ ಕಾಟಿಮಾಡ ಶರೀನ್ ಮುತ್ತಣ್ಣ ಚಾಲನೆ ನೀಡಿದರು. ನಿಟ್ಟೂರು ಗ್ರಾ.ಪಂ ವ್ಯಾಪ್ತಿಯ ಕಾರ್ಮಾಡು, ದಾಳಿಂಬೆ ಕೊಲ್ಲಿಹಾಡಿ, ಬೆಂಡೆಕುತ್ತಿ, ಕಟ್ಟೇಹಾಡಿ, ಹೊಸ ಕಾಲೋನಿ, ವಡ್ಡರಮಾಡು ಕಟ್ಟೆಕಾಲೋನಿ ಭಾಗದ ಮನೆಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸಲು ಗ್ರಾ.ಪಂ ಸದಸ್ಯರೊಡನೆ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಈ ಯೋಜನೆ ಅಡಿಯಲ್ಲಿ ಬಡವರ್ಗದ ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸುವ ಯೋಜನೆಯು ಶ್ಲಾಘನೀಯವಾಗಿದ್ದು, ಪ್ರತಿ ಮನೆಗಳಿಗೆ ಯೋಜನೆಯ ನಿಯಮದಂತೆ ಮೀಟರ್ ಅಳವಡಿಕೆ ಕಾರ್ಯ ಅಗಲಿದೆ. ಗ್ರಾಮಸ್ಥರು ಜಲಮೂಲಗಳನ್ನು ಇತಿಮಿತಿಯಲ್ಲಿ ಬಳಸಿಕೊಂಡು ಈ ಯೋಜನೆಯ ಉಪಯೋಗ ಪಡೆದುಕೊಳ್ಳಲು ಕರೆ ನೀಡಿದರು. ಗ್ರಾ.ಪಂ ಸದಸ್ಯರುಗಳಾದ ಚಕ್ಕೇರ ಸೂರ್ಯ ಅಯ್ಯಪ್ಪ, ಪಡಿಞರಂಡ ಕವಿತಾ ಪ್ರಭು, ಅಮ್ಮಯ್ಯ,…






