ಮಡಿಕೇರಿ ಜ.31 : ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ವಾರ್ಷಿಕ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಹಾಗೂ ಮಡಿಕೇರಿ ಕೊಡವ ಸಮಾಜದ ನಿರ್ದೇಶಕ ಪುತ್ತರಿರ ಕರುಣ್ ಕಾಳಯ್ಯ ಅವರನ್ನು ಮಡಿಕೇರಿ ಕೊಡವ ಸಮಾಜದ ವತಿಯಿಂದ ಸನ್ಮಾನಿಸಲಾಯಿತು. ಕರುಣ್ ಕಾಳಯ್ಯ ಮೈಸೂರು ಮಿತ್ರ ದಿನ ಪತ್ರಿಕೆಯಲ್ಲಿ ಬರೆದ ‘ಮಂಜಿನ ನಗರಿಯಲ್ಲಿ ವೀರ ಸೇನಾನಿ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಪ್ರತಿಮೆ’ ಎಂಬ ವಿಶೇಷ ವರದಿಗೆ ರಾಜ್ಯಪ್ರಶಸ್ತಿ ಬಂದಿದ್ದು, ಪ್ರಸ್ತುತ ಶಕ್ತಿ ದಿನ ಪತ್ರಿಕೆಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಲೇಖಕ: admin
ಮಡಿಕೇರಿ ಜ.31 : ವಿರಾಜಪೇಟೆ ತಾಲೂಕಿನ ಮಾಕುಟ್ಟ ಅರಣ್ಯ ಪ್ರದೇಶದಲ್ಲಿ ಕೇರಳ ರಾಜ್ಯದ ತ್ಯಾಜ್ಯಗಳನ್ನು ತಂದು ಸುರಿಯುತ್ತಿರುವ ಬಗ್ಗೆ ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಇಂದು ಪೆರುಂಬಾಡಿ ಚೆಕ್ ಪೋಸ್ಟ್‌ನಿಂದ ಮಾಕುಟ್ಟ ಚೆಕ್ ಚೆಕ್ ಪೋಸ್ಟ್‌ವರೆಗೆ ರಸ್ತೆ ಬದಿ ಹಾಗೂ ಸೂಕ್ಷ್ಮ ಪ್ರದೇಶಗಳಿಗೆ ತೆರಳಿ ಪರಿಶೀಲಿಸಿದರು. ರಸ್ತೆ ಬದಿ ಹಾಗೂ ಅರಣ್ಯ ಪ್ರದೇಶದಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರು ತ್ಯಾಜ್ಯ ಎಸೆಯುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ತ್ಯಾಜ್ಯವನ್ನು ಹೆಕ್ಕಿ ವಿಲೇವಾರಿ ಮಾಡುವ ಕಾರ್ಯದಲ್ಲಿ ತೊಡಗಿದ್ದ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಮಾಕುಟ್ಟದಲ್ಲಿರುವ ಪೊಲೀಸ್ ಹಾಗೂ ಅರಣ್ಯ ಇಲಾಖೆ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಅಲ್ಲಿನ ಕಾರ್ಯವೈಖರಿಯನ್ನು ಅವಲೋಕಿಸಿದರು. ಕೇರಳ ಭಾಗದಿಂದ ಬರುವ ಪ್ರತಿಯೊಂದು ವಾಹನವನ್ನು ತಪಾಸಣೆ ಮಾಡಿ ಒಳಗೆ ಬಿಡುವಂತೆ ಅಲ್ಲಿನ ಸಿಬ್ಬಂದಿಗೆ ಸೂಚಿಸಿದರು. ಕೇರಳ ಕಡೆಯಿಂದ ಕೆಲವರು ತ್ಯಾಜ್ಯವನ್ನು ವಾಹನದಲ್ಲಿ ತಂದು ನಮ್ಮ ಪ್ರದೇಶದೊಳಗೆ ಎಸೆಯಲು ಮುಂದಾಗುತ್ತಾರೆ.…
ಮಡಿಕೇರಿ ಜ.31 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ವತಿಯಿಂದ ಜಿಲ್ಲೆಯಾದ್ಯಂತ ಒಂದು ತಿಂಗಳ ಕಾಲ ಮನೆ ಮನೆ ಭೇಟಿ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷೆಯ ಉಚಿತ ವಿದ್ಯುತ್ ಮತ್ತು ಮನೆಯೊಡತಿಗೆ ಮಾಸಿಕ ರೂ.2 ಸಾವಿರ ನೀಡುವ ಗೃಹಲಕ್ಷ್ಮಿ ಯೋಜನೆಯ ಪ್ರಚಾರವನ್ನು ಇದೇ ಸಂದರ್ಭ ಹಮ್ಮಿಕೊಳ್ಳಲಾಗುವುದು ಎಂದರು. ಕೆಪಿಸಿಸಿ ಸೂಚನೆಯಂತೆ ರಾಜ್ಯವ್ಯಾಪಿ ಕಾಂಗ್ರೆಸ್ ಪ್ರಚಾರ ಕಾರ್ಯ ನಡೆಯಲಿದ್ದು, ಕೊಡಗಿನಲ್ಲೂ ಮನೆ ಮನೆ ಭೇಟಿ ಕಾರ್ಯಕ್ರಮಕ್ಕೆ ಫೆ.3 ರಂದು ಚಾಲನೆ ನೀಡಲಾಗುವುದು. ಕಾಂಗ್ರೆಸ್ ಪರ ಪ್ರಚಾರದೊಂದಿಗೆ ಬಿಜೆಪಿ ನೇತೃತ್ವದ ಸರ್ಕಾರದ ಭ್ರಷ್ಟಾಚಾರ ಮತ್ತು ಆಡಳಿತದ ವೈಫಲ್ಯಗಳನ್ನು ಜನರ ಮುಂದಿಡುವ ಅಭಿಯಾನ ನಡೆಯಲಿದೆ. ಪ್ರತಿ ಬ್ಲಾಕ್, ವಲಯ ಮತ್ತು ನಗರದ ವಾರ್ಡ್ ಗಳಲ್ಲಿ ಎರಡು ಪ್ರಚಾರ ಸಭೆಗಳನ್ನು ನಡೆಸಲಾಗುವುದು. ಎಲ್ಲಾ ಮತಗಟ್ಟೆಗಳಲ್ಲಿ ಪ್ರಚಾರ ಸಮಿತಿಗಳನ್ನು ರಚಿಸಲಾಗುವುದು. ತಲಾ 50 ಸದಸ್ಯರ ತಂಡಗಳನ್ನು…
ಮಡಿಕೇರಿ ಜ.31 : 2023-24 ನೇ ಸಾಲಿನಲ್ಲಿ ಮಡಿಕೇರಿ ನಗರಸಭೆ ಆಯವ್ಯಯ ತಯಾರಿಸುವ ಸಂಬಂಧ ಆದಾಯ ಮತ್ತು ಅಭಿವೃದ್ಧಿ ಬಗ್ಗೆ ಸೂಕ್ತ ಸಲಹೆ ಪಡೆಯಲು ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ಫೆಬ್ರವರಿ 2 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಸಭೆಗೆ ಹಿರಿಯ ನಾಗರಿಕರು, ನೋಂದಾಯಿತ ಸಂಘ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು ಹಾಗೂ ಚುನಾಯಿತ ಸ್ಥಳೀಯ ಮಾಜಿ ಜನಪ್ರತಿನಿಧಿಗಳು ಹಾಗೂ ಆಸಕ್ತಿಯಳ್ಳ ಸಾರ್ವಜನಿಕರು ಸಭೆಗೆ ಹಾಜರಾಗಿ ಸೂಕ್ತ ಸಲಹೆ ಸೂಚನೆ ನೀಡಬಹುದಾಗಿದೆ ಎಂದು ಪೌರಾಯುಕ್ತರಾದ ವಿಜಯ್ ಅವರು ಕೋರಿದ್ದಾರೆ.
ಮಡಿಕೇರಿ ಜ.31 : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮಡಿಕೇರಿ ಪ್ರಾದೇಶಿಕ ಕೇಂದ್ರ ವತಿಯಿಂದ 2023 ರ ಜನವರಿ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸ್ನಾತಕ ಶಿಕ್ಷಣ ಕಾರ್ಯಕ್ರಮಗಳು ಬಿ.ಎ., ಬಿ.ಕಾಂ, ಬಿ.ಲಿಬ್.ಐಎಸ್‍ಸಿ, ಬಿ.ಬಿ.ಎ(ಮಾರ್ಕೆಟಿಂಗ್ ಮ್ಯಾನೇಜ್‍ಮೆಂಟ್), ಬಿ.ಎಸ್‍ಸಿ(ಸಂಯೋಜನೆಗಳು), ಸ್ನಾತಕೋತ್ತರ(ಪಿಜಿ) ಶಿಕ್ಷಣ ಕಾರ್ಯಕ್ರಮಗಳು ಎಂ.ಎ., ಎಂಬಿಎ, ಎಂಕಾಂ, ಎಂ.ಲಿಬ್, ಐಎಸ್‍ಸಿ, ಎಂಎಸ್‍ಸಿ, ಪ್ರವೇಶಾತಿ ಹಾಗೂ ಇನ್ನಿತರ ಮಾಹಿತಿಗೆ ಅರ್ಜಿದಾರರು ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಅಧಿಕೃತ ವೆಬ್‍ಸೈಟ್ www.ksoumysuru.ac.in ನ್ನು ವೀಕ್ಷಿಸುವುದು. ಹೆಚ್ಚಿನ ಮಾಹಿತಿಗೆ ನಗರದ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ ಪ್ರಾದೇಶಿಕ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ. ದೂ. 08272-201147, 8073342310, 9141938803 ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕಿ ಮುಕ್ಕಾಟಿರ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ.
ಮಡಿಕೇರಿ ಜ.31 : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಫೆ.11 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ರ್ಟೀಯ ಮೆಗಾ ಲೋಕ್ ಅದಾಲತ್’ ನಡೆಯಲಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆ.ಬಿ.ಪ್ರಸಾದ್ ಅವರು ತಿಳಿಸಿದ್ದಾರೆ. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು,…
ಮಡಿಕೇರಿ ಜ.31 : ಕೊಡಗು ಜಿಲ್ಲೆಯ ಸುಂಟಿಕೊಪ್ಪ-ಸೋಮವಾರಪೇಟೆ, ಮಡಿಕೇರಿ-ವಿರಾಜಪೇಟೆ ಮತ್ತು ಪೊನ್ನಂಪೇಟೆ-ಶ್ರೀಮಂಗಲ ಮಾರ್ಗದಲ್ಲಿ ನಡೆಯುತ್ತಿರುವ 66 ಕೆವಿ ವಿದ್ಯುತ್ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಸೂಚಿಸಿದ್ದಾರೆ. ಜಿಲ್ಲೆಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ವತಿಯಿಂದ ಈಗಾಗಲೇ 66 ಕೆವಿ ವಿದ್ಯುತ್ ಮಾರ್ಗದ ಕಾಮಗಾರಿ ಸಂಬಂಧಿಸಿದಂತೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಮಾತನಾಡಿದರು. ವಿದ್ಯುತ್ ಕಾಮಗಾರಿ ಸಂಬಂಧಿಸಿದಂತೆ ವಿದ್ಯುತ್ ಮಾರ್ಗ ಹಾದು ಹೋಗುವ ಭೂ ಮಾಲೀಕರಿಗೆ ಮೊದಲೇ ಮಾಹಿತಿ ನೀಡಿ, ಸರ್ವೇ ಕಾರ್ಯಕ್ಕೆ ಮನವರಿಕೆ ಮಾಡಬೇಕು. ರೋಸ್ ವುಡ್ ಹೊರತುಪಡಿಸಿ ಉಳಿದ ಮರಗಳನ್ನು ಭೂ ಮಾಲೀಕರಿಗೆ ನೀಡಬೇಕು. ವಿದ್ಯುತ್ ಮಾರ್ಗವನ್ನು ತ್ವರಿತವಾಗಿ ಸರ್ವೇ ಮಾಡಿ ಕಾಮಗಾರಿ ಪೂರ್ಣಗೊಳಿಸುವಂತೆ ಅಪ್ಪಚ್ಚು ರಂಜನ್ ಅವರು ಕೆಪಿಟಿಸಿಎಲ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ರೈತರ ವಿಶ್ವಾಸ ಪಡೆದು ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಮಾದಾಪುರ-ಕುಂಬೂರು ಮಾರ್ಗದಲ್ಲಿ ಕಳೆದ ಎರಡೂವರೆ ವರ್ಷಗಳಿಂದ ವಿದ್ಯುತ್ ಕಾಮಗಾರಿ ಆಗಿಲ್ಲ ಎಂದು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಅತೃಪ್ತಿ ವ್ಯಕ್ತಪಡಿಸಿದರು.…
ಮಡಿಕೇರಿ ಜ.31 : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಿಲ್ಲೆಯ ಜಾನಪದ ಕಲಾವಿದೆ ಮಡಿಕೇರಿಯ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗದ ಕಾರ್ಯಕರ್ತೆಯರು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಹಿಲ್ ರಸ್ತೆಯಲ್ಲಿರುವ ಅವರ ಮನೆಯಲ್ಲಿ ಭೇಟಿ ನೀಡಿದ ಜಮಾಅತ್ ತಂಡದಲ್ಲಿ ಜಿಲ್ಲಾ ಸಂಚಾಲಕಿ ವಹೀದಾ ಷೌಕತ್, ಸದಸ್ಯೆಯರುಗಳಾದ ಝೈನಬಾ ರೆಹ್ಮಾನ್, ಮುಹೀನಾ ಮುಹಮ್ಮದ್ ಮತ್ತು ಮಫೀದಾ ಇದ್ದರು. ಜಿಲ್ಲಾ ಸಂಚಾಲಕ ಪಿ.ಕೆ.ಅಬ್ದುಲ್ ರೆಹೆಮಾನ್, ಕಾರ್ಯದರ್ಶಿ ಮುಹಮ್ಮದ್ ಮುಸ್ತಫಾ ಹಾಗೂ ಅಬ್ದುಲ್ಲಾ ಹಾಜರಿದ್ದರು.
ಸುಂಟಿಕೊಪ್ಪ,ಜ.31: ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಷಿಯನ್ ವತಿಯಿಂದ 12ನೇ ವರ್ಷದ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯು ಫೆ.18 ಮತ್ತು 19 ರಂದು ಕೆದಮೂಳ್ಳೂರಿನಲ್ಲಿ ನಡೆಯಲಿದೆ. ಸುಂಟಿಕೊಪ್ಪ ದ್ವಾರಕ ಹೋಟೆಲ್ ಸಭಾಂಗಣದಲ್ಲಿ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಶಿಯೇಷನ್‍ನ ಅಧ್ಯಕ್ಷರಾದ ಎಸ್.ಎಂ.ಡಿಸಿಲ್ವಾ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಸಭೆ ಹಾಗೂ ಕ್ರೀಡಾಕೂಟದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ವಿರಾಜಪೇಟೆಯ ಕೆದುಮಳ್ಳೂರು ಫಾತಿಮಾ ಮಾತೆ ದೇವಾಲಯ ಸಂಯುಕ್ತಾಶ್ರಯದಲ್ಲಿ ಕ್ರಿಕೆಟ್ ಹಾಗೂ ಪುರುಷ ಮತ್ತು ಮಹಿಳೆಯರ ಹಗ್ಗ ಜಗ್ಗಟ 12ನೇ ಕ್ರೀಡಾಕೂಟವನ್ನು ಸ್ಪರ್ಧೆಗಳನ್ನು ನಡೆಸಲು ತೀರ್ಮಾನಿಸಲಾಯಿತು. ಕ್ರಿಕೆಟ್ ಪಂದ್ಯಾವಳಿಯಲ್ಲಿ ಪ್ರಥಮಸ್ಥಾನ ಪಡೆದ ತಂಡಕ್ಕೆ ಟ್ರೋಫಿ ಹಾಗೂ 25,000 ನಗದು, ದ್ವಿತೀಯ ಸ್ಥಾನಗಳಿಸಿದ ತಂಡಕ್ಕೆ 15,000 ರೂ ಟ್ರೋಫಿ, ಹಗ್ಗ ಜಗ್ಗಾಟದಲ್ಲಿ ಪ್ರಥಮ ಸ್ಥಾನ ಗಳಿಸಿದ ತಂಡಕ್ಕೆ 3,000 ರೂ.ನಗದು ಹಾಗೂ ಟ್ರೋಫಿ, ದ್ವಿತೀಯ ಸ್ಥಾನ ಗಳಿಸಿದ ತಂಡಕ್ಕೆ ರೂ.1,500 ಹಾಗೂ ಟ್ರೋಫಿಯನ್ನು ನೀಡಲಾಗುವುದು. ವಾರ್ಷಿಕ ಮಹಾಸಭೆಯಲ್ಲಿ ಲೆಕ್ಕ ಪತ್ರವನ್ನು ಮಂಡಿಸಲಾಯಿತು. ನೂತನ…
ಮಡಿಕೇರಿ ಜ.31 : ಪದ್ಮಶ್ರೀ ಪುರಸ್ಕೃತ ಕೊಡಗಿನ ಉಮ್ಮತ್ತಾಟ್ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಮಡಿಕೇರಿ ಕೊಡವ ಸಮಾಜದ ವತಿಯಿಂದ ಫೆ.3 ರಂದು ಸನ್ಮಾನಿಸಿ ಗೌರವಿಸಲಾಗುವುದೆಂದು ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 9.45 ಗಂಟೆಗೆ ರಾಣಿ ಮಾಚಯ್ಯ ಅವರನ್ನು ನಗರದ ಎವಿ ಶಾಲೆ ಬಳಿಯಿಂದ ತೆರೆದ ಜೀಪ್‍ನಲ್ಲಿ ಮೆರವಣಿಗೆ ಮೂಲಕ ಕರೆ ತಂದು ಕೊಡವ ಸಮಾಜದಲ್ಲಿ ಸನ್ಮಾನಿಸಿ ಗೌರವಿಸಲಾಗುತ್ತದೆ ಎಂದು ಹೇಳಿದರು. ಕೊಡವ ಸಮಾಜದ ಅಧೀನದಲ್ಲಿರುವ 12 ಕೇರಿಗಳ ಸದಸ್ಯರು, ಪೊಮ್ಮಕ್ಕಡ ಕೂಟದ ಪ್ರಮುಖರು ಪಾಲ್ಗೊಳ್ಳಲಿದ್ದು, ಜನಾಂಗ ಬಾಂಧವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿದರು. ಜಾನಪದ ಕ್ಷೇತ್ರದಲ್ಲಿ ಕೊಡಗಿನ ಸಂಸ್ಕೃತಿಯನ್ನು ದೇಶ ವಿದೇಶದಲ್ಲಿ ಪಸರಿಸಿದ ಕೀರ್ತಿ ರಾಣಿಮಾಚಯ್ಯ ಅವರಿಗೆ ಸಲ್ಲುತ್ತದೆ. ಕೇಂದ್ರ ಸರ್ಕಾರ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವ ಸಲ್ಲಿಸುತ್ತಿರುವುದು ಕೊಡಗಿಗೆ ಹಾಗೂ ಜನಾಂಗಕ್ಕೆ ಹೆಮ್ಮೆಯ ವಿಚಾರ ಎಂದರು. ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ಕೊಡವ ಸಮಾಜದ…






