ಲೇಖಕ: admin

ಸೋಮವಾರಪೇಟೆ ಫೆ.3 : ತಾಲ್ಲೂಕಿನಲ್ಲಿ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಗಳ ಮೂವರು ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಲ್ಯಾಪ್‍ಟಾಪ್‍ಗಳನ್ನು ವಿತರಿಸಲಾಯಿತು. ಎಸ್‍ಎಸ್‍ಎಲ್‍ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಐಗೂರು ಸರಕಾರಿ ಪ್ರೌಢಶಾಲೆಯ ಸ್ನೇಹಾ, ನೆಲ್ಲಿಹುದಿಕೇರಿ ಪ್ರೌಢಶಾಲೆಯ ಅಸ್ಮಿಯಾ, ಅಂಕನಳ್ಳಿ ಪ್ರೌಢಶಾಲೆಯ ಅಭಿಷೇಕ್ ಅವರುಗಳಿಗೆ ಲ್ಯಾಪ್‍ಟಾಪ್‍ಗಳನ್ನು ವಿತರಿಸಲಾಯಿತು. ಈ ಸಂದರ್ಭ ತಹಶೀಲ್ದಾರ್ ಎಸ್.ಎನ್.ನರಗುಂದ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ.ಚಂದ್ರು, ರಾಷ್ಟ್ರೀಯ ಹಬ್ಬಗಳ ಸಮಿತಿ ಉಪಾಧ್ಯಕ್ಷರಾದ ಎಂ.ಬಿ.ಅಭಿಮನ್ಯು ಕುಮಾರ್ ಇದ್ದರು.

Read More

ಸೋಮವಾರಪೇಟೆ ಫೆ.3 : ಏಷ್ಯಾ ಬುಕ್ ಆಫ್ ರೆಕಾರ್ಡ್ ಸಂಸ್ಥೆ ವತಿಯಿಂದ ನೀಡುವ ಪ್ರಶಸ್ತಿಗೆ ಸೋಮವಾರಪೇಟೆಯ ನಿವಾಸಿ, ಸಿವಿಲ್ ಇಂಜಿನಿಯರ್ ಹಾಗೂ ಪುಷ್ಪಗಿರಿ ಜೇಸಿ ಸಂಸ್ಥೆ ಪೂರ್ವ ವಲಯ ಉಪಾಧ್ಯಕ್ಷರಾದ ಎ.ಆರ್.ಮಮತ ಭಾಜನರಾಗಿದ್ದಾರೆ. ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕಾಗಿ ಈ ಪ್ರಶಸ್ತಿ ನೀಡಿ ಗೌರವಿಸಿದೆ ತುಮಕೂರು ಜೆಸಿಐ ಮೆಟ್ರೋ ವತಿಯಿಂದ ತುಮಕೂರು ಚೇತನ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದರು.

Read More

ಕುಶಾಲನಗರ ಫೆ.2 : ಕುಶಾಲನಗರ- ಕೊಪ್ಪ ಗಡಿಭಾಗದಲ್ಲಿ ಹೆದ್ದಾರಿ ಬದಿಯಲ್ಲಿದ್ದ ಮರಗಳ ಕೊಂಬೆಗಳನ್ನು ಕಡಿಯುವ ಮೂಲಕ ಮರ ಹಾಗೂ ಪಕ್ಷಿಗಳ ನೆಲೆಗೆ ಹಾನಿ ಮಾಡಲಾಗಿದೆ ಎಂದು ಆರೋಪಿಸಿ ಪರಿಸರ ಪ್ರೇಮಿ ಚಂದ್ರಮೋಹನ್ ಮತ್ತಿತರರು ಅರಣ್ಯ ಇಲಾಖೆಗೆ ದೂರು ಸಲ್ಲಿಸಿದ್ದಾರೆ. ಮರದ ಕೊಂಬೆಗಳನ್ನು ಕಡಿದ ಕ್ರಮವನ್ನು ಖಂಡಿಸಿ ದಿಢೀರ್ ಪ್ರತಿಭಟನೆ ನಡೆಸಿದ ಚಂದ್ರಮೋಹನ್ ಹಾಗೂ ಸ್ಥಳೀಯರು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಕೆ.ವಿಶಿವರಾಂ ಭೇಟಿ ನೀಡಿ ಮರ ಕಡಿಯದಂತೆ ಸೂಚನೆ ನೀಡಿದರೂ ಸ್ಪಂದಿಸದೆ ಎರಡು ಮರಗಳ ಕೊಂಬೆಯನ್ನು ಕಡಿಯಲಾಗಿದೆ. ಮರ ಕಡಿಯಲು ಕಾರಣಕರ್ತರಾದ ಇಬ್ಬರು ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಚಂದ್ರಮೋಹನ್ ಆಗ್ರಹಿಸಿದರು. ಸ್ಥಳೀಯ ಪರಿಸರ ಪ್ರೇಮಿಗಳಾದ ಕೊಡಗನ ಹರ್ಷ, ತೋರೆರ ಉದಯ್, ಸುಮನ್ ಬಾಲಚಂದ್ರ, ಎಂ.ಕೃಷ್ಣ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಫೆ.2 : ಮಣ್ಣು ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಳು ಸಾಗಾಟದ ಕೇಸ್ ದಾಖಲಿಸುವುದಾಗಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಲಂಚದ ಬೇಡಿಕೆ ಇಟ್ಟ ಆರೋಪದಡಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿಯೊಬ್ಬರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಮಶೇಖರ್ ಸಜ್ಜನ್ ಎಂಬುವವರೇ ಲಂಚ ಕೇಳಿದ ಆರೋಪದಲ್ಲಿ ಸಿಲುಕಿರುವ ಪೊಲೀಸ್ ಸಿಬ್ಬಂದಿ. ಬಿಳಿಗೇರಿ ಗ್ರಾಮದ ವ್ಯಕ್ತಿಯೊಬ್ಬರು ಬೊಲೊರೋ ವಾಹನದಲ್ಲಿ ಮನೆಗೆ ಮಣ್ಣು ಸಾಗಿಸುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ 10 ಸಾವಿರ ರೂ.ಗಳನ್ನು ನೇರವಾಗಿ ಪಡೆದುಕೊಳ್ಳದೆ ನಗರದ ಹಳೇ ಖಾಸಗಿ ಬಸ್ ನಿಲ್ದಾಣದ ಬೀಡಾ ಅಂಗಡಿಯ ಮಾಲೀಕನ ಬಳಿ ನೀಡುವಂತೆ ಪೊಲೀಸ್ ಸಿಬ್ಬಂದಿ ಹೇಳಿದ್ದರು ಎಂದು ಹೇಳಲಾಗಿದೆ. ಹಣ ಸ್ವೀಕರಿಸುತ್ತಿದ್ದ ಬೀಡಾ ಅಂಗಡಿ ಮಾಲೀಕನನ್ನು ಲೋಕಾಯುಕ್ತರು ಹಣ ಸಹಿತ ವಶಕ್ಕೆ ಪಡೆದರು. ಆತ ನೀಡಿದ ಮಾಹಿತಿ ಆಧರಿಸಿ ಪೊಲೀಸ್ ಸಿಬ್ಬಂದಿ ಸೋಮಶೇಖರ್ ಸಜ್ಜನ್ ನನ್ನು ಲೋಕಾಯುಕ್ತ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಈ ಪ್ರಕರಣದಲ್ಲಿ ಕೆಲವು ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದ್ದು, ಅದರ ಆಧಾರದಲ್ಲಿ ತನಿಖೆ ಮುಂದುವರೆದಿದೆ ಎಂದು ಮೈಸೂರು…

Read More

ವಿರಾಜಪೇಟೆ ಫೆ.2 : ವಿರಾಜಪೇಟೆಯ ಖಾಸಗಿ ಬಸ್ಸು ನಿಲ್ದಾಣ ವ್ಯಾಪ್ತಿಯಲ್ಲಿ ಭಿಕ್ಷೆ ಬೇಡಿ ಜೀವನ ಸಾಗಿಸುತಿದ್ದ 60 ವರ್ಷದ ವೃದ್ಧೆಯೊಬ್ಬರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. 2022 ಡಿ.25 ರಂದು ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಸೇರಿಸುವ ಸಂದರ್ಭ ಹೆಸರನ್ನು ಪ್ರೇಮ ಎಂದು ದಾಖಲಿಸಿಕೊಳ್ಳಲಾಗಿದೆ. ಶವವನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು, ವಾರಸುದಾರರು ಯಾರೆಂದು ತಿಳಿದಿಲ್ಲ. ಮೃತರ ಮಾಹಿತಿ ತಿಳಿದು ಬಂದಲ್ಲಿ ವಿರಾಜಪೇಟೆ ನಗರ ಪೊಲೀಸ್ ಠಾಣೆ 08274-257333 ಮತ್ತು ನಗರ ಠಾಣಾಧಿಕಾರಿ 9480804955 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Read More

ಮಡಿಕೇರಿ ಫೆ.2 : ಹಿಂದೂ ಸಂಘಟನೆಗಳ ಇಬ್ಬರು ಪ್ರಮುಖರನ್ನು ಕೊಡಗಿನಿಂದ ಗಡಿಪಾರು ಮಾಡುವ ಕುರಿತು ಉಪವಿಭಾಗಾಧಿಕಾರಿಗಳ ನ್ಯಾಯಾಲಯದಿಂದ ಸಂಬಂಧಿಸಿದ ಆರೋಪಿಗಳಿಗೆ ಹೇಳಿಕೆ ನೀಡುವಂತೆ ನೋಟೀಸ್ ನೀಡಿರುವ ಕ್ರಮವನ್ನು ಖಂಡಿಸಿ ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಗಡಿಪಾರಿನ ಪ್ರಸ್ತಾಪವನ್ನು ಕೈಬಿಡಬೇಕೆಂದು ಒತ್ತಾಯಿಸಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭಾ ನಾಮನಿರ್ದೇಶಿತ ಸದಸ್ಯ ಹಾಗೂ ಹಿಂದೂ ಸಂಘಟನೆಯ ಪ್ರಮುಖ ಕವನ್ ಕಾವೇರಪ್ಪ ಮತ್ತು ಅಶಾಂತಿ ಸೃಷ್ಟಿಸುವ ಆರೋಪದಡಿ ಹಿಂದೂ ಜಾಗರಣಾ ವೇದಿಕೆಯ ಹಿಂದೂ ವಾಹಿನಿಯ ಜಿಲ್ಲಾ ಸಂಚಾಲಕ್ ವಿನಯ್ ಕುಮಾರ್ ಅವರುಗಳನ್ನು ಗಡಿಪಾರು ಮಾಡುವ ಕುರಿತು ಪ್ರಸ್ತಾಪಿಸಿರುವುದು ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದರು. ಇವರಿಬ್ಬರು ಯಾವುದೇ ಗಂಭೀರ ಆರೋಪಗಳನ್ನು ಎದುರಿಸದಿದ್ದರೂ ಈ ರೀತಿಯ ಕ್ರಮಕ್ಕೆ ಮುಂದಾಗಿರುವುದು ಸರಿಯಲ್ಲ. ದೇಶದ್ರೋಹದ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಯಾವುದೇ ರೀತಿಯ ಕಠಿಣ ಕ್ರಮ ಕೈಗೊಳ್ಳದ ಪೊಲೀಸ್ ಇಲಾಖೆ ದೇಶಭಕ್ತ…

Read More

ಮಡಿಕೇರಿ ಫೆ.2 ; ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಅವರ ಅಧ್ಯಕ್ಷತೆಯಲ್ಲಿ ಸ್ಪರ್ಶ್ ಕುಷ್ಠರೋಗ ಜಾಗೃತಿ ಆಂದೋಲನ ಕಾರ್ಯಕ್ರಮದ ಬಗ್ಗೆ ಸಭೆ ನಡೆಯಿತು. ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ಭಿತ್ತಿ ಪತ್ರ, ಕರಪತ್ರ ಹಾಗೂ ಬ್ಯಾನರ್‍ಗಳನ್ನು ಬಿಡುಗಡೆಗೊಳಿಸಿ ಮಾತನಾಡಿ ಕುಷ್ಠರೋಗದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಸಲುವಾಗಿ ಕಾರ್ಯಕ್ರಮ ನಡೆಸಲಾಯಿತು. ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಕುಷ್ಠರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದು ಅಗತ್ಯ ಎಂದು ತಿಳಿಸಿದರು. ಜಿಲ್ಲಾ ಕುಷ್ಠರೋಗ ನಿಯಂತ್ರಣ ಕಾರ್ಯಕ್ರಮಾಧಿಕಾರಿ ಡಾ.ಎನ್.ಆನಂದ್ ಅವರು ಮಾತನಾಡಿ ಫೆಬ್ರವರಿ 13 ರವರೆಗೆ ಜಿಲ್ಲಾದ್ಯಂತ “ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ” ಕಾರ್ಯಕ್ರಮ ನಡೆಯಲಿದೆ. ಪ್ರತಿ ಗ್ರಾಮಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಈ ಬಗ್ಗೆ ಅರಿವು ಮೂಡಿಸಲಾಗುತ್ತಿದೆ, ಹಾಗೂ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ಕುಷ್ಠರೋಗದ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು. ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಸಲುವಾಗಿ ರೇಡಿಯೋ ಪ್ರಸಾರವನ್ನು ಕೂಡ…

Read More

ಸುಂಟಿಕೊಪ್ಪ ಫೆ.2 : ಕರ್ನಾಟಕ ರಕ್ಷಣಾ ವೇದಿಕೆಯ ಸುಂಟಿಕೊಪ್ಪ ಹೋಬಳಿ ಘಟಕ ಅಧ್ಯಕ್ಷರಾದ ನಾಗೇಶ್ ಪೂಜಾರಿ ಹಾಗೂ ಪದಾಧಿಕಾರಿಗಳು ನೂತನ ಠಾಣಾಧಿಕಾರಿ ಶ್ರೀಧರ್ ಅವರಿಗೆ ಮಾಲಾರ್ಪಣೆ ಮಾಡಿ ಸ್ವಾಗತ ಕೋರಿದರು. ಕರವೇ ಹೋಬಳಿ ಅಧ್ಯಕ್ಷ ನಾಗೇಶ್ ಪೂಜಾರಿ ಮಾತನಾಡಿ, ಸುಂಟಿಕೊಪ್ಪ ಪಟ್ಟಣದ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಶನಿವಾರ ಭಾನುವಾರ ದಿನಗಳಲ್ಲಿ ಪ್ರವಾಸಿಗಾರು ಹೆಚ್ಚಿರುವುದರಿಂದ ಸುಂಟಿಕೊಪ್ಪ ವಾಹನ ದಟ್ಟಣೆಯು ಹೆಚ್ಚಾಗಿರುತ್ತದೆ. ಭಾನುವಾರ ಸಂತೆ ದಿನವಾಗಿದು,್ದ ಸಂತೆ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ನಡೆಸದೆ. ಹೆದ್ದಾರಿ ಬದಿಯಲ್ಲಿ ವ್ಯಾಪಾರ ನಡೆಸುವುದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿದೆ ಎಂದು ತಿಳಿಸಿದರು. ಗ್ರಾಮ ಪಂಚಾಯಿತಿಯಿಂದ ಮಾರುಕಟ್ಟೆ ಸುಂಕ ಹರಾಜು ಪಡೆದೆ ವಸೂಲಿದಾರರು ಈ ರಸ್ತೆ ಬದಿ ವ್ಯಾಪಾರಸ್ಥರಿಂದ ಸುಂಕ ವಸೂಲಿ ಮಾಡುತ್ತಿರುವುದು ಕಾನೂನು ಬಾಹಿರವಾಗಿದೆ. ಇದಕ್ಕೆ ಕಡಿವಾಣ ಹಾಕಬೇಕು. ದಿನದ 24 ಗಂಟೆ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳಿಗೆ ವಸತಿಗೃಹಗಳು ಇಲ್ಲದೆ ಬಾಡಿಗೆ ಮನೆಗಳ ಆಶ್ರಯ ಪಡೆದಿದ್ದಾರೆ ಇದರ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರುವಂತೆ…

Read More

ಮಡಿಕೇರಿ ಫೆ.2 : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ತಿಳಿಸಿದ್ದಾರೆ. ಕೊಡಗು ಜಿಲ್ಲಾ ಪಂಚಾಯತ್, ಗಾಳಿಬೀಡು ಗ್ರಾಮ ಪಂಚಾಯತ್ ಮತ್ತು ಕರ್ನಾಟಕ ರಾಜ್ಯ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದೊಂದಿಗೆ ಗಾಳಿಬೀಡು ಗ್ರಾ.ಪಂ.ನ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಗುರುವಾರ ನಡೆದ ‘ನರೇಗಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯು ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಗ್ರಾಮೀಣ ಅಭಿವೃದ್ಧಿಯಲ್ಲಿ ಮನರೇಗಾ ಯೋಜನೆಯಲ್ಲಿ ಕೊಡಗು ಜಿಲ್ಲೆ ಮಹತ್ವದ್ದಾಗಿದೆ ಎಂದು ಅವರು ಹೇಳಿದರು. ಮನರೇಗಾ ಯೋಜನೆಯ ಪ್ರಗತಿಯಲ್ಲಿ ತಾಂತ್ರಿಕ ಸಿಬ್ಬಂದಿಗಳು ಮಹತ್ತರ ಪಾತ್ರ ವಹಿಸುತ್ತಾರೆ. ಇದುವರೆಗೂ ಜಿಲ್ಲೆಯಲ್ಲಿ ಮನರೇಗಾ ಯೋಜನೆಯನ್ನು ಗ್ರಾಮಮಟ್ಟದ ಜನರಿಗೆ ತಲುಪಿಸುವಲ್ಲಿ ಸಿಬ್ಬಂದಿಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಗ್ರಾಮೀಣ ಭಾಗದ ಶಾಲೆ, ಅಂಗನವಾಡಿಗಳಿಗೆ ಮೂಲ ಸೌಕರ್ಯ ಒದಗಿಸುವಲ್ಲಿ ನರೇಗಾ ಯೋಜನೆಯು ಯಶಸ್ವಿಯಾಗಿದೆ. ಮುಂದಿನ…

Read More

ಮಡಿಕೇರಿ ಫೆ.2 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಫೆಬ್ರವರಿ, 3 ರಿಂದ 6 ರವರೆಗೆ ನಗರದ ರಾಜಸೀಟು ಉದ್ಯಾನವನದಲ್ಲಿ ‘ಫಲಪುಷ್ಪ ಪ್ರದರ್ಶನ’ ನಡೆಯಲಿದೆ. ಫಲಪುಷ್ಪ ಪ್ರದರ್ಶನದ ಉದ್ಘಾಟನೆಯು ಫೆಬ್ರವರಿ, 03 ರಂದು ಸಂಜೆ 4 ಗಂಟೆಗೆ ರಾಜಸೀಟು ಉದ್ಯಾನವನದಲ್ಲಿ ನಡೆಯಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ತೋಟಗಾರಿಕೆ ಮತ್ತು ಯೋಜನೆ ಹಾಗೂ ಸಾಂಖ್ಯಿಕ ಸಚಿವರಾದ ಎನ್.ಮುನಿರತ್ನ, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಜಿ.ಪಂ.ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್, ತೋಟಗಾರಿಕೆ ಇಲಾಖೆಯ ನಿರ್ದೇಶಕರಾದ…

Read More