ಮಡಿಕೇರಿ ಫೆ.2 : ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಎಸ್. ಹೊರಟ್ಟಿ ಅವರು ಫೆ.3 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಭಾಪತಿ ಅವರು ಫೆ.3 ರಂದು ಬೆಳಗ್ಗೆ 10.30 ಗಂಟೆಗೆ ಕುಶಾಲನಗರದ ರೈತ ಸಹಕಾರ ಭವನದಲ್ಲಿ ನಡೆಯುವ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಭಾಪತಿಯವರ ಆಪ್ತ ಕಾರ್ಯದರ್ಶಿ ಡಾ.ಜಿ.ವಿಶ್ವನಾಥ ಅವರು ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಫೆ.2 :ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸಗಳಲ್ಲಿ ತೊಡಗಿರುವ ಮಡಿಕೇರಿಯಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಕಾರ್ಮಿಕ ಇಲಾಖೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಯೋಜನೆಗಳಲ್ಲಿ ಒಂದಾದ ಟ್ಯಾಬ್ ವಿತರಣಾ ಕಾರ್ಯಕ್ರಮವು ಫೆಬ್ರವರಿ, 03 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ಇರುವ ಶಾಸಕರ ಕಚೇರಿಯಲ್ಲಿ ನಡೆಯಲಿದೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅವರು ಟ್ಯಾಬ್ ವಿತರಿಸಲಿದ್ದಾರೆ ಎಂದು ಕಾರ್ಮಿಕ ಅಧಿಕಾರಿ ಅವರು ತಿಳಿಸಿದ್ದಾರೆ. ಟ್ಯಾಬ್ ವಿತರಣೆ : ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸಗಳಲ್ಲಿ ತೊಡಗಿರುವ ಮಡಿಕೇರಿಯಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಕಾರ್ಮಿಕ ಇಲಾಖೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಯೋಜನೆಗಳಲ್ಲಿ ಒಂದಾದ ಟ್ಯಾಬ್ ವಿತರಣಾ ಕಾರ್ಯಕ್ರಮವು…
ಸುಂಟಿಕೊಪ್ಪ,ಫೆ.2: ಮಾದಾಪುರ ಇಗ್ಗೋಡ್ಲು ಆಶ್ರಯ ಕಾಲೋನಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಯುವಕ ಸಂಘದ ರಜತ ಮಹೋತ್ಸವದ ಅಂಗವಾಗಿ ಫೆ.6 ಮತ್ತು 7 ರಂದು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜನ್ಮದಿನದ ಪ್ರಯುಕ್ತ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಇಗೋಡ್ಲು ಆಶ್ರಯ ಕಾಲೋನಿ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಫೆ.2 ಕುಶಾಲನಗರ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವು ಫೆ.3 ರಂದು ಕುಶಾಲನಗರ ರೈತ ಸಹಕಾರ ಭವನದಲ್ಲಿ ನಡೆಯಲಿದೆ. ಫೆಬ್ರವರಿ, 3 ರಂದು ಬೆಳಗ್ಗೆ 8 ಗಂಟೆಗೆ ಧ್ವಜಾರೋಹಣ ನಡೆಯಲಿದೆ. ಕುಶಾಲನಗರ ಪುರಸಭೆ ಅಧ್ಯಕ್ಷರಾದ ಬಿ.ಜಯವರ್ಧನ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್, ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕೆ.ಎಸ್.ಮೂರ್ತಿ ಇತರರು ಪಾಲ್ಗೊಳ್ಳಲಿದ್ದಾರೆ. ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಡಲಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ನಾಡಗೀತೆ ಹಾಡಲಿದ್ದಾರೆ. ಬಳಿಕ ಗಣ್ಯರ ನೆನಪಿನ ದ್ವಾರಗಳ ಉದ್ಘಾಟನೆ, ಸಮ್ಮೇಳನದ ಉದ್ಘಾಟನಾ ಸಮಾರಂಭವು ಫೆಬ್ರವರಿ, 03 ರಂದು ಬೆಳಗ್ಗೆ 10.30 ಗಂಟೆಗೆ ನಡೆಯಲಿದೆ. ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕರ್ನಾಟಕ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ, ಶಾಸಕರಾದ ಸುಜಾ ಕುಶಾಲಪ್ಪ, ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕೆ.ಎಸ್.ಮೂರ್ತಿ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್,…
ಮಡಿಕೇರಿ ಫೆ.2 : ಸಂಜೀವಿನಿ ಕೆಎಸ್‍ಆರ್‍ಎಲ್‍ಪಿಎಸ್ ಸಂಸ್ಥೆಯ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ಎನ್‍ಆರ್‍ಎಲ್‍ಎಂ ಯೋಜನೆಯಡಿ ಗ್ರಾಮೀಣ ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಬಲವರ್ಧನೆಗಾಗಿ ಸಂಜೀವಿನಿ ಸ್ವ ಸಹಾಯ ಸಂಘಗಳ ಮಹಿಳಾ ಉದ್ಯಮಿಗಳು ತಯಾರಿಸುವ ಉತ್ಪನ್ನಗಳನ್ನು ಮಾರಾಟ ಮಾಡುವ ಸಲುವಾಗಿ ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ‘ಜಿಲ್ಲಾ ಮಟ್ಟದ ವ್ಯಾಪಾರ ಮೇಳವು’ ಫೆ.7 ಮತ್ತು 8 ರಂದು ನಗರದ ಗಾಂಧಿ ಮೈದಾನದಲ್ಲಿ ನಡೆಯಲಿದೆ. ವ್ಯಾಪಾರ ಮೇಳದಲ್ಲಿ ಸಂಜೀವಿನಿ ಸ್ವ ಸಹಾಯ ಸಂಘಗಳ ಮಹಿಳಾ ಉದ್ಯಮಿಗಳು ತಯಾರಿಸುವ ಉತ್ಪನ್ನಗಳನ್ನು ಮಾರಾಟಕ್ಕೆ ಉತ್ತೇಜನ ನೀಡುವ ಸಲುವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೊಡಗು ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ಕೋರಿದ್ದಾರೆ.
ಮಡಿಕೇರಿ ಫೆ.2 : ಮಡಿಕೇರಿ ತಾಲ್ಲೂಕಿನ ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಫೆಬ್ರವರಿ, 05 ರಂದು ಸಂಜೆ 4 ಗಂಟೆಯಿಂದ “ಸಾಮೂಹಿಕ ಸತ್ಯನಾರಾಯಣ” ಪೂಜೆ ನಡೆಯಲಿದೆ. ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ “ಸಾಮೂಹಿಕ ಸತ್ಯನಾರಾಯಣ” ಪೂಜೆಯಲ್ಲಿ ಭಾಗವಹಿಸಿ, “ಸಾಮೂಹಿಕ ಸತ್ಯನಾರಾಯಣ” ಪೂಜೆಯನ್ನು ಯಶಸ್ವಿಗೊಳಿಸಬೇಕಾಗಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ದೊರೆ ಎಂ.ಎಸ್ ಅವರು ಕೋರಿದ್ದಾರೆ.
ಮಡಿಕೇರಿ ಫೆ.2 : ಭಾರತೀಯ ಜನತಾ ಪಾರ್ಟಿ ತನಗೆ ಎಲ್ಲವನ್ನೂ ನೀಡಿದೆ. ಮುಂಬರುವ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷ ಏನು ಹೇಳುತ್ತದೋ ಅದರಂತೆ ನಡೆದುಕೊಳ್ಳುತ್ತೇನೆ. ಪಕ್ಷ ಸ್ಪರ್ಧಿಸು ಅಂದರೆ ಸ್ಪರ್ಧಿಸುತ್ತೇನೆ. ಇತರೆ ಯಾರಿಗೆ ಅವಕಾಶ ಕೊಟ್ಟರು ಅದಕ್ಕೆ ತಾನು ಸಿದ್ಧ. ನಾನೇ ಸ್ಪರ್ಧಿಸಬೇಕೆನ್ನುವ ದುರಾಸೆ ಇಲ್ಲವೆಂದು ಶಾಸಕ ಕೆ.ಜಿ.ಬೋಪಯ್ಯ ಸ್ಪಷ್ಟಪಡಿಸಿದರು.
ಮಡಿಕೇರಿ ಫೆ.2 : ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ 2 ಸಾವಿರ ಕೋಟಿ ರೂ.ಗೂ ಹೆಚ್ಚಿನ ಅನುದಾನ ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗವಾಗಿದ್ದು, ಈ ಬಗ್ಗೆ ಶ್ವೇತ ಪತ್ರ ಬಿಡುಗಡೆಗೂ ಸಿದ್ಧವಿರುವುದಾಗಿ ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ. ಕೊಡಗು ಪತ್ರಕರ್ತರ ಸಂಘ ಮತ್ತು ಕೊಡಗು ಪತ್ರಿಕಾಭವನ ಟ್ರಸ್ಟ್ ನ ಸಂಯುಕ್ತಾಶ್ರಯದಲ್ಲಿ ನಗರದ ಪತ್ರಿಕಾ ಭವನದಲ್ಲಿ ನಡೆದ ‘ಸಂವಾದ’ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ತಮ್ಮ ನಾಲ್ಕು ಅವಧಿಯ ಶಾಸಕ ಸ್ಥಾನದ ನಡೆಗಳನ್ನು ಮೆಲುಕು ಹಾಕಿದರು. ಹೊಗಳಿಕೆ ಮತ್ತು ತೆಗಳಿಕೆಗಳನ್ನು ಸಮಾನವಾಗಿ ಸ್ವೀಕರಿಸುತ್ತಲೆ, ತನ್ನನ್ನು ಆಯ್ಕೆ ಮಾಡಿದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ ತೃಪ್ತಿ ಇದೆ ಎಂದರು. ಕೊಡಗು ಜಿಲ್ಲೆಯನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಬೇಕೆನ್ನುವ ಏಕಮಾತ್ರ ಉದ್ದೇಶದೊಂದಿಗೆ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಸಕ್ತ ಆರ್ಥಿಕ ಸಾಲಿನಲ್ಲೆ ಕ್ಷೇತ್ರಕ್ಕೆ 5508 ಲಕ್ಷ ರೂ. ಅನುದಾನ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ದೊರಕುವಂತೆ ನೋಡಿಕೊಂಡಿರುವುದಾಗಿ ಹೇಳಿದರು. ::: ‘ಕೊಂಗಣ ಹೊಳೆ’ಯಿಂದ ನೀರು ::: ವಿರಾಜಪೇಟೆ…
ಸುಂಟಿಕೊಪ್ಪ ಫೆ.2 : ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಟ ವೇತನ ನೀಡುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫೆ.14 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅನಿರ್ಧಿಷ್ಟ ಮುಷ್ಕರ ನಡೆಯಲಿದ್ದು, ಮುಷ್ಕರದ ಭಿತ್ತಿಪತ್ರವನ್ನು ಕರ್ನಾಟಕ ರಾಜ್ಯ ಗ್ರಾ.ಪಂ ನೌಕರರ ಸಂಘದ ಜಿಲ್ಲಾಧ್ಯಕ್ಷ ಭರತ್ ಕುಮಾರ್ ಬಿಡುಗಡೆ ಮಾಡಿದರು. ಸುಂಟಿಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಸಿಬ್ಬಂದಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ ಅವರು ಭಿತ್ತಿಪತ್ರಗಳನ್ನು ನೀಡಿದರು. ನಂತರ ಮಾತನಾಡಿದ ಅವರು ಗ್ರಾ.ಪಂ ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರವಸೂಲಿಗಾರ, ಕ್ಲರ್ಕ್, ಡಾಟಾ ಎಂಟ್ರಿ ಅಪರೇಟರ್, ನೀರುಗಂಟಿಗಳನ್ನು, ಸ್ವಚ್ಛತಾ ಸಿಬ್ಬಂದಿಗಳನ್ನು ಸರಕಾರಿ ನೌಕರರನ್ನಾಗಿ ಘೋಷಿಸಬೇಕು. ದಿನನಿತ್ಯದ ಬೆಲೆ ಏರಿಕೆ ಅನುಸಾರವಾಗಿ ಕನಿಷ್ಟ ವೇತನ ರೂ.25,000 ನಿಗದಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲಾಗುವುದೆಂದು ತಿಳಿಸಿದರು.
ಶನಿವಾರಸಂತೆ ಫೆ.2 : ಹಂಡ್ಲಿ ಗ್ರಾ.ಪಂ ವ್ಯಾಪ್ತಿಯ ಗುಡುಗಳಲೆ ಶ್ರೀ ಜಯದೇವ ಜಾನುವಾರು ಜಾತ್ರೆ ನಡೆಯುತ್ತಿದ್ದು, ಜನರನ್ನು ಆಕರ್ಷಿಸಲು ಪ್ರತಿ ದಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ ನಡೆಯುತ್ತಿದೆ. ಶ್ರೀ ಜಯದೇವಾ ಜಾತ್ರಾ ಕಲಾ ವೇದಿಕೆಯಲ್ಲಿ ಆಲೂರು ಸಿದ್ದಾಪುರ ಜಾನಕಿ ಕಾಳಪ್ಪ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜನರ ಗಮನ ಸೆಳೆಯಿತು. ಸಾಂಸ್ಕೃತಿಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಯದೇವ ಜಾನುವಾರು ಜಾತ್ರಾ ಸಮಿತಿ ಅಧ್ಯಕ್ಷ ವಿನಿತ್‌ಕುಮಾರ್, ಕಾರ್ಯದರ್ಶಿ ಅಶೋಕ್, ಜಾನಕಿ ಕಾಳಪ್ಪ ವಿದ್ಯಾಸಂಸ್ಥೆಯ ಮೇನೆಜಿಂಗ್ ಟ್ರಸ್ಟಿ ಎಚ್.ಕೆ.ಶಿವಪ್ರಕಾಶ್, ಶಾಲೆಯ ಶಿಕ್ಷಕರು, ಜಾತ್ರಾ ಸಮಿತಿ ಪದಾಧಿಕಾರಿಗಳು ಹಾಜರಿದ್ದರು. ಈಗಾಗಲೆ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಕಬ್ಬಡಿ ಪಂದ್ಯಾವಳಿ ನಡೆದಿದ್ದು, ಹಗಲು ವಿವಿಧ ಕ್ರೀಡಾಕೂಟಗಳು ನಡೆಯುತ್ತಿದೆ. ಚಿತ್ರವರದಿ : ದಿನೇಶ್ ಮಾಲಂಬಿ. ಶನಿವಾರಸಂತೆ






