ವಿರಾಜಪೇಟೆ ಜ.25: ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 9ನೇ ಕನ್ನಡ ಸಾಹಿತ್ಯ ಸಮ್ಮೇಳನ ಆರ್ಜಿ ಮತ್ತು ಬೇಟೋಳಿಯಲ್ಲಿ ನಡೆಯಿತು. ಸಮ್ಮೇಳನದ ಅಂಗವಾಗಿ ಸ್ಮರಣ ಸಂಚಿಕೆಯನ್ನು ಹೊರತರಲು ನಿರ್ಧರಿಸಲಾಗಿದ್ದು, ಸಂಚಿಕೆಗೆ ಲೇಖನ ಆಹ್ವಾನಿಸಲಾಗಿದೆ. ವೀರಾಜಪೇಟೆ ತಾಲೂಕು ವ್ಯಾಪ್ತಿಯ ಅದರಲ್ಲಿಯೂ ವಿಶೇಷವಾಗಿ ಆರ್ಜಿ ಮತ್ತು ಬೇಟೋಳಿ ಗ್ರಾಮದ ಸಾಹಿತಿಗಳು, ಲೇಖಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಕತೆ, ಕವನ, ಚುಟುಕ, ಒಗಟು, ಗಾದೆ, ನಾಟಿ ಔಷಧಿ, ವೈಚಾರಿಕ ಲೇಖನ., ನಾಡಿನ ಐತಿಹಾಸಿಕ ಹಿನ್ನೆಲೆಗಳ ಬಗ್ಗೆ ಬರೆದು ಕಳುಹಿಸಬಹುದಾಗಿದೆ. ಲೇಖನಗಳು ಕೈಬರಹವಾದರೆ ಒಂದೇ ಮಗ್ಗುಲಲ್ಲಿ ಮೂರು ಪುಟ, ಡಿಟಿಪಿ ಆದರೆ ಎರಡು ಪುಟಗಳು, ಕವನಗಳು 20 ಸಾಲುಗಳನ್ನು ಮೀರಬಾರದು. ಲೇಖನಗಳನ್ನು ಸಂಪಾದಕರು, ಸ್ಮರಣ ಸಂಚಿಕೆ ಸಮಿತಿ, ಉಷಾ ಪ್ರೀತಮ್, ಮಗ್ಗುಲ ಗ್ರಾಮ, ಐಮಂಗಲ ಅಂಚೆ, ವೀರಾಜಪೇಟೆ ಈ ವಿಳಾಸಕ್ಕೆ ಕಳುಹಿಸಿ ಇಲ್ಲದೆ ಹೋದಲ್ಲಿ ಇಮೇಲ್ ಮುಖಾಂತರ ಕಳುಹಿಸುವುದಾದರೆ skandavp@gmail.com ಗೆ ಈ ಮೇಲ್ ಮೂಲಕ ಕಳುಹಿಸಿ, 9483855998, 9739819508 ಈ ಸಂಖ್ಯೆಗಳಿಗೆ ವ್ಯಾಟ್ಸಪ್ ಮಾಡಬಹುದಾಗಿದೆ. ಲೇಖನಗಳನ್ನು…
ಲೇಖಕ: admin
ಮಡಿಕೇರಿ ಜ.25 : ನಿವೇಶನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗಣರಾಜ್ಯೋತ್ಸವದ ದಿನವಾದ ಜ.26 ರಂದು ಪೊನ್ನಂಪೇಟೆ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕ ತಿಳಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಮಿತಿಯ ಜಿಲ್ಲಾ ಸಂಚಾಲಕ ರಜನಿಕಾಂತ್ ಹಾಗೂ ಹಿರಿಯ ಮುಖಂಡ ಹೆಚ್.ಎಸ್.ಕೃಷ್ಣಪ್ಪ ಪೊನ್ನಂಪೇಟೆಯ ಬಸ್ ನಿಲ್ದಾಣದಿಂದ ತಹಶೀಲ್ದಾರ್ ಕಚೇರಿ ವರೆಗೆ ಮೆರವಣಿಗೆ ಮೂಲಕ ತೆರಳಿ ಪ್ರತಿಭಟನೆ ನಡೆಸಲಾಗುವುದು. ನಂತರ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ನೀಡಲಾಗುವುದು ಎಂದು ಹೇಳಿದ್ದಾರೆ. ದಲಿತರ ಪರವಾಗಿ ನಿರಂತರ ಧರಣಿ ಸತ್ಯಾಗ್ರಹಳು ನಡೆಯುತ್ತಿದ್ದರೂ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲವೆಂದು ಆರೋಪಿಸಿರುವ ಅವರು, ಈ ಬಾರಿ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮಡಿಕೇರಿ ಜ.25 : ಸಂತೆ ಮತ್ತು ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಅಶುಚಿತ್ವದ ವಾತಾವರಣದಲ್ಲಿ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದ ಹಿನ್ನೆಲೆ ತಾಲ್ಲೂಕು ತಹಶೀಲ್ದಾರ್ ದಿಢೀರ್ ನಗರ ಸಂಚಾರ ಮಾಡಿ ವ್ಯಾಪಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ವಿರಾಜಪೇಟೆ ಪಟ್ಟಣದಲ್ಲಿ ನಿಯಮ ಬಾಹಿರವಾಗಿ ಎಲ್ಲೆಂದರಲ್ಲಿ ತೆರೆದ ವಾತಾವರಣದಲ್ಲಿ ಆಹಾರ ಪದಾರ್ಥಗಳು ಮಾರಾಟವಾಗುತ್ತಿದೆ. ಅಸ್ಸಾಂ ನಿಂದ ಕಾರ್ಮಿಕರಾಗಿ ದುಡಿಯಲು ಬಂದವರಲ್ಲಿ ಕೆಲವರು ವ್ಯಾಪಾರಿಗಳಾಗಿ ಮಾರ್ಪಡುತ್ತಿದ್ದು, ಅಸ್ಸಾಮಿಗಳು ಇಷ್ಟ ಪಡುವ ತಿಂಡಿ, ತಿನಿಸುಗಳನ್ನು ಮಾರಾಟ ಮಾಡುತ್ತಿದ್ದಾರೆ. ಆದರೆ ಈ ಆಹಾರ ಪದಾರ್ಥಗಳು ಗ್ರಾಹಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎನ್ನುವ ದೂರುಗಳು ಕೇಳಿ ಬಂದಿತು. ಕೇರಳ ರಾಜ್ಯದ ಕೆಲವು ವ್ಯಾಪಾರಿಗಳು ಕೂಡ ಯಾವುದೇ ನಿಯಮಗಳನ್ನು ಅನುಸರಿಸದೆ ತೂಕ, ಗುಣಮಟ್ಟ, ದರ, ಪ್ಯಾಕಿಂಗ್ ದಿನಾಂಕ ಮತ್ತಿತರ ಮಾಹಿತಿಗಳಿಲ್ಲದ ಪ್ಯಾಕೇಟ್ ಗಳಲ್ಲಿ ತಿಂಡಿ, ತಿನಿಸುಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆಯೂ ಸಾರ್ವಜನಿಕ ವಲಯದಲ್ಲಿ ಆಕ್ಷೇಪವಿತ್ತು. ಇದರಿಂದ ಎಚ್ಚೆತ್ತುಕೊಂಡ ವಿರಾಜಪೇಟೆ ತಾಲೂಕು ತಹಶೀಲ್ದಾರ್…
ಮಡಿಕೇರಿ ಜ.25 : ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗಾಂಧಿ ಭವನ ಉದ್ಘಾಟನಾ ಕಾರ್ಯಕ್ರಮವು ಜ.26 ರಂದು ಮಧ್ಯಾಹ್ನ 12 ಗಂಟೆಗೆ ಗಾಂಧಿಭವನದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ ನಾಗೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಬೋಜೇಗೌಡ, ಶಾಸಕರಾದ ಆಯನೂರು ಮಂಜುನಾಥ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ, ಮಡಿಕೇರಿ ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಮುಖ್ಯಮಂತ್ರಿಗಳ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಕೊಡಗು ಉಸ್ತುವಾರಿ ಸಚಿವರು ಹಾಗೂ ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ವಿ.ಅನ್ಬುಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಡಾ.ಪಿ.ಎಸ್.ಹರ್ಷ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಡಾ.ಆಕಾಶ್ ಎಸ್., ವಾರ್ತಾ ಮತ್ತು ಸಾರ್ವಜನಿಕ…
ಮಡಿಕೇರಿ ಜ.25 : 2022 ನೇ ವರ್ಷದಲ್ಲಿ ಪದವಿ/ ಸ್ನಾತಕೊತ್ತರ ಪದವಿ ಮತ್ತು ವೃತ್ತಿಪರ ಪದವಿ/ ವೃತ್ತಿಪರ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿದ್ದು, ಸರಾಸರಿ ಶೇ.70 ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ಹಿಂದುಳಿದ ವರ್ಗಕ್ಕೆ ಸೇರಿದ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿದ ವಿದ್ಯಾರ್ಥಿಗಳು ಫೆಬ್ರವರಿ 8 ರೊಳಗಾಗಿ ಅರ್ಜಿ ಸಲ್ಲಿಸಿ ಈ ಸೌಲಭ್ಯ ಪಡೆಯಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಅವರು ತಿಳಿಸಿದ್ದಾರೆ. ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ವಿದ್ಯಾರ್ಥಿಯು ಪ್ರವರ್ಗ-1, 2ಎ, 3ಎ ಅಥವಾ 3ಬಿ ಗೆ ಸೇರಿರಬೇಕು. ವಿದ್ಯಾರ್ಥಿಯು ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1 ಆಗಿದ್ದಲ್ಲಿ, ರೂ.2.50 ಲಕ್ಷ, ಪ್ರವರ್ಗ-2ಎ, 3ಎ ಮತ್ತು 3ಬಿ ಆಗಿದ್ದಲ್ಲಿ, ರೂ.1 ಲಕ್ಷ. ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್‍ಸೈಟ್ ವಿಳಾಸ https://bcwd.karnataka.gov.in ಸಹಾಯವಾಣಿ…
ಮಡಿಕೇರಿ ಜ.25 : ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರಸಭೆ, ಪಟ್ಟಣ ಪಂಚಾಯ್ತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ನಗರ ಪುನರ್ವಸತಿ ಕಾರ್ಯಕರ್ತರು ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಬಯಸುವವರು ಫೆಬ್ರವರಿ, 15 ರೊಳಗೆ ಅರ್ಜಿ ಸಲ್ಲಿಸಬಹುದು. ನಗರ ಪುನರ್ವಸತಿ ಕಾರ್ಯಕರ್ತರು ಮಾಸಿಕ ಗೌರವಧನ 9 ಸಾವಿರ ರೂ., ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಮಾಸಿಕ ಗೌರವಧನ 9 ಸಾವಿರ ರೂ. ಎಸ್ಸೆಸ್ಸೆಲ್ಸಿ ಉತ್ತೀರ್ಣ/ ಅನುತ್ತೀರ್ಣ, ಶೇ.40 ಕ್ಕಿಂತ ಮೇಲ್ಪಟ್ಟು ಶೇ.75 ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು. ಹುದ್ದೆಗಳು ಖಾಲಿ ಇರುವ ವಿವರ ಯುಆರ್‍ಡಬ್ಲ್ಯು:- ನಗರಸಭೆ ಮಡಿಕೇರಿ, ಸೋಮವಾರಪೇಟೆ ಪಟ್ಟಣ ಪಂಚಾಯಿತಿ, ವಿರಾಜಪೇಟೆ ಪಟ್ಟಣ ಪಂಚಾಯಿತಿ. ವಿಆರ್‍ಡಬ್ಲ್ಯು ಮಡಿಕೇರಿ ತಾಲ್ಲೂಕಿನ ಬಲ್ಲಮಾವಟಿ, ಚೆಂಬು, ಕುಂಜಿಲ, ಕೊಣಂಜಗೇರಿ, ಸೋಮವಾರಪೇಟೆ ತಾಲ್ಲೂಕಿನ ಚೆಟ್ಟಳ್ಳಿ, ಹಂಡ್ಲಿ, ಅಲೂರು ಸಿದ್ದಾಪುರ. ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ, ಬಿರುನಾಣಿ, ದೇವರಪುರ, ಗೋಣಿಕೊಪ್ಪ, ಹಾಲುಗುಂದ, ನಿಟ್ಟೂರು, ನಾಲ್ಕೇರಿ, ಪೊನ್ನಪ್ಪಸಂತೆ, ಕದನೂರು, ಕೆ.ಬಾಡಗ, ಕಿರುಗೂರು, ತಿತಿಮತಿ,…
ಮಡಿಕೇರಿ ಜ.25 : ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕ ರಾಜ್ಯದ ಪರವಾಗಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸ್ತ್ರೀಸಬಲೀಕರಣವನ್ನು ಪ್ರತಿಬಿಂಬಿಸುವ ‘ನಾರಿ ಶಕ್ತಿ’ ಸ್ತಬ್ಧಚಿತ್ರವು ಸಿದ್ಧಗೊಂಡಿದೆ. ನಾಡಿನ ಹೆಮ್ಮೆಯ ಪ್ರತೀಕವಾಗಿರುವ ಸ್ತಬ್ಧಚಿತ್ರವು ಜ.26 ರಂದು ರಾಜಧಾನಿಯ ಕರ್ತವ್ಯ ಪಥದಲ್ಲಿ(ರಾಜ್ಪಥ್) ಸಾಗುವುದರೊಂದಿಗೆ ಕರ್ನಾಟಕ ಹಿರಿಮೆಯ ಕೀರ್ತಿ ಪತಾಕೆ ಹಾರಿಸಲಿದೆ. ಇದರೊಂದಿಗೆ ಸತತವಾಗಿ ಹದಿನಾಲ್ಕು ವರ್ಷಗಳಿಂದ ಸ್ತಬ್ಧಚಿತ್ರದೊಂದಿಗೆ ಪಾಲ್ಗೊಂಡ ದೇಶದ ಏಕೈಕ ರಾಜ್ಯವೆಂಬ ಶ್ರೇಯವನ್ನು ಕರ್ನಾಟಕ ತನ್ನದಾಗಿಸಿಕೊಳ್ಳಲಿದೆ. ಈ ಬಾರಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರವು ಕರ್ನಾಟಕ ರಾಜ್ಯದ ಪಾಲಿಗೆ ಅತ್ಯಂತ ಸ್ಮರಣೀಯವಾದುದು. ಹಲವು ಅಡೆ ತಡೆಗಳನ್ನು ಎದುರಿಸಿ, ಕೊನೆಯ ಹಂತದಲ್ಲಿ ರಾಜ್ಯವು ಪಥ ಸಂಚಲನಕ್ಕೆ ರಹದಾರಿ ಪಡೆದುಕೊಂಡಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಸ್ತಬ್ಧಚಿತ್ರವನ್ನು ಸಿದ್ಧಪಡಿಸುವ ಸವಾಲನ್ನು ಹಿಮ್ಮೆಟ್ಟಿಸಿ ಅಚ್ಚರಿಯ ರೀತಿಯಲ್ಲಿ ಸಿದ್ಧಗೊಂಡಿದೆ. ಕರ್ನಾಟಕದ ಹಿರಿಮೆ ಮತ್ತು ಕನ್ನಡ ಅಸ್ಮಿತೆಯ ಪ್ರತೀಕದಂತಿರುವ ಈ ಸ್ತಬ್ಧಚಿತ್ರವು ಕೇವಲ 10 ದಿನಗಳಲ್ಲಿ ರೂಪುಗೊಂಡಿದೆ. ಸ್ತಬ್ಧಚಿತ್ರದ ವೈಶಿಷ್ಟ ಪೂರ್ಣತೆಯಿಂದಲೇ ಗಮನ ಸೆಳೆಯುವ ಕರ್ನಾಟಕ ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲನ್ನು…
ಮಡಿಕೇರಿ ಜ.25 : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ 2002 ರ ಫೆಬ್ರವರಿ 4 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ ಸಾಂತ್ವನ ಮಹಿಳಾ ಸಹಾಯವಾಣಿ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿರುತ್ತದೆ. ಸಾಂತ್ವನ ಕೇಂದ್ರದಲ್ಲಿ ಈವರೆಗೆ 4704 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು 4683 ಪ್ರಕರಣಗಳು ಇತ್ಯರ್ಥಗೊಡಿರುತ್ತದೆ. 2022-23ನೇ ಆರ್ಥಿಕ ಸಾಲಿನಲ್ಲಿ ಒಟ್ಟು 222 ಪ್ರಕರಣಗಳು ದಾಖಲಾಗಿ 201 ಪ್ರಕರಣಗಳು ಇತ್ಯರ್ಥಗೊಂಡು ಉಳಿದ 21 ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ. ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷರಾದ ಕೆ.ಎಸ್.ಪ್ರಕಾಶ್ ಹಾಗೂ ಪ್ರಧಾನ ಕಾರ್ಯದರ್ಶಿ ನಮಿತ ಆರ್.ರೈ ಅವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ದೂ.ಸಂ. 9880985939 ನ್ನು ಸಂಪರ್ಕಿಸಬಹುದು ಎಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಅಧ್ಯಕ್ಷರು ತಿಳಿಸಿದ್ದಾರೆ.
ಮಡಿಕೇರಿ ಜ.25 : ಮಡಿಕೇರಿ ಆಕಾಶವಾಣಿಯಿಂದ ಫೆಬ್ರವರಿ ತಿಂಗಳಿನಿಂದ ಪ್ರತಿ ಭಾನುವಾರ ಹಗಲು 4 ರಿಂದ 4.30 ರವರೆಗೆ “ಜನಪದ ಸಿರಿ” ಕಾರ್ಯಕ್ರಮ ಪ್ರಸಾರವಾಗಲಿದೆ. ಕೊಡಗಿನ ಜನಪದ ಕಲಾವಿದರ ಕುರಿತ ಕಾರ್ಯಕ್ರಮ ಇದು. ಈ ಕಾರ್ಯಕ್ರಮದಲ್ಲಿ ತಮ್ಮ ಅನುಭವ ಹಾಗೂ ಕಲಾ ಪ್ರಕಾರಗಳನ್ನು ಹಂಚಿಕೊಳ್ಳಲು ವಿನಂತಿಸಲಾಗಿದೆ. 9902358367 ಈ ಸಂಖ್ಯೆಗೆ ಸಂಪರ್ಕಿಸಿ ಸಹಕರಿಸಬೇಕಾಗಿ ವಿನಂತಿಸಲಾಗಿದೆ. ಹಾಗೆಯೇ ಸೇನೆಯಲ್ಲಿ ಸೇವೆ ಸಲ್ಲಿಸಿದವರ ಅನುಭವಗಳ ಕಥನ ಸೇನಾ ಸ್ಮರಣೆಯೂ ಪ್ರತಿ ಬುಧವಾರ ಸಂಜೆ 5 ಕ್ಕೆ ಬಿತ್ತರವಾಗುತ್ತಿದ್ದು, ಸೇನೆಯಲ್ಲಿದ್ದು ಬಂದ ಕೊಡಗಿನ ಜನತೆ 9449167463 ಈ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕರಾದ ವಿಜಯ್ ಅಂಗಡಿ ಅವರು ತಿಳಿಸಿದ್ದಾರೆ.
ಮಡಿಕೇರಿ ಜ.25 : ಪೊನ್ನಂಪೇಟೆ ತಾಲ್ಲೂಕು ಹಾತೂರಿನ ನಂ.2784ನೇ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಸಹಕಾರ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣವನ್ನು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಉದ್ಘಾಟಿಸಿದರು. ಈ ಸಂದರ್ಭ ಶಾಸಕ ಕೆ.ಜಿ.ಬೋಪಯ್ಯ, ಸಹಕಾರ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ, ಉಪಾಧ್ಯಕ್ಷ ಕೆಟೋಳಿರ ಹರೀಶ್ ಪೂವಯ್ಯ ಸೇರಿದಂತೆ ಮತ್ತಿತರರು ಹಾಜರಿದ್ದರು.






