ಲೇಖಕ: admin

ಮಡಿಕೇರಿ ಮಾ.25 NEWS DESK : ದಕ್ಷಿಣ ವಲಯದ ಆರಕ್ಷಕ ಮಹಾ ನಿರೀಕ್ಷಕರಾದ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಕೊಡಗು  ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿದರು. ನಂತರ ಅಧಿಕಾರಿಗಳೊಂದಿಗೆ ಅಪರಾಧ ಪ್ರಕರಣಗಳ ಮತ್ತು ಕಾನೂನು ಸುವ್ಯವಸ್ಥೆ ಬಗ್ಗೆ ಅವಲೋಕನ ಸಭೆ ನಡೆಸಿದರು.

Read More

ಮಡಿಕೇರಿ ಮಾ.25 NEWS DESK : ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ 27 ರಂದು ಬೆಳಗ್ಗೆ 11.30 ಗಂಟೆಗೆ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಮಾ.25 NEWS DESK : ಮಡಿಕೇರಿ ನಗರದ ಹೊರವಲಯದ ಇಬ್ಬನಿವಳವಾಡಿ ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡಿದೆ. ಕಾಫಿ ತೋಟವೊಂದರಲ್ಲಿ ಹುಲಿ ರಾಜಾರೋಷವಾಗಿ ಸಂಚರಿಸುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿದ್ದು, ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದ್ದಾರೆ.  ಕಳೆದ ಎರಡು ತಿಂಗಳಿನಿಂದ ಇಬ್ಬನಿವಳವಾಡಿ ಗ್ರಾಮದಲ್ಲಿ ಹುಲಿ ಸಂಚರಿಸುತ್ತಿದ್ದು, ಜನರು ಭಯದಲ್ಲಿ ಜೀವನ ನಡೆಸುತ್ತಿದ್ದಾರೆ. ಈ ಅವಧಿಯಲ್ಲಿ ನಮ್ಮ ಕರುಗಳು, ಹಸುಗಳು ಮತ್ತು ಎತ್ತುಗಳು ದಾಳಿಗೆ ಒಳಗಾದರೂ, ನಾವು ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದೇವೆ. ಆದರೂ ಯಾವುದೇ ಕ್ರಮ ಕೈಗೊಳ್ಳಲಾಗಲಿಲ್ಲ ಎಂದು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜನವರಿ ತಿಂಗಳಲ್ಲಿ ಚೆಟ್ರಂಡ ನಾಣಯ್ಯ ಎಂಬುವವರ 4 ಜಾನುವಾರುಗಳು ಹುಲಿ ದಾಳಿಗೆ ಒಳಗಾಗಿ ಮೃತಪಟ್ಟಿವೆ. ಫೆ.18ರಂದು ಸೋಮಯ್ಯ ಅವರ ಹಸು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಮಾ.15ರಂದು ಮೃತಪಟ್ಟಿದೆ. ಕಳೆದ ಒಂದು ವಾರದಲ್ಲಿ ಮತ್ತೊಂದು ಹಸು ಕೂಡ ಸಾವನ್ನಪ್ಪಿದೆ. ಇಷ್ಟೊಂದು ನಷ್ಟಗಳಾದರೂ ಅಧಿಕಾರಿಗಳಿಂದ ಯಾವುದೇ…

Read More

ಕುಶಾಲನಗರ ಮಾ.25 NEWS DESK : ಪ್ರವಾಹ, ಭೂಕಂಪ, ಚಂಡಮಾರುತ ಮೊದಲಾದ ನೈಸರ್ಗಿಕ ವಿಕೋಪಗಳು ಮತ್ತು ಮಾನವ ನಿರ್ಮಿತ ವಿಪತ್ತುಗಳು ಎದುರಾದ ಸಂದರ್ಭಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು ತಕ್ಷಣದಲ್ಲಿ ಪರಿಣಾಮಕಾರಿಯಾಗಿ ನಿರ್ವಹಿಸುತ್ತಾ ಬಂದಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರರವರು ಅಭಿಪ್ರಾಯಿಸಿದರು. ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಮತ್ತು ಕೊಡಗು ವಿಶ್ವವಿದ್ಯಾಲಯ ಸಹಯೋಗದಲ್ಲಿ  ಕಾಲೇಜಿನ ಜ್ಞಾನ ಕಾವೇರಿ ಆವರಣದಲ್ಲಿ  ನಡೆದ ಯುವ ಆಪತ್ ಮಿತ್ರ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು ವಿಪತ್ತು ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಜನರನ್ನು ಪತ್ತೆಹಚ್ಚಿ ರಕ್ಷಿಸುವಂತಹ ಮತ್ತು ಅವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತಹ ಧೈರ್ಯ ಮತ್ತು ವೃತ್ತಿಪರತೆಯಿಂದ ಜೀವ ರಕ್ಷಣೆ ಮಾಡುತ್ತದೆ. ಗಾಯಗೊಂಡವರಿಗೆ ತಕ್ಷಣದ ಪ್ರಾಥಮಿಕ ಚಿಕಿತ್ಸೆ ಮತ್ತು ತುರ್ತು ವೈದ್ಯಕೀಯ ಆರೈಕೆಯನ್ನು ಒದಗಿಸುತ್ತದೆ. ರಾಸಾಯನಿಕ, ಜೈವಿಕ, ವಿಕಿರಣಶೀಲ ಮತ್ತು ಪರಮಾಣು ವಿಪತ್ತುಗಳನ್ನು ಎದುರಿಸಲು ವಿಶೇಷ ತರಬೇತಿ ನೀಡುತ್ತದೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆಗಳು ಸ್ಥಳೀಯ…

Read More

ಮಡಿಕೇರಿ NEWS DESK ಮಾ.25 : 1785 ಡಿ.12 ರಂದು ಕೊಡವರ ನರಮೇಧ ನಡೆದ ದೇವಟ್ ಪರಂಬುವಿನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಪುಷ್ಪನಮನ ಸಲ್ಲಿಸಿತು. ಮರಣ ಹೊಂದಿದ ಹಿರಿಯರನ್ನು ಸ್ಮರಿಸಿದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಿ ಹೋರಾಟಕ್ಕೆ ಜಯ ಕೋರಿದರು. ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಪ್ರಾದೇಶಿಕ ಸ್ವಾಯತ್ತತೆ ನೀಡಬೇಕು, ಬುಡಕಟ್ಟು ಸ್ಥಾನಮಾನ ಕಲ್ಪಿಸಬೇಕು, ಕೊಡವ ಭೂಮಿ, ಭಾಷೆ, ಸಂಸ್ಕೃತಿ, ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರö್ಯಕ್ಕಾಗಿ ಸಂವಿಧಾನದಡಿ  ವಿಶೇಷ ಖಾತರಿ ನೀಡಬೇಕು, ದೇವಟ್‌ಪರಂಬುವಿನಲ್ಲಿ ಸ್ಮಾರಕ ತಾಣ ಸ್ಥಾಪಿಸಬೇಕು, ವಿಶ್ವ ರಾಷ್ಟ್ರ ಸಂಸ್ಥೆಯ ಹತ್ಯಾಕಾಂಡ ಸ್ಮಾರಕ ಪಟ್ಟಿಯಲ್ಲಿ ದೇವಟ್ ಪರಂಬ್ ಕೊಡವ ನರಮೇಧವನ್ನು ಸೇರಿಸಬೇಕು, ಕೊಡವ ಇತಿಹಾಸ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸಬೇಕು, ಕೊಡವ ಇತಿಹಾಸವನ್ನು ತಿರುಚಿ ವಿರೂಪಗೊಳಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, 2027ರ ರಾಷ್ಟ್ರೀಯ ಜನಗಣತಿಯಲ್ಲಿ ಕೊಡವ ಸಮುದಾಯಕ್ಕೆ ಪ್ರತ್ಯೇಕ “ಕೋಡ್” ಮತ್ತು “ಕಾಲಂ” (ಅಂಕಣ) ನೀಡಬೇಕು, ಕೊಡವ ಸಮುದಾಯವನ್ನು ಒಂದು ವಿಶಿಷ್ಟವಾದ ಆದಿಮಸಂಜಾತ ಗುಂಪಾಗಿ ಗುರುತಿಸಬೇಕು, ನಿಖರವಾದ…

Read More

ಮಡಿಕೇರಿ ಮಾ.25 NEWS DESK : ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಯಲು ಹೆಣ್ಣು ಮಕ್ಕಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್‍ಪಿವಿ (ಹ್ಯೂಮನ್ ಪ್ಯಾಪಿಲೋಮ ವೈರಸ್) ಲಸಿಕೆ ನೀಡುವ ಕಾರ್ಯಕ್ಕೆ ಚೇರಂಬಾಣೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಾಲನೆ  ದೊರೆಯಿತು. ಈ ಸಂದರ್ಭ ಆಡಳಿತ ವೈದ್ಯಾಧಿಕಾರಿ ಡಾ.ಪಾರ್ವತಿ ಮಾತನಾಡಿ, ಅಪಾಯಕಾರಿ ಕ್ಯಾನ್ಸರ್ ನಂತಹ ಪಿಡುಗು ತೊಲಗಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ 14 ವರ್ಷದ ಮೇಲ್ಪಟ್ಟು 15 ವರ್ಷದ ಒಳಗಿನ ಎಲ್ಲಾ ಹೆಣ್ಣು ಮಕ್ಕಳಿಗೆ ಉಚಿತವಾಗಿ ಹೆಚ್‍ಪಿವಿ ಲಸಿಕೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಮಕ್ಕಳ ಭವಿಷ್ಯಕ್ಕಾಗಿ ಎಲ್ಲಾ ಪೋಷಕರು ಈ ಅಭಿಯಾನದಲ್ಲಿ ಇಲಾಖೆಯೊಂದಿಗೆ ಸಹಕಾರ ನೀಡಿ, ಲಸಿಕೆಯನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು. ಲಸಿಕೆಯಿಂದ ಯಾವುದೇ ತೊಂದರೆ ಆಗುವುದಿಲ್ಲ. ಅತ್ಯುತ್ತಮ ಮತ್ತು ಸುರಕ್ಷಿತ ಗುಣಮಟ್ಟದ ಲಸಿಕೆ ಇದಾಗಿದ್ದು ಯಾವ ರೀತಿಯ ಅಡ್ಡ ಪರಿಣಾಮ ಇರುವುದಿಲ್ಲ ಎಂದು ತಿಳಿಸಿದರು.  ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿಯ ಮಿಲನ ಮುತ್ತಮ್ಮ, ಬಿಂದು ಹಾಗೂ ಸಮುದಾಯ ಆರೋಗ್ಯ ಅಧಿಕಾರಿ…

Read More

ಸುಂಟಿಕೊಪ್ಪ ಮಾ.25 NEWS DESK : ಮಹಿಳೆಯರು ಸ್ವಾಲಂಬಿಗಳಾಗಿ ಬದುಕಲು ಅವಶ್ಯಕವಾಗಿರುವ ಶಿಕ್ಷಣ, ಕರಕುಶಲ, ಸೇರಿದಂತೆ ಹತ್ತಾರು ತರಬೇತಿಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆಯೋಜಿಸುವ ಮೂಲಕ ಸಂಸ್ಥೆಯು ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಸಹಕಾರಿಯಾಗಿದೆ ಎಂದು ಸಂಜೀವಿನಿ ಒಕ್ಕೂಟದ ಕೃಷಿಸಖಿಯಾದ ಬ್ರಿಜಿಟ್ ಡಿಸೋಜ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾನ್‍ಬೈಲ್ ತಲಾಕಾವೇರಿ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಮಹಿಳೆಯರಿಗೆ ಸ್ವಾಲಂಬಿ ಬದುಕಿಗಾಗಿ 3 ತಿಂಗಳ ಹೊಲಿಗೆ ತರಬೇತಿಯನ್ನು ನೀಡಲಾಗಿದೆ. ತರಬೇತಿದಾರರಿಗೆ ಪ್ರಮಾಣ ಪತ್ರವನ್ನು ವಿತರಿಸಿ ಮಾತನಾಡಿದ ಬ್ರಿಜಿಟ್ ಡಿಸೋಜ ರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಅವಶ್ಯಕತೆ ಇರುವ ಮಾಹಿತಿಗಳನ್ನು ಹಾಗೂ ಸ್ವಾವಲಂಬಿ ಜೀವನವನ್ನು ನಡೆಸಲು ಮಹಿಳೆಯರಿಗೆ ಅಗತ್ಯವಾದ ತರಬೇತಿಗಳ ಸೌಲಭ್ಯವನ್ನು ನೀಡುತ್ತಿದ್ದು, ಇದರ ಸದುಪಯೋಗವನ್ನು ಪಡೆದುಕೊಂಡ ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಲು ಸಹಕಾರವಾಗಿದೆ ಮುಂದಿನ ದಿನಗಳಲ್ಲಿಯೂ ಈ ಭಾಗದ ಮಹಿಳೆಯರು ಇನ್ನಿತರ ತರಬೇತಿಗಳಲ್ಲಿ ಪಾಲ್ಗೊಂಡು ಸದುಪಯೋಗ ಪಡಿಸಿಕೊಳ್ಳುವಂತೆ…

Read More

ಮಡಿಕೇರಿ, NEWS DESK ಮಾ.25:-ಇದೇ ಏಪ್ರಿಲ್, 05 ರಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ 119 ನೇ ಮತ್ತು ಏಪ್ರಿಲ್, 14 ರಂದು ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ನಗರದ ಗಾಂಧಿ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆಗೆ ಎಲ್ಲರೂ ಪಾಲ್ಗೊಂಡು ಕಾರ್ಯಕ್ರಮ ಯಶಸ್ಸಿಗೆ ಕೈಜೋಡಿಸುವಂತೆ ಕೋರಿದರು. ಏಪ್ರಿಲ್, 14 ರ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಂದು ನಗರದ ಕಾವೇರಿ ಕಲಾಕ್ಷೇತ್ರ ಬಳಿಯಿಂದ ಗಾಂಧಿಭವನದ ವರೆಗೆ ಅಂಬೇಡ್ಕರ್ ಅವರ ಭಾವಚಿತ್ರದೊಂದಿಗೆ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ…

Read More

ಮಡಿಕೇರಿಯ ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ 22 ರವರೆಗೆ ವಾರ್ಷಿಕ ಬೇಸಿಗೆ ಶಿಬಿರ ‘ಸಮಾಗಮ 2026’ ಆಯೋಜಿತವಾಗಿದೆ. ಮಡಿಕೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಕೊಡಗು ವಿದ್ಯಾಲಯದ ಬೇಸಿಗೆ ಶಿಬಿರದ ಸಂಯೋಜಕಿಯರಾದ ಬಿಂದು ಮತ್ತು ಅಂಜನಾ, ಈ ಶಿಬಿರವು ಮಕ್ಕಳಿಗೆ ಪಠ್ಯೇತರ ಜ್ಞಾನ, ಆನಂದ ಮತ್ತು ಅರ್ಥಪೂರ್ಣ ಕಲಿಕೆಯ ಅನುಭವವನ್ನು ಒದಗಿಸುವ ಉದ್ದೇಶದಿಂದ ವಿಶೇಷವಾಗಿ ರೂಪಿಸಲಾಗಿದೆ. ಈ ಶಿಬಿರದ ಮೂಲಕ ಮಕ್ಕಳು ತಮ್ಮಲ್ಲಿರುವ ಪ್ರತಿಭೆಗಳನ್ನು ಅನ್ವೇಷಿಸಿ, ಆತ್ಮವಿಶ್ವಾಸವನ್ನು ವೃದ್ಧಿಸಿಕೊಳ್ಳುವ ಜೊತೆಗೆ ಸೃಜನಶೀಲತೆ, ಶಿಸ್ತನ್ನು ಅಭಿವೃದ್ಧಿಪಡಿಸಿಕೊಳ್ಳಲಿದ್ದಾರೆ. ದೈಹಿಕ ಕ್ಷಮತೆ, ಏಕಾಗ್ರತೆ ಮತ್ತು ಸಾಮಾಜಿಕ ಕೌಶಲ್ಯಗಳ ಬೆಳವಣಿಗೆಗೂ ಇದು ನೆರವಾಗಲಿದೆ ಎಂದು ತಿಳಿಸಿದರು.. ಮಕ್ಕಳ ಬೇಸಿಗೆ ರಜೆಯನ್ನು ಸದುಪಯೋಗಪಡಿಸಿಕೊಳ್ಳುವ ಉದ್ದೇಶದಿಂದ, ಪ್ರತಿದಿನ ಬೆಳಗ್ಗೆ 6:30 ರಿಂದ ಸಂಜೆ 6:00 ರವರೆಗೆ ರಚನಾತ್ಮಕ ಚಟುವಟಿಕೆಗಳನ್ನು ಆಯೋಜಿಸಲಾಗಿದೆ. ಸುಮಾರು 25 ವರ್ಷಗಳ ಪರಂಪರೆಯನ್ನು ಹೊಂದಿರುವ ಈ ಕ್ರೀಡಾ ಶಿಬಿರವು ಪ್ರತಿವರ್ಷ ಯಶಸ್ವಿಯಾಗಿ ನಡೆಯುತ್ತಿದ್ದು, 300ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ ಎಂದೂ ಉಪನ್ಯಾಸಕಿಯರು ಮಾಹಿತಿ ನೀಡಿದರು.…

Read More

ಮಡಿಕೇರಿ, NEWS DESK ಮಾರ್ಚ್ 25: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜಿನಲ್ಲಿ 6ನೇ ಬ್ಯಾಚ್ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ದೀಪ ಬೆಳಗುವಿಕೆ ಹಾಗೂ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ಸಂಭ್ರಮದಿಂದ ನೆರವೇರಿತು. ಕಾರ್ಯಕ್ರಮವನ್ನು 4ನೇ ವರ್ಷದ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಆಶಿತಾ ರವರ ಪ್ರಾರ್ಥನೆಯೊಂದಿಗೆ ಆರಂಭಿಸಲಾಯಿತು. ನಂತರ ಗಣ್ಯ ಅತಿಥಿಗಳ ಸಾನಿಧ್ಯದಲ್ಲಿ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನಡೆಯಿತು. ಡೀನ್ ಹಾಗೂ ನಿರ್ದೇಶಕರಾದ ಡಾ. ಲೋಕೆಶ್ ಎ.ಜೆ ರವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು ಸರ್ಕಾರಿ ಶುಶ್ರೂಷಾ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಮಂಜುಳ ಎ.ಕೆ ಅವರು ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ದೀಪ ಬೆಳಗುವಿಕೆ ಹಾಗೂ ಪ್ರತಿಜ್ಞಾ ವಿಧಿ ನರ್ಸಿಂಗ್ ವೃತ್ತಿಯ ಪವಿತ್ರ ಸಾಂಪ್ರದಾಯಿಕ ಆಚರಣೆ ಎಂದು ವಿವರಿಸಿ, ವಿದ್ಯಾರ್ಥಿಗಳು ಸೇವಾಭಾವನೆ ಮತ್ತು ಶಿಸ್ತಿನಿಂದ ವೃತ್ತಿಯನ್ನು ನಿರ್ವಹಿಸಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ದೀಪ ಹಚ್ಚಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಸಹ ಪ್ರಾಧ್ಯಾಪಕರಾದ ಗುರುಪಾದ ಕೆ.ಪಿ ಅವರು ಕಾಲೇಜಿನ…

Read More