ಮಡಿಕೇರಿ ಮಾ.24 NEWS DESK : ಕೊಡಗು ಮೈಸೂರು ಸಂಸದರಾದ ಯದುವೀರ್ ಒಡೆಯರ್ ಅವರ ಜನ್ಮದಿನದ ಪ್ರಯುಕ್ತ ಕೊಡಗು ಜಿಲ್ಲಾ ಬಿಜೆಪಿ ಪಕ್ಷದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಎಂ.ಪಿ.ಸುನಿಲ್ ಸುಬ್ರಮಣಿ ಅವರ ನೇತೃತ್ವದಲ್ಲಿ ನಗರದ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಂಸದರ ಭವಿಷ್ಯ ಉಜ್ವಲವಾಗಲೆಂದು ಹಾರೈಸಿದರು. ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಜಿಲ್ಲಾ ವಕ್ತಾರ ಬಿ.ಕೆ.ಅರುಣ್ ಕುಮಾರ್, ಪ್ರಮುಖರಾದ ಉಪಾಧ್ಯಕ್ಷ ಬಿ.ಕೆ.ಜಗದೀಶ್, ಪಿ.ಎಂ.ರವಿ, ಬೊಳ್ಳಜಿರ ಬಿ ಅಯ್ಯಪ್ಪ ಮತ್ತಿತರರು ಹಾಜರಿದ್ದರು.
ಲೇಖಕ: admin
ಸಿದ್ದಗಂಗಾ ಮಾ.24 NEWS DESK : ನೀರು ಅಮೂಲ್ಯ ವಸ್ತು ಅದನ್ನು ಅವಶ್ಯಕತೆಗೆ ತಕ್ಕಂತೆ ಮಿತವಾಗಿ ಬಳಸಬೇಕು. ಪೋಲು ಮಾಡಬೇಡಿ ಎಂದು ತುಮಕೂರು ಸಿದ್ದಗಂಗಾ ಮಠದ ಶ್ರೀ ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಹೇಳಿದರು. ಮಠದ ಆವರಣದಲ್ಲಿ ಏರ್ಪಡಿಸಲಾಗಿದ್ದ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನ ಹಾಗೂ ವಿಶ್ವ ಜಲದಿನದ ಮಹತ್ವ ಕುರಿತು ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು. ಜಗತ್ತಿನಾದ್ಯಂತ ಇಂದು ನೀರು ಎಲ್ಲಾರಿಗೂ,ಎಲ್ಲಾದಕ್ಕೂ ಬೇಕಾಗಿದೆ ಆದರೆ ಅದನ್ನು ಬಳಸುತಿರುವ ರೀತಿ ಸರಿಯಲ್ಲವೆಂದರು. ನೀರಿಲ್ಲದೆ ಬದುಕು ಸಾದ್ಯವೇ ಇಲ್ಲಾ ಎಂಬುದು ಸತ್ಯ, ವಿದ್ಯಾರ್ಥಿಗಳು ಈ ಬಗ್ಗೆ ಜಾಗೃತರಾಗಬೇಕು ನಿಮ್ಮಲ್ಲಿ ಅರಿವು ಮೂಡಿದರೆ,ಇತರರಿಗೂ ಜಾಗೃತಿ ಮೂಡಿಸಬಹುದೆಂದು. ನೀವುಗಳು ನೀರನ್ನು ಮಿತವಾಗಿ ಬಳಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು. ಮುಂದಿನ ತಲೆಮಾರಿಗೂ ಉಳಿಸಿ ಅವರಿಗೂ ದೊರಕುವಂತೆ ಮಾಡಬೇಕು ಇದು ನಾವು ಮಿತವಾಗಿ ಬಳಸುವುದರಿಂದ ಮಾತ್ರ ಸಾಧ್ಯವಾಗುತ್ತದೆ ಎಂದರು. ನಂತರ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಮುಂದಿನ ಪರೀಕ್ಷೆಯ ಬಗ್ಗೆ ಮಾಹಿತಿ ಪಡೆದು ಅಗತ್ಯ ಮಾರ್ಗದರ್ಶನ ಮಾಡಿದರು. ಶ್ರೀ ಮಠದಲ್ಲಿ ವಿದ್ಯಾಭ್ಯಾಸ ಮಾಡುತಿರುವ…
ಮಡಿಕೇರಿ NEWS DESK ಮಾ.24 : ಶ್ರೀಕೋದಂಡ ರಾಮೋತ್ಸವ ಸಮಿತಿ ವತಿಯಿಂದ ಮಡಿಕೇರಿಯ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದಲ್ಲಿ 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಇದೇ ಮಾ.26 ಮತ್ತು 27 ರಂದು ವಿಜೃಂಭಣೆಯಿAದ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಕೋದಂಡ ರಾಮೋತ್ಸವ ಸಮಿತಿಯ ಅಧ್ಯಕ್ಷ ಕೆ.ಎಂ.ಗಣೇಶ್ ಅವರು ಎರಡು ದಿನಗಳ ಕಾಲ ನಡೆಯುವ ಧಾರ್ಮಿಕ ವಿಧಿ ವಿಧಾನಗಳ ಕುರಿತು ಮಾಹಿತಿ ನೀಡಿದರು. ಮಾ.26ರಂದು ಸಂಜೆ 5 ಗಂಟೆಗೆ ಶ್ರೀ ರಾಮೋತ್ಸವದ ಅಂಗವಾಗಿ ಮಡಿಕೇರಿಯ ಗಾಂಧಿ ಮೈದಾನದಿಂದ ನಗರದಲ್ಲಿ ಭವ್ಯ ಮೆರವಣಿಗೆ ಸಾಗಲಿದೆ. ಮೆರವಣಿಗೆ ಸಂದರ್ಭ ವಿಶೇಷ ಪಲ್ಲಕ್ಕಿಯಲ್ಲಿ ಆಸೀನಗೊಂಡ ಶ್ರೀ ಕೋದಂಡ ರಾಮ ಪರಿವಾರ ಉತ್ಸವ ಮೂರ್ತಿಯನ್ನು ಹೊತ್ತು ನಗರದ ಪ್ರಮುಖ ರಸ್ತೆಗಳಲ್ಲಿ ತೆರಳಲಾಗುತ್ತದೆ. ಗಾಂಧಿ ಮೈದಾನದಿಂದ ಜನರಲ್ ತಿಮ್ಮಯ್ಯ ವೃತ್ತಕ್ಕೆ ಸಾಗಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗುತ್ತದೆ. ವಿವಿಧ ಆಕರ್ಷಕ ನೃತ್ಯ, ಚಂಡೆ ವಾದ್ಯ ಸಹಿತ ಸಾಂಸ್ಕೃತಿಕ…
ವಿರಾಜಪೇಟೆ ಮಾ.23 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪ ವಲಯ ಹಾತೂರು ಕಾರ್ಯಕ್ಷೇತ್ರದ ಅನುಗ್ರಹ ಜ್ಞಾನವಿಕಾಸ ಕೇಂದ್ರದಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಹಾತೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಮಂಜುಳಾ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಅವಶ್ಯಕತೆ ಇರುವ ಮಾಹಿತಿಗಳನ್ನು ಹಾಗೂ ಸ್ವಾವಲಂಬಿ ಜೀವನವನ್ನು ನಡೆಸಲು ಮಹಿಳೆಯರಿಗೆ ಅಗತ್ಯವಾದ ತರಬೇತಿಗಳ ಸೌಲಭ್ಯವನ್ನು ನೀಡುತ್ತಿದ್ದು ಇದರಿಂದ ಅನೇಕ ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಲು ಸಹಕಾರವಾಗಿದೆ ಎಂದು ತಿಳಿಸಿದರು. ಹೋಮಿಯೋಪತಿ ವೈದ್ಯಾಧಿಕಾರಿ ಡಾ.ಶ್ವೇತಾ ಮಾತನಾಡಿ, ಮಹಿಳೆಯರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಕೇಂದ್ರದ ಅಧ್ಯಕ್ಷರಾದ ಗಿರಿಜಾ ಮಾತನಾಡಿ, ನಮ್ಮ ಕೇಂದ್ರಕ್ಕೆ ಹೊಲಿಗೆ ತರಬೇತಿ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದು ತುಂಬಾ ಉಪಕಾರಿಯಾಯಿತು ಹಾಗೂ ಸದಸ್ಯರಲ್ಲಿ ಸ್ವಉದ್ಯೋಗ ಮಾಡಲು ಮತ್ತು ಸ್ವಾವಲಂಬಿಯಾಗಿ ಬದುಕಲು ಸಹಕಾರವಾಯಿತು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಹೊಲಿಗೆ ತರಬೇತಿ…
ವಿರಾಜಪೇಟೆ ಮಾ.23 NEWS DESK : ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಸಹಯೋಗದಲ್ಲಿ ಕೂರ್ಗ್ ಕ್ಲಿಫ್ ರೆಸಾರ್ಟ್‍ನಲ್ಲಿ ನಡೆದ ಕ್ಲಿಫ್ ಆಫ್ ಗ್ರೇಸ್ ಎಂಬ ಕಾರ್ಯಕ್ರಮ ನಡೆಯಿತು. ಆರ್ಥಿಕ ಸ್ಥಿತಿಯಲ್ಲಿ ಹಿಂದುಳಿದ ರೋಗಿಗಳಿಗೆ ನಗದು ರೂಪದಲ್ಲಿ ಸಹಾಯ ಮಾಡುವುದು ಹಾಗೂ ಅವಶ್ಯಕತೆ ಇದ್ದವರಿಗೆ ವೈದ್ಯಕೀಯ ಸಲಕರಣೆಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ದಕ್ಷಿಣ ಕೊಡಗಿಗೆ ಸೇರಿದ 15 ಚರ್ಚ್‍ನ ತಲಾ ಒಬ್ಬೊಬ್ಬ ಫಲಾನುಭವಿಗಳಿಗೆ ಮೂರು ಲಕ್ಷ ರೂಪಾಯಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಚೆಪ್ಪುಡಿರ ಅರುಣ್ ಮಾಚಯ್ಯ ಅವರು, ಧರ್ಮ ಯಾವುದೇ ಆಗಿರಲಿ, ದಾನ ಧರ್ಮ ಮಾಡುವ ಮೂಲಕ ಇತರರಿಗೆ ನೆರವಾಗಬೇಕು. ವೈದ್ಯಕೀಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತ ಮಿಷಿನರಿಗಳ ಸೇವೆ ಅಪಾರ ಎಂದು ನುಡಿದರು. ಕೊಡಗು ಡಿಸಿಸಿ ಹಾಗೂ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ ಮಾತನಾಡಿ, ಇದು ಇತರರಿಗೆ ಮಾದರಿಯಾಗುವಂತಹ ಕಾರ್ಯಕ್ರಮ ಎಂದ ಅವರು, ತಮ್ಮ ಹೋರಾಟ ಜೀವನವನ್ನು ಹಾಗೂ ಕೈಗೊಂಡ ಯಶಸ್ಸನ್ನು ಸ್ಮರಿಸಿದರು.…
ಮಡಿಕೇರಿ ಮಾ.23 NEWS DESK : 66/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರ ಪೊನ್ನಂಪೇಟೆ ಮತ್ತು ಶ್ರೀಮಂಗಲದಲ್ಲಿ ಮಾಸಿಕ ನಿರ್ವಹಣೆ ಕಾರ್ಯವನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸುಳುಗೋಡು, ಕೋಣನಕಟ್ಟೆ, ಬಾಳೆಲೆ, ದೇವನೂರು, ಪೊನ್ನಂಪೇಟೆ, ಗೋಣಿಕೊಪ್ಪ, ತಿತಿಮತಿ, ಹಾತೂರು, ಕುಂದ, ಕಾನೂರು, ದೇವರಪುರ, ಜಾಗಲೆ, ನಿಟ್ಟೂರು, ಕಿರಗೂರು, ಅತ್ತೂರು, ಕಾಯಿಮನೆ, ಮಂಚಳ್ಳಿ, ತೈಲ, ಸಿಂಕೋನ, ಶ್ರೀಮಂಗಲ, ಕುಟ್ಟ, ಕೆಟ್ಟಗೇರಿ, ಹರಿಹರ, ಬಿರುನಾಣಿ, ಕೆ.ಬಾಡಗ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮಾರ್ಚ್, 26 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಕುಶಾಲನಗರ, ಮಾ.23 NEWS DESK : ಕರ್ನಾಟಕ ಸರ್ಕಾರದ ಸಮಗ್ರ ಶಿಕ್ಷಣ – ಕರ್ನಾಟಕದ ರಾಜ್ಯ ನಿರ್ದೇಶನಾಲಯದ ನಿರ್ದೇಶನದಂತೆ ರಾಜ್ಯದ 34 ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಗಳಲ್ಲಿ ಜಿಲ್ಲಾ ವೃತ್ತಿಪರ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ (ಕೆರಿಯರ್) ಘಟಕವನ್ನು ಸ್ಥಾಪಿಸಲಾಗುತ್ತಿದೆ ಎಂದು ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಯ ಪ್ರಾಂಶುಪಾಲರು ಆದ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಪದನಿಮಿತ್ತ ಉಪನಿರ್ದೇಶಕರು(ಅಭಿವೃದ್ದಿ) ರಾಮಚಂದ್ರ ರಾಜೇ ಅರಸ್ ತಿಳಿಸಿದರು. ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಜಿಲ್ಲಾ ವೃತ್ತಿಪರ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ ಘಟಕವನ್ನು ಆರಂಭಿಸಲಾಗುತ್ತಿದ್ದು ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅವರ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಮುಂದಿನ ವೃತ್ತಿ ಜೀವನದ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಲು ಇದೇ ಮಾರ್ಚ್ 27 ರಂದು ಬೆಳಗ್ಗೆ 10.00 ಗಂಟೆಯಿಂದ ಕೂಡಿಗೆ ಸಂಸ್ಥೆಯ ಆವರಣದಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ ಹಾಗೂ ವೃತ್ತಿ ಮಾರ್ಗದರ್ಶನ (ಕೆರಿಯರ್)ಮೇಳವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು. ಕೂಡಿಗೆ ಡಯಟ್…
ಮಡಿಕೇರಿ ಮಾ.23 NEWS DESK : ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಏಪ್ರಿಲ್, 7 ರಿಂದ 30 ರವರೆಗೆ (ರಜೆ ದಿನ ಹೊರತುಪಡಿಸಿ) 21 ದಿನಗಳ ಕಾಲ ನುರಿತ ತರಬೇತುದಾರರಿಂದ ಬೇಸಿಗೆ ತರಬೇತಿ ಶಿಬಿರ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಈಜು ತರಬೇತುದಾರರು ಮನೋಹರ್ ದೂ.ಸಂ.9480032712, ಷಟಲ್ ಬ್ಯಾಡ್ಮಿಂಟನ್ ತರಬೇತುದಾರರು ಜ್ಯೋತಿ ಸೋಮಯ್ಯ 8792842853, ಟೇಬಲ್ ಟೆನ್ನಿಸ್ ತರಬೇತುದಾರರು ರಚನ್ ಪೊನ್ನಪ್ಪ 9110677030, ಅಥ್ಲೆಟಿಕ್ಸ್ ತರಬೇತುದಾರರು ಮಹಾಬಲ ಕೆ. 9980887499 ಮತ್ತು ಹಾಕಿ ತರಬೇತುದಾರರು ಬಿಂದ್ಯಾ ಕೆ.ಕೆ. 8105122430 ನ್ನು ಮತ್ತು ಕಚೇರಿ ದೂರವಾಣಿ ಸಂಖ್ಯೆ 9480032712 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು. :: ಕ್ರೀಡೆಗಳ ವಿವರ : : ಈಜು, ಷಟಲ್ ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್(7 ರಿಂದ 18 ವರ್ಷದವರಿಗೆ), ಅಥ್ಲೆಟಿಕ್ಸ್, ಹಾಕಿ (10 ರಿಂದ 18 ವರ್ಷದವರಿಗೆ). ಈಜು ಬೆಳಗ್ಗೆ 9.30 ರಿಂದ 11.30 ರವರೆಗೆ ಮತ್ತು ಸಂಜೆ 5 ರಿಂದ 6.30 ಗಂಟೆಯವರೆಗೆ, ಷಟಲ್ ಬ್ಯಾಡ್ಮಿಂಟನ್ ಮಧ್ಯಾಹ್ನ…
ಮಡಿಕೇರಿ ಮಾ.23 NEWS DESK : ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಒದಗಿಸುವಂತಾಗಬೇಕು ಎಂದು ಕೊಡಗು ಜಿಲ್ಲಾ ನೇಕಾರರ ಒಕ್ಕೂಟದ ಅಧ್ಯಕ್ಷರಾದ ಟಿ.ಕೆ.ಪಾಂಡರಂಗ ಅವರು ಸಲಹೆ ಮಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇಂದಿನ ಜಾಗತೀಕರಣ ಯುಗದಲ್ಲಿಯೂ ಸಹ ಕೈಮಗ್ಗ ಉತ್ಪನ್ನಗಳಿಗೆ ಬೇಡಿಕೆ ಇದ್ದು, ಕೈಮಗ್ಗ ಉತ್ಪನ್ನಗಳನ್ನು ಉಳಿಸಿ ಬೆಳೆಸಬೇಕು. ಆ ನಿಟ್ಟಿನಲ್ಲಿ ಸರ್ಕಾರ ಕೈಜೋಡಿಸಬೇಕು ಎಂದು ಅವರು ಕೋರಿದರು. ಸರ್ಕಾರಿ ಆಸ್ಪತ್ರೆಗಳು, ವಿದ್ಯಾರ್ಥಿ ನಿಲಯಗಳು ಸೇರಿದಂತೆ ಸರ್ಕಾರದ ಅಂಗ ಸಂಸ್ಥೆಗಳಿಗೆ ಬೆಡ್‍ಶೀಟ್, ಟವಲ್, ಮ್ಯಾಟ್ ಮತ್ತಿತರ ಕೈಮಗ್ಗ ಉತ್ಪನ್ನಗಳನ್ನು ಖರೀದಿಸಿದಲ್ಲಿ ಕೈಮಗ್ಗ ಉತ್ಪನ್ನಗಳಿಗೆ ಬೇಡಿಕೆ ಬರಲಿದೆ. ಇದರಿಂದ ಸ್ಥಳೀಯವಾಗಿ ಸ್ವ ಉದ್ಯೋಗ ದೊರೆಯಲಿದೆ ಎಂದು ಅವರು ಸಲಹೆ ಮಾಡಿದರು. ನೇಕಾರರ ಬದುಕು ಹಸನುಗೊಳಿಸುವಲ್ಲಿ ಮತ್ತಷ್ಟು ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಪಾಂಡುರಂಗ ಅವರು ಸಲಹೆ ಮಾಡಿದರು. ಕೊಡಗು…
ಮಡಿಕೇರಿ ಮಾ.23 NEWS DESK : ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಪತ್ರಕರ್ತರಿಗೆ ಆಯೋಜಿಸಿದ್ದ ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 ನಲ್ಲಿ ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತು. ಫೈನಲ್ ಪಂದ್ಯಾಟದಲ್ಲಿ ಟಾಸ್ ಸೋತ ಮೀಡಿಯಾ ಚಾಲೆಂಜರ್ಸ್ ತಂಡ ನಿಗದಿತ 6 ಓವರ್‍ನಲ್ಲಿ 2 ವಿಕೆಟ್ ನಷ್ಟಕ್ಕೆ 81 ರನ್ ಕಲೆಹಾಕಿತು. ತಂಡದ ಪರ ವಿನೋದ್ 39, ಹೇಮಂತ್ 31 ರನ್ ಕಲೆ ಹಾಕಿದರು. ಗುರಿ ಬೆನ್ನಟ್ಟಿದ ಮೀಡಿಯಾ ಹಿಟ್ಟರ್ಸ್ ತಂಡ 4 ವಿಕೆಟ್ ಕಳೆದುಕೊಂಡು 54 ರನ್‍ಗಳಿಸಿ 27ರನ್‍ಗಳ ಅಂತರದಲ್ಲಿ ಸೋಲುಂಡಿತ್ತು. ಇದಕ್ಕೂ ಮೊದಲು ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಮೀಡಿಯಾ ಚಾಲೆಂಜರ್ಸ್ ತಂಡವನ್ನು ಮೀಡಿಯಾ ಹಿಟ್ಟರ್ಸ್ ತಂಡ 10 ವಿಕೆಟ್‍ಗಳಿಂದ ಮಣಿಸಿತು. ನಂತರ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಟಾಸ್ ಸೋತ ಕೂರ್ಗ್ ಡ್ಯೂ ಡ್ರಾಪ್ಸ್ ಕುಶಾಲನಗರ ತಂಡ ನಿಗದಿತ ಓವರ್‍ನಲ್ಲಿ 7 ವಿಕೆಟ್ ನಷ್ಟಕ್ಕೆ 44 ರನ್…






