ಲೇಖಕ: admin

ಮಡಿಕೇರಿ ಜ.30 :  ಕನ್ನಡಕ್ಕೆ ಬೇರೆ ಭಾಷೆಯವರಿಂದ ಯಾವುದೇ ತೊಂದರೆ ಇಲ್ಲ. ಕನ್ನಡಿಗರಿಂದಲೇ ತೊಂದರೆ ಇರುವುದು. ಕನ್ನಡಿಗರು ಕನ್ನಡ ಮಾತನಾಡಿದರೆ ಸಾಕು ಕನ್ನಡ ಉಳಿದು ಬೆಳೆಯುತ್ತದೆ ಎಂದು ಗೋಣಿಕೊಪ್ಪಲಿನ ಉದ್ಯಮಿ ಕೊಳ್ಳಿಮಾಡ ಅಜಿತ್ ಅಯ್ಯಪ್ಪ ನುಡಿದರು. ಗೋಣಿಕೊಪ್ಪಲಿನ ನವಮಿ ಸಭಾಂಗಣದಲ್ಲಿ ನಡೆದ ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಉದ್ಘಾಟನಾ ಸಮಾರಂಭದಲ್ಲಿ ಹೋಬಳಿ ಘಟಕವನ್ನು ಉದ್ಘಾಟಿಸಿ  ಮಾತನಾಡಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇತ್ತೀಚಿನ ದಿನಗಳಲ್ಲಿ ಕನ್ನಡದ ಬೆಳವಣಿಗೆಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹೋಬಳಿ ಮಟ್ಟದಲ್ಲೂ ಘಟಕಗಳನ್ನು ರಚಿಸಿಕೊಂಡು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು. ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಅವರಿಗೆ ಧ್ವಜ ಹಸ್ತಾಂತರಿಸುವ ಮೂಲಕ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಜವಾಬ್ದಾರಿ ನೀಡಿದರು. ನಂತರ ಘಟಕದ ಎಲ್ಲಾ ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿ ಸ್ವೀಕರಿಸುವ ಪ್ರತಿಜ್ಞಾವಿಧಿ ಬೋಧನೆ ಮಾಡಿದರು.  ಘಟಕದ ನೂತನ ಗೌರವ ಕಾರ್ಯದರ್ಶಿಯಾಗಿ ತಿರುನೆಲ್ಲಿಮಾಡ…

Read More

ವಿರಾಜಪೇಟೆ ಜ.30 : ಕ್ರೀಡಾ ಚಟುವಟಿಕೆಗಳು ಕ್ರೀಡಾಪಟುಗಳಲ್ಲಿ ಶಿಸ್ತು, ಸಮಯ ಪ್ರಜ್ಞೆ, ಗೆಳೆತನ ಹಾಗೂ ಸವಾಲನ್ನು ಸ್ವೀಕರಿಸುವ ಮನೋಭಾವವನ್ನು ಬೆಳೆಸಿ ವ್ಯಕ್ತಿತ್ವವನ್ನು ವಿಕಸನಗೊಳಿಸುತ್ತದೆ ಎಂದು ಚಾಣಕ್ಯ ಎಜುಕೇಷನ್  ಟ್ರಸ್ಟ್‌ನ ಕಾರ್ಯದರ್ಶಿ ಎಂ.ಬಿ. ಮಾಚಮ್ಮ ಅಭಿಪ್ರಾಯಪಟ್ಟರು. ಪಟ್ಟಣದ ಚಾಣಕ್ಯ ಎಜುಕೇಷನ್ ಟ್ರಸ್ಟ್‌ ವತಿಯಿಂದ  ಐಮಂಗಲದಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ  ಮಾತನಾಡಿದರು. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೆ ವಿದ್ಯಾಸಂಸ್ಥೆಗಳು ಅವಕಾಶ ನೀಡಿದಾಗ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ. ಪಠ್ಯೇತರ ಚಟುವಟಿಕೆಗಳು ಪಠ್ಯಕ್ಕೆ ಪೂರಕವಾಗಿ ಆಯೋಜನೆಗೊಂಡರೆ ಇನ್ನಷ್ಟು ಉತ್ತಮ ಫಲಿತಾಂಶವನ್ನು ಕಾಣಲು ಸಾಧ್ಯ ಎಂದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಚಾಣಕ್ಯ ಎಜುಕೇಷನ್ ಟ್ರಸ್ಟ್ ಅಧ್ಯಕ್ಷೆ  ಸಿ.ಎನ್.ಕವಿತಾ   ಫಲಿತಾಂಶವನ್ನು ಸಕಾರಾತ್ಮಕವಾಗಿ ಸ್ವೀಕರಿಸುವ ಮನೋಭಾವವನ್ನು ಕ್ರೀಡೆ ಅಥವಾ ಕ್ರೀಡಾಕೂಟಗಳು ಬೆಳೆಸುತ್ತವೆ. ಕ್ರೀಡೆಗಳು ದೈಹಿಕ ಆರೋಗ್ಯದೊಂದಿಗೆ ಮಾನಸಿಕ ಆರೋಗ್ಯವನ್ನು ಗಟ್ಟಿಗೊಳಿಸಲು ಸಹಕಾರ ನೀಡುತ್ತವೆ ಎಂದರು. ಸಂಸ್ಥೆಯ ಹಿರಿಯ ಉಪನ್ಯಾಸಕ ಎಂ.ಎಸ್.ಸುಬ್ಬಯ್ಯ  ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಸೇರಿದಂತೆ ಸಾಮಾಜಿಕ ಜಾಲತಾಣಗಳಿಂದ ದೂರವಿದ್ದಷ್ಟು ಒಳಿತು. ಇದು ಶಿಕ್ಷಣದೊಂದಿಗೆ ಏಳಿಗೆಯನ್ನು…

Read More

ಮಡಿಕೇರಿ ಜ.30 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಅಂಗವಾಗಿ ಫೆ.4 ರಂದು ಮಡಿಕೇರಿಯಲ್ಲಿ ಸಾರ್ವಜನಿಕರಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಪ್ರಮುಖರು ಮಾಹಿತಿ ನೀಡಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಶ್ವಿನಿ ಆಸ್ಪತ್ರೆ ಕಾರ್ಯದರ್ಶಿ ಕುಪ್ಪಂಡ ರಾಜಪ್ಪ, ಕೊಡಗು ಪ್ರೆಸ್‍ಕ್ಲಬ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊಡಗು ಜಿಲ್ಲಾ ಘಟಕ, ಅಶ್ವಿನಿ ಆಸ್ಪತ್ರೆ, ಮೈಸೂರು ಸುಯೋಗ್ ಆಸ್ಪತ್ರೆ, ಮಡಿಕೇರಿಯ ವಾಕ್ ಹಾಗೂ ಶ್ರವಣ ಇನ್‍ಪ್ಲಾಂಟ್ ಕ್ಲಿನಿಕ್ ಸಹಯೋಗದಲ್ಲಿ ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ನಗರದ ಅಶ್ವಿನಿ ಆಸ್ಪತ್ರೆಯಲ್ಲಿ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2 ಗಂಟೆಯ ತನಕ ನುರಿತ ವೈದ್ಯರಿಂದ ವಿವಿಧ ರೀತಿಯ ತಪಾಸಣೆ ನಡೆಯಲಿದೆ ಎಂದು ಮಾಹಿತಿ ನೀಡಿದರು. ಅಶ್ವಿನಿ ಆಸ್ಪತ್ರೆಯಲ್ಲಿ ಈಗಾಗಲೇ ಅಗತ್ಯ ವೈದ್ಯಕೀಯ ಸೇವೆಗಳು ದೊರೆಯುತ್ತಿವೆ. ಮುಂದಿನ ದಿನಗಳಲ್ಲಿ 100 ಹಾಸಿಗೆಯ ಆಸ್ಪತ್ರೆ ನಿರ್ಮಾಣವಾಗಲಿದೆ. ಇದರಿಂದ ಜಿಲ್ಲೆಯ ಜನರಿಗೆ ಮತ್ತಷ್ಟು ವೈದ್ಯಕೀಯ ಸೇವೆ ದೊರೆಯಲಿದೆ ಎಂದ ಅವರು, ಸಾರ್ವಜನಿಕರು ಉಚಿತ ಆರೋಗ್ಯ…

Read More

ಮಡಿಕೇರಿ ಜ.30 :  ಚೆಟ್ಟಳ್ಳಿಯ ಪ್ರೌಡಶಾಲಾ ಮೈದಾನದಲ್ಲಿ ಬಟ್ಟೀರ ಕುಟುಂಬಸ್ಥರ ಸಮ್ಮುಖದಲ್ಲಿ   ಈಗಲ್ ಐಸ್ ಸೂಟರ್ಸ್ ಬಟ್ಟೀರ  ತೆಂಗಿನಕಾಯಿ ಗುಂಡುಹೊಡೆಯುವ ಸ್ಪರ್ಧೆ ನಡೆಯಿತು. ಹಿರಿಯರಾದ ಬಟ್ಟೀರ ದೇವಯ್ಯ, ನಿವೃತ್ತ ಏರ್ಫೋರ್ಸ್ ಅಧಿಕಾರಿ ಪುತ್ತರಿರ ಗಣೇಶ್ ಭೀಮಯ್ಯ, ಬಟ್ಟಿರ ಬೋಪಯ್ಯ, ಬಟ್ಟೀರ ರಕ್ಷುಕಾಳಪ್ಪ, ಮಂಗಳೂರು ಬಜ್ಪೆಯ ಸಿಮ್ಸನ್ಸ್ ಹೌಸ್ ನ ಮಾಲೀಕ  ರಾಯ್ ಪ್ರಕಾಶ್ ಸಿಮ್ಸನ್ಸ್  ದೀಪ ಬೆಳಗುವ ಮೂಲಕ  ಉದ್ಘಾಟಿಸಿದರು. ಬಟ್ಟೀರ ರಕ್ಷು ಕಾಳಪ್ಪ, ಸಿಮ್ಸಸನ್, ಬಟ್ಟೀರ ಮುತ್ತಣ್ಣ ತೆಂಗಿನಕಾಯಿಗೆ ಗುಂಡುಹೊಡೆದು ಶೂಟಿಂಗ್ ಸ್ಪರ್ಧೆಗೆ ಚಾಲನೆ ನೀಡಿದರು.  ಚೆಟ್ಟಳ್ಳಿಯ ಬಟ್ಟೀರ ಕುಟುಂಬದವರು ಕೊಡವ ಸಂಪ್ರದಾಯ ಉಡುಪಿನಲ್ಲಿ ಪಾಲ್ಗೊಂಡಿದ್ದರು. ಸಮಾರೋಪ:  ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ   ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ತೇಲಪಂಡ ಶಿವುಕುಮಾರ್ ನಾಣಯ್ಯ ಮಾತನಾಡಿ, ನಾಪೋಕ್ಲುವಿನಲ್ಲಿ ಒಳಾಂಗಣ ಶೂಟಿಂಗ್ ಕೇಂದ್ರ ಸ್ಥಾಪಿಸಲು ಸರಕಾರಕ್ಕೆ ಒತ್ತಾಯಿಸಿದ್ದು ಮುಂದಿನ ಚುನಾವಣೆ ಕಳೆದ ನಂತರ ಶೂಟಿಂಗ್ ಕೇಂದ್ರ ಸ್ಥಾಪನೆಗೆ ಪ್ರಯತ್ನಿಸುವುದಾಗಿ  ತಿಳಿಸಿದರು. ಚೆಟ್ಟಳ್ಳಿ ಪ್ರೌಡಶಾಲಾ ಸಂಚಾಲಕ ಹಾಗೂ ಚೆಟ್ಟಳ್ಳಿ…

Read More

ಮಡಿಕೇರಿ ಜ.30 : ಕೊಡಗು ಪ್ರೆಸ್‍ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಫೆ.6 ರಂದು ಮಡಿಕೇರಿಯಲ್ಲಿ ‘ಪರಶುರಾಮ’ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ. ನಗರದ ಸಂತಜೋಸೆಫರ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಸಂಜೆ 6.30ಕ್ಕೆ ಶುರುವಾಗುವ ನಾಟಕಕ್ಕೆ ಉಚಿತ ಪ್ರವೇಶಾವಕಾಶ ಕಲ್ಪಿಸಲಾಗಿದೆ. ಕಾರ್ಕಳದ ಯಕ್ಷರಂಗಾಯಣ ಅಭಿನಯಿಸುವ ‘ಪರಶುರಾಮ’ ಸಾತ್ವಿಕ ನಾಟಕವನ್ನು ಶಶಿರಾಜ್ ಕಾವೂರು ರಚಿಸಿದ್ದು, ಡಾ.ಜೀವನ್‍ರಾಂ ಸುಳ್ಯ ಅವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ ಮೂಡಿಬರಲಿದೆ.

Read More

ಕುಶಾಲನಗರ ಜ.29 : ಕುಶಾಲನಗರ ತಾಲ್ಲೂಕು ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಫೆ.3 ರಂದು ನಡೆಯಲಿರುವ  ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಕುಶಾಲನಗರ ಪುರಸಭೆ ಅಧ್ಯಕ್ಷ ಬಿ.ಜೈವರ್ಧನ್ ಭಾನುವಾರ ಬಿಡುಗಡೆಗೊಳಿಸಿದರು. ಕುಶಾಲನಗರ ತಾಲ್ಲೂಕು ರಚನೆಯಾದ ನಂತರ ಪ್ರಪ್ರಥಮ ಬಾರಿಗೆ ನಡೆಯುತ್ತಿರುವ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ  ಯಶಸ್ವಿಗೆ ಎಲ್ಲರೂ ಸಹಕರಿಸಬೇಕು ಎಂದು ಪುರಸಭೆ ಅಧ್ಯಕ್ಷ ಜೈವರ್ಧನ್ ಮನವಿ ಮಾಡಿದರು.  ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪುರಸಭೆ ವತಿಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು. ಪುರಸಭೆ ವತಿಯಿಂದ ನಗರದ ಅಲಂಕಾರ ಮಾಡಲಾಗುವುದು ಎಂದರು. ಹಣಕಾಸು ಉಪ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಹಲವು ದಶಕಗಳ ಹೋರಾಟದ ಪ್ರತಿಫಲದಿಂದ ರಚನೆಗೊಂಡ ನಂತರ ಇದೇ ಮೊದಲ ಬಾರಿಗೆ ನಡೆಯುತ್ತಿರುವ  ಕುಶಾಲನಗರ ತಾಲ್ಲೂಕು ಪ್ರಥಮ ಸಮ್ಮೇಳನವನ್ನು ಎಲ್ಲರೂ ಸೇರಿ ಯಶಸ್ವಿಗೊಳಿಸಬೇಕು ಎಂದರು. ತಾಲ್ಲೂಕು ಕಸಾಪ ಅಧ್ಯಕ್ಷ ಕೆ.ಎಸ್.ಮೂರ್ತಿ ಮಾತನಾಡಿ,ಎಲ್ಲರೂ ಸಮ್ಮೇಳನದ ಯಶಸ್ವಿಗೆ ಸಹಕರಿಸಬೇಕು ಎಂದರು. ಜಿಲ್ಲಾ ಕಸಾಪ ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್ ಮಾತನಾಡಿದರು. ಜಿಲ್ಲಾ ಕಸಾಪ ಸಹ ಕಾರ್ಯದರ್ಶಿ ಡೆನಿಸ್…

Read More

ಸುಂಟಿಕೊಪ್ಪ ಜ.29 ; ಸುಂಟಿಕೊಪ್ಪ ಹೋಬಳಿ ವ್ಯಾಪ್ತಿ ಸೇರಿದಂತೆ ಹಲವೆಡೆ ದೈವಗಳ ನೇಮೋತ್ಸವ ಮತ್ತು ಗಗ್ಗರ ಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು. ಸಮೀಪದ ಮಂಜಿಕೆರೆ, ಕಾನ್ ಬೈಲ್ ಕೊರಗಜ್ಜ ದೈವಸ್ಥಾನದ ವತಿಯಿಂದ ನಾಲ್ಕನೇ ವರ್ಷದ ಕೊರಗಜ್ಜ ದೈವದ ಗಗ್ಗರ ಸೇವೆ( ಕೋಲ) ಮತ್ತು ಅಗಲು ಸೇವೆಯು ನೂರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು. ರಾತ್ರಿ 7 ಗಂಟೆಯ ನಂತರ ಭಂಡಾರ ಮೆರವಣಿಗೆ ನಂತರ ಕೊರಗಜ್ಜ ದೈವದ ಕೋಲ ನಡೆಯಿತು‌.ಭಕ್ತರು ಹರಕೆಯ ರೂಪದಲ್ಲಿ ಹೂವು, ಚಕ್ಕುಲಿ, ವೀಳ್ಯದೆಲೆ ಅರ್ಪಿಸಿದರು. ತಡರಾತ್ರಿ ಮಹಾಪೂಜೆ ನಡೆಯಿತು. ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆಯಾಯಿತು.

Read More

ಮಡಿಕೇರಿ ಜ.29 : ಭಾರತೀಯ ಸೇನೆಯ ಮೊದಲ ಮಹಾದಂಡನಾಯಕ ಫೀ.ಮಾ.ಕೆ.ಎಂ.ಕಾರ್ಯಪ್ಪ ಅವರಿಗೆ “ಭಾರತ ರತ್ನ” ನೀಡಬೇಕೆಂದು ನಾಪೋಕ್ಲು ಕೊಡವ ಸಮಾಜ ಒತ್ತಾಯಿಸಿದೆ. ನಾಪೋಕ್ಲು ಕೊಡವ ಸಮಾಜದ ವತಿಯಿಂದ ಕೊಡವ ಸಮಾಜದಲ್ಲಿ ನಡೆದ ಕಾರ್ಯಪ್ಪ ಅವರ 124 ನೇ ಜನ್ಮ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಮುಖರು ವೀರಸೇನಾನಿಗೆ “ಭಾರತ ರತ್ನ” ನೀಡುವ ಕುರಿತು ಇಂಗಿತ ವ್ಯಕ್ತಪಡಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನುಮುತಪ್ಪ ಧೈರ್ಯ, ಸಮಯ ಪಾಲನೆ ಮತ್ತು ಶಿಸ್ತಿನ ಜೀವನಕ್ಕೆ ಹೆಸರುವಾಸಿಯಾಗಿದ್ದ ಫೀ.ಮಾ.ಕಾರ್ಯಪ್ಪ ಅವರ ಆದರ್ಶಗಳನ್ನು ಇಂದಿನ ಯುವಪೀಳಿಗೆ ಅಳವಡಿಸಿಕೊಳ್ಳಬೇಕು. ವೀರಸೇನಾನಿಯನ್ನು ಪ್ರೇರಣೆಯಾಗಿಕೊಟ್ಟುಕೊಂಡು ಹೆಚ್ಚು ಹೆಚ್ಚು ಮಂದಿ ಸೇನೆಗೆ ಸೇರುವಂತ್ತಾಗಬೇಕು ಎಂದರು. ಫೀ.ಮಾ.ಕಾರ್ಯಪ್ಪ ಅವರಿಗೆ ಶ್ರೇಷ್ಠ “ಭಾರತ ರತ್ನ” ಪ್ರಶಸ್ತಿಯನ್ನು ನೀಡಬೇಕೆಂದು ಒತ್ತಾಯಿಸಿದರು. ಕೊಡವ ಸಮಾಜದ ನಿರ್ದೇಶಕ ಹಾಗೂ ನಾಪೋಕ್ಲು ಹೋಬಳಿ ಮಾಜಿ ಸೈನಿಕರ ಸಂಘದ ಅಧ್ಯಕ್ಷರೂ ಆದ ಕೊಂಡಿರ ನಾಣಯ್ಯ ಮಾತನಾಡಿ ದೇಶಕ್ಕೆ ಸ್ವಾತಂತ್ರö್ಯ ಬಂದ ನಂತರ ಕಾರ್ಯಪ್ಪ ಅವರು ಭೂಸೇನೆ, ವಾಯುಸೇನೆ ಮತ್ತು…

Read More

ಮಡಿಕೇರಿ ಜ.29 : ಮಡಿಕೇರಿ ತಾಲ್ಲೂಕಿನ ಕುಂದಚೇರಿ ಗ್ರಾ.ಪಂ ವ್ಯಾಪ್ತಿಯ ಕೋಪಟ್ಟಿ ಗ್ರಾಮಸ್ಥರಿಗೆ ಕೊನೆಗೂ ಸೇತುವೆ ಭಾಗ್ಯ ದೊರೆತ್ತಿದೆ. ಕಳೆದ 15 ವರ್ಷಗಳಿಂದ ದೊಡ್ಡ ಹೊಳೆಯನ್ನು ದಾಟಲು ಗ್ರಾಮಸ್ಥರು ಪಡುತ್ತಿದ್ದ ಹರಸಾಹಸದ ಕುರಿತು 2022 ಜೂನ್ ತಿಂಗಳಿನಲ್ಲಿ “ನ್ಯೂಸ್ ಡೆಸ್ಕ್” ವರದಿ ಮಾಡಿತ್ತು. ಇದರ ಫಲಶ್ರುತಿಯಾಗಿ ಲೋಕೋಪಯೋಗಿ ಇಲಾಖೆ ರೂ.35 ಲಕ್ಷ ವೆಚ್ಚದಲ್ಲಿ ಸೇತುವೆಯನ್ನು ನಿರ್ಮಾಣ ಮಾಡಿದೆ. ನೂತನ ಸೇತುವೆಯನ್ನು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅವರು ಇಂದು ಉದ್ಘಾಟಿಸಿದರು. 2021 ರಲ್ಲಿ ತಲಕಾವೇರಿ ಭಾಗದಲ್ಲಿ ಮಹಾಮಳೆಯಿಂದ ಅನಾಹುತ ಸಂಭವಿಸಿದಾಗ ಕೋಪಟ್ಟಿ ಭಾಗದ ದೊಡ್ಡ ಹೊಳೆಯಲ್ಲಿ ಪ್ರವಾಹದ ರೂಪದಲ್ಲಿ ನೀರು ಹರಿದು ಬಂದಿತ್ತು. ಜೀವ ಉಳಿಸಿಕೊಳ್ಳಬೇಕೆಂದರೆ ಅಥವಾ ತುರ್ತು ಚಿಕಿತ್ಸೆಗೆ ತೆರಳಬೇಕೆಂದರೆ ಯಾವುದೇ ಮಾರ್ಗದ ವ್ಯವಸ್ಥೆ ಇಲ್ಲಿರಲಿಲ್ಲ. ಎಲ್ಲಾ ಸಂದರ್ಭದಲ್ಲೂ ಹೊಳೆ ದಾಟುವುದು ಅನಿವಾರ್ಯವಾಗಿತ್ತು. ಇದರಿಂದ ವಯೋವೃದ್ಧರು ಹಾಗೂ ಮಕ್ಕಳು ಕಷ್ಟಪಡುತ್ತಿದ್ದರು. ಬೆಟ್ಟದಿಂದ ಬರುವ ಎರಡು ಹೊಳೆಗಳು ಸೇರಿ ಹರಿಯುವ ಈ ನೀರಿನಲ್ಲಿ ದಾಟುವುದು ಅಷ್ಟು ಸುಲಭದ ಮಾತಲ್ಲ. ಕಾರಣ ಇದು…

Read More

ಮಡಿಕೇರಿ ಜ.29 : ಓಯಸಿಸ್ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್ ಹೊದವಾಡ ಕೊಟ್ಟಮುಡಿ ವತಿಯಿಂದ ಮಾ.4 ರಿಂದ 12 ರವರೆಗೆ ನಡೆಯುವ ಕೊಡಗು ಮುಸ್ಲಿಂ ಕ್ರಿಕೆಟ್ ಕಪ್ – 2023 ಪಂದ್ಯಾವಳಿಯ ಲೋಗೋವನ್ನು ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹಮದ್ ಖಾನ್ ಅನಾವರಣಗೊಳಿಸಿದರು. ಚಾಮರಾಜಪೇಟೆಯ ಶಾಸಕರ ಕಚೇರಿಯಲ್ಲಿ ಲೋಗೋ ಬಿಡುಗಡೆಗೊಳಿಸಿದ ಅವರು ಆಯೋಜಕರಿಗೆ ಹಾಗೂ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ಈ ಸಂದರ್ಭ ಪ್ರಮುಖರಾದ ಅಯುಬ್ ಖಾನ್, ಓಯಸಿಸ್ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಶಾಫಿ ಕೊಟ್ಟಮುಡಿ, ಕಾರ್ಯದರ್ಶಿ ಶಿಯಾಬುದ್ದೀನ್ ಕೆ.ಯು, ಪದಾಧಿಕಾರಿಗಳಾದ ಅಶ್ರಫ್ ಟಿ.ಎಚ್ ತಕ್ಕ ಪಳ್ಳಿ, ರೆಹಮಾನ್ ಅಂದಾಯಿ, ಸುಹೈಲ್ ಎಂ.ಎ ಮತ್ತಿತರರು ಉಪಸ್ಥಿತರಿದ್ದರು. ಕೊಡಗು ಮುಸ್ಲಿಂ ಕ್ರಿಕೆಟ್ ಕಪ್ ಪಂದ್ಯಾವಳಿ ನಾಪೋಕ್ಲುವಿನ ಚೆರಿಯಪರಂಬು ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಶಾಫಿ ಕೊಟ್ಟಮುಡಿ ತಿಳಿಸಿದರು.

Read More