ಲೇಖಕ: admin

ಮಡಿಕೇರಿ ಮಾ.25 NEWS DESK : ಬೆಟ್ಟಗೇರಿಯ ಉದಯ ವಿದ್ಯಾಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳಿಗೆ 10ನೇ ತರಗತಿ ಪರೀಕ್ಷೆ ಬರೆಯಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ರಜೆ ದಿನವಾದ ಭಾನುವಾರ ಖಾಸಗಿ ಹೊಟೇಲ್‍ನಲ್ಲಿ ಪ್ರವೇಶ ಪತ್ರ ನೀಡಿರುವುದು ನಿಯಮಬಾಹಿರ ಕ್ರಮವಾಗಿದ್ದು, ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ತಳೂರು ಎ.ಕಿಶೋರ್ ಕುಮಾರ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ದಿನಾಂಕ 22-03-2026 ರ ಭಾನುವಾರ ರಜೆ ದಿನ ಶಾಸಕರ ಸಮ್ಮುಖದಲ್ಲಿ ಖಾಸಾಗಿ ಹೊಟೇಲ್‍ನಲ್ಲಿ ಮಕ್ಕಳಿಗೆ ಪರೀಕ್ಷೆ ಬರೆಯಲು ಪ್ರವೇಶ ಪತ್ರ ನೀಡಿರುವುದು ಎಷ್ಟು ಸರಿ. ಶಾಸಕರು ಅಧಿಕಾರಿಯನ್ನು ಹಿಡಿತದಲ್ಲಿಟ್ಟುಕೊಂಡು ಕೆಲಸ ಮಾಡಿಸುವ ಬದಲು ಪ್ರವೇಶ ಪತ್ರ ನೀಡುವ ಅಗತ್ಯವೇನಿತ್ತು, ಶಾಸಕರೇ ಪ್ರವೇಶ ಪತ್ರ ನೀಡುವುದಾದರೆ ಸ್ಥಳೀಯ ಉಪನಿರ್ದೆಶಕರು, ಕ್ಷೇತ್ರ ಶಿಕ್ಷಣಾದಿಕಾರಿಗಳ ಕರ್ತವ್ಯ ಏನು ಎಂದು ಪ್ರಶ್ನಿಸಿದ್ದಾರೆ. ಬೇಜವಾಬ್ದಾರಿ ವರ್ತನೆ ತೋರಿದ…

Read More

ಮಡಿಕೇರಿ NEWS DESK ಮಾ.25 : ಸೋಮವಾರಪೇಟೆಯ ಸಾಮಾಜಿಕ ಹೋರಾಟಗಾರ್ತಿ ಡಾ.ಕಾವೇರಿ ಹೆಚ್.ಎಂ ಅವರು ದಕ್ಷಿಣ ಏಷ್ಯಾ ದೇಶಗಳ ಆದಿವಾಸಿಗಳ ಪಾರಂಪರಿಕ ಜ್ಞಾನ, ಗ್ರಾಮೀಣ ನಾಯಕತ್ವ ಮತ್ತು ಗ್ರಾಮೀಣ ಅಭಿವೃದ್ಧಿ ಕುರಿತು ಜಪಾನ್ ದೇಶದಲ್ಲಿ ನಡೆಯುತ್ತಿರುವ ತರಬೇತಿ ಹಾಗೂ ಅಧ್ಯಯನ ಪ್ರವಾಸಕ್ಕೆ ಆಯ್ಕೆಯಾಗಿದ್ದಾರೆ. ಇದು 9 ತಿಂಗಳ ಕಾರ್ಯಕ್ರಮವಾಗಿದ್ದು, ಈ ತರಬೇತಿ ಮೂಲಕ ಗ್ರಾಮೀಣ ಅಭಿವೃದ್ಧಿ ಹಾಗೂ ಪಾರಂಪರಿಕ ಜ್ಞಾನ ವ್ಯವಸ್ಥೆಗಳ ಬಗ್ಗೆ ಜಾಗತಿಕ ಅನುಭವವನ್ನು ಪಡೆಯುವ ಅವಕಾಶ ದೊರೆಯಲಿದೆ. ಡಾ.ಕಾವೇರಿ ಹೆಚ್.ಎಂ ಅವರಿಗೆ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಶುಭ ಹಾರೈಸಿದ್ದಾರೆ.

Read More

ಮಡಿಕೇರಿ NEWS DESK ಮಾ.25 : ಮಡಿಕೇರಿ ನಗರದ ಹೊರವಲಯದ ಇಬ್ಬನಿವಳವಾಡಿ ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡಿದೆ. ಕಾಫಿ ತೋಟವೊಂದರಲ್ಲಿ ಹುಲಿ ರಾಜಾರೋಷವಾಗಿ ಸಂಚರಿಸುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿದ್ದು, ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದ್ದಾರೆ.

Read More

ಮಡಿಕೇರಿ NEWS DESK ಮಾ.25 : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹಿರಿಯ ಕಾರ್ಯಕರ್ತರು ಹಾಗೂ ಹಾನಗಲ್ಲು ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಹೊವಯ್ಯ ಹಾನಗಲ್ ಅವರು ಇಂದು ಬೆಳಿಗ್ಗೆ ನಿಧನರಾದರು. ಇವರು ಪತ್ರಕರ್ತ ಜಯಪ್ಪ ಹಾನಗಲ್ ಅವರ ಸಹೋದರ.

Read More

ಮಡಿಕೇರಿ NEWS DESK ಮಾ.25 : ಸರ್ಕಾರಿ ಪೈಸಾರಿ ಜಾಗದಲ್ಲಿ ಮನೆಕಟ್ಟಿಕೊಂಡು ಹಕ್ಕು ಪತ್ರ ಪಡೆಯಲು ಅರ್ಜಿ ಸಲ್ಲಿಸಿ ವಿವಿಧ ಕಾರಣಕ್ಕೆ ತಿರಸ್ಕೃತ ಗೊಂಡು ನಿರಾಶೆ ಹೊಂದಿದ ನಗರ ಪ್ರದೇಶದ ಸುಮಾರು 1500 ಕ್ಕೂ ಹೆಚ್ಚು ಕುಟುಂಬಗಳಿಗೆ ಹಾಗೂ ಗ್ರಾಮೀಣ ಪ್ರದೇಶದ 11 ಸಾವಿರಕ್ಕೂ ಅಧಿಕ ಕುಟುಂಬಗಳಿಗೆ ನ್ಯಾಯ ದೊರಕಿಸುವ ಪ್ರಯತ್ನಕ್ಕೆ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ರವರು ಪ್ರಾಮಾಣಿಕ ಪ್ರಯತ್ನಪಟ್ಟಿದ್ದಾರೆ. ಮಡಿಕೇರಿ ವಿಧಾನ ಸಭಾ ಕ್ಷೇತ್ರದಲ್ಲಿ 2015 ರಿಂದ 2022 ರ ವರೆಗೆ  94 ಸಿ.ಸಿ. ಅಡಿಯಲ್ಲಿ 1500 ಕ್ಕೂ ಹೆಚ್ಚು ಜನರು ಮತ್ತು 94 ಸಿ ಅಡಿ 11 ಸಾವಿರಕ್ಕೂ ಹೆಚ್ಚು ಜನರು ಸಲ್ಲಿಸಿದ ಅರ್ಜಿಗಳು ತಿರಸ್ಕರಿಸಿತವಾಗಿದ್ದವು.ಕ್ಷೇತ್ರ ವ್ಯಾಪ್ತಿಯಲ್ಲಿ ಜನರ ಬಳಿ ಶಾಸಕ ಡಾ ಮಂತರ್ ಗೌಡ ತೆರಳಿದ ಸಂಧರ್ಭದಲ್ಲಿ ಬಹಳಷ್ಟು ಜನರು ನ್ಯಾಯ ಒದಗಿಸುವಂತೆ ಶಾಸಕರಲ್ಲಿ ಮನವಿ ಸಲ್ಲಿಸಿದ್ದರು. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಡಾ ಮಂತರ್ ಗೌಡ ಸದನದಲ್ಲಿ ಈ ವಿಚಾರದ ಪ್ರಸ್ತಾವನೆಯನ್ನು…

Read More

ಮಡಿಕೇರಿ ಮಾ.24 NEWS DESK : ಅಂಬಾಭವಾನಿ ಯುವಕ ಯುವತಿ ಕ್ರೀಡಾ ಮತ್ತು ಮನೋರಂಜನ ಸಂಘ ಹಾಗೂ ಕೊಡಗು ಜಿಲ್ಲಾ ಮರಾಠ/ಮರಾಟಿ ಸಮಾಜ ಸೇವಾ ಸಂಘದ ಸಂಯುಕ್ತಾಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಮರಾಟಿ ಪ್ರೀಮಿಯರ್ ಲೀಗ್-2ರ ಕ್ರಿಕೆಟ್ ಪಂದ್ಯಾಟದಲ್ಲಿ ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತು.  ಫೈನಲ್ ಪಂದ್ಯದಲ್ಲಿ ಟಾಸ್ ಸೋತ ಗೂಗ್ಲಿಬಾಯ್ಸ್ ತಂಡ ನಿಗದಿತ 4 ಓವರ್‍ನಲ್ಲಿ 4 ವಿಕೆಟ್ ಕಳೆದುಕೊಂಡು 35 ರನ್ ಕಲೆ ಹಾಕಿತು. ಗುರಿ ಬೆನ್ನಟ್ಟಿದ ಅಂಚಿ ಕ್ರಿಕೆಟರ್ಸ್ ತಂಡ 4 ವಿಕೆಟ್ ಕಳೆದುಕೊಂಡು 18ರನ್ ಅಷ್ಟೇ ಗಳಿಸಲಷ್ಟೆ ಶಕ್ತವಾಗಿ 17ರನ್‍ಗಳ ಅಂತರದಲ್ಲಿ ಸೋಲುಂಡಿತ್ತು. ಪರಿಣಾಮ ಗೂಗ್ಲಿಬಾಯ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ಅಂಚಿ ಕ್ರಿಕೆಟರ್ಸ್ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಇದಕ್ಕೂ ಮೊದಲು ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್ ಸೋತ ಮರಾಟಿ ರಾಯಲ್ಸ್ ಕೊಡಗು ತಂಡ ನಿಗದಿತ 4 ಓವರ್‍ನಲ್ಲಿ 5 ವಿಕೆಟ್ ಕಳೆದುಕೊಂಡು 46 ಕಲೆ…

Read More

ಮಡಿಕೇರಿ ಮಾ.24 NEWS DESK : ಜಿಲ್ಲೆಯಲ್ಲಿ ಒಂದು ಲಕ್ಷ ಜನಸಂಖ್ಯೆಗೆ 79 ಕ್ಷಯ ರೋಗಿಗಳಿದ್ದು, ಇನ್ನೂ ಎರಡು ವರ್ಷದಲ್ಲಿ ಕ್ಷಯಮುಕ್ತ ಜಿಲ್ಲೆಯನ್ನಾಗಿ ಮಾಡಬಹುದಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸನತ್ ಕುಮಾರ್ ಅವರು ತಿಳಿಸಿದ್ದಾರೆ. ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಡೆದ ವಿಶ್ವ ಕ್ಷಯರೋಗ ನಿರ್ಮೂಲನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮುಂದಿನ ಒಂದು ವರ್ಷದಲ್ಲಿ ಒಂದು ಲಕ್ಷ ಜನರಿಗೆ ನಲ್ವತ್ತಕ್ಕಿಂತ ಕಡಿಮೆ ಕ್ಷಯ ರೋಗಿಗಳು ಕಂಡುಬರಲಿದ್ದು, ಸಂಪೂರ್ಣವಾಗಿ ಕ್ಷಯಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲರೂ ಸಂಕಲ್ಪ ಮಾಡಬೇಕು ಎಂದು ಅವರು ಕೋರಿದರು. ಕ್ಷಯರೋಗವನ್ನು ತಡೆಯುವಲ್ಲಿ 6 ರಿಂದ 7 ಲಕ್ಷ ರೂ. ವರೆಗೆ ಒಬ್ಬ ರೋಗಿಗೆ ಸರ್ಕಾರ ಭರಿಸಿ ಅತ್ಯುತ್ತಮ ಚಿಕಿತ್ಸೆ ನೀಡಲಿದೆ ಎಂದು ಡಾ.ಸನತ್ ಕುಮಾರ್ ಅವರು ಹೇಳಿದರು. ಮುಂದಿನ ಪೀಳಿಗೆ ಕ್ಷಯ ರೋಗದಿಂದ ಬಳಲಬಾರದು,…

Read More

ಮಡಿಕೇರಿ ಮಾ.24 NEWS DESK : ಪ್ರಸ್ತುತ ದಿನಗಳಲ್ಲಿ ತೊಟ್ಟಿಲು ತೂಗುವ ಕೈ ಜಗವನ್ನು ಆಳುತ್ತಿದ್ದು, ಪ್ರಾಚೀನ ಕಾಲದಿಂದ ಆಧುನಿಕ ಕಾಲದವರೆಗೂ ಎಲ್ಲಾ ಕ್ಷೇತ್ರದಲ್ಲಿ ಮಹಿಳೆಯ ಕೊಡುಗೆ ಅಪಾರ ಎಂದು ಕೊಡಗು 1 ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಜಿ.ಸುರೇಂದ್ರ ಅವರು ಹೇಳಿದರು. ಮಹಿಳೋದಯ ಮಹಿಳಾ ಒಕ್ಕೂಟ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಶಿಶು ಕಲ್ಯಾಣ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಅವರು, ಮಾತನಾಡಿದರು. 20ನೇ ಶತಮಾನದ ಆರಂಭದಲ್ಲಿ ಉತ್ತರ ಅಮೇರಿಕಾ ಮತ್ತು ಯುರೋಪ್‍ನಲ್ಲಿ ನಡೆದ ಕಾರ್ಮಿಕ ಚಳುವಳಿಗಳಿಂದ ಇದು ಹುಟ್ಟಿಕೊಂಡಿತು. 1975 ರಲ್ಲಿ ವಿಶ್ವಸಂಸ್ಥೆಯು ಈ ದಿನವನ್ನು ಅಧಿಕೃತಗೊಳಿಸಿತು. ಮಹಿಳೆಯರ ಸಾಧನೆಗಳನ್ನು ಗೌರವಿಸುವುದು, ಲಿಂಗ ತಾರತಮ್ಯ ಹೋಗಲಾಡಿಸುವುದು ಮತ್ತು ಸಮಾಜದಲ್ಲಿ ಸಮಾನತೆ ತರುವುದು ಮುಖ್ಯ ಉದ್ದೇಶವಾಗಿದೆ ಎಂದು ಜಿ.ಸುರೇಂದ್ರ ಅವರು ಹೇಳಿದರು. ಇಂದಿನ ಸಮಾಜದಲ್ಲಿ ಮಹಿಳೆಯರು ಶಿಕ್ಷಣ, ವಿಜ್ಞಾನ, ರಾಜಕೀಯ, ಕ್ರೀಡೆ…

Read More

ಕುಶಾಲನಗರ ಮಾ.24 NEWS DESK : ತೊರೆನೂರು ಸಂಜೀವಿನಿ ಒಕ್ಕೂಟ ವತಿಯಿಂದ  ತೊರೆನೂರು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸಂಜೀವಿನಿ ಸಂತೆ ಮೇಳ ನಡೆಯಿತು. ಕಾರ್ಯಕ್ರಮದಲ್ಲಿ  ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ರೂಪ ಮಹೇಶ್ ಮಾತಾನಾಡಿ, ಗ್ರಾಮಾಂತರ ಪ್ರದೇಶಗಳಲ್ಲಿ ಸಂತೆ ಮೇಳಗಳು ನಡೆಯುವ ಮೂಲಕ ಮಹಿಳೆಯರು ಅರ್ಥಿಕ ವ್ಯವಹಾರ ಜ್ಞಾನದ ಜೊತೆಯಲ್ಲಿ ಆರ್ಥಿಕವಾಗಿ ಮುಂದುವರೆಯಲು ಅನುಕೂಲವಾಗುವುದು ಎಂದರು. ಕುಶಾಲನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಕೆ.ಎಸ್ ಕೃಷ್ಣೆಗೌಡ ಮಾತಾನಾಡಿ,   ಸಂಜೀವಿನಿ  ಯೋಜನೆಯ ಅಡಿಯಲ್ಲಿ ತಮ್ಮ ಮನೆಗಳಲ್ಲಿ ಗೃಹೋಪಯೋಗಿ ವಸ್ತುಗಳು, ಕರಕುಶಲ ವಸ್ತುಗಳ ತಯಾರಿಕೆಗೆ  ಯೋಜನೆಯ ಸವಲತ್ತುಗಳನ್ನು ಪಡೆದುಕೊಳ್ಳಬೇಕು. ಇದರ ಮೂಲಕ ಮಹಿಳೆಯರು  ಸ್ವಾವಲಂಬಿ ಬದುಕಿಗೆ ಪೂರಕವಾಗುವುದು ಎಂದು ತಿಳಿಸಿದರು. ಜಿಲ್ಲಾ ಕೆ.ಡಿ.ಪಿ. ಸದಸ್ಯ ಜಗದೀಶ್ ಮಾತಾನಾಡಿ, ಮಹಿಳೆಯರು ಸ್ವ ಉದ್ಯೋಗಿಗಳಾಗಲು ಇಂತಹ ಯೋಜನೆಯು ಸಹಕಾರಿಯಾಗುವುದರ ಮೂಲಕ ತಮ್ಮ ಜವಾಬ್ದಾರಿ ಹೆಚ್ಚಳಕ್ಕೆ ಅನುಕೂಲವಾಗುವುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂದರ್ಭ ತೊರೆನೂರು ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ  ಮಹಾದೇವಮ್ಮ, ಉಪಾಧ್ಯಕ್ಷೆ  ವಿಮಲಾ, ಗ್ರಾಮ ಪಂಚಾಯತಿ ಮಾಜಿ…

Read More

ಕುಶಾಲನಗರ ಮಾ.24 NEWS DESK :  ಪಂಜಾಬ್ ನಲ್ಲಿ ನಡೆದ 45ನೇ ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ ಸ್ಪರ್ಧೆಯಲ್ಲಿ  ಕುಶಾಲನಗರದ ಐಮುಡಿಯಂಡ ಶೈಲಾ ಕುಶಾಲಪ್ಪ ಅವರು ಚಿನ್ನದ ಪದಕ ಗಳಿಸಿದ್ದಾರೆ. ಕುಶಾಲನಗರದ ಗುಡ್ಡೆ ಹೊಸೂರು ನಿವಾಸಿ ಐಮುಡಿಯಂಡ ಶೈಲಾ ಕುಶಾಲಪ್ಪ ಅವರು  ಮಾ.14 ರಿಂದ ಎರಡು ದಿನಗಳ ಕಾಲ ಪಂಜಾಬ್ ಭಟಿಯಂಡ ನಗರದ ಗುರು ಕಾಶಿ ವಿಶ್ವವಿದ್ಯಾಲಯ ಕ್ರೀಡಾ ಮೈದಾನದಲ್ಲಿ ನಡೆದ 200 ಮೀಟರ್, 1500 ಮೀಟರ್ ಓಟ 100 ಮೀಟರ್ ಹರ್ಡಲ್ಸ್ ಮತ್ತು ರಿಲೇ ವಿಭಾಗದಲ್ಲಿ ಭಾಗವಹಿಸಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಜಿಲ್ಲೆಯಿಂದ ಒಟ್ಟು ಐದು ಮಂದಿ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಶೈಲಾ ಕುಶಾಲಪ್ಪ ಅವರು ಈ ಹಿಂದೆ ಅಥ್ಲೆಟಿಕ್ಸ್ ವಿಭಾಗದಲ್ಲಿ ರಾಜ್ಯ, ರಾಷ್ಟ್ರೀಯ, ಅಂತರಾಷ್ಟ್ರೀಯ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಸಾಧನೆ ಮಾಡಿದ್ದಾರೆ.

Read More