ಲೇಖಕ: admin

ಸುಂಟಿಕೊಪ್ಪ,ಜ.21: ಪರಿಶಿಷ್ಟ, ಪಂಗಡ, ಪರಿಶಿಷ್ಟ ಜಾತಿಯ ಕುಟುಂಬಸ್ಥರಿಗೆ ಪಡಿತರ ಚೀಟಿ, ಆಧಾರ್ ಕಾರ್ಡ್, ವೋಟರ್ ಐಡಿ ದೊರೆತ್ತಿಲ್ಲ. ದೇವರಕಾಡು ಜಾಗ ಒತ್ತುವರಿಯಾಗುತ್ತಿದೆ. ಕಾಡಾನೆಗಳಿಂದ ಬೆಳೆಗಾರರು ಹೈರಾಣಾಗಿದ್ದಾರೆ. ಕಸವಿಲೇವಾರಿಗೆ ಜಾಗವಿಲ್ಲ ಎಂದು ಗ್ರಾಮಸ್ಥರು ಸಮಸ್ಯೆಗಳನ್ನು ಬಿಚ್ಚಿಟ್ಟರು. ಕೆದಕಲ್ ಗ್ರಾ.ಪಂ ಅಧ್ಯಕ್ಷೆ ವಿಸ್ಮಿತ ಅವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ ಸಮುದಾಯ ಭವನದಲ್ಲಿ ನಡೆದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಸಮಸ್ಯೆಗಳ ಕುರಿತು ಅಧಿಕಾರಿಗಳ ಗಮನ ಸೆಳೆದರು. ಈ ಸಂದರ್ಭ ಕುಶಾಲನಗರ ತಾಲೂಕು ತಹಶೀಲ್ದಾರ್ ಪ್ರಕಾಶ್ ಮಾತನಾಡಿ ಸರಕಾರದ ಪ್ರತಿಯೊಂದು ಯೋಜನೆಗಳು ಜನರ ಮನೆ ಮನೆಗೆ ತಲುಪಬೇಕು ಎಂಬ ಮಹಾತ್ವಾಕಾಂಕ್ಷೆಯಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆಗೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಎಲ್ಲಾ ಇಲಾಖೆ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ಇಲಿಯೇ ಸಮಸ್ಯೆಗಳನ್ನು ಬಗೆಹರಿಸುವುದು ಕೆಲವೊಂದು ಕ್ಲೀಷ್ಟ ಸಮಸ್ಯೆಗಳನ್ನು ನಿಗದಿತ ಕಾಲಾವಕಾಶದಲ್ಲಿ ಪರಿಹರಿಸಿಕೊಡಲಾಗುವುದು ಎಂದು ಹೇಳಿದರು. ಕೆದಕಲ್ ವಿಭಾಗದಲ್ಲಿ ಬಹಳಷ್ಟು ಪರಿಶೀಷ್ಟ ಪಂಗಡ, ಪರಿಶಿಷ್ಟ ಜಾತಿಯ ಫಲಾನುಭವಿಗಳು ತೋಟದ ಲೈನ್ ಮನೆಯಲ್ಲಿ ವಾಸವಾಗಿದ್ದಾರೆ. ಅವರುಗಳಿಗೆ ಇದುವರೆಗೆ ಮತದಾರರ…

Read More

ಮಡಿಕೇರಿ ಜ.21 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ಫೆ.3 ರಿಂದ 6 ರವರೆಗೆ ಏರ್ಪಡಿಸಲಾಗುವ ಫಲಪುಷ್ಪ ಪ್ರದರ್ಶನದ ಅಂಗವಾಗಿ ರಾಜಾಸೀಟು ಉದ್ಯಾನವನ ಹಾಗೂ ಗಾಂಧಿ ಮೈದಾನದಲ್ಲಿ ಹಲವು ಕಾರ್ಯಕ್ರಮ ಹಾಗೂ ಸ್ಪರ್ಧೆ ಏರ್ಪಡಿಸಲಾಗಿದೆ, ಆಸಕ್ತರು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಪ್ರಮೋದ್ ಅವರು ತಿಳಿಸಿದ್ದಾರೆ. ರೈತರು ಸ್ವತ: ಬೆಳೆದ ವಿವಿಧ ತಳಿಯ ಹಣ್ಣು, ತರಕಾರಿ ಬೆಳೆಗಳು, ಸಾಂಬಾರು ಪದಾರ್ಥಗಳು, ತೋಟದ ಬೆಳೆಗಳನ್ನು ಪ್ರದರ್ಶನದಲ್ಲಿ ಇಡಬಹುದಾಗಿದೆ. ಪ್ರತಿ ವಿಭಾಗದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ನೀಡಲಾಗುವುದು. ಆದ್ದರಿಂದ ರೈತರು ತಾವು ಬೆಳೆದಂತಹ ಪದಾರ್ಥಗಳನ್ನು ಫೆಬ್ರವರಿ, 03 ರಂದು ಬೆಳಗ್ಗೆ 9 ಗಂಟೆಗೆ ಗಾಂಧಿ ಮೈದಾನದಲ್ಲಿರುವ ತೋಟಗಾರಿಕೆ ಇಲಾಖೆಯ ಮಳಿಗೆಗೆ ನೇರವಾಗಿ ತಂದು ಪ್ರದರ್ಶನದಲ್ಲಿ ಇಡಲು ಕೋರಿದೆ. ರಾಜಾಸೀಟು ಉದ್ಯಾನವನದಲ್ಲಿ ಅಲಂಕಾರಿಕೆ ಹೂವಿನ ಜೋಡಣೆ, ಒಣಹೂವು ವಿನ ಜೋಡಣೆ, ಇಕೇಬಾನಾ, ಮೋರಿಬಾನ, ಪುಷ್ಪ ರಂಗೋಲಿ, ಬೋನಸಾಯ್ ಗಿಡಗಳ…

Read More

ಮಡಿಕೇರಿ ಜ.21 : ನಿವೃತ್ತ ರಾಜ್ಯ ಸರ್ಕಾರಿ ನೌಕರರ ‘ಪಿಂಚಣಿ ಅದಾಲತ್’ ಜ.24 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.

Read More

ಕುಶಾಲನಗರ ಜ.21 : 12ನೇ ಶತಮಾನದ ವಚನಕಾರರಲ್ಲಿ ಶಿವಶರಣ ಅಂಬಿಗರ ಚೌಡಯ್ಯ ವಿಭಿನ್ನರೀತಿಯ ವಚನ ಸಾಹಿತ್ಯಕ್ಕೆ ಹೆಗ್ಗಳಿಕೆ ಪಡೆದ ಮಹಾನ್ ಸಂತ. ಇತರೆ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿ ನಿರ್ದೇಶಕ ಎಂ.ಎನ್ ವೆಂಕಟನಾಯಕ್ ಹೇಳಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕುಶಾಲನಗರ ತಾಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಶಿವಶರಣ ಅಂಬಿಗರ ಚೌಡಯ್ಯರ ಜನ್ಮ ದಿನಾಚರಣೆಯಲ್ಲಿ ಸಂಕ್ಷಿಪ್ತ ಜೀವನ ಚರಿತ್ರೆಯನ್ನು ಸಭೆಗೆ ತಿಳಿಸಿದರು. ಬಸವಣ್ಣನವರ ಅನುಭವ ಮಂಟಪದಲ್ಲಿ ಸಮಾನ ಭೂಮಿಕೆಯಲ್ಲಿ ಸ್ಥಾನ ಪಡೆದು ಕಾಯಕವೇ ಕೈಲಾಸ ಎಂಬ ತತ್ತ್ವದಡಿ ನಡೆದು ಬಂದ ವ್ಯಕ್ತಿ ಹಾಗೂ ಆಚಾರ-ವಿಚಾರಗಳಲ್ಲಿ ದ್ವಂದ್ವ ಬದುಕನ್ನು ಸಾಗಿಸುವವರ ವಿರುದ್ಧ ಧ್ವನಿ ಎತ್ತಿದ ಮಹಾನ್ ಚೇತನ ಎಂದರು. ಅಂಬಿಗರ ಚೌಡಯ್ಯ ಭಾವಸಾಗರವನ್ನು ದಾಟಿಸುವ ಅಂಬಿಗ ಎಂಬ ಹೆಗ್ಗಳಿಕೆ ಪಡೆದ ಮಹಾನ್ ವ್ಯಕ್ತಿ. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಢಿಸಿಕೊಂಡು ಬದುಕು ಹಸನಾಗಿಸಿಕೊಳ್ಳಬೇಕಿದೆ…

Read More

ಮಡಿಕೇರಿ ಜ.21 : ಗೌರವಾನ್ವಿತ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಕುಂದುಕೊರತೆ ಆಲಿಸಿದರು. ಅಹವಾಲು ಸ್ವೀಕಾರಕ್ಕೂ ಮೊದಲು ಮಾತನಾಡಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಭಾರತ ಸಂವಿಧಾನವು ಪ್ರಜೆಗಳಿಗೆ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ನೀಡಿದ್ದು, ಸಂವಿಧಾನದ ಆಶೋತ್ತರ ಮತ್ತು ಆಶಯಗಳನ್ನು ಅರ್ಥಮಾಡಿಕೊಂಡು ಸಮಾಜದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು. ಭಾರತದ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಜೀವಿಸುವ ಹಕ್ಕು ಇದೆ. ರಾಷ್ಟ್ರಕವಿ ಕುವೆಂಪು ಹೇಳಿರುವಂತೆ ‘ಎಲ್ಲರಿಗೂ ಸಮಪಾಲು, ಎಲ್ಲರಿಗೂ ಸಮಬಾಳು’ ಇದೆ. ಆದ್ದರಿಂದ ಸರ್ಕಾರದ ಯೋಜನೆಗಳು ಕಟ್ಟಕಡೆಯ ಜನರಿಗೆ ತಲುಪಬೇಕು. ಎಲ್ಲರೂ ಸರಿಸಮಾನವಾಗಿ ಬದುಕು ನಡೆಸುವಂತಾಗಬೇಕು ಎಂದು ಕೆ.ಎನ್.ಫಣೀಂದ್ರ ನುಡಿದರು. ಪ್ರತಿಯೊಬ್ಬರೂ ಸಮೃದ್ಧಿಯ ಜೀವನ ನಡೆಸುವಂತಾಗಬೇಕು. ಮೂಲಭೂತ ಹಕ್ಕುಗಳನ್ನು ಪಡೆಯುವುದರ ಜೊತೆಗೆ ಕರ್ತವ್ಯ ಪಾಲಿಸುವುದನ್ನು ಮರೆಯಬಾರದು ಎಂದರು. ಸಂವಿಧಾನದಲ್ಲಿ ಶಾಸಕಾಂಗ ಕಾನೂನು ಜಾರಿ ಮಾಡಿದರೆ, ಕಾರ್ಯಾಂಗ ಅನುಷ್ಠಾನಗೊಳಿಸಲಿದೆ. ನ್ಯಾಯಾಂಗವು ಕಾನೂನನ್ನು ಸಂರಕ್ಷಣೆ ಮಾಡುತ್ತದೆ. ಜೊತೆಗೆ ಮಾಧ್ಯಮ ರಂಗವು ಸಮಾಜಕ್ಕೆ ಆಗಬೇಕಿರುವ…

Read More

ಕುಶಾಲನಗರ ಜ.21 : 12ನೇ ಶತಮಾನದ ವಚನಕಾರರಲ್ಲಿ ಶಿವಶರಣ ಅಂಬಿಗರ ಚೌಡಯ್ಯ ವಿಭಿನ್ನರೀತಿಯ ವಚನ ಸಾಹಿತ್ಯಕ್ಕೆ ಹೆಗ್ಗಳಿಕೆ ಪಡೆದ ಮಹಾನ್ ಸಂತ. ಇತರೆ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿ ನಿರ್ದೇಶಕ ಎಂ.ಎನ್ ವೆಂಕಟನಾಯಕ್ ಹೇಳಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕುಶಾಲನಗರ ತಾಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಶಿವಶರಣ ಅಂಬಿಗರ ಚೌಡಯ್ಯರ ಜನ್ಮ ದಿನಾಚರಣೆಯಲ್ಲಿ ಸಂಕ್ಷಿಪ್ತ ಜೀವನ ಚರಿತ್ರೆಯನ್ನು ಸಭೆಗೆ ತಿಳಿಸಿದರು. ಬಸವಣ್ಣನವರ ಅನುಭವ ಮಂಟಪದಲ್ಲಿ ಸಮಾನ ಭೂಮಿಕೆಯಲ್ಲಿ ಸ್ಥಾನ ಪಡೆದು ಕಾಯಕವೇ ಕೈಲಾಸ ಎಂಬ ತತ್ತ್ವದಡಿ ನಡೆದು ಬಂದ ವ್ಯಕ್ತಿ ಹಾಗೂ ಆಚಾರ-ವಿಚಾರಗಳಲ್ಲಿ ದ್ವಂದ್ವ ಬದುಕನ್ನು ಸಾಗಿಸುವವರ ವಿರುದ್ಧ ಧ್ವನಿ ಎತ್ತಿದ ಮಹಾನ್ ಚೇತನ ಎಂದರು. ಅಂಬಿಗರ ಚೌಡಯ್ಯ ಭಾವಸಾಗರವನ್ನು ದಾಟಿಸುವ ಅಂಬಿಗ ಎಂಬ ಹೆಗ್ಗಳಿಕೆ ಪಡೆದ ಮಹಾನ್ ವ್ಯಕ್ತಿ. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಢಿಸಿಕೊಂಡು ಬದುಕು ಹಸನಾಗಿಸಿಕೊಳ್ಳಬೇಕಿದೆ…

Read More

ಮಡಿಕೇರಿ ಜ.21 : ಮದೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಜ.26 ರಂದು ಗಣರಾಜ್ಯೋತ್ಸವ ದಿನಾಚರಣೆ ಹಾಗೂ ಯೋಧ ವಂದನಾ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಧನಂಜಯ ಅಗೋಳಿಕಜೆ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮದೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಅಂದು ಬೆಳಗ್ಗೆ 9 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ 150ಕ್ಕೂ ಹೆಚ್ಚು ಹಾಲಿ ಹಾಗೂ ಮಾಜಿ ಸೈನಿಕರನ್ನು ಸನ್ಮಾನಿಸಿ ಗೌರವಿಸಲಾಗುವುದು, ಹಾಲಿ ಸೈನಿಕರು ಸೇವೆಯಲ್ಲಿದ್ದರೆ ಅವರ ಕುಟುಂಬದ ಸದಸ್ಯರನ್ನು ಸನ್ಮಾನಿಸಲಾಗುವುದು ಎಂದು ಹೇಳಿದ್ದಾರೆ. ಭಾರತ ದೇಶ ಇಂದು ಬಲಿಷ್ಠ ಮತ್ತು ಸುರಕ್ಷಿತವಾಗಿರಲು ಗಡಿ ಕಾಯುವ ಯೋಧರೇ ಕಾರಣಕರ್ತರಾಗಿದ್ದಾರೆ, ಇವರನ್ನು ಗೌರವಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ಕಾರಣದಿಂದ ವಿನೂತನ ಪ್ರಯತ್ನವಾಗಿ ಮದೆ ಸಹಕಾರ ಸಂಘದ ವ್ಯಾಪ್ತಿಗೆ ಒಳಪಡುವ ನಾಲ್ಕು ಗ್ರಾಮಗಳಲ್ಲಿರುವ 150 ಕ್ಕೂ ಹೆಚ್ಚು ಸೈನಿಕರನ್ನು ಗುರುತಿಸಿ ಸನ್ಮಾನಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ…

Read More

ನಾಪೋಕ್ಲು ಜ.21 : ಕೊಡಗಿನ ಆದಿ ಗ್ರಂಥ ಪಟ್ಟೋಳೆ ಪಳಮೆಯನ್ನು ಆಧರಿಸಿದ ಪೌರಾಣಿಕ ಕೊಡವ ಚಲನಚಿತ್ರ ”ಕಲ್ಲಕೆರೆ ಮಾದೇವಿ” ಜ.23 ರಂದು ಕೋಕೇರಿಯ ಮಹಿಳಾ ಸಮಾಜದಲ್ಲಿ ಬಿಡುಗಡೆ ಆಗಲಿದೆ ಎಂದು ಚಿತ್ರದ ನಿರ್ದೇಶಕರಾದ ಬಾಳೆಯಡ ಪ್ರತಿಷ್ ಪೂವಯ್ಯ ಹಾಗೂ ಆಚೆಯಡ ಗಗನ್ ಗಣಪತಿ ತಿಳಿಸಿದರು. ನಾಪೋಕ್ಲುವಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಲ್ಲಕೆರೆ ಮಾದೇವಿ ಪೌರಾಣಿಕ ಕೊಡವ ಚಲನಚಿತ್ರ ಜ.23 ರಂದು ಬಿಡುಗಡೆ ಆಗಲಿದ್ದು, ಸಾರ್ವಜನಿಕರಿಗೆ ಮೂರು ಪ್ರದರ್ಶನಗಳಿವೆ. ಮಧ್ಯಾಹ್ನ 2 ಗಂಟೆಗೆ 4:30ಕ್ಕೆ ಹಾಗೂ 6.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. 600 ವರ್ಷದ ಹಳೆಯ ಕಥೆಯನ್ನು ಹೊಂದಿರುವ ಚಲನಚಿತ್ರವು ಜನರನ್ನು ಆಕರ್ಷಿಸಲಿದೆ ಎಂದರು. ಪಟ್ಟಡ ರೀನಾ ಪ್ರಕಾಶ್ ನಿರ್ಮಿಸಿರುವ ಈ ಚಲನಚಿತ್ರದಲ್ಲಿ ಆರ್. ಉಮೇಶ್ ಸಹ ನಿರ್ಮಾಪಕರಾಗಿದ್ದಾರೆ. ಮುಖ್ಯ ಪಾತ್ರಧಾರಿಗಳಾಗಿ ಕೋಪುಡ ದೇಚ್ನಾ ದೇಚಮ್ಮ, ಚೆರುವಾಳಂಡ ರಾಕೇಶ್, ಮುಂಡಚಾಡಿರಾ ರಿಮ್ಮಿ ಭರತ್, ಚೇನಂಡ ಗಿರೀಶ್, ಮಳ್ಳಮಡ ಶ್ಯಾಮಲ ಹಾಗೂ ವಿಶೇಷ ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಸಾರ್ವಜನಿಕರು ಚಲನಚಿತ್ರವನ್ನು ವೀಕ್ಷಿಸಿ ಪ್ರೋತ್ಸಾಹಿಸಬೇಕೆಂದು ಅವರು…

Read More

ಸಿದ್ದಾಪುರ ಜ.21 :  ಭಾರತ ಫುಟ್ಬಾಲ್ ತಂಡವು ಬಲಿಷ್ಠವಾಗಿದ್ದು, ಮುಂದಿನ‌ ಅಥವಾ ಅದಾದನಂತರದಲ್ಲಿ ವಿಶ್ವಕಪ್ ಆಡಲಿದೆ ಎಂದು ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ ಹಾಗೂ  ಹಾಲಿ ತಾಂತ್ರಿಕ ಸಮಿತಿ ಸದಸ್ಯ ಐ.ಎಂ ವಿಜಯನ್ ಅಭಿಪ್ರಾಯಪಟ್ಟರು‌. ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅಮ್ಮತ್ತಿಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತ ತಂಡ ಯುವ ಹಾಗೂ ಅನುಭವಿ ಆಟಗಾರರ ಮಿಶ್ರಿತ ತಂಡವಾಗಿದೆ. ಮುಂದಿನ ವಿಶ್ವಕಪ್ ಫುಟ್ಬಾಲ್ ಅರ್ಹತಾ ಪಂದ್ಯಾವಳಿಯಲ್ಲಿ ಭಾರತ ತಂಡ ಗೆದ್ದು ವಿಶ್ವಕಪ್ ಅರ್ಹತೆ ಪಡೆಯುವ ಅವಕಾಶ ಇದೆ ಎಂದರು.  ಏಷ್ಯಾ ಈ ಹಿಂದೆ ಫುಟ್ಬಾಲ್ ನಲ್ಲಿ‌ ಹಿಂದುಳಿದಿತ್ತು. ಪ್ರಸ್ತುತ ಏಷ್ಯಾದಿಂದ 8 ತಂಡಗಳು ವಿಶ್ವಕಪ್ ನಲ್ಲಿ ಭಾಗವಹಿಸಿದೆ. ದೊಡ್ಡ ದೊಡ್ಡ ರಾಷ್ಟ್ರಗಳನ್ನು ಮಣಿಸಿದೆ. ಹಾಗೇಯೆ ಭಾರತವೂ ಕೂಡ ಮುಂದೊಂದು ದಿನ ವಿಶ್ವಕಪ್ ಆಡಲಿದೆ ಎಂದರು. ಭಾರತದಲ್ಲಿ ಇಂಡಿಯನ್ ಸೂಪರ್ ಲೀಗ್ ಆರಂಭವಾದ ಬಳಿಕ‌ ಭಾರತೀಯ ಫುಟ್ಬಾಲ್ ಗೆ ಪುನಶ್ಚೇತನ ದೊರಕಿದೆ. ಅಂತರರಾಷ್ಟ್ರೀಯ ಆಟಗಾರರು ಐ.ಎಸ್.ಎಲ್ ಆಡುತ್ತಿದ್ದಾರೆ.…

Read More

ಕುಶಾಲನಗರ ಜ.21 :  ಪೊಲೀಸರ ಭಯದಿಂದ ಹೆಲ್ಮೆಟ್ ಧರಿಸುವುದನ್ನು ಬಿಟ್ಟು, ತಮ್ಮ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸಿ ಎಂದು ಸೋಮವಾರಪೇಟೆ ಉಪವಿಭಾಗದ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕುಶಾಲನಗರ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಸುಂದರನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ “ರಸ್ತೆ ಸುರಕ್ಷಾ ಸಪ್ತಾಹ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪೊಲೀಸರಿಗಾಗಿ ಹೆಲ್ಮೆಟ್ ಧರಿಸುವುದನ್ನು ಬಿಟ್ಟು, ತಮ್ಮ ಜೀವದ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ವಕೀಲ  ಕೆ.ಬಿ.ಮೋಹನ್ ಕುಮಾರ್ ಮಾತನಾಡಿ, ವಾಹನ ಚಲಾವಣೆ ವೇಳೆ ಇರಬೇಕಾದ ದಾಖಲಾತಿಗಳ ಬಗ್ಗೆ ಹಾಗೂ ಮೋಟಾರು ವಾಹನ ಕಾಯ್ದೆಯ ಬಗ್ಗೆ ವಿವರಣೆ ನೀಡಿದರು. ಕುಶಾಲನಗರ ಸಂಚಾರಿ ಪೊಲೀಸ್ ಠಾಣಾಧಿಕಾರಿ ಹೆಚ್.ಟಿ.ಗೀತಾ ಮಾತನಾಡಿ, ವಿದ್ಯಾರ್ಥಿಗಳು ಸಂಚಾರಿ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿದರು. ಸುಂದರನಗರ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ  ಬಿ.ಎಂ.ಪ್ರವೀಣ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಂತರ ವಿದ್ಯಾರ್ಥಿಗಳಿಗೆ ಸಂಚಾರಿ ನಿಯಮಗಳನ್ನು ತಿಳಿಸುವ…

Read More