ಲೇಖಕ: admin

ಸುಂಟಿಕೊಪ್ಪ, ಜ.22 : ಸುಂಟಿಕೊಪ್ಪ ಭಾರತೀಯ ಜನತಾ ಪಕ್ಷ ಶಕ್ತಿ ಕೇಂದ್ರದ ವತಿಯಿಂದ  ವಿಜಯ ಸಂಕಲ್ಪ ಯಾತ್ರೆಯ ಬಗ್ಗೆ ಪೂರ್ವಭಾವಿ ಸಭೆಯನ್ನು ಭಾನುವಾರ ನಡೆಸಲಾಯಿತು. ದ್ವಾರಕ ಹೋಟೆಲ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕ ಅಪ್ಪಚ್ಚು ರಂಜನ್, ದಕ್ಷಿಣ ಕನ್ನಡ ಜಿಲ್ಲೆಯ ಪ್ರಬಾರಿ ಬಿ.ಬಿ.ಭಾರತೀಶ್, ವಿಧಾನಸಭಾ ಕ್ಷೇತ್ರದ ಪ್ರಬಾರಿಗಳಾದ ವಿಕ್ರಂ, ಯುವ ಮೋರ್ಚಾ ಸಂಚಾಲಕ ಮಹೇಶ್ ತಿಮ್ಮಯ್ಯ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಾದಪ್ಪ ಬೂತ್ ಮಟ್ಟದ ಕಾರ್ಯಕರ್ತರಿಗೆ ವಿಜಯ ಸಂಕಲ್ಪ ಯಾತ್ರೆಯ ಬಗ್ಗೆ ಮಾಹಿತಿಯನ್ನು ನೀಡಿದರು.

Read More

ಸೋಮವಾರಪೇಟೆ ಜ.22 : ಹಸಿದ ಹೊಟ್ಟೆಗೆ ಅನ್ನ ನೀಡುವುದೇ ಮಾನವ ಧರ್ಮ. ಹಸಿವಿನಿಂದ ಯಾರು ಸಾಯಬಾರದು ಎಂದು ಜೀವನ ಪರ್ಯಂತ ತ್ಯಾಗಮಯ ಬದುಕು ಸವೆಸಿದ ಮಹಾನ್ ಚೇತನ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮಿಗಳು ಎಂದು ಬಸವಾಪಟ್ಟಣ ತೋಟಂದಾರ್ಯ ಸಂಸ್ಥಾನದ ಸ್ವತಂತ್ರ ಬಸವಲಿಂಗ ಸ್ವಾಮೀಜಿ ಹೇಳಿದರು. ಇಲ್ಲಿನ ಶ್ರೀ ಶಿವಕುಮಾರ ಸ್ವಾಮೀಜಿ ಜಯಂತ್ಯೋತ್ಸವ ಸಮಿತಿ ವತಿಯಿಂದ ಪಟ್ಟಣದ ಆನೆಕೆರೆ ಸಮೀಪವಿರುವ ಡಾ. ಶ್ರೀ ಶಿವಕುಮಾರ್ ಸ್ವಾಮೀಜಿ ಬಸ್ ನಿಲ್ದಾಣದ ಆವರಣದಲ್ಲಿ ಲಿಂಗೈಕ್ಯ ಸ್ವಾಮೀಜಿಗಳ 4ನೇ ವರ್ಷದ ಪುಣ್ಯಸ್ಮರಣೆ-ದಾಸೋಹ ದಿನಾಚರಣೆ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. 12ನೇ ಶತಮಾನದ ಯುಗಪುರುಷ ಕ್ರಾಂತಿಕಾರಿ ಬಸವಣ್ಣ ನವರ ‘ಕಾಯಕವೇ ಕೈಲಾಸ’ ನಿತ್ಯದಾಸೋಹದ ಕೈಂಕರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಶ್ರೀಗಳು 1930ರಿಂದ ಶ್ರೀಮಠದ ಜವಾಬ್ದಾರಿಯನ್ನು ಹೊತ್ತು ಅಂದಿನಿಂದ ನಿರಂತರವಾಗಿ ಮಠ, ಯಾವುದೇ ಒಂದು ಧರ್ಮಕ್ಕೆ ಸ್ಥಿಮಿತವಾಗದೆ ಎಲ್ಲ ಧರ್ಮಗಳ ಮತ್ತು ಸಮಾಜದ ಏಳಿಗೆಗಾಗಿ ಶ್ರಮಿಸಿದರು. ಮಠದಲ್ಲಿ 10ಸಾವಿರ ವಿದ್ಯಾರ್ಥಿಗಳಿಗೆ ವಿದ್ಯೆಕಲಿಯುತ್ತಿದ್ದು, ಅದರಲ್ಲಿ 3800 ವಿದಾರ್ಥಿ ಲಿಂಗಾಯುತ ಸಮುದಾಯಕ್ಕೆ ಸೇರಿದ್ದರೆ,…

Read More

ಸೋಮವಾರಪೇಟೆ ಜ.22 : ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಸೋಮವಾರಪೇಟೆ ಕಸಬಾ ಹೋಬಳಿಯ ಮಸಗೋಡು ಗ್ರಾಮದ ಸಿದ್ಧೇಶ್ವರ ಸಮುದಾಯ ಭವನದಲ್ಲಿ ನಡೆಯಿತು. ತಹಸೀಲ್ದಾರ್ ಎಸ್.ಎನ್. ನರಗುಂದ ಅವರು ಅಧ್ಯಕ್ಷತೆ ವಹಿಸಿದ್ದರು. ಸರ್ಕಾರದ ಮಹಾತ್ವಾಕಾಂಕ್ಷೆಯ ಈ ಯೋಜನೆಯಿಂದ ಗ್ರಾಮೀಣ ಜನರು ಹೆಚ್ಚಿನ ಪ್ರಯೋಜನ ಪಡೆಯಬಹುದಾಗಿದೆ. ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸೂಕ್ತ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಿದರೆ, ಪಹಣಿಯಲ್ಲಿನ ಲೋಪದೋಷಗಳ ತಿದ್ದುಪಡಿ, ಪೌತಿ ಖಾತೆ, ಸರ್ಕಾರದ ಯೋಜನೆಗಳಾದ ಇಂದಿರಾ ಗಾಂಧಿ ವೃದ್ಧಾಪ್ಯವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷಾ ವೇತನ, ಅಂಗವಿಕಲ ವೇತನ, ಅಂತ್ಯಸAಸ್ಕಾರದ ಪರಿಹಾರ ಧನ, ರಾಷ್ಟಿçÃಯ ಕುಟುಂಬ ನೆರವು ಯೋಜನೆ, ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸುವುದು, ಗ್ರಾಮಗಳಿಗೆ ಸ್ಮಶಾನ ಕಲ್ಪಿಸುವುದು ಸೇರಿದಂತೆ ಹಲವು ಸಮಸ್ಯೆಗಳ ಪರಿಹರಿಸಿಕೊಳ್ಳಲು ಸಾಧ್ಯ ಎಂದರು ನೇರುಗಳಲೆ ಗ್ರಾ.ಪಂ ಉಪಾಧ್ಯಕ್ಷ ಪ್ರವೀಣ್ ಮಾತನಾಡಿ, ತಣ್ಣೀರುಹಳ್ಳ ಗ್ರಾಮದಲ್ಲಿ ಕಳೆದ ಹಲವಾರು ವರ್ಷಗಳಿಂದ ಗ್ರಾಮದ 88 ಏಕರೆ ಪೈಸಾರಿ ಜಾಗದ, 10 ಏಕರೆ ಸ್ಥಳದಲ್ಲಿ 200 ಕುಟುಂಬಗಳು ವಾಸಿಸುತ್ತಿದ್ದಾರೆ. ಆದರೆ, ಸ್ಥಳಕ್ಕೆ ಯಾವುದೇ…

Read More

ಸೋಮವಾರಪೇಟೆ ಜ.22 : ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಇಂತಹ ಕ್ರೀಡಾಕೂಟ ಸಹಕಾರಿಯಾಗಲಿವೆ ಎಂದು ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ ಅಭಿಪ್ರಾಯಪಟ್ಟಿದ್ದಾರೆ. ಇಂದಿರಾಗಾಂಧಿ ಅಭಿಮಾನಿಗಳ ಸಂಘ ಹಾಗೂ ಹರಪಳ್ಳಿ ರವೀಂದ್ರ ಅಭಿಮಾನಿಗಳ ಸಂಘದ ವತಿಯಿಂದ ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಪ್ರಾರಂಭಗೊAಡ 36ನೇ ವರ್ಷದ ರಾಜ್ಯ ಮಟ್ಟದ ಬೆಳ್ಳಿಬಟ್ಟಲಿನ ಕಬಡ್ಡಿ ಹಾಗು ಅಂತರ್ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸುವುದರೊಂದಿಗೆ ಎಲೆ ಮರೆಯ ಕಾಯಿಯಂತಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕಾದುದು ನಮ್ಮ ಕರ್ತವ್ಯವಾಗಬೇಕೆಂದರು. ಕ್ರೀಡಾ ಜಿಲ್ಲೆಯಾದ ಕೊಡಗಿಮಲ್ಲಿ ಸಾಕಷ್ಟು ಸಂಖ್ಯೆಯ ಕ್ರೀಡಾಪಟುಗಳಿದ್ದು ಜಿಲ್ಲೆಯಲ್ಲಿ ಇದೀಗ ನಿರಂತರ ಕ್ರೀಡಾಚಟುವಟಿಕೆಗಳು ನಡೆಯಿತ್ತಿರುವುದ ಶ್ಲಾಘನೀಯ ಎಂದರು. ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡಿದ್ದ ಸಮಾಜ ಸೇವಕ ಕಾಟ್ನಮನೆ ಗಿರೀಶ್ ಮಾತನಾಡಿ, ಧೀಮಂತ ಪ್ರಧಾನಿಯಾಗಿದ್ದ ದಿವಂಗತ ಇಂದಿರಾಗಾಂಧಿಯವರ ಹೆಸರಿನಲ್ಲಿ ಇಂದಿಗೂ ಕ್ರೀಡಾಕೂಟ ನಡಿಸಿಕೊಂಡು ಬರುತ್ತಿರುವುದು ಹೆಮ್ಮೆಯ ವಿಚಾರ. ಅದರಲ್ಲೂ ಕೂಲಿ ಕಾರ್ಮಿಕರೇ…

Read More

ಸುಂಟಿಕೊಪ್ಪ ಜ.22 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಾಕೂರು ಶಿರಂಗಾಲ ಕಾನ್‌ಬೈಲ್ ಶ್ರೀ ರಾಮಂದಿರ ದೇವಸ್ಥಾನ ಅಭಿವೃದ್ಧಿಗೆ ಅನುದಾನದ ಡಿ.ಡಿ ವಿತರಿಸಲಾಯಿತು. ಶನಿವಾರಸಂತೆಯಲ್ಲಿ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಸಾಧನಾ ಸಮಾವೇಶ ಸಮಾರಂಭದಲ್ಲಿ ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶ ಶ್ರೀ.ಶ್ರೀ. ಸದಾಶಿವ ಸ್ವಾಮಿಜಿ, ಮಡಿಕೇರಿ ಕ್ಷೇತ್ರ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಇಓ ಎಸ್.ಎಸ್. ಅನಿಲ್‌ಕುಮಾರ್, ಜಿಲ್ಲಾ ನಿರ್ದೇಶಕಿ ಲೀಲಾವತಿ ಮತ್ತು ತಾಲ್ಲೂಕು ಯೋಜನಾಧಿಕಾರಿ ರೋಹಿತ್ ಅವರುಗಳು ಕಾನ್‌ಬೈಲ್ ಶ್ರೀ ರಾಮಂದಿರ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗೆ ಧರ್ಮಸ್ಥಳ ಕ್ಷೇತ್ರದ ವತಿಯಿಂದ ನೀಡಲಾದ ರೂ. 1 ಲಕ್ಷ ಡಿ.ಡಿಯನ್ನು ದೇವಸ್ಥಾನ ಆಡಳಿತ ಮಂಡಳಿಯವರಿಗೆ ಹಸ್ತಾಂತರಿಸಿದರು.

Read More

ಮಡಿಕೇರಿ ಜ.21 : ಗಡಿ ಜಿಲ್ಲೆ ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮದಲ್ಲಿ ಪ್ರಸಕ್ತ ಸಾಲಿನ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ವೈಭವದ ಸಾಂಸ್ಕೃತಿಕ ಮೆರವಣಿಗೆ, ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯುವ ಮೂಲಕ ಗಮನ ಸೆಳೆೆಯಿತು. ವಿರಾಜಪೇಟೆ ತಾಲ್ಲೂಕಿನ ಬೇಟೋಳಿ ಪಂಚಾಯ್ತಿಯ ಪುಟ್ಟ ಗ್ರಾಮ ಆರ್ಜಿಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರನ್ನು ಒಳಗೊಂಡಂತೆ ಶನಿವಾರ ಬೆಳಗ್ಗೆ ನಡೆದ ಭವ್ಯ ಸಾಂಸ್ಕೃತಿಕ ಮೆರವಣಿಗೆ, ಕನ್ನಡ ನಾಡಿನ ಶ್ರೀಮಂತ ಸಂಸ್ಕೃತಿಯನ್ನು ಪ್ರತಿಬಿಂಬಿಸಿತಾದರೆ, ಗ್ರಾಮದುದ್ದಕ್ಕೂ ಕನ್ನಡ ಧ್ವಜ ರಾರಾಜಿಸುವ ಮೂಲಕ ಕನ್ನಡದ ಅಂತಃಸತ್ವ, ಅದರೆಡೆಗಿನ ಅಭಿಮಾನಕ್ಕೆ ಸಾಕ್ಷಿಯಾಯಿತು. ಬೇಟೋಳಿ ಪಂಚಾಯ್ತಿಯಿಂದ ಆರ್ಜಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯ ಸಮ್ಮೇಳನದ ಸಭಾಂಗಣದ ವರೆಗೆ ನಡೆದ ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು, ಸಮ್ಮೇಳನಾಧ್ಯಕ್ಷ ಡಾ.ಎಸ್.ವಿ. ನರಸಿಂಹನ್, ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ತಾಲ್ಲೂಕು ಕಸಾಪ ಅಧ್ಯಕ್ಷ ರಾಜೇಶ್ ಪದ್ಮನಾಭ ಅವರನ್ನು ಒಳಗೊಂಡ ಅಲಂಕೃತ ವಾಹನ ಮೆರವಣಿಗೆಯ ಕೇಂದ್ರಬಿಓದುವಾಗಿದ್ದುದು ವಿಶೇಷ. ಸಮ್ಮೇಳನಾಧ್ಯಕ್ಷರು ಮತ್ತು ಕಲಾತಂಡಗಳ ಮೆರವಣಿಗೆÉಗೆ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಉಪೇಂದ್ರ ಅವರು…

Read More

ವಿರಾಜಪೇಟೆ ಜ.21 : ವಿರಾಜಪೇಟೆ ನಗರದ ಮೀನುಪೇಟೆ ಮಲಬಾರ್ ರಸ್ತೆಯ ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಾಲಯದ 7ನೇ ವರ್ಷದ ಪ್ರತಿಷ್ಠಾಪನಾ ಮಹೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು.   ಕೇರಳ ರಾಜ್ಯದ ಕಾಳೆ ಘಾಟ್ ನ ಶ್ರೀ ನಾರಾಯಣ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ಗಣಪತಿ ಹೋಮ, ದೀಪಾರಾಧನೆ, ಮುತ್ತಪ್ಪನ್ ವೆಳ್ಳಾಟಂ ನಡೆಯಿತು. ಮಹಾಪೂಜೆಯ ನಂತರ ಭಕ್ತರಿಗೆ ಅನ್ನಸಂತರ್ಪಣೆಯಾಯಿತು. ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರು ಹಾಗೂ ಹೆಚ್ಚಿನ ಸಂಖ್ಯೆಯ ಭಕ್ತರು ಪೂಜೆಯಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಜ.21 : ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಜಿಲ್ಲೆಯ ನಾಲ್ವರು ಮಾಜಿ ಸೈನಿಕರಿಗೆ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಪ್ರಶಸ್ತಿ ಪ್ರದಾನ ಮಾಡಲಾಯಿತು. ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ನಡೆದ “ಆರ್ಮಿ ಡೇ” ಕಾರ್ಯಕ್ರಮದಲ್ಲಿ ಮಾಜಿ ಸೈನಿಕರಾದ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ, ಹೊಸೊಕ್ಲು ಚಿಣ್ಣಪ್ಪ, ತಂಬಂಡ ನಾಣಯ್ಯ ಹಾಗೂ ಗಣೇಶ್ ತಿಮ್ಮಯ್ಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಚಲನಚಿತ್ರ ಕ್ಷೇತ್ರದ ಸೇವೆಗಾಗಿ ಪ್ರಶಸ್ತಿ ಪಡೆದ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು ಚಿತ್ರ ನಿರ್ಮಾಣ ಮತ್ತು ನಿರ್ದೇಶನದ ಮೂಲಕ ಭಾಷೆ ಹಾಗೂ ಸಾಹಿತ್ಯದ ಬೆಳವಣಿಗೆಗೆ ಉತ್ತೇಜನ ನೀಡುತ್ತಿದ್ದಾರೆ. ಇವರ ನಿರ್ದೇಶನದ “ನಾಡ ಪೆದ ಆಶಾ” ಕೊಡವ ಭಾಷಾ ಚಲನಚಿತ್ರ ದೆಹ್ರಡೂನ್, ಚಂಡೀಗಡ್, ಕೊಲ್ಕತ್ತಾ, ಅಸ್ಸಾಂ ಅಂತರರಾಷ್ಟ್ರೀಯ ಚಲಚಿತ್ರೋತ್ಸವಗಳಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಇವರದ್ದೇ ನಿರ್ದೇಶನದ “ಪೊಮ್ಮಾಲೆ ಕೊಡಗ್” ಕೊಡವ ಚಿತ್ರದಲ್ಲಿ ಕೊಡಗಿನ ಶ್ರೀಮಂತ ಪರಿಸರ, ಕಲೆ, ಪದ್ಧತಿ, ಪರಂಪರೆ, ಕೊಡವ ಭಾಷೆ, ಆಚಾರ, ವಿಚಾರ ಮತ್ತು…

Read More

ಮಡಿಕೇರಿ ಜ.21 : ಮೈಸೂರು ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ತು ಹಾಗೂ ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಶಿಕ್ಷಕರ ಸಂಘಟನೆ ವತಿಯಿಂದ ಕೊಡಮಾಡುವ ರಾಜ್ಯ ಮಟ್ಟದ 2022-2023ನೇ ರಾಜ್ಯ ಮಟ್ಟದ ಶಿಕ್ಷಕ ಸೇವಾ ರತ್ನ ಪ್ರಶಸ್ತಿಗೆ ಕೊಡಗಿನ ಐವರು ನಿಕಟಪೂರ್ವ ಸಮೂಹ ಸಂಪನ್ಮೂಲ ವ್ಯಕ್ತಿಗಳು ಆಯ್ಕೆಯಾಗಿದ್ದಾರೆ. ಪೊನ್ನಂಪೇಟೆ ತಾಲೂಕಿನಿಂದ ತಿರುನ್ನೆಲ್ಲಿಮಡ ಜೀವನ್, ವಿರಾಜಪೇಟೆ ತಾಲೂಕಿನಿಂದ ವಿ.ಟಿ.ವೆಂಕಟೇಶ್, ಮಡಿಕೇರಿ ತಾಲೂಕಿನಿಂದ ಯು.ಎಸ್.ರೇಖಾ, ಕುಶಾಲನಗರ ತಾಲೂಕಿನಿಂದ ಬಿ.ಎನ್.ಸತ್ಯನಾರಾಯಣ, ಸೋಮವಾರಪೇಟೆ ತಾಲೂಕಿನಿಂದ ಎಸ್.ಎಂ.ಸುರೇಶ್ ಆಯ್ಕೆಯಾಗಿದ್ದು, ಫೆ.5ರಂದು ಬೆಂಗಳೂರಿನಲ್ಲಿ ನಡೆಯುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಶಿಕ್ಷಕ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು.

Read More

ಸುಂಟಿಕೊಪ್ಪ,,ಜ.21: ಗುಡ್ಡೆಹೊಸೂರು ವೀರಶೈವ ಸಂಘದ ವತಿಯಿಂದ ಡಾ. ಶ್ರೀ ಸಿದ್ಧಗಂಗಾ ಶಿವಕುಮಾರ ಸ್ವಾಮೀಜಿ ಅವರ 4ನೇ ವರ್ಷದ ಪುಣ್ಯಸ್ಮರಣೆಯ ಆಚರಿಸಲಾಯಿತು. ಗುಡ್ಡೆಹೊಸೂರು ವೃತ್ತದಲ್ಲಿ ಸ್ವಾಮಿಜೀ ಭಾವಚಿತ್ರ ಇರಿಸಿ ವಿಶೇಷ ಪೂಜೆ ಸಲ್ಲಿಸಿ ನಂತರ ಅನ್ನ ಸಂತರ್ಪಣೆ ನಡೆಯಿತು. ಈ ಸಂದರ್ಭ ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ಶಿವಪ್ಪ, ಕಾರ್ಯದರ್ಶಿ ಸಾಂಭಶಿವಮೂರ್ತಿ, ಬೊಳ್ಳೂರು ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ಬಿ.ಸಿ.ಮಲಿಕಾರ್ಜುನ, ನಿರ್ದೇಶಕ ಡಿ.ಎಂ.ಪ್ರದೀಪ್, ಪ್ರಸನ್ನ, ಪಾಪಣ್ಣ, ಸುರೇಶ್, ಸಮಾಜದ ಪದಾಧಿಕಾರಿಗಳು ಹಾಜರಿದ್ದು, ಡಾ. ಶ್ರೀ ಸಿದ್ಧಗಂಗಾ ಶಿವಕುಮಾರ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

Read More