ಲೇಖಕ: admin

ಮಡಿಕೇರಿ ಜ.27 : ರಾಷ್ಟ್ರದ ಉನ್ನತ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿಗೆ ಪಾತ್ರರಾಗಿರುವ ರಾಣಿ ಮಾಚಯ್ಯ ಅವರನ್ನು ಕೊಡಗು ಜಾನಪದ ಪರಿಷತ್ ವತಿಯಿಂದ ಗೌರವಿಸಲಾಯಿತು. ರಾಣಿ ಮಾಚಯ್ಯ ಅವರ ಮನೆಗೆ ತೆರಳಿ ಗೌರವಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಬಿ.ಜಿ.ಅನಂತ ಶಯನ, ಕೊಡಗು ಜಾನಪದ ಪರಿಷತ್ ಉಪಾಧ್ಯಕ್ಷರಲ್ಲಿ ಒಬ್ಬರಾಗಿರುವ ರಾಣಿ ಮಾಚಯ್ಯ ಅವರಿಗೆ ಸಂದ ಗೌರವ ಪರಿಷತ್ ಮತ್ತು ಕೊಡಗು ಜಿಲ್ಲೆಗೆ ಹೆಮ್ಮೆ ತಂದಿದೆ ಎಂದು ನುಡಿದರು. ಪದ್ಮಶ್ರೀ ಪ್ರಶಸ್ತಿ ಅನಿರೀಕ್ಷಿತವಾಗಿ ತಮಗೆ ದೊರೆತ್ತಿರುವುದು ಅತ್ಯಂತ ಸಂತಸ ತಂದಿದೆ ಎಂದು ರಾಣಿ ಮಾಚಯ್ಯ ನುಡಿದರು. ಜಾನಪದ ಪರಿಷತ್ ಮೂರ್ನಾಡು ಘಟಕದ ಅಧ್ಯಕ್ಷ ಪ್ರಶಾಂತ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮದ್, ಪ್ರಾಂಶುಪಾಲ ಸಿದ್ದರಾಜು ಹಾಗೂ ಮಡಿಕೇರಿ ತಾಲೂಕು ಕ.ಸಾ.ಪ. ಪ್ರಧಾನ ಕಾರ್ಯದರ್ಶಿ ರಂಜಿತ್ ಮಾತನಾಡಿ, ರಾಣಿ ಮಾಚಯ್ಯ ಅವರು ಕೊಡಗಿನ ಸಂಸ್ಕೃತಿಗೆ ಸಲ್ಲಿಸುತ್ತಿರುವ ನಿರಂತರ ಸೇವೆಯನ್ನು ಸ್ಮರಿಸಿದರು. ಉಪಾಧ್ಯಕ್ಷ ಅಂಬೆಕಲ್ ಕುಶಾಲಪ್ಪ, ತಾಲೂಕು ಕ.ಸಾ.ಪ. ಅಧ್ಯಕ್ಷ ಎ.ಕೆ. ನವೀನ್, ಜಿಲ್ಲಾ ಸಮಿತಿ ಸದಸ್ಯೆ ವೀಣಾಕ್ಷಿ…

Read More

ಮಡಿಕೇರಿ ಜ.27 : ಮದೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ಆವರಣದಲ್ಲಿ ಗಣರಾಜ್ಯೋತ್ಸವ ಮತ್ತು ಯೋಧ ವಂದನಾ ಕಾರ್ಯಕ್ರಮ ನಡೆಯಿತು. ಮದೆನಾಡು ವಿ.ಎಸ್.ಎಸ್.ಎನ್ ವ್ಯಾಪ್ತಿಗೆ ಒಳಪಡುವ ಗ್ರಾಮಗಳಾದ ಮದೆನಾಡು, ಕಾಟಕೇರಿ, ಜೋಡುಪಾಲ, 2ನೇ ಮೊಣ್ಣಂಗೇರಿ ಗ್ರಾಮಗಳ ಸೇವೆಯಲ್ಲಿರುವ ಮತ್ತು ನಿವೃತ್ತರಾದ ಒಟ್ಟು 131 ಮಂದಿ ಸೈನಿಕರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಮದೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಧನಂಜಯ ಅಗೋಳಿಕಜೆ ಮಾತನಾಡಿ ಯೋಧರಿಂದಾಗಿ ದೇಶ ಸುಭದ್ರವಾಗಿದೆ. ಅವರ ಶ್ರಮದಿಂದ ನಾವೆಲ್ಲರೂ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗಿದೆ. ಈ ಹಿನ್ನಲೆಯಲ್ಲಿ ಗ್ರಾಮದ ಯೋಧರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಮೊದಲಿಗೆ ಅಗಲಿದ ಯೋಧರಿಗೆ ಮೌನಚರಣೆ ಮೂಲಕ ಗೌರವವನ್ನು ಸಲ್ಲಿಸಲಾಯಿತು. ಹಿರಿಯ ಸಾಹಿತಿ ಬಾರಿಯಂಡ ಜೋಯಪ್ಪ ಯೋಧರ ಸೇವೆ, ತ್ಯಾಗದ ಕುರಿತಾಗಿ ಕವನವನ್ನು ವಾಚಿಸಿ ಎಲ್ಲರನ್ನು ಸ್ವಾಗತಿಸಿದರು. ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶಾಸಕ ಕೆ.ಜಿ. ಬೋಪಯ್ಯ, ಎಲ್ಲಕ್ಕಿಂತಲೂ ದೇಶ ಮುಖ್ಯ ಎಂಬ ಭಾವನೆ ಎಲ್ಲರಲ್ಲೂ…

Read More

ಮಡಿಕೇರಿ ಜ.27 : ಕೊಡಗು ಜಿಲ್ಲಾ ಯುವ ಜಾತ್ಯತೀತ ಜನತಾದಳದ ವತಿಯಿಂದ ಫೆ.2 ರಂದು ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆ ನಡೆಯಲಿದೆ ಎಂದು ಯುವ ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಜಿ.ಜಾಶಿರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್, ರಾಜ್ಯ ವಕ್ತಾರ ಸಂಕೇತ್ ಪೂವಯ್ಯ, ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಸಿ.ಎಲ್.ವಿಶ್ವ ಸೇರಿದಂತೆ ಪಕ್ಷದ ಪ್ರಮುಖರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ಜಿಲ್ಲೆಯಲ್ಲಿ ಸಾಕಷ್ಟು ಸರ್ಕಾರಿ ಜಾಗವಿದ್ದರೂ ವಸತಿ ರಹಿತರಿಗೆ ನಿವೇಶನ ನೀಡುವಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ವಿಫಲವಾಗಿದೆ. ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಕೊರತೆಯಿಂದಾಗಿ ಜನರು ಹೊರ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುವಂತ್ತಾಗಿದೆ. ಜಿಲ್ಲೆಯಲ್ಲಿ ಬಿಜೆಪಿ ಪ್ರತಿನಿಧಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಬಿಜೆಪಿ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಆರೋಪಿಸಿದರು. ಆಡಳಿತ ಪಕ್ಷದ ವೈಫಲ್ಯಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲು…

Read More

ಚೆಯ್ಯಂಡಾಣೆ ಜ.27 :  ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಿವೃತ್ತ ಬ್ರಿಗೇಡಿಯರ್ ಜಗದೀಶ್ ಧ್ವಜಾರೋಹಣ  ನೆರವೇರಿಸಿದರು.  ನಂತರ ಮಾತನಾಡಿದ ಅವರು,  ಅಂತರಾಷ್ಟ್ರೀಯ ಮಟ್ಟದಲ್ಲಿ  ಭಾರತ ಹೆಸರು ವಾಸಿಯಾಗಿದ್ದು, ಶಿಸ್ತು ಸಂಯಮದ ಮೂಲಕ ದೇಶದ ಉತ್ತಮ ಪ್ರಜೆ ಯಾಗಬೇಕು  ಎಂದರು. ಮತ್ತೊಬ್ಬ ಮುಖ್ಯ ಅತಿಥಿ ಅನಿರುದ್ದ್ ಮಾತನಾಡಿ, ಭಾರತದ ಹೆಗ್ಗಳಿಕೆ ಸಾಕ್ಷಿಯಾದ ಮಹಾನ್ ವ್ಯಕ್ತಿಗಳ ಬಗ್ಗೆ  ವರ್ಣಿಸಿ ಅವರು ದೇಶಕ್ಕೆ ಹೆಮ್ಮೆ ಪಡುವಂತೆ ಮಾಡಿದ್ದಾರೆ ಎಂದರು. ಕರ್ನಲ್ ಶ್ಯಾನ್ ಬೊಗರ ನಾರಾಯಣ ಮೂರ್ತಿ ಮಾತನಾಡಿ,  1954 ರಲ್ಲಿ ಇದೇ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದ ಹಿಂದಿನ ದಿನವನ್ನು ನೆನೆದರು.  ಜೀವನದಲ್ಲಿ ಹಣ ಮುಖ್ಯವಲ್ಲ. ಪುಸ್ತಕ ಓದುದರಿಂದ ಜ್ಞಾನ ಶಕ್ತಿ ಹೆಚ್ಚುತ್ತದೆ. ಪ್ರಶಸ್ತಿ ದೊರೆಯದ ವಿದ್ಯಾರ್ಥಿಗಳನ್ನು ಪೋಷಕರು ಹೀಯಾಳಿಸಬೇಡಿ ಅವರು ಕೂಡ ಉತ್ತಮ ಪ್ರಜೆಯಾಗಲು ಸಾಧ್ಯವಿದೆ ಎಂದರು. ಇದೇ ಸಂದರ್ಭ ಗ್ರಂಥಾಲಯಕ್ಕೆ 10 ಸಾವಿರ ಮೊತ್ತದ ಪುಸ್ತಕಗಳನ್ನು ನೀಡುವುದಾಗಿ ಘೋಷಿಸಿದರು. ತಾ.ಪಂ ಮಾಜಿ ಸದಸ್ಯೆ ಉಮಾ ಪ್ರಭು, ಗ್ರಾ.ಪಂ  ಅಭಿವೃದ್ಧಿ…

Read More

ಚೆಯ್ಯಂಡಾಣೆ ಜ 27 :  ಕಕ್ಕಬೆಯ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ‌ಯಲ್ಲಿ 74ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯ ಶಿಕ್ಷಕಿ‌ ಕೆ.ಎಂ.ಸುಮಯ್ಯ ಧ್ವಜಾರೋಹಣ  ನೆರವೇರಿಸಿ,  ವಿದ್ಯಾರ್ಥಿಗಳಿಗೆ ದಿನದ ಮಹತ್ವದ ಕುರಿತು ತಿಳಿಸಿದರು.  ನಂತರ ವಿದ್ಯಾರ್ಥಿಗಳಿಂದ ಭಾಷಣ, ದೇಶಭಕ್ತಿ ಗೀತೆ ಕಾರ್ಯಕ್ರಮ ಮೂಡಿಬಂತು. ಈ ಸಂದರ್ಭ ಸಹ ಶಿಕ್ಷಕರಾದ ಕವಿತ, ಅಶ್ವಿನಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು. ವರದಿ :  ಅಶ್ರಫ್   

Read More

ಮಡಿಕೇರಿ ಜ.27 : ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ, ಗೋದಾಮು ಹಾಗೂ ಸಭಾಭವನದ ಉದ್ಘಾಟನಾ ಸಮಾರಂಭವು ಜ.29 ರಂದು ಚೇರಂಬಾಣೆಯಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬಾಚರಣಿಯಂಡ ಪಿ.ಸುಮನ್ ಹಾಗೂ ಆಡಳಿತ ಮಂಡಳಿಯ ಪ್ರಮುಖರು ತಿಳಿಸಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಪ್ರಾಥಮಿಕ, ಪ್ರೌಢ ಶಿಕ್ಷಣ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಉದ್ಘಾಟಿಸಲಿದ್ದು, ನೂತನ ಕಟ್ಟಡ ಕಚೇರಿಯನ್ನು ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ನೂತನ ಸಭಾಭವನ ಮತ್ತು ನೂತನ ಕಟ್ಟಡದ ಸೇಫ್ ಲಾಕರನ್ನು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಅಧ್ಯಕ್ಷ ಕೊಡಂದೇರ ಪಿ.ಬಾಂಡ್ ಗಣಪತಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಾಚರಣಿಯಂಡ ಪಿ.ಸುಮನ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೊಡಗು-ಮೈಸೂರು ಕ್ಷೇತ್ರದ ಸಂಸದ ಪ್ರತಾಪ್…

Read More

ಮಡಿಕೇರಿ ಜ.27 : ಪಾರಾಣೆ ಸರಕಾರಿ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಪಾರಾಣೆ ಗ್ರಾ.ಪಂ ಅಧ್ಯಕ್ಷ ನೆರೆಯಂಡಮ್ಮನ ಬೆಳ್ಯಮಯ್ಯ ಧ್ವಜಾರೋಹಣ ನೆರವೇರಿಸಿ, ಶುಭಹಾರೈಸಿದರು. ನಂತರ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಬಿಲ್ಲವರ ಎಂ.ಕೇಶವ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ದಿನದ ಮಹತ್ವದ ಕುರಿತು ಮಾಹಿತಿ ನೀಡಲಾಯಿತು. ಎಸ್‍ಡಿಎಂಸಿ ಉಪಾಧ್ಯಕ್ಷರಾದ ಶಾಂತಿ, ಸದಸ್ಯರಾದ ಜತ್ತಪ್ಪ, ಬಿ.ಮೋಹನ್, ಸುರೇಶ್ ಹಾಗೂ ಇತರ ಸದಸ್ಯರು, ಶಿಕ್ಷಕರು ಹಾಜರಿದ್ದರು. ಶಾಲಾ ಮುಖ್ಯಶಿಕ್ಷಕಿ ಹೆಚ್.ಎನ್.ಶಾಂತಿ ಸ್ವಾಗತಿಸಿದರು. ಕಿಶೋರ್ ವಂದಿಸಿದರು. ಕಾರ್ಯಕ್ರಮದ ಅಂಗವಾಗಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಿಗೆ ಹಾಗೂ ಹಳೆಯ ವಿದ್ಯಾರ್ಥಿಗಳಿಗೆ ದತ್ತಿನಿಧಿ ಬಹುಮಾನ ವಿತರಿಸಲಾಯಿತು. ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು.

Read More

ಮಡಿಕೇರಿ ಜ.27 : ಕೊಡಗು ಪತ್ರಕರ್ತರ ಸಂಘದ ವತಿಯಿಂದ ಫೆ.2 ರಂದು  ವಿರಾಜಪೇಟೆ  ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ  10.30 ಗಂಟೆಗೆ ಮಡಿಕೇರಿ ಪತ್ರಿಕಾಭವನದಲ್ಲಿ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಪೊನ್ನಂಪೇಟೆ, ಜ.27: ವಿರಾಜಪೇಟೆ ಸಮೀಪದ ನಲ್ವತ್ತೋಕ್ಲಿನ ಮೊಹಿದ್ದೀನ್ ಜುಮಾ ಮಸೀದಿ ಮತ್ತು ಬುಸ್ತಾನುಲ್ ಉಲೂಂ ಹೈಯರ್ ಸೆಕೆಂಡರಿ ಮದರಸ ವತಿಯಿಂದ 74ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮಸೀದಿಯ ಆಡಳಿತ ಮಂಡಳಿ ಅಧ್ಯಕ್ಷ  ದುದ್ದಿಯಂಡ ಎಚ್. ಸೂಫಿ ಹಾಜಿ ಧ್ವಜಾರೋಹಣ ನಡೆಸಿ, ರಾಷ್ಟ್ರಗೀತೆಯೊಂದಿಗೆ ಧ್ವಜವಂದನೆ ಸಲ್ಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮದರಸ ಆವರಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ದುದ್ದಿಯಂಡ ಎಚ್. ಸೂಫಿ ಹಾಜಿ ಅವರು, ದೇಶದ ಸರ್ವ ಪ್ರಜೆಗೂ ಸಮಾನತೆ, ಶಿಕ್ಷಣ ಇತರೆ ಮೂಲಭೂತ ಹಕ್ಕುಗಳನ್ನು ನೀಡಿರುವ ಸಂವಿಧಾನವನ್ನು ಜಾರಿಗೆ ತರಲು ಶ್ರಮಿಸಿದ ಡಾ. ಅಂಬೇಡ್ಕರ್ ಸೇರಿದಂತೆ ದೇಶದ ಭವಿಷ್ಯದ ಕುರಿತು ದೂರದೃಷ್ಟಿತ್ವ ಹೊಂದಿದ್ದ ಎಲ್ಲಾ ಮಹನೀಯರನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ರಾಜಪ್ರಭುತ್ವವನ್ನು ತ್ಯಜಿಸಿ ಪ್ರಜಾಪ್ರಭುತ್ವದಲ್ಲಿ ತನ್ನ ನಿಜ ಅಸ್ಥಿತ್ವವನ್ನು ಸ್ಥಾಪಿಸಿದ ದಿನವಾದ ಈ ಗಣರಾಜ್ಯೋತ್ಸವ ಭಾರತೀಯರ ಪಾಲಿಗೆ ಅತ್ಯಂತ ಮಹತ್ವದ ದಿನವಾಗಿದೆ ಎಂದು ಹೇಳಿದರು. ನಿವೃತ್ತ ಜಿಲ್ಲಾ ಖಜನಾಧಿಕಾರಿ ಕನ್ನಡಿಯಂಡ ಎ. ಆಲಿ  ದಿನದ ಮಹತ್ವದ ಬಗ್ಗೆ ಮಾತನಾಡಿದರು.…

Read More

ಮಡಿಕೇರಿ ಜ.27 : ಕೊಡ್ಲಿಪೇಟೆಯ ದಲಿತ ಸಂಘಟನೆಗಳ ವತಿಯಿಂದ 74ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಂಘಟನೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ಪುಷ್ಪ ನಮನ ಸಲ್ಲಿಸಿದರು. ನಂತರ ಭಾರತ ಸಂವಿಧಾನವನ್ನು ಓದುವ ಮೂಲಕ ಸಂವಿಧಾನದ ಮಹತ್ವವನ್ನು ತಿಳಿಸಿದರು. ಈ ಸಂದರ್ಭ ಕೊಡ್ಲಿಪೇಟೆ ಪಿಡಿಒ ಹೂವಯ್ಯ, ದಲಿತ ನಾಯಕರುಗಳಾದ ಜೆ.ಎಲ್.ಜನಾರ್ಧನ್, ಸೋಮಣ್ಣ, ಗ್ರಾ.ಪಂ ಸದಸ್ಯ ಪ್ರಸನ್ನ, ಪ್ರಮುಖರಾದ ಜಗದೀಶ್, ಇಂದ್ರೇಶ್, ವೀರಭದ್ರ, ವಸಂತ್, ಕಾರ್ತಿಕ್, ವಿಜಯ, ಮುರಳಿ ಸತೀಶ್, ವಿನಯ್, ಪ್ರಶಾಂತ್, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.

Read More