ಚೆಯ್ಯಂಡಾಣೆ ಜ.27 : ನರಿಯಂದಡ ಕೇಂದ್ರ ಪ್ರೌಢ ಶಾಲೆಯಲ್ಲಿ 74 ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಶಿಕ್ಷಕಿ ಸುನಿತಾ ಧ್ವಜಾರೋಹಣ ನೆರವೇರಿಸಿದರು. ಶಿಕ್ಷಕರಾದ ರಾಜಕುಮಾರ್ ಗಣರಾಜ್ಯೋತ್ಸವದ ಮಹತ್ವದ ಕುರಿತು ಮಾತನಾಡಿದರು. ವಿದ್ಯಾರ್ಥಿಗಳಿಂದ ನಾಡಗೀತೆ , ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಶಿಕ್ಷಕರಾದ ರವೀಂದ್ರನಾಥ್ ಕಾರ್ಯಕ್ರಮ ನಿರೂಪಿಸಿದರು. ಪೊನ್ನಪ್ಪ ಸ್ವಾಗತಿಸಿದರು. ಹೇಮಮಾಲಿನಿ ಸರ್ವರನ್ನು ವಂದಿಸಿದರು. ವರದಿ : ಅಶ್ರಫ್
ಲೇಖಕ: admin
ಮಡಿಕೇರಿ ಜ.27 : ಕುಶಾಲನಗರದ ಗುಂಡೂರಾವ್ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮೈದಾನದಲ್ಲಿ ಸಹರಾ ಕ್ರಿಕೆಟ್ ಕ್ಲಬ್ ಕುಶಾಲನಗರ ಹಮ್ಮಿಕೊಂಡಿದ್ದ ಐಪಿಎಲ್ ಮಾದರಿಯ ಎರಡನೇ ಆವೃತ್ತಿಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ,ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ನಿಗದಿತ ಐದು ಓವರ್ ನಲ್ಲಿ ಆರು ವಿಕೆಟ್ ನಷ್ಟಕ್ಕೆ 39 ರನ್ ಕಲೆ ಹಾಕಿದರು. 40 ರನ್ ಗಳ ಸ್ಪರ್ಧಾತ್ಮಕ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ್ ತಂಡ ಫರ್ಹಾನ್ ಹಾಗೂ ಸಾಬುದ್ದೀನ್ ಅವರ ಅಮೋಘ ಜೊತೆಯಾಟದ ನೆರವಿನಿಂದ 3.5 ಓವರ್ ನಲ್ಲಿ ಒಂದು ವಿಕೆಟ್ ನಷ್ಟಕ್ಕೆ ಗುರಿ ತಲುಪಿ, ಚಾಂಪಿಯನ್ ಪಟ್ಟವನ್ನು ಅಲಂಕರಿಸಿದರು. ಒಂದು ಲಕ್ಷ ರೂ ನಗದು ಬಹುಮಾನ ಹಾಗೂ ಒಂದು ಲಕ್ಷಕ್ಕೂ ಅಧಿಕ ಬೆಲೆಬಾಳುವ ಐಪಿಎಲ್ ಮುದ್ರಿತ ಚಿನ್ನದ ಟ್ರೋಫಿ ರಾಜಸ್ಥಾನ್ ತಂಡದ ಪಾಲಾಯಿತು. ಸತತ ಎರಡನೇ…
ಮಡಿಕೇರಿ ಜ.26 : ನಾಗರಹೊಳೆ ಭಾಗದಲ್ಲಿ ಹುಲಿಗಳ ಗಣತಿ ಕಾರ್ಯಕ್ಕೆ ಅರಣ್ಯ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಜ.27 ರಿಂದ ಫೆ.6ರವರೆಗೆ ಗಣತಿ ಕಾರ್ಯ ನಡೆಸಲಿದ್ದಾರೆ. ಉದ್ಯಾನದ 8 ವಲಯಗಳ 91 ಬೀಟ್‌ನಲ್ಲಿ ಗಣತಿ ಕಾರ್ಯ ನಡೆಯಲಿದೆ. ಈ ಬಾರಿ ಸ್ವಯಂಸೇವಕರ ಸಹಾಯವಿಲ್ಲದೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗವೇ ಗಣತಿ ನಡೆಸಲು ಇಲಾಖೆ ನಿರ್ಧರಿಸಿದೆ. ನಾಗರಹೊಳೆ ಹುಲಿಯೋಜನೆ ನಿರ್ದೇಶಕ ಹರ್ಷಕುಮಾರ್ ಚಿಕ್ಕನರಗುಂದರ ನೇತೃತ್ವದಲ್ಲಿ ವೀರನಹೊಸಹಳ್ಳಿ ವಲಯ ಕಚೇರಿಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಬೆಂಗಳೂರಿನ ಟೈಗರ್ ಸೆಲ್‌ನ ವಿನಯ್ ಹಾಗೂ ಡಿಆರ್‌ಎಫ್‌ಓ ನಂದನ್ ಗಣತಿ ಕುರಿತು ತರಬೇತಿ ನೀಡಿದರು.
ಮಡಿಕೇರಿ ಜ.26 : ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿ ಕಾಡಬೋರನಹಳ್ಳಿ ಗ್ರಾಮದಲ್ಲಿ ಸಪೋಟ ಹಣ್ಣಿನ ಮರದಲ್ಲಿ ಸಿಲುಕಿಕೊಂಡಿದ್ದ ಮೂರು ವರ್ಷದ ಗಂಡು ಕರಡಿಯನ್ನು ಅರಣ್ಯ ಇಲಾಖೆ ರಕ್ಷಿಸಿದೆ. ಕಾಡಬೋರನಹಳ್ಳಿ ಗ್ರಾಮದ ರಾಜಣ್ಣ ಎಂಬುವವರ ಜಮೀನಿನಲ್ಲಿದ್ದ ಸಪೋಟ ಮರಕ್ಕೆ ತಂತಿಯನ್ನು ಕಟ್ಟಲಾಗಿತ್ತು. ಆಹಾರ ಅರಸಿ ಬಂದ ಕರಡಿ ಮರ ಹತ್ತುವ ಸಂದರ್ಭ ತಂತಿಯಲ್ಲಿ ಸಿಲುಕಿಕೊಂಡು ಜೋತು ಬಿದ್ದಿತ್ತು. ಗ್ರಾಮಸ್ಥರು ದೂರವಾಣಿ ಮೂಲಕ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಕರಡಿಗೆ ಅರವಳಿಕೆ ನೀಡಿ ನಂತರ ರಕ್ಷಿಸಿದರು. ಆರೋಗ್ಯ ತಪಾಸಣೆ ಬಳಿಕ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.
ಸುಂಟಿಕೊಪ್ಪ, ಜ.26: ಗದ್ದೆಹಳ್ಳ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಬಲ್ಕಿಸ್ ಹಾಗೂ ಗ್ರಾ.ಪಂ ಸದಸ್ಯರುಗಳಾದ ಪಿ.ಆರ್. ಸುನಿಲ್‍ಕುಮಾರ್, ಮಂಜುಳ(ರಾಸಥಿ), ಗೀತಾ, ಶಾಲಾ ಮುಖ್ಯಶಿಕ್ಷಕಿ ಹೇಮಾಕುಮಾರಿ, ಮಾಜಿ ಸದಸ್ಯರಾದ ಕೆ.ಇ.ಕರೀಂ ಧ್ವಜಾರೋಹಣ ನೆರವೇರಿಸಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ವೇಣುಗೋಪಾಲ್, ಸದಸ್ಯರಾದ ಪಿ.ಎಫ್.ಸಬಾಸ್ಟೀನ್ ಪೋಷಕರು ಇದ್ದರು. ಶೈಲಾ ಜಾಯ್, ಮೀನಾಕುಮಾರಿ ಅನಿತಾ, ಉಷಾ ಕುಮಾರಿ ಮಕ್ಕಳಿಗೆ ಸಾಂಸ್ಕೃತಿಕ ನೃತ್ಯ ತರಬೇತಿಗೊಳಿಸಿದರು. ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮವು ಜನ ಮನಸೂರೆಗೊಳಿಸಿತು.
ಮಡಿಕೇರಿ ಜ.26 : ಕೊಡವರ ಆತ್ಮ ಸಾಕ್ಷಿ, ಜಾಗೃತಿ ಪ್ರಜ್ಞೆ ಮತ್ತು ಒಮ್ಮತದ ಅಭಿವ್ಯಕ್ತಿಯ ಅನಾವರಣದೊಂದಿಗೆ ಸರ್ಕಾರದ ಎದುರು 9 ಬೇಡಿಕೆಗಳನ್ನು ಮಂಡಿಸಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕೊಡವರನ್ನೊಳಗೊಂಡ ಗಣರಾಜ್ಯಕ್ಕಾಗಿ ಕೊಡವಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆಯನ್ನು ನೀಡಬೇಕೆಂದು ಒತ್ತಾಯಿಸಿದೆ. 74 ನೇ ಗಣರಾಜ್ಯೋತ್ಸವದ ದಿನವಾದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಿಎನ್‍ಸಿ ಪ್ರಮುಖರು ಕೊಡವರ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ತ್ವರಿತ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದರು. ಸಂವಿಧಾನದ ಆರ್ಟಿಕಲ್ 224(ಎ) ರೆ/ವಿ 6ನೇ ಮತ್ತು 8ನೇ ಶೆಡ್ಯೂಲ್ ಅಡಿಯಲ್ಲಿ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಭಾರತದ ಸಂವಿಧಾನ ಪರಿಶೀಲನಾ ಆಯೋಗ/ಆಂತರಿಕ ರಾಜಕೀಯ ಸ್ವಯಂ ನಿರ್ಣಯ ಹಕ್ಕುಗಳು ಅಥವಾ 1956 ರ ಹಿಂದಿನ ಸ್ಥಿತಿಗೆ ಮರುಸ್ಥಾಪಿಸಬೇಕು. ಕೂರ್ಗ್‍ನ ಆದಿವಾಸಿ ಮೂಲನಿವಾಸಿ ಕೊಡವ ಜನಾಂಗವನ್ನು ಹೊಸ ಮರು ವ್ಯಾಖ್ಯಾನಿಸಲಾದ ಮಾನದಂಡಗಳ ಪ್ರಕಾರ ನಮ್ಮ ಸಂವಿಧಾನದ ವೇಳಾಪಟ್ಟಿ ಪಟ್ಟಿಯಲ್ಲಿ ಸೇರಿಸಬೇಕು. ಕೊಡವ ಕಸ್ಟಮರಿ ಜನಾಂಗೀಯ “ಸಂಸ್ಕಾರ ಗನ್” ಹಕ್ಕುಗಳನ್ನು ಸಿಖ್ಖರ “ಕಿರ್ಪಾನ್” ಗೆ ಸಮಾನವಾಗಿ…
ಮಡಿಕೇರಿ ಜ.26 : ಮಡಿಕೇರಿ ನಗರಸಭೆಯ ಕಾವೇರಿ ಪ್ರತಿಮೆ ಬಳಿ ಗಣರಾಜ್ಯೋತ್ಸವ ಪ್ರಯುಕ್ತ ನಗರಸಭೆ ಅಧ್ಯಕ್ಷರಾದ ನೆರವಂಡ ಅನಿತಾ ಪೂವಯ್ಯ ಧ್ವಜಾರೋಹಣ ನೆರವೇರಿಸಿದರು. ಪೌರಾಯುಕ್ತ ವಿಜಯ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು, ಸಿಬ್ಬಂದಿಗಳು ಇತರರು ಇದ್ದರು.
ನಾಪೋಕ್ಲು ಜ.26: ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಬೆಂಗಳೂರಿನ ಮುಖ್ಯ ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಾಂಜಂಡ ವಿ.ಜಿ.ಬೋಪಯ್ಯ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ಜೀವನದಲ್ಲಿ ಏಕಾಗ್ರತೆ ಮುಖ್ಯ. ಯಾವುದೇ ಜಾತಿ ಬೇದ ಭಾವ ವಿಲ್ಲದೆ ಸಮಾಜದಲ್ಲಿ ಎಲ್ಲರೂ ಸಹಬಾಳ್ವೆಯಿಂದ ಇದ್ದು, ಇತರರಿಗೆ ಸಹಾಯ ಮಾಡುವುದು ನಮ್ಮ ಆದ್ಯ ಕರ್ತವ್ಯ. ಈ ಶಾಲೆಯಲ್ಲಿ ವಿದ್ಯಾಭ್ಯಾಸ ಪಡೆದು ಅನೇಕ ಜನರು ಒಳ್ಳೆಯ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಇದೇ ರೀತಿ ಮುಂದೆಯೂ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿವಹಿಸಿ ಉನ್ನತ ಹುದ್ದೆ ಪಡೆದುಕೊಳ್ಳುವಂತಾಗಬೇಕು. ಇದಕ್ಕೆ ಪೋಷಕರು ಮಕ್ಕಳಿಗೆ ಸಹಕಾರ ನೀಡಬೇಕೆಂದು ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲೆಯ ಆಡಳಿತ ಮಂಡಳಿ ಉಪಾಧ್ಯಕ್ಷ ಕೆ.ಎ.ಹಾರಿಸ್, ಶಾಲೆಯ ಶೈಕ್ಷಣಿಕ ಗುಣಮಟ್ಟ ಖಾತರಿ ಸಮಿತಿ ಅಧ್ಯಕ್ಷ ಎನ್.ಎಸ್ ಉದಯ ಶಂಕರ್ ದಿನದ ಮಹತ್ವದ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಶಾಲೆಯ ಪ್ರಾಂಶುಪಾಲರಾದ ಡಾ. ಅವನಿಜ ಸೋಮಯ್ಯ, ಉಪ ಪ್ರಾಂಶುಪಾಲ ಶಿವಣ್ಣ, ಪ್ರಾಥಮಿಕ ವಿಭಾಗದ ಮುಖ್ಯ…
ಮಡಿಕೇರಿ ಜ.26 : ಎಡಪಾಲ ನಜಮುಲ್ ಹುಧ ಮದ್ರಸ ವತಿಯಿಂದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಮಾಅತ್ ಅಧ್ಯಕ್ಷ ಶಾಫಿ ಧ್ವಜಾರೋಹಣ ನೆರವೇರಿಸಿದರು. ಪ್ರಮುಖರಾದ ಹಮೀದ್ ದಾರಿಮಿ ದಿನದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಪ್ರಮುಖರಾದ ಮಜೀದ್ ಮುಸ್ಲಿಯಾರ , ಮನಾಫ್ ದಾರಿಮಿ, ಅಬ್ದುಲ್ಲಾ ಸಹದಿ, ಖಾದರ್ ಬಾಕವಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು. ವರದಿ : ನೌಫಲ್ ಕಡಂಗ
ವಿರಾಜಪೇಟೆ ಜ.26 : ಭಾರತದ ಗಣರಾಜ್ಯವು ಐಕ್ಯತೆಯ ಪ್ರತೀಕವಾಗಿದೆ ಎಂದು ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ರೆ. ಫಾ. ಐಸಾಕ್ ರತ್ನಕರ್ ಅಭಿಪ್ರಾಯಪಟ್ಟರು. ವಿರಾಜಪೇಟೆಯ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ಮೈದಾನದಲ್ಲಿ ನಡೆದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ಭಾರತದ ಸಂವಿಧಾನವು ಸ್ವತಂತ್ರ, ಸಮಾನತೆ ಮತ್ತು ಬ್ರಾತೃತ್ವಗಳ ಪ್ರತಿಕವಾಗಿದ್ದು, ರಾಷ್ಟ್ರೀಯ ಭಾವೈಕ್ಯತೆಯ ಮಂತ್ರವನ್ನು ಪಸರಿಸಿದೆ. ಈ ಅಖಂಡ ಭಾರತದಲ್ಲಿ ಐಕ್ಯತೆಯಿಂದ ಮಾತ್ರ ರಾಷ್ಟ್ರದ ಪ್ರಗತಿ ಸಾಧ್ಯ ಎಂದರು. ಸಂತ ಅನ್ನಮ್ಮ ದೇವಾಲಯದ ಗುರುಗಳಾದ ರೆ. ಫಾ. ದಯಾನಂದ ಪ್ರಭು, ಪ್ರಾಂಶುಪಾಲರುಗಳು, ಮುಖ್ಯೋಪಾಧ್ಯಯರುಗಳು, ಭೋದಕ ಭೋದಕೇತಕ ಸಿಬ್ಬಂದಿಗಳು ಉಪಸ್ಥಿತರಿದ್ದರು. ಈ ಸಂದರ್ಭ ವಿದ್ಯಾಸಂಸ್ಥೆಗಳ ಎನ್.ಸಿ.ಸಿ, ಎನ್.ಎಸ್.ಎಸ್, ಸ್ಕೌಟ್ ಗೈಡ್ಸ್ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.






