ಲೇಖಕ: admin

ಮಡಿಕೇರಿ ಫೆ.3 :  ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ಫೆಬ್ರವರಿ 6 ರವರೆಗೆ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ‘ಫಲಪುಷ್ಪ ಪ್ರದರ್ಶನ’ ಕಣ್ಮನ ಸೆಳೆಯುತ್ತಿದೆ. ಅಲ್ಲಿನ ಪುಷ್ಪಗಳಿಂದ ನಿರ್ಮಾಣವಾಗಿರುವ ಕಲಾಕೃತಿಗಳು ಒಂದಕ್ಕೊಂದು ಗಮನ ಸೆಳೆಯುತ್ತಿವೆ. ನಾಲ್ಕುನಾಡು ಅರಮನೆ ಕಲಾಕೃತಿಯ ಚಿತ್ರದಲ್ಲಿ ರಾಜರು ಕುಳಿತಿರುವುದು, ಹಾಗೆಯೇ ಕೊಡವ ಉಡುಪಿನಲ್ಲಿ ಸ್ವಾಗತಿಸುವ ಚಿತ್ರಗಳು, ಸಿಂಡ್ರೆಲಾ, ಹಾಗೆಯೇ ವೈನ್‍ಕಪ್ ಒಳಗೊಂಡ ಚಿತ್ರಗಳು, ಹೆಸರು ಕಾಳು ಮತ್ತು ಬಿಳಿ ಎಳ್ಳು ಮೂಲಕ ಕ್ರೀಯಾಶೀಲವಾಗಿ ನಿರ್ಮಾಣ ಮಾಡಿರುವ ಸೈನಿಕ, ಹೀಗೆ ರಾಜಸೀಟು ಉದ್ಯಾನವನದಲ್ಲಿ ಮತ್ತೊಮ್ಮೆ ಮೊಗದೊಮ್ಮೆ ನೋಡುವಂತೆ ಜನಮನ ಸೆಳೆಯುತ್ತಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್,ಅಂಬೇಡ್ಕರ್, ವೀರಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ, ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ, ರಾಷ್ಟ್ರಕವಿ ಕುವೆಂಪು, ಸ್ವಾಮಿ ವಿವೇಕಾನಂದ, ನೇತಾಜಿ ಸುಭಾಷ್ ಚಂದ್ರಬೋಸ್, ಭಗತ್‍ಸಿಂಗ್, ಪುನಿತ್ ರಾಜ್‍ಕುಮಾರ್ ಸೇರಿದಂತೆ ವಿವಿಧ ಗಣ್ಯರ ಕಲಾಕೃತಿಯನ್ನು ತರಕಾರಿ/ ಹಣ್ಣುಗಳಲ್ಲಿ ಕೆತ್ತನೆ ಮಾಡಲಾಗಿದೆ. ವಿವಿಧ ಅಲಂಕಾರಿಕ ಗಿಡಗಳಾದ ಬೋನ್ಸ್‍ಯ್ ಗಿಡಗಳ ಪ್ರದರ್ಶನ, ಇಕೆಬಾನೆ…

Read More

ಸೋಮವಾರಪೇಟೆ ಫೆ.3 : ಯುವ ಶಕ್ತಿ ರಾಷ್ಟ್ರದ ಸಂಪತ್ತಾಗಬೇಕಾದರೆ, ಮೌಲ್ಯಾಧಾರಿತ ಶಿಕ್ಷಣ ಸಿಗಬೇಕು ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು. ಯಡೂರು ಗ್ರಾಮದ ಬಿ.ಟಿ.ಚನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲ ಎಚ್.ಎನ್.ರಾಜು ನಿವೃತ್ತಿ ಹೊಂದಿದ ಕಾರಣ ಕಾಲೇಜಿನಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದ ದಿವ್ಯಸಾನಿಧ್ಯ ವಹಿಸಿ ಮಾತನಾಡಿದರು. ಪ್ರಾಧ್ಯಾಪಕರು ಶ್ರದ್ಧೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸಮಯ ಕಳೆಯಲು ಪಾಠ ಮಾಡಬಾರದು. ಗುರುಗಳು ವಿದ್ಯಾದಾನ ಮಾಡಬೇಕು. ಒಂದು ಸರ್ಕಾರಿ ಕಾಲೇಜು ಸಾಧನೆ ಮಾಡಬೇಕಾದರೆ ನಾಲ್ಕು ಚಕ್ರಗಳಾದ ಆಡಳಿತ ಮಂಡಳಿ, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಸಮಾನವಾಗಿ ಚಲಿಸಬೇಕು. ಹೊಂದಾಣಿಕೆ ಹಾಗು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು. ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಂಗ ವಿಭಾಗದ ಕುಲಪತಿ ಡಾ.ಪಿ.ಎಲ್.ಧರ್ಮ ಮಾತನಾಡಿ, ಪ್ರಾಧ್ಯಾಪಕರು, ಉಪನ್ಯಾಸಕರು, ಕಾಲೇಜಿನಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಉಪಯೋಗಿಕೊಂಡು ಗುಣಮಟ್ಟದ ಶಿಕ್ಷಣ ನೀಡುವುದು ಕರ್ತವ್ಯವಾಗಿದೆ. ಪ್ರತಿನಿತ್ಯ ಅಭ್ಯಾಸ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಪಾಠ ಮಾಡಬೇಕು. ವಿದ್ಯಾರ್ಥಿಗಳ ಪ್ರತಿಭೆಗಳನ್ನು ಗುರುತಿಸಿ, ಸಲಹೆಗಳೊಂದಿಗೆ…

Read More

ಮಡಿಕೇರಿ ಫೆ.3 :  ಸುಂಟಿಕೊಪ್ಪ ಗ್ರಾ.ಪಂ ಮತ್ತು ಅಕ್ಷರ ಫೌಂಡೇಶನ್  ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಗ್ರಾ.ಪಂ  ಮಟ್ಟದ ಗಣಿತ ಸ್ಪರ್ಧೆಯ 4ನೇ ತರಗತಿ ವಿಭಾಗದಲ್ಲಿ ಸುಂಟಿಕೊಪ್ಪ ಜಿ.ಎಂ.ಪಿ. ಶಾಲೆಯ ವಿದ್ಯಾರ್ಥಿನಿ ಹಂಸಿಕ ಪ್ರಥಮ ಸ್ಥಾನ ಪಡೆದಿದ್ದಾಳೆ. ಗದ್ದೆಹಳ್ಳ ಜಿ. ಹೆಚ್. ಪಿ. ಶಾಲೆಯ ಜಸ್ಮಿತಾ ದ್ವಿತೀಯ ಮತ್ತು ಸನಾ ತೃತೀ ಯ ಸ್ಥಾನ ಗಳಿಸಿದ್ದಾರೆ. 5ನೇ ತರಗತಿ ವಿಭಾಗದಲ್ಲಿ ಸುಂಟಿಕೊಪ್ಪ ಜಿ. ಎಂ. ಪಿ. ಶಾಲೆಯ ಆಯಿಷಾ ಪ್ರಥಮ, ಪಂಚಮಿ ದ್ವಿತೀಯ ಮತ್ತು ಫಾತಿಮತ್ ಆನ್ ಶಿಫಾ ತೃತೀಯ ಸ್ಥಾನ ಪಡೆದರು. 6ನೇ ತರಗತಿ ವಿಭಾಗದಲ್ಲಿ ಸುಂಟಿಕೊಪ್ಪ ಜಿ. ಎಂ. ಪಿ. ಶಾಲೆಯ ಸುಜೈನ್ ಪ್ರಥಮ, ಮಹಮ್ಮದ್ ಅಜ್ಮಲ್ ದ್ವಿತೀಯ ಮತ್ತು ಗದ್ದೆಹಳ್ಳ ಜಿ. ಹೆಚ್. ಪಿ. ಶಾಲೆಯ ದೀಕ್ಷಿತ್ ತೃತೀಯ ಸ್ಥಾನ ಗಳಿಸಿರುವರು.

Read More

ಮಡಿಕೇರಿ ಫೆ.3 : ಕೊಡಗಿನ ಗಡಿ ಭಾಗದಲ್ಲಿ ಸೂಕ್ತ ತಪಾಸಣಾ ಕೇಂದ್ರಗಳು ಇಲ್ಲದಿರುವುದರಿಂದ ತೆರಿಗೆ ವಂಚನೆ ಮಾಡಿ ನಿಯಮ ಬಾಹಿರವಾಗಿ ಅಂತರ್ ರಾಜ್ಯ ವಾಹನಗಳು ಪ್ರವೇಶ ಮಾಡುತ್ತಿವೆ ಎಂದು ಆರೋಪಿಸಿರುವ ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಅಸೋಸಿಯೇಷನ್, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್ ನ ರಾಜ್ಯ ಸಂಘಟನಾ ಕಾರ್ಯದರ್ಶಿ ವಿನ್ಸೆಂಟ್ ಬಾಬು ಹೊರ ರಾಜ್ಯಗಳ ಟ್ಯಾಕ್ಸಿಗಳು ನಿಯಮ ಉಲ್ಲಂಘಿಸಿ ಸಂಚರಿಸುತ್ತಿರುವುದರಿಂದ ಜಿಲ್ಲೆಯ ಟ್ಯಾಕ್ಸಿ ಮಾಲೀಕರು ಹಾಗೂ ಚಾಲಕರು ನಿರುದ್ಯೋಗದ ಸಮಸ್ಯೆ ಎದುರಿಸುವಂತ್ತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಕೊಡಗಿನ ಪೊನ್ನಂಪೇಟೆ ತಾಲೂಕಿನ ಪೆರುಂಬಾಡಿ ಮತ್ತು ವಿರಾಜಪೇಟೆ ತಾಲೂಕಿನ ಕುಟ್ಟದಲ್ಲಿ ಸಾರಿಗೆ ಇಲಾಖೆಯ ಚೆಕ್‍ಪೋಸ್ಟ್ (ಆರ್.ಟಿ.ಓ) ಗಳಿಲ್ಲ. ಇದೇ ಕಾರಣದಿಂದ ಕೊಡಗು ಜಿಲ್ಲೆಯ ಮೂಲಕ ಕೇರಳ ಮತ್ತು ಇತರ ರಾಜ್ಯಗಳ ವಾಹನಗಳು ಕರ್ನಾಟಕವನ್ನು ಪವೇಶಿಸುತ್ತಿವೆ. ರಾಜ್ಯ ಸರ್ಕಾರಕ್ಕೆ ಕೋಟ್ಯಾಂತರ ರೂ.ಗಳ ತೆರಿಗೆ ಹಣ ನಷ್ಟವಾಗುತ್ತಿದೆ ಎಂದು ಆರೋಪಿಸಿದರು. ಕರ್ನಾಟಕದಿಂದ ಕೇರಳ…

Read More

ಚೆಯ್ಯಂಡಾಣೆ  ಫೆ.3 : ಮೂರು ಶತಮಾನಗಳ ಇತಿಹಾಸವಿರುವ  ಹಲವಾರು ಪವಾಡಗಳಿಗೆ ಹೆಸರಾದ ಎಡಪಾಲ ಅಂಡತ್ ಮಾನಿ ದರ್ಗಾ ಶರೀಫ್ ನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಪವಾಡ ಪುರುಷರ ಹೆಸರಿನಲ್ಲಿ ಪ್ರತಿವರ್ಷ  ನಡೆಸಿಕೊಂಡು ಬರುತ್ತಿರುವ ವಾರ್ಷಿಕ ಉರೂಸ್ ಸಮಾರಂಭವು ಈ ಬಾರಿ ಫೆ.5 ರಿಂದ 7ರ ವರೆಗೆ ವಿವಿಧ ಕಾರ್ಯಕ್ರಮ ಗಳೊಂದಿಗೆ  ನಡೆಯಲಿದೆ ಎಂದು ಎಡಪಾಲ ಮುಸ್ಲಿಂ ಜಮಾಅತ್ ಅಧ್ಯಕ್ಷ ಕೆ.ಯು. ಶಾಫಿ ತಿಳಿಸಿದ್ದಾರೆ. ಫೆ.5 ರಂದು  ಸಂಜೆ 4 ಗಂಟೆಗೆ ಎಡಪಾಲ ಮುಸ್ಲಿಂ ಜಮಾಅತ್ ಅಧ್ಯಕ್ಷ ಕೆ.ಯು.ಶಾಫಿ ಧ್ವಜಾರೋಹಣ ನೆರವೇರಲಿಸಲಿದ್ದಾರೆ. ರಾತ್ರಿ ಸಿರಾಜುದ್ದೀನ್ ದಾರಿಮಿ ಕಕ್ಕಾಡ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಫೆ.6 ರಂದು ಸಂಜೆ ಸನ್ಮಾನ ಹಾಗೂ ದುಆ ಮಜ್ಲಿಸ್ ನಡೆಯಲಿದ್ದು, ಸಯ್ಯದ್ ಹಮೀದಲಿ ಶಿಹಾಬ್ ತಂಘಳ್ ಪಾಣಕ್ಕಾಡ್ ನೇತೃತ್ವ ವಹಿಸಲಿದ್ದಾರೆ. ಮುಖ್ಯ ಭಾಷಣವನ್ನು ಅಲ್ ಹಾಜ್ ಕೆ.ಎಂ. ಮೊಯ್ದು ಪೈಝಿ ಮಾಡಲಿದ್ದಾರೆ. ರಾತ್ರಿ ಶಮೀರ್ ಆಶ್ರಫಿ ಕಾಟ್ಟಾ0ಪಳ್ಳಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಫೆ.7ರಂದು ರಾತ್ರಿ ಉಸ್ತಾದ್ ಬಶೀರ್ ಪೈಝಿ ದೇಶ…

Read More

ಮಡಿಕೇರಿ ಫೆ.3 : ಮಂಡ್ಯ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೊಡಗು ಮೂಲದ ಬಲಮುರಿ ಗ್ರಾಮದ ಚೇಯ್ಯಂಡ ತಿಮ್ಮಯ್ಯ ಅವರು ನೇಮಕಗೊಂಡಿದ್ದಾರೆ. ಚೇಯ್ಯಂಡ ಈರಪ್ಪ ಹಾಗೂ ಲೀಲಾ ದಂಪತಿಗಳ ಪುತ್ರರಾಗಿರುವ ಇವರು ಈ ಹಿಂದೆ ಬೆಸ್ಕಾಂ ಎಸ್ಪಿಯಾಗಿ  ಕಾರ್ಯನಿರ್ವಹಿಸಿದ್ದರು.

Read More

ಮಡಿಕೇರಿ ಫೆ.3 : ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದoತೆ ಮೂವರು ಆರೋಪಿಗಳನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. 12 ಲಕ್ಷ ರೂ. ಮೌಲ್ಯದ 190 ಗ್ರಾಂ ಚಿನ್ನಾಭರಣ ಮತ್ತು 3 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಕುಶಾಲನಗರದ ಡಿವೈಎಸ್ಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಗ್ರಾಮದ ಎಂ.ಎ.ಇಬ್ರಾಹಿಂ (27), ಕೋಕೇರಿ ಗ್ರಾಮದ ಸುದೀಪ್ (21) ಹಾಗೂ ಮಡಿಕೇರಿಯ ಅಜಾದ್ ನಗರ ಬಡಾವಣೆಯ ಎಂ.ಎಂ.ವಾಸಿo (29) ಬಂಧಿತ ಆರೋಪಿಗಳು. ಇವರೊಂದಿಗೆ ಇನ್ನೂ ಮೂವರು ಭಾಗಿಯಾಗಿದ್ದು, ಇವರುಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಕಳ್ಳತನದ ಹಣದಿಂದ ಖರೀದಿಸಿದ ಮೂರು ಕಾರುಗಳು ಮತ್ತು ಕಳ್ಳತನ ಮಾಡಿದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಇವರುಗಳ ಬಂಧನದಿಂದ ಕುಶಾಲನಗರ ವ್ಯಾಪ್ತಿಯ 2, ನಾಪೋಕ್ಲು ವ್ಯಾಪ್ತಿಯ 2 ಮತ್ತು ವೀರಾಜಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯ 1 ಪ್ರಕರಣವನ್ನು ಬಯಲಿಗೆಳೆಯಲಾಗಿದೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜು, ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ವೃತ್ತ ನಿರೀಕ್ಷಕ…

Read More

ಮಡಿಕೇರಿ ಫೆ.3 : ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡವನ್ನು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುಜಾಕುಶಾಲಪ್ಪ, ಸಹಕಾರ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.

Read More

ಮಡಿಕೇರಿ ಫೆ.3 : ಭಾರತೀಯ ಕ್ರೀಡಾ ಪ್ರಾಧಿಕಾರ(ಸಾಯಿ)ದಿಂದ ಅಂತರ ದಕ್ಷಿಣ ವಲಯದ ಬಾಲಕಿಯರ ಹಾಕಿ ಪಂದ್ಯಾವಳಿಯು ಫೆಬ್ರವರಿ, 7 ಮತ್ತು 8 ರಂದು ನಗರದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಕಿ ಟರ್ಫ್ ಮೈದಾನದಲ್ಲಿ ನಡೆಯಲಿದೆ. ಕೇರಳದ ಕೊಲ್ಲಂ, ಹೈದರಾಬಾದ್ ಮತ್ತು ಮಡಿಕೇರಿಯ ಕ್ರೀಡಾ ಪ್ರಾಧಿಕಾರದ ಹಾಕಿ ತಂಡಗಳು ಪಾಲ್ಗೊಳ್ಳಲಿವೆ. ಫೆಬ್ರವರಿ, 7 ರಂದು ಮಧ್ಯಾಹ್ನ 3 ಗಂಟೆಗೆ ಬಾಲಕಿಯರ ಹಾಕಿ ಪಂದ್ಯಾವಳಿಗೆ ಚಾಲನೆ ದೊರೆಯಲಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಷ್ಮಯಿ ಅವರು ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ. ಹಾಗೆಯೇ ಫೆಬ್ರವರಿ, 8 ರಂದು ಸಂಜೆ 5 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಭಾರತೀಯ ಕ್ರೀಡಾ ಪ್ರಾಧಿಕಾರದ ತರಬೇತಿ ಕೇಂದ್ರದ ಮೇಲ್ವಿಚಾರಕರಾದ ಮಿನಿ ಉಣ್ಣಿರಾಜ್ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಫೆ.3 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗ ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ(ಜೆಆರ್‍ಎಫ್) ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಸರ್ಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ 45 ದಿನಗಳ ತರಬೇತಿ ಶಿಬಿರ ಏರ್ಪಡಿಸಲಾಗಿದೆ. ಆಸಕ್ತರು ಫೆಬ್ರುವರಿ 8 ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ದ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ 0821-2515944 ಈ ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವರಾದ ಪ್ರೊ. ಕೆಎಲ್‍ಎನ್. ಮೂರ್ತಿ ಅವರು ತಿಳಿಸಿದ್ದಾರೆ.

Read More