ಲೇಖಕ: admin

ಮಡಿಕೇರಿ ಮಾ 26  NEWS DESK : ಚಾಟ್ ಜಿಪಿಟಿಯಂಥ ತಾಂತ್ರಿಕ ಮಾಧ್ಯಮವನ್ನು ಹೆಚ್ಚು ಬಳಕೆ ಮಾಡುತ್ತಿದ್ದರೆ ನಮ್ಮ ಮನಸ್ಸಿನ ಕ್ರಿಯಾಶೀಲತೆಯನ್ನೇ ನಾಶ ಮಾಡುವ ಮೂಲಕ ಮೆದುಳಿನ ಮೇಲೆ ದುಫ್ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿರುವ ನಿಟ್ಟಿನಲ್ಲಿ ಅಗತ್ಯಕ್ಕೆ ತಕ್ಕಂತೆ ಎಐ, ಜಿಪಿಟಿಯಂಥ ಮಾಧ್ಯಮವನ್ನು ಬಳಸುವ ಮೂಲಕ ಮಾನಸಿಕ ಮತ್ತು ದೈಹಿಕ ಆರೋಗ್ಯದ ಕರೆ ಗಮನ ನೀಡಿ ಎಂದು ಆಯುಷ್ ಇಲಾಖೆಯ ಹಿರಿಯ ವೈದ್ಯಾಧಿಕಾರಿ ಡಾ. ಶುಭಾ ಕೆ.ಜಿ. ವಿದ್ಯಾಥಿ೯ಗಳಿಗೆ ಕರೆ ನೀಡಿದ್ದಾರೆ. ಕೊಡಗು ವಿಶ್ವವಿದ್ಯಾಲಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕೆ. ಎಂ. ಕಾರ್ಯಪ್ಪ ಕಾಲೇಜಿನ ಮಹಿಳಾ ಘಟಕ ಹಾಗೂ ಸಮಾಜಶಾಸ್ತ್ರ ಮತ್ತು ರಾಜ್ಯಶಾಸ್ತ್ರ ವಿಭಾಗಗಗಳ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ 2026 ರ ಅಂಗವಾಗಿ ” ಹೆಲ್ದಿ ಹ್ಯಾಬಿಟ್ಸ್ – ಹ್ಯಾಪಿ ಲೈಫ್” ವಿಷಯದ ಕುರಿತು ಆಯೋಜಿತ ಕಾಯಾ೯ಗಾರದಲ್ಲಿ ಅವರು ಮಾತನಾಡಿದರು. ಯೌವನದಲ್ಲಿ ಯುವತಿಯರು ಚಮ೯ ಸಂರಕ್ಷಣೆ ಸಂಬಂಧಿತ ಹೆಚ್ಚು ಜಾಗೖತೆ ವಹಿಸುವ ನಿಟ್ಟಿನಲ್ಲಿ ಆರೋಗ್ಯಕರ ಆಹಾರ ಸೇವಿಸಬೇಕು. ಆಯಾಯ…

Read More

ಮಡಿಕೇರಿ NEWS DESK ಮಾ.26 : ಶ್ರೀಕೋದಂಡ ರಾಮೋತ್ಸವ ಸಮಿತಿ ವತಿಯಿಂದ ಮಡಿಕೇರಿಯ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದಲ್ಲಿ 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ ವಿಜೃಂಭಣೆಯಿoದ ನಡೆಯುತ್ತಿದೆ. ಶ್ರೀ ರಾಮೋತ್ಸವದ ಅಂಗವಾಗಿ ಮಡಿಕೇರಿಯ ಗಾಂಧಿ ಮೈದಾನದಿಂದ ನಗರದಲ್ಲಿ ಭವ್ಯ ಮೆರವಣಿಗೆ ಸಾಗಿತು. ಮೆರವಣಿಗೆ ಸಂದರ್ಭ ವಿಶೇಷ ಪಲ್ಲಕ್ಕಿಯಲ್ಲಿ ಆಸೀನಗೊಂಡ ಶ್ರೀ ಕೋದಂಡ ರಾಮ ಪರಿವಾರ ಉತ್ಸವ ಮೂರ್ತಿಯನ್ನು ಹೊತ್ತು ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಲಾಯಿತು. ಗಾಂಧಿ ಮೈದಾನದಿಂದ ಜನರಲ್ ತಿಮ್ಮಯ್ಯ ವೃತ್ತಕ್ಕೆ ಸಾಗಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತು. ವಿವಿಧ ಆಕರ್ಷಕ ನೃತ್ಯ, ಚಂಡೆ ವಾದ್ಯ ಸಹಿತ ಸಾಂಸ್ಕೃತಿಕ ಕಲಾತಂಡಗಳು ಗಮನ ಸೆಳೆದವು. ಕಲಶ ಹೊತ್ತ ಮಹಿಳೆಯರು ಹಾಗೂ ವಿವಿಧ ಭಜನಾ ತಂಡಗಳಿAದ ಭಜನೆ ನಡೆಯಿತು. ಮಾ.27 ರಂದು ಬೆಳಿಗ್ಗೆ 8 ಗಂಟೆಯಿAದ ದೇವಾಲಯದ ಆವರಣದಲ್ಲಿ ಕ್ಷೇತ್ರ ತಂತ್ರಿಯವರಾದ ವೇದಮೂರ್ತಿ ಶ್ರೀಕೃಷ್ಣ ಉಪಾಧ್ಯ ಅವರ ನೇತೃತ್ವದಲ್ಲಿ ಶ್ರೀ ರಾಮ…

Read More

ಕೂಡಿಗೆ ಮಾ.26 NEWS DESK : ಕರ್ನಾಟಕ ಸರ್ಕಾರದ ಸಮಗ್ರ ಶಿಕ್ಷಣ – ಕರ್ನಾಟಕದ ರಾಜ್ಯ ನಿರ್ದೇಶನಾಲಯದ ನಿರ್ದೇಶನದಂತೆ ಕೂಡಿಗೆ  ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಯಲ್ಲಿ ಆರಂಭಿಸಲಾಗಿರುವ ಜಿಲ್ಲಾ ವೃತ್ತಿಪರ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ ಘಟಕದ ವತಿಯಿಂದ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್)ಯಲ್ಲಿ ಶುಮಾ.27 ರಂದು ಜಿಲ್ಲಾ ವೃತ್ತಿಪರ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ ( ಕೆರಿಯರ್ ) ಮೇಳವನ್ನು ಬೆಳಿಗ್ಗೆ 10.00 ಗಂಟೆಗೆ ಏರ್ಪಡಿಸಲಾಗಿದೆ ಎಂದು ಡಯಟ್ ಸಂಸ್ಥೆಯ ಪ್ರಾಂಶುಪಾಲರು ಆದ ಜಿಲ್ಲಾ  ಪದನಿಮಿತ್ತ ಉಪನಿರ್ದೇಶಕರು(ಅಭಿವೃದ್ದಿ) ರಾಮಚಂದ್ರ ರಾಜೇ ಅರಸ್  ತಿಳಿಸಿದರು. ಕೂಡಿಗೆ ಡಯಟ್ ಸಂಸ್ಥೆಯಲ್ಲಿ ನಡೆಯಲಿರುವ ಜಿಲ್ಲಾ ವೃತ್ತಿಪರ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ ಮೇಳಕ್ಕೆ ಸಂಸ್ಥೆಯ ಆವರಣದಲ್ಲಿ  ವಿವಿಧ ಇಲಾಖೆಗಳು ಮತ್ತು ವಿವಿಧ ಸಂಸ್ಥೆಗಳ ನಡೆಯಲಿರುವ ಪ್ರದರ್ಶನ ಹಾಗೂ ಮಾಹಿತಿಗಳಿಗೆ ಸಿದ್ದಪಡಿಸಿರುವ ಮಳಿಗೆ( ಸ್ಟಾಲ್) ಗಳ ವ್ಯವಸ್ಥೆಯನ್ನು ಪರಿಶೀಲಿಸಿ ಮಾತನಾಡಿದರು. ಈ ವೃತ್ತಿಪರ ಮೇಳದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅವರ…

Read More

ಸುಂಟಿಕೊಪ್ಪ ಮಾ.25 NEWS DESK : ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ಕೋದಂಡರಾಮ ದೇವಾಲಯದಲ್ಲಿ ರಾಮನವಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕೊದಂಡರಾಮ ಮಂದಿರದಲ್ಲಿ ಬೆಳಿಗ್ಗೆ ರಾಮ, ಸೀತೆ, ಲಕ್ಷ್ಮಣ, ಆಂಜನೇಯ ಸ್ವಾಮಿಗೆ ಬೆಳ್ಳಿಯ ಕವಚವನ್ನು ತೊಡಿಸಿ ಪೂಜೆ ಸಲ್ಲಿಸಲಾಯಿತು. ಪೂಜಾ ಕಾರ್ಯ ಕೈಂಕರ್ಯವನ್ನು ದೇವಾಲಯದ ಮುಖ್ಯ ಅರ್ಚಕ ಜಯಂತ್ ಭಟ್ ಅವರ ನೇತೃತ್ವದಲ್ಲಿ ನೆರವೇರಿಸಿದರು. ನಂತರ ಕುಂಕುಮಾರ್ಚನೆ, ಪಂಚಾಮೃತ ಅಭಿಷೇಕದ ಬಳಿಗೆ ರಾಮತಾರಕ ಹೋಮವನ್ನು ಪ್ರಧಾನ ಅರ್ಚಕ ಹಾ.ಮಾ.ಗಣೇಶ್ ಶರ್ಮಾ ಅವರ ನೇತೃತ್ವದಲ್ಲಿ ಜಯಂತ್ ಭಟ್, ನರಸಿಂಹ ಭಟ್, ಪುರುಷೋತ್ತಮ ಭಟ್, ಮನೋಜ್ ಭಟ್ ಇತರರು ನೆರವೇರಿಸಿದರು. ಮಧ್ಯಾಹ್ನ ವಿಶೇಷ ಮಂಗಳಾರತಿ, ಮಹಾ ಆರತಿ, ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ಸುಂಟಿಕೊಪ್ಪ ಸೇರಿದಂತೆ ಸುತ್ತಲಿನ ನೂರಾರು ಭಕ್ತರು ಆಗಮಿಸಿ ಪೂಜಾ ಕೈಂಕಾರ್ಯಗಳಲ್ಲಿ ಭಾಗವಹಿಸಿದರು. ಈ ಸಂದರ್ಭ ಗೌರಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ವಿಘ್ನೇಶ್, ನಿಖಿಲ್, ಪಿ.ಆರ್.ಸುನಿಲ್ ಕುಮಾರ್, ಧನುಕಾವೇರಪ್ಪ, ಜೆ.ಎನ್.ಚಂದ್ರಶೇಖರ್,…

Read More

ಮಡಿಕೇರಿ ಮಾ.26 NEWS DESK : ಮಹಿಳೆಯರು ಸಬಲರಾದಾಗ ಮಾತ್ರ ಸಮಾಜದ ಏಳಿಗೆ ಸಾಧ್ಯ ಎಂದು ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಸ್ಥಾಪಕ ಅಧ್ಯಕ್ಷರಾದ ಮುತ್ತಮ್ಮ ಕೋಟಿ ಅವರು ಹೇಳಿದರು. ಕೊಡಗು ಜಿಲ್ಲಾ, ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದ ವತಿಯಿಂದ ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಮಹಿಳಾ ಸಂಭ್ರಮ-2026ಅನ್ನು ಉದ್ಘಾಟಿಸಿ ಅವರು, ಮಾತನಾಡಿದರು. ಮಹಿಳೆಯರಿಗೆ ಸರ್ಕಾರದ ಹತ್ತು ಹಲವು ಯೋಜನೆಗಳಿದ್ದು, ಅದನ್ನು ಮಹಿಳೆಯರು ಸದುಪಯೋಗಪಡಿಸಿಕೊಳ್ಳಬೇಕು. ಆ ಮೂಲಕ ಬದುಕನ್ನು ಭದ್ರವಾಗಿ ರೂಪಿಸಿಕೊಳ್ಳಬೇಕು. ಮಹಿಳಾ ಘಟಕದ ಇಂತಹ ಕಾರ್ಯಕ್ರಮವು ಮಹಿಳೆಯರ ಸಂಘಟನೆಯ ಜೊತೆಗೆ ಕೊಡಗು ಜಿಲ್ಲೆಯಲ್ಲಿ ಕುಲಾಲ ಕುಂಬಾರ ಸಂಘಟನೆಗೆ ಪೂರಕವಾಗಿದೆ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾದ ಲತಾ ಮಡಿಕೆಬೀಡು ಮಾತನಾಡಿ, ಮಹಿಳೆಯರು ಸಂಘಟಿತಗೊಳ್ಳುವ ಮೂಲಕ ಸಮಾಜದ ಆಗು ಹೋಗುಗಳನ್ನು ತಿಳಿಯಬಹುದು. ಈ ರೀತಿಯ ಸ್ಪಂದನೆ ಮುಂದಿನ ದಿನಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಕುಲಾಲ ಕುಂಬಾರ ಸಂಘವು ಬೆಳವಣಿಗೆಗೆ ಇನ್ನಷ್ಟು ಪೂರಕವಾಗಲಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ…

Read More

ಮಡಿಕೇರಿ ಮಾ.26 NEWS DESK : ರೋಟರಿ ಮಡಿಕೇರಿ ವತಿಯಿಂದ ನಗರದ ಶ್ರೀ ರಾಜರಾಜೇಶ್ವರಿ ಶಾಲೆ ಮತ್ತು ಶ್ರೀ ರಮಾದೇವಿ ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯಕ್ಕೆ ದಹನ ಯಂತ್ರ (ಸ್ಯಾನಿಟರಿ ನ್ಯಾಪ್ಕಿನ್ ಇನ್ಸಿನರೇಟರ್) ವನ್ನು ವಿತರಿಸಲಾಯಿತು. ರೋಟರಿ ಸಂಸ್ಥೆಯು ಸಾಮಾಜಿಕ ಕಳಕಳಿ, ಶಿಕ್ಷಣ, ಆರೋಗ್ಯ ಜಾಗೃತಿ, ವೃತ್ತಿಪರ ಕೌಶಲ್ಯ, ಸ್ವಚ್ಛತೆ ಮತ್ತು ಪರಿಸರದ ಬಗ್ಗೆ ಹೆಚ್ಚು ಕಾಳಜಿ ಹೊಂದಿದೆ. ದಹನ ಯಂತ್ರ ವಿತರಿಸುವ ಮೂಲಕ ಇದನ್ನು ಸಾಬೀತು ಪಡಿಸಿದೆ ಎಂದು ರೋಟರಿ ಮಡಿಕೇರಿ ಪ್ರಮುಖರು ತಿಳಿಸಿದರು. ರೋಟರಿ ಮಡಿಕೇರಿ ಅಧ್ಯಕ್ಷೆ ಲಲಿತಾ ರಾಘವನ್, ಸಮುದಾಯ ಸೇವಾ ವಿಭಾಗದ ನಿರ್ದೇಶಕ ಸುದಯ್ ನಾಣಯ್ಯ, ಯುವಸೇವಾ ನಿರ್ದೇಶಕ ಅನಿಲ್ ಕೃಷ್ಣಾನಿ, ಮಲ್ಲಿಗೆ ಪೈ, ರೋ.ಈಶ್ವರ್ ಭಟ್, ಶ್ರೀ ರಾಜರಾಜೇಶ್ವರಿ ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಶ್ರೀ ರಮಾದೇವಿ ವಸತಿ ನಿಲಯದ ಸಿಬ್ಬಂದಿಗಳು ಹಾಜರಿದ್ದರು.

Read More

ಮಡಿಕೇರಿ NEWS DESK ಮಾ.26 : ಮಹಿಳಾ ಸಬಲೀಕರಣಕ್ಕಾಗಿ ವೃತ್ತಿಪರ ಕೌಶಲ್ಯ ಶಿಬಿರದಡಿ ರೋಟರಿ ಮಡಿಕೇರಿ ವತಿಯಿಂದ ಆಯೋಜಿಸಿರುವ ಟೈಲರಿಂಗ್ ತರಬೇತಿಗೆ ಮಡಿಕೇರಿಯ ಸರಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿ ಚಾಲನೆ ನೀಡಲಾಯಿತು. ಕಾಲೇಜು ಸಭಾಂಗಣದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸರಕಾರಿ ಪದವಿ ಪೂರ್ವ ಕಾಲೇಜ್ ನ ಪ್ರಾಂಶುಪಾಲ ಡಾ.ವೆಂಕಟೇಶ್ ಪ್ರಸನ್ನ ಅವರು ಕಾಲೇಜ್ ನಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿಪರ ಕೌಶಲ್ಯದ ತರಗತಿಗಳನ್ನು ನಡೆಸಿ ಸ್ವಾವಲಂಬಿ ಬದುಕಿಗೆ ಮಾರ್ಗದರ್ಶನ ನೀಡಲಾಗುತ್ತಿದೆ ಎಂದರು. ಬ್ಯೂಟಿಷಿಯನ್ ಮತ್ತು ಉತ್ತಮ ಆತಿಥ್ಯಕ್ಕೆ ಸಂಬAಧಿಸಿದ ತರಬೇತಿಗಳನ್ನು ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಶೈಕ್ಷಣಿಕ ಜೀವನದ ನಂತರ ಎದೆಗುಂದದೆ ಸ್ವಯಂ ಉದ್ಯೋಗ ಸೃಷ್ಟಿಸಿಕೊಳ್ಳಬೇಕು ಎನ್ನುವುದು ನಮ್ಮ ಗುರಿಯಾಗಿದೆ. ಇದೀಗ ಸಾಮಾಜಿಕ ಕಳಕಳಿ ಹೊಂದಿರುವ ರೋಟರಿ ಮಡಿಕೇರಿ ಸಂಸ್ಥೆ ಕೂಡ ವಿದ್ಯಾರ್ಥಿನಿಯರಿಗೆ ಟೈಲರಿಂಗ್ ತರಬೇತಿ ನೀಡಲು ಮುಂದೆ ಬಂದಿರುವುದು ಹೆಚ್ಚು ಉಪಯುಕ್ತವೆನಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ರೋಟರಿ ಮಡಿಕೇರಿ ಅಧ್ಯಕ್ಷರಾದ ಲಲಿತಾ ರಾಘವನ್ ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು…

Read More

ಮಡಿಕೇರಿ NEWS DESK ಮಾ.26 : ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ನಾಪೋಕ್ಲುನಲ್ಲಿ ನಡೆಯಲಿರುವ ಹಿಂದು ಜನ ಜಾಗೃತಿ ಸಮಾವೇಶ ಕಾರ್ಯಕ್ರಮದ ಹಿನ್ನಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರದಂತೆ ಏಪ್ರಿಲ್ 1 ರಂದು ಬೆಳಗ್ಗೆ 6 ಗಂಟೆಯಿoದ ಮಧ್ಯರಾತ್ರಿ 12 ಗಂಟೆಯವರೆಗೆ ನಾಪೋಕ್ಲು ಹಾಗೂ ಅದರ ಸುತ್ತಮುತ್ತಲಿನ 01 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೊಟೇಲ್ ಮತ್ತು ಕ್ಲಬ್‌ಗಳಲ್ಲಿ ಎಲ್ಲಾ ವಿಧದ ಮದ್ಯ ಹಾಗೂ ಹೋಮ್‌ಮೇಡ್ ವೈನ್ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶ ಹೊರಡಿಸಿದ್ದಾರೆ.

Read More

ಮಡಿಕೇರಿ NEWS DESK ಮಾ.26 : ಜಿಲ್ಲಾ ಕೇಂದ್ರ ಮಡಿಕೇರಿಯ ಸಮೀಪದ ಇಬ್ನಿವಳವಾಡಿ ಗ್ರಾಮದ ಸುತ್ತಮುತ್ತ ಕಾಣಿಸಿಕೊಂಡಿದ್ದ ಹುಲಿಯ ಪತ್ತೆಗಾಗಿ ಅರಣ್ಯ ಇಲಾಖೆ ಸಾಕಾನೆಗಳು ಮತ್ತು ಆಧುನಿಕ ಡ್ರೋನ್ ಬಳಸಿ ಕಾರ್ಯಾಚರಣೆ ಆರಂಭಿಸಿದೆ. ಇಬ್ನಿವಳವಾಡಿ ಗ್ರಾಮದ ಕಾಫಿ ತೋಟವೊಂದರಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾದಲ್ಲಿ ಬುಧವಾರ ಬೆಳಗ್ಗೆ ನಿರಾತಂಕವಾಗಿ ಸಂಚರಿಸುತ್ತಿರುವ ಹುಲಿಯ ದೃಶ್ಯ ಸೆರೆಯಾಗಿತ್ತು. ಹುಲಿ ಸಂಚಾರದಿoದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿತ್ತು. ಇಬ್ನಿವಳವಾಡಿ ಗ್ರಾಮದ ಪಕ್ಕದಲ್ಲೆ ಇರುವ ಅರಣ್ಯ ಪ್ರದೇಶ, ಸಿಂಕೋನ, ಕಗ್ಗೋಡ್ಲು ಮತ್ತಿತರ ಗ್ರಾಮಗಳಲ್ಲಿ ಹುಲಿ ತೆರಳಿರುವ ಸಾಧ್ಯತೆಗಳಿರುವ ಕಾರಣ ಅರಣ್ಯ ಇಲಾಖೆ, ಹುಲಿಯ ಶೋಧ ಕಾರ್ಯಕ್ಕೆ ಸಾಕಾನೆಗಳನ್ನು ಬಳಸಿಕೊಂಡಿದೆ. ಸಾಕಾನೆಗಳಾದ ಕಂಜನ್, ಈಶ್ವರ್, ಪ್ರಶಾಂತ್ ಆನೆಗಳನ್ನು ಬಳಸಿಕೊಂಡು ಇಬ್ನಿವಳವಾಡಿ ಸುತ್ತಮುತ್ತಲ ಪ್ರದೇಶಗಳಲ್ಲಿ ಹುಲಿಯ ಶೋಧ ಕಾರ್ಯವನ್ನು ಇಲಾಖಾ ಸಿಬ್ಬಂದಿಗಳು ನಡೆಸುತ್ತಿದ್ದಾರೆ. ಸಾಕಾನೆಗಳೊಂದಿಗೆ ಅತ್ಯಾಧುನಿಕ ಥರ್ಮಲ್ ಡ್ರೋನ್ ಬಳಸಿ ಇಬ್ನಿವಳವಾಡಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಹುಲಿಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆಯಾದರು, ಇಲ್ಲಿಯವರೆಗು ಸುಳಿವು ದೊರಕಿಲ್ಲ. ಅರಣ್ಯ ಇಲಾಖೆಯ ಡಿಸಿಎಫ್, ಎಸಿಎಫ್…

Read More

ಮಡಿಕೇರಿ NEWS DESK ಮಾ.26 : ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆಯಲಿರುವ ರಾಮನವಮಿ ಉತ್ಸವ ಕಾರ್ಯಕ್ರಮದ ಹಿನ್ನಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರದಂತೆ ಮಾರ್ಚ್, 27 ರಂದು ಬೆಳಗ್ಗೆ 6 ಗಂಟೆಯಿoದ ಮಧ್ಯರಾತ್ರಿ 12 ಗಂಟೆಯವರೆಗೆ ಸೋಮವಾರಪೇಟೆ ಪಟ್ಟಣ ಪಂಚಾಯತ್ ವ್ಯಾಪ್ತಿ, ಅಬ್ಬೂರ ಕಟ್ಟೆ ಗ್ರಾಮ, ಐಗೂರು ಗ್ರಾಮ ಮತ್ತು ಮಾದಾಪುರ ಗ್ರಾಮ ಹಾಗೂ ಅದರ ಸುತ್ತಮುತ್ತಲಿನ 01 ಕಿ.ಮೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೊಟೇಲ್ ಮತ್ತು ಕ್ಲಬ್‌ಗಳಲ್ಲಿ ಎಲ್ಲಾ ವಿಧದ ಮದ್ಯ ಹಾಗೂ ಹೋಮ್ ಮೇಡ್ ವೈನ್ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶ ಹೊರಡಿಸಿದ್ದಾರೆ.

Read More