ಲೇಖಕ: admin

ಮಡಿಕೇರಿ ಜ.28 : ಕೊಡಗು ಜಿಲ್ಲೆಯ ಯರವ, ಕುಡಿಯ ಹಾಗೂ ಬುಡಕಟ್ಟು ಸಮುದಾಯಗಳ ವಿಶಿಷ್ಟ ಭಾಷೆಗಳನ್ನಾಡುವ ಸಮಾಜಗಳನ್ನು ಗುರುತಿಸಬೇಕು. ಅಂತಹ ಬುಡಕಟ್ಟು ಭಾಷೆಗೆ ಆದ್ಯತೆ ನೀಡಬೇಕು ಎಂದು ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ.ವಿಜಯ್ ಪೂಣಚ್ಚ ತಂಬಂಡ ಅವರು ಹೇಳಿದರು. ಬೆಟ್ಟಗೇರಿಯಲ್ಲಿ ನಡೆದ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬುಡಕಟ್ಟು ಭಾಷಿಕರನ್ನು ಉಳಿಸಿ ಬೆಳೆಸಿದಲ್ಲಿ ಜಿಲ್ಲೆಯ ಸಂಸ್ಕೃತಿ ಉಳಿಯಲು ಸಾಧ್ಯ. ಬುಡಕಟ್ಟು ಸಮುದಾಯಗಳ ಭಾಷೆ ಮತ್ತು ಭಾಷೆಯಿಂದ ಅಭಿವ್ಯಕ್ತವಾಗುವ ಸಂಸ್ಕೃತಿಯನ್ನು ಗೌರವಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಕಾಡು ಮಕ್ಕಳ ಕೂಗು ಕೊಡಗು ಬುಡಕಟ್ಟು ಸಮಾಜದವರ ಕಥನಗಳು ಎಂಬ ಕೃತಿಯಲ್ಲಿ ಇಲ್ಲಿನ ಸಣ್ಣ ಸಣ್ಣ ಭಾಷೆಗಳ ಸಂರಕ್ಷಣೆ ಬಗ್ಗೆ ಪುಸ್ತಕ ಹೊರತರುವ ಮೂಲಕ ಶ್ರಮಿಸಲಾಗಿದೆ ಭಾಷೆಯು ಸಂವಹನ ಮಾಧ್ಯಮಕ್ಕೆ ಮೀಸಲಾಗಿಲ್ಲ. ಭಾವನಾತ್ಮಕ ಬದುಕಿನ ಜೀವನದ ಮೂಲ ಶಿಲೆಯಾಗಿದೆ ಎಂಬುದನ್ನು ಮರೆಯುವಂತಿಲ್ಲ ಎಂದರು. ‘ಕನ್ನಡ ಶಾಲೆಗಳನ್ನು ಅಭಿವೃದ್ಧಿಗೊಳಿಸುವುದು ಪ್ರತಿಯೊಬ್ಬರ ನಾಗರಿಕರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಕನ್ನಡ ಶಾಲೆಗಳ ಉಳಿವಿಗೆ ದತ್ತು…

Read More

ಮಡಿಕೇರಿ ಜ.28 : ಸ್ವಾತಂತ್ರ್ಯ ಭಾರತದ ಮೊದಲ ಸೇನಾ ಮಹಾ ದಂಡನಾಯಕರಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 124 ನೇ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶನಿವಾರ ಆಚರಿಸಲಾಯಿತು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿರುವ ಕಾರ್ಯಪ್ಪ ಅವರ ಪ್ರತಿಮೆಗೆ ಶಾಸಕರಾದ ಎಂ.ಪಿ.ಅಪ್ಪಚ್ಚುರoಜನ್, ಕೆ.ಜಿ.ಬೋಪಯ್ಯ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಏರ್ ಮಾರ್ಷಲ್(ನಿವೃತ್ತ) ಕೆ.ಸಿ.ಕಾರ್ಯಪ್ಪ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಕೂಡಿಗೆ ಸೈನಿಕ ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಜಿ.ಕಣ್ಣನ್, ಕರ್ನಲ್ ನಾರಾಯಣ ಮೂರ್ತಿ(ನಿವೃತ್ತ), ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಐಮುಡಿಯಂಡ ರಾಣಿ ಮಾಚಯ್ಯ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುoಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ತಹಶೀಲ್ದಾರ್ ಪಿ.ಎಸ್.ಮಹೇಶ್ ಇತರರು ಪುಷ್ಪಗುಚ್ಛ ಇರಿಸಿ, ಗೌರವ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ತಮ್ಮ ಬದುಕಿನುದ್ದಕ್ಕೂ ಶಿಸ್ತು, ಪ್ರಾಮಾಣಿಕತೆ, ಸಮಯಪ್ರಜ್ಞೆಗೆ ಪ್ರಥಮ ಆದ್ಯತೆ ನೀಡಿದ್ದರು. ರಾಷ್ಟ್ರಪ್ರೇಮ,…

Read More

ಮಡಿಕೇರಿ ಜ.28 : ಪೊನ್ನಂಪೇಟೆಯ ಹೈಸೊಡ್ಲೂರು ಗ್ರಾಮದಲ್ಲಿ ಪ್ಲಾಸ್ಟಿಕ್ ಗುಡಿಸಲು ನಿರ್ಮಿಸಿಕೊಂಡು ವಾಸವಿರುವ ಪರಿಶಿಷ್ಟ ಪಂಗಡದವರಿಗೆ ನಿವೇಶನ ಹಾಗೂ ಮೂಲಭೂತ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿತು. ಪೊನ್ನಂಪೇಟೆ ಬಸ್ ನಿಲ್ದಾಣದಿಂದ ತಶೀಲ್ದಾರರ ಕಚೇರಿಯವರೆಗೆ ಮೆರವಣಿಗೆ ಮೂಲಕ ಸಾಗಿದ ಸಂಘಟನೆಯ ಪ್ರಮುಖರು ಹಾಗೂ ವಸತಿ ರಹಿತರು ಬೇಡಿಕೆಯ ಈಡೇರಿಕೆಗಾಗಿ ಘೋಷಣೆಗಳನ್ನು ಕೂಗಿದರು. ಸಂಘಟನೆಯ ಹಿರಿಯ ಮುಖಂಡರಾದ ಹೆಚ್.ಎಸ್.ಕೃಷ್ಣಪ್ಪ ಮಾತನಾಡಿ, ಸ್ವಾತಂತ್ರö್ಯ ಬಂದು 75 ವರ್ಷಗಳೇ ಕಳೆದರು ಕೊಡಗು ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡದ ಬಡಮಂದಿ ತೋಟದ ಲೈನ್ ಮನೆಗಳಲ್ಲಿ ಸಂಕಷ್ಟದ ಬದುಕು ಸಾಗಿಸುವ ಪರಿಸ್ಥಿತಿ ಮುಂದುವರೆದಿರುವುದು ವಿಪರ್ಯಾಸ ಎಂದು ಬೇಸರ ವ್ಯಕ್ತಪಡಿಸಿದರು. ಹೈಸೊಡ್ಲೂರು ಗ್ರಾಮ ವ್ಯಾಪ್ತಿಯಲ್ಲಿ ಸುಮಾರು 8 ಏಕರೆ ಸರ್ಕಾರಿ ಜಾಗ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಅಧೀನದಲ್ಲಿದೆ. ಒಂದು ಏಕರೆ ಜಾಗದಲ್ಲಿ ಸುಮಾರು 74 ಪರಿಶಿಷ್ಟ ಪಂಗಡದ ಕುಟುಂಬಗಳು ಕಳೆದ 5 ವರ್ಷಗಳಿಂದ ಪ್ಲಾಸ್ಟಿಕ್ ಗುಡಿಸಲುಗಳನ್ನು ಹಾಕಿಕೊಂಡು ವಾಸವಾಗಿದ್ದಾರೆ. ಇಲ್ಲಿನ ನಿವಾಸಿಗಳು ಕುಡಿಯುವ ನೀರು ಹಾಗೂ ಮೂಲಭೂತ…

Read More

ಮಡಿಕೇರಿ ಜ.28 : ಸೋಮವಾರಪೇಟೆಯಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ಅವಘಡಕ್ಕೀಡಾಗಿದೆ. ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿಯ ಹಂಪ್ ನಲ್ಲಿ ಬ್ಲೇಡ್ ತುಂಡಾಗಿ ಹಿಂಬದಿಯ ಚಕ್ರಗಳು ಹೌಸಿಂಗ್ ಸಹಿತ ಕಳಚಿಕೊಂಡ ಘಟನೆ ನಡೆಯಿತು. ಮೈಸೂರು-ಬಂಟ್ವಾಳ ಹೆದ್ದಾರಿ-275 ರಲ್ಲಿ ಕೆ.ಆರ್.ನಗರ ಡಿಪೋಗೆ ಸೇರಿದ ಬಸ್ ಸೋಮವಾರಪೇಟೆ ಕಡೆಯಿಂದ ಮೈಸೂರಿಗೆ ತೆರಳುತ್ತಿತ್ತು. ವೇಗದಲ್ಲಿದ್ದ ಬಸ್ ಯಶೋಧರಪುರ ಗೇಟ್ ಬಳಿಯ ಹಂಪ್ ನಲ್ಲಿಯೂ ವೇಗ ಕಡಿಮೆ ಮಾಡದ ಕಾರಣ ಅವಘಡಕ್ಕೀಡಾಯಿತು ಎಂದು ಆರೋಪಿಸಲಾಗಿದೆ. ಬಸ್ ನ ಹಿಂಬದಿಯ ಬ್ಲೇಡ್ ತಂಡಾಗಿ ಹೌಸಿಂಗ್ ಸಹಿತಿ ಚಕ್ರಗಳು ಕಳಚಿ ಬಿದ್ದಿದ್ದು, ಅದೃಷ್ಟವಶಾತ್ ಬಸ್ ನಲ್ಲಿದ್ದ 39 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಬಸ್ ಹಿಂಬದಿಯಲ್ಲಿ ಯಾವುದೇ ವಾಹನಗಳಿಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ಬಸ್‌ನ್ನು ಕ್ರೇನ್ ಬಳಸಿ ತೆರವುಗೊಳಿಸಲಾಯಿತು. ಸ್ಥಳಕ್ಕೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಭೇಟಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಶನಿವಾರಸಂತೆ ಜ.28 : ಮಾಲಂಬಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 2022-23ನೇ ಸಾಲಿನ ವಾರ್ಷಿಕೋತ್ಸವ ಕಲರವ ನಡೆಯಿತು. ಶಾಲೆಯ ಎಸ್‌ಡಿಎಂಸಿ ಸಮಿತಿ ಹಾಗೂ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಸಂಯುಕ್ತ ಆಶ್ರಯದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ, ಶಾಲೆಯ ಹಳೆ ವಿದ್ಯಾರ್ಥಿಗಳಿಗೆ, ಗ್ರಾಮಸ್ಥರಿಗೆ ಕ್ರೀಡಾಕೂಟ ನಡೆಯಿತು. ವಾರ್ಷಿಕೋತ್ಸವ ಸಮಾರೋಪ ಸಮಾರಂಭವನ್ನು ಗ್ರಾಮದ ಹಿರಿಯ ಬಿ.ಎಂ.ಮಾದಪ್ಪ ಉದ್ಘಾಟಿಸಿ ಮಾತನಾಡಿ-ವಿದ್ಯಾರ್ಥಿಗಳಲ್ಲಿ ನಾನಾ ರೀತಿಯ ಪ್ರತಿಭೆಗಳು ಅಡಗಿದ್ದು ಇವುಗಳನ್ನು ಅನಾವಣಗೊಳಿಸಲು ವಾರ್ಷಿಕೋತ್ಸವ ಕಾರ್ಯಕ್ರಮ ಉತ್ತಮ ವೇದಿಕೆಯಾಗುತ್ತದೆ ಎಂದರು. ಶಾಲೆಯ ಹಳೆ ವಿದ್ಯಾರ್ಥಿ ಹಾಗೂ ಉಪನ್ಯಾಸಕ ಎಂ.ಎಸ್.ಪ್ರಸನ್ನ-ಶಾಲೆ ಶಿಕ್ಷಣದ ದೇಗುಲವಾಗಿದ್ದು ಇಲ್ಲಿ ಜಾತಿ, ಧರ್ಮ, ಮೇಲು ಕೀಳುಗಳೆಂಬ ತಾರತಮ್ಯ ಇರುವುದಿಲ್ಲ ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ನೀಡುವ ದೇಗುಲವಾಗಿದೆ ಎಂದರು. ಇಂದು ಪ್ರತಿಷ್ಠೆಯ ಹೆಸರಿನಲ್ಲಿ ಪೋಷಕರು ಸರಕಾರಿ ಶಾಲೆಯ ಬಗ್ಗೆ ತಾತ್ಸಾರ ಮನೋಭಾವನೆ ಬೆಳೆಸಿಕೊಂಡಿದ್ದಾರೆ ಈ ಕಾರಣದಿಂದ ಸರಕಾರಿ ಶಾಲೆಗಳಲ್ಲಿ ಹಾಜರಾತಿ ಕಡಿಮೆಯಾಗುತ್ತಿದೆ ಈ ನಿಟ್ಟಿನಲ್ಲಿ ಪೋಷಕರು, ಸಾರ್ವಜನಿಕರು ಸರಕಾರಿ ಶಾಲೆಗಳನ್ನು ಉಳಿಸಿ ಬೆಳಸಲು ಚಿಂತನೆ ಹರಿಸುವಂತೆ ಮನವಿ ಮಾಡಿದರು.…

Read More

ಮಡಿಕೇರಿ ಜ.28 : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರು ದೇಶ ಕಂಡ ಅಪ್ರತಿಮ, ಧೀಮಂತ ವ್ಯಕ್ತಿತ್ವದ ವೀರಸೇನಾನಿ. ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಯುವ ಸಮೂಹ ದೇಶಪ್ರೇಮ ಬೆಳೆಸಿಕೊಳ್ಳಬೇಕು ಎಂದು ಎನ್‍ಸಿಸಿ ಕಮಾಂಡಿಂಗ್ ಅಧಿಕಾರಿ ಕರ್ನಲ್ ಜೆಫಿರಿನ್ ಗಿಲ್ಬರ್ಟ್ ಅರಾನ್ಹಾ ಕಿವಿಮಾತು ಹೇಳಿದರು. ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ 124ನೇ ಜನ್ಮದಿನಾಚರಣೆಯ ಸಭಾ ಕಾರ್ಯಕ್ರಮ ಹಾಗೂ ಕಾರ್ಯಪ್ಪ ಅವರಿಗೆ ಸಂಬಂಧಿಸಿದ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಪ್ಪ ಅವರ ದೇಶಪ್ರೇಮ, ವ್ಯಕ್ತಿತ್ವ, ಶಿಸ್ತು ಬದ್ಧ ಜೀವನ, ದೂರದೃಷ್ಟಿ, ಸಮಯ ಪ್ರಜ್ಞೆ, ಸ್ವಾರ್ಥರಹಿತ ಸೇವೆಯನ್ನು ಇಂದಿನ ಯುವ ಜನಾಂಗ ಅನುಸರಿಸಬೇಕು. ದೇಶ ಸೇವೆ ಮೂಲಕ ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ.ಬಿ.ರಾಘವ, ವಿದ್ಯಾರ್ಥಿಗಳು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರಂತಹ ಸಾಧಕ ವ್ಯಕ್ತಿಗಳನ್ನು ಮಾದರಿಯಾಗಿಸಿಕೊಂಡು ತಮ್ಮ ಗುರಿಯತ್ತ ಸಾಗಿದರೆ ಯಶಸ್ಸು…

Read More

ಮಡಿಕೇರಿ ಜ.28 : ಜಿಲ್ಲೆಯಲ್ಲಿನ ಬುಡಕಟ್ಟು ಭಾಷೆಗಳನ್ನು ಉಳಿಸಿ, ಬೆಳೆಸುವಂತಾಗಲು ಮತ್ತೊಂದು ಅಕಾಡೆಮಿ ಅತ್ಯಗತ್ಯ. ಆ ನಿಟ್ಟಿನಲ್ಲಿ ಪ್ರಯತ್ನಗಳು ಮುಂದುವರೆಯಬೇಕು ಎಂದು ಶಾಸಕರಾದ ಕೆ.ಜಿ.ಬೋಪಯ್ಯ ಹೇಳಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಡಿಕೇರಿ ತಾಲ್ಲೂಕಿನ ಬೆಟ್ಟಗೇರಿಯಲ್ಲಿ ನಡೆದ 11 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ಮೂಲ ಸಂಸ್ಕೃತಿ ಉಳಿಸುವಲ್ಲಿ ಬುಡಕಟ್ಟು ಸಮುದಾಯಗಳ ಭಾಷೆ ಅಭಿವೃದ್ಧಿಗೆ ಮುಂದಾಗಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿನ ಯರವ, ಕುಡಿಯ, ಕಾಡುಕುರುಬ, ಜೇನುಕುರುಬ, ಬೆಟ್ಟಕುರುಬ, ಸೋಲಿಗ ಹೀಗೆ ಬುಡಕಟ್ಟು ಸಮುದಾಯಗಳು ತಮ್ಮದೇ ಆದ ಭಾಷೆ ಮಾತನಾಡುತ್ತಿದ್ದು, ಇವುಗಳು ಕನ್ನಡದ ಉಪ ಭಾಷೆಗಳಾಗಿದ್ದು, ಇವುಗಳನ್ನು ಉಳಿಸಿ ಬೆಳೆಸಬೇಕಿದೆ ಎಂದು ಕೆ.ಜಿ.ಬೋಪಯ್ಯ ಅವರು ತಿಳಿಸಿದರು. ಈಗಾಗಲೇ ಜಿಲ್ಲೆಯಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಗಳು ಸ್ಥಾಪನೆಯಾಗಿದೆ. ಜೊತೆಗೆ ಬುಡಕಟ್ಟು ಸಮಾಜಗಳು ಮಾತನಾಡುವ ಭಾಷೆ ಉಳಿಸಿ, ಬೆಳೆಸುವಲ್ಲಿ ಅಕಾಡೆಮಿ ಸ್ಥಾಪನೆ ಸಮಯೋಚಿತವಾಗಿದೆ ಎಂದು ನುಡಿದರು. ಆಧುನಿಕತೆ…

Read More

ಸುಂಟಿಕೊಪ್ಪ,ಜ.28 : ಸುಂಟಿಕೊಪ್ಪದ ಸಂತ ಮೇರಿ ಆಂಗ್ಲ ಮಾದ್ಯಮ ಶಾಲೆಯ ವಿದ್ಯಾರ್ಥಿಗಳು ಪರಿಸರ ನೀರು ಆಹಾರದ ಮಹತ್ವದ ಕುರಿತು ಅರಿವು ಮೂಡಿಸಿದರು. ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯಿಂದ ಹಸಿರು, ಹಳದಿ, ನೀಲಿ ಕೆಂಪು ಸಮವಸ್ತ್ರದಲ್ಲಿ ಹೊರಟ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ವ್ಯವಸ್ಥಾಪಕ ಅರುಳ್ ಸೇಲ್ವಕುಮಾರ್, ಶಾಲಾ ಮುಖ್ಯೋಪಾದ್ಯಾಯ ಸೇಲ್ವರಾಜ್, ಉಪಯಾಜಕರಾದ ಚಾಲ್ಸ್ ಚಾಲನೆ ನೀಡಿದರು.

Read More

ಮಡಿಕೇರಿ ಜ.28 : ಟಿಂಬರ್ ಸಾಗಾಟದ ಸಂದರ್ಭ ಮರದ ದಿಮ್ಮಿಯೊಂದು ಲಾರಿಯಿಂದ ಜಾರಿ ಪಿಕ್‍ಅಪ್ ಜೀಪಿನ ಗಾಜು ಸೀಳಿ ಒಳಹೊಕ್ಕ ಘಟನೆ ಸಂಪಾಜೆ ರಸ್ತೆಯ ಜೋಡುಪಾಲ ಸಮೀಪ ನಡೆದಿದೆ. ಶುಕ್ರವಾರ ರಾತ್ರಿ 14 ಚಕ್ರದ ಲಾರಿಯೊಂದರಲ್ಲಿ ಭಾರೀ ಗಾತ್ರದ ಮರದ ದಿಮ್ಮಿಗಳನ್ನು ಮಂಗಳೂರು ಕಡೆಗೆ ಸಾಗಿಸಲಾಗುತ್ತಿತ್ತು. ಜೋಡುಪಾಲ ಸಮೀಪ ಆಗಮಿಸುತ್ತಿದ್ದಂತೆ ಮರದ ದಿಮ್ಮಿಗಳಿಗೆ ಬೆಸೆಯಲಾಗಿದ್ದ ಹಗ್ಗ ತುಂಡರಿಸಲ್ಪಟ್ಟ ಪರಿಣಾಮ ದಿಮ್ಮಿಗಳು ರಸ್ತೆಗೆ ಉರುಳಿ ಬಿದ್ದಿವೆ. ಇದೇ ವೇಳೆ ಜೋಡುಪಾಲದಿಂದ ಮದೆನಾಡು ಕಡೆಗೆ ಬರುತ್ತಿದ್ದ ಪಿಕ್‍ಅಪ್ ವಾಹನಕ್ಕೆ ಮರದ ದಿಮ್ಮಿಯೊಂದು ಅಪ್ಪಳಿಸಿದೆ. ದಿಮ್ಮಿ ಗಾಜು ಸೀಳಿ ಒಳಹೊಕ್ಕರೂ ಚಾಲಕ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಿಕ್‍ಅಪ್ ವಾಹನ ಜಖಂಗೊಂಡಿದ್ದು, ಕೆಲ ಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿತ್ತು. ಘಟನೆ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನಾಪೋಕ್ಲು ಜ.28 : ಸುನ್ನಿ ಸ್ಟೂಡೆಂಟ್ ಫೆಡರೇಶನ್ (ಎಸ್ಎಸ್ಎಫ್)  ನಾಪೋಕ್ಲು ಶಾಖೆಯ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ಪಿ.ಐ.ಫಾರೂಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಪೋಕ್ಲು ಪಟ್ಟಣದಲ್ಲಿರುವ ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಕಚೇರಿಯಲ್ಲಿ ಎಸ್ಎಸ್ಎಫ್ ನಾಪೋಕ್ಲು ಶಾಖೆಯ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆಮಾಡಲಾಯಿತು. ಕಾರ್ಯದರ್ಶಿಯಾಗಿ ಟಿ.ಎಂ. ಹಾರಿಸ್, ಕೋಶಾಧಿಕಾರಿಯಾಗಿ ಎಂ. ಎಂ.ಶಾಹಿಲ್, ಸದಸ್ಯರಾಗಿ ಅನೀಸ್, ನಾಸಿರ್ ಮುಸ್ಲಿಯಾರ್,ಫಾಝಿಲ್, ಆಫ್ಸಲ್, ಶಾಮಿಲ್,ಆದಿಲ್ ಮುಸ್ಲಿಯಾರ್, ಫೈಸಲ್,ಫಾಝಿಲ್ ಸಿ.ಎಚ್, ತಷ್ರೀಫ್ ಆಯ್ಕೆಯಾದರು. ನೂತನ ಪದಾಧಿಕಾರಿಗಳಿಗೆ ಹಿಂದಿನ ಅಧ್ಯಕ್ಷ  ಅಬ್ದುಲ್ ರಹ್ಮಾನ್ ಹಾಗೂ ಆಡಳಿತ ಮಂಡಳಿಯವರು ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭ ಕೆಸಿಎಫ್ ಅಧ್ಯಕ್ಷ ಉಸ್ಮಾನ್ ಹಾಜಿ, ಎಸ್ ವೈ ಎಸ್ ಕಾರ್ಯದರ್ಶಿ ರಹೀಮ್ ಮಾಸ್ಟರ್, ಎಸ್ಎಸ್ಎಫ್ ಮಡಿಕೇರಿ ಡಿವಿಜನ್ ಸಂಚಾಲಕ ಸಾದಿಕ್ ನಿಜಾಮಿ, ಸೆಕ್ಟರ್ ಸಮಿತಿ ಸದಸ್ಯರಾದ ನೌಶಾದ್, ಇಸ್ಮಾಯಿಲ್, ತ್ವಯಿಬ್ ರಜಾಕ್ ಹಾಗೂ ಎಸ್ಎಸ್ ಎಫ್,ಎಸ್ ವೈ ಎಸ್ ಕಾರ್ಯಕರ್ತರು ಹಾಜರಿದ್ದರು. ವರದಿ :ಝಕರಿಯ ನಾಪೋಕ್ಲು 

Read More