ಲೇಖಕ: admin

ಮಡಿಕೇರಿ ಜ.25 : ಕೊಡಗು ಜಿಲ್ಲಾ ಆಯುಷ್ ಇಲಾಖೆಯ ವತಿಯಿಂದ 2022-23ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ/ಪಂಗಡ ಉಪಯೋಜನೆಯಡಿಯಲ್ಲಿ ಆಯೋಜಿಸಲಾಗುವ “ಆಯುಷ್ ಸೇವಾ ಗ್ರಾಮ” ಕಾರ್ಯಕ್ರಮ ಕುರಿತ ಕ್ಯಾಲೆಂಡರ್ ಹಾಗೂ ಭಿತ್ತಿ ಪತ್ರಗಳು ಮತ್ತು ಐಇಸಿ ಪರಿಕರಗಳನ್ನು ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವೆಂಕಟೇಶ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ರೇಣುಕಾದೇವಿ ಹಾಗೂ ಆಯುಷ್ ಇಲಾಖೆಯ ಸಿಬ್ಬಂದಿಗಳು ಇತರರು ಇದ್ದರು. ಕಾರ್ಯಕ್ರಮದ ರೂಪುರೇಷೆಗಳು: ಸಮೀಕ್ಷೆ: ಗ್ರಾಮದ ಜನಸಂಖ್ಯೆ, ಆರೋಗ್ಯ ಮಾಹಿತಿ, ಆರ್ಥಿಕ ಪರಿಸ್ಥಿತಿ, ಜೀವನಶೈಲಿ, ಕೈತೋಟದ ಮಾಹಿತಿ ಎಲ್ಲವನ್ನು ಮನೆ ಮನೆ ಭೇಟಿಯ ಮುಖಾಂತರ ವಿಷಯ ಸಂಗ್ರಹ ಮಾಡಲಾಗುವುದು. ಆರೋಗ್ಯ ತಪಾಸಣೆ ಮತ್ತು ಔಷಧಿ ವಿತರಣೆ: ಸಮೀಕ್ಷೆಯ ಆಧಾರದ ಮೇಲೆ ನಿಗದಿತ ಖಾಯಿಲೆಯಿಂದ ಬಳಲುತ್ತಿರುವ ಜನರಿಗೆ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ಹಾಗೂ ಔಷಧ ವಿತರಣೆ. ಗ್ರಾಮದ ಜನರ ಆರೋಗ್ಯ ರಕ್ಷಣೆಗೆ ಹಾಗೂ ರೋಗ ನಿರೋಧಕ ಶಕ್ತಿ ಹೆಚ್ಚಿಸುವ…

Read More

ಮಡಿಕೇರಿ ಜ.25 : ಪ್ರಜಾಪ್ರಭುತ್ವದಲ್ಲಿ ಸರ್ಕಾರ, ಸಮಾಜ ಪ್ರಜೆಗಳಾಗಿದ್ದು, ಮತದಾನದ ಮೂಲಕ ಸಾರ್ವಜನಿಕ ಹಿತಾಸಕ್ತಿ ಒಳಗೊಂಡಿರುವ ಸರ್ಕಾರ ರಚಿಸಲು ಅರ್ಹರೆಲ್ಲರೂ ಮತದಾನ ಮಾಡುವಂತಾಗಬೇಕು. ಇದರಿಂದ ಪ್ರಜಾಪ್ರಭುತ್ವ ಬಲಪಡಿಸಲು ಸಾಧ್ಯ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಉಪನ್ಯಾಸಕ ರಘು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ನಡೆದ ‘ರಾಷ್ಟ್ರೀಯ ಮತದಾರರ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಮತದಾನ ಮಾಡುವುದು ಪವಿತ್ರ ಕಾರ್ಯವಾಗಿದ್ದು, ‘ಮತ’ವನ್ನು ಯಾವುದೇ ಕಾರಣಕ್ಕೂ ಮಾರಿಕೊಳ್ಳಬಾರದು. ಮಾರಿಕೊಂಡಲ್ಲಿ ಪ್ರಜಾಪ್ರಭುತ್ವದಲ್ಲಿ ಪ್ರಶ್ನೆ ಮಾಡಲು ಆಗುವುದಿಲ್ಲ. ಅದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದು ಉಪನ್ಯಾಸಕರಾದ ರಘು ಅವರು ತಿಳಿಸಿದರು. ‘ಪ್ರತೀ ನಿತ್ಯ ಒಂದಲ್ಲ ಒಂದು ರೀತಿಯಲ್ಲಿ ವ್ಯವಸ್ಥೆ ಬಗ್ಗೆ ಅತೃಪ್ತಿ, ಅಸಮಾದಾನ ವ್ಯಕ್ತಪಡಿಸುತ್ತೇವೆ. ಆದರೆ ನಮ್ಮ ತಪ್ಪುಗಳ ಆತ್ಮವಲೋಕನ ಮಾಡಿಕೊಳ್ಳುವುದನ್ನು ಮರೆಯುತ್ತೇವೆ. ಇದನ್ನು ಪ್ರತಿಯೊಬ್ಬರೂ ಯೋಚಿಸಬೇಕಿದೆ ಎಂದರು.’ ‘ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್…

Read More

ಮಡಿಕೇರಿ ಜ.25 :  ಮತದಾನ ಭಾರತೀಯ ಪ್ರಜೆಯ ಸಂವಿಧಾನಿಕ ಹಕ್ಕು, ನಮ್ಮ ಒಂದು ಪ್ರಜ್ಞಾವಂತ ಮತದಿಂದ ಇಡೀ ದೇಶದ ಭವಿಷ್ಯವನ್ನು ಬದಲಿಸುವ ಶಕ್ತಿ ಇದೆ. ಹಣದ ಆಮಿಷಗಳಿಗೆ ಬಲಿಯಾಗದೆ ಅಥವಾ ಮತದಾನವನ್ನು ಬಹಿಷ್ಕರಿಸದೆ ವಿದ್ಯಾವಂತ ಯುವಕರು ಇಂದು ಅಭಿವೃದ್ಧಿಗೆ ತನ್ನ ಮತವನ್ನು ನೀಡುತ್ತಾ ದೇಶದ ಸರ್ವತೋಮುಖ ಬದಲಾವಣೆಗೆ ಸಹಕರಿಸಬೇಕಾಗಿದೆ ಎಂದು ಪೊನ್ನಂಪೇಟೆಯ ಸಾಯಿ ಶಂಕರ್ ವಿದ್ಯಾಸಂಸ್ಥೆ  ಪ್ರಾಶುಪಾಲರಾದ ಗೀತಾ ನಾಯ್ಡು ಹೇಳಿದರು. ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಪೂರ್ಣ ಮತದಾನಕ್ಕೆ ಕರೆ ನೀಡಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು . ಕಾರ್ಯಕ್ರಮದ ಮುಖ್ಯ ಭಾಗವಾಗಿ ರಾಜಕೀಯ ಪಕ್ಷಗಳ ಮತಯಾಚನೆ , ಪ್ರಜೆಯು ಮತದಾನದ ಸಂದರ್ಭ ಎಸಗುವ ಸಾಮಾನ್ಯ ತಪ್ಪುಗಳು , ಕಡ್ಡಾಯ ನಿಯಮಗಳು , ಮತದಾರಣಾ ಪ್ರಕ್ರಿಯೆಗಳನ್ನು ಒಳಗೊಂಡ ಅಣಕು ಮತದಾನ ಪ್ರಕ್ರಿಯೆಯನ್ನು ನಡೆಸಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ನೀಲಂ, ಸ್ಮಿಷಿತ , ಲೀಲಾವತಿ , ದಿವ್ಯ , ಸಬಿಯ , ಚಂದ್ರಿಕಾ, ಕುಶ ಮತ್ತು ವಿದ್ಯಾರ್ಥಿ ವೃಂದ…

Read More

ಮಡಿಕೇರಿ ಜ.25 : ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ದೇವರಪುರ ಗ್ರಾ.ಪಂ ವ್ಯಾಪ್ತಿಯಲ್ಲಿ ಕುಂದುಕೊರತೆ ಸಭೆ ನಡೆಯಿತು. ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ನೇತೃತ್ವದಲ್ಲಿ, ಜಿಲ್ಲಾ ಸಂಚಾಲಕಿ (ಅಧ್ಯಕ್ಷೆ) ಗಾಯತ್ರಿ ನರಸಿಂಹ ನಾಯಕತ್ವದಲ್ಲಿ ನಡೆದ ಸಭೆಯಲ್ಲಿ ದೇವರಪುರ ಗ್ರಾ.ಪಂ ವ್ಯಾಪ್ತಿಯ ದೇವಮಚ್ಚಿ, ಅಕ್ಕೆಮಾಳ, ಕಾರೇಹಡ್ಲು ನಿವಾಸಿಗಳು ತಮ್ಮ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಈ ವ್ಯಾಪ್ತಿಯಲ್ಲಿ ಸುಮಾರು 60 ವರ್ಷಗಳಿಂದ ವಾಸವಿರುವ 25 ಕುಟುಂಬಗಳು, ಪರಿಶಿಷ್ಟ ಜಾತಿ, ಪ.ಪಂಗಡ 15 ಕುಟುಂಬಗಳು ಹಾಗೂ ಇತರೆ ಜಾತಿ ಕುಟುಂಬಗಳು ವಾಸವಿದ್ದು, ಇಲ್ಲಿನ ನಿವಾಸಿಗಳಿಗೆ ಹಕ್ಕುಪತ್ರ, ನೀರಿನ ಸಮಸ್ಯೆ, ಸಮುದಾಯ ಭವನ ಇಲ್ಲದಿರುವ ಬಗ್ಗೆ, ಮನೆ ನಿರ್ಮಾಣಕ್ಕೆ ಬಿಲ್ ಪಾವತಿ ಆಗದಿರುವ ಬಗ್ಗೆ ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ಸಮಿತಿಯ ಪದಾಧಿಕಾರಿಗಳೊಂದಿಗೆ ತಮ್ಮ ಅಳಲನ್ನು ತೋಡಿಕೊಂಡರು. ಅಲ್ಲದೆ ಆನೆಗಳ ಹಾವಳಿಗೆ ಸೂಕ್ತ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ನಿವಾಸಿಗಳ ಸಮಸ್ಯೆಗಳನ್ನು ಸಂಬಂದಪಟ್ಟ ಅಧಿಕಾರಿಗಳನ್ನು ಭೇಟಿ…

Read More

ಭಾರತ ದೇಶದಲ್ಲಿ ಪ್ರತಿ ವರ್ಷ ಜನವರಿ 26 ಅನ್ನು ಗಣರಾಜ್ಯ ದಿನವನ್ನಾಗಿ ಆಚರಿಸಲಾಗುತ್ತದೆ. 26 ಜನವರಿ 1950 ರಂದು ಭಾರತದ ಸಂವಿಧಾನ ಜಾರಿಗೆ ಬಂದಾಗಿನಿಂದ ಸಾರ್ವಭೌಮ ಪ್ರಜಾಸತ್ತಾತ್ಮಕ ಗಣರಾಜ್ಯದ ಪ್ರಾಮುಖ್ಯತೆಯನ್ನು ಗೌರವಿಸಲು ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಭಾರತ ಸ್ವತಂತ್ರವಾದ ನಂತರ ಸಂವಿಧಾನ ಸಭೆಯನ್ನು ಘೋಷಿಸಲಾಯಿತು ಸಂವಿಧಾನ ಸಭೆಯ ಸದಸ್ಯರನ್ನು ಭಾರತದ ರಾಜ್ಯ ಅಸೆಂಬ್ಲಿಗಳ ಚುನಾಯಿತ ಸದಸ್ಯರು ಆಯ್ಕೆ ಮಾಡಿದರು. ಡಾ.ಭೀಮರಾವ್ ಅಂಬೇಡ್ಕರ್, ಜವಾಹರಲಾಲ್ ನೆಹರು, ಡಾ.ರಾಜೇಂದ್ರ ಪ್ರಸಾದ್, ಸರ್ದಾರ್ ವಲ್ಲಭಭಾಯಿ ಪಟೇಲ್, ಮೌಲಾನಾ ಅಬುಲ್ ಕಲಾಂ ಆಜಾದ್ ಮೊದಲಾದವರು ಈ ಸಭೆಯ ಪ್ರಮುಖ ಸದಸ್ಯರಾಗಿದ್ದರು. ಜನವರಿ 26 ರಂದು ದೇಶದಾದ್ಯಂತ ಸಂವಿಧಾನವು ಜಾರಿಗೆ ಬಂದಿತು. ಇದರ ಪ್ರಾಮುಖ್ಯತೆಯನ್ನು ಕಾಪಾಡಿಕೊಳ್ಳಲು, ಸಂವಿಧಾನದಲ್ಲಿ ಭಾರತದ ಗಣರಾಜ್ಯ ಸ್ವರೂಪವನ್ನು ಗುರುತಿಸಿದೆ. ಈ ದಿನವನ್ನು ಭಾರತ ಸರ್ಕಾರವು ದೇಶಾದ್ಯಂತ ರಜೆ ಎಂದು ಘೋಷಿಸಿದೆ. ಶಾಲೆಗಳು, ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ ಸಂಭ್ರಮದಿಂದ ನಡೆಯುತ್ತದೆ. ಪ್ರತಿ ವರ್ಷ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಾರ್ಯಕ್ರಮ ಮತ್ತು ಇಂಡಿಯಾ ಗೇಟ್‍ನಲ್ಲಿ ವಿಶೇಷ…

Read More

ಮಡಿಕೇರಿ ಜ.25 : ಪ್ರಶಸ್ತಿ ವಿಜೇತ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ನಾಡ ಪೆದ ಆಶಾ” ಕೊಡವ ಚಿತ್ರಕ್ಕೆ ಅಂತರಾಷ್ಟ್ರೀಯ ಗ್ರ್ಯಾಂಡ್ ಗ್ಲೋರಿ ಫಿಲ್ಮ್ ಪ್ರಶಸ್ತಿ ಲಭಿಸಿದೆ. ಮಣಿಪುರದಲ್ಲಿ ನಡೆದ ಐಜಿಜಿಎಫ್‍ಎ ಇಂಪಾಲಾ ಇಂಡಿಯಾ ಸಿನಿಮೋತ್ಸವದಲ್ಲಿ ಅತ್ಯುತ್ತಮ ಚಲನಚಿತ್ರ, ಅತ್ಯುತ್ತಮ ಪ್ರಾಯೋಗಿಕ ಚಿತ್ರ ಹಾಗೂ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಈ ಚಿತ್ರದ ನಾಯಕ ನಟ ಬೊಳ್ಳಜಿರ ಬಿ.ಅಯ್ಯಪ್ಪ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಸಿನಿಮೋತ್ಸವದಲ್ಲಿ 1145 ಚಿತ್ರಗಳು ಪ್ರದರ್ಶನ ಕಂಡಿದ್ದು, ವಿವಿಧ ವಿಭಾಗಗಳಲ್ಲಿ ಆಯ್ಕೆಯಾದ ಚಿತ್ರಗಳಲ್ಲಿ “ನಾಡ ಪೆದ ಆಶಾ” ಕೂಡ ಒಂದು. ಸ್ತ್ರೀ ಪ್ರಧಾನ ಕಥಾವಸ್ತುವಿನ “ನಾಡ ಪೆದ ಆಶಾ” 2021ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಗೊಂಡು ಕೊಡಗು ಜಿಲ್ಲೆಯಾದ್ಯಂತ 123 ಯಶಸ್ವಿ ಪ್ರದರ್ಶನಗಳನ್ನು ಕಂಡಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ನಡೆದ ಅಂತರರಾಷ್ಟ್ರೀಯ ಚಲಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡ “ನಾಡ ಪೆದ ಆಶಾ” ಕೊಡವ ಚಿತ್ರ ಹಲವು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ, ವಿಕೆ3 ಪಿಕ್ಚರ್ಸ್…

Read More

ವಿರಾಜಪೇಟೆ ಜ.25 : ವಿರಾಜಪೇಟೆ ತಾಲೂಕಿನ ಸುಮಾರು 62 ಪ್ರೌಢಶಾಲೆಗಳಲ್ಲಿ ಶಿಕ್ಷಣ ಇಲಾಖೆ ಹಾಗೂ ಇ.ಎಲ್.ಸಿ ಕ್ಲಬ್ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಮತದಾನದ ಪ್ರತಿಜ್ಞಾವಿಧಿಯನ್ನು ಬೋಧಿಸುವ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು. ಮತದಾನದ ಪ್ರತಿಜ್ಞಾವಿಧಿಯನ್ನು ಶಾಲೆಯ ಆವರಣದಲ್ಲಿ ಮಾಡಲಾಯಿತು. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಿ, ಬಹುಮಾನವನ್ನು ವಿತರಿಸಲಾಯಿತು. ಮತದಾನ ಪ್ರತಿಯೊಬ್ಬ ನಾಗರಿಕನ ಹಕ್ಕು. ಮತದಾನಕ್ಕೆ ಅರ್ಹರಿರುವ ಪ್ರತಿಯೊಬ್ಬರೂ ಮತದಾನ ಮಾಡುವಂತೆ ವಿದ್ಯಾರ್ಥಿಗಳಿಗೆ ಪ್ರೇರೇಪಣೆ ನೀಡಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲಬೀಳಗಿ ಅವರು ರಾಷ್ಟ್ರೀಯ ಮತದಾರರ ದಿನದ ಕುರಿತಾಗಿ ಮಾತನಾಡಿ 25ನೇ ಜನವರಿ ಭಾರತ ಚುನಾವಣಾ ಆಯೋಗದ ಸಂಸ್ಥಾಪನ ದಿನವನ್ನು 2011 ರಿಂದ ರಾಷ್ಟ್ರೀಯ ಮತದಾರರ ದಿನವನ್ನಾಗಿ ಕೂಡ ಆಚರಿಸಲಾಗುತ್ತಿದೆ ಭಾರತ ದೇಶವು ವಿಶ್ವದಲ್ಲಿ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಶಕ್ತಿಶಾಲಿ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಮತದಾರರ ಹಾಗೂ ಪರಿಪೂರ್ಣ ಪಾಲ್ಗೊಳ್ಳುವಿಕೆಯು ಅತ್ಯಂತ ನಿರ್ಣಾಯಕ ಸಂಗತಿಯಾಗಿದೆ ಎಂದು ಮತದಾನದ ಬಗ್ಗೆ ಮಾತನಾಡಿದರು. ಪ್ರತಿಜ್ಞಾವಿಧಿಯಲ್ಲಿ ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳು ಇಸಿಓ, ಬಿಆರ್‍ಪಿ…

Read More

ಮಡಿಕೇರಿ ಜ.25 : ಮಡಿಕೇರಿ ತಾಲ್ಲೂಕು 11ನೇ ಕನ್ನಡ ಸಾಹಿತ್ಯ ಸಮ್ಮೇಳನ ಜ.28 ರಂದು ಡಾ.ವಿಜಯ್ ಪೂಣಚ್ಚ ತಂಬಂಡ ಅವರ ಅಧ್ಯಕ್ಷತೆಯಲ್ಲಿ ಬೆಟ್ಟಗೇರಿಯಲ್ಲಿ ನಡೆಯಲಿದೆ. ಸಂಭ್ರಮದ ಸಮ್ಮೇಳನಕ್ಕಾಗಿ ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನವೀನ್ ಅಂಬೇಕಲ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಟ್ಟಗೇರಿ ಉದಯ ವಿದ್ಯಾಸಂಸ್ಥೆಯ ತುಂಬು ಸಹಕಾರದೊಂದಿಗೆ ಕನ್ನಡದ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದ್ದು, ಅಂದು ಬೆಳಿಗ್ಗೆ 8 ಉದಯ ವಿದ್ಯಾಸಂಸ್ಥೆಯಲ್ಲಿ ಬೆಟ್ಟಗೇರಿ ಗ್ರಾ.ಪಂ. ಅಧ್ಯಕ್ಷ ನಾಪಂಡ ರ್ಯಾಲಿ ಮಾದಯ್ಯ ರಾಷ್ಟ್ರ ಧ್ವಜಾರೋಹಣ, ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಕನ್ನಡ ಸಾಹಿತ್ಯ ಪರಿಷತ್ತು ಧ್ವಜಾರೋಹಣ, ಕಸಾಪ ತಾಲೂಕು ಅಧ್ಯಕ್ಷ ನವೀನ್ ಅಂಬೆಕಲ್ಲು ಕನ್ನಡ ಧ್ವಜಾರೋಹಣ ನೆರವೇರಿಸುವ ಮೂಲಕ ಸಮ್ಮೇಳನಕ್ಕೆ ಚಾಲನೆ ದೊರಕಲಿದೆ ಎಂದರು. ವಿವಿಧ ದ್ವಾರಗಳ ಉದ್ಘಾಟನೆ : ಬೆಳಿಗ್ಗೆ 8.30ಕ್ಕೆ ಏಕಕಾಲಕ್ಕೆ ಗಣ್ಯರ ನೆನಪಿನ ದ್ವಾರ ಉದ್ಘಾಟನೆಯಾಗಲಿದೆ. ಹೊಸೂರು ಜೋಯಪ್ಪ ನೆನಪಿನ ದ್ವಾರವನ್ನು ಡಿಸಿಸಿ ಬ್ಯಾಂಕ್ ನಿವೃತ್ತ ಸಹಾಯಕ…

Read More

ಮಡಿಕೇರಿ ಜ.25 : ಸೋಮವಾರಪೇಟೆ ಲಯನ್ಸ್ ಸಂಸ್ಥೆ ವತಿಯಿಂದ ಸಂಸ್ಥೆಯ ಸದಸ್ಯರು ಹಾಗೂ ಕಾಜೂರು ಗ್ರಾಮದ ವಸಂತ ಮತ್ತು ಪುಷ್ಪ ದಂಪತಿಯ ಪುತ್ರಿ ಕೆ.ಯು.ರಂಜಿತ (22) ಅವರ ಶಸ್ತ್ರ ಚಿಕಿತ್ಸೆಗೆ ಆರ್ಥಿಕ ನೆರವು ನೀಡಲಾಯಿತು. ಸಂಸ್ಥೆಯ ಅಧ್ಯಕ್ಷ ಸಿ.ಕೆ.ರೋಹಿತ್ ಹಾಗೂ ಪದಾಧಿಕಾರಿಗಳು ನಿವಾಸಕ್ಕೆ ತೆರಳಿ ಶಸ್ತ್ರ ಚಿಕಿತ್ಸೆಗೆ ಸಹಕಾರ ಆಗುವ ನಿಟ್ಟಿನಲ್ಲಿ ಚೆಕ್ ಹಸ್ತಾಂತರಿಸಿದರು. ಈ ಸಂದರ್ಭ ಲಯನ್ಸ್ ಸಂಸ್ಥೆಯ ಕಾರ್ಯದರ್ಶಿ ಕೆ.ಎನ್.ತೇಜಸ್ವಿ, ಸದಸ್ಯರುಗಳಾದ ಕೆ.ಎಂ.ಜಗದೀಶ್, ಎಸ್.ಎನ್.ಯೋಗೇಶ್, ಪದ್ಮಕರ್ ರಾಜ್ ಹಾಜರಿದ್ದರು.

Read More

ವಿರಾಜಪೇಟೆ ಜ.25 : ವಿರಾಜಪೇಟೆಯ ಸಂತ ಅನ್ನಮ್ಮ ಕಾಲೇಜಿನಲ್ಲಿ ತಾಲೂಕು ಆಡಳಿತ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರಗಳ ಸಹಯೋಗದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಜಿ.ಲೋಕೇಶ್ ಗಿಡಕ್ಕೆ ನೀರು ಹಾಕುವುದರ ಮೂಲಕ ಸಾಂಕೇತಿಕವಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮತದಾನವು ಪ್ರತಿಯೊಬ್ಬರ ಹಕ್ಕಾಗಿದ್ದು, ನಮ್ಮ ಹಕ್ಕನ್ನು ಅರಿತು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ. ಭವ್ಯ ರಾಷ್ಟ್ರದ ನಿರ್ಮಾಣಕ್ಕೆ ಮತದಾರರ ಪಾತ್ರ ಅತ್ಯಗತ್ಯವಾಗಿದೆ. ಸಮರ್ಥ ನಾಯಕನನ್ನು ಆಯ್ಕೆ ಮಾಡಲು ಮತದಾರನಿಂದ ಮಾತ್ರ ಸಾಧ್ಯ. ಆದುದರಿಂದ ಎಲ್ಲರೂ ಮತದಾನ ಮಾಡಬೇಕೆಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿರಾಜಪೇಟೆ ತಹಶೀಲ್ದಾರರಾದ ಅರ್ಚನಾ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ, ಮತದಾರರ ದಿನಾಚರಣೆಯ ಮುಖ್ಯ ಉದ್ದೇಶವೇ ಮತದಾರರಲ್ಲಿ ಜಾಗೃತಿಯನ್ನು ಮೂಡಿಸುವುದೇ ಆಗಿದೆ ಎಂದರು. ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಕಡ್ಡಾಯವಾಗಿ ನೋಂದಣಿಯನ್ನು ಮಾಡಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕಿವಿಮಾತು ಹೇಳಿದರು. ಕಲಾವಿದರಾದ ಬಿ.ಆರ್.ಸತೀಶ್ ಹಾಗೂ ಸಾದಿಕ್ ಮತದಾನ ಜಾಗೃತಿಯ ಚಿತ್ರವನ್ನು ಬಿಡಿಸಿದರು. ಗಾಯಕರಾದ ಟಿ.ಡಿ.…

Read More